Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಚುನಾಯಿತ ಪ್ರತಿನಿಧಿಗಳಾಗಿ ಮೂರು ವರ್ಷದ ನಂತರ ಬಹುನಿರೀಕ್ಷಿತ ಕೊಲ್ಹಾರ ಪಟ್ಟಣ ಪಂಚಾಯತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ, ಚುನಾವಣೆ ಆಯೋಗ ಮೀಸಲಾತಿಯನ್ನು ಪ್ರಕಟಿಸಿದ ಪ್ರಕಾರ ಚುನಾವಣೆ ಆರು ತಿಂಗಳ ಹಿಂದೆಯೇ ನಡೆಯಬಹುದಾಗಿತ್ತು ನ್ಯಾಯಾಲಯದಲ್ಲಿ ಇದ್ದಂತಹ ತಕರಾರು ಬಗೆಹರಿದು ಆಯೋಗದವು ಪ್ರಕಟಿಸಿರುವ ಮೀಸಲಾತಿಯಂತೆ ಕೊಲ್ಹಾರ ಪಟ್ಟಣ ಪಂಚಾಯತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಫೆ.೧೨ ಬುಧವಾರದಂದು ನಡೆಯುವದು ಎಂದು ತಿಳಿದುಬಂದಿದೆ.ಪಟ್ಟಣ ಪಂಚಾಯತಿಯಲ್ಲಿ ಒಟ್ಟು ೧೭ ಸ್ಥಾನಗಳಿದ್ದು ೧೧ಜನ ಸದಸ್ಯರು ಕಾಂಗ್ರೆಸ್ ಪಕ್ಷದ ಬಿ-ಫಾರ್ಮ್ ಪಡೆದ ಚುನಾಯಿತ ಸದಸ್ಯರಿದ್ದು ಇಬ್ಬರೂ ಎಐಎಮ್‌ಐಎಮ್ ಸದಸ್ಯರಿದ್ದು, ಒಬ್ಬನೇ ಒಬ್ಬ ಪಕ್ಷೇತರ ಅಭ್ಯರ್ಥಿ ಆಯ್ಕೆಯಾಗಿರುತ್ತಾರೆ, ಇವರಲ್ಲರೂ ಈಗಾಗಲೇ ಸಚಿವ ಕ್ಷೇತ್ರದ ಶಾಸಕ ಶಿವಾನಂದ ಪಾಟೀಲರಿಗೆ ಬೆಂಬಲ ಸೂಚಿಸಿರುವುದನ್ನು ನೋಡಿದರೆ ಕಾಂಗ್ರೆಸ್ ಪಕ್ಷವು ಅಧಿಕಾರ ಚುಕ್ಕಾಣೆ ಹಿಡಿಯುವುದರಲ್ಲಿ ಯಾವುದೆ ಅನುಮಾನವಿಲ್ಲ, ಮೂವರು ಸದಸ್ಯರನ್ನು ಹೊಂದಿದ ಬಿಜೆಪಿ ಪಕ್ಷವು ಅದರ ನಾಯಕರು ಮನಸ್ಸು ಮಾಡಿದರೆ ಏನುಬೇಕಾದರೂ ಆಗುವ ಸಾಧ್ಯತೆ ಅಧಿಕವಾಗಿದೆ.ಮೀಸಲಾತಿ ಪಟ್ಟಿ ಪ್ರಕಟಗೊಳ್ಳಲು ಅಪಾರ ಸಮಯ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ತೋಟದ ನಿವಾಸಿ ರೈತ ಮುತ್ತು ಸಿದ್ಲಿಂಗಪ್ಪ ಬಿರಾದಾರ ಅವರ ತೋಟದಲ್ಲಿ ನಡೆದ ಘಟನೆಯು ಸುತ್ತಮುತ್ತಲಿನ ಜನರು ವಿಸ್ಮಯವಾಗುವಂತಹ ಘಟನೆ ಸೋಮವಾರ ಜರುಗಿದೆ.೪೧ ವಯಸ್ಸಿನ ರೈತ ಮುತ್ತು ಸಿದ್ಲಿಂಗಪ್ಪ ಬಿರಾದಾರ ಅವರು ತಮ್ಮ ನಾಲ್ಕು ಎಕರೆ ತೋಟದಲ್ಲಿ ೧೪ ಸಲ ಬೋರವೆಲ್ ಹಾಕಿದರೂ ನೀರು ಬಾರದೇ ವಿಫಲರಾಗಿದ್ದರು. ಇದರಿಂದಾಗಿ ಇವರು ಜೀವನದಲ್ಲಿ ಜಿಗುಪ್ಸೆ ಪಟ್ಟುಕೊಂಡಿದ್ದರು. ೧೪ ಸಲ ಬೋರವೆಲ್ ಹಾಕಿಸಲು ಸಾಕಷ್ಟು ಸಾಲ ಮಾಡಿದ ಪರಿಣಾಮ ತಮ್ಮ ಎರಡು ಎಕರೆ ಮಾರಾಟ ಮಾಡಿ ತಾವು ಮಾಡಿದ ರೂ.೩೬ ಲಕ್ಷ ಸಾಲವನ್ನು ಮುಟ್ಟಿಸಿದ್ದಾರೆ. ೧೪ ಸಲ ಬೋರವೆಲ್ ಹಾಕಿ ವಿಫಲರಾದರೂ ಅವರು ಆತ್ಮವಿಶ್ವಾಸ ಕಳೆದುಕೊಳ್ಳದೇ ಮತ್ತೆ ನಿನ್ನೆ ಜಯೋಲಾಜಿಸ್ಟರನ್ನು ತೋಟಕ್ಕೆ ಕರೆಸಿ ನೀರಿನ ಪಾಯಿಂಟ್ ಗುರುತಿಸಿ ಬೋರವೆಲ್ ಹಾಕಿದರೂ ನೀರು ಬಾರದೇ ಅದು ಸಹ ವಿಫಲವಾಗಿದೆ. ದೇವರನ್ನು ನೆನೆದರೂ ನೀರು ಬೀಳದೆ ಇರುವದನ್ನು ಕಂಡ ಇವರು ತಮಗೆ ಜೀವನವೇ ಸಾಕೆಂದು ಆತ್ಮಹತ್ಯೆಗೆ ಮೊರೆ ಹೋಗಬೇಕೆಂದು ನಿರ್ಧಾರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯಾದಗಿರಿ ಜಿಲ್ಲೆಯ ತಿಂಥಣಿಯ ಮೌನೇಶ್ವರಿ ಜಾತ್ರೆ ನಿಮಿತ್ತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ಮುದ್ದೇಬಿಹಾಳ ಹಾಗೂ ತಾಳಿಕೋಟ ಬಸ್ ನಿಲ್ದಾಣದಿಂದ ಫೆ.೯ ರಿಂದ ಫೆ.೧೫ರ ವರೆಗೆ ವಿಶೇಷ ಸಾರಿಗೆಯನ್ನು ಕಾರ್ಯಾಚರಣೆ ಮಾಡಲಿದ್ದು, ಜಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ವಿಶೇಷ ಬಸ್‌ಗಳ ಸದುಪಯೋಗ ಪಡೆದುಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ಮುದ್ದೇಬಿಹಾಳ ಘಟಕ ವ್ಯವಸ್ಥಾಪಕ ಮೊ.ನಂ ೭೭೬೦೯೯೨೨೬೭ ಹಾಗೂ ತಾಳಿಕೋಟ ಘಟಕ ವ್ಯವಸ್ಥಾಪಕ ಮೊ.ನಂ ೭೭೬೦೯೯೨೨೬೮ ಗೆ ಸಂಪರ್ಕಿಸಬಹುದು ಎಂದು ಕ.ಕ.ರ.ಸಾ ವಿಭಾಗಿಯ ನಿಯಂತ್ರಣಾಧಿಕಾರಿ ಪ್ರಕಟಣೆಯು ತಿಳಿಸಿದೆ.
ವಿಜಯಪುರದಲ್ಲಿ ಕಾಯಕ ಶರಣರಾದ ಮಾದರ ಚನ್ನಯ್ಯ, ಮಾದರ ಧೂಳಯ್ಯ, ಢೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗ ಪೆದ್ದಿ ಅವರ ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಚಾಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಘನತೆ ಬದುಕು ರೂಪಿಸಿಕೊಳ್ಳಲು ಕಾಯಕ ತತ್ವ ಅಳವಡಿಸಿಕೊಂಡು ಕಾಯಕದಲ್ಲಿ ನಿರತರಾಗುವುದರ ಮೂಲಕ ಜೀವನವನ್ನು ಸುಂದರಗೊಳಿಸಿಕೊಳ್ಳೋಣ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಹೇಳಿದರು.ಅವರು ನಗರ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸೋಮವಾರ ಕಾಯಕ ಶರಣರಾದ ಮಾದರ ಚನ್ನಯ್ಯ, ಮಾದರ ಧೂಳಯ್ಯ, ಢೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗ ಪೆದ್ದಿ ಅವರ ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ೧೨ನೇ ಶತಮಾನದಲ್ಲಿ ಶರಣರು ಮೌಲ್ಯಯುತ ಕಾಯಕ ಜೀವನ ನಡೆಸುವುದರ ಮೂಲಕ ಸಮಾಜಕ್ಕೆ ಜ್ಞಾನದ ಬೆಳಕು ತೋರಿದರು.ಜನಸಾಮಾನ್ಯರಾಡುವ ಭಾಷೆಯಲ್ಲಿ ವಚನಗಳನ್ನು ಶರಣರು ನೀಡಿದ್ದಾರೆ. ಶರಣರ ವಚನಗಳು ಸಾರ್ವಕಾಲಕ್ಕೂ ಪ್ರಸ್ತುತವಾಗಿದ್ದು, ಕಾಯಕ ತತ್ವದ ಮಹತ್ವವನ್ನು ವಚನಗಳಲ್ಲಿ ಕಾಣಬಹುದು. ಶರಣರು ತಮ್ಮ ವಚನದ ಮೂಲಕ ಸಮಾಜವನ್ನು ತಿದ್ದುವ ಕಾರ್ಯ ಮಾಡಿದ್ದಾರೆ ಎಂದು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ನಗರಾಭಿವೃದ್ಧಿ ಇಲಾಖೆ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಪಟ್ಟಣ ಪಂಚಾಯತ ನಾಲತವಾಡ ಇವರ ಸಂಯುಕ್ತಾಶ್ರಯದಲ್ಲಿ “ಕೇಂದ್ರ ಪುರಸ್ಕೃತ ಅಮೃತ್ ೨.೦ ಯೋಜನೆಯಡಿ ನಾಲತವಾಡ ಪಟ್ಟಣಕ್ಕೆ ಕುಡಿಯುವ ನೀರಿನ ಸರಬರಾಜು ವಿತರಣಾ ವ್ಯವಸ್ಥೆ ಕಲ್ಪಿಸುವ ಯೋಜನೆ” ಗಾಗಿ ನಾಲತವಾಡದ ಬಸವೇಶ್ವರ ಸರ್ಕಲ್ ಹತ್ತಿರ ಭೂಮಿ ಪೂಜೆ ಕಾರ್ಯಕ್ರಮ ಮಂಗಳವಾರ ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಅವರು ಭೂಮಿ ಪೂಜೆ ನೆರವೆರಿಸಲಿದ್ದಾರೆ.ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ ಘನ ಉಪಸ್ಥಿತಿ ವಹಿಸಲಿದ್ದಾರೆ. ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷ ಹಾಗೂ ಮತಕ್ಷೇತ್ರ ಶಾಸಕರಾದ ಅಪ್ಪಾಜಿ ಸಿ.ಎಸ್.ನಾಡಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ನವದೆಹಲಿ ಕರ್ನಾಟಕ ವಿಶೇಷ ಪ್ರತಿನಿಧಿ-೨ ಹಾಗೂ ವಿಧಾನ…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದರೆ ಯಾವುದೇ ಕ್ಷೇತ್ರದಲ್ಲಾದರೂ ಸಾಧನೆ ಮಾಡಲು ಸಾಧ್ಯ. ಸಾಧನೆಗೆ ಪರಿಶ್ರಮವೇ ಹೊರತು ಅನ್ಯಮಾರ್ಗವಲ್ಲ ಎಂದು ವಿದ್ಯಾವಾಹಿನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಾರ್ವತಿ ಬಾಪೂಗೌಡ ಹೇಳಿದರು.ಪಟ್ಟಣದಲ್ಲಿರುವ ಹಿಲ್ ಟಾಪ್ ಕಾಲೋನಿಯಲ್ಲಿರುವ ವಿದ್ಯಾವಾಹಿನಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಅಂಕಗಳ ಜೊತೆಗೆ ಜೀವನದ ಮೌಲ್ಯಗಳ ಬೆಳೆಸಿಕೊಳ್ಳಬೇಕಾದ ಅಗತ್ಯವಿದೆ ಎಂದವರು, ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ನಿರಾಶೆಯಾಗಬಾರದು, ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಯಾಳಗಿ ಪ್ರೌಢ ಶಾಲೆಯ ಮುಖ್ಯಗುರು ಶಿವಣ್ಣಗೌಡ ಪಾಟೀಲ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಬಹಳ ಪ್ರಮುಖವಾಗಿರುತ್ತದೆ, ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಬೇಕು ಸಕರಾತ್ಮಕ ಚಿಂತನೆಗಳು ಮೈಗೂಡಿಸಿಕೊಂಡು. ಮುನ್ನಡೆದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಗುರಿ ಸಾಧನೆ ಮಾಡಬೇಕಾದರೆ ನಿರಂತರ ಪ್ರಯತ್ನ ಅಗತ್ಯವಾಗಿದೆ, ಮಕ್ಕಳ ಬಗ್ಗೆ ಪಾಲಕರು ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ. ಪಾಲಕರು ಮಕ್ಕಳ ಮನಸ್ಸು ಅರ್ಥಮಾಡಿಕೊಳ್ಳಬೇಕು, ಅವರಿಗೆ ಯಾವ ಕ್ಷೇತ್ರದಲ್ಲಿ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಇಂದಿನ ದಿನಮಾನಗಳಲ್ಲಿ ದುಪ್ಪಟ್ಟು ಬೆಲೆಯುಳ್ಳ ಭೂಮಿಯನ್ನು ಸರಕಾರಿ ಶಿಕ್ಷಣ ಕೇಂದ್ರ ತೆರೆಯಲು ದಾನವಾಗಿ ಕೊಡುವ ಮನುಷ್ಯರು ಸಿಗುವದು ಅಪರೂಪ. ಅಂತಹ ಅಪರೂಪದ ವ್ಯಕ್ತಿ ಶರಣಬಸಪ್ಪ ಲಗಳಿ ಅವರು ಮುಳವಾಡ ಗ್ರಾಮದಲ್ಲಿ ಸರಕಾರಿ ಪಿಯು ಕಾಲೇಜು ಪ್ರಾರಂಭವಾಗಲು ಕಾರಣೀಕರ್ತರಾಗಿರುವದು ನಾವು ಮರೆಯಬಾರದು ಎಂದು ಸಚಿವ ಶಿವಾನಂದ ಎಸ್ ಪಾಟೀಲ ಹೇಳಿದರು.ತಾಲೂಕಿನ ಮುಳವಾಡ ಗ್ರಾಮದಲ್ಲಿ ೨೦೨೨-೨೩ ನೇ ಸಾಲಿನ ಶಿಕ್ಷಣ ಇಲಾಖೆಯ ವಿವೇಕ (ಪದವಿಪೂರ್ವ) ಯೋಜನೆಯಡಿ ಶ್ರೀಮತಿ ನಿರ್ಮಲಾಬಾಯಿ ಶರಣಬಸಪ್ಪ ಲಗಳಿ ಸರಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಿರುವ ಎರಡು ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.೫೦.೧೦ ರೂ. ಲಕ್ಷ ವೆಚ್ಚದಲ್ಲಿ ಕೊಠಡಿಗಳನ್ನು ನಿರ್ಮಿಸಲಾಗಿದ್ದು, ಈ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಇನ್ನೂ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು, ವಿಜ್ಞಾನ ವಿಭಾಗಕ್ಕೆ ಹೆಚ್ಚುವರಿ ವಿಜ್ಞಾನ ಕೊಠಡಿಗಳನ್ನು ನಿರ್ಮಿಸಲು ಹಾಗೂ ತಾಲೂಕು ಪಂಚಾಯತಿ ಅನುದಾನದಲ್ಲಿ ವಿಜ್ಞಾನ ವಿಭಾಗಕ್ಕೆ ಅವಶ್ಯವಿರುವ ಪೀಠೋಪಕರಣಗಳನ್ನು ಪಡೆಯಲು ಅಗತ್ಯ ಅನುದಾನ ಮಂಜೂರು ಮಾಡಲಾಗುವುದು ಎಂದು ಹೇಳಿದರು.ಸರಕಾರಿ ಶಿಕ್ಷಣ ಸೌಲಭ್ಯ ಪಡೆದಿರುವ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ವಿದ್ಯಾರ್ಥಿಯೊಳಗೆ ಹುದುಗಿದ ಪ್ರತಿಭೆಯನ್ನು ಹೊರತೆಗೆಯುವುದೇ ಗುರುವಿನ ಧ್ಯೇಯವಾಗಿರಬೇಕು. ಹಾಗಾದಲ್ಲಿ ಮಾತ್ರ ಅದ್ಭುತ ಪ್ರತಿಭೆಗಳು ಹೊರಬರಲು ಸಾಧ್ಯವಾಗುತ್ತದೆ” ಎಂದು ವಿಜಯಪುರ ಷಣ್ಮುಖಾರೂಢ ಮಠದ ಅಭಿನವ ಸಿದ್ಧಾರೂಢ ಸ್ವಾಮೀಜಿ ಹೇಳಿದರು.ತಾಲ್ಲೂಕಿನ ಮುಳವಾಡ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರೌಢ ಶಾಲೆಯ ೧೯೯೨-೯೫ನೇ ಸಾಲಿನ ವಿದ್ಯಾರ್ಥಿಗಳು ಶನಿವಾರ ಹಮ್ಮಿಕೊಂಡ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, “ಮುಳವಾಡ ಗ್ರಾಮ ಸಾಹಿತಿಗಳ ತವರೂರಾಗಿದೆ. ಪ.ಗು.ಸಿದ್ದಾಪೂರ, ಜಂಬುನಾಥ ಕಂಚ್ಯಾಣಿ, ಕಾಡಣ್ಣ ಹೊಸಟ್ಟಿಯವರಂತಹ ಸಾಹಿತಿಗಳನ್ನು ಕೊಟ್ಟ ಶಾಲೆಯ ವಿದ್ಯಾರ್ಥಿಗಳು ಹಲವು ಸಾಧನೆ ಮಾಡಿದ್ದು ಹೆಮ್ಮೆ ಎಣಿಸುತ್ತದೆ” ಎಂದರು.ಶಾಲಾ ವಿದ್ಯಾರ್ಥಿಗಳಿಂದ ಗುರುವಂದನೆ ಸ್ವೀಕರಿಸಿದ ನಿವೃತ್ತ ಶಿಕ್ಷಕರಾದ ಕಾಡಣ್ಣ ಹೊಸಟ್ಟಿ, ಜಂಬುನಾಥ ಕಂಚ್ಯಾಣಿ, ಪ.ಗು.ಸಿದ್ದಾಪೂರ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, “ಮೊಬೈಲ್ ಬಳಕೆ ಅಪಾಯಕಾರಿ, ಗುರು ಶಿಷ್ಯರ ನಡುವಿ ಅವಿನಾಭಾವ ಸಂಬಂಧ ಇರಬೇಕು. ಶಿಕ್ಷಕರು ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವನ್ನು ಕೊಡಬೇಕು” ಎಂಬ ಕಿವಿಮಾತು ಹೇಳಿದರು.ಕಾರ್ಯಕ್ರಮದಲ್ಲಿ ಗುರುಗಳಾದ ಜೆ ಎಸ್ ಕಂಚ್ಯಾಣಿ, ಕೆ ಜಿ ಹೊಸಟ್ಟಿ, ಪ.ಗು.ಸಿದ್ದಾಪೂರ, ಅನಸೂಯಾ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೧೨ನೇ ಶತಮಾನದ ಬಸವಾದಿ ಶರಣರ ವಚನಗಳು ಪ್ರಪಂಚಕ್ಕೆ ಅಪೂರ್ವ ಕಾಣಿಕೆ ನೀಡಿವೆ. ಶರಣರ ಕಾಯಕ, ದಾಸೋಹ, ಸಮಾನತೆ, ಪರಿಶುದ್ಧತೆ ಎಲ್ಲವೂ ಶರಣರ ವಚನಗಳಲ್ಲಿ ಅಡಕವಾಗಿವೆ ಎಂದು ಪ್ರೊ. ಎನ್.ಜಿ. ಕರೂರ ಹೇಳಿದರು.ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಇಲ್ಲಿನ ವೀರಶೈವ ಸಭಾಭವನದಲ್ಲಿ ಏರ್ಪಡಿಸಿದ್ದ ಶ್ರೀ ಸಿದ್ರಾಮಪ್ಪ ಚ. ಉಪ್ಪಿನ ಕೇಂದ್ರ ಸಮಿತಿಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಯುಕ್ತ ಅಭಿನಂದನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಬಸವಾದಿ ತತ್ವ ಸಿದ್ಧಾಂತ ನಾವೆಲ್ಲ ಒಂದಾಗಿ ಅನುಸರಿಸಿ ಬಾಳಬೇಕು. ಅಂತರಂಗ, ಬಹಿರಂಗ ಶುದ್ಧವಾಗಿರಬೇಕು. ಇಂದಿನ ಯುವಕ-ಯುವತಿಯರು ಸಮಯಪಾಲನೆ ಸ್ವಚ್ಚತೆ ಸತ್ಯಶುದ್ಧ ಕಾಯಕ, ನಮ್ಮ ನಡೆ, ನುಡಿ ಮಾದರಿಯಾದಾಗ ಸಮಾಜದಲ್ಲಿ ನಮ್ಮ ಬದುಕಿಗೆ ಅರ್ಥಬರುತ್ತದೆ. ಭಾಗಿದ ತಲೆ ಮುಗಿದ ಕೈ ಭಗವಂತನಿಗೆ ಪ್ರಿಯ. ಕಾಯಕ, ದಾಸೋಹದಿಂದ ಶರಣ ಜೀವಿಗಳಾಗಿ ಬದುಕಿ ಸಮಾಜದ ಒಳತಿಗಾಗಿ ನಾವೆಲ್ಲ ಅಳವಡಿಸಿಕೊಳ್ಳಬೇಕಾಗಿದೆ ಎಂದರು.ಕೇಂದ್ರ ಸಮಿತಿಯ ಉಪಾಧ್ಯಕ್ಷ ಸಿದ್ರಾಮಪ್ಪ ಚ. ಉಪ್ಪಿನ ಸನ್ಮಾನ ಸ್ವೀಕರಿಸಿ ಮಾತನಾಡುತ್ತ, ನಿಯಮ, ನೀತಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಡವಿದ್ಯಾರ್ಥಿಗಳಿಗೆ ವಿದ್ಯಾದಾನ, ಅನ್ನದಾನ ಮಾಡಿ ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಉನ್ನತಮಟ್ಟದ ಸಂಸ್ಕಾರಯುತ ಶಿಕ್ಷಣವನ್ನು ನೀಡುವಲ್ಲಿ ಜಿದ್ದಿಯವರ ಕಾರ್ಯ ಮೆಚ್ಚಲೇಬೇಕು ಎಂದು ಸಿಂದಗಿಯ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.ವಿಜಯಪುರದಲ್ಲಿ ಸೋಮವಾರ ಮಾಜಿ ವಿಧಾನಪರಿಷತ್ ಸದಸ್ಯ, ಶ್ರೀ ಕಾಳಿದಾಸ ಶಿಕ್ಷಣಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ದಿ. ಎಸ್. ಎ. ಜಿದ್ದಿಯ ಪ್ರತಿಮೆ ಅನಾವರಣ ಹಾಗೂ ಪ್ರಥಮ ಪುಣ್ಯಸ್ಮರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತ, ಇಂದಿನ ಜೀವನದಲ್ಲಿ ಶಿಕ್ಷಣ ಒಂದು ವ್ಯಾಪಾರಿಕರಣವಾಗುತ್ತ ಹೊರಟಿದೆ ಎಂದು ಖೇದ ವ್ಯಕ್ತಪಡಿಸಿದ ಅವರು ಬಡವರಿಗಾಗಿಯೆ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬಡ ವಿದ್ಯಾರ್ಥಿಗಳಿಗೂ ವಿದ್ಯಾರ್ಜನೆ ಬದುಕನ್ನು ಕಲ್ಪಿಸಿಕೊಟ್ಟು ಪ್ರೇರಣಾಶಕ್ತಿಯಾಗಿ ಜಿದ್ದಿಯವರು ನಡೆದುಕೊಂಡರು. ಸಮಾಜಕ್ಕಾಗಿ ದುಡಿಯುವ ವ್ಯಕ್ತಿ ಅಜರಾಮರವಾಗಿ ಇರುತ್ತಾರೆ ಎನ್ನುವುದಕ್ಕೆ ಜಿದ್ದಿಯರನ್ನೆ ಕಾಣಬೇಕು ಎಂದರು.ಉತ್ತಮ ಸಮಾಜಕ್ಕೆ ಕೊಡುಗೆಯನ್ನು ನೀಡುವಲ್ಲಿ ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಜಿದ್ದಿಯವರ ಕಾರ್ಯ ಅಪಾರ ಎಂದು ರೂಗಿ ಅಡವಿ ಸಿದ್ದೇಶ್ವರ ಆಶ್ರಮದ ಶ್ರೀ ನಿತ್ಯಾನಂದ ಮಹಾಸ್ವಾಮಿಗಳು ನುಡಿದರು.ನುಡಿನಮನ ಕಾರ್ಯಕ್ರಮದಲ್ಲಿ ಡಾ. ಕಂಠೀರವ…
