Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೆಳಗಾವಿಯ ಸುವರ್ಣಸೌಧದಲ್ಲಿಯೇ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮೇಲೆ ಹಲ್ಲೆಯ ಯತ್ನವನ್ನು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಪ್ರಭು ತಳಗೇರಿ ಖಂಡಿಸಿದ್ದಾರೆ.ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಹೇಯ ಕೃತ್ಯ ನಡದಿದೆ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ಕಾನೂನು ಯಾವ ರೀತಿಯಲ್ಲಿ ಕಾರ್ಯ ಮಾಡುತ್ತಿದೆ ಎನ್ನುವುದು ಅನುಮಾನ ಕಾಡುತ್ತಿದೆ? ಇನ್ನು ಜನಸಾಮಾನ್ಯರ ಗತಿಯೇನು? ಮತ್ತೆ ಮಾನ್ಯ ಸಚಿವೆಯರು ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಕದ್ದು. ಎಲ್ಲದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸದನದ ಕಾರಿಡಾರಿನಲ್ಲಿಯೇ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್ ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ಏನೂ ಅರ್ಥ. ಸಚಿವೆಯ ಆಪ್ತ ಸಹಾಯಕ ಶಾಸಕರ ಮೇಲೇರಿ ಹೋಗುವ ಕಾರಿಡಾರಿನ ಕಬ್ಬಿಣದ ಬಾಗಿಲನ್ನು ಮುರಿಯಲೆತ್ನಿಸಿ ಹಲ್ಲೆಗೆ ಯತ್ನಿಸುವ ದೃಶ್ಯಗಳು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ರಾಜ್ಯದಲ್ಲಿ ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ ಎನ್ನುವುದಕ್ಕೆ ಆ ದೃಶ್ಯಗಳೇ…

Read More

ಶ್ರೀ ಸಿದ್ದೇಶ್ವರ ಅಪ್ಪಾಜಿಯವರ ೨ನೇ ವರ್ಷದ ಗುರು ನಮನ | “ಸುಧಾರಿತ ಕೃಷಿ ಪದ್ಧತಿ” ಗೋಷ್ಠಿ | ಸಾವಯವ ಕೃಷಿ ನಿಯೋಗದ ಅಧ್ಯಕ್ಷ ಎ.ಎಸ್.ಆನಂದ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಮರೆಯಲಾಗದ ಮಾಣಿಕ್ಯ. ಅವರು ಪ್ರತಿ ಕ್ಷಣವೂ ನಮ್ಮ ನೆನೆಪಿನಲ್ಲಿಯೇ ಇರುತ್ತಾರೆ ಅವರು ತೋರಿಸಿದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಸಾರ್ಥಕದ ಜೀವನ ನಡೆಸಬೇಕು ಎಂದು ಸಾವಯವ ಕೃಷಿ ನಿಯೋಗದ ಅಧ್ಯಕ್ಷ ಎ.ಎಸ್.ಆನಂದ ಹೇಳಿದರು.ನಗರದ ಶ್ರೀ ಜ್ಞಾನಯೋಗಾಶ್ರಮದಲ್ಲಿ ಶ್ರೀ ಸಿದ್ದೇಶ್ವರ ಅಪ್ಪಾಜಿಯವರ ೨ನೇ ವರ್ಷದ ಗುರು ನಮನ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ “ಸುಧಾರಿತ ಕೃಷಿ ಪದ್ಧತಿ” ಎಂಬ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಶ್ರೀ ಸಿದ್ದೇಶ್ವರ ಅಪ್ಪಾಜಿಯವರು ಇದ್ದಾಗ ಅವರನ್ನು ಭೇಟಿ ಮಾಡಲು ಅವರ ಮಾತುಗಳನ್ನು ಕೇಳಲು ಮನಸ್ಸು ಮೌನವಾಗುತ್ತಿತ್ತು. ಆದರೆ ಇಂದು ಅವರು ಇಲ್ಲದಾಗ ಅದೇ ಮೌನವನ್ನು ಮುರೆದು ಅವರ ಬಗ್ಗೆಯೇ ಮಾತನಾಡಬೇಕಾದ ಅನಿವಾರ್ಯತೆ ಬಂದಿದೆ. ಅವರು ಇಲ್ಲ ಎಂಬ ಮಾತು ನಂಬಲಸಾಧ್ಯ ಅವರು ನಮ್ಮ ಸುತ್ತು-ಮುತ್ತಲಯಲ್ಲಿಯೇ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಅಂದು ಡಾ.ಅಂಬೇಡ್ಕರ್ ಅವರು ಸಂವಿಧಾನ ಬರೆಯದಿದ್ದರೆ ನಮ್ಮ ದೇಶದಲ್ಲಿಯಿರುವ ಸಣ್ಣ ಪುಟ್ಟ ಸಮುದಾಯಗಳು ಸಾವಿಗೆ ಶರಣಾಗುವ ಸಮಯ ಬರುತಿತ್ತು. ವಿಶ್ವದಲ್ಲೇ ಶ್ರೇಷ್ಠವಾದ ಸಂವಿಧಾನ ನಮ್ಮದು ಎಂದು ಟಿಪ್ಪು ಕ್ರಾಂತಿ ಸೇನೆಯ ಸಂಸ್ಥಾಪಕ ದಸ್ತಗೀರ ಮುಲ್ಲಾ ಹೇಳಿದರು.ಪಟ್ಟಣದ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಟಿಪ್ಪು ಕ್ರಾಂತಿ ಸೇನೆ ವತಿಯಿಂದ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಕೈಬಿಡುವಂತೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು.ಜೊತೆಗೆ ಅಲಹಾಬಾದ ಹೈಕೋರ್ಟ್ ನ್ಯಾಯಮೂರ್ತಿ ಶೇಖರ ಯಾದವ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.ಈ ವೇಳೆ ಉತ್ತರ ಕರ್ನಾಟಕ ಅಧ್ಯಕ್ಷ ರಜಾಕ್ ನಾಟೀಕಾರ ಮಾತನಾಡಿದರು.ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಘಟಕದ ಅಧ್ಯಕ್ಷ ಆಸೀಫ್ ಇಂಡಿಕರ್, ನಗರ ಘಟಕ ಅಧ್ಯಕ್ಷ ಇಮ್ರಾನ್ ಭಾಗವಾನ, ಸಾಜೀದ್ ಮುಲ್ಲಾ ಸೇರಿದಂತೆ ಟಿಪ್ಪು ಕ್ರಾಂತಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ವ್ಯಾಪ್ತಿಯಲ್ಲಿ ಖಾಲಿಯಿರುವ ೫೨ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ೧೨೯ ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನಂ.೦೯ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಅರ್ಜಿ ಸಲ್ಲಿಸುವ ಅವಧಿ ಪೂರ್ಣಗೊಂಡಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಪೂರ್ಣವಾಗಿರುವ ಕಾರಣ ಅಂತಹ ಅಭ್ಯರ್ಥಿಗಳಿಗೆ ಡಿ.೨೬ ರಿಂದ ಜ.೦೫, ೨೦೦೫ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್‌ಸೈಟ್‌ನಲ್ಲಿ ಇಲಾಖೆ ವತಿಯಿಂದಲೇ ಕಾಲಾವಕಾಶ ನೀಡಿ ಆದೇಶ ಹೊರಡಿಸಲಾಗಿ ಎಂದು ಸಿಡಿಪಿಒ ಶಂಭುಲಿಂಗ ಹಿರೇಮಠ ಪ್ರಕಟಣೆಯಲ್ಲಿ ತಿಳಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಎನ್‌ಎಸ್‌ಎಸ್ ಶಿಬಿರವನ್ನು ಗ್ರಾಮೀಣ ಪ್ರದೇಶದಲ್ಲಿ ಆಯೋಜನೆ ಮಾಡಿದ್ದು ಅತ್ಯಂತ ಸಂತಸ ತಂದಿದೆ. ಗ್ರಾಮಗಳಲ್ಲಿ ಮತ್ತು ಗ್ರಾಮದ ಜನತೆಗೆ ಸ್ವಚ್ಛತೆ, ಪರಿಸರ ಮತ್ತು ಸಾಮಾಜಿಕ ಕಳಕಳಿಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ತಾಲೂಕಿನ ರಾಂಪುರ ಗ್ರಾಮದಲ್ಲಿ ಸಿಂದಗಿಯ ಎಚ್. ಜಿ.ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಅಡಿಯಲ್ಲಿ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳನ್ನು ಸಮಾಜಮುಖಿಯನ್ನಾಗಿ ಮಾಡುತ್ತದೆ. ಇದು ವಿದ್ಯಾರ್ಥಿಗಳ ವ್ಯಕ್ತಿತ್ವದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಶಿಬಿರದಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಸೇವೆ ಮಾಡಬೇಕು ಎಂದರು.ಕಾರ್ಯಕ್ರಮದ ಸಾನಿಧ್ಯವನ್ನು ರಾಂಪುರ ಗ್ರಾಮದ ಆರೂಢಮಠದ ಪೂಜ್ಯಶ್ರೀ ನಿತ್ಯಾನಂದ ಮಹಾರಾಜರು ವಹಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ, ಶಿಬಿರದ ಸಂಯೋಜನಾಧಿಕಾರಿ ಡಾ.ಎಸ್.ಎಸ್.ಚವಾಣ ಮಾತನಾಡಿದರು.ವೇದಿಕೆ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ನೂರಜಾನ ನದಾಫ, ಶಾಲೆಯ ಮುಖ್ಯ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಾಜಪೇಯಿ ಅವರ ಗುಣಗಳು ನಮ್ಮ ಜೀವನದಲ್ಲಿ ಅಳಡಿಸಿಕೋಳ್ಳಬೇಕು ಅವರ ಅಭಿವೃದ್ಧಿ ಯೋಜನೆಗಳು ಈ ದೇಶದಲ್ಲಿ ಶಾಶ್ವತವಾಗಿ ಉಳಿದಿವೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಹೇಳಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಬೂತ್ ಅಧ್ಯಕ್ಷರ ಮನೆಯ ಮೇಲೆ ಸಿಂದಗಿ ಬಿಜೆಪಿ ಮಂಡಲ ವತಿಯಿಂದ ಈ ದೇಶ ಕಂಡ ಅತ್ಯುತ್ತಮ ರಾಜಕಾರಣಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಯವರ ೧೦೦ನೆಯ ಹುಟ್ಟು ಹಬ್ಬದ ಅಂಗವಾಗಿ ಸುಶಾಸನ ದಿನ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಸ್ಪಾಚರಣೆ ಮಾಡಿ ಮಾತನಾಡಿದರು.ವಾಜಪೇಯಿ ಅವರ ಯೋಜನೆ ನದಿ ಜೋಡಣೆ, ಚಥುಸ್ಪದ ರಸ್ತೆ, ಗ್ರಾಮ ಸಡಕ್ ಅವರ ವಿದೇಶಿ ನೀತಿಗಳು ಇಂದಿಗೂ ಸಹ ಅಜರಾಮರವಾಗಿವೆ. ಅವರ ತ್ವ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.ಇದೇ ಸಂದರ್ಭದಲ್ಲಿ ಮಾಜಿ ಶಾಸಕ ರಮೇಶ ಭೂಸನೂರ, ಮಾಜಿ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಗುರು ತಳವಾರ, ಶ್ರೀಶೈಲ ಚಳ್ಳಗಿ, ಸಿದ್ರಾಮ್ ಆನಗೊಂಡ, ನೀಲಮ್ಮ ಯಡ್ರಾಮಿ, ಬಸವರಾಜ…

Read More

ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಂಘಟಿತ ಹಾಗೂ ಅಸಂಘಟಿತ ವಲಯದ ಕಾರ್ಮಿಕರಿಗೆ ರಾಜ್ಯ ಸರಕಾರದ ಕಾರ್ಮಿಕ ಇಲಾಖೆಯಿಂದ ಅನೇಕ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಕಾರ್ಮಿಕರು ಈ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಕಾಲೇಜಿನ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯ ವತಿಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಹಮ್ಮಿಕೊಂಡ ಟೂಲ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಕಿಟ್ ವಿತರಣೆ ಮಾಡಿ ಮಾತನಾಡಿದರು.ಕಾರ್ಮಿಕ ಇಲಾಖೆ ಅಧಿಕಾರಿಗಳು ಸರಕಾರದ ಸೌಲಭ್ಯಗಳ ಮಾಹಿತಿಯನ್ನು ಕಾರ್ಮಿಕರಿಗೆ ನೀಡಿದಲ್ಲಿ ಮಾತ್ರ ಸೌಲಭ್ಯಗಳು ಅರ್ಹ ಕಾರ್ಮಿಕರಿಗೆ ದೊರೆಯಲು ಸಾಧ್ಯವಾಗುತ್ತದೆ. ಕಟ್ಟಡ ನಿರ್ಮಾಣದಲ್ಲಿ ಮೇಸ್ತ್ರಿಗಳು, ಟೈಲ್ಸ್ ಕೆಲಸಗಾರರು, ಎಲೆಕ್ಟ್ರಿಷಿಯನ್, ವೇಲ್ಡರ್ ಸೇರಿದಂತೆ ಇತರ ಕಾರ್ಮಿಕರಿಗೆ ಕೆಲಸ ಮಾಡುವುದಕ್ಕೆ ಅಗತ್ಯವಿರುವ ಎಲ್ಲ ಕೌಶಲ್ಯ ಆಧಾರಿತ ಟೂಲ್ ಕಿಟ್‌ಗಳನ್ನು ಕಾರ್ಮಿಕ ಇಲಾಖೆ ಮೂಲಕ ನೀಡುತ್ತಿದೆ. ಕಾರ್ಮಿಕರೆಲ್ಲರೂ ಸರಕಾರ ಸೌಲಭ್ಯಗಳ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಹೊರವಲಯದ ಇಬ್ರಾಹಿಂಪುರದಲ್ಲಿ ಶ್ರೀ ನಂದಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಅಲಂಕೃತ ನಂದಿಕೋಲ ಮೆರವಣಿಗೆ ಅತ್ಯಂತ ವೈಭವದಿಂದ ನಡೆಯಿತು.ಭಕ್ತರ ಜಯಘೋಷಣೆ, ಹಾಗೂ ಮೈನವಿರೇಳಿಸುವ ಕರಡಿಮಜಲಿನ ವಾದ್ಯಮೇಳದೊಂದಿಗೆ ಮಧ್ಯಾಹ್ನ ನಂದಬಸವೇಶ್ವರ ದೇವಸ್ಥಾನದಿಂದ ಹೊರಟ ನಂದಿಕೋಲ ಮೆರವಣಿಗೆ ಪ್ರಮುಖ ಬೀದಿಯಲ್ಲಿ ಸಂಚರಿಸಿತು.ಮೆರವಣಿಗೆಯಲ್ಲಿ ನಂದಿಕೋಲ ಮುಂದೆ ಅಧಿಕ ಸಂಖ್ಯೆಯಲ್ಲಿ ಮಕ್ಕಳು, ಯುವಕರು ಹಿರಿಯರು ಹಾಗೂ, ನಂದಿಕೋಲ ಹಿಂದೆ ನೂರಾರು ಸುಮಂಗಲೆಯರು ಕೈಯ್ಯಲ್ಲಿ ಆರತಿ ತಟ್ಟೆ ಹಿಡಿದುಕೊಂಡು ಸಾಗುತ್ತಿದ್ದರು. ಹಲವಾರು ಯುವಕರು ಪಂಚೆ ಒಂದೇ ಬಗೆಯ ಬಣ್ಣದ ಅಂಗಿ ಹಾಗೂ ತಲೆಯ ಮೇಲೆ ಪೇಠಾ ಧರಿಸಿಕೊಂಡು ತಮ್ಮ ಗೆಳೆಯರ ಬಳಗದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದ್ದು ಎಲ್ಲರ ಗಮನ ಸೆಳೆಯಿತು. ಮೆರವಣಿಗೆಯುದ್ದಕ್ಕೂ ನಂದಿಕೋಲ ಮುಂದೆ ಯುವಕರು ಗುಂಪು ಗುಂಪಾಗಿ ನಿಂತುಕೊಂಡು ಸೆಲ್ಫಿ ತೆಗೆಸಿಕೊಳ್ಳುವುದು ನಡೆದೇ ಇತ್ತು. ಮೆರವಣಿಗೆ ತಮ್ಮ ತಮ್ಮ ಮನೆಗಳತ್ತ ಸಾಗಿ ಬರುವಾಗ ನೀರು ಹಾಕಿ ನಂದಿಕೋಲ ಬಸವಣ್ಣನಿಗೆ ಹೂಹಾರ, ಶಾಲು ಹಾಕಿ,ಆರುತಿ ಬೆಳಗಿ ಭಕ್ತಿಯಿಂದ ನಮಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮೆರವಣಿಗೆಯ ವೇಳೆ…

Read More

ಜಯ್ ನುಡಿ (ವ್ಯಕ್ತಿತ್ವ ವಿಕಸನ ಲೇಖನ ಮಾಲಿಕೆ) ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿ, ಮೊ:೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಒಂದು ಸಂಜೆ ಗುರು ತಮ್ಮ ಎಲ್ಲ ಶಿಷ್ಯಂದಿರನ್ನು ಕರೆದು ಹೀಗೆ ಹೇಳುತ್ತಾರೆ: ನಾಳೆ ಬೆಳಿಗ್ಗೆ ನದಿಯಲ್ಲಿ ಸ್ನಾನ ಮಾಡಿ ತಕ್ಷಣ ಆಶ್ರಮದ ಮುಂದೆ ಇರಿ. ಆಗ ಶಿಷ್ಯಂದಿರು ಆಶ್ಚರ್ಯಗೊಳ್ಳುತ್ತಾರೆ. ನಾವೇನಾದರೂ ತಪ್ಪು ಮಾಡಿದ್ದೇವಾ? ಇಲ್ಲವೇ ಗುರುಗಳು ಹೊಸ ವಿಷಯವನ್ನೇನಾದರೂ ಹೇಳಬಹುದಾ? ಎಂದು ತಮ್ಮ ತಮ್ಮಲ್ಲೇ ಮಾತನಾಡಿಕೊಳ್ಳುತ್ತಾರೆ. ಅಂದು ರಾತ್ರಿ ನಾಳೆ ಗುರುಗಳು ಆಶ್ರಮದ ಮುಂದೆ ಇರಲು ಯಾಕೆ ಹೇಳಿರಬಹುದು? ಎಂದು ಯೋಚಿಸುತ್ತ ಮಲಗುತ್ತಾರೆ. ಬೆಳಿಗ್ಗೆ ಬೇಗ ಎದ್ದು ನದಿಯಲ್ಲಿ ಸ್ನಾನ ಮಾಡಿ ಆಶ್ರಮದ ಮುಂದೆ ಸೇರುತ್ತಾರೆ. ಆಗ ಗುರುಗಳು ಶಿಷ್ಯರನ್ನುದ್ದೇಶಿಸಿ ಹೀಗೆ ಹೇಳುತ್ತಾರೆ: ಇಂದು ನಾನು ನಿಮಗೆಲ್ಲ ಮೌನವಾಗಿರುವುದರಿಂದ ಏನೆಲ್ಲ ಲಾಭಗಳಿವೆ? ಎನ್ನುವುದನ್ನು ಹೇಳುತ್ತೇನೆ. ಶಾಂತವಾಗಿರುವುದರಿಂದ ನೀವೇನನ್ನು ಬಯಸುತ್ತೀರೋ ಅದು ದೊರೆಯುತ್ತದೆ. ಕೆಲವು ಸಂದರ್ಭಗಳಲ್ಲಿ ಮಾತನಾಡುವುದರಿಂದ ನಷ್ಟ ಆಗುತ್ತದೆ. ಮಾತನಾಡುವ ಕ್ಷಣಗಳು ಬೆಂಕಿಗೆ ಇಂಧನವಾಗಬಹುದು. ಮೌನ ಅತ್ಯಂತ ಪರಿಣಾಮಕಾರಿ ಆಯ್ಕೆಯಾಗುತ್ತದೆ. ಹೆಚ್ಚು ಮಳೆಯಿಂದ…

Read More

ಕರ್ನಾಟಕ ರಾಜ್ಯ ಮರಾಠಿ ಸಾಹಿತ್ಯ ಪರಿಷತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾನುವಾರದಂದು ಕರ್ನಾಟಕ ರಾಜ್ಯ ಮರಾಠಿ ಸಾಹಿತ್ಯ ಪರಿಷತ್ತು ವಿಜಯಪುರ ಜಿಲ್ಲಾ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಬಹುಭಾಷಾ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ.ನಗರದ ಸ್ಯಾಟಲೈಟ್ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಹೋಟೆಲ್ ಭವಾನಿ ಸಭಾಂಗಣದಲ್ಲಿ ನಡೆಯುವ ಈ ಸಮಾವೇಶದಲ್ಲಿ ಕನ್ನಡ, ಮರಾಠಿ, ಹಿಂದಿ, ಉರ್ದು, ಗುಜರಾತಿ ಸೇರಿದಂತೆ ವಿವಿಧ ಭಾಷೆಗಳ ಕವಿಗಳು ಭಾಗವಹಿಸಲಿದ್ದಾರೆ.ಈ ಕಾರ್ಯಕ್ರಮವನ್ನು ಅಖಿಲ ಭಾರತೀಯ ಮರಾಠಿ ಸಾಹಿತ್ಯ ಮಹಾಮಂಡಲದ ಉಪಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಮರಾಠಿ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಗುರಯ್ಯ ರೈ ಸ್ವಾಮಿ ಉದ್ಘಾಟಿಸುವರು.ಕರ್ನಾಟಕ ರಾಜ್ಯ ಮರಾಠಿ ಸಾಹಿತ್ಯ ಪರಿಷತ್ತು ರಾಜ್ಯ ಕಾರ್ಯದರ್ಶಿ ಪ್ರಭಾಕರ ಸಲಗರೆ, ಬಾಗಲಕೋಟ ಜಿಲ್ಲಾ ಅಧ್ಯಕ್ಷೆ ಕವಯಿತ್ರಿ ಸುಧಾ ಬೆಟಗೇರಿ ಚಿಕ್ಕೋಡಿ ಅಧ್ಯಕ್ಷೆ ಕವಯಿತ್ರಿ ಲತಾ ಮಾನೆ, ಸಂಕೇಶ್ವರ್, ಕವಿ ಪ್ರಕಾಶಸಿಂಗ ರಜಪೂತ ಸೇರಿದಂತೆ ಈ ಭಾಗದ ಖ್ಯಾತ ಕವಿಗಳು ಭಾಗವಹಿಸಲಿದ್ದು, ಕರ್ನಾಟಕ ರಾಜ್ಯ ಮರಾಠಿ ಸಾಹಿತ್ಯ ಪರಿಷತ್ತು ವಿಜಯಪುರ…

Read More