Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ ಸ್ವಾಗತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ೨೦೨೫ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ೧,೨೮,೬೫೦ ಕೋಟಿ ಮೀಸಲಿಟ್ಟಿರುವುದನ್ನು ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ ಸ್ವಾಗತಿಸಿದ್ದಾರೆ.ಇದು ಹಿಂದಿನ ವರ್ಷಕ್ಕಿಂತ ೬.೬೫% ಹೆಚ್ಚಾಗಿದೆ ಎಂದಿದ್ದಾರೆ.ಶಿಕ್ಷಣ ಮೂಲಸೌಕರ್ಯವನ್ನು ವಿಸ್ತರಿಸುವ, ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸುವ, ಸಂಶೋಧನೆ ಮತ್ತು ಆವಿಷ್ಕಾರವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಬಜೆಟ್ ಒಂದು ಪ್ರಮುಖ ಹೆಜ್ಜೆ ಎಂದು ಅರುಣ್ ಶಹಾಪುರ ಹೇಳಿದ್ದಾರೆ.ಪ್ರಧಾನಮಂತ್ರಿ ಶ್ರೀ ಯೋಜನೆಗೆ ೭,೫೦೦ ಕೋಟಿ, ಪ್ರಧಾನಮಂತ್ರಿ ಪೋಷಣ ಯೋಜನೆಗೆ ೧೨,೫೦೦ಕೋಟಿ ಮತ್ತು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ೫೦,೦೭೭.೯೫ ಕೋಟಿ ಬಜೆಟ್‌ನಲ್ಲಿ ಹಂಚಿಕೆ ಮಾಡಿರುವುದು ಸಕಾರಾತ್ಮಕ ಎಂದು ಅರುಣ್ ಶಹಾಪುರ ಮಾಜಿ ಎಂಎಲ್‌ಸಿ ವಿವರಿಸಿದ್ದಾರೆ.ಇದರೊಂದಿಗೆ ದೇಶದ ೫ ಐಐಟಿಗಳಲ್ಲಿ ೬,೫೦೦ ಹೊಸ ಸೀಟುಗಳು, ಮುಂದಿನ ೫ ವರ್ಷಗಳಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ೭೫,೦೦೦ ಹೊಸ ಸೀಟುಗಳು, ೫೦,೦೦೦ ಅಟಲ್ ಟಿಂಕರಿಂಗ್ ಲ್ಯಾಬ್‌ಗಳು ಮತ್ತು ಆರ್ಟಿಫಿಶಿಯಲ್…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕೇಂದ್ರ ಸರ್ಕಾರದ ಇಂದಿನ ಬಜೆಟ್ ಸದೃಡ ಭಾರತದ ಬುನಾದಿಯಾಗಿದೆ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಾ ಹೇಳಿದ್ದಾರೆ.ಕೇಂದ್ರ ಸರ್ಕಾರದ ಬಜೆಟ್ ಮಂಡನೆ ಕುರಿತು ಶನಿವಾರ ಪತ್ರಿಕಾ ಹೇಳಿಕೆ ನೀಡಿದ ಅವರು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ ೮ನೇ ಬಾರಿ ಭಾರತದ ಭವಿಷ್ಯವನ್ನು ಮುಂದಿಟ್ಟುಕೊಂಡು ಬಜೆಟ್ ಮಂಡಿಸಿ ರಾಷ್ಟ್ರ ರಾಜಕಾರಣದಲ್ಲಿ ಇತಿಹಾಸ ಸೃಷ್ಠಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಬಜೆಟ್ ಸ್ವಾಗತಾರ್ಹ. ಬಡತನ ನಿರ್ಮೂಲನೆಗಾಗಿ ಅಭಿವೃದ್ದಿಯ ಹೆಜ್ಜೆಯನ್ನಿಟ್ಟಿರುವ ಕೇಂದ್ರ ಸರ್ಕಾರ ೨೦೨೪ರ ವಿಶ್ವ ಮುಂಚೂಣಿಯ ಭವಿಷ್ಯವನ್ನು ಮುಂದಿಟ್ಟುಕೊಂಡು ಬಜೆಟ್ ಮಂಡಿಸಿದೆ. ದೇಶದ ಸಾರಿಗೆ ಕೈಗಾರಿಕೆ, ಉದ್ಯೋಗ, ವೈದ್ಯಕೀಯ, ಶಿಕ್ಷಣ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ದಿಗೆ ಒತ್ತು ಕೊಟ್ಟಿದೆ ಎಂದು ಶ್ರೀಶೈಲಗೌಡ ಬಿರಾದಾರ ಹರ್ಷ ವ್ಯಕ್ತಪಡಿಸಿದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕೇಂದ್ರ ಸರ್ಕಾರ ಮಂಡಿಸಿದ ಈ ಬಾರಿಯ ಬಜೆಟ್ ಕೇವಲ ಉದ್ಯಮದಾರರಿಗೆ ಸೀಮಿತವಾದಂತಿದೆ ಎಂದು ಶಾಸಕ ಅಶೋಕ ಮನಗೂಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಈ ಕುರಿತು ಶನಿವಾರ ಪತ್ರಿಕೆಗೆ ತಿಳಿಸಿದ ಅವರು, ರಾಜ್ಯದ ಜನ ನಿರೀಕ್ಷೆಗೆ ತಕ್ಕಂತೆ ಯಾವ ಬಹುದೊಡ್ಡ ಯೋಜನೆಗಳು ಈ ಬಾರಿಯ ಬಜೆಟ್ ನಲ್ಲಿ ಕಂಡಿಲ್ಲ ಹೀಗಾಗಿ ರಾಜ್ಯದ ನಿರೀಕ್ಷೆಗೆ ಈ ಬಜೆಟ್ ಶೂನ್ಯವಾಗಿದೆ. ಮಧ್ಯಮ ವರ್ಗದ ಜನತೆಗೆ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಯಾವುದೇ ರೀತಿಯ ಅನುಕೂಲವಾಗುವಂತ ಯೋಜನೆಗಳು ಇಲ್ಲ. ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡುವಂತ ಯೋಜನೆ, ರೈತರನ್ನ ಅಭಿವೃದ್ಧಿಪಡಿಸುವ ಯೋಜನೆಗಳು ಈ ಬಾರಿಯ ಬಜೆಟ್ ನಲ್ಲಿ ಇರದೇ ಇರುವುದರಿಂದ ಇದು ಒಂದು ರೀತಿಯ ರೈತ ವಿರೋಧಿ ಬಜೆಟ್ ಆಗಿದೆ. ರಾಜ್ಯದ ಅಭಿವೃದ್ಧಿಗೆ ಸಿಗಬೇಕಾಗಿರುವ ಅನುದಾನ ಯೋಗ್ಯವಾಗಿ ಸಿಗದೇ ಇರುವುದು ಅಸಮಾಧಾನವಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಬೇಸರ ವ್ಯಕ್ತಪಡಿಸಿದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳ ಜೀವನದಲ್ಲಿ ಹತ್ತನೇ ತರಗತಿ ಫಲಿತಾಂಶ ಅತಿ ಅಮೂಲ್ಯವಾದದ್ದು ಎಂದು ವಿಜಯಪುರ ಗ್ರಾಮೀಣವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ ಬಳೋಲಮಟ್ಟಿ ಹೇಳಿದರು.ನಗರದ ಟಕ್ಕೆಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳ ಫಲಿತಾಂಶ ಸುಧಾರಣೆ ಸಲುವಾಗಿ ಶನಿವಾರ ನಡೆದ ಫೋನ್ ಇನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಜುಮನಾಳ ಸರ್ಕಾರಿ ಪ್ರೌಢ ಶಾಲೆಯ ಪೃಥ್ವಿ ಬಿರಾದಾರ ಮಗುವಿನ ಮೊದಲ ಫೋನ್ ಕರೆ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.ಈ ಪರೀಕ್ಷೆ ನಿಮ್ಮ ಜೀವನದಲ್ಲಿ ಅತಿ ಅಮೂಲ್ಯವಾದದ್ದು, ನೀವು ಚೆನ್ನಾಗಿ ಅಧ್ಯಯನ ಮಾಡಿ ಉತ್ತಮ ರೀತಿಯಲ್ಲಿ ಪರೀಕ್ಷೆಗೆ ಸಿದ್ಧರಾಗಿ ನೀವು ಚೆನ್ನಾಗಿ ಅಧ್ಯಯನ ಮಾಡಿ ಉತ್ತಮ ರೀತಿಯಲ್ಲಿ ಪರೀಕ್ಷೆಗೆ ಸಿದ್ಧರಾಗಿ ಪರೀಕ್ಷೆಯಲ್ಲಿ ಜಲ ಜಯಶಾಲಿಗಳಾಗಿ ಬನ್ನಿ ಎಂದು ಹಾರೈಸಿದರು.ಆರಂಭ ದಿನವಾದ ಇಂದು ಒಟ್ಟು 142 ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಕನ್ನಡದ ವಿಷಯದಲ್ಲಿ ಬರುವಂತಹ ಹಳೆಗನ್ನಡ ಹೊಸಗನ್ನಡ ವ್ಯಾಕರಣ ಅಂಶಗಳನ್ನು ನೆನಪಿನ ಬಗ್ಗೆ ಅನ್ನ ವಿವರಿಸಿದರು. ಅದೇ ರೀತಿ ಗಣಿತ ವಿಷಯದಲ್ಲಿ ಕೂಡ ಸೂತ್ರಗಳು…
ಜಿಲ್ಲಾ ಪಂಚಾಯತಿ ಆವರಣ ಹಸಿರುಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಪಂ ಸಿಇಓ ರಿಷಿ ಆನಂದ ನಿರ್ಧಾರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರತಿಯೊಂದು ಹಂತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಅರಣ್ಯ ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯಾದ್ಯಂತ ಅರಣ್ಯೀಕರಣ ಹಾಗೂ ಹಸಿರುಕರಣಕ್ಕೆ ಹೆಚ್ಚು ಒತ್ತು ನೀಡಿದ್ದರ ಪರಿಣಾಮ ಪ್ರಸ್ತುತ ವರ್ಷದಲ್ಲಿ ಉತ್ತಮ “ವಾಯು ಗುಣಮಟ್ಟದ ಸೂಚ್ಯಂಕ”ದಲ್ಲಿ ದೇಶದಲ್ಲಿಯೇ ವಿಜಯಪುರ ಜಿಲ್ಲೆ ೩ನೇ ಸ್ಥಾನ ಪಡೆದಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಹೇಳಿದರು.ನಗರದ ಜಿಲ್ಲಾ ಪಂಚಾಯತಿಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ “ಜಿಲ್ಲಾ ಪಂಚಾಯತಿ ಆವರಣ ಹಸಿರುಕರಣ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಚ್ಛತೆ ಹಾಗೂ ಹಸಿರುಕರಣಕ್ಕೆ ಇನ್ನೂ ಹೆಚ್ಚಿನ ಮಟ್ಟದ ಆದ್ಯತೆ ನೀಡಲಾಗುತ್ತಿದ್ದು, ಜಿಲ್ಲಾ ಪಂಚಾಯತಿಯಲ್ಲಿಯೂ ಸಹ ಹಸಿರೀಕರಣ ಹಾಗೂ ಸ್ವಚ್ಛತೆಯ ವಿನೂತನ ಪರಿಕಲ್ಪನೆ ಕೈಗೆತ್ತಿಕೊಳ್ಳಲಾಗಿದೆ. ಇದಕ್ಕೆ ಪೂರಕವಾಗಿ ಜಿಲ್ಲಾ ಪಂಚಾಯತಿಯ ಒಳ ಮತ್ತು ಹೊರ ಆವರಣಗಳಲ್ಲಿ ನಿರಂತರವಾಗಿ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ “ಸ್ವಚ್ಛ ಶನಿವಾರ” ಪರಿಕಲ್ಪನೆಯನ್ನು ಆರಂಭಿಸಲಾಗಿದೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೇಲ್ಕಾಣಿಸಿದ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮಹಾನಗರಪಾಲಿಕೆ ಕಾಯ್ದೆ ೧೯೭೬ರ ಶೆಡ್ಯೂಲ್ ಘಿ ನಂತೆ ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಉದ್ದಿಮೆದಾರರು ತಮ್ಮ ಉದ್ದಿಮೆ ಪರವಾನಿಗೆ ಪಡೆಯುವುದು ಕಡ್ಡಾಯವಾಗಿರುತ್ತದೆ.ಅದರಂತೆ ವಿಜಯಪುರ ಮಹಾನಗರಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆದಾರರು ಒಂದು ವರ್ಷ ಆಥವಾ ಐದು ವರ್ಷದ ಅವಧಿ ವರೆಗೆ ಉದ್ದಿಮೆ ಪರವಾನಿಗೆಯನ್ನು ಪಡೆಯಬಹುದಾಗಿರುತ್ತದೆ. ಅರ್ಜಿದಾರರು ನೇರವಾಗಿ ನಿಗಧಿತ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮಹಾನಗರ ಪಾಲಿಕೆ ಕಛೇರಿಗೆ ಸಲ್ಲಿಸಬಹುದಾಗಿದೆ. ಈಗಾಗಲೇ ಪರವಾನಗಿ ಪಡೆದ ಉದ್ದಿಮೆದಾರರು ತಮ್ಮ ಉದ್ದಿಮೆಯನ್ನು ೨೦೨೪-೨೫ನೇ ಸಾಲಿಗೆ ನವೀಕರಣಗೊಳಿಸಲು ತಿಳಿಸಲಾಗಿದೆ.ಉದ್ದಿಮೆ ಪರವಾನಿಗೆಯನ್ನು ಪಡೆಯದ/ನವೀಕರಣ ಗೊಳಿಸದ ಉದ್ದಿಮೆದಾರರ ವಿರುದ್ಧ ಕರ್ನಾಟಕ ಮಹಾನಗರಪಾಲಿಕೆ ಕಾಯ್ದೆ-೧೯೭೬ರ ಕಲಂ ೩೫೩ರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದಿಂದ ಉತ್ತರ ಪ್ರದೇಶದ ಪ್ರಯಾಗರಾಜದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಹೋಗುವ ಪ್ರಯಾಣಿಕರ ಅನುಕೂಲಕ್ಕಾಗಿ ಕಕರಸಾ ನಿಗಮ ವಿಜಯಪುರ ವಿಭಾಗದಿಂದ ಕರಾರು ಒಪ್ಪಂದದ ಮೇರೆಗೆ ನಾನ್ ಎಸಿ ಸ್ಲೀಪರ ಹಾಗೂ ವೇಗದೂತ ಬಸ್ಸುಗಳನ್ನು ಬಿಡಲಾಗುವುದು. ಪ್ರಯಾಣಿಕರು ಇದರ ಸದುಪಯೋಗ ಪಡೆಸಿಕೊಳ್ಳುವಂತೆ ವಿನಂತಿಸಲಾಗಿದೆ.ಪ್ರಯಾಣಿಕರು ಕೆಳಗೆ ನಮೂದಿಸಿದ ಕರಾರು ಒಪ್ಪಂದದ ಸಾರಿಗೆ ನಿಗಮದ ಅಧಿಕಾರಿಗಳನ್ನು ಸಂಪರ್ಕಿಸಬಹುದು.ವಿಜಯಪುರ ೧ನೇ ಘಟಕದ ವ್ಯವಸ್ಥಾಪಕರ ಮೊ.ಸಂ ೭೭೬೦೯೯೨೨೬೩, ೨ನೇ ಘಟಕದ ೭೭೬೦೯೯೨೨೬೪, ಇಂಡಿ- ೭೭೬೦೯೯೨೨೬೫, ಸಿಂದಗಿ- ೭೭೬೦೯೯೨೨೬೬, ಮುದ್ದೇಬಿಹಾಳ- ೭೭೬೦೯೯೨೨೬೭, ತಾಳಿಕೋಟ- ೭೭೬೦೯೯೨೨೬೮, ಬ.ಬಾಗೇವಾಡಿ- ೭೭೬೦೯೯೨೨೬೯, ವಿಜಯಪುರ ಕೇಂದ್ರ ಬಸ್ ನಿಲ್ದಾಣಾಧಿಕಾರಿ ಮೋ ಸಂ -೭೭೬೦೯೯೨೨೫೮ ಹೆಚ್ಚಿನ ಮಾಹಿತಿಗಾಗಿ ವಿಭಾಗೀಯ ಸಾರಿಗೆ ಅಧಿಕಾರಿ ಮೊ.ಸಂ-೭೭೬೦೯೯೨೨೫೨ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬೋಳಚಿಕ್ಕಲಕಿ ಗ್ರಾಮದ ಸರ್ಕಾರಿ ಸನಮ.೨೩// ರಲ್ಲಿ ಒಟ್ಟು ೨೮ಎ-೨೬ಗು ಬಾಕಿ ಉಳಿದ ಕ್ಷೇತ್ರ: ೧೮ಎ-೦೧ ಗು ಪೈಕಿ ೨-೦೦ ಎಕರೆ ಸರಕಾರಿ ಜಮೀನನ್ನು ಡಾ. ಬಿ.ಆರ್. ಅಂಬೇಡ್ಕರ ಭವನ ನಿರ್ಮಾಣಕ್ಕಾಗಿ ಜಮೀನನ್ನು ಮಂಜೂರು ಮಾಡಿಸುವ ಕುರಿತು ಗಾಯರಾಣ ಜಮೀನು ಮಂಜೂರಿಸುವ ಕುರಿತು ಅದಿಸೂಚಿಯಲ್ಲಿ ತಿಳಿಸಿರುವಂತೆ ಸಾರ್ವಜನಿಕರ ಆಕ್ಷೇಪಣೆಗಳಿದ್ದಲ್ಲಿ ಈ ಅಧಿಸೂಚನೆ ಹೊರಡಿಸಿದ ೩೦ ದಿನಗಳೊಳಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಲಿಖಿತವಾಗಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಿಡಗುಂದಿ ತಾಲೂಕಿನ ಆಲಮಟ್ಟಿ ಡ್ಯಾಂ ಸೈಟನಲ್ಲಿ ಒಟ್ಟು ೨ ಪರೀಕ್ಷಾ ಕೇಂದ್ರಗಳಲ್ಲಿ ಫೆಬ್ರವರಿ ೮ರಂದು ಜವಾಹರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಗಳು ಜರುಗಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ದಿನದಂದು ಬೆಳಿಗ್ಗೆ ೮ ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ನಿಷೇಧಿತ ಪ್ರದೇಶವೆಂದು ಘೋಷಿಸಿದೆ ಹಾಗೂ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರನೆಟ್, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಲಾಗಿದೆ.
ವಿಜಯಪುರದಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಅಭಿಯಾನ ಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ತ ಗುಣಾರಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಪದವಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಜ.೩೦ರಂದು ಹಮ್ಮಿಕೊಂಡ “ಸ್ವರ್ಶ ಕುಷ್ಠರೋಗ ಅರಿವು ಅಭಿಯಾನ ಕಾರ್ಯಕ್ರಮದ ಜಾಗೃತಿ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ತ ಗುಣಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ಉಪ ನಿರ್ದೇಶಕಿ ಡಾ. ಚನ್ನಮ್ಮ ಕಟ್ಟಿ ಜಂಟಿಯಾಗಿ ಚಾಲನೆ ನೀಡಿದರು.ಕುಟುಂಬ ಕಲ್ಯಾಣದ ಉಪ ನಿರ್ದೇಶಕರಾದ ಡಾ. ಚನ್ನಮ್ಮ ಕಟ್ಟಿ ಕುಷ್ಠರೋಗ ಯಾವುದೇ ಪಾಪ ಅಥವಾ ಶಾಪದಿಂದ ಬರುವದಿಲ್ಲ. ಇದು ಸಹ ಒಂದು ಸಮಾನ್ಯ ಕಾಯಿಲೆಯಂತೆ ಎಲ್ಲರಿಗೂ ಬರಬಹುದು. ಮೈಕೋಬ್ಯಾಕ್ಟಿರಿಯಂ ಲೆಪ್ರೇ ಎನ್ನುವ ರೋಗಾಣುವಿನಂದ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಕುಷ್ಠರೋಗದಿಂದ ಬಳಲುತ್ತಿರುವ ವ್ಯಕ್ತಿಗಳು…
