Author: editor.udayarashmi@gmail.com

ವಿಜ್ಷಾನ ವಸ್ತು ಪ್ರದರ್ಶನದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಉಮಾದೇವಿ ಸೊನ್ನದ ಅಬಿಮತ ಉದಯರಶ್ಮಿ ದಿನಪತ್ರಿಕೆ ಚಡಚಣ: ವೈಜ್ಞಾನಿಕ ಮನೋಭಾವ, ಸತ್ಯಾನ್ವೇಷಣೆ ಗುಣ ವಿದ್ಯಾರ್ಥಿಗಳು ಬೆಳಿಸಿಕೊಳ್ಳಲು ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿಯಾಗಲಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಉಮಾದೇವಿ ಸೊನ್ನದ ಹೇಳಿದರು.ತಾಲೂಕಿನ ಲೋಣಿ(ಬಿ.ಕೆ) ಗ್ರಾಮದ ಶ್ರೀ ಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ವಿಜ್ಞಾನ ಹಬ್ಬ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗವನ್ನು ಜ್ಞಾನದ ಯುಗ. ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷ ರಾಭ್ಯಾಸ ಇದ್ದರೆ ಸಾಕಾಗಾದು. ಜತೆಗೆ ಜ್ಞಾನದ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಂತದಲ್ಲೇ ಮಕ್ಕಳಿಗೆ ವಿಜ್ಞಾನ ಶಿಕ್ಷ ಣದ ಬಗ್ಗೆ ಅಭಿರುಚಿ ಬೆಳೆಸುವುದು ಅತ್ಯವಶ್ಯಕವಾಗುತ್ತದೆ. ಈ ನಿಟ್ಟಿನಲ್ಲಿ ಆಯೋಜಿಸಿದ್ದ ಶಾಲಾ ಮಟ್ಟದ ವಸ್ತು ಪ್ರದರ್ಶನ ಮಕ್ಕಳ ಪ್ರತಿಭೆ ಅನಾವರಣಕ್ಕೊಂದು ಉತ್ತಮ ವೇದಿಕೆಯಾಗಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿ ಎಂ ಕೋರೆ ಮಾತನಾಡಿ,…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಕಲಬುರಗಿ ರಸ್ತೆಯ ಹೊರವಲಯದಲ್ಲಿರುವ ಭೀಮಾ ಯುನಿವರ್ಸಲ್ ಸ್ಕೂಲ್‌ನಲ್ಲಿ ಫೆ.೦೧ ಸಾಯಂಕಾಲ ೫ರಂದು ಭೀಮೋತ್ಸವ ಮತ್ತು ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ ಎಂದು ನಿರ್ದೇಶಕ ಪ್ರಶಾಂತ ಕಮತಗಿ ತಿಳಸಿದ್ದಾರೆ.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಶಿಕ್ಷಣ ತಜ್ಞ, ಎಮ್.ಇ.ಎಸ್. ಟೀರ‍್ಸ್ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ.ಎಚ್.ಎಸ್.ಗಣೇಶ ಭಟ್ಟ ಇರಲಿದ್ದಾರೆ. ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ವಿಠ್ಠಲ ಕೊಳ್ಳೂರ ವಹಿಸುವರು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ವಿಬಿಸಿ ಹೈಸ್ಕೂಲ ಮೈದಾನದಲ್ಲಿರುವ ತಾಲೂಕು ಸಮ್ಮೇಳನದ ಕಾರ್ಯಾಲಯದ ಆವರಣದಲ್ಲಿ ತಾಲೂಕಿನ ಯರಗಲ್ಲ ಕಲಾವಿದ ಬಸವರಾಜ ಹಡಪದ ರಚಿಸಿದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಡುಗಡೆಗೊಳಿಸಲಾಯಿತು.ಈ ವೇಳೆ ಮಹಾದೇವ ಶಾಸ್ತ್ರಿಗಳು, ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ, ತಾಲೂಕು ಅಧ್ಯಕ್ಷ ಕಾಮರಾಜ ಬಿರಾದಾರ, ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ, ಹಿರಿಯ ಸಾಹಿತಿ ಬಿ.ಎಂ.ಹಿರೇಮಠ, ಮಲಕೇಂದ್ರಗೌಡ ಪಾಟೀಲ ಸೇರಿದಂತೆ ಹಲವರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲ್ಲೂಕಿನ ಸಮೀಪದ ಸುರಗಿಹಳ್ಳಿ ಗ್ರಾಮದ ಜನ ನನ್ನ ಮೇಲಿಟ್ಟಿರುವ ಪ್ರೀತಿಗೆ ಬೆರಗಾಗಿದ್ದೇನೆ. ಜನತೆಗೆ ಮೂಲಸೌಕರ್ಯ ಒದಗಿಸಲು ಬದ್ದನಾಗಿದ್ದೇನೆ. ಅವರ ಋಣ ಎಂದಿಗೂ ಮರೆಯೊಲ್ಲ. ನನ್ನ ಕೈಲಾದಮಟ್ಟಿಗೆ ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತೇನೆ. ಸುರಗಿಹಳ್ಳಿ, ತಾಂಬಾ,ಗೂಗಿಹಾಳ, ವಾಡೆ, ಬಂಥನಾಳ ಗ್ರಾಮಗಳ ಸಮಗ್ರ ಅಭಿವೃದ್ಧಿಯ ನನ್ನ ಕನಸಿಗೆ ಜನತೆ ಕೈಜೋಡಿಸಬೇಕು ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.ಸುರಗಿಹಳ್ಳಿ ಗ್ರಾಮದ ಮಲ್ಲಿಕಾರ್ಜುನ ದೇವಾಲಯದ ಕಟ್ಟಡದ ಕಾಮಗಾರಿ ವೀಕ್ಷಣೆಮಾಡಿ ಮತ್ತು ಸಾರ್ವಜನಿಕರು ನೀಡಿದ ಸನ್ಮಾನ ಸ್ವಿಕರಿಸಿ ಮಾತನಾಡಿ ನನಗೆ ಹೆಚ್ಚಿನ ಮತಗಳನ್ನು ನೀಡಿ ಕೈ ಹಿಡಿದಿದ್ದು ಸುರಗಿಹಳ್ಳಿ ಗ್ರಾಮದ ಜನತೆ ನಿಮ್ಮ ಋಣವನ್ನು ನಾನೆಂದು ಮರೆಯಲಾರೆ. ಶಾಸಕ ಸ್ಥಾನಕ್ಕೇರಲು ಕಾರಣರಾದ ಕ್ಷೇತ್ರದ ಜನರ ಪ್ರೀತಿಗೆ ಪಾತ್ರವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ ಎಂದರು.ಕಾಂತನಗೌಡ ಪಾಟೀಲ ಮಾತನಾಡಿ ಶಾಸಕ ಅಶೋಕ ಮನಗೂಳಿ ಅವರು ಪ್ರಚಾರಪ್ರಿಯವಲ್ಲ. ರೈತರಿಗೆ, ಜನತೆಗೆ ಅನೇಕ ಯೋಜನೆ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆಯುತ್ತಿದಾರೆ. ಹಳ್ಳಿಗಳು ಈ ದೇಶದ ಸಂಪತ್ತು. ಹಳ್ಳಿಗಳು ಸುಧಾರಣೆಯಾದಲ್ಲಿ ಮಾತ್ರ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ರೈತ ಒಂದು ವರ್ಷ ದುಡಿದರೆ ಭಿವಿಷ್ಯದ ವರ್ಷಕ್ಕೆ ಸಾಕಾಗುವಷ್ಟು ಆಹಾರ ಸಂಗ್ರಹಿಸುತ್ತಾನೆ. ಆದರೆ ವಿದ್ಯಾರ್ಥಿಗಳು ಕಷ್ಟಪಟ್ಟು ಅಧ್ಯಯನ ಮಾಡಿದರೆ ಇಡೀ ಜೀವನಪರ್ಯಂತ ಸಾಕಾಗುವಷ್ಟು ಜ್ಞಾನವೆಂಬ ಆಹಾರ ಸಂಗ್ರಹಿಸಬಹುದು. ಆದ್ದರಿಂದ ವಿದ್ಯಾರ್ಥಿಗಳ ಭವಿಷ್ಯ ತಮ್ಮ ಕೈಯಲ್ಲಿದೆ. ತಮ್ಮ ಹಣೆಯ ಬರಹವನ್ನು ತಾವೇ ಬರೆದುಕೊಳ್ಳಬೇಕು ಎಂದು ನಿವೃತ್ತ ಪ್ರಾಚಾರ್ಯ ಎ.ಪಿ. ಕಾಗವಾಡ ಹೇಳಿದರು.ತಾಲ್ಲೂಕಿನ ಲಚ್ಯಾಣ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರದಂದು ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ತಾರುಣ್ಯದಲ್ಲಿ ಕಷ್ಟಪಟ್ಟು ದುಡಿದರೆ ವೃದ್ಧಾಪ್ಯದಲ್ಲಿ ಅದೇ ಫಲವಾಗಿ ನೆಮ್ಮದಿ ನೀಡುತ್ತದೆ. ವಿದ್ಯಾರ್ಥಿಗಳು ಪಾಲಕರ ಕನಸನ್ನು ಈಡೇರಿಸಿದಂತಾಗುತ್ತದೆ. ಅವರ ಉದರದಲ್ಲಿ ಹುಟ್ಟಿದ್ದು ಸಾರ್ಥಕವಾಗುತ್ತದೆ ಎಂದರು.ಇನ್ನೊರ್ವ ಮುಖ್ಯ ಅತಿಥಿ ಎಂ.ಎಂ. ಮುಜಗೊಂಡ ಮಾತನಾಡಿ, ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಉತ್ತಮ ಪಾಠ ಬೋಧನೆಯ ಮೂಲಕ ಶೈಕ್ಷಣ ಕ ವಾತಾವರಣ ನಿರ್ಮಾಣ ಮಾಡಿದ್ದಾರೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಿದಾಗ ಮಾತ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಲ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಸಿ.ಎಂ ಮನಗೂಳಿ ಕಾಲೇಜಿನ ಸಭಾಭವನದಲ್ಲಿ ಬೆಂಗಳೂರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಸಿಂದಗಿ ಸಿ.ಎಂ.ಮನಗೂಳಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಧಾರವಾಡ ವಿಭಾಗೀಯ ಪತ್ರಗಾರ ಕಛೇರಿ ಇವರುಗಳ ಸಹಯೋಗದಲ್ಲಿ ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ವಿಜಯಪುರ ಜಿಲ್ಲೆಯ ಸ್ವಾತಂತ್ರ್ಯ ಹೋರಟಗಾರರು ಹಾಗೂ ಕ್ರಾಂತಿಕಾರಿಗಳು ಎಂಬ ವಿಷಯದ ಮೇಲೆ ಫೆ.೦೧ ಮತ್ತು ೨ರಂದು ೨ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ ಎಂದು ಪ್ರಾಚಾರ್ಯ ಡಾ.ಬಿ.ಜಿ.ಪಾಟೀಲ ತಿಳಿಸಿದ್ದಾರೆ.ಫೆ.೧ ಬೆಳಿಗ್ಗೆ ೧೦:೩೦ಗಂಟೆಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಅಧ್ಯಕ್ಷ, ಶಾಸಕ ಅಶೋಕ ಮನಗೂಳಿ ನೆರವೇರಿಸುವರು. ಧಾರವಾಡ ಪ್ರಾದೇಶಿಕ ಪತ್ರಾಗಾರ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಮಂಜುಳಾ ಎಲಿಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಆಶಯ ನುಡಿಯನ್ನು ವಿಶ್ರಾಂತ ಪ್ರಾಧ್ಯಾಪಕ ಎಮ್.ಎಸ್.ಹೈಯ್ಯಾಳಕರ ಆಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರು ಕರ್ನಾಟಕ ಪತ್ರಾಗಾರ ಇಲಾಖೆಯ ನಿರ್ದೇಶಕ ಡಾ.ಗವಿಸಿದ್ದಯ್ಯ, ನಿಂಗರಾಜ ಅಸ್ಕಿ ಇರಲಿದ್ದಾರೆ. ಕಲಬುರಗಿ ಪ್ರಾದೇಶಿಕ ಪತ್ರಾಗಾರ ಇಲಾಖೆಯ ಹಿರಿಯ ನಿರ್ದೇಶಕ ಡಾ.ವೀರಶೆಟ್ಟಿ ಗಾರಂಪಳ್ಳಿ ಗೌರವ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಹಕಾರಿ ಬ್ಯಾಂಕಿನ ಅಭಿವೃದ್ಧಿಗೆ ಎಲ್ಲ ಸದಸ್ಯರ ಹಾಗೂ ಊರಿನ ಹಿರಿಯರ ಸಹಕಾರದೊಂದಿಗೆ ಬ್ಯಾಂಕಿನ್ ಬೆಳವಣಿಗೆಗೆ ನಾವೆಲ್ಲರೂ ಪ್ರಾಮಾಣಿಕವಾಗಿ ದುಡಿಯುತ್ತೇವೆ ಎಂದು ನೂತನ ಅಧ್ಯಕ್ಷ ಶಾಂತವೀರ ಬಿರಾದಾರ ಹೇಳಿದರು.ಆಯ್ಕೆಯಾದ ಬಳಿಕ ಸಿಂದಗಿ ನಗರದ ವಿವಿಧೋದ್ದೇಶ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನಾಲ್ಕನೆಯ ಬಾರಿಗೆ ಅಧ್ಯಕ್ಷನಾಗಿ ಆಯ್ಕೆ ಮಾಡದ ಎಲ್ಲ ಸದಸ್ಯರಿಗೆ ನಾನು ಚಿರಋಣಿಯಾಗಿದ್ದೇನೆ. ಅವರ ಭರವಸೆಯಂತೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ. ಬ್ಯಾಂಕಿನ ಸೌಲಭ್ಯ ಹಾಗೂ ರೈತರಿಗೆ ಸಾಲದ ಸೌಲಭ್ಯವನ್ನು ಒದಗಿಸುತ್ತೇನೆ ಎಂದರು.ಈ ವೇಳೆ ಬ್ಯಾಂಕನ್ ಅಧಿಕಾರಿಗಳಿಗೆ, ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಸನ್ಮಾನಿಸಿ ಗೌರವಿಸಲಾಯಿತು.ಈ ವೇಳೆ ಇಂಡಿ ಎಆರ್‌ಸಿಎಸ್ ಸಹಾಯಕ ನಿಬಂಧಕ ಕನಕರಾಜ ವಡ್ಡರ, ಸುರೇಶ ಮಲಗೊಂಡ, ಶಶಿಕಾಂತ ಕುಂಬಾರ, ರಾಹುಲ ನಾಗಾವಿ, ಮನೋಜ ಬಿರಾದಾರ, ವಿಶ್ವರಾಧ್ಯ ಬಿರಾದಾರ, ಮಂಜುನಾಥ ಚವ್ಹಾಣ, ಹೇಮಾ ನಾವಿ, ಮಾಳು ಪೂಜಾರಿ, ಈರಗಂಟೆಪ್ಪ ಪೂಜಾರಿ, ಸಾವಿತ್ರಿ ವಿಭೂತಿಹಳ್ಳಿ, ನೂತನ ಸದಸ್ಯರಾದ ಬಂದೇನವಾಜ ಪೀರಣಗೋಳ, ಮಡೇಪ್ಪ ವಾಲೀಕಾರ,…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ಚಿರ್ಚಿನಕಲ್ಲ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.೧ ರಂದು ಬೆಳಿಗ್ಗೆ ೯:೩೦ ಕ್ಕೆ ಕಲಾ ಕಲೋತ್ಸವ ಹಾಗೂ ಶಾಲಾ ದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಯ ಹಳೆಯ ವಿದ್ಯಾರ್ಥಿಗಳು, ಪಾಲಕರು, ಊರಿನ ಗುರು ಹಿರಿಯರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಶಾಲಾ ಮುಖ್ಯಗುರು ಐ.ಎಂ.ಕಲ್ಲೂರ ಕೋರಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಫೆ.೧ (ಇಂದು) ರಂದು ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಮಡಿವಾಳ ಮಾಚಿದೇವ ಜಯಂತಿ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಬೆಳಿಗ್ಗೆ ೯.೩೦ಕ್ಕೆ ಘಂಟೆಗೆ ನಗರದ ಸಿದ್ದೇಶ್ವರ ದೇವಸ್ಥಾನದಿಂದ ರಂಗಮಂದಿರದವರೆಗೆ ಮೆರವಣಿಗೆ ನೆರವೆರಿಸಲಾಗುವುದು. ನಂತರ ೧೦.೩೦ಕ್ಕೆ ವೇದಿಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಅವರು ನೆರವೆರಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನಸಭೆಯ ಶಾಸಕ ಬಸನಗೌಡ ಆರ್.ಪಾಟೀಲ (ಯತ್ನಾಳ) ಅವರು ವಹಿಸಲಿದ್ದಾರೆ. ವಿಶ್ರಾಂತ ಪ್ರಾಧ್ಯಾಪಕ ಬಿ.ಎನ್.ಪಾಟೀಲ ಅವರು ಮಡಿವಾಳ ಮಾಚಿದೇವರ ಕುರಿತು ಉಪನ್ಯಾಸ ನೀಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತ ಬೆಂಗಳೂರು ಅಧ್ಯಕ್ಷರಾದ ಅಪ್ಪಾಜಿ ಸಿ.ಎಸ್ ನಾಡಗೌಡ, ಸಂಸದರಾದ ರಮೇಶ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ವತಿಯಿಂದ ೨೦೨೪-೨೫ನೇ ಸಾಲಿನ “ಕಿತ್ತೂರು ರಾಣಿ ಚೆನ್ನöಮ್ಮ” ಪ್ರಶಸ್ತಿಗೆ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಛೇರಿಯಿಂದ ಅರ್ಜಿ ಪಡೆದು ಸಂಬಂಧಿಸಿದ್ದ ದಾಖಲೆ ಲಗತ್ತಿಸಿ ಫೆ.೧೦ರ ಒಳಗಾಗಿ ಕಛೇರಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ೦೮೩೫೨-೨೯೫೩೫೩ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Read More