Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಕೊಲ್ಹಾರ ತಾಲೂಕಿನ ಮುಳವಾಡ ಹೊರವಲಯದಲ್ಲಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆ.ಐ.ಎ.ಡಿ.ಬಿ) ಕೈಗಾರಿಕಾ ಪ್ರದೇಶಕ್ಕೆ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಶುಕ್ರವಾರ ಭೇಟಿ ನೀಡಿ ಹಂತ-೧ ಹಂತ-೨ ಹಾಗೂ ಹಂತ-೩ ರಲ್ಲಿ ಈಗಾಗಲೇ ಅಭಿವೃದ್ಧಿಪಡಿಸಲಾದ ಕೈಗಾರಿಕಾ ಪ್ರದೇಶದ ನಿವೇಶನಗಳು ಹಾಗೂ ಮೂಲ ಸೌಕರ್ಯಗಳನ್ನು ಪರಿಶೀಲಿಸಿದರು.ನಂತರ ಹೊಸದಾಗಿ ರಾಜ್ಯ ಮಟ್ಟದಲ್ಲಿ ಅನುಮೋದನೆಯಾದ ಮೆ: ರಿಲಾಯನ್ಸ್ ಕನ್ಸೂಮರ್ ಪ್ರೋಡಕ್ಟ್ಸ್ ಲಿಮಿಟೆಡ್ ಬೆಂಗಳೂರು ಇವರಿಂದ ೧೬೨೨ ಕೋಟಿ ರೂ. ಯೋಜನಾ ವೆಚ್ಚದಲ್ಲಿ, ಸುಮಾರು ೧೨೦೦ ಜನರಿಗೆ ಉದ್ಯೋಗಾವಕಾಶ ಕಲ್ಪಿಸಲಿರುವ ಪ್ಯಾಕೇಜ್ಡ್ ಕಾರ್ಬೋನೇಟೆಡ್ ಸಾಪ್ಟಡ್ರಿಂಕ್ಸ್ ‍ಅಂಡ್ ಪ್ಯಾಕೇಜ್ಡ್ ಡ್ರಿಂಕಿAಗ್ ವಾಟರ್ ಘಟಕದ ಸ್ಥಳ ವೀಕ್ಷಿಸಿದರು.ಬಳಿಕ ಪ್ರಗತಿ ಹಂತದಲ್ಲಿರುವ ಸುಮಾರು ೨೫ ಕೋಟಿ ರೂ. ಯೋಜನಾ ವೆಚ್ಚದಲ್ಲಿ ಸ್ಥಾಪನೆಗೊಳ್ಳಲಿರುವ ಮೆ: ಚತುರ್ಮುಖಿ ಡೇರಿ ಪ್ರೋಡಕ್ಟ್ ಐಸ್ ಕ್ರೀಂ ಉತ್ಪಾದನಾ ಘಟಕ ಪರಿಶೀಲಿಸಿದರು.ಭೇಟಿಯ ವೇಳೆ ಕೈಗಾರಿಕಾ ಪ್ರದೇಶದಲ್ಲಿನ ರಸ್ತೆ, ಚರಂಡಿ ವ್ಯವಸ್ಥೆ, ಕುಡಿಯುವ ನೀರಿನ ಪೂರೈಕೆ, ಬೀದಿ ದೀಪಗಳು, ಹಸಿರು ಪ್ರದೇಶ ಹಾಗೂ…

Read More

ಶೈಕ್ಷಣಿಕ ಚಟುವಟಿಕೆ-ವಸತಿ ವ್ಯವಸ್ಥೆ ಪರಿಶೀಲನೆ | ಮಕ್ಕಳೊಂದಿಗೆ ಸಹಪಂಕ್ತಿ ಭೋಜನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾರಜೋಳದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಚಟುವಟಿಕೆಗಳು ಹಾಗೂ ವಸತಿ ವ್ಯವಸ್ಥೆ ಪರಿಶೀಲಿಸಿದರು.ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು, ಮಕ್ಕಳೊಂದಿಗೆ ಊಟ ಮಾಡಿ ಆಹಾರದ ಗುಣಮಟ್ಟ ಪರಿಶೀಲಿಸಿದರು.ಬಳಿಕ ಮಾತನಾಡಿದ ಜಿಲ್ಲಾಧಿಕಾರಿಗಳು, ವಸತಿ ಶಾಲೆಯಲ್ಲಿರುವ ವಿದ್ಯಾರ್ಥಿಗಳಿಗೆ ನಿತ್ಯ ಗುಣಮಟ್ಟದ ಶಿಕ್ಷಣ, ಪೌಷ್ಟಿಕ ಆಹಾರ ಹಾಗೂ ಉತ್ತಮ ಸೌಲಭ್ಯ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಜೊತೆಗೆ ವಸತಿ ಶಾಲೆಯಲ್ಲಿರುವ ತಂಗಿರುವ ವಿದ್ಯಾರ್ಥಿಗಳಿಗೆ ಊಟ ಹಾಗೂ ಉಪಹಾರದ ವ್ಯವಸ್ಥೆಯಲ್ಲಿ ನಿಲಯದ ನಿಲಯ ಪಾಲಕರು, ಪ್ರಾಚಾರ್ಯರು ಹಾಗೂ ಶಿಕ್ಷಕರು ವಿಶೇಷ ಮುತುವರ್ಜಿ ವಹಿಸಬೇಕು. ಶುಚಿತ್ವ ಮತ್ತು ಸ್ವಚ್ಚತೆಗೆ ಆದ್ಯತೆ ನೀಡುವುದು ಸೇರಿದಂತೆ ಶಿಕ್ಷಕರು ರೂಢಿಸಿಕೊಳ್ಳಬೇಕಾದ ಕೌಶಲ್ಯಗಳ ಕುರಿತು ಪ್ರಾಚಾರ್ಯರು ಹಾಗೂ ಸಿಬ್ಬಂದಿಗೆ ಜಿಲ್ಲಾಧಿಕಾರಿ ಸೂಚಿಸಿದರು.ಬಳಿಕ ಮಕ್ಕಳ ಸ್ನಾನ ಕೋಣೆ ಹಾಗೂ ಶೌಚಾಲಯ ಸೌಲಭ್ಯಗಳ ಲಭ್ಯತೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಚ್‌ಪಿವಿ ಲಸಿಕೆ ಆಧುನಿಕ ಜೈವಿಕ ತಂತ್ರಜ್ಞಾನದ ಮೆಡಿಕಲ್ ಡೋಸ್ ಎಂದು ಹೇಳಬಹುದಾಗಿದೆ. ಶಿಫಾರಸು ಮಾಡಿರುವ ವಯಸ್ಸಿನಲ್ಲಿ ಲಸಿಕೆಯನ್ನು ನೀಡಿದಾಗ, ವೈರಸ್ ದೇಹವನ್ನು ಪ್ರವೇಶಿಸುವ ಮೊದಲು, ಅಂದರೆ ಸೂಕ್ತ ವಯಸ್ಸಿನಲ್ಲಿ(ಪ್ರಮುಖವಾಗಿ ೯ ರಿಂದ ೧೪ ವರ್ಷದೊಳಗೆ) ಈ ಲಸಿಕೆಯನ್ನು ನೀಡಿದರೆ, ಶೇ ೯೦ ರಷ್ಟು ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳನ್ನು ತಡೆಗಟ್ಟಬಹುದು ಎಂದು ನಗರ ವೈದ್ಯಾಧಿಕಾರಿ ಅಬ್ದುಲ್‌ಅಹಿದ್ ಮಾಗಿಯವರು ಹೇಳಿದರು.ಶುಕ್ರವಾರದಂದು ನಗರದ ಬಂಜಾರಾ ಪ್ರೌಢ ಶಾಲೆ ಹಾಗೂ ಎಪಿಎಂಸಿಯ ನಗರ ಆರೋಗ್ಯ ಕೇಂದ್ರ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ೧೪ ವರ್ಷದೊಳಗಿನ ವಿದ್ಯಾರ್ಥಿನಿಯರಿಗೆ ಎಚ್‌ಪಿವಿ ವ್ಯಾಕ್ಸಿನ್‌ಗೆ ಚಾಲನೆ ನೀಡಿ ಮಾತನಾಡಿದ ಅವರು. ಇದು ಕೇವಲ ಆರೋಗ್ಯ ರಕ್ಷಣೆಯಲ್ಲ, ಇದೊಂದು ಸಬಲೀಕರಣದ ಯೋಜನೆ. ಸಮಯೋಚಿತವಾಗಿ ಲಸಿಕೆಯನ್ನು ಆರಿಸಿಕೊಳ್ಳುವ ಮೂಲಕ, ನಾವು ಭಯದ ಜಾಗದಲ್ಲಿ ಭರವಸೆಯನ್ನು ಮತ್ತು ಅನಿಶ್ಚಿತತೆಯ ಜಾಗದಲ್ಲಿ ಆತ್ಮವಿಶ್ವಾಸವನ್ನು ಮೂಡಿಸಬಹುದು. ಕ್ಯಾನ್ಸರ್ ಎಂಬ ಮಹಾಮಾರಿಯು ಜೀವವನ್ನು ಕಿತ್ತುಕೊಳ್ಳುವ ಮೊದಲೇ ಅದನ್ನು ಹತ್ತಿಕ್ಕುವ ಶಕ್ತಿ ಈ ಲಸಿಕೆಗಿದೆ ಎನ್ನುವುದು ಗಮನಿಸಬೇಕಾದ ವಿಚಾರ ಎಂದರು.ಆರೋಗ್ಯ…

Read More

ವಿಜಯಪುರ ಜಿಲ್ಲಾ ಕೃಷಿಕ ಸಮಾಜದ ಪದಾಧಿಕಾರಿಗಳಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳು ಎಂದು ಘೋಷಿಸಲು ಆಗ್ರಹಿಸಿ ವಿಜಯಪುರ ಜಿಲ್ಲಾ ಕೃಷಿಕ ಸಮಾಜದ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲಿಸಲಾಯಿತು.ಇವತ್ತಿನ ಜಿಲ್ಲಾ ಸಭೆಯಲ್ಲಿ ಚರ್ಚಿಸುತ್ತಾ ಜಿಲ್ಲೆಯ ರೈತರು ತೊಗರಿ, ಗೊಂಜಾಳ ಹಾಗೂ ಇತರೆ ಮುಂಗಾರಿನ ಬೆಳೆಗಳು ಮಳೆಯ ಕೊರತೆಯಿಂದ ಸಂಪೂರ್ಣ ಹಾಳಾಗಿದ್ದು ಅಧಿಕಾರಿಗಳು ಎಲ್ಲ ತಾಲೂಕಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲಿಸಬೇಕು ಹಾಗೂ ಬರ ಪೀಡಿತ ತಾಲೂಕುಗಳು ಎಂದು ಗೋಷಣೆಮಾಡಿ ಶೀಘ್ರ ಬರ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ವಿನಂತಿಪೂರ್ವಕವಾಗಿ ಆಗ್ರಹಿಸಲಾಯಿತು .ಭೀಮಾ ನದಿ ತೀರದಲ್ಲಿ ನೀರಿನ ಸಮಸ್ಯೆ ಆಗಿದ್ದು ಕೂಡಲೇ ಜನ ಹಾಗೂ ಜಾನವಾರಗಳಿಗೆ ಕುಡಿಯುವ ನೀರಿನ ಕೊರತೆ ನೀಗಿಸಲು ಮಹಾರಾಷ್ಟ್ರ ಸರ್ಕಾರದ ಜೊತೆ ಚರ್ಚಿಸಿ ನದಿಗೆ ನೀರು ಹರಿಸಬೇಕೆಂದು ಆಗ್ರಹಿಸಲಾಯಿತು .ಸಭೆಯಲ್ಲಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಶಿವನಗೌಡ ಬಿರಾದಾರ ಸೋಮನಾಳ, ಸಂಜಯ ಪಾಟೀಲ ಕನಮಡಿ…

Read More

ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ | ಈ ವರ್ಷ ಮೊದಲ ಬಾರಿ ೧೪ ಗೇಟ್ ತೆರೆದು ನೀರು ಹರಿಬಿಡುವಿಕೆ | ನದಿ ತೀರಕ್ಕೆ ಜನ-ಜಾನುವಾರು ಸುಳಿಯದಂತೆ ಸೂಚನೆ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಒಳಹರಿವು ಹೆಚ್ಚಳದ ಹಿನ್ನೆಲೆಯಲ್ಲಿ ಈ ವರ್ಷದಲ್ಲಿ ಮೊದಲ ಬಾರಿಗೆ ಆಲಮಟ್ಟಿ ಜಲಾಶಯದ ೧೪ ಗೇಟ್‌ಗಳನ್ನು ಶುಕ್ರವಾರದಿಂದ ತೆರೆದು ಕೃಷ್ಣಾ ನದಿ ಪಾತ್ರಕ್ಕೆ ನೀರು ಬಿಡಲಾಗುತ್ತಿದೆ.ಜಲಾಶಯದ ಬಲಭಾಗದ ಆಲಮಟ್ಟಿ ವಿದ್ಯುತ್ ಉತ್ಪಾದನಾ ಘಟಕದ ಮೂಲಕ ೪೨,೫೦೦ ಕ್ಯೂಸೆಕ್ ಮತ್ತು ಗೇಟ್‌ಗಳ ಮೂಲಕ ೨೫,೦೦೦ ಕ್ಯೂಸೆಕ್ ಸೇರಿ ಒಟ್ಟು ೬೭,೫೦೦ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.ಗುರುವಾರ ೪೨,೫೦೦ ಕ್ಯೂಸೆಕ್ ಇದ್ದ ಹೊರಹರಿವನ್ನು ಶುಕ್ರವಾರ ಬೆಳಿಗ್ಗೆ ೮ ಗಂಟೆಗೆ ಹೆಚ್ಚಿಸಲಾಯಿತು.ಗರಿಷ್ಠ ೫೧೯.೬೦ ಮೀಟರ್ ಎತ್ತರದಲ್ಲಿ ೧೨೩.೦೮೧ ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯದ ಜಲಾಶಯದಲ್ಲಿ ಶುಕ್ರವಾರ ೫೧೮.೬೦ ಮೀಟರ್ ಎತ್ತರದಲ್ಲಿ ಒಟ್ಟು ೧೦೬.೩೨ ಟಿಎಂಸಿ ನೀರು ಸಂಗ್ರಹವಾಗಿತ್ತು. ಒಳಹರಿವು ೭೩,೧೬೨ ಕ್ಯೂಸೆಕ್ ಇತ್ತು.ಮಹಾರಾಷ್ಟ್ರದಲ್ಲಿ ಮಳೆಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಕೊಯ್ನಾ ೭೭ ಮಿ.ಮೀ, ನವಜಾ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿದಿನ ನೂರಾರು ಜನರು ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿಗಾಗಿ ತಾಲೂಕು ಕೇಂದ್ರಕ್ಕೆ ಆಗಮಿಸುತ್ತಿದ್ದರೂ ಸಮರ್ಪಕ ಸೇವೆ ದೊರೆಯುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.ತಾಲೂಕು ಕೇಂದ್ರದಲ್ಲಿ ಒಂದೇ ಒಂದು ಆಧಾರ್ ಸೇವಾ ಕೇಂದ್ರ ಇದ್ದು ಅದು ಕೂಡಾ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹಲವು ದಿನಗಳಿಂದ ಆಧಾರ ಕೇಂದ್ರ ಮುಚ್ಚಿರುವುದು ಸಾರ್ವಜನಿಕರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರು ತೊಂದರೆ ಅನುಭವಿಸುವಂತಾಗಿದೆ.ಆಧಾರ್ ಸೇವೆ ವಿಳಂಬವಾಗುತ್ತಿರುವುದರಿಂದ ವಿದ್ಯಾರ್ಥಿಗಳ ದಾಖಲಾತಿ, ಸರ್ಕಾರಿ ಯೋಜನೆಗಳ ಸೌಲಭ್ಯ ಹಾಗೂ ಹಿರಿಯ ನಾಗರಿಕರ ಪಿಂಚಣಿ ಪ್ರಕ್ರಿಯೆಗಳಿಗೂ ಅಡಚಣೆ ಉಂಟಾಗಿದೆ. ಆಧಾರ್ ಕಾರ್ಡ್ ಸಲುವಾಗಿ ಜನರು ಬೀಳಗಿ, ವಿಜಯಪುರ ಹಾಗೂ ಬಸವನ ಬಾಗೇವಾಡಿಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ಆದ್ದರಿಂದ ಕೊಲ್ಹಾರ ಪಟ್ಟಣದಲ್ಲಿ ಶಾಶ್ವತ ಹಾಗೂ ಪೂರ್ಣಾವಧಿ ಆಧಾರ್ ಸೇವಾ ಕೇಂದ್ರ ಆರಂಭಿಸಿ ಸಾರ್ವಜನಿಕರಿಗೆ ನಿರಂತರ ಸೇವೆ ಒದಗಿಸಬೇಕು ಎಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಅಧ್ಯಕ್ಷ ರಮೇಶ ಬಾಲಗೊಂಡ , ಕರವೇ ತಾಲೂಕು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.), ವಿಜಯಪುರ ಜಿಲ್ಲಾ ಘಟಕದ ವತಿಯಿಂದ ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ನೀಟ್ (NEET) ಪರೀಕ್ಷೆ ವಿರೋಧಿ ಬೃಹತ್ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಜಿಲ್ಲಾಧ್ಯಕ್ಷ ನಾಗರಾಜ ಕಬಾಡೆ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.ಮನವಿಯಲ್ಲಿ, ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ದೇಶದಾದ್ಯಂತ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿವಿಧ ಸಾಮಾಜಿಕ ಸಂಘಟನೆಗಳು ವ್ಯಕ್ತಪಡಿಸುತ್ತಿರುವ ಆತಂಕವನ್ನು ಗಂಭೀರವಾಗಿ ಪರಿಗಣಿಸಿ, ವಿದ್ಯಾರ್ಥಿಗಳಿಗೆ ಸಮಾನ ಶಿಕ್ಷಣದ ಅವಕಾಶ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ, ರಾಜ್ಯ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಕಬಾಡೆ, ಪದಾಧಿಕಾರಿಗಳಾದ ವಿಜಯಕುಮಾರ ನಿಮಾದಾರ, ಕಿರಣಕುಮಾರ ಅಲಿಯಾಬಾದ ರಾಘವೇಂದ್ರ ಕಾಸೆ, ನೀಲಾಂಬಿಕಾ ಕಟ್ಟಿಮನಿ, ಶಿಲ್ಪಾ ಮೇತ್ರಿ, ಅಬ್ದುಲ್ ಹಕ್ ಇನಾಮದಾರ ಸೇರಿದಂತೆ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ನಿಯಂತ್ರಿಸುವುದು ಹಾಗೂ ರಾಷ್ಟ್ರದಲ್ಲಿ ಕೆಲವೊಂದು ದುಷ್ಟ ಶಕ್ತಿಗಳು ಕಾನೂನು-ಸುವ್ಯವಸ್ಥೆಯ ಹಾಳು ಮಾಡುತ್ತಿವೆ ಎಂದು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಶುಕ್ರವಾರ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದರು.ನಗರದ ಡಾ.ಬಿ.ಆರ್. ಅಂಬೇಡ್ಕರ ವೃತ್ತದಿಂದ ಆರಂಭಗೊಂಡ ರ‍್ಯಾಲಿ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿ ತಲುಪಿತು. ನಂತರ ಈ ವಿಷಯದಲ್ಲಿ ಮಧ್ಯ ಪ್ರವೇಶಿಸಿ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುನ್ನಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಲಿಖಿತ ಮನವಿಯನ್ನು ಜಿಲ್ಲಾಧಿಕಾರಿಗಳ ಮುಖಾಂತರ ಸಲ್ಲಿಸಿದರು.ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದ್ದು, ರಾಜ್ಯಾದ್ಯಂತ ಅಕ್ಷರಶಃ ಗೂಂಡಾ ರಾಜ್ ಸೃಷ್ಟಿಯಾಗಿದೆ. ಆಡಳಿತ ಪಕ್ಷದ ಕುಮ್ಮಕ್ಕಿನಿಂದ ಸಮಾಜಘಾತುಕ ಶಕ್ತಿಗಳು ಮತ್ತು ಗೂಂಡಾಗಳು ರಾಜಾರೋಷವಾಗಿ ಮೆರೆಯುತ್ತಿದ್ದಾರೆ. ವಿರೋಧ ಪಕ್ಷದ ನಾಯಕರು, ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಸರ್ಕಾರದ…

Read More

ಏಕಲಮಟ್ಟಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸುವಂತೆ ಆಗ್ರಹಿಸಿ ಅರೆಬೆತ್ತಲೆ ಮೆರವಣಿಗೆ | ರಸ್ತೆ ತಡೆ | ಉರುಳು ಸೇವೆ | ರಸ್ತೆ ಮಧ್ಯೆಯೇ ಅಡುಗೆ ಮಾಡಿ ಊಟ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಬಹುನಿರೀಕ್ಷಿತ ಚಿಕ್ಕಲಕಿ–ತೊದಲಬಾಗಿ–ಏಕಲಮಟ್ಟಿ ಏತ ನೀರಾವರಿ ಯೋಜನೆ ಕಾಮಗಾರಿ ಆರಂಭವಾಗಿ ಸುಮಾರು 13 ವರ್ಷಗಳು ಕಳೆದರೂ ರೈತರ ಜಮೀನುಗಳಿಗೆ ಇನ್ನೂ ನೀರು ಹರಿಯದಿರುವುದನ್ನು ಖಂಡಿಸಿ ಶುಕ್ರವಾರ ಜಮಖಂಡಿ ತಾಲೂಕಿನ ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು.ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರೈತರು ವಿಜಯಪುರ–ಧಾರವಾಡ ಮುಖ್ಯ ಹೆದ್ದಾರಿಯನ್ನು ತಡೆದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿ, ನೂರಾರು ರೈತರು ಎತ್ತುಗಾಡಿಗಳೊಂದಿಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಕೆಲವರು ಅರೆಬೆತ್ತಲೆ ಮೆರವಣಿಗೆ, ಮತ್ತಷ್ಟು ರೈತರು ಉರುಳು ಸೇವೆ ಸಲ್ಲಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ತೀವ್ರತೆ ಹೆಚ್ಚಿದ ವೇಳೆ ರಸ್ತೆ ಮಧ್ಯೆಯೇ ಚಕ್ಕಡಿ (ಒಲೆ) ಇಟ್ಟು ಅಡುಗೆ ತಯಾರಿಸಿ ಅಲ್ಲಿಯೇ ಊಟ ಮಾಡುವ ಮೂಲಕ ಸರ್ಕಾರದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಸಂಸ್ಥೆಯ ಎಸ್.ಎಸ್.ಎಂ ಕಾಲೇಜ‌ ಆಫ್ ಫಾರ್ಮಸಿ ಆ್ಯಂಡ್ ರಿಸರ್ಚ್ ಕಾಲೇಜು ರಾಷ್ಟ್ರೀಯ ಅತ್ಯುತ್ತಮ ಫಾರ್ಮಸಿ ಕಾಲೇಜುಗಳಲ್ಲಿ 2ನೇ ಸ್ಥಾನ ಪಡೆದಿದೆ.ದೇಶದ ಹೆಸರಾಂತ ನಿಯತಕಾಲಿಕ ಔಟಲುಕ್ ಐಸಿಎಆರ್‌ಇ- 2026 ನಡೆಸಿದ ರಾಷ್ಟ್ರೀಯ ಸಮೀಕ್ಷೆಯಲ್ಲಿ ಈ ರ‌್ಯಾಂಕ್ ಲಭಿಸಿದೆ. ಕಳೆದ ವರ್ಷ ಕಾಲೇಜಿಗೆ 3ನೇ ರ‌್ಯಾಂಕ್ ಲಭಿಸಿತ್ತು. ಈಗ ಒಂದು ಸ್ಥಾನ ಹೆಚ್ಚಿಗೆ ಬಂದಿದ್ದು 2ನೇ ರ‌್ಯಾಂಕ್ ಸಿಕ್ಕಿದೆ.ಈಗಾಗಲೇ ನ್ಯಾಕ್ ನಿಂದ A++ ಮಾನ್ಯತೆ ಪಡೆದ ಮೊದಲ ಕಾಲೇಜು ಎಂಬ ಹೆಗ್ಗಳಿಗೆ ಹೊಂದಿರುವ ಈ ಕಾಲೇಜಿನ ಕಿರೀಟಕ್ಕೆ ಈಗ ಮತ್ತೋಂದು ಗರಿ ಸಿಕ್ಕಂತಾಗಿದೆ.ಕಾಲೇಜಿನಲ್ಲಿ ಬೋಧನೆ, ಕಲಿಕಾ ವಾತಾವರಣ, ವಿದ್ಯಾರ್ಥಿಗಳಿಗೆ ಪಠ್ಯ, ಪ್ರಾಯೋಗಿ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ನೀಡಲಾಗಿರುವ ಸೌಲಭ್ಯಗಳನ್ನು ಪರಿಗಣಿಸಿ ಈ ರ‌್ಯಾಂಕ್ ನೀಡಲಾಗಿದೆಕಾಲೇಜಿನ ಸಾಧನೆಗೆ ಬಿ. ಎಲ್. ಡಿ. ಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ…

Read More