Author: editor.udayarashmi@gmail.com

ಲೇಖನಎಂ. ವೆಂಕಟೇಶ ಶೇಷಾದ್ರಿ ಬೆಂಗಳೂರು ಉದಯರಶ್ಮಿ ದಿನಪತ್ರಿಕೆ ಪ್ರತಿ ೧೪೪ ವರ್ಷಗಳಿಗೊಮ್ಮೆ ಅಂದರೆ ೧೨ ಪೂರ್ಣ ಕುಂಭಮೇಳದ ನಂತರ ಆಯೋಜಿಸಲಾಗುವ ಮಹಾಕುಂಭಮೇಳವು ಪ್ರಯಾಗ್ ರಾಜ್ ನ ಗಂಗಾ-ಯುಮುನಾ-ಸರಸ್ವತಿ ತ್ರಿವೇಣಿ ಸಂಗಮದಲ್ಲಿ ವಿಜೃಂಬಣೆಯಿಂದ ನಡೆಯುತ್ತಿದೆ. ೨೦೨೫ ರ ಮಹಾ ಕುಂಭಮೇಳವು ಈಗಾಗಲೇ ಜನವರಿ ೧೩ ರಂದು ಪ್ರಾರಂಭವಾಗಿದ್ದು, ಫೆಬ್ರವರಿ ೨೬ (ಶಿವರಾತ್ರಿ ಹಬ್ಬ) ರವರೆಗೆ ಜರುಗಲಿದೆ. ಮಹಾ ಕುಂಭ ಮೇಳವು ವಿಶ್ವದ ಅತಿದೊಡ್ಡ ಧಾರ್ಮಿಕ ಉತ್ಸವವಾಗಿದ್ದು, ಮನುಕುಲದ ಹಿಂದೂ ಆಚರಣೆಯ ಪರಾಕಾಷ್ಠೆಯಾಗಿದೆ. ಪ್ರಪಂಚಾದ್ಯಂತ ೪೦ ಕೋಟಿ ಭಕ್ತರು ಈ ಮಹಾಕುಂಭಮೇಳದಲ್ಲಿ ಭಾಗವಹಿಸುವ ಅಂದಾಜಿದ್ದು, ಈಗಾಗಲೇ ಸುಮಾರು 36 ಕೋಟಿಗೂ ಹೆಚ್ಚು ಭಕ್ತರು ಈ ದೊಡ್ಡ ಧಾರ್ಮಿಕ ಜಾತ್ರೆಯಲ್ಲಿ ಭಕ್ತಿಯಿಂದ ಪಾಲ್ಗೊಂಡಿದ್ದಾರೆ. ಈ ಅವಧಿಯಲ್ಲಿ ಒಟ್ಟು ಆರು ಪವಿತ್ರ (ಶಾಹಿ) ಸ್ನಾನಗಳು ನಡೆಯಲಿದ್ದು, ಈಗಾಗಲೇ ನಾಲ್ಕು ಪವಿತ್ರ ಸ್ನಾನಗಳು ಮುಗಿದಿದೆ. ಇನ್ನುಳಿದ ಎರಡು ಪವಿತ್ರ ಸ್ನಾನಗಳು ಫೆಬ್ರವರಿ ೧೨ ( ಪೂರ್ಣ ಹುಣ್ಣಿಮೆ ) ೨೬ (ಶಿವರಾತ್ರಿ ಹಬ್ಬದಂದು) ನಡೆಯಬೇಕಾಗಿದೆ.ಹಾಗಾದರೆ ಪೂರ್ಣ ಕುಂಭಮೇಳ ಮತ್ತು…

Read More

ಬೀದರ ಮಾದರಿಯಲ್ಲಿ ಸೊಸೈಟಿ ರಚನೆಗೆ ಜಿಲ್ಲಾಧಿಕಾರಿಗಳ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕ್ರೈಸ್ ವಸತಿ ನಿಲಯಗಳಲ್ಲಿ ಹಾಸ್ಟೇಲ್ & ವಸತಿ ಶಾಲಾ ಹೊರಗುತ್ತಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಅಹೋರಾತ್ರಿ ಧರಣಿಯನ್ನು ಕರ್ನಾಟಕ ರಾಜ್ಯ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರುಗಡೆ ಸುಮಾರು ೧೭ ದಿನಗಳ ಕಾಲ ಅಹೋರಾತ್ರಿ ಹೋರಾಟ ಕೈಗೊಂಡ ನಂತರ ಮಾನ್ಯ ಜಿಲ್ಲಾಧಿಕಾರಿಗಳು ವಿಜಯಪುರ ಇವರಿಂದ ಸಭೆ ಕರೆಯಲಾಗಿತ್ತು.ಸಭೆಯನ್ನು ಉದ್ದೇಶಿಸಿ ಜಿಲ್ಲಾಧಿಕಾರಿಗಳು ಮಾತನಾಡುತ್ತ, ಬೀದರ ಮಾದರಿಯಲ್ಲಿ ಸೊಸೈಟಿ ರಚನೆ ಮಾಡಲು ಅಧಿಕಾರಿಗಳಿಗೆ ಸೂಚನೆ ಮಾಡಿದರು ಹಾಗೂ ಬೀದರ ಮಾದರಿಯನ್ನು ಎಪ್ರಿಲ್ ೦೧ ರಂದು ಜಾರಿಗೊಳಿಸಲಾಗುವದು ಎಂದು ಭರವಸೆ ನೀಡಿದ ಅವರು ಎಲ್ಲ ಹಾಸ್ಟೇಲ್ ಹೊರ ಗುತ್ತಿಗೆ ನೌಕರರಿಗೆ ವಾರದ ರಜೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಗೂ ಜಿಲ್ಲಾಡಳಿತ ಹಂತದಲ್ಲಿ ಬರುವ ಭರವಸೆಗಳನ್ನು ಈಡೇರಿಸಲಾಗುವದು ಹಾಗೂ ಸರಕಾರ…

Read More

ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ-ರಾಜ್ಯ ಸಮಿತಿಯಿಂದ ಸುದ್ದಿಗೋಷ್ಠಿ | ಒಳ ಮೀಸಲಾತಿ ಹೋರಾಟಗಾರರ ಆಗ್ರಹ ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪಿನಂತೆ ಕರ್ನಾಟಕ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಬೇಕು. ಆದ್ದರಿಂದ, ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯು ತನ್ನ ವರದಿಯನ್ನು ತುರ್ತಾಗಿ ನೀಡಬೇಕು ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ-ರಾಜ್ಯ ಸಮಿತಿ’ ಒತ್ತಾಯಿಸಿದೆ.ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, “ಸುಮಾರು ನಾಲ್ಕು ದಶಕಗಳ ಒಳಮೀಸಲಾತಿ ಹೋರಾಟವು ಕಳೆದ ಆಗಸ್ಟ್ 1, 2024 ರ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಒಂದು ತಾರ್ಕಿಕ ಅಂತ್ಯ ಕಂಡಿದೆ. ಒಳಮೀಸಲಾತಿಯ ಪರ ವಿರೋಧದ ಚರ್ಚೆಗಳು ತಕ್ಕಮಟ್ಟಿಗೆ ಶಮನಗೊಂಡು ಒಳಮೀಸಲಾತಿ ಯಾರಿಗೆ ಎಷ್ಟೆಷ್ಟು ಸಿಗಬೇಕೆಂಬ ಚರ್ಚೆಗಳು ಹೆಚ್ಚಾದವು. ಈ ದಿಸೆಯಲ್ಲಿ ತುಸು ತಡವಾದರೂ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಪ್ರಮಾಣವನ್ನು ನಿಗದಿಪಡಿಸಲು ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯನ್ನು ರಚಿಸಿರುವುದು ಅಭಿನಂದನೀಯ” ಎಂದು ಹೇಳಿದ್ದಾರೆ.“ಒಳ ಮೀಸಲಾತಿಗಾಗಿ ಇಷ್ಟು ವರ್ಷ ಕಾದಿರುವ ನಮಗೆ…

Read More

ಮುಡಾ ಕೇಸ್ | ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಈ ಪ್ರಕರಣದಲ್ಲಿ ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಇದೀಗ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಶುಕ್ರವಾರ ತೀರ್ಪು ಪ್ರಕಟಿಸಿದ್ದಾರೆ.ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು ರಾಜ್ಯದ ಇಲಾಖೆಗಳ ಮೇಲೆ, ವಿಶೇಷವಾಗಿ ರಾಜ್ಯದ ತನಿಖಾ ಸಂಸ್ಥೆಗಳಾದ ಪೊಲೀಸ್ ಅಧಿಕಾರಿಗಳು ಮತ್ತು ಕರ್ನಾಟಕ ಲೋಕಾಯುಕ್ತ ಪೊಲೀಸರ ಮೇಲೆ ಅಧಿಕಾರ ಮತ್ತು ಪ್ರಭಾವವನ್ನು ಹೊಂದಿರುವುದರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಸ್ನೇಹಮಯಿ ಕೃಷ್ಣ ಅವರು ತಮ್ಮ ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ.ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಎಂ…

Read More

ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಅಸಮಾಧಾನ ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ತಮ್ಮ ತಂದೆ ಮತ್ತು ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಕೆಲವು ನಾಯಕರು “ಅವಮಾನಕರ” ಹೇಳಿಕೆಗಳನ್ನು ನೀಡುತ್ತಿದ್ದರೂ ಪಕ್ಷದ ಹಿರಿಯ ನಾಯಕರು ತಡೆಯದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಯಾವುದೇ ಬಣದ ಭಾಗವಲ್ಲದ ಮತ್ತು “ತಟಸ್ಥ”ವಾಗಿರುವ ಪಕ್ಷದ ಹಲವಾರು ಹಿರಿಯ ನಾಯಕರನ್ನು ಗುರಿಯಾಗಿರಿಸಿಕೊಂಡು ವಿಜಯೇಂದ್ರ ಈ ಹೇಳಿಕೆ ನೀಡಿದ್ದು, ಹಿರಿಯ ನಾಯಕರ ಮೌನ “ದುರದೃಷ್ಟಕರ” ಎಂದಿದ್ದಾರೆ.”ರಾಜ್ಯ ಅಧ್ಯಕ್ಷರ ಆಯ್ಕೆ ಅಥವಾ ಆಯ್ಕೆ ಪ್ರಕ್ರಿಯೆ ಯಾವುದೇ ಕ್ಷಣದಲ್ಲಿ ನಡೆಯಬಹುದು. ಫೆಬ್ರವರಿ 20 ರೊಳಗೆ ಇಡೀ ಪ್ರಕ್ರಿಯೆಯು ಪೂರ್ಣಗೊಳ್ಳುವ ಸೂಚನೆಗಳಿವೆ. ಕೆಲವು ನಾಯಕರು ನೀಡುತ್ತಿರುವ ಹೇಳಿಕೆಗಳನ್ನು ನಾನು ಗಮನಿಸಿದ್ದೇನೆ. ಕೆಲವು ಕಾರಣಗಳಿಂದಾಗಿ ನಾನು ಅವುಗಳಿಗೆ ಪ್ರತಿಕ್ರಿಯಿಸಿಲ್ಲ. ಏಕೆಂದರೆ ಅದು ಪಕ್ಷ ಮತ್ತು ಕಾರ್ಯಕರ್ತರಿಗೆ ಮುಜುಗರವನ್ನುಂಟುಮಾಡಬಹುದು” ಎಂದು ವಿಜಯೇಂದ್ರ ಇಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.ಇತರರು, ವಿಶೇಷವಾಗಿ ಪಕ್ಷದ ಹಿರಿಯರು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಮುಂದಿನ ಪೀಳಿಗೆಗೆ ಮಾದರಿಯಾಗಬೇಕಾಗಿರುವ ಜಾನಪದ ಕಲೆಗಳು ನಶಿಸಿ ಹೋಗುತ್ತಿದ್ದು, ಅವುಗಳನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಶಿರಶ್ಯಾಡದ ಅಭಿನವ ಮುರಗೇಂದ್ರ ಶಿವಾಚಾರ್ಯರರು ಹೇಳಿದರು.ತಾಲೂಕಿನ ಗೊರನಾಳ ಗ್ರಾಮದ ಪಿ.ಎಮ್.ಶ್ರೀ ಸರಕಾರಿ ಪ್ರೌಢಶಾಲೆ ಮತ್ತು ಕನ್ನಡ ಜಾನಪದ ಪರಿಷತ್ತು ಬೆಂಗಳೂರು, ಜಾನಪದ ಪರಿಷತ್ತು ವಿಜಯಪುರ ಮತ್ತು ಇಂಡಿ ತಾಲೂಕು ಜಾನಪದ ಪರಿಷತ್ತು ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಸಮಾರಂಭದಲ್ಲಿ ಅವರು ಮಾತನಾಡಿದರು.ಡಾ. ಎಸ್. ಬಾಲಾಜಿ ಮಾತನಾಡಿ, ಜಾನಪದ ಅಳಿವಿನ ಅಂಚಿನಲ್ಲಿರುವ ಕಲೆಯಲ್ಲ. ಬದಲಾಗಿ ಅದು ತಲೆ ಮಾರಿನಿಂದ ತಲೆಮಾರಿಗೆ ಬದಲಾಗುತ್ತಿದೆ. ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಯುವಕರ ಮೇಲಿದೆ ಎಂದರು.ತಾಲೂಕಾ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಪಂಡಿತ ಅವಜಿಯವರು ಮಾತನಾಡಿ, ಆಧುನಿಕತೆಯ ಹೆಸರಿನಲ್ಲಿ ನಾವು ನಮ್ಮತನ ಮರೆಯುತ್ತಿರುವ ಕಾಲದಲ್ಲೂ ಗ್ರಾಮೀಣ ಪ್ರದೇಶದಲ್ಲಿ ಎಲೆ ಮರೆ ಕಾಯಿಯಂತಿರುವ ಜನಪದ ಕಲಾವಿಧರನ್ನು ಮುಖ್ಯವಾಹಿನಿಗೆ ತರುವ ಕಾರ್ಯ ಶ್ಲಾಘನೀಯ ಎಂದರು.ಮಾಯವ್ವ ಹಂಜಗಿ, ಜಟ್ಟೆಪ್ಪ ಮಾದರ, ತುಕಾರಾಮ ಸೂರ್ಯವಂಶಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿಯಾಗಿ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಯ ಬಹುದೊಡ್ಡ ಲಕ್ಷ್ಯ ಸಾದಿಸಲು ಶಿಕ್ಷಣ ಇಲಾಖೆ ಅರ್ಹನಿಷಿ ಪ್ರಯತ್ನಿಸುತ್ತಿದೆ. ಅದಕ್ಕಾಗಿ ತಾಲೂಕಿನಲ್ಲಿ ಮಿಸ್ಡ ಕಾಲ್ ಅಂದೋಲನ ಮತ್ತು ಶಿಕ್ಷಕರ ಬೀಟ್ ವ್ಯವಸ್ಥೆ ಶುರು ಮಾಡಲಾಗಿದೆ ಎಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನೋಡಲ್ ಅಧಿಕಾರಿ ಎ.ಓ.ಹೂಗಾರ ಹೇಳಿದರು.ತಾಲೂಕಿನ ನಾದ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಹೆಚ್ಚಿಸುವ ಕುರಿತು ನಡೆದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಅಲಗೂರ ಮಾತನಾಡಿ, ಇಂಡಿ ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ಸಮರೋಪಾದಿಯಾಗಿ ವಿಭಿನ್ನ ಕಾರ್ಯಾಗಾರ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಮನೋಸ್ಥೆöÊರ್ಯ ಹೆಚ್ಚಿಸಿ ಸಾಮಾನ್ಯ ವಿದ್ಯಾರ್ಥಿಯೂ ಸುಲಭವಾಗಿ ಪರೀಕ್ಷೆ ಎದುರಿಸಲು ತರಬೇತಿ ನೀಡಲಾಗುತ್ತಿದೆ ಎಂದರು.ನಾದ ಪ್ರೌಢಶಾಲೆಯ ಮುಖ್ಯ ಗುರು ಚಿದಂಬರ ಬಂಡಗರ ಮಾತನಾಡಿ, ಪೋಷಕರು ಮತ್ತು ಹಳ್ಳಿಗಳಲ್ಲಿ ಇದರ ಬಗ್ಗೆ ತಿಳುವಳಿಕೆ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಬಿಲೋ ಎವರೇಜ್ ವಿದ್ಯಾರ್ಥಿಗಳಿಗೆ ಪಾಸಿಂಗ್ ಪ್ಯಾಕೇಜ ಸಿದ್ದಪಡಿಸಲಾಗುತ್ತಿದ್ದು ಶಾಲೆಯ ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳ ಪೋಷಕರಿಗೆ ಬೆಳಗ್ಗೆ ೫ ಗಂಟೆಗೆ ಸಂಜೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ ಬೆಂಗಳೂರ, ಸಂಘದ ಬೈಲಾ ನಿಯಮದ ಪ್ರಕಾರ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ರಾಜ್ಯ ಕಾರ್ಯಕಾರಿ ಸಮಿತಿಯ ನಿರ್ಣಯದಂತೆ ವಿಜಯಪುರ ಜಿಲ್ಲೆಯ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಸುರೇಶ ಶಡಶ್ಯಾಳ ಅವರನ್ನು ರಾಜ್ಯ ಸಂಘದ ಹಿರಿಯ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ.ವಿಜಯಪುರ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಖಜಾಂಚಿ ಜುಬೇರ ಕೆರೂರ, ಪ್ರಧಾನ ಕಾರ್ಯದರ್ಶಿ ರಾಜಶೇಖರ ದೈವಾಡಿ, ರಾಜ್ಯ ಪರಿಷತ್ ಸದಸ್ಯ ವಿಜಯಕುಮಾರ ಹತ್ತಿ, ಗಂಗಾಧರ ಜೇವೂರ, ನೀಜು ಮೇಲಿನಕೇರಿ, ಜಿಲ್ಲೆಯ ನೌಕರ ಸಂಘದ ಎಲ್ಲ ಪದಾಧಿಕಾರಿಗಳು ಹಾಗೂ ಸಮಸ್ತ ನೌಕರರ ಬಳಗ‌ ಹಾಗೂ ಶಿಕ್ಷಕ ಬಳಗ ಅಭಿನಂದನೆ ಸಲ್ಲಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದು ಫೆ.8 ಶನಿವಾರ ಮದ್ಯಾಹ್ನ 2:30 ರಿಂದ 5 ಗಂಟೆಯವರೆಗೆ ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಇಂಗ್ಲೀಷ್ ಮತ್ತು ವಿಜ್ಞಾನ ವಿಷಯಗಳ ಕುರಿತು ನೇರ ಫೋನ್ ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ತಾಲ್ಲೂಕಿನ ಎಲ್ಲಾ ಪ್ರೌಢಶಾಲೆಗಳ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಈ ಎರಡು ವಿಷಯಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳು ಇದ್ದರೆ ಹಾಗೂ ಪರೀಕ್ಷಾ ಭಯವನ್ನು ಹೋಗಲಾಡಿಸುವುದಕೋಸ್ಕರವಾಗಿ ಪಾಲಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಈ ಕೆಳಗಿನ ಸಂಪನ್ಮೂಲ ವ್ಯಕ್ತಿಗಳಿಗೆ ಫೋನ್ ಕರೆ ಮಾಡಲು ತಿಳಿಸಿದೆ.ಇಂಗ್ಲೀಷ ವಿಷಯಕ್ಕೆ‌ ಸಂಬಂದಿಸಿದಂತೆ ಶ್ರೀಮತಿ ಎಂ.ಎಸ್. ಬಿರಾದಾರ್ 9900872799, ಪಿ. ಎಸ್. ಕುಂಬಾರ 9449009605, ಬಿ.ಬಿ.ಕುಲಕರ್ಣಿ, 9845919703, ವಿನಾಯಕ್ ಕಾಖಂಡಕಿ 9731091724, ಎಸ್. ಎಲ್. ಬಾಲಿ 9902569410, ಜೆ. ಬಿ.ಗಳವೆ 9741635473 ಅವರನ್ನು ಸಂಪರ್ಕಿಸಬೆಕು.ವಿಜ್ಞಾನ ವಿಷಯಕ್ಕೆ ಸಂಬಂದಿಸಿದಂತೆ ಸಂದೀಪ್ ದೇಶಪಾಂಡೆ 998008879, ಗುರು ಹಿರೇಮಠ 9900488928, ಬಿ.ಎಸ್.ಹಿರೇಮಠ್ 9481706664, ಪ್ರಕಾಶ್…

Read More

ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣಕ್ಕೆ ಸರ್ಕಾರದ ಸುಗ್ರೀವಾಜ್ಞೆ ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಅನೇಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಬೀದಿಗೆ ಬಿದ್ದಿದ್ದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ರೋಸಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಹೊರಟಿತ್ತು. ಆದರೆ, ಇದೀಗ ಸರ್ಕಾರಕ್ಕೆ ಹಿನ್ನಡೆಯಾಗಿದೆ.ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ‌ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು ಐದು ಲಕ್ಷ ದಂಡ‌ ಹೇಗೆ ಹಾಕುತ್ತೀರಾ ಎಂದು ರಾಜ್ಯಪಾಲರು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.ಇದರ ಜೊತೆಗೆ 10 ವರ್ಷಗಳ ಶಿಕ್ಷೆ ಮತ್ತು 5 ಲಕ್ಷ ರೂ.ಗಳ ದಂಡವು ವಿಪರೀತವಾಗಿದೆ ಎಂಬ ಅಂಶವನ್ನು ಒಳಗೊಂಡಂತೆ ರಾಜ್ಯಪಾಲರು ತಿರಸ್ಕಾರಕ್ಕೆ ಹಲವು ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಸಾಲ ಪಡೆಯುವವನ ಬಳಿ ಏನೂ…

Read More