Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಮದವೇರಿದ ಎಮ್ಮೆಯೊಂದು ಇಲ್ಲಿನ ಬಸ್ ನಿಲ್ದಾಣದಲ್ಲಿ ನುಗ್ಗಿ ಇಬ್ಬರು ಬೈಕ್ ಸವಾರರಿಗೆ ಗುದ್ದಿ ಚಿಕ್ಕ ಪುಟ್ಟ ಗಾಯಗೊಳಿಸಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.ಏಕಾಏಕಿ ಬಸ್ ನಿಲ್ದಾಣಕ್ಕೆ ನುಗ್ಗಿದ ಎಮ್ಮೆ ವಾಹನಗಳ ಮೇಲೆ ನುಗ್ಗಲು ಆರಂಭಿಸಿದೆ. ಇದನ್ನು ಕಂಡ ಸಾರ್ವಜನಿಕರು ಕೆಲಹೊತ್ತು ಭಯಭೀತರಾಗಿದ್ದರು. ಬಳಿಕ ಪೊಲಿಸರಿಗೆ, ಪುರಸಭೆಯವರಿಗೆ ತಿಳಿಸಿದ್ದಾರೆ. ಎಮ್ಮೆಯನ್ನು ಹಿಡಿಯಲು ಸಾರ್ವಜನಿಕರು, ಪುರಸಭೆ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹರಸಾಹಸ ಪಟ್ಟರೂ ಯಾರ ಕೈಗೂ ಸಿಗದೇ ಬಸ್ ನಿಲ್ದಾಣದಿಂದ ಕಾಲ್ಕಿತ್ತು, ಕಳೆಯ ಸರ್ಕಾರಿ ಆಸ್ಪತ್ರೆಯೊಳಗೆ ನುಗ್ಗಿತ್ತು. ಬಳಿಕ ಜೆಸಿಬಿ ಬಳಸಿದಾಗ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ದೈರ್ಯ ಮಾಡಿ ಎಮ್ಮೆಯ ಕುತ್ತಿಗೆ ಬಳಿಯ ಹಗ್ಗ ಹಿಡಿದಾಗ ಸೆರೆಯಾಯಿತು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ನಿಗದಿತ ಅವಧಿಯಲ್ಲಿ ಗುರಿ ಸಾಧಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ ನೀಡಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಸಂತಾನ ಹರಣ ಶಸ್ತ್ರ ಚಿಕಿತ್ಸೆ, ಜನನಿ ಸುರಕ್ಷಾ ಯೋಜನೆ ಹಾಗೂ ಹೆರಿಗೆಗಳ ವಿವರ ಒದಗಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಬಸ್ ನಿಲ್ದಾಣದಿಂದ ಅನುಗ್ರಹ ಕಣ್ಣಿನ ಆಸ್ಪತ್ರೆವರೆಗೆ ರಸ್ತೆ ಕಾಮಗಾರಿಯನ್ನು ನಿರ್ಮಿತಿ ಕೇಂದ್ರದಿಂದ ಕೈಗೊಳ್ಳಲು ಕ್ರಮ ವಹಿಸಲಾಗುವುದು. ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯ ರೈತರಿಗೆ ಶೇ.೯೦ ರಷ್ಟು ಸಬ್ಸಿಡಿಯಲ್ಲಿ ಹನಿ ನೀರಾವರಿ ಅಳವಡಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಅವರು ಹೇಳಿದರು.ವಿವಿಧ ಇಲಾಖೆಗಳಲ್ಲಿ ಅಲ್ಪಸಂಖ್ಯಾತರಿಗಾಗಿ ಸರ್ಕಾರದ ವಿವಿಧ ಯೋಜನೆಗಳಿದ್ದು, ಈ ಯೋಜನೆಗಳ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ವಹಿಸಬೇಕು. ಕಾರ್ಯಕ್ರಮಗಳ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಕಲಚೇತನರ ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆಯನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಫೆ.೧೫ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವಿಕಲಚೇತನರು ಸಭೆಗೆ ಹಾಜರಾಗುವಂತೆ ಕೋರಲಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕನಕದಾಸ ಬಡಾವಣೆ, ಜಿಲ್ಲಾ ಪಂಚಾಯತ್ ಆವರಣ, ವಿಜಯಪುರ ದೂ: ೦೮೩೫೨-೭೯೬೦೬೦ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಗ್ರಾಮೀಣ ಪ್ರದೇಶದ ತೋಟದ ಮನೆಗಳಿಗೆ ಸಂಜೆ ೬ ಗಂಟೆಯಿAದ ಮರುದಿನ ಬೆಳಿಗ್ಗೆ ೬ ಗಂಟೆಯವರೆಗೆ ಓಪನ್ ಡೆಲ್ಟಾ ಮುಖಾಂತರ ಸಿಂಗಲ್ ಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದ್ದು, ಈ ಅವಧಿಯಲ್ಲಿ ರೈತರು ನೀರಾವರಿ ಪಂಪಸೆಟ್‌ಗಳನ್ನು ಬಳಕೆ ಮಾಡದಂತೆ ಹೆಸ್ಕಾಂ ಅಧೀಕ್ಷಕ ಅಭಿಯಂತರರು ಮನವಿ ಮಾಡಿಕೊಂಡಿದ್ದಾರೆ.ರೈತರ ಮಕ್ಕಳ ವಿಧ್ಯಾಭ್ಯಾಸದ ಅನುಕೂಲಕ್ಕಾಗಿ ಬೆಳಕಿನ ಅವಶ್ಯಕತೆಯನ್ನು ಗಮನಿಸಿ, ಗ್ರಾಮೀಣ ಪ್ರದೇಶದ ತೋಟದ ಮನೆಗಳಿಗೆ ಸಂಜೆ ೬ ರಿಂದ ಬೆಳಿಗ್ಗೆ ೬ ಗಂಟೆಯವರೆಗೆ ಸರ್ಕಾರದ ನಿರ್ದೇಶನದಂತೆ ೧೧ಕೆವ್ಹಿ ನೀರಾವರಿ ಪಂಪಸೆಟ್ ವಿದ್ಯುತ್ ಮಾರ್ಗಗಳ ಮೂಲಕ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಹಾಗೂ ಪ್ರತಿ ಮಾರ್ಗದ ಮೇಲೆ ಇರುವ ತೋಟದ ಮನೆಗಳಿಗೆ ಬೇಕಾಗುವ ವಿದ್ಯುತ್ ಲೆಕ್ಕಾಚಾರ ಮಾಡಿ ನಿಗದಿಪಡಿಸಲಾಗಿದೆ. ಒಂದು ವೇಳೆ ಈ ಅವಧಿಯಲ್ಲಿ ಪಂಪಸೆಟ್ ಬಳಕೆ ಮಾಡಿದರೆ ಮಾರ್ಗದ ಭಾರವು ನಿಗದಿತ ಭಾರಕ್ಕಿಂತ ಹೆಚ್ಚಾಗಿ ಅಟೋಮೆಟಿಕ್ ಟ್ರಿಪ್ ಆಗುವುದರಿಂದ ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಅಡಚಣೆಯಾಗುತ್ತದೆ. ಆದ್ದರಿಂದ ರೈತರು ಈ ಅವಧಿಯಲ್ಲಿ ನೀರಾವರಿ ಪಂಪಸೆಟ್‌ಗಳನ್ನು ಬಳಕೆ ಮಾಡದೇ…

Read More

ಉದಯರಶ್ಮಿ ದಿನಪತ್ರಿಕೆ ಬೆಳಗಾವಿ: ಗುಜರಾತನಲ್ಲಿರುವ ವಾಪಿ ಕನ್ನಡ ಸಂಘವು ಫೆಬ್ರುವರಿ 15ರಂದು ಸಾಯಂಕಾಲ ಐದು ಘಂಟೆಗೆ ಅಧ್ಯಕ್ಷೆ -ನಿಶಾ ಶೆಟ್ಟಿ, ಗೌರವ ಕಾರ್ಯದರ್ಶಿ – ವಿದ್ಯಾಧರ ಭಟ್, ಮಹಿಳಾ ಮುಖ್ಯಸ್ಥೆ – ಚಂದ್ರಿಕಾ ಕೋಟ್ಯಾನ, ಕಾರ್ಯಾಧ್ಯಕ್ಷರು -ಲಲಿತಾ ಕಾರಂತ, ವಿಶ್ವಸ್ಥರು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರ ನೇತೃತ್ವದಲ್ಲಿ 45 ನೆಯ ವಾರ್ಷಿಕೋತ್ಸವದ ಸಮಾರಂಭವನ್ನು ಹಮ್ಮಿಕೊಂಡಿದೆ. ಅದರ ಘನ ಅಧ್ಯಕ್ಷತೆಯನ್ನು ಕನ್ನಡ ನಾಡು -ನುಡಿಗೆ, ಶರಣ ತತ್ವ ಪ್ರಚಾರಕ್ಕೆ ಹಗಲಿರುಳು ದುಡಿಯುತ್ತಿರುವ ಕವಿಗಳು, ಲೇಖಕರು, ವಿಮರ್ಶಕರು, ಚಿಂತಕರು, ಉಪನ್ಯಾಸಕರು ಆಗಿ ಎಲ್ಲೆಡೆ ಪ್ರಸಿದ್ಧಿ ಪಡೆದ ಡಾ. ಶಶಿಕಾಂತ ಪಟ್ಟಣ -ಅಧ್ಯಕ್ಷರು ಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರ -ಪುಣೆ ಇವರು ವಹಿಸಿಕೊಳ್ಳಲಿದ್ದಾರೆ. ಈ ಮೂಲಕ ಬಸವತತ್ವ ಮತ್ತು ಕನ್ನಡನಾಡು -ನುಡಿಯ ಮಹತ್ವವನ್ನು ಗುಜರಾತನಲ್ಲಿರುವ ಕನ್ನಡಿಗರಿಗೆ ಉಣಬಡಿಸಲು ಹೊರಟಿದ್ದಾರೆ. ಅಕ್ಕನ ಅರಿವು ಮತ್ತು ವಚನ ಅಧ್ಯಯನ ವೇದಿಕೆಯ ಎಲ್ಲ ಆಜೀವ ಸದಸ್ಯರು, ದತ್ತಿ ದಾಸೋಹಿಗಳು, ವಿಶ್ವಸ್ಥರಾದ ಪ್ರೊ. ಶಾರದಾ ಪಾಟೀಲ್, ಶರಣ ಶಿವಾನಂದ ಕಲಕೇರಿ,…

Read More

ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಖಡಕ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ವಿಧಾನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಪಘಾತ ತಡೆಯುವ ಹಾಗೂ ಸುಗಮ ಸಂಚಾರ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವಲ್ಲಿ ಜಾಗೃತಿ ಮೂಡಿಸಬೇಕು. ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ಕಡ್ಡಾಯವಾಗಿ ರಸ್ತೆ ನಿಯಮಗಳ ಪಾಲನೆ ಮಾಡುವಂತೆ ವಾಹನ ಸವಾರರು-ಸಾರ್ವಜನಿಕರಲ್ಲಿ ಸೂಕ್ತ ಅರಿವು ಮೂಡಿಸುವಂತೆ ಅವರು ಸೂಚನೆ ನೀಡಿದರು.ವಿಜಯಪುರ ನಗರಕ್ಕೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಯ ಪ್ರಮುಖ ಸ್ಥಳಗಳಲ್ಲಿ ಕೈಕೊಳ್ಳಬೇಕಾದ ರಸ್ತೆ ಸುಧಾರಣೆ ಕ್ರಮಗಳ ಕುರಿತು ತಿಳಿಸಿದ ಅವರು, ಸೋಲಾಪೂರ ಬೈಪಾಸ್ ಸರ್ಕಲ್‌ನಲ್ಲಿ ಅಂಗಡಿಕಾರರು ರಸ್ತೆ ಒತ್ತುವರಿ ಮಾಡಿಕೊಂಡಿದ್ದಲ್ಲದೇ, ರಸ್ತೆಯ ಮುಂಭಾಗ ಎಲ್ಲೆಂದರಲ್ಲಿ ವಾಹನಗಳ ಪಾರ್ಕಿಂಗ್ ಮಾಡುವುದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ.…

Read More

ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿಯ ಜಿಲ್ಲಾ ಮಟ್ಟದ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ನಿರ್ಮೂಲನೆಗಾಗಿ ಸಂಬಂಧಿಸಿದ ಇಲಾಖೆಗಳು ಸಮನ್ವಯತೆ ಸಾಧಿಸಿಕೊಂಡು ಅಗತ್ಯ ಜಾಗೃತಿ- ತಿಳುವಳಿಕೆ ಮೂಡಿಸುವಂತೆ ಅವರು ಸೂಚನೆ ನೀಡಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾದಕ ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸುವುದಲ್ಲದೇ, ಮಾದಕ ದ್ರವ್ಯಗಳ ನಿರ್ಮೂಲನೆಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮಾದಕ ದ್ರವ್ಯಗಳ ಪರೀಕ್ಷಾ ಕಿಟ್ (ಡ್ರಗ್ ಡಿಟೆಕ್ಸನ್ ಕಿಟ್)ಗಳನ್ನು ಜಿಲ್ಲಾ ಹಾಗೂ ತಾಲೂಕ ಆಸ್ಪತ್ರೆಯಲ್ಲಿ ಬಳಸಲು ಕ್ರಮವಹಿಸಬೇಕು. ಮಾದಕ ದ್ರವ್ಯ ಪರೀಕ್ಷೆ ನಡಸುವುದರಿಂದ ಮಾದಕ ದ್ರವ್ಯ ಸೇವನೆ ಪ್ರಮಾಣ ಕಡಿಮೆಗೊಳಿಸಬಹುದು.…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣ ಮಿನಿವಿಧಾನಸೌಧದ ಮುಂಭಾಗದ ಆವರಣಗೋಡೆಗೆ ಹೊಂದಿಕೊಂಡಂತೆ ಗ್ರಾಮಾಡಳಿತಾಧಿಕಾರಿಗಳು ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಆಗ್ರಹಿಸಿ ಕಳೆದ ಮೂರು ದಿನಗಳಿಂದ ನಡೆಸುತ್ತಿರುವ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಗುರುವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿತ್ತು.ಮುಷ್ಕರಕ್ಕೆ ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಸೋಮನಗೌಡ(ಅಪ್ಪುಗೌಡ) ಪಾಟೀಲ ಮನಗೂಳಿ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಅವರು, ಗ್ರಾಮಾಡಳಿತಾಧಿಕಾರಿಗಳು ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ನಡೆಸುತ್ತಿದ್ದಾರೆ. ಇವರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇವರ ಪ್ರಮುಖ ಬೇಡಿಕೆಗಳಾದ ಸುಸಜ್ಜಿತವಾದ ಕಟ್ಟಡ, ಉಪಯುಕ್ತವಾದ ಉಪಕರಣಗಳು ಸೇರಿದಂತೆ ಇತರೇ ಮೂಲಸೌಲಭ್ಯಗಳನ್ನು ಸರ್ಕಾರ ಕೂಡಲೇ ಒದಗಿಸಬೇಕೆಂದು ಆಗ್ರಹಿಸಿದ ಅವರು, ಗ್ರಾಮಾಡಳಿತಾಧಿಕಾರಿಗಳು ತಮ್ಮ ಕರ್ತವ್ಯದಿಂದ ಮುಷ್ಕರದಲ್ಲಿ ಭಾಗವಹಿಸಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಸಾರ್ವಜನಿಕರ ಎಲ್ಲ ಪ್ರಮಾಣ ಪತ್ರಗಳ ವಿತರಣೆ ಸ್ಥಗಿತಗೊಂಡಿವೆ. ಕೂಡಲೇ ಸರ್ಕಾರ ಇವರ ಬೇಡಿಕೆಗಳನ್ನು ಈಡೇರಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂದರು.ಇವರ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಮುಖ್ಯಮಂತ್ರಿಗಳಿಗೆ, ಕಂದಾಯ ಸಚಿವರಿಗೆ ಬರೆದ ಪ್ರತ್ಯೇಕ ಮನವಿ ಪತ್ರಗಳನ್ನು ರವಾನಿಸಿದರು.ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕಾಧ್ಯಕ್ಷ ಜಗದೀಶ ಕೊಟ್ರಶೆಟ್ಟಿ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: 2024-25 ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ರಾಷ್ಟ್ರ ಮಟ್ಟದ ಹಾಕಿ ಸ್ಪರ್ಧೆಗೆ ಕರ್ನಾಟಕ‌ ರಾಜ್ಯ ತಂಡ ನಿಯೋಜಿಸಿದ್ದು, ವಿಜಯಪುರ ನಗರದ ಯು.ಜಿ.ಎಚ್.ಪಿ.ಎಸ್ ನಂ 5 ಶಾಲೆಯ ಸಹ ಶಿಕ್ಷಕ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾ ಖಜಾಂಚಿ ಹಾಗೂ ಜಿಓಸಿಸಿ ಬ್ಯಾಂಕಿನ ನಿರ್ದೇಶಕರಾದ ಸೈಯ್ಯದ ಜುಬೇರ ಕೆರೂರ ಆಯ್ಕೆಯಾಗಿದ್ದಾರೆ.ರಾಜ್ಯ ಮಟ್ಟದ ನೌಕರರ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಇವರು ರಾಷ್ಟ್ರ ಮಟ್ಟದ ಹಾಕಿ ತಂಡದಲ್ಲಿ ಆಯ್ಕೆಯಾಗಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಪೇಬ್ರುವರಿ 15 ರಿಂದ 28 ವರೆಗೆ ಆಂದ್ರಪ್ರದೇಶದ ಕಾಕಿನಾಡ ನಗರದ ಅಸ್ಟ್ರೋ ಟರ್ಫ ಹಾಕಿ ಡಿಎಸ್ಎ ಮೈದಾನದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.ರಾಷ್ಟ್ರದ ವಿವಿಧ ರಾಜ್ಯಗಳ ಹಾಕಿ ತಂಡಗಳು ಭಾಗವಹಿಸುತ್ತಿದ್ದು, ಕರ್ನಾಟಕ ತಂಡ ಹಾಕಿ ಪಂದ್ಯದಲ್ಲಿ ಜಯಶಾಲಿಯಾಗಲಿ ಎಂದು ವಿಜಯಪುರ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ, ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶಡಶ್ಯಾಳ, ಕಾರ್ಯದರ್ಶಿ ರಾಜಶೇಖರ ದೈವಾಡಿ, ಪ್ರೌಢ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಜೀವನದ ಪ್ರತಿಕ್ಷಣಗಳನ್ನು ಆನಂದದಿಂದ ಕಳೆಯಲು ಆಧ್ಯಾತ್ಮಿಕ ವಿಚಾರಧಾರೆಗಳ ಅಗತ್ಯತೆಯಿದೆ ಎಂದು ಆಲಮೇಲ ವಿರಕ್ತಮಠದ ಜಯದೇವ ಮಲ್ಲಿಬೊಮ್ಮಶ್ರೀಗಳು ಹೇಳಿದರು.ತಾಲ್ಲೂಕಿನ ಕಡ್ಲೇವಾಡ ಪಿಸಿಎಚ್ ಗ್ರಾಮದ ರಾಚೋಟೇಶ್ವರಮಠದ ಆವರಣದಲ್ಲಿ ಗುರುವಾರ ಮಹಾಶಿವರಾತ್ರಿ ಅಂಗವಾಗಿ ಆರಂಭಗೊಂಡ ಅಮೃತಾನಂದಶ್ರೀಗಳ ಆಧ್ಯಾತ್ಮೀಕ ಪ್ರವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜೀವನ ಶಾಶ್ವತವಲ್ಲ. ಆದರೆ ಜೀವನ ಪುಸ್ತಕದ ಪ್ರತಿಪುಟ ನೆನೆಪಿನಲ್ಲಿ ಉಳಿಯುವಂತೆ ಬಾಳಬೇಕು. ನಮ್ಮ ದೇಶ ಪುರಾತನ ಪರಂಪರೆಯ ಪುಣ್ಯಭೂಮಿ. ಇಲ್ಲಿ ಸತ್ಸಂಗ, ಪುರಾಣ, ಪೂಜೆ ಪುನಸ್ಕಾರಗಳು ಪ್ರತಿ ಮನೆ, ಮಂದಿರಗಳಲ್ಲಿ ತುಂಬಿ ತುಳುಕುತ್ತೀವೆ ಎಂದರು.ವಿಜಯಪುರ ಅನುಗ್ರಹ ಆಸ್ಪತ್ರೆಯ ನೇತ್ರತಜ್ಞ ಪ್ರಭುಗೌಡ ಲಿಂಗದಳ್ಳಿ(ಚಬನೂರ) ಮಾತನಾಡಿ, ನಾವು ಜೀವನದಲ್ಲಿ ಮೂರು ಜ್ಞಾನಗಳನ್ನು ಕಾಣುತ್ತೇವೆ. ಅಜ್ಞಾನ, ವಿಜ್ಞಾನ, ಸುಜ್ಞಾನ. ಈಗ ನಾವು ಅಜ್ಞಾನದ ಜಗತ್ತಿನಿಂದ ಸುಜ್ಞಾನದ ಜಗದೆಡೆಗೆ ಸಾಗಬೇಕಾಗಿದೆ. ಜೀವನದಲ್ಲಿ ಆಸೆಗಳಿರಬೇಕು ವಿನಹಃ ಎಂದಿಗೂ ದುರಾಸೆಗಳಿರಬಾರದು ಎಂದರು.ಬೋರೆಗಾಂವ ಅಮೋಘಸಿದ್ಧಮಠದ ಬಸವರಾಜಶ್ರೀಗಳು ಮಾತನಾಡಿ, ಸಂತರು, ಶರಣರು, ಮಹಾತ್ಮರು ನುಡಿದ ಮಾತುಗಳನ್ನು ಮೆಲುಕು ಹಾಕುವುದೇ ಸತ್ಸಂಗ, ಪ್ರವಚನಗಳಾಗಿವೆ. ಶರಣ ಮಹಾತ್ಮರ ನುಡಿಗಳು ನಮಗೆ ಗುರಿ…

Read More