Subscribe to Updates
Get the latest creative news from FooBar about art, design and business.
Author: editor.udayarashmi@gmail.com
ರಾಜ್ಯ ಮಟ್ಟದ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ವಿಜಯಪುರ ಜಿಲ್ಲೆಗೆ ಮೂರು ವಿಭಾಗದಡಿ ಪ್ರಶಸ್ತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೩-೨೪ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಜಿಲ್ಲೆಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವುದಕ್ಕೆ, ನರೇಗಾ ಪ್ರಶಸ್ತಿಗೆ ಜಿಲ್ಲೆಯು ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿ ಪುರಸ್ಕಾರಕ್ಕೆ ಆಯ್ಕೆಯಾಗಿದೆ.ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಬೆಳಗಾವಿ ವಿಭಾಗದ ಅತ್ಯುತ್ತಮ ಒಗ್ಗೂಡಿಸುವಿಕೆ ಜಿಲ್ಲಾ ಪುರಸ್ಕಾರ-ರೇಷ್ಮೆ ಇಲಾಖೆ ವಿಜಯಪುರ, ಅತ್ಯುತ್ತಮ ತಾಲ್ಲೂಕು ಪಂಚಾಯತಿ ಪುರಸ್ಕಾರ- ನಿಡಗುಂದಿ ತಾಲ್ಲೂಕು, ಅತ್ಯುತ್ತಮ ಗ್ರಾಮ ಪಂಚಾಯತಿ ಪುರಸ್ಕಾರ- ರೂಗಿ ಗ್ರಾಮ ಪಂಚಾಯತಿ ಇಂಡಿ ತಾಲ್ಲೂಕು. ಫೆ.೦೫ರಂದು ಬೆಂಗಳೂರಿನ ವಸಂತನಗರದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಮೆಮೋರಿಯಲ್ ಟ್ರಸ್ಟ್ ಅಂಬೇಡ್ಕರ್ ಭವನದಲ್ಲಿ ನಡೆದ ನರೇಗಾ ಹಬ್ಬ-೨೦೨೫ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಜಿಲ್ಲಾಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.ಜಿಲ್ಲಾ ರೇಷ್ಮೆ…
ತಾಲೂಕಾ ಮಟ್ಟದ & ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ವಿವಿಧ ತಾಲೂಕ ಮಟ್ಟದ ಆಸ್ಪತ್ರೆಯಲ್ಲಿ ಹಾಗೂ ವಿವಿಧ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ತಜ್ಞ ವೈದ್ಯರ, ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹಾಗೂ ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇರೆಗೆ ಷರತ್ತು ಹಾಗೂ ನಿಬಂಧನೆಗೊಳಪಟ್ಟು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಜನರಲ್ ಮೆಡಿಸಿನ್ ತಜ್ಞ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ,ಕಿವಿ, ಮೂಗು ಮತ್ತು ಗಂಟಲು ತಜ್ಞ,ಚರ್ಮ ರೋಗ ತಜ್ಞ,ಚಿಕ್ಕ ಮಕ್ಕಳ ತಜ್ಞ, ತುರ್ತು ಚಿಕಿತ್ಸಾ ವೈದ್ಯಾಧಿಕಾರಿ, ಹಿರಿಯ ವೈದ್ಯಾಧಿಕಾರಿ ಹುದ್ದೆಗಳ ನೇರ ಸಂದರ್ಶನಕ್ಕೆ ಆಸಕ್ತ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆ ಸಹಿತ ಹಾಜರಾಗಬಹುದಾಗಿದೆ.ಈ ಪ್ರಕಟಣೆ ಹೊರಡಿಸಿದ ದಿನಾಂಕದಿಂದ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲಾತಿ ಸಹಿತ ಹಾಗೂ ಒಂದು ಸೆಟ್ ಝರಾಕ್ಷ ಪ್ರತಿಯೊಂದಿಗೆಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ೨೨ನೇ ಅವಧಿಗೆ ಉಪ ಮಹಾಪೌರರ ಸ್ಥಾನಗಳಿಗೆ ಜ.೨೭ರಂದು ನಿಗದಿಯಾಗಿದ್ದ ಚುನಾವಣೆಯನ್ನು ಅನಿವಾರ್ಯ ಕಾರಣದಿಂದ ಫೆ.೧೨ಕ್ಕೆ ಮುಂದೂಡಲಾಗಿದೆ. ಅಂದು ಬೆಳಿಗ್ಗೆ ೧೧ ಗಂಟೆಗೆ ವಿಜಯಪುರ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಚುನಾವಣೆ ಪ್ರಕ್ರಿಯೆಗಳು ಜರುಗಲಿವೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರದಲ್ಲಿ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜದ ಎಲ್ಲ ಸಮುದಾಯಗಳಿಗೂ ತನ್ನದೇ ಆದ ಮೌಲ್ಯಗಳಿರುತ್ತವೆ. ಅಂತಹ ಮೌಲ್ಯಗಳನ್ನು ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಧಾರವಾಡ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾತಿ ಭೇದ ತೊರೆದು ಮಹನೀಯರ ತತ್ವ, ಸಿದ್ಧಾಂತ ಹಾಗೂ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಅವರು ಹೇಳಿದರು.ಪ್ರತಿಯೊಬ್ಬರು ತಮ್ಮ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು, ಉನ್ನತ ಮಟ್ಟಕ್ಕೆ ಬೆಳೆಸಬೇಕೆಂಬ ಸಂಕಲ್ಪದೊಂದಿಗೆ ಸಂಸ್ಕಾರ ನೀಡಬೇಕೆಂದು ಅವರು ತಿಳಿಸಿದರು.ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕ ಡಾ.ರಾಘವೇಂದ್ರ ಗುರುಜಾಲ ಮಾತನಾಡಿ, ಸವಿತಾ ಮಹರ್ಷಿಯವರು ಲೋಕ ಕಲ್ಯಾಣಕ್ಕಾಗಿ ನಯ, ವಿನಯ ಹಾಗೂ ಪಾರದರ್ಶಕದಿಂದ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದರು. ಅದು ಅಲ್ಲದೆ ತಮ್ಮ ವೃತ್ತಿಯೊಂದಿಗೆ ಆಯುರ್ವೇಧ ವೈದ್ಯಕೀಯ ಪದ್ಧತಿ…
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ರೂಗಿ ಗ್ರಾಮ ಪಂಚಾಯತಿಗೆ ಸನ್ 2023-24ನೇ ಸಾಲಿನ ನರೇಗಾ ಯೋಜನೆಯ ‘ರಾಜ್ಯ ಮಟ್ಟದ ಅತ್ಯುತ್ತಮ ಗ್ರಾಮ ಪಂಚಾಯತಿ ಪ್ರಶಸ್ತಿ’ ದೊರಕಿದೆ.ಸನ್ 2023-24ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅತ್ಯುತ್ತಮ ಕಾಮಗಾರಿಗಳನ್ನು ಅನುಷ್ಠಾನ ಮಾಡಿದ ಫಲವಾಗಿ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದ್ದು, ದಿನಾಂಕ: 05.02.2025ರಂದು ಬೆಂಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜರುಗಿದ ನರೇಗಾ ಹಬ್ಬ-2025 ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರಾದ ಸೊಮವ್ವ ಯಶವಂತ ಹೊಸಮನಿ, ತಾಪಂ ಸಹಾಯಕ ನಿರ್ದೇಶಕರಾದ ಸಂಜಯ ಖಡಗೇಖರ, ಗ್ರಾಪಂ ಪಿಡಿಒ ಬಸವರಾಜ ಬಬಲಾದ, ಟಿಐಇಸಿ ರಾಮನಗೌಡ ಸರಬಡಗಿ, ತಾಂತ್ರಿಕ ಸಹಾಯಕರಾದ ಈರಣ್ಣ ಇಂಡಿ ಸೇರಿದಂತೆ ಇತರರು ಹಾಜರಿದ್ದರು.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಹಾಶಿವರಾತ್ರಿ ಅಂಗವಾಗಿ ಅಮೃತಾನಂದಶ್ರೀಗಳ ಆಧ್ಯಾತ್ಮೀಕ ಪ್ರವಚನ ಕಾರ್ಯಕ್ರಮ ಕಡ್ಲೇವಾಡ ಪಿಸಿಎಚ್ ಗ್ರಾಮದಲ್ಲಿ ಜರುಗಲಿದೆ ಎಂದು ನಿವಾಳಖೇಡ ಗ್ರಾಮದ ಸಿದ್ಧಕೃಪಾ ಮಲ್ಲಿಕಾರ್ಜುನ ಮಹಾಂತಮಠದ ಬಸವಾನಂದಶ್ರೀಗಳು ಹೇಳಿದರು.ತಾಲ್ಲೂಕಿನ ಕಡ್ಲೇವಾಡ ಪಿಸಿಎಚ್ ಗ್ರಾಮದ ರಾಚೋಟೇಶ್ವರಮಠದಲ್ಲಿ ಬುಧವಾರ ಜರುಗಿದ ಆಧ್ಯಾತ್ಮೀಕ ಪ್ರವಚನ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಇದೇ ದಿ:೧೩ ರಿಂದ ೨೬ ರವರೆಗೆ ಜರುಗಲಿರುವ ಆಧ್ಯಾತ್ಮೀಕ ಪ್ರವಚನ ಬೆಳಿಗ್ಗೆ ೬.೩೦ ರಿಂದ ೭.೩೦ ರವರೆಗೆ ನಿಗದಿಯಾಗಿದೆ. ಪ್ರತಿದಿನ ಪ್ರವಚನದ ನಂತರ ಮಹಾಪ್ರಸಾದ ವ್ಯವಸ್ಥೆಯಿದ್ದು, ಪ್ರವಚನಕ್ಕೆ ಸಹಕಾರಿಯಾಗಿ ಗ್ರಾಮಸ್ಥರ ನೇತೃತ್ವದಲ್ಲಿ ಪ್ರಚಾರ, ದಾಸೋಹ, ಹಣಕಾಸು, ಸ್ವಚ್ಛತಾ ಸಮಿತಿಗಳನ್ನು ರಚನೆ ಮಾಡಲಾಗಿದೆ ಎಂದರು.ಸಭೆಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಸಾಯಿಕುಮಾರ ಬಿಸನಾಳ, ನಿಂಗರಾಯ ನಾಯ್ಕೋಡಿ, ಗೋವಿಂದ, ಸೋಮನಗೌಡ ಪಾಟೀಲ, ಅಡಿವೆಪ್ಪ ಕೊಂಡಗೂಳಿ, ಅಶೋಕ ಸೂಳಿಭಾವಿ, ಸಾಹೇಬಗೌಡ ರಡ್ಡಿ, ವಿಠ್ಠಲ ದೇಗಿನಾಳ, ವಿಠ್ಠಲ ಕನ್ನೋಳ್ಳಿ, ಚಂದ್ರಶೇಖರ ಗಣಜಲಿ, ಮಲ್ಲಿಕಾರ್ಜುನ ಬಿರಾದಾರ, ಪ್ರಭಾಕರ ಸೂಳಿಭಾವಿ, ಸುಭಾಸ ಕಬಾಡಗಿ, ಪಿಡ್ಡಪ್ಪ ಗಣಜಲಿ, ನಿಂಗರಾಯ ಸಂಗೋಗಿ, ಹಣಮಂತ ಸಂಗೋಗಿ, ಬಾಲಚಂದ್ರ…
ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಾ ಎನ್ ಪಿ ಎಸ್ ನೌಕರ ಸಂಘದ ವತಿಯಿಂದ ವಿಠ್ಠಲ ಕಟಕಧೋಂಡ ಶಾಸಕರು ನಾಗಠಾಣ ಮತಕ್ಷೇತ್ರ ರವರಿಗೆ ಎನ್ ಪಿ ಎಸ್ ರದ್ದುಗೊಳಿಸಿ ಇದೆ ಬಜೆಟ್ ನಲ್ಲಿ ಒಪಿಎಸ್ ಜಾರಿಗೊಳಿಸಲು ಮುಖ್ಯಮಂತ್ರಿಗಳಿಗೆ ಒತ್ತಾಯಿಸಲು ಮನವಿ ಪತ್ರ ಸಲ್ಲಿಸಲಾಯಿತು.ಮನವಿ ಪತ್ರ ಸ್ವೀಕರಿಸಿದ ಶಾಸಕರು ಎನ್ ಪಿ ಎಸ್ ರದ್ದುಗೊಳಿಸಿ ಇದೇ ಮಾರ್ಚ್ ಬಜೆಟ್ ನಲ್ಲಿ ಒ ಪಿಎಸ್ ಜಾರಿಗೊಳಿಸಲು ಮಾನ್ಯ ಮುಖ್ಯಮಂತ್ರಿಗಳಿಗೆ ಒತ್ತಾಯಿಸಲು ನೂರಕ್ಕೆ ನೂರರಷ್ಟು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.ಇದೇ ಸಂದರ್ಭದಲ್ಲಿ ಎನ್ ಪಿ ಎಸ್ ನೌಕರ ಸಂಘದ ಅಧ್ಯಕ್ಷರಾದ ಡಿ ಎಸ್ ಬಗಲಿ, ನೌಕರ ಸಂಘದ ಅಧ್ಯಕ್ಷರಾದ ಬಸವರಾಜ ಮಜ್ಜಗಿ, ಶಿಕ್ಷಕರ ಸಂಘದ ಅಧ್ಯಕ್ಷರಾದ ಅನಿಲ ಸೊನಗಿ, ಶಿಕ್ಷಕರ ಸೊಸೈಟಿ ಅಧ್ಯಕ್ಷರಾದ ಎಸ್ ಎಸ್ ಪಾಟೀಲ, ವಿಕಲಚೇತನ ನೌಕರ ಸಂಘದ ಅಧ್ಯಕ್ಷರಾದ ಮಹಾಂತೇಶ ಉಮರಾಣಿ, ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಿವಾನಂದ ಭಾಸಗಿ ನೌಕರರಾದ ಸತೀಶ ಬಗಲಿ,ಸುರೇಶ್ ಕರಜಗಿ,ರಾಣಿ ಝಳಕಿ, ರಾಜೇಶ್ವರಿ ಕಾಮಗೊಂಡ, ವಿಜಯಶ್ವೇರಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅನುಸೂಚಿತ ಬುಡಕಟ್ಟುಗಳ ದೌರ್ಜನ್ಯ ಅಧಿನಿಯಮದಡಿ ಬರುವ ಕಂದಾಯ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಪ್ರಸಾದ ಧನಸಿಂಗ್ ಚವ್ಹಾಣ ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿ ವಿಜಯಪುರ ಉಪವಿಭಾಗಾಧಿಕಾರಿಗಳು ಗುರುನಾಥ ದಡ್ಡೆ ಅವರು ಆದೇಶ ಹೊರಡಿಸಿದ್ದಾರೆ. ಪ್ರಸಾದ ಧನಸಿಂಗ್ ಚವ್ಹಾಣ ಅವರು ವಿಜಯಪುರದ ಬಂಜಾರ ನಗರದಲ್ಲಿರುವ ಪ್ರತಿಷ್ಠಿತ ವಿಜಯಪುರ ವಿದ್ಯಾವರ್ಧಕ ಸಂಘದ ಸಹಕಾರ್ಯದರ್ಶಿಯಾಗಿದ್ದಾರೆ. ಅವರನ್ನು ಸಮಿತಿಯ ಎನ್.ಜಿ.ಓ ಅಧಿಕಾರೇತರ ನಾಮನಿರ್ದೇಶಿತ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಉಪವಿಭಾಗಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.ನೂತನ ಸದಸ್ಯ ಪ್ರಸಾದ ಧನಸಿಂಗ್ ಚವ್ಹಾಣ ಅವರಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಮತ್ತು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅಭಿನಂದನೆ ಸಲ್ಲಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತ್ತೀಚೆಗೆ ನಡೆದ ದರೋಡೆ ಸಂದರ್ಭದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆಬೆಂಗಳೂರಿನಲ್ಲಿ ಮೃತಪಟ್ಟ ಸಂತೋಷ ಕನ್ನಾಳ ಅವರ ನಿಧನಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸಂತಾಪ ವ್ಯಕ್ತಪಡಿಸಿದ್ದಾರೆ.ಸಂತೋಷ ಕನ್ನಾಳ ಅವರ ಮೃತಪಟ್ಟಿರುವುದು ಬಹಳ ದುರದೃಷ್ಟಕರವಾಗಿದೆ. ಹಳ್ಳಿಯಿಂದ ಬಂದು ನಗರದಲ್ಲಿ ಬದುಕು ಕಟ್ಟಿಕೊಳ್ಳುತ್ತಿದ್ದ ಅವರು ಈ ರೀತಿ ನಿಧನರಾಗಿರುವುದು ಅತೀವ ದುಃಖ ತಂದಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.ದೆಹಲಿ ಪ್ರವಾಸದಲ್ಲಿರುವ ಸಚಿವರು ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಅವರಿಂದ ಈ ಬಗ್ಗೆ ಪಡೆದಿದ್ದಾರೆ. ಅಲ್ಲದೇ, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿದ್ದ ಮೃತರ ಮರಣೋತ್ತರ ಪರೀಕ್ಷೆ ಮಾಡಿಸಲು ಮತ್ತು ನಂತರ ಪಾರ್ಥಿವ ಶರೀರವನ್ನು ವಿಜಯಪುರ ಜಿಲ್ಲೆಯ ಸ್ವಗ್ರಾಮ ದಿಂಡವಾರಕ್ಕೆ ತಲುಪಿಸಲು ವಾಹನ ವ್ಯವಸ್ಥೆ ಮಾಡಿದ್ದಾರೆ. ಸಚಿವರ ಸೂಚನೆಯಂತೆ ಬೆಂಗಳೂರಿನಲ್ಲಿರುವ ಅವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಹಾಂತೇಶ ಬಿರಾದಾರ ಅವರು ಮೃತರ…
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರು ಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನಾನು ಬದಲಾಗಬೇಕುನಾನು ಬದಲಾಗಬೇಕು ಅಂದುಕೊಳ್ಳುತ್ತೇನೆ ನಿಜ, ಅಂದುಕೊಂಡ ಮಾತ್ರಕ್ಕೆ ಬದಲಾಗಿ ಬಿಡುತ್ತೇನೆಯೇ? ಮೊಂಡತನ, ಬೇಡವಾದ ಹಲವಾರು ಚಟುವಟಿಕೆಗಳನ್ನು ದಿನನಿತ್ಯ ಮುದ್ದಾಂ ಆಗಿ ನೀರು ಹಾಕಿ ಬೆಳೆಸುತ್ತೇನೆ. ಸಿಕ್ಕಿದ್ದೆಲ್ಲ ಬೇಕೆಂದು ಅದರ ಹಿಂದೆ ಬೆನ್ನು ಹತ್ತುತ್ತೇನೆ ಅದು ಬೇಕೋ ಬೇಡವೋ ಗೊತ್ತಿಲ್ಲ. ಆದರೆ ಸ್ನೇಹಿತರು ಪಕ್ಕದಲ್ಲಿದ್ದರೆ ಸಾಕು ಸಮೂಹ ಸನ್ನಿ ಮೈಯನ್ನು ಆವರಿಸಿಬಿಡುತ್ತದೆ. ನನಗೆ ತಿಳಿಯದಂತೆ ಇಲ್ಲ ಸಲ್ಲದನ್ನು ಮಾಡಿ ಬಿಡುತ್ತೇನೆ. ಕುತೂಹಲಕ್ಕೆ ಅಂತ ಬೇರೆ ಇನ್ನೇನೋ ಬೇಡದ್ದನ್ನು ನೋಡುವುದು ಆಮೇಲೆ ಛೇ! ಹಾಗೆಲ್ಲ ಇನ್ಮುಂದೆ ಮಾಡಲ್ಲ ಎನ್ನುತ್ತೇನೆ. ಮರುದಿನ ಅದೇ ರಾಗ ಅದೇ ತಾಳ. ನನ್ನ ನಡುವಳಿಕೆ ನನಗೇ ಒಮ್ಮೊಮ್ಮೆ ದಂಗಾಗಿಸುತ್ತದೆ. ದಾರಿ ತಪ್ಪಿದ್ದೇನೆ ಅಂತ ಅನ್ನಿಸಿದರೂ ಸುತ್ತ ಕಣ್ಣಾಡಿಸಿ ಮತ್ತೆ ಅದೇ ದಾರಿಯಲ್ಲಿ ಹಸಿರು ದೀಪ ತೋರಿಸಿಕೊಂಡು ಹೋಗುತ್ತೇನೆ. ಇದು ಬಹುಪಾಲು ಕಾಲೇಜು ಮಕ್ಕಳ ಸ್ವಗತ. ನನ್ನ ಮೂಲ ರೂಪವನ್ನು ಕಳೆದುಕೊಂಡಿದ್ದೇನೆ ಇನ್ನು ಬದಲಾಗಬೇಕೆಂದು ಬಯಸುತ್ತಾರೆ.ಮನೆ ಬೆಳಗುವ ದೀಪಏನೇ…
