Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಡಣದ ಪತ್ರಕರ್ತ ಹಾಗೂ ಸಾಮಾಜಿಕ ಹೋರಾಟಗಾರ ನಿಂಗರಾಜ ಅತನೂರ ಅವರ ತಂದೆಯವರಾದ ತಾಲೂಕಿನ ಚಾಂದಕವಟೆ ಗ್ರಾಮದ ದಿ.ಬಸಗೊಂಡಪ್ಪ ನಿಂ. ಅತನೂರ (೯೦) ಅವರು ಸೋಮವಾರ ನಿಧನರಾದರು.ಮೃತರಿಗೆ ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಂಗಳವಾರ ಬೆಳಿಗ್ಗೆ ೧೧ಗಂಟೆಗೆ ಸ್ವಗ್ರಾಮ ಚಾಂದಕವಟೆಯಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಿಕ್ಷಣ ಎಂದರೆ ಅಂದು ಕಠಿಣವಿತ್ತು. ಆದರೆ ಇಂದು ಎಲ್ಲವೂ ಇದೇ. ಕಲಿಯುವ ಮತ್ತು ಕಲಿಸುವವರ ಸಂಖ್ಯೆ ಬಹಳ ಕಡಿಮೆಯಾಗಿದೆ ಎಂದು ಅಂಜುಮನ್ ಎ ಇಸ್ಲಾಂ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಸ್.ಎಮ್.ಪಾಟೀಲ ಗಣಿಹಾರ ಹೇಳಿದರು.ಸಿಂದಗಿ ಪಟ್ಟಣದ ಅಲಮೇಲ ರಸ್ತೆಯ ಹೊರವಲಯದಲ್ಲಿರುವ ಪಿಇಎಸ್ ಕಾಲೇಜಿನ ಸಭಾಂಗಭದಲ್ಲಿ ಪಿಇಎಸ್ ಶಿಕ್ಷಣ ಸಂಸ್ಥೆ, ಲಾಯನ್ಸ್ ಕ್ಲಬ್ ಹಾಗೂ ಸಿಂದಗಿ ಮಾತೋಶ್ರಿ ಗುರುಬಸಮ್ಮ ಹಣಮಂತ್ರಾಯ ಸೋಮಾಪೂರ ಸೇವಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಕೆ.ಎಚ್.ಸೋಮಾಪೂರ ಅವರ “ಬಾಳ ಬುತ್ತಿ” ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.ಮೌಲ್ಯಾಧಾರಿತ ಶಿಕ್ಷಣ ಹಾಗೂ ಮಾನವೀಯತೆ ಕೊರತೆ ಇದೆ. ತಂದೆ ತಾಯಿಗಳನ್ನು ವೃದ್ದಾಶ್ರಮಕ್ಕೆ ಬಿಡುತಿದ್ದೇವೆ. ಇಂದಿನ ಮಕ್ಕಳಲ್ಲಿ ಮಾನವೀಯತೆ, ಮೌಲ್ಯ, ಸಂಸ್ಕಾರ, ಸಂಸ್ಕೃತಿ ಕಲಿಸಬೇಕು. ವಿದ್ಯಾರ್ಥಿಗಳು ಅತೀ ಹೆಚ್ಚು ಮೊಬೈಲ್ ಬಳಕೆಮಾಡಬಾರದು. ಮಕ್ಕಳನ್ನು ಇಂದು ಎಟಿಎಂ ಆಗಿ ತಯಾರಮಾಡುತ್ತಿದ್ದೇವೆ. ಮೊಬೈಲ್ ಗಿಳಿನಿಂದ ಎಲ್ಲರೂ ಹೊರಗೆ ಬರಬೇಕು ಎಂದು ಸಲಹೆ ನೀಡಿದರು.ಈ ವೇಳೆ ಕಾರ್ಯುಕ್ರಮವನ್ನು ಶಾಸಕ ಅಶೋಕ ಮನಗೂಳಿ ಉದ್ಘಾಟಿಸಿ ಮಾತನಾಡಿ, ಪುಸ್ತಕಗಳು ನಮ್ಮ ಜೀವನದ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಾಲಾ-ಕಾಲೇಜುಗಳು, ವಸತಿ ನಿಲಯಗಳು ಹಾಗೂ ಮನೆಯಲ್ಲಿರುವ ಅರ್ಹ ಕುಟುಂಬದ ಸದಸ್ಯರು ಡಿ.ಇ.ಸಿ ಮಾತ್ರೆ ನುಂಗುವ ಮೂಲಕ ಆನೆಕಾಲು ರೋಗ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಮನವಿ ಮಾಡಿದರು.ಸಿಂದಗಿ ಪಟ್ಟಣದ ಜ್ಞಾನ ಭಾರತಿ ವಿದ್ಯಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ತಾಲೂಕಾಡಳಿತ, ತಾಲೂಕು ಪಂಚಾಯತ, ತಾಲೂಕು ಆರೋಗ್ಯ ಇಲಾಖೆ ಹಾಗೂ ಜ್ಞಾನ ಭಾರತಿ ಪ್ರೌಢ ಶಾಲೆ ಸಹಯೋಗದೊಂದಿಗೆ ರಾಷ್ಟ್ರೀಯ ಆನೆಕಾಲು ರೋಗ ನಿಯಂತ್ರಣಾ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡ ಸಾಮೂಹಿಕ ಔಷಧಿ(ಡಿ.ಇ.ಸಿ) ಮಾತ್ರೆ ನುಂಗಿಸುವ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.ಆನೆಕಾಲು ರೋಗ ನಿಯಂತ್ರಣಕ್ಕಾಗಿ ಮಾತ್ರೆ ನುಂಗುವದು ಉತ್ತಮ. ರೋಗ ಬಂದಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬರಲಾರದಂತೆ ತಡೆಯುವದು ಅತ್ಯವಶ್ಯವಾಗಿದೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಮಾತನಾಡಿ, ಮತಕ್ಷೇತ್ರದ ಸಿಂದಗಿ, ಆಲಮೇಲ, ಬಳಗಾನೂರ, ಚಾಂದಕವಟೆ, ಮಲಘಾಣ, ಮೋರಟಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಆನೆಕಾಲು ರೋಗ ನಿಯಂತ್ರಣಕ್ಕಾಗಿ ಸಾಮೂಹಿಕ ಔಷಧಿ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಮೂಲಭೂತ ಸೌಲಭ್ಯ ಕಲ್ಪಿಸುವದು, ವೇತನ ಶ್ರೇಣಿ ನಿಗಧಿಪಡಿಸುವದು, ಸೇವಾ ವಿಷಯಗಳಿಗೆ ಸೌಲಭ್ಯ ಕಲ್ಪಿಸುವದು ಸೇರಿದಂತೆ ವಿವಿಧ ಒಟ್ಟು ೨೩ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಧರಿಸಿ ೨ನೇ ಹಂತದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.ಈ ವೇಳೆ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಜೂಲಗುಡ್ಡ ಮಾತನಾಡಿ, ನಮ್ಮ ಸಂಘದ ರಾಜ್ಯಾಧ್ಯಕ್ಷರ ನಿರ್ದೇಶನದ ಮೇರೆಗೆ ರಾಜ್ಯದಾದ್ಯಂತ ೨೩೭ ತಾಲೂಕುಗಳಲ್ಲಿ ಈ ಅನಿರ್ದಿಷ್ಟಾವಧಿ ಹೋರಾಟವನ್ನು ಹಮ್ಮಿಕೊಂಡಿದ್ದೇವೆ. ಕಳೆದ ೨೦೨೪ ರಲ್ಲಿ ೮ದಿನಗಳ ಕಾಲ ರಾಜ್ಯದ್ಯಂತ ಹೋರಾಟವನ್ನು ಹಮ್ಮಿಕೊಂಡಾಗ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಒಂದು ತಿಂಗಳಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ಆದರೆ ಭರವಸೆ ನೀಡಿ ನಾಲ್ಕು ತಿಂಗಳುಗಳು ಕಳೆದರೂ ನಮ್ಮ ಮಹತ್ವದ ಬೇಡಿಕೆಯನ್ನು ಈಡೇರಿಸಿರುವದಿಲ್ಲ. ಕಾರಣ ೨ನೇ ಹಂತದ ಹೋರಾಟವನ್ನು ಹಮ್ಮಿಕೊಂಡಿದ್ದು ನಮ್ಮ ಬೇಡಿಕೆಗಳು ಈಡೇರುವವರೆಗೂ ಈ ಬಾರಿ ನಾವು…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಟೆಂಪೋ-ಟ್ರಾಕ್ಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ೧೦ ಜನ ಗಂಭೀರವಾಗಿ ಗಾಯಗೊಂಡ ಘಟನೆ ಆಲಮಟ್ಟಿ ಜಲಾಶಯದ ಬಲಭಾಗದ ಕೆಎಸ್ ಐಎಸ್ ಎಫ್ ಸಿಬ್ಬಂದಿಗಳ ವಸಾಹತು ಸಮೀಪ ಸೊಮವಾರ ಸಂಜೆ ಸಂಭವಿಸಿದೆ.ಟೆಂಪೋದಲ್ಲಿದ್ದ ಪ್ರಯಾಣಿಕರೆಲ್ಲರೂ ಗಾಯಗೊಂಡಿದ್ದು, ಅದರಲ್ಲಿ ೧೦ ಜನರಿಗೆ ಗಂಭೀರವಾಗಿ ಗಾಯಗಳಾಗಿವೆ. ಅವರೆಲ್ಲರೂ ಹುಣಸಗಿ ತಾಲ್ಲೂಕಿನ ಜೈನಾಪುರ ಹಾಗೂ ಸುತ್ತಮುತ್ತಲಿನ ಗ್ರಾಮದವರು.ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳಿ, ದರ್ಶನ ಪಡೆದು ಮರಳಿ ತಮ್ಮೂರಿಗೆ ಹೋಗುವ ಮಧ್ಯೆ ಆಲಮಟ್ಟಿ ಉದ್ಯಾನ ವೀಕ್ಷಿಸಲು ಆಲಮರಿಗೆ ಸೊಮವಾರ ಬಂದಿದ್ದರು. ಲವಕುಶ ಉದ್ಯಾನ ವೀಕ್ಷಿಸಿ ಅಲ್ಲಿಂದ ಕೆಳಕ್ಕೆ ಬರುವಾಗ ಇಳಿಜಾರಿನಲ್ಲಿ ಟೆಂಪೋ ಚಾಲಕನ ನಿಯಂತ್ರಣಕ್ಕೆ ಬಾರದೇ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಟೆಂಪೋ ನುಜ್ಜುಗುಜ್ಜಾಗಿ ಉರುಳಿ ಬಿದ್ದಿದೆ.ಅಲ್ಲಿಯೇ ಇದ್ದ ಕೆಎsIಎsಂಫ್ ನ ೨೦ ಕ್ಕೂ ಹೆಚ್ಚು ಪೊಲೀಸರು ತಕ್ಷಣವೇ ಟೆಂಪೋನಲ್ಲಿದ್ದ ಪ್ರಯಾಣಿಕರೆಲ್ಲರನ್ನು, ಸಿಲುಕಿಗೊಂಡ ಗಾಯಾಳಗಳನ್ನು ಹೊರಕ್ಕೆ ತೆಗೆದರು. ತಕ್ಷಣವೇ ಅಂಬುಲೆನ್ಸ್ ಸಂಪರ್ಕಿಸಿದಾಗ ನಾಲ್ಕು ಅಂಬುಲೆನ್ಸ್ ಮೂಲಕ ಗಾಯಾಳುಗಳನ್ನು ನಿಡಗುಂದಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಯಿತು. ಕೆಎಸ್ ಐಎsಂಫ್…

Read More

ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ | ಬಿಜೆಪಿ ಅಧಿಕಾರಕ್ಕೆ ತರುವುದು ನನ್ನ ಗುರಿ | ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ | ಶಾಸಕ ಯತ್ನಾಳ ಸ್ಪಷ್ಠನೆ ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮಾತ್ರವಲ್ಲ, ರಾಜ್ಯದ ಮುಖ್ಯಮಂತ್ರಿ ಆಗುವ ಎಲ್ಲಅರ್ಹತೆ ನನಗಿದೆ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅವರು ಭಾನುವಾರ ಹೇಳಿದರು.ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ನನಗೆ ರಾಜ್ಯ ಬಿಜೆಪಿ ಅಧ್ಯಕ್ಷನಾಗುವ ಸಾಮರ್ಥ್ಯವಿದೆ. ಅಷ್ಟೇ ಅಲ್ಲ, ಕರ್ನಾಟಕದ ಮುಖ್ಯಮಂತ್ರಿಯಾಗುವ ಸಾಮರ್ಥ್ಯವೂ ಇದೆ. ಬಿಜೆಪಿಯನ್ನು ತಳಮಟ್ಟದಿಂದ ಬಲಪಡಿಸುವುದು ಮತ್ತು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದು ನನ್ನ ಗುರಿ ಎಂದು ಹೇಳಿದರು.ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕರ್ನಾಟಕವನ್ನ ಭ್ರಷ್ಟಾಚಾರದಿಂದ ಮುಕ್ತಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಅಲ್ಲದೆ, ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಇದೇ ವಿಚಾರವಾಗಿ ನಮ್ಮ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರು. ಅಲ್ಲದೆ ಮತ್ತೆ ದೆಹಲಿಗೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಪಟ್ಟಣದ ಪ್ರತಿಷ್ಠಿತ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜಿ.ಎಸ್.ಕುಲಕರ್ಣಿಯವರ ಆಯ್ಕೆ ಸಂಸ್ಥೆಯ ನಿಯಮಾವಳಿ ಪ್ರಕಾರ ಆಗಿದೆ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರಭಾಕರ ಬಗಲಿ ತಿಳಿಸಿದ್ದಾರೆ.ಜಿ.ಎಸ್.ಕುಲಕರ್ಣಿಯವರ ಮನೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಸ್ಥೆ ಕಾನೂನು ಬದ್ಧವಾಗಿ ಜಿಲ್ಲಾ ಸಂಘಗಳ ನೊಂದಣಾಧಿಕಾರಿಗಳು ಹಾಗೂ ಸಹಕಾರ ಸಂಸ್ಥೆಗಳ ಉಪನಿಬಂಧಕರು ವಿಜಯಪುರ ಇವರ ಬಾಯಲಾ ಪ್ರಕಾರ ಕಾರ್ಯ ನಿರ್ವಹಿಸುತ್ತಿದೆ.ಮತ್ತು ೨೬.೬. ೨೦೨೪ ರಂದು ಜಿಲ್ಲಾ ಸಂಘಗಳ ನೋಂದಣಾಧಿಕಾರಿಗಳು ಹಾಗೂ ಸಹಕಾರಿ ಸಂಘಗಳ ಉಪನಿಬಂಧಕರು ವಿಜಯಪುರ ಇವರ ನಿಯಮದಂತೆ ಸಭೆ ನಡೆದಿದೆ.೨೦.೧. ೨೦೨೫ ರಂದು ಸಂಸ್ಥೆಯ ಆಡಳಿತ ಮಂಡಳಿಯ ಸಭೆ ನಡೆದಾಗ ಕೆಲವು ಜನರು ಬಂದು ಅನಾವಶ್ಯಕ ಗೊಂದಲದಿಂದಾಗಿ ಸಭೆಯನ್ನು ಮುಂದೂಡಿ ನಂತರ ಸಭೆ ನಡೆಸಿ ದೀಪಕ ದೋಶಿ ಇವರಿಂದ ತೆರವಾದ ಸ್ಥಾನಕ್ಕೆ ಜಿ.ಎಸ್.ಕುಲಕರ್ಣಿ ಇವರನ್ನು ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ.ಕೆಲವು ವ್ಯಕ್ತಿಗಳು ಸಂಸ್ಥೆಗೆ ಕೆಟ್ಟ ಹೆಸರು ತರಲು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದು ಅದು ಸತ್ಯಕ್ಕೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ. ಆದರೆ ಭಯ ಬೇಡ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಹೇಳಿದ್ದಾರೆ.ಶನಿವಾರ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸಾ ವಿಭಾಗದ ವತಿಯಿಂದ ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉಚಿತ ಕ್ಯಾನ್ಸರ್ ರೋಗ ತಪಾಸಣೆ ಮತ್ತು ಜಾಗೃತಿ ಅಭಿಯಾನ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.ಜನಸಾಮಾನ್ಯರಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ತಿಳಉವಳಿಕೆ ಮೂಡಿಸಲು ಪ್ರತಿ ವರ್ಷ ವಿಶ್ವದಾದ್ಯಂತ ಫೆಬ್ರವರಿ 4 ರಂದು ವಿಶ್ವ ಕ್ಯಾನ್ಸರ್ ದಿನ ಆಚರಿಸಲಾಗುತ್ತದೆ. ಕ್ಯಾನ್ಸರ್ ರೋಗಕ್ಕೆ ಸಂಬಂಧಿಸಿದಂತೆ ಈಗಲೂ ಸಾಕಷ್ಟು ಮೂಢನಂಬಿಕೆಗಳು ಪ್ರಚಲಿತದಲ್ಲಿವೆ. ಅದರ ಬಗ್ಗೆ ಎಚ್ಚರವಿರಬೇಕು. ಆದರೆ, ಭಯ ಬೇಡ ಎಂದು ಅವರು ಹೇಳಿದರು.ಬಿ. ಎಲ್. ಡಿ. ಇ. ಆಸ್ಪತ್ರೆಯಲ್ಲಿ ಎಲ್ಲಾ ಬಗೆಯ ಕ್ಯಾನ್ಸರ್ ರೋಗಗಗಳನ್ನು ಕಂಡು ಹಿಡಿಯುವ ಸಾಧನಗಳಿವೆ.…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಹಗಲು ಹೊತ್ತು ಕೃಷಿಗೆ ಏಳು ತಾಸು ವಿದ್ಯುತ್ ಆಗ್ರಹಿಸಿ ಮತ್ತು ರಾತ್ರಿ ವೇಳೆ ಗ್ರಾಮಗಳಿಗೆ ಸಿಂಗಲ್ ಫೇಜ್ ವಿದ್ಯುತ್ ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಡಿಯಲ್ಲಿ ಹೆಸ್ಕಾಂ ಎಇಇ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ರಾತ್ರಿ ವೇಳೆ ಗ್ರಾಮಗಳಿಗೆ ವಿದ್ಯುತ ನೀಡುತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಓದಬೇಕಂದರೆ ವಿದ್ಯುತ್ ಇಲ್ಲದೆ ತೊಂದರೆ ಯಾಗುತ್ತದೆ. ಅದಲ್ಲದೆ ಇತ್ತ ಘಾಸಲೇಟ ಎಣ್ಣೆ ದೊರೆಯುತ್ತಿಲ್ಲ ಮತ್ತು ವಿದ್ಯುತ್ ಇಲ್ಲದೆ ವಿದ್ಯಾರ್ಥಿಗಳು ಓದಿನಿಂದ ವಂಚಿತರಾಗುತ್ತಿದ್ದಾರೆ ಮತ್ತು ರೈತರಿಗೆ ಏಳು ಗಂಟೆ ನಿರಂತರವಾಗಿ ನೀಡಬೇಕು. ನಡುವೆ ವಿದ್ಯುತ್ ಮೂರು ನಾಲ್ಕು ಬಾರಿ ಕಡಿತ ಮಾಡುವದರಿಂದ ರೈತರಿಗೆ ತೊಂದರೆ ಯಾಗುತ್ತಿದೆ. ಪರಿಸ್ಥಿತಿ ಇದೇ ರೀತಿ ಮುಂದು ವರೆದರೆ ಬರುವ ಸೋಮವಾರ ಇಂಡಿ ಬಂದ ಮಾಡಿ ಪ್ರತಿಭಟನೆ ಮಾಡಲಾಗುವದು ಎಂದರು.ಶಿವಶಂಕರ ಕಾಗಸೇರಿ, ಮಾಳಪ್ಪ ಪೂಜಾರಿ, ರಾಮಚಂದ್ರ ಬಡಿಗೇರ, ರಾಮನಗೌಡ ಪಾಟೀಲ ಮಾತನಾಡಿದರು.ಪ್ರತಿಭಟನೆಯಲ್ಲಿ ಭೀಮಣ್ಣ ನಿಡೋಣಿ, ಸೋಮನಿಂಗ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ವಿವಿಧ ಬೇಡಿಕೆ ಆಗ್ರಹಿಸಿ ಕಪ್ಪು ಕಟ್ಟಿಕೊಂಡು ಗ್ರಾಮ ಆಡಳಿತ ಅಧಿಕಾರಿಗಳು ತಾಲೂಕು ಆಡಳಿತ ಸೌಧದ ಎದುರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.ಸೋಮವಾರ ರಾಜ್ಯದಾದ್ಯಂತ ರಾಜ್ಯ ಸಂಘ 2 ನೇ ಹಂತದ ಪ್ರತಿಭಟನೆ ಕರೆ ಹಿನ್ನೆಲೆಯಲ್ಲಿ ಇಂಡಿ ತಾಲ್ಲೂಕಿನಲ್ಲಿಯೂ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುತ್ತದೆ ಎಂದು ಗ್ರಾಮ‌ ಆಡಳಿತ ತಾಲೂಕು ಘಟಕದ ಅಧ್ಯಕ್ಷ ಯಲ್ಲು ಪೂಜಾರಿ ಮಾತನಾಡಿದರು.ಗ್ರಾಮ ಆಡಳಿತ ಅಧಿಕಾರಿಗಳು ಅನೇಕ ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್, ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್, ಲ್ಯಾಪ್‌ಟಾಪ್, ಅದಕ್ಕೆ ಅವಶ್ಯವಿರುವ ಇಂಟರ್‌ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸುವಂತೆ ಒತ್ತಡ ಹೇರುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ’ ಎಂದರು.ಆಧುನಿಕ ತಂತ್ರಾಂಶಕ್ಕೆ ಸಂಬಂಧಿಸಿದಂತೆ ಅವಶ್ಯ ಸೌಲಭ್ಯವನ್ನು ಕಲ್ಪಿಸುವವರೆಗೆ ಸೆ. 22ರಿಂದ ಆಧಾರ್ ಸೀಡ್, ಲ್ಯಾಂಡ್ ಬೀಟ್, ಬಗರ್‌ಹುಕುಂ, ಹಕ್ಕುಪತ್ರ, ನಮೂನೆ 1–5 ವೆಬ್ ಅಪ್ಲಿಕೇಷನ್ ಮತ್ತು ಪೌತಿ ಆಂದೋಲನ…

Read More