Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಂ.ಪಾಟೀಲ ರಸ್ತೆ, ಪ್ರಕೃತಿ ಕಾಲೋನಿಯಲ್ಲಿ ವಿಶೇಷ ಚೇತನ ಮಕ್ಕಳಿಗಾಗಿ ಸ್ಥಾಪಿಸಲಾದ ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆಯನ್ನು ಜುಲೈ 27 ಸೋಮವಾರ ರಂದು ಬೆ.9ಗಂ. ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ, ಬಿ.ಎಲ್.ಡಿ.ಇ ಪ್ರಧಾನಕಾರ್ಯದರ್ಶಿ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿದ ಅವರು, ವಿಶೇಷ ಚೇತನ ಮಕ್ಕಳು ಇತರ ಮಕ್ಕಳಂತೆ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಈ ಶಾಲೆಯನ್ನು ಸ್ಥಾಪಿಸಲಾಗಿದೆ. ಇಲ್ಲಿ ದೈಹಿಕ, ಬೌದ್ಧಿಕ, ಶ್ರವಣ, ದೃಷ್ಟಿ ಹಾಗೂ ಕಲಿಕಾ ನ್ಯೂನ್ಯತೆಗಳನ್ನು ಹೊಂದಿರುವ ಮಕ್ಕಳ ಅಗತ್ಯಕ್ಕೆ ಅನುಗುಣವಾಗಿ ಶಿಕ್ಷಣ, ತರಬೇತಿ ಹಾಗೂ ಚಿಕಿತ್ಸೆ ನೀಡಲಾಗುವುದು. ಈ ಶಾಲೆಯಲ್ಲಿ ವಿಶೇಷ ತರಬೇತಿ ಪಡೆದ ಶಿಕ್ಷಕರು, ಫಿಸಿಯೋಥೆರಪಿ, ಶ್ರವಣ, ಮನೋವೈಜ್ಞಾನಿಕ ಸಮಾಲೋಚನೆ ಸೇರಿದಂತೆ ವಿಶೇಷ ತಜ್ಞರು ಈ ಮಕ್ಕಳ ಸಮಗ್ರ ಬೆಳವಣಿಗೆಗೆ ಅಗತ್ಯವಿರುವ ಚಿಕಿತ್ಸೆಗಳನ್ನು ನೀಡಲಿದ್ದಾರೆ. ಅಲ್ಲದೇ, ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸಿ, ಅವರನ್ನು ಸಾಧ್ಯವಾದ ಮಟ್ಟಿಗೆ ಇತರ ಮಕ್ಕಳೊಂದಿಗೆ ಬೆರೆಯುವ ಮೂಲಕ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೃಹತ್ ಮತ್ತು ಮಾಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರು ನಾಳೆ ದಿ.26 ರವಿವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಅಂದು ಬೆ. 10-12 ಗಂ. ವರೆಗೆ ಬಿ ಎಂ ಪಾಟೀಲ ರಸ್ತೆಯ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಆಲಿಸಲಿದ್ದಾರೆ. ಸಂ. 4 ಗಂ. ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಗ್ರಾಮೀಣ ಭಾಗದಲ್ಲಿ ಅರಳಿದ ಪ್ರತಿಭೆ, ಜಿಲ್ಲೆಗೆ 2ನೇ ಸ್ಥಾನ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಸಾಧನೆ ಯಾರ ಸ್ವತ್ತಲ್ಲ, ನಿಶ್ಚಿತ ಗುರಿಯೊಂದಿಗೆ ಸೂಕ್ತ ಮಾರ್ಗದರ್ಶನದಲ್ಲಿ ಸತತ ಪ್ರಯತ್ನ ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಗ್ರಾಮೀಣ ಭಾಗದ ಅಪ್ಪಟ ಹಳ್ಳಿಯ ಪ್ರತಿಭೆ ಮಹಮ್ಮದ್ ಯಾಸೀನ್ ಹೊನ್ನಳ್ಳಿ ಇಂದಿನ ವಿದ್ಯಾರ್ಥಿಗಳಿಗೆ ಮಾದರಿಯಾಗಿ ನಿಲ್ಲುತ್ತಾನೆ.ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮದ ಪ್ರೌಢಶಾಲಾ ನಿವೃತ್ತ ಶಿಕ್ಷಕರಾದ ಮಶ್ಯಾಕಸಾಬ್ ಹೊನ್ನಳ್ಳಿ ಹಾಗೂ ತಾಯಿ ಇಮಾಂಬಿ ಹೊನ್ನಳ್ಳಿ ಅವರ ಸುಪುತ್ರನಾದ ಮಹಮ್ಮದ್ ಯಾಸೀನ್ ಹೊನ್ನಳ್ಳಿ ನೀಟ್ (ಯುಜಿ) 2026 ಪರೀಕ್ಷೆಯಲ್ಲಿ 720ಕ್ಕೆ 632 ಅಂಕಗಳನ್ನು ಗಳಿಸಿ ಅಖಿಲಭಾರತ ಮಟ್ಟದಲ್ಲಿ 3226ನೇ ರ‍್ಯಾಂಕ್ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ.ಗ್ರಾಮೀಣ ಭಾಗದ ಎ.ಕೆ.ಸಿರಸಗಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಯು ಕಾಲೇಜಿನ ಅವಧಿಯ ನಂತರ ಮನೆಯಲ್ಲಿಯೇ ಆನ್‌ಲೈನ್ ತರಬೇತಿಯನ್ನೂ ಪಡೆದುಕೊಳ್ಳುವ ಮೂಲಕ ಸತತ ಪರಿಶ್ರಮದ ಅಧ್ಯಯನ ಮಾಡುವ ಮೂಲಕ ಪ್ರಥಮ ಹಂತದಲ್ಲಿಯೇ ನೀಟ್ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಗೆ 2ನೇ ರ‍್ಯಾಂಕ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮನೆ ಮನೆ ಗಣತಿ ಕಾರ್ಯವು ಭರದಿಂದ ಸಾಗಿದ್ದು, ಇದುವರೆಗೆ ಒಟ್ಟು 15,24,098 ಗಣತಿ ಫಾರಂಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಜೂನ್ 16 ರಲ್ಲಿದ್ದಂತೆ ಒಟ್ಟು 19,82,114 ಮತದಾರರಿದ್ದು, ಮನೆ ಮನೆ ಗಣತಿಗಾಗಿ ಬಿ.ಎಲ್.ಒ ಗಣತಿ ಫಾರಂಗಳನ್ನು ವಿತರಿಸಲಾಗಿತ್ತು. ಈ ಗಣತಿ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಜೂನ್ 30 ರಿಂದ ಪ್ರಾರಂಭವಾಗಿದ್ದು, ಆಗಸ್ಟ್ 8 ರವರೆಗೆ ನಡೆಯಲಿದೆ ಎಂದವರು ಮಾಹಿತಿ ನೀಡಿದ್ದಾರೆ.ಇದುವರೆಗೆ ನಡೆದಿರುವ ಪ್ರಕ್ರಿಯೆಯಲ್ಲಿ ಮತದಾರರು ಆನ್‌ಲೈನ್ ಮೂಲಕವೇ ನೇರವಾಗಿ 3,907 ಗಣತಿ ಫಾರಂಗಳನ್ನು ಸಲ್ಲಿಸಿದ್ದಾರೆ. ಗಣತಿ ಪರಿಶೀಲನೆ ವೇಳೆ ಜಿಲ್ಲೆಯಾದ್ಯಂತ 39,843 ಮರಣ ಹೊಂದಿದ ಮತದಾರರು, 72,688 ಖಾಯಂ ಆಗಿ ಸ್ಥಳಾಂತರಗೊಂಡವರು, 21,794 ಸಂಗ್ರಹಿಸಲಾಗದ /ಗೈರುಹಾಜರಾದವರು ಹಾಗೂ 16,863 ಈಗಾಗಲೇ ನೋಂದಾಯಿಸಿರುವ ಪ್ರಕರಣಗಳು ಸೇರಿವೆ ಎಂದು ಅವರು ಹೇಳಿದ್ದಾರೆ. ಸಾರ್ವಜನಿಕರು ಹಾಗೂ ಮತದಾರರು ಈ ಕುರಿತ ಹೆಚ್ಚಿನ ವಿವರಗಳನ್ನು ಜಿಲ್ಲಾಡಳಿತದ ಅಧಿಕೃತ ವೆಬ್‌ಸೈಟ್…
ಉದಯರಶ್ಮಿ ದಿನಪತ್ರಿಕೆ ಇಂಡಿ: ನಗರದಲ್ಲಿ ಮೇ 6ರಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ನಂಬಲಾಗಿದ್ದ 28 ವರ್ಷದ ಅರುಣಕುಮಾರ್ ಬಡಿಗೇರ ಅವರ ಸಾವಿನ ಪ್ರಕರಣ ಇದೀಗ ಸಂಚಲನಕಾರಿ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಹಜ ಸಾವು ಎಂದು ಭಾವಿಸಲಾಗಿದ್ದ ಪ್ರಕರಣದಲ್ಲಿ ಇದೀಗ ಪತ್ನಿಯ ವಿರುದ್ಧವೇ ಕೊಲೆ ಆರೋಪ ಕೇಳಿಬಂದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.ಕುಟುಂಬದವರ ಮಾಹಿತಿ ಪ್ರಕಾರ, ಅರುಣಕುಮಾರ್ ಅವರ ಪತ್ನಿ ಭಾಗ್ಯಶ್ರೀ ಅವರು ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದರು. ಯಾವುದೇ ವೈದ್ಯಕೀಯ ಪರೀಕ್ಷೆ ಅಥವಾ ಮರಣೋತ್ತರ ಪರೀಕ್ಷೆ ನಡೆಸದೇ ಕುಟುಂಬಸ್ಥರು ಅಂತ್ಯಸಂಸ್ಕಾರ ನೆರವೇರಿಸಿದ್ದರು.ಆದರೆ, ಘಟನೆಯಾದ ಸುಮಾರು ಎರಡುವರೆ ತಿಂಗಳ ಬಳಿಕ ಭಾಗ್ಯಶ್ರೀ ಅವರ ನಡೆ-ನುಡಿಗಳ ಬಗ್ಗೆ ಕುಟುಂಬಸ್ಥರಿಗೆ ಅನುಮಾನ ವ್ಯಕ್ತವಾಗಿದ್ದು, ಅವರ ಮೊಬೈಲ್ ಫೋನ್ ಪರಿಶೀಲಿಸಿದ ವೇಳೆ ಕೆಲವು ಚಾಟಿಂಗ್ ಹಾಗೂ ವಿಡಿಯೊ ಕರೆಗಳ ಸ್ಕ್ರೀನ್‌ಶಾಟ್‌ಗಳು ದೊರೆತಿವೆ ಎಂದು ಆರೋಪಿಸಲಾಗಿದೆ. ಈ ಮಾಹಿತಿಯ ಆಧಾರದ ಮೇಲೆ ಅರುಣಕುಮಾರ್ ಅವರ ಸಾವು ಸಹಜವಲ್ಲ ಎಂಬ ಅನುಮಾನ ಮೂಡಿದೆ.ದೂರಿನಲ್ಲಿ ಉಲ್ಲೇಖಿಸಿರುವಂತೆ, ಭಾಗ್ಯಶ್ರೀ ಅವರಿಗೆ ಕಾಲೇಜು ಸಹಪಾಠಿಯಾಗಿದ್ದ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕ, ಸಿಂದಗಿ ವತಿಯಿಂದ ಜು.೨೭ ಸೋಮವಾರ ಬೆಳಿಗ್ಗೆ ೧೦ಗಂಟೆಗೆ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಸಾನ್ನಿಧ್ಯವನ್ನು ಯಂಕಂಚಿ ಕುಂಟೋಜಿ ಹಿರೇಮಠದ ಶ್ರೀ ಅಭಿನವ ರುದ್ರಮುನಿ ಶಿವಾಚಾರ್ಯರು ವಹಿಸಲಿದ್ದಾರೆ. ಸಮ್ಮುಖವನ್ನು ರಾಂಪೂರ ಪಿ.ಎ. ಗ್ರಾಮದ ಶ್ರೀಸಂಗನಬಸವೇಶ್ವರ ಆರೂಢ ಮಠದ ಶ್ರೀ ನಿತ್ಯಾನಂದ ಮಹಾರಾಜರು ವಹಿಸುವರು. ಕಾರ್ಯಕ್ರಮವನ್ನು ಶಾಸಕ ಅಶೋಕ ಮನಗೂಳಿ ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕ ರಮೇಶ ಭೂಸನೂರ ಅವರು ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ದಂಡಾಧಿಕಾರಿ ಕರೆಪ್ಪ ಬೆಳ್ಳಿ ಮತ್ತು ಹಿರಿಯ ವರದಿಗಾರರಾದ ಶಾಂತು ಹಿರೇಮಠ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕಾಧ್ಯಕ್ಷ ಮಹಾಂತೇಶ ನೂಲಾನವರ ವಹಿಸಿಕೊಳ್ಳುವರು. ವಿಶೇಷ ಆಹ್ವಾನಿತರಾಗಿ ಕಾನಿಪ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪ್ರಕಾಶ ಬೆಣ್ಣೂರ, ಹಿರಿಯ ಪತ್ರಿಕೋದ್ಯಮಿ ಟಿ.ಕೆ.ಮಲಗೊಂಡ, ನಿಕಟಪೂರ್ವ ಅಧ್ಯಕ್ಷ…
ಉದಯರಶ್ಮಿ ದಿನಪತ್ರಿಕೆ ತಾಳಿಕೋಟೆ: ಪಟ್ಟಣದ ಶ್ರೀ ಖಾಸ್ಗತೇಶ್ವರ ಮಠಕ್ಕೆ ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ(ಕುದರಿಸಾಲವಾಡಗಿ) ಅವರು ಶುಕ್ರವಾರರಂದು ಬೆಟ್ಟಿ ನೀಡಿ ಶ್ರೀ ಖಾಸ್ಗತೇಶ್ವರರ ಹಾಗೂ ವಿರಕ್ತಶ್ರೀಗಳ ಗದ್ದುಗೆಯ ದರ್ಶನ ಪಡೆದು ಮಹಾಪೂಜೆ ಸಲ್ಲಿಸಿದರಲ್ಲದೇ ಶ್ರೀಮಠದ ಬಾಲಶಿವಯೋಗಿ ಶ್ರೀ ಸಿದ್ದಲಿಂಗ ದೇವರಿಂದ ಆಶಿರ್ವಾದ ಪಡೆದುಕೊಂಡರು.ಶ್ರೀ ಖಾಸ್ಗತೇಶ್ವರ ಮಠದ ಜಾತ್ರೋತ್ಸವವು ಪ್ರಾರಂಭಗೊಂಡಿದ್ದರಿಂದ ಮಠಕ್ಕೆ ಬೆಟ್ಟಿ ನೀಡಿದ ಶಾಸಕ ರಾಜುಗೌಡ ಪಾಟೀಲ ಬಾಲಶಿವಯೋಗಿ ಶ್ರೀ ಸಿದ್ದಲಿಂಗ ದೇವರನ್ನು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.ಈ ಸಮಯದಲ್ಲಿ ಮಾತನಾಡಿದ ಶಾಸಕ ರಾಜುಗೌಡರು ಶ್ರೀ ಖಾಸ್ಗತ ಮಠವು ರಾಜ್ಯದ ಪ್ರಮುಖ ಮಠಗಳಲ್ಲಿ ಒಂದಾಗಿ ಬೆಳೆಯುತ್ತಾ ಸಾಗಿದೆ ಶ್ರೀಮಠವು ಮುಂಬರುವ ದಿನಗಳಲ್ಲಿ ಇನ್ನೂ ಲಕ್ಷಾಂತರ ಭಕ್ತರನ್ನು ಹೊಂದಲಿದೆ ಎಂದರು.ಈ ಸಮಯದಲ್ಲಿ ಶ್ರೀಮಠದ ಉಸ್ತುವಾರಿ ವೇ.ಮುರುಘೇಶ ವಿರಕ್ತಮಠ, ಜೆಡಿಎಸ್ ತಾಲೂಕಾ ಅಧ್ಯಕ್ಷ ಮಡುಸಾಹುಕಾರ ಬಿರಾದಾರ, ಬಂದು, ಆಪ್ತಸಹಾಯಕ ಲಕ್ಷ್ಮಣ ರ‍್ಯಾಗೇರಿ, ಮೊದಲಾದವರು ಉಪಸ್ಥಿತರಿದ್ದರು.
ಕೆಸರಟ್ಟಿ – ಕಲಕೇರಿ ಮಾರ್ಗದ ಹದಗೆಟ್ಟಿರುವ ರಸ್ತೆ ದುರಸ್ಥಿಗೆ ಆಗ್ರಹಿಸಿ ನಡೆದ ಧರಣಿ | ಸ್ಥಳಕ್ಕೆ ಭೇಟಿ ನೀಡಿದ ಶಾಸಕ ರಾಜುಗೌಡರಿಗೆ ಧರಣಿ ನಿರತರಿಂದ ಮನವಿ ಉದಯರಶ್ಮಿ ದಿನಪತ್ರಿಕೆ ತಾಳಿಕೋಟೆ: ತಾಲೂಕಿನ ಕೆಸರಟ್ಟಿ ಕ್ರಾಸ್‌ದಿಂದ ಬಿಂಜಲಭಾವಿ ಮಾರ್ಗವಾಗಿ ಕಲಕೇರಿ ಸಂಪರ್ಕಿಸುವ ಮುಖ್ಯ ರಸ್ತೆಯು ಸಂಪೂರ್ಣ ಹಾಳಾಗಿ ಹೋಗಿದ್ದು ಕೂಡಲೇ ನೂತನ ರಸ್ತೆ ನಿರ್ಮಿಸಬೇಕೆಂದು ರಾಷ್ಟ್ರೀಯ ರೈತ ಸಂಘ ಜಿಲ್ಲಾ ಹಾಗೂ ತಾಲೂಕಾ ಮತ್ತು ಗ್ರಾಮ ಘಟಕದ ನೇತೃತ್ವದಲ್ಲಿ ಕಳೆದ ೩ ದಿನಗಳಿಂದ ಬಿಂಜಲಭಾವಿ ಗ್ರಾಮದ ಹತ್ತಿರ ನಡೆದ ಧರಣಿ ಸತ್ಯಾಗ್ರಹವು ಶಾಸಕ ರಾಜುಗೌಡ ಪಾಟೀಲ(ಕು.ಸಾಲವಾಡಗಿ) ಅವರ ಬರವಸೆಯ ಮೇರೆಗೆ ಅಂತ್ಯಗೊಂಡಿದೆ.ಶುಕ್ರವಾರರಂದು ಧರಣಿ ನಿರತರ ಸ್ಥಳಕ್ಕೆ ಬೆಟ್ಟಿ ನೀಡಿದ ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ ಅವರು ಮಾತನಾಡಿ, ಸದರಿ ರಸ್ತೆ ದುರಸ್ಥಿಗಾಗಿ ೨೦೨೪ ನವ್ಹೇಂಬರ್ ನಲ್ಲಿ ೫ ಕೋಟಿ ರೂ. ಲೋಕೋಪಯೋಗಿ ಇಲಾಖೆಯಡಿ ಹಾಕಲಾಗಿತ್ತು ಯಾವುದೋ ಕಾರಣಕ್ಕೆ ಕೆಲವರ ಸ್ವಹಿತಾಸಕ್ತಿಗೆ ಸದರಿ ಕೆಲಸವು ಪ್ರಾರಂಭಗೊಳ್ಳದೇ ರದ್ದುಗೊಂಡಿತು. ಸದರಿ ರಸ್ತೆಗೆ ದುರಸ್ಥಿಗೆ…
ಉದಯರಶ್ಮಿ ದಿನಪತ್ರಿಕೆ ಇಂಡಿ: ರಾಷ್ಟ್ರಧ್ವಜವು ದೇಶದ ಸ್ವಾತಂತ್ರ‍್ಯ, ಏಕತೆ ಮತ್ತು ಸಾವಭೌಮತ್ವದ ಪ್ರತೀಕವಾಗಿದ್ಧು , ಪ್ರತಿಯೊಬ್ಬ ನಾಗರಿಕರು ಅದರ ಘನತೆ ಮತ್ತು ಗೌರವವನ್ನು ಕಾಪಾಡುವುದು ತಮ್ಮ ಕತ೯ವ್ಯ ಎಂದು ಎಸ್,ವಾಯ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಡಿ,ಎಸ್, ಕುಲಕರ್ಣಿ ಹೇಳಿದರು.ಭಾರತ ಸೇವಾದಳ ಜಿಲ್ಲಾ ಸಮಿತಿ ವಿಜಯಪುರ, ತಾಲೂಕು ಸಮಿತಿ ಇಂಡಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇಂಡಿ ಇವರುಗಳ ಸಹಯೋಗದಲ್ಲಿ ತಾಲೂಕಿನ ಮಿರಗಿ ಗ್ರಾಮದ ಶ್ರೀ ಯಲ್ಲಾಲಿಂಗೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕರಿಗಾಗಿ, ಮಕ್ಕಳಿಗಾಗಿ ಆಯೋಜಿಸಲಾದ “ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆ ಕುರಿತಾದ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಭಾರತ ಸೇವಾದಳ ವಲಯ ಸಂಘಟಕ ನಾಗೇಶ ಡೋಣೂರ ರಾಷ್ಟ್ರಧ್ವಜ, ರಾಷ್ಟ್ರಗೀತೆ ಕುರಿತು ಬೌದ್ಧಿಕವಾಗಿ ಮಾಹಿತಿ ನೀಡಿದರು. ಹಾಗೇ ರಾಷ್ಟ್ರಧ್ವಜ ಕಟ್ಟುವ, ಮಡಚುವ, ಹಾರಿಸುವ ವಿಧಾನವನ್ನು ಪ್ರಾಯೋಗಿಕವಾಗಿ. ಎಲ್ಲಾ ಶಿಕ್ಷಕರಿಗೂ, ಮಕ್ಕಳಿಗೂ ತಿಳಿಸಿದರು.ಶಿಕ್ಷಕ ವೈ.ಜಿ. ಬಿರಾದಾರ ಮಾತನಾಡಿದರು.ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ ಹಾಗೂ ಮಕ್ಕಳು ಉಪಸ್ಥಿತರಿದ್ದರು. ಶಿಕ್ಷಕ ಮಾಣಿಕ್ ನಿಂಬಾಳ್ಕರ್ ಕಾರ್ಯಕ್ರಮ…
ಉದಯರಶ್ಮಿ ದಿನಪತ್ರಿಕೆ ಇಂಡಿ: ನಗರದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಅಭಿಜಿತ ಸಮಗಾರ ಮನೆಗೆ ಶಾಸಕ ಯಶವಂತರಾಯಗೌಡ ಪಾಟೀಲ ಶುಕ್ರವಾರ ಸಾಯಂಕಾಲ ಭೇಟಿ ನೀಡಿ ಮೃತ ಅಭೀಷೇಕ ತಂದೆ ತಾಯಿಗಳಿಗೆ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.ಮೃತ ಅಭೀಷೇಕ ಬೆಳೆಯುವ ಹಂತದಲ್ಲಿ ಇಂತಹ ದುಸ್ಸಾಸಕ್ಕೆ ಕೈ ಹಾಕಿ ಜೀವಕಳೆದುಕೊಂಡಿದ್ದಾನೆ. ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದ.ರುವೈ.ವಿ. ಪಾಟೀಲ ಫೌಂಡೇಶನ್ ವತಿಯಿಂದ ಕುಟುಂಬಕ್ಕೆ ೨ ಲಕ್ಷ ಸಹಾಯ ಒದಗಿಸುತ್ತೇನೆ ಇದಲ್ಲದೆ ಮೃತ ಅಭೀಜೀತ ತಂದೆ ಗುತ್ತಿಗೆ ಆಧಾರದಲ್ಲಿ ವಸತಿ ನಿಲಯದಲ್ಲಿ ಕೆಲಸ ಮಾಡುವುದಾದರೆ ಉದ್ಯೋಗ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ತಹಶೀಲ್ದಾರ ನಾಗೇಂದ್ರ ಕೊಳಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ರಾಜಶೇಖರ ದೈವಾಡಗಿ, ಲಿಂಬೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಭೀಮಣ್ಣಾ ಕೌಲಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಯೋಗೆಪ್ಪ ಚನಗೊಂಡ ಸೇರಿದಂತೆ ಮಾವಿನಹಳ್ಳಿ ಗ್ರಾಮದ ಮುಖಂಡರು ಇದ್ದರು.
