Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಿದ್ಯಾರ್ಥಿಗಳು ತಮ್ಮ ಕಲಿಕಾ ಅವಧಿಯಲ್ಲಿ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಸದುಪಯೋಗ ಪಡೆದುಕೊಳ್ಳಬೇಕು. ತಮ್ಮ ಓದಿನ ಜೊತೆಗೆ ಕ್ರೀಡೆಗೂ ಮಹತ್ವ ನೀಡಬೇಕು. ಇದರಿಂದ ವಿದ್ಯಾರ್ಥಿಗಳು ಬಹುಮುಖ ವ್ಯಕ್ತಿತ್ವ ಬೆಳೆಸಿಕೊಳ್ಳಲು ಸಾಧ್ಯ ಎಂದು ಬಿಎಲ್‌ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಹೇಳಿದರು.ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಆವರಣದಲ್ಲಿ ಮಹಾವಿದ್ಯಾಲಯದ ಕ್ರೀಡಾ ವಿಭಾಗದಿಂದ ಹಮ್ಮಿಕೊಂಡಿದ್ದ ೨೦೨೪-೨೫ ನೇ ಸಾಲಿನ ಕ್ರಿಕೆಟ್ ಚಾಂಪಿಯನ್ ಸೀಜನ್-೧ ರ ಪ್ರಶಸ್ತಿ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ಮಹಾವಿದ್ಯಾಲಯವು ಉತ್ತಮ ಆಟದ ಮೈದಾನ ಹೊಂದಿದೆ. ಈ ಮೈದಾನದ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಂಡು ತಮ್ಮ ಕ್ರೀಡಾ ಪ್ರತಿಭೆಯನ್ನು ಬೆಳೆಸಿಕೊಂಡು ರಾಜ್ಯ,ರಾಷ್ಟ್ರಮಟ್ಟದವರೆಗೂ ಹೋಗುವಂತಾಗಬೇಕೆಂದರು.ಬಿಎಲ್‌ಡಿಇ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಆರ್.ಎ.ಪವಾರ ಮಾತನಾಡಿದರು. ವೇದಿಕೆಯಲ್ಲಿ ದೈಹಿಕ ನಿರ್ದೇಶಕ ವ್ಹಿ.ಎನ್.ರಜಪೂತ, ಎಸ್.ಜೆ.ಸೂರ್ಯವಂಶಿ, ಎಂ.ಆರ್.ಮಮದಾಪುರ, ಲಕ್ಷ್ಮಣ ಬ್ಯಾಡಗಿ, ಸಂಗಮೇಶ ತೆಲಗಿ ಇದ್ದರು.ಪ್ರೊ.ಎಂ.ಎ.ಯಾಧವ ಸ್ವಾಗತಿಸಿ,ನಿರೂಪಿಸಿದರು. ಸೀಜನ್-೧ರ ಚಾಂಪಿಯನ್ ಟ್ರೋಪಿಯನ್ನು…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಮಿನಿವಿಧಾನಸೌಧದ ಮುಂಭಾಗ ಗ್ರಾಮಾಡಳಿತಾಧಿಕಾರಿಗಳ ಸಂಘವು ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಆಗ್ರಹಿಸಿ ನಡೆಸುತ್ತಿರುವ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಶುಕ್ರವಾರ ಐದನೇ ದಿನಕ್ಕೆ ಕಾಲಿಟ್ಟಿತ್ತು.ಮುಷ್ಕರ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಜವಳಿ, ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರಿಗೆ ಗ್ರಾಮಾಡಳಿತಾಧಿಕಾರಿಗಳ ಸಂಘದ ರಾಜ್ಯ ಉಪಾಧ್ಯಕ್ಷ ಸಂತೋಷ ಕುಂಟೋಜಿ ಇತರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.ಮನವಿ ಸ್ವೀಕರಿಸಿದ ಸಚಿವ ಶಿವಾನಂದ ಪಾಟೀಲರು ಗ್ರಾಮಾಡಳಿತಾಧಿಕಾರಿಗಳ ಕಚೇರಿ ನಿರ್ಮಾಣಕ್ಕೆ ನಮ್ಮ ಶಾಸಕರ ಅನುದಾನದಲ್ಲಿ ಕಟ್ಟಡ ನಿರ್ಮಿಸಿಕೊಡಲಾಗುವದು. ಸ್ಥಳದಲ್ಲಿ ಹಾಜರಿದ್ದ ತಹಸೀಲ್ದಾರರಿಗೆ ಈ ಕುರಿತು ನಮಗೆ ಪ್ರಸ್ತಾವನೆ ಸಲ್ಲಿಸಲು ತಿಳಿಸಿದ ಅವರು, ಗ್ರಾಮಾಡಳಿತಾಧಿಕಾರಿಗಳ ಇತರೇ ಬೇಡಿಕೆಗಳ ಕುರಿತು ಕಂದಾಯ ಸಚಿವರ ಗಮನಕ್ಕೆ ತಂದು ಪ್ರಾಮಾಣಿಕವಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸುವದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ಗ್ರಾಮಾಡಳಿತಾಧಿಕಾರಿ ಸಂಘದ ಬಸವನಬಾಗೇವಾಡಿ ತಾಲೂಕಾಧ್ಯಕ್ಷ ಸಿದ್ದು ಶಿರಶ್ಯಾಡ, ಕೊಲ್ಹಾರ ತಾಲೂಕಾಧ್ಯಕ್ಷ ಭೀಮಪ್ಪ ಜಿದ್ದಿಮನಿ, ನಿಡಗುಂದಿ ತಾಲೂಕಾಧ್ಯಕ್ಷ ನಾನಾಗೌಡ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ದೇವಸ್ಥಾನದಿಂದ ಮಿನಿವಿಧಾನಸೌಧದವರೆಗೂ ಅಖಂಡ ಕರ್ನಾಟಕ ರೈತ ಸಂಘದ ಮುಖಂಡರು, ಕಾರ್ಯಕರ್ತರು ಶುಕ್ರವಾರ ಪಾದಯಾತ್ರೆ ಮೂಲಕ ತೆರಳಿ ರೈತರ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಆಗ್ರಹಿಸಿ ಕೆಲ ಹೊತ್ತು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ, ಕಂದಾಯ ಸಚಿವರಿಗೆ, ಜಲಸಂಪನ್ಮೂಲ ಸಚಿವರಿಗೆ ಪ್ರತ್ಯೇಕವಾಗಿ ಬರೆದ ಮನವಿ ಪತ್ರವನ್ನು ತಹಸೀಲ್ದಾರ ಮೂಲಕ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಸಂಘದ ನೂತನ ತಾಲೂಕಾಧ್ಯಕ್ಷ ಉಮೇಶ ವಾಲೀಕಾರ ಮಾತನಾಡಿ, ರಾಜ್ಯದ ರೈತ ಬಾಂಧವರು ತಮ್ಮ ಜಮಿನುಗಳಿಗೆ ಹೋಗಲು ದಾರಿ ಇಲ್ಲದೇ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಜಮೀನಿನ ರೈತ ಒಳಗಡೆ ಇರುವ ಜಮೀನುಗಳಿಗೆ ಹಾಯ್ದು ಹೋಗಲು ತಮ್ಮ ಜಮೀನಿನಲ್ಲಿ ಅವಕಾಶ ನೀಡುತ್ತಿಲ್ಲ. ಕೇಳಲು ಹೋದರೆ ನಕ್ಷೆಯಲ್ಲಿ ದಾರಿ ಗುರುತು ಇದ್ದರೆ ಮಾತ್ರ ಹಾಯ್ದ ಹೋಗಬಹುದು. ಇದರಿಂದಾಗಿ ರೈತರಲ್ಲಿ ಕಲಹ ಉಂಟಾಗುತ್ತಿವೆ. ಜಮೀನುಗಳ ದಾರಿ ಸಮಸ್ಯೆಯಿಂದಾಗಿ ಕೆಲವರು ಬಿತ್ತನೆ ಮಾಡದೇ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಬಾಯಿಯ ಆರೋಗ್ಯ ನಿಮ್ಮ ಇತರೆ ಸಾಮಾನ್ಯ ಆರೋಗ್ಯದ ಮೇಲೆ ಪರಿಣಾಮವನ್ನುಂಟು ಮಾಡುತ್ತದೆ. ಬ್ಯಾಕ್ಟೀರಿಯಾ ಸೋಂಕಿನಿಂದ ಬಾಯಿಯಲ್ಲಿ ಒಸಡಿನ ರೋಗ ಉಂಟಾಗಬಹುದು. ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದಿದ್ದರೆ ಇದು ರಕ್ತದ ಮೂಲಕ ದೇಹದ ಇತರೆ ಭಾಗಗಳಿಗೆ ಹಾನಿ ಉಂಟು ಮಾಡುತ್ತದೆ. ಶರೀರಕ್ಕೆ ದಂತ ಅತೀ ಮುಖ್ಯವಾಗಿದೆ ಎಂದು ದಂತ ವೈದ್ಯ ಡಾ. ರವಿ ಭತಗುಣಕಿ ಹೇಳಿದರು.ಅವರು ಗುರುವಾರ ತಾಲೂಕಿನ ಲಚ್ಯಾಣ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಕಾರ್ಯಾಗಾರವನ್ನುದ್ದೇಶಿಸಿ ಮಾತನಾಡಿದರು.ಬೆಳಿಗ್ಗೆ ಎದ್ದಾಗ ಮತ್ತು ಒಮ್ಮೆ ಮಲಗುವ ಮುನ್ನ ಕಡ್ಡಾಯವಾಗಿ ಎರಡು ಬಾರಿ ಬ್ರಷ್ ಮಾಡಬೇಕು. ಮಧುಮೇಹ ಹೊಂದಿದ್ದರೆ ಅದನ್ನು ನಿರ್ವಹಿಸಿ, ಧೂಮಪಾನ ಮಾಡಬೇಡಿ ಅಥವಾ ತಂಬಾಕು ಉತ್ಪನ್ನಗಳನ್ನು ಬಳಸಬೇಡಿ ಎಂದು ಸಲಹೆ ನೀಡಿದರು.ಹಲ್ಲುಗಳ ನಡುವಿನ ಬ್ಯಾಕ್ಟಿರಿಯಾವನ್ನು ತೆಗೆದು ಹಾಕಲು ಪ್ರತಿದಿನ ಎರಡು ಬಾರಿ ಬ್ರೇಶ್ ಮಾಡಿ, ಆಲ್ಕೋಹಾಲ ಮತ್ತು ಹೆಚ್ಚುವರಿ ಸಕ್ಕರೆ ಹೊಂದಿರುವ ಆಹಾರ ಮತ್ತು ಪಾನೀಯಗಳನ್ನು ಮಿತಿಗೊಳಿಸಿ. ತಪಾಸಣೆಗಾಗಿ ೬…
ಜಾಗತಿಕ ಹೂಡಿಕೆದಾರರ ಸಮಾವೇಶದಿಂದ ರಾಜ್ಯಕ್ಕೆ ಅಧಿಕ ಪ್ರಯೋಜನ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಮಾಹಿತಿ ಬೆಂಗಳೂರು: ನಾಲ್ಕು ದಿನಗಳ ಕಾಲ ಇಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ಸದ್ಯಕ್ಕೆ ರಾಜ್ಯಕ್ಕೆ 10,27,378 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ.ಸಮಾವೇಶಕ್ಕೆ ತೆರೆ ಬಿದ್ದ ಬಳಿಕ ಅರಮನೆ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಎಂಬಿ ಪಾಟೀಲ್, ವಲಯವಾರು ಅಂಕಿ ಅಂಶಗಳ ಸಮೇತ ಮಾಹಿತಿ ನೀಡಿದರು. ಇನ್ನೂ ಕೆಲವು ಪ್ರತಿಷ್ಠಿತ ಕಂಪನಿಗಳು ಭಾರೀ ಹೂಡಿಕೆಗೆ ಆಸಕ್ತಿ ತೋರಿದ್ದು, ಒಡಂಬಡಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇವು ಆಖೈರಾದರೆ ಸಮಾವೇಶದ ಮೂಲಕ ಬರಲಿರುವ ಬಂಡವಾಳದ ಮೊತ್ತ ಇನ್ನೂ ಗಮನಾರ್ಹವಾಗಿ ಏರಲಿದೆ. ಈಗ ಖಾತ್ರಿಯಾಗಿರುವ ಹೂಡಿಕೆಯಲ್ಲಿ ಶೇಕಡ 75ರಷ್ಟು ಬೆಂಗಳೂರಿನ ಆಚೆ ಇರುವ ಪ್ರದೇಶಗಳಿಗೆ ಹೋಗಲಿದ್ದು, ಶೇಕಡ 45ರಷ್ಟು ಬಂಡವಾಳವು ಉತ್ತರ ಕರ್ನಾಟಕದ…
ವಿಜಯಪುರದಲ್ಲಿ ಜಿಲ್ಲಾ ಗುತ್ತಿಗೆದಾರರ ಸಂಘದಿಂದ ಬ್ರಹತ್ ಪ್ರತಿಭಟನಾ ಮೆರವಣಿಗೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಗುತ್ತಿಗೆದಾರರ ಸಂಘದಿಂದ ವಿವಿಧ ಸರಕಾರಿ ಇಲಾಖೆಗಳಲ್ಲಿ ಕೆಲಸ ನಿರ್ವಹಿಸಿರುವ ಗುತ್ತಿಗೆದಾರರ ಬಾಕಿ ಹಣ ಪಾವತಿಸಲು ವಿಳಂಬವಾಗುತ್ತಿರುವದನ್ನು ಖಂಡಿಸಿ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮಹಾತ್ಮಾ ಗಾಂಧಿ ವೃತ್ತ, ಬಸವೇಶ್ವರ ವೃತ್ತ ಅಂಬೇಡ್ಕರ ಮಾರ್ಗವಾಗಿ ಪ್ರತಿಭಟನೆಯೊಂದಿಗೆ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಘನವೆತ್ತ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.ವಿಜಯಪುರ ಜಿಲ್ಲಾ ಗುತ್ತಿಗೆದಾರರ ಸಂಘ ಪ್ರಧಾನ ಕಾರ್ಯದರ್ಶಿ ಆಯ್.ಎಂ. ಪಟ್ಟಣಶೆಟ್ಟಿ ಮಾತನಾಡಿ, ಕಳೆದ ೨-೩ ವರ್ಷಗಳಿಂದ ಗುತ್ತಿಗೆದಾರರು ವಿವಿಧ ಇಲಾಖೆಗಳಲ್ಲಿ ಲೋಕೋಪಯೋಗಿ ನೀರಾವರಿ ಇಲಾಖೆ, ಜಿಲ್ಲಾ ಪಂಚಾಯತ, ಚಿಕ್ಕ ನೀರಾವರಿ, ಮಹಾನಗರಪಾಲಿಕೆ, ಪಟ್ಟಣ ಪಂಚಾಯತಿ ಹೀಗೆ ವಿವಿಧ ರೀತಿಯ ಕಾಮಗಾರಿಗಳನ್ನು ಈಗಾಗಲೇ ಪೂರ್ಣಗೊಳಿಸಿರುವ ಕಾಮಗಾರಿಗಳ ಹಣ ಪಾವತಿ ವಿಳಂಬವಾಗುತ್ತಾ ಬಂದಿದೆ. ಆದರೆ ಬಾಕಿ ಬಿಲ್‌ಗಳು ಇನ್ನೂವರೆಗೂ ಪಾವತಿಯಾಗಿರುವದಿಲ್ಲ. ಇದರಿಂದ ಗುತ್ತಿಗೆದಾರರು ಆರ್ಥಿಕವಾಗಿ ತೀವ್ರ ತೊಂದರೆಗೊಳಪಟ್ಟಿರುತ್ತಾರೆ. ಸದರಿ ಕಾಮಗಾರಿಗಳಿಗೆ ಬೇಕಾದ ಕಚ್ಚಾ ವಸ್ತುಗಳನ್ನು ಸಿಮೆಂಟ್, ಕಬ್ಬಿಣ, ಡಾಂಬರ ಹಾಗೂ ಇಟ್ಟಿಗೆ, ಬಣ್ಣ, ಮರಳು, ಜಲ್ಲಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೩೩/೧೧ಕೆವಿ ಕೋರವಾರ ವಿದ್ಯುತ್ ವಿತರಣಾ ಕೇಂದ್ರದ ಮೇಲೆ ಬರುವ ಹಂದಿಗನೂರ, ಪುರದಾಳ ಎನ್‌ಜೆವಾಯ್ ಮತ್ತು ಪುರದಾಳ ಐಪಿ ೧೧ಕೆವ್ಹಿ ಮಾರ್ಗಗಳ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುತ್ತಿರುವುದರಿಂದ ಫೆ.೧೬ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಾಯಂಕಾಲ ೬ಗಂಟೆವೆರೆಗ ವಿದ್ಯುತ್ ವ್ಯತ್ಯೆಯ ಉಂಟಾಗಲಿದ್ದು, ಸದರಿ ಮಾರ್ಗಗಳ ಮೇಲೆ ಬರುವ ಬೋರಗಿ, ಬನ್ನೆಟ್ಟಿ ಹಾಗೂ ಬ್ಯಾಕೋಡ ಗ್ರಾಮದ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕೆಂದು ಸಿಂದಗಿ ಹೆಸ್ಕಾಂ ಉಪ-ವಿಭಾಗದ ಸಹಾಯಕ ನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಇಂಡಿ: ಭೀಮಾನದಿ ಪಾತ್ರದಲ್ಲಿ ಹಲವು ಸಂತ ಮಹಾಂತರು, ಕವಿಗಳು, ಸಾಹಿತಿಗಳು ಆಗಿ ಹೋಗಿದ್ದಾರೆ. ಭೀಮಾನದಿ ಈ ಭಾಗದ ಪುಣ್ಯ ನದಿಯಾಗಿದ್ದು ಭೀಮಾತೀರ ಎಂದು ಬಿಂಬಿಸಿ ಮಾಧ್ಯಮಗಳು ಭೀಮೆಗೆ ಅಪಮಾನ ಮಾಡುವ ಕಾರ್ಯ ಮಾಡುತ್ತಿವೆ ಎಂದು ಕರವೇ ತಾಲೂಕು ಅಧ್ಯಕ್ಷ ಬಾಳು ಮುಳಜಿ ಆರೋಪಿಸಿದರು.ಭೀಮಾತೀರದಲ್ಲಿ ಹಲಸಂಗಿ ಗೆಳಯರ ಬಳಗದ ಸಿಂಪಿ ಲಿಂಗಣ್ಣ, ಮಧುರಚೆನ್ನರು ನಾಡಿಗೆ ಕೊಡುಗೆ ಕೊಟ್ಟಿದ್ದಾರೆ. ಭೀಮೆ ಖ್ಯಾತ ಸಾಹಿತಿಗಳಿಗೆ ಜನ್ಮ ನೀಡಿದ ಒಡಲು. ಬಂಥನಾಳದ ಸಂಗನಬಸವ ಶಿವಯೋಗಿಗಳು, ತ್ರಿವಿಧ ದಾಸೋಹದ ತೀರ ಶೈಕ್ಷಣಿಕ ಕ್ರಾಂತಿಗೈದಿದ್ದರು. ತ್ರಿವಿಧಿ ದಾಸೋಹದ ಇಂಡಿ ತಾಲೂಕಿನ ಅಗರಖೇಡ ಶ್ರೀರಂಗರು ಕರ್ನಾಟಕ ರಾಜ್ಯದಲ್ಲೇ ಅತ್ತುತ್ಯಮ ನಾಟಕ ರಚನಾಕಾರರಾಗಿದ್ದು. ಭೀಮೆಯ ಒಡಲಿನಲ್ಲಿ ಹಲವು ಸಂತರು, ದಾರ್ಶನಿಕರು, ಪವಾಡ ಪುರುಷರು ಆಗಿ ಹೋಗಿದ್ದಾರೆ. ಕೇವಲ ಕೆಲವು ಕುಟುಂಬಗಳಿಂದ ಇಡೀ ಭೀಮಾನದಿಗೆ ಕಪ್ಪು ಚುಕ್ಕೆ ಇಡುತ್ತಿರುವುದು ಸರಿಯಲ್ಲ ಎಂದರು.ಮಾಧ್ಯಮದವರು ಇನ್ನಾದರೂ ಭೀಮಾತೀರ ಎಂಬ ಪದ ಬಳಕೆ ಮಾಡಬೇಡಿ ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಮಹೇಶ ಹೂಗಾರ, ಪ್ರಶಾಂತ ,ಲಾಳಸಂಗಿ,…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಬ್ಬಿನ ರಾವುದಿ ತುಂಬಿಕೊಂಡು ತೆರಳುತ್ತಿದ್ದ ಬೋಲೆರೋ ವಾಹನಕ್ಕೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡ ಘಟನೆ ಸಿಂದಗಿ ತಾಲೂಕಿನ ಗಣಿಹಾರ ಗ್ರಾಮದ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ ಸಂಭವಿಸಿಲ್ಲ.ತಾಲೂಕಿನ ಗಣಿಹಾರ ಗ್ರಾಮದಿಂದ ಸಿಂದಗಿಯೆಡೆಗೆ ಕಬ್ಬಿನ ರಾವುದಿಯನ್ನು ಬೊಲೆರೋ ಪಿಕಪ್ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ಮಾರ್ಗಮಧ್ಯದಲ್ಲಿ ವಿದ್ಯುತ್ ತಂತಿ ಸ್ಪರ್ಶವಾಗಿ ಬೆಂಕಿ ಹೊತ್ತುಕೊಂಡಿದೆ. ಕಬ್ಬಿನ ರಾವುದಿಗೆ ಹೊತ್ತಿಕೊಂಡ ಬೆಂಕಿ ತ್ವರಿತವಾಗಿ ವಾಹನಕ್ಕೆ ಆವರಿಸಿಕೊಂಡಾಗ ಸ್ಥಳದ ಸಮೀಪವಿದ್ದ ನಿವಾಸಿಗಳು ಪಂಪ್‌ಸೆಟ್ ನೀರನ್ನು ಬಳಿಸಿ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಕಬ್ಬಿನ ರಾವುದಿ ಹಾಗೂ ಲಕ್ಷಾಂತರ ಮೌಲ್ಯದ ವಾಹನ ಹಾನಿಗೊಂಡಿದೆ. ಕಾರ್ಯಾಚರಣೆಯಲ್ಲಿ ಎಫ್‌ಎಸ್‌ಟಿಒ ಎಂ.ಬಿ,ಪೂಜಾರಿ, ಸಿಬ್ಬಂದಿಗಳಾದ ಮಚೇಂದ್ರ ಶಿಂಧೆ. ಹಣಮಂತ ವಾಯ್, ಅಜರುದ್ದಿನ ಚಿಟಗುಪ್ಪಿ, ಹಣಮಂತ ಕುಂಬಾರ, ಶಾಂತಪ್ಪ ಬಿರಾದಾರ, ಕೃಷ್ಣಪ್ಪ ಪೂಜಾರಿ ಸೇರಿದಂತೆ ಅನೇಕರಿದ್ದರು. ಈ ಘಟನೆ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸರಕಾರಿ ಶಾಲೆಯಲ್ಲಿ ಓದುವ ಮಕ್ಕಳು ಮೊದಲು ಕೀಳರಿಮೆಯ ಭಾವನೆಯಿಂದ ಮೊದಲು ಹೊರಬರಬೇಕು. ಶಾಲೆಯಲ್ಲಿ ಹಮ್ಮಿಕೊಳ್ಳುವ ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನಿರ್ದೇಶಕ ಬಿ.ಜಿ.ಬಿರಾದಾರ ಹೇಳಿದರು.ಸಿಂದಗಿ ಪಟ್ಟಣದ ಸರಕಾರಿ ಹೆಣ್ಣು ಮಕ್ಕಳ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಜ್ಞಾನ ಸೌರಭ ಕಾರ್ಯಕ್ರಮದಲ್ಲಿ ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಸರಕಾರಿ ಶಾಲೆಯಲ್ಲಿ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ. ಈ ರೀತಿಯ ಜ್ಞಾನ ಸೌರಭ ಕಾರ್ಯಕ್ರಮಗಳು ತಾಲೂಕಿನ ವಿವಿಧ ಸರಕಾರಿ ಶಾಲೆಗಳಲ್ಲಿ ಹಮ್ಮಿಕೊಂಡು ಮಕ್ಕಳಿಗೆ ಜ್ಞಾನ ರಸದೌತಣ ಊಣಬಡಿಸಬೇಕು. ವಾರಕ್ಕೊಮ್ಮೆ ಅಥವಾ ತಿಂಗಳಿಗೊಮ್ಮೆ ವಿವಿಧ ಸಂಪನ್ಮೂಲ ವ್ಯಕ್ತಿಗಳನ್ನು ಆವ್ಹಾನಿಸಿ ಮಕ್ಕಳಿಗೆ ಜ್ಞಾನದ ಅರಿವನ್ನು ಮೂಡಿಸಬೇಕು ಎಂದು ಸಲಹೆ ನೀಡಿದರು.ಈ ವೇಳೆ ಶಾಲೆಯ ಮುಖ್ಯಗುರು ಶರಣು ಲಂಗೋಟಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಮಕ್ಕಳು ತಮ್ಮ ಬದುಕಿನಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಇಂದಿನ ಮಕ್ಕಳಿಗೆ…
