Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಜನಾಂಗದವರ ಶ್ರೇಯಸ್ಸಿಗಾಗಿ, ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲು ಉದ್ಧೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏಪ್ರಿಲ್ ೦೫ ರಂದು ಡಾ. ಬಾಬು ಜಗಜೀವನ ರಾಂ ಅವರ ೧೧೮ನೇ ಹಾಗೂ ಏಪ್ರಿಲ್ ೧೪ರಂದು ಡಾ. ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜನ್ಮ ದಿನಾಚಾರಣೆಯನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರಶಸ್ತಿಗೆ ಅರ್ಜಿ ಸಲ್ಲಿಸ ಬಯಸುವವರು ನಿಗದಿತ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ವಿಜಯಪುರ ಹಾಗೂ ತಾಲೂಕಿನ ಸಮಾಜ ಕಲ್ಯಾಣ ಅಧಿಕಾರಿಗಳ ಸಹಾಯಕ ನಿರ್ದೇಶಕರ ಕಛೇರಿಯಿಂದ ಪಡೆದು, ದಿನಾಂಕ ೨೫-೦೨-೨೦೨೫ರ ಒಳಗಾಗಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ವಿಜಯಪುರ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕೊಡೇಕಲ್ ದಾವಲಮಲಿಕ್ ಅಜ್ಜರ ಯಶೋಗಾಥೆ | ದಾರಿ ಹೋಕರಿಂದ ಹಿಡಿದು ಅನಾಥರಿಗೆಲ್ಲ ಅನ್ನ, ನೀರು, ನೆರಳು ನೀಡಿದ ಸಹೃದಯಿ ಉದಯರಶ್ಮಿ ದಿನಪತ್ರಿಕೆ ವರದಿ: ಇಲ್ಯಾಸ್ ಪಟೇಲ್. ಬಯಾದಗಿರಿ: ತಾಯಿಯ ಮಮತೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ.ತಾಯಿಯಪ್ರೀತಿಯನ್ನು ಯಾರೂ ಕೊಡಲು ಸಾಧ್ಯವಿಲ್ಲ ತಂದೆ ತಾಯಿ ಇಲ್ಲದ ನೂರಾರು ಅನಾಥ ಜೀವಗಳ ತಾಯಿಯಾಗಿ, ತಂದೆಯಾಗಿ ಹಗಲು ರಾತ್ರಿ ಮಕ್ಕಳ ಆರೈಕೆ ಮಾಡುತ್ತಿರುವ ಮಹಾನ್ ಜೋಳಿಗೆ ಅಜ್ಜರ ಮಮತೆಯ ಮಡಿಲು ಇಲ್ಲಿದೆ ನೋಡಿ,ಅವರೆಲ್ಲ ಕನಸುಗಳನ್ನ ಹೊತ್ತುಕೊಂಡು ಓಡಾತ್ತಿರುವ ಪುಟ್ಟ ಪುಟ್ಟ ಮಕ್ಕಳು. ತಾಯಿಯ ಆಸರೆ ಇಲ್ಲದೆ, ಭಾವನೆಗಳ ಬರಿದಾದ ಜೀವನದಲ್ಲಿ ತಾಯಿಯ ಮಡಿಲು ಬೇಡುತ್ತಿರುವ ಚಿಕ್ಕ ಚಿಕ್ಕ ಕಂದಮ್ಮಗಳು. ಯ್ಯಾರೊ ಮಾಡಿದ ತಪ್ಪಿಗೆ ಇನ್ಯಾರೊ ನೋವು ಅನುಭವಿಸುತ್ತಿರುವ ಆ ಜೀವಗಳು. ತಂದೆ ತಾಯಿ ಮಾಡಿದ ತಪ್ಪಿಗೆ ಮಕ್ಕಳಿಗೆ ಶಿಕ್ಷೆ. ಈ ಎಲ್ಲ ನೋವು ಗಳನ್ನ ಅರಿತು, ತಾಯಿ ಮನಸ್ಸಿನಿಂದ ಆರೈಕೆ ಮಾಡುತ್ತಿರುವ ಹೃದಯ ವಂತಿಕೆಯ ನೂರು ಮಕ್ಕಳ ತಾಯಿ_ತಂದೆಯಾಗಿ ಭವದ ಬಯಲಿಗೆ ಬೆಂದು ಬಿದ್ದ ಜೀವಗಳ ರಕ್ಷಣೆಗಾಗಿ…

Read More

ಸಮಸ್ಯೆ ಅರಿಯಲು ಜಿಲ್ಲಾಧಿಕಾರಿ ಸ್ಥಳಕ್ಕೆ ಖುದ್ದು ಭೇಟಿ | ಕಾಂಗ್ರೆಸ್ ಮುಖಂಡ ಹಮೀದ್ ಮುಶ್ರೀಫ್ ಮತ್ತು ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಒತ್ತಾಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವೇಗವಾಗಿ ಬೆಳೆಯುತ್ತಿರುವ ವಿಜಯಪುರ ನಗರದ ವಜ್ರ ಹನುಮಾನ ರೈಲ್ವೆ ಗೇಟ್ ಹತ್ತಿರ ತುಂಬಾ ದಿನಗಳಿಂದ ಭಾರಿ ಸಂಚಾರಿ ದಟ್ಟಣೆ ಆಗುತ್ತಿದ್ದು ಇದರಿಂದ ರೈಲ್ವೆ ಲೈನ್ ಆಚೆ ಇರುವ ಸಾಕಷ್ಟು ಹೊಸ ಬಡಾವಣೆಗಳ ಸುಮಾರು ೫೦ ಸಾವಿರ ಜನರು ಮತ್ತು ಆ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಗ್ರಾಮೀಣ ಪ್ರದೇಶದ ಜನರಿಗೆ ವಿಶೇಷವಾಗಿ ಗರ್ಭಿಣಿ ಮಹಿಳೆಯರಿಗೆ ರೋಗಿಗಳಿಗೆ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನು ತಾವು ಖುದ್ದು ಬಂದು ಪರಿಶೀಲಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ಹಮೀದ್ ಮುಶ್ರೀಫ್ ಮತ್ತು ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಜಿಲ್ಲಾಧಿಕಾರಿಯವರನ್ನು ಸ್ವತಃ ಸ್ಥಳಕ್ಕೆ ಆಹ್ವಾನಿಸಿದ್ದರು.ಇತ್ತೀಚಿಗೆ ಡಬಲ್‌ನ ರೈಲ್ವೆ ಲೈನ್ ನಿರ್ಮಾಣವಾದ ನಂತರ ಸಾರ್ವಜನಿಕರು ದೀರ್ಘ ವಿಳಂಬ ಅನುಭವಿಸುತ್ತಿದ್ದಾರೆ. ಕಾರಣ ಸಂಚಾರ ದಟ್ಟಣೆ ಕಡಿಮೆ ಮಾಡಲು ವಜ್ರ ಹನುಮಾನ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಹಸೀನಾ ಅಗಸಿಮನಿ ಅವರು ಸಲ್ಲಿಸಿದ್ದ “ಸೋಷಿಯೊ-ಎಕನೋಮಿಕ್ ಕಂಡೀಷನ್ಸ ಆಫ್ ಮುಸ್ಲಿಂ ವುಮನ್ ಇನ್ ಅರಬನ್ ಸ್ಲಮ್ಸ್” ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.ಹಸೀನಾ ಅಗಸಿಮನಿ ಅವರು ಸಮಾಜಶಾಸ್ತ್ರ ವಿಭಾಗದ ಪ್ರೊ.ವಿಜಯಾ ಬಿ ಕೋರಿಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಹಸೀನಾ ಅಗಸಿಮನಿ ಅವರನ್ನು ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ. ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಅವರು ಅಭಿನಂದಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎನ್.ಎಸ್.ಎಸ್ ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶ ಮತು ಗಾಂಧಿ ಅಧ್ಯಯನ ಕೇಂದ್ರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನೆಯುವ ಸಬಲೀಕರಣ ಮತ್ತು ಕ್ರೀಡೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ “ಗಾಂಧಿ ಚಿಂತನೆಗಳ ಮೂಲಕ ಮಾನವೀಯ ಮೌಲ್ಯಗಳು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿಯ ಜವಾಬ್ದಾರಿ” ಈ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಗಾಂಧೀಜಿಯ ಸತ್ಯ ಮತ್ತು ಅಹಿಂಸಾ ತತ್ವಗಳನ್ನು ಅಳವಡಿಸಿಕೊಳ್ಳುವ ಮೂಲಕ, ಸ್ವಚ್ಛತಾ ಕಾರ್ಯಗಳು, ಶಿಕ್ಷಣ ಮತ್ತು ಆರೋಗ್ಯ ಜಾಗೃತಿಯ ಕಾರ್ಯಕ್ರಮಗಳು, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಜಾಗೃತಿ ಅಭಿಯಾನಗಳ ಮೂಲಕ ಹಳ್ಳಿಗಳ ಅಭಿವೃದ್ಧಿಗೆ ಇದು ಪೂರಕವಾಗುತ್ತದೆ. ಸ್ವಯಂಸೇವಕರು ಸಣ್ಣ-ಸಣ್ಣ ಸೇವಾ ಕಾರ್ಯಗಳನ್ನು ಮಾಡಿ ಮಹತ್ತರ ಸಾಧನೆಗಳನ್ನು ಸಾಧಿಸಬಹುದು.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ. ಜಿ ಅವರು ಫೆಬ್ರವರಿ ೧೮ರ ಬೆಳಿಗ್ಗೆ ೯:೩೦ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕುಂದುಕೊರತೆ ಅಹವಾಲು ಸ್ವೀಕರಿಸಲಿದ್ದಾರೆ.ಸಮುದಾಯದ ಸಂಘ-ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More

ಕೊನೆಯ ದಿನಾಂಕ ಫೆಬ್ರವರಿ ೨೦ ರವರೆಗೆ ವಿಸ್ತರಣೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನದ ಕೊನೆಯ ದಿನಾಂಕವನ್ನು ಫೆಬ್ರವರಿ ೨೦ ರವರೆಗೆ ವಿಸ್ತರಿಸಲಾಗಿದೆ.ಈ ಮೊದಲು ಛಾಯಾಚಿತ್ರಗಳನ್ನು ಕಳುಹಿಸಲು ಫೆಬ್ರವರಿ ೧೫ ಕೊನೆ ದಿನಾಂಕವಾಗಿತ್ತು. ಉಳಿದಂತೆ ಸ್ಪರ್ಧೆಯ ನಿಯಮ ಸೇರಿದಂತೆ ಯಾವುದರಲ್ಲೂ ಬದಲಾವಣೆ ಮಾಡಿಲ್ಲ.ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ ೩೫,೦೦೦/- ರೂ., ೨೫,೦೦೦/- ರೂ. ಹಾಗೂ ೧೫,೦೦೦/- ರೂ. ನಗದು ಬಹುಮಾನ ನೀಡಲಾಗುವುದು. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಾರ್ಚ್ ತಿಂಗಳಲ್ಲಿ ಅಕಾಡೆಮಿ ವತಿಯಿಂದ ಏರ್ಪಡಿಸಲಾಗುವ ಸುದ್ದಿ ಛಾಯಾಗ್ರಹಣ ಕುರಿತ ಕಾರ್ಯಾಗಾರದ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಇರಿಸಲಾಗುವುದು. ಸ್ಪರ್ಧೆಯ ಷರತ್ತುಗಳು • ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ದಿನಾಂಕ :೦೧-೦೧-.೨೦೨ ೪ ರಿಂದ ೩೧-೦೧-೨೦೨೫ ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು. ಪ್ರತಿ ಸುದ್ದಿ ಛಾಯಾಚಿತ್ರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯಿಂದ ಮೇಷನ್ ಕಿಟ್‍ಗಳನ್ನು ವಿತರಿಸಲಾಗುತ್ತಿದ್ದು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹರು ಫೆಬ್ರವರಿ ೨೧ರೊಳಗೆ ಅರ್ಜಿಯನ್ನು ಕಾರ್ಮಿಕ ನಿರೀಕ್ಷಕರ ಕಚೇರಿ ೧ನೇ ವೃತ್ತ ಮತ್ತು ಕಾರ್ಮಿಕ ನಿರೀಕ್ಷಕರ ಕಚೇರಿ ೨ನೇ ವೃತ್ತ, ವಿಜಯಪುರ ಕಲ್ಯಾಣ ಸಮುದಾಯ ಭವನ, ಸಿಂದಗಿ ನಾಕಾ, ಅಲ್ಲಾಪೂರ ಓಣಿ, ವಿಜಯಪುರ ಕಚೇರಿಗೆ ಸಲ್ಲಿಸುವಂತೆ ಕಾರ್ಮಿಕ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಫೆ.೧೫ರಂದು ವಿಜಯಪುರ ನಗರದ ಕೆ.ಜಿ.ಎಸ್.ಶಾಲೆ ನಂ.೧ ಹಾಗೂ ಬಚಪನ್ ಶಿಶು ವಿಹಾರ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವಿಜಯಪುರ ನಗರದ ಕೆ.ಜಿ.ಎಸ್.ಶಾಲೆ ನಂ.೧ರ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ಕಲಿಕಾ ಮಟ್ಟವನ್ನು ಪರಿಶೀಲಿಸಿದರು. ಇದಕ್ಕೆ ಪೂರಕವಾಗಿ ಮಕ್ಕಳು ಕಲಿಯುವ ರೀತಿ ಹಾಗೂ ಮಕ್ಕಳಿಗೆ ಕಲಿಕಾ ಸಾಧನ-ಸಾಮಗ್ರಿಗಳು, ಪುಸ್ತಕ, ಮಕ್ಕಳ ಬರವಣಿಗೆ ಶೈಲಿ, ಪ್ಲೇಯಿಂಗ ವಿಥ್ ರ‍್ನಿಂಗ್ ವಿಧಾನಕ್ಕೆ ಸಂಬಂಧಿಸಿದಂತೆ ಮಕ್ಕಳ ಆಟಿಕೆ ಸಾಮಗ್ರಿಗಳನ್ನು ಪರಿಶೀಲಿಸಿದರು. ನಗರದ ಸುಕೂನ್ ಕಾಲೊನಿಯಲ್ಲಿರುವ ಬಚಪನ್ ಶಿಶುವಿಹಾರ ಕೇಂದ್ರಕ್ಕೆ ಭೇಟಿ ನೀಡಿ, ಸದರಿ ಶಿಶು ವಿಹಾರದಲ್ಲಿ ಶಾಲಾ ಕೊಠಡಿಯನ್ನೇ ಕಲಿಕೋಪಕರಣವಾಗಿ ಮಾರ್ಪಡಿಸಿದ ವ್ಯವಸ್ಥೆ, ಗೋಡೆ ಬರಹ ಮತ್ತು ಆಕರ್ಷಣೀಯ ಚಿತ್ರಗಳು, ಮಕ್ಕಳ ಆಟಿಕೆ ಹಾಗೂ ಕಲಿಕಾ ಸಾಮಗ್ರಿಗಳನ್ನು ವೀಕ್ಷಿಸಿದರು. ಶಿಶುವಿಹಾರಕ್ಕೆ ಬರುವ ಮಕ್ಕಳಿಗೆ ಉತ್ತಮ ಗುಣಮಟ್ಟದ ಕಲಿಕೆ ನೀಡಬೇಕು. ಪ್ರತಿ ವಾರದಲ್ಲಿ ಒಂದು ದಿನ ಪಾಲಕರ ಸಭೆ ಕರೆದು ಬೋಧನಾ ವಿಧಾನಗಳ…

Read More

ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಎಲ್ಲಾ ತಾಲೂಕಾ ಮಟ್ಟದಲ್ಲಿ ವಿಕಲಚೇತನರ ಕುಂದುಕೊರತೆ ಸಭೆ ನಡೆಸಿ ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.ಅವರು ಶನಿವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ೨೦೧೬ರ ಕಾಯ್ದೆ ಅನ್ವಯ ಪುನಶ್ವೇತನ ಹಕ್ಕುಗಳ ರಕ್ಷಣೆ ಮತ್ತು ಅಭಿವೃದ್ಧಿ ಹಾಗೂ ವಿಕಲಚೇತನರ ವಿವಿಧ ವಿಷಯಗಳು ಹಾಗೂ ವಿಕಲಚೇತನರ ಕುಂದು-ಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.ಸರ್ಕಾರವು ವಿಕಲಚೇತನರ ಉನ್ನತಿಗಾಗಿ ಹಲವು ಯೋನಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಯ ಲಾಭ ಅರ್ಹ ವಿಕಲಚೇತನರಿಗೆ ದೊರಕಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಅರ್ಹರು ಸಹ ಈ ಯೋಜನೆಗಳ ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದರು.ವಿಕಲಚೇತನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಅವರಿಗೆ ಮೀಸಲಿರಿಟ್ಟಿರುವ ಶೇ.೫% ಹಣವನ್ನು ಸರ್ಕಾರದ ಮಾರ್ಗ ಸೂಚಿಯಂತೆ ಕ್ರಮವಹಿಸಿ, ವಿಕಲಚೇತನರ ಸ್ವಾವಲಂಬಿ ಬದುಕಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು. ೨೦೧೬ರ ಕಾಯ್ದೆಯಡಿ ಬರುವ ವಿಕಲಚೇತನರ ಕಾಯ್ದೆ ಕಾನೂನು…

Read More