Author: editor.udayarashmi@gmail.com

ಪಕ್ಷದೊಳಗಿನ ಗೊಂದಲಗಳಿಗೆ ವಾರದಲ್ಲೇ ಉತ್ತರ | ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ | ಪಕ್ಷದ ವರಿಷ್ಠರ ನಿರ್ಧಾರದಂತೆ ಜಿಲ್ಲಾಧ್ಯಕ್ಷರ ಆಯ್ಕೆ ಶಿವಮೊಗ್ಗ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಾರು ಎಂಬುದಕ್ಕೆ ಇನ್ನೊಂದು ವಾರದಲ್ಲಿಯೇ ಉತ್ತರ ಸಿಗಲಿದೆ. ತದನಂತರ ಪಕ್ಷದಲ್ಲಿ ಉಂಟಾಗಿರುವ ಎಲ್ಲ ಗೊಂದಲಗಳಿಗೂ ಉತ್ತರ ಸಿಗಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.ಬಿಜೆಪಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಆಂತರಿಕ ಗೊಂದಲಗಳ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆಂತರಿಕ ಗೊಂದಲಗಳು, ಬಹಿರಂಗ ಹೇಳಿಕೆಗಳಿಂದ ಪಕ್ಷಕ್ಕೆ ಎಷ್ಟು ಹಾನಿಯಾಗಬೇಕೋ ಅಷ್ಟು ಆಗಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಜವಾಬ್ದಾರಿಯ ಅರಿವು ನನಗಿರುವುದರಿಂದ ಕಳೆದೊಂದು ವರ್ಷದಿಂದ ಪಕ್ಷದ ಮುಖಂಡರು ಹಾಗೂ ಪಕ್ಷದ ವಿರುದ್ಧ ಯಾವುದೇ ಬಹಿರಂಗ ಹೇಳಿಕೆ ನೀಡಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಈ ಭ್ರಷ್ಟ-ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದೇನೆ ಎಂದರು.ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಮಂಡಲ, ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆಗೆ ಇಷ್ಟೊಂದು ವ್ಯವಸ್ಥಿತವಾಗಿ ಸಂಘಟಿತವಾಗಿ ನಡೆದಿರುವ ಚುನಾವಣೆ ಬೇರೆ ಎಲ್ಲೂ ನಡೆಯಲು…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿಯಲ್ಲಿ ಒಂದು ದೊಡ್ಡ ಕನಸು ಇಟ್ಟುಕೊಂಡು ಹಿರಿಯರು ಬಸವೇಶ್ವರ ದೇವಾಲಯ ಅಂತರಾಷ್ಟ್ರೀಯ ಶಾಲೆಯನ್ನು ಆರಂಭಿಸಿದ್ದಾರೆ. ಈ ಶಾಲೆಯು ಕೇವಲ ಬಸವನಬಾಗೇವಾಡಿ ಸಿಮೀತವಾಗದೇ ಇಡೀ ರಾಜ್ಯದಲ್ಲಿಯೇ ಆದರ್ಶಮಯವಾದ ಶಾಲೆಯಾಗಬೇಕೆಂದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಪಟ್ಟಣದ ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಬಸವೇಶ್ವರ ದೇವಾಲಯ ಅಂತರಾಷ್ಟ್ರೀಯ ಶಾಲಾ ಆವರಣದಲ್ಲಿ ಶಾಲೆಯ ೧೩ ನೇ ವಾರ್ಷಿಕೋತ್ಸವದಂಗವಾಗಿ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಕಲರ್‍ಸ್ ಆಪ್ ಕಲ್ಚರ್-೨೦೨೫ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರಿಗೆ ಡಾ.ರಾಧಾಕೃಷ್ಣನ್ ಆದರ್ಶವಾಗಿದ್ದಾರೆ. ಸಮಾಜದಲ್ಲಿ ಶಿಕ್ಷಕರಿಗೆ ಗೌರವಯುತವಾದ ಸ್ಥಾನವಿದೆ. ತಂದೆ-ತಾಯಿಗೆ ಗೌರವ ನೀಡಿದಂತೆ ಶಿಕ್ಷಕರಿಗೂ ಗೌರವ ನೀಡಲಾಗುತ್ತದೆ. ಉತ್ತಮ ಜ್ಞಾನ ನೀಡುವ ಶಿಕ್ಷಕರ ಕೊರತೆ ಇಂದು ಕಾಣುತ್ತಿದೆ. ಶಿಕ್ಷಕರು ಶಾಲೆಯಲ್ಲಿ ಕಲಿಸಿದ್ದನ್ನು ಪಾಲಕರು ತಮ್ಮ ಮಕ್ಕಳಿಗೆ ಮನೆಯಲ್ಲಿ ಕಲಿಸುವ ಜವಾಬ್ದಾರಿಯನ್ನು ಹೊಂದಿದ್ದಾರೆ. ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷಕರ-ಪಾಲಕರ ಪಾತ್ರವಿದೆ. ಈ ಶಾಲೆಯಲ್ಲಿ ಉತ್ತಮ ಬೋಧಕ ವೃಂದವಿರುವದು ಶ್ಲಾಘನೀಯ. ಶಾಲೆಯಿಂದ ಪ್ರತಿಭಾನ್ವಿತ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಪುರಸಭೆಯ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ಪುರಸಭೆ ಕಾರ್ಯಾಲಯದ ಸಹಯೋಗದಲ್ಲಿ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಇ-ಆಫೀಸ್ ನಾಗರಿಕ ಪೋರ್ಟಲ್‌ಗೆ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು, ಸರ್ಕಾರ ಜನರಿಗೆ ಪಾರದರ್ಶಕ ಆಡಳಿತ ನೀಡುವ ಉದ್ದೇಶದಿಂದ ಎಲ್ಲ ರೀತಿಯ ತಂತ್ರಾಂಶಗಳನ್ನು ಆಡಳಿತದಲ್ಲಿ ಬಳಕೆ ಮಾಡಿಕೊಳ್ಳುತ್ತಿದೆ. ಈ ದಿಶೆಯಲ್ಲಿ ಅಧಿಕಾರಿಗಳು ಜನರಿಗೆ ಸಮರ್ಪಕವಾದ ಕಾರ್ಯವನ್ನು ಮಾಡಿಕೊಡಬೇಕು. ಸರ್ಕಾರ ನಿಗದಿ ಪಡಿಸಿದ ಅವಧಿಯಲ್ಲಿ ಜನರ ಕೆಲಸಗಳನ್ನು ಮಾಡಿಕೊಡುವ ಮೂಲಕ ಅವರಿಗೆ ನೆರವಾಗಬೇಕು. ಜನರು ಪುರಸಭೆಯಲ್ಲಿ ಆರಂಭಿಸಿದ ಇ-ಆಫೀಸ್ ನಾಗರಿಕ ಪೋರ್ಟಲ್ ಸದುದುಪಯೋಗ ಪಡೆದುಕೊಳ್ಳಬೇಕೆಂದರು.ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ ಮಾತನಾಡಿ, ಈಗಾಗಲೇ ಸರ್ಕಾರ ಕಂದಾಯ ಇಲಾಖೆಯಲ್ಲಿ ಇ-ಆಫೀಸ್ ಪೋರ್ಟಲ್ ಆರಂಭಿಸಿದೆ. ಅದರಂತೆ ಮಹಾನಗರಪಾಲಿಕೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಇಂತಹ ಸೇವೆ ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ಆರಂಭಿಸಲಾಗಿದೆ. ಉತ್ತರ ಕರ್ನಾಟಕದಲ್ಲಿಯೇ ವಿಜಯಪುರ…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದಲ್ಲಿ ಸುಮಾರು ೪೦ ವರ್ಷದಿಂದ ಬ್ಯಾಂಕ ಸೇವೆಯನ್ನು ಗ್ರಾಹಕರ ಸಹಕಾರದಿಂದ ಉತ್ತಮ ವಹಿವಾಟಿನೊಂದಿಗೆ ನಡೆಸುತ್ತಾ ಬಂದಿದ್ದು, ಬಹುದಿನಗಳಿಂದ ಈ ಭಾಗದ ಬೇಡಿಕೆಯಂತೆ ಬ್ಯಾಂಕ್ ಆಫ್ ಬರೋಡಾದ ಕಲಕೇರಿ ಶಾಖೆಯ ನೂತನ ಸುಸಜ್ಜಿತ ಕಟ್ಟಡದಲ್ಲಿ ಉದ್ಘಾಟನೆಗೊಂಡಿದ್ದು, ಈ ಮೂಲಕ ಮತ್ತಷ್ಟು ಉತ್ತಮವಾದ ಸೇವೆಯನ್ನು ಗ್ರಾಹಕರಿಗೆ ಒದಗಿಸುತ್ತೇವೆ ಎಂದು ಕಲಬುರಗಿ ಪ್ರಾದೇಶಿಕ ವ್ಯವಸ್ಥಾಪಕರಾದ ವಿ.ರವೀಂದ್ರಬಾಬು ಅವರು ಹೇಳಿದರು.ಕಲಕೇರಿಯ ಬ್ಯಾಂಕ್ ಆಫ್ ಬರೋಡಾ ಶಾಖೆಯು ವಿಜಯಪುರ ರಸ್ತೆಯ ಕಿತ್ತೂರು ರಾಣಿ ಚನ್ನಮ್ಮ ಸರ್ಕಲ್ ಹತ್ತಿರ ನೂತನ ಸುಸಜ್ಜಿನ ಕಟ್ಟಡಕ್ಕೆ ಸ್ಥಾಳಾಂತರಗೊಂಡ ಹಿನ್ನೆಲೆಯಲ್ಲಿ ಶಾಖೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಇದೇ ವೇಳೆ ಶಾಖಾ ವ್ಯವಸ್ಥಾಪಕರಾದ ಶ್ರೀನಿವಾಸ ನಾಯ್ಡು, ಸಹಾಯಕ ವ್ಯವಸ್ಥಾಪಕರಾದ ಚಂದ್ರಶೇಖರ ರಾಠೋಡ, ಶ್ಯಾಮಸುಂದರ, ವಿನೋದಕುಮಾರ, ಭವಾನಿ ಪ್ರಸಾದ, ಸಿಬ್ಬಂದಿಗಳಾದ ಅಂಭಾಜಿ ಪವಾರ, ಗೂಳಪ್ಪ ವಡ್ಡೋಡಗಿ, ಗುರುರಾಜ ಅಡಕಿ, ಸಾಯಿನಾಥ ನಾಯ್ಕ್, ಮಾಹಾಂತೇಶ ಮಾಗಣಗೇರಿ, ಪ್ರಜ್ವಲ್ ಅಡಕಿ, ರಾಜಶೇಖರ ಜಂಬಗಿ ಸೇರಿದಂತೆ ಕಲಕೇರಿ,ತಿಳಗೂಳ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಗಣ್ಯರು ಮತ್ತು ಬ್ಯಾಂಕ್ ಗ್ರಾಹಕರು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ರೈತ ಒಂದು ವರ್ಷ ದುಡಿದರೆ ಭಿವಿಷ್ಯದ ವರ್ಷಕ್ಕೆ ಸಾಕಾಗುವಷ್ಟು ಆಹಾರ ಸಂಗ್ರಹಿಸುತ್ತಾನೆ. ಆದರೆ ವಿದ್ಯಾರ್ಥಿಗಳು ಕಷ್ಟಪಟ್ಟು ಅಧ್ಯಯನ ಮಾಡಿದರೆ ಇಡೀ ಜೀವನಪರ್ಯಂತ ಸಾಕಾಗುವಷ್ಟು ಜ್ಞಾನವೆಂಬ ಆಹಾರ ಸಂಗ್ರಹಿಸಬಹುದು. ಆದ್ದರಿಂದ ವಿದ್ಯಾರ್ಥಿಗಳ ಭವಿಷ್ಯ ತಮ್ಮ ಕೈಯಲ್ಲಿದೆ. ತಮ್ಮ ಹಣೆಯ ಬರಹವನ್ನು ತಾವೇ ಬರೆದುಕೊಳ್ಳಬೇಕು ಎಂದು ನಿವೃತ್ತ ಪ್ರಾಚಾರ್ಯ ಎ.ಪಿ. ಕಾಗವಾಡ ಹೇಳಿದರು.ತಾಲ್ಲೂಕಿನ ಲಚ್ಯಾಣ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.ತಾರುಣ್ಯದಲ್ಲಿ ಕಷ್ಟಪಟ್ಟು ದುಡಿದರೆ ವೃದ್ಧಾಪ್ಯದಲ್ಲಿ ಅದೇ ಫಲವಾಗಿ ನೆಮ್ಮದಿ ನೆಮ್ಮದಿ ನೀಡುತ್ತದೆ. ವಿದ್ಯಾರ್ಥಿಗಳು ಪಾಲಕರ ಕನಸನ್ನು ಈಡೇರಿಸಿದಂತಾಗುತ್ತದೆ. ಅವರ ಉದರದಲ್ಲಿ ಹುಟ್ಟಿದ್ದು ಸಾರ್ಥಕವಾಗುತ್ತದೆ ಎಂದರು.ಎಂ.ಎಂ. ಮುಜಗೊಂಡ ಮಾತನಾಡಿ, ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಉತ್ತಮ ಪಾಠ ಬೋಧನೆಯ ಮೂಲಕ ಶೈಕ್ಷಣಿಕ ವಾತಾವರಣ ನಿರ್ಮಾಣ ಮಾಡಿದ್ದಾರೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಿದಾಗ ಮಾತ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಲ ವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಇದೇ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ರೈತ ಬಾಂಧವರಿಗೆ ಎರೆಹುಳು ಗೊಬ್ಬರ ತಯಾರಿಸುವ ಮಾಹಿತಿ ಕುರಿತು ಪಟ್ಟಣದ ಸ್ಟೇಷನ್ ರಸ್ತೆಯಲ್ಲಿರುವ ಕೃಷಿ ಉಪ ನಿರ್ದೇಶಕರ ಕಚೇರಿಯ ಸಬಾಭವನದಲ್ಲಿ ಬೆಳಗ್ಗೆ ೧೧ ಗಂಟೆಗೆ ಫೆ ೪ ರಂದು ತರಬೇತಿ ನೀಡಲಾಗುವದು ಎಂದು ಕೃಷಿ ಉಪ ನಿರ್ದೇಶಕ ಚಂದ್ರಕಾಂತ ಪವಾರ ತಿಳಿಸಿದ್ದಾರೆ.ಎರೆಹುಳು ಬೆಳೆಯುವ ವಿಧಾನ, ಅದಕ್ಕೆ ಬೇಕಾಗುವ ಜಾಗದ ವಿಸ್ತೀರ್ಣದ ಮಾಹಿತಿ, ಮತ್ತು ಎರೆಹುಳು ಸಿಗುವ ಮಾಹಿತಿ ಮತ್ತು ಬೇಕಾಗುವ ಪದಾರ್ಥಗಳ ಜೊತೆಗೆ ಸರಕಾರದಿಂದ ಸವಲತ್ತುಗಳ ಕುರಿತು ಮಾಹಿತಿ ನೀಡಲಾಗುವದು ಎಂದು ಪವಾರ ತಿಳಿಸಿದ್ದಾರೆ.ಕೇವಲ ಮೂವತ್ತು ಜನ ರೈತರಿಗೆ ಮಾತ್ರ ಪ್ರವೇಶವಿದೆ. ಪ್ರಾತ್ಯಕ್ಷಿಕೆ ಮೂಲಕ ರೈತರಿಗೆ ಮಾಹಿತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ೦೮೩೫೯ ೨೨೫೦೮೦ ಸಂಪರ್ಕಿಸಲು ಕೋರಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪದ್ಮರಾಜ ವಿದ್ಯಾರ್ಧಕ ಸಂಸ್ಥೆಯು ಪ್ರಾಚೀನ ಕಾಲದ ನಳಂದ ವಿಶ್ವವಿದ್ಯಾಲಯದಂತೆ ಕಾರ್ಯನಿರ್ವಹಿಸುತ್ತಿದೆ. ಕಲ್ಯಾಣ ಕರ್ನಾಟಕದ ಎಲ್ಲ ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದೆ ಎಂದು ಸಾಲೋಟಗಿಯ ಶ್ರೀ ಶಿವಯೋಗೇಶ್ವರ ಪಪೂ ಕಾಲೇಜಿನ ನಿವೃತ್ತ ಪ್ರಾಚಾರ್ಯ ಸಿ.ಎಸ್.ಮಂಗಳೂರು ಹೇಳಿದರು.ಸಿಂದಗಿ ಪಟ್ಟಣದ ಮಹಾವಿದ್ಯಾಲಯದ ಸಭಾಭವನದಲ್ಲಿ ಶ್ರೀ ಪದ್ಮರಾಜ ಮಹಿಳಾ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪಪೂ ಕಾಲೇಜಿನಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಓದುವ ವಿದ್ಯಾರ್ಥಿಗಳಿಗೆ, ಬಡ ವಿದ್ಯಾರ್ಥಿಗಳಿಗೆ ಉಪನ್ಯಾಸಕರು ಪ್ರೋತ್ಸಾಹವನ್ನು ನೀಡುತ್ತಾ ಸೇವಾ ಮನೋಭವನೆಯಿಂದ ಕರ್ತವ್ಯವನ್ನು ನಿರ್ವಹಿಸಿ ತಮ್ಮ ವಿದ್ಯೆಯನ್ನು ಧಾರೆ ಎರೆಯುವವರಾಗಿದ್ದಾರೆ ಎಂದರು.ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿದ ಸಂಸ್ಥೆಯ ಚೇರಮನ್‌ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಮಾತನಾಡಿ, ಮಹಿಳೆಯರು ಯಾರ ಮೇಲೆಯೂ ಅವಲಂಬಿತರಾಗದೇ ಸ್ವಾವಲಂಬಿಗಳಾಗಬೇಕು. ವಿದ್ಯಾರ್ಥಿನಿಯರು ತಮ್ಮ ಜೀವನದಲ್ಲಿ ಶಿಕ್ಷಣದ ಜೊತೆಗೆ ವಿವಿಧ ಕೌಶಲ್ಯಗಳನ್ನು ಅಳವಡಿಸಿಕೊಂಡು ಕೌಶಲ್ಯಾಧಾರಿತ ಉದ್ಯೋಗಗಳನ್ನು ಪಡೆದು ಉನ್ನತ ಸ್ಥಾನಕ್ಕೆ ಬರಬೇಕೆಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.ಈ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಮಾಜದಲ್ಲಿ ಮಕ್ಕಳಿಗೆ ನೈತಿಕ ಶಿಕ್ಷಣ ನೀಡುವುದು ಅವಶ್ಯಕವಾಗಿದ್ದು, ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಕುಟುಂಬದಿAದಲೇ ನೀಡಬೇಕು ಎಂದು ವಿಜಯಪುರದ ರಾಮಕೃಷ್ಣ ಆಶ್ರಮದ ಸ್ವಾಮಿ ನರೇಶಾನಂದರು ಹೇಳಿದರು. ಸಿಂದಗಿ ಪಟ್ಟಣದ ಬಂದಾಳ ರಸ್ತೆಯಲ್ಲಿರುವ ವಿವೇಕ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ವಿವೇಕ ಸಿರಿ ಸಂಭ್ರಮ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು ಇಂದಿನ ಮಕ್ಕಳು ಬೌದ್ಧಿಕವಾಗಿ ಚುರುಕಾಗಿದ್ದಾರೆ. ಆದರೆ ನೈತಿಕವಾಗಿ ಕುಸಿಯುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.ಮುಖ್ಯ ಅತಿಥಿಗಳಾಗಿದ್ದ ಬಿ.ಎಲ್.ಡಿ ಸಂಸ್ಥೆಯ ಬಿ.ಎಮ್.ಪಾಟೀಲ್ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ರವಿಕುಮಾರ್ ಮತ್ತು ನಾನು ಶಾಲೆಯಲ್ಲಿ ಓದಿದ್ದೇವೆ. ಈ ಶಾಲೆಯ ಬಗ್ಗೆ ನನಗೆ ಹೆಮ್ಮೆ ಇದೆ ಎಂದರು. ಈ ವೇಳೆ ಅಧ್ಯಕ್ಷೀಯ ನುಡಿಗಳನ್ನಾಡಿದ ಎಚ್.ಜಿ.ಪಪೂ ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಮಾತನಾಡಿ, ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಚಾಲಕ, ಬಾಲಕ ಮತ್ತು ಪಾಲಕರ ಪಾತ್ರ ಪ್ರಮುಖವಾಗಿದೆ ಎಂದರು. ಇದೇ ಸಂದರ್ಭದಲ್ಲಿ ಶಾಲೆಯ ಪ್ರಾಚಾರ್ಯ ಶ್ರೀಮತಿ ಶಾಹಿಮೂಲ್ ಟಿ. ರಾಬಿನ್ ಶಾಲೆಯ ಶೈಕ್ಷಣಿಕ ವರದಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪರಿಸರದ ಕಾಳಜಿ ಕೇವಲ ವಾಟ್ಸಪ್ ಸ್ಟೇಟಸಗೆ ಸೀಮಿತವಾಗಬಾರದು. ಪರಿಸರದ ಉಳಿವಿಗಾಗಿ ಪ್ರತಿಯೊಬ್ಬರು ಒಂದೊಂದು ಮರ ನೆಟ್ಟು, ಪೋಷಣೆ ಮಾಡಿ ಪರಿಸರ ಸಂರಕ್ಷಣೆ ಮಾಡಬೇಕು ಎಂದು ನಟ ನಿರ್ದೇಶಕ ವಿಶ್ವಪ್ರಕಾಶ ಮಲಗೊಂಡ ಹೇಳಿದರು.ಸಿಂದಗಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂಗಮ ಯುವ ಒಕ್ಕೂಟ ಹಾಗೂ ಸಂಗಮ ಸಮಗ್ರ ಗ್ರಾಮಿಣಾಅಭಿವೃದ್ಧಿ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡ ವೃಕ್ಷಥಾನ್ ಜಾಥಾದಲ್ಲಿ ಮಾತನಾಡಿದ ಅವರು, ಮರ ಗಿಡಗಳು ಮನುಷ್ಯನಿಗೆ ಶುದ್ಧ ಗಾಳಿ, ನೆರಳು, ಹಣ್ಣು ನೀಡುತ್ತವೆ. ಆದರೆ ಮಾನವನ ತನ್ನ ಸ್ವಾರ್ಥ ಮತ್ತು ದುರಾಸೆಯಿಂದ ಇಂದು ಪರಿಸರ ನಾಶವಾಗುತ್ತಿದೆ. ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರ ಆದ್ಯ ಕರ್ತವ್ಯ. ಈ ದಿಸೆಯಲ್ಲಿ ಸಂಗಮ ಸಂಸ್ಥೆ ಪರಿಸರದ ಕಾಳಜಿಯ ಜೊತೆಗೆ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು.ಈ ವೇಳೆ ದೇವರ ಹಿಪ್ಪರಗಿ ಜೆ.ಎಮ್.ಜೆ ನಿರ್ದೇಶಕಿ ಸಿಸ್ಟರ್ ಹೃದಯಾ ಮಾತನಾಡಿ, ಪರಿಸರ ನಾಶದಿಂದ ಜಾಗತಿಕ ತಾಪಮಾನ ಹೆಚ್ಚಳವಾಗುತ್ತಿದ್ದು, ಶಾಲೆಯ ಪ್ರತಿಯೊಬ್ಬ ವಿದ್ಯಾರ್ಥಿಯು ಪರಿಸರವನ್ನು ಉಳಿಸಿ ಬೆಳೆಸುವಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಜಾತ್ರಾ ಮಹೋತ್ಸವದ ಅಂಗವಾಗಿ ಜರುಗುವ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜನರಲ್ಲಿ ಭಕ್ತಿಭಾವಗಳನ್ನು ಜಾಗೃತಿಗೊಳಿಸುವುದರ ಜೊತೆಗೆ ಐಕ್ಯತೆಯನ್ನುಂಟು ಮಾಡುತ್ತವೆ ಎಂದು ಸಿದ್ಧರಾಮ ಸ್ವಾಮೀಜಿ ಹೇಳಿದರು.ಪಟ್ಟಣದ ಗಂಗಾನಗರದಲ್ಲಿ ಶನಿವಾರ ಬಾಲಹನುಮಾನ ದೇವಸ್ಥಾನದ ೧೧ ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪುರಾಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಇಂದು ಜಾತ್ರೆಯ ಅಂಗವಾಗಿ ಧರ್ಮಸಭೆ, ನಾಟಕ, ರಸಮಂಜರಿ, ಡೋಳ್ಳಿನ ಪದ, ಭಾರ ಎತ್ತುವ ಸ್ಪರ್ಧೆ ಸಹಿತ ಹತ್ತುಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.ಪಟ್ಟಣ ಪಂಚಾಯಿತಿ ಸದಸ್ಯ ಕಾಸುಗೌಡ ಬಿರಾದಾರ ಮಾತನಾಡಿ, ನಿಂಗು ಯಂಭತ್ನಾಳ ನೇತೃತ್ವದಲ್ಲಿ ಮಾಲಾಧಾರಿಗಳು ಸತತ ೧೧ನೇ ವರ್ಷದಲ್ಲಿ ಯಶಸ್ವಿಯಾಗಿ ಜಾತ್ರಾ ಮಹೋತ್ಸವ ನಡೆಸಿಕೊಂಡು ಬರುತ್ತಿರುವುದು ಅತ್ಯಂತ ಸಮಯೋಚಿತ ಹಾಗೂ ಅನುಕರಣೀಯ ಕಾರ್ಯ ಎಂದರು.ಕಾರ್ಯಕ್ರಮದಲ್ಲಿ ಗಾಯಕ ಸಿದ್ಧಯ್ಯಸ್ವಾಮಿ ಪಡದಹಳ್ಳಿ, ತಬಲಾ ವಾದಕ ಮಲ್ಲಿಕಾರ್ಜುನ ಜೇವರಗಿ, ಸಂಘಟಕ ನಿಂಗು ಯಂಭತ್ನಾಳ, ಬಾಬು ಸೌದಿ, ಕಾಶೀನಾಥ ರಾಮಗೊಂಡ, ಬಸವರಾಜ ಕುಂಬಾರ ಶ್ರೀಶೈಲ ಸೌದಿ, ಜಟ್ಟೆಪ್ಪ ಪೂಜಾರಿ ಸಹಿತ ಮಾಲಾಧಾರಿಗಳು, ಭಕ್ತರು ಇದ್ದರು.

Read More