Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೊಲ್ಹಾರ ತಾಲೂಕಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬುಧವಾರ ಭೇಟಿ ನೀಡಿದರು.ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಯು.ಕೆ.ಪಿ ಕ್ರಾಸದಿಂದ ೨.೫ ಕೀ.ಮಿ. ಸರ್ವಿಸ್ ರಸ್ತೆ ಕುರಿತು ಸ್ಥಳ ಪರಿಶೀಲಿಸಿ ಹೆದ್ದಾರಿಯಲ್ಲಿಯ ನ್ಯೂನ್ಯತೆ ಕುರಿತು ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.ಕೊಲ್ಹಾರ ತಹಶೀಲ್ದಾರ ಕಾರ್ಯಾಲಯಕ್ಕೆ ಭೇಟಿ ನೀಡಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಸ್ಥಳ ಹಾಗೂ ಪಟ್ಟಣದ ಸರಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆ ಹೊಸದಾಗಿ ಪ್ರಜಾ ಸೌಧ ನಿರ್ಮಿಸುವ ಕುರಿತು ಸ್ಥಳ ಪರಿಶೀಲನೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹಾಗೂ ಪಟ್ಟಣದ ಸಾರ್ವಜನಿಕರೊಂದಿಗೆ ಚರ್ಚಿಸಿದರು.ಪಟ್ಟಣದ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ಬೇಟಿ ನೀಡಿ ಮಕ್ಕಳೂಂದಿಗೆ ಅಭ್ಯಾಸ ಚಟುವಟಿಕೆ ವಿಕ್ಷೀಸಿ ಶಾಲೆಯ ಆವರಣದಲ್ಲಿರುವ ಅಂಗನವಾಡಿ ೮ನೇ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಹಾಜರಾತಿ, ಕಲಿಕೆ ಕುರಿತು ಹಾಗೂ ಮಕ್ಕಳಿಗೆ ನೀಡುವ ಆಹಾರದ ಬಗ್ಗೆ ಪರಿಶೀಲನೆ ನಡೆಸಿದ್ದರು.ಸರಕಾರಿ ಪ್ರೌಢ ಶಾಲೆ, ಕಸ್ತೂರಿ ಬಾ ಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ ಮೂಲ ಭೂತ ಸೌಕರ್ಯ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ರಕ್ತಹೀನತೆಯು ಗರ್ಭಿಣಿಯರು, ಚಿಕ್ಕ ಮಕ್ಕಳು, ಹದಿಹರೆಯದವರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಸೇವಿಸುವ ಆಹಾರದಲ್ಲಿ ಪೌಷ್ಟಿಕಾಂಶದ ಕೊರತೆಯೇ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದು ತಡವಲಗ ಸಮುದಾಯ ಆರೋಗ್ಯ ಕೇಂದ್ರದ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದ ಆಪ್ತ ಸಮಾಲೋಚಕ ರಾಮಗೊಂಡ ಭಜಂತ್ರಿ ಹೇಳಿದರು.ಸೋಮವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್,ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ‘ಅನಿಮೀಯ ಮುಕ್ತ ಅಭಿಯಾನ’ವನ್ನು ಉದ್ಧೇಶಿಸಿ ಮಾತನಾಡಿದರು.10 ರಿಂದ 19 ವಯಸ್ಸಿನವರಲ್ಲಿ ಕಂಡುಬರುವ ರಕ್ತಹೀನತೆ ಪ್ರಮಾಣ ನಿಯಂತ್ರಿಸುವದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಪ್ರತಿಶತ 55%ಕ್ಕಿಂತ ಹೆಚ್ಚು ಗಂಡು ಮತ್ತು ಹೆಣ್ಣು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ.ಪ್ರತಿವಾರಕ್ಕೆ ಒಂದು ಕಬ್ಬಿಣಾಂಶದ ಮಾತ್ರೆಯನ್ನು ನೀಡಿ, ಮಕ್ಕಳಲ್ಲಿ ರಕ್ತಹೀನತೆಯನ್ನು ತಡೆಗಟ್ಟಲು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ರಕ್ತಹೀನತೆಯು ಸಾರ್ವತ್ರಿಕ ಆರೋಗ್ಯ ಸಮಸ್ಯೆಯಾಗಿದ್ದು, ನಿತ್ಯ ಹಸಿರು ತರಕಾರಿ, ಬೇಳೆಕಾಳುಗಳಿಂದ ತಯಾರಿಸಿದ ಊಟ ಸೇವಿಸುವುದರ ಜೊತೆಗೆ ಹಣ್ಣು, ಮೊಸರು ಸೇವಿಸಿ ರಕ್ತ ಹೀನತೆಯಿಂದ ದೂರವಿರುವಂತೆ ತಿಳಿಸಿದರು.ಶಿಕ್ಷಕ ಎಸ್ ಆರ್ ಚಾಳೇಕರ ಮಾತನಾಡಿ,…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಇಡೀ ಸಮಾಜವನ್ನು ಅಭಿವೃದ್ದಿ ಮಾಡುವುದೇ ಈ ಬ್ರೀಗೇಡನ ಆಶಯವಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.ಬುಧವಾರ ಪಟ್ಟಣದಲ್ಲಿ ಕ್ರಾಂತಿವೀರ ಬ್ರಿಗೇಡ್ ಕರ್ನಾಟಕ ವತಿಯಿಂದ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ನಡೆಯುವ ಬೃಹತ್ ಸಮಾವೇಶದ ಆಲಮೇಲ ತಾಲೂಕಾ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪನವರು ಆಕಳಲಿನ ಕೆಚ್ಚಲು ಕೊಯಿದ ಕೋಮುವಾದಿಗಳ ವಿರುದ್ದ ನಾವೇಲ್ಲರೂ ಹೋರಾಡಬೇಕಿದೆ. ನೀವೆಲ್ಲರೂ ಈ ಸಮಾವೇಶದಲ್ಲಿ ಭಾಗವಹಿಸಬೇಕು ಎಂದು ಹೇಳಿದರುನಂತರ ರಮೇಶ ಬಂಟನೂರ ಮಾತನಾಡಿ, ಈ ಒಂದು ಸಮಾವೇಶಕ್ಕೆ ನಾವು ಎಲ್ಲರೂ ನಮ್ಮ ಈಶ್ವರಪ್ಪನವರ ಕೈ ಬಲಪಡಿಸೋಣ ಎಂದು ಹೇಳಿದರು.ಈ ಕಾರ್ಯಕ್ರಮದಲ್ಲಿ ಸಾನಿದ್ಯವನ್ನು ಡಾ|| ಸಂದೀಪ ಪಾಟೀಲ, ಶ್ರೀಶೈಲಯ್ಯ ಅಳೋಳ್ಳಿಮಠ ಮುಖಂಡರಾದ ಸಿದ್ದು ಬುಳ್ಳಾ, ರವಿ ನಾಯ್ಕೋಡಿ, ಅಶೋಕ ವಡಿಯಾರ, ಭೀಮಣ್ಣ ಸೀತಿಮನಿ, ನಿಂಗರಾಜ ಬಂಟನೂರ, ಸಿಂದೂರ ಕಟ್ಟಿಮನಿ, ರಾಕೇಶ ಕಟ್ಟಿಮನಿ, ರವಿ ಚೌಡಿಹಾಳ ಮುಂತಾದವರು ಇದ್ದರು

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಆರೋಗ್ಯ ಮತ್ತು ಯೋಗಕ್ಷೇಮದಲ್ಲಿ ಬಾಯಿಯ ಆರೋಗ್ಯವು ಪ್ರಮುಖ ಪಾತ್ರವಹಿಸುತ್ತದೆ ಎಂದು ಬೆಂಗಳೂರಿನ ದಂತವೈದ್ಯ ಡಾ.ಪ್ರಮೋದ ಜಿ.ಪಾಟೀಲ ಅಭಿಪ್ರಾಯಪಟ್ಟರು. ಸಿಂದಗಿ ನಗರದ ಆಲಮೇಲ ರಸ್ತೆಯಲ್ಲಿರುವ ಪಿ.ಇ.ಎಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಸಿಂದಗಿ ಲಯನ್ಸ್ ಕ್ಲಬ್ ಹಮ್ಮಿಕೊಂಡ ಉಚಿತ ದಂತ ತಪಾಸಣೆ ಹಾಗೂ ಔಷಧ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಹಲ್ಲುಗಳ ಸ್ವಚ್ಛತೆ ಕಾಪಾಡಿಕೊಳ್ಳುವ ಜೊತೆಗೆ ಸೊಪ್ಪು, ತರಕಾರಿ, ಹಣ್ಣುಗಳಂತಹ ಖನಿಜಯುಕ್ತ ಆಹಾರ ಸೇವಿಸುವುದರಿಂದ ಹಲ್ಲುಗಳ ರಕ್ಷಣೆಯಾಗುತ್ತದೆ. ಪ್ರತಿಯೊಬ್ಬರು ಪ್ರತ್ಯೇಕ ಬ್ರಷ್‌ನಲ್ಲಿ ಹಲ್ಲು ಉಜ್ಜುವ ಅಭ್ಯಾಸ ಇಟ್ಟುಕೊಳ್ಳಬೇಕು. ಯಾವುದೇ ಆಹಾರ ಪದಾರ್ಥ ಸೇವಿಸಿದ ಮೇಲೆ ನೀರಿನಲ್ಲಿ ಬಾಯಿ ಮುಕ್ಕಳಿಸಬೇಕು. ಹಲ್ಲು ಉಜ್ಜುವಾಗ ವಸಡಿನಲ್ಲಿ ರಕ್ತಸ್ರಾವವಾಗುತ್ತಿದ್ದರೆ ವೈದ್ಯರ ಸಲಹೆ ಪಡೆದುಕೊಳ್ಳಬೇಕು. ಬೆಳಿಗ್ಗೆ ಮತ್ತು ರಾತ್ರಿ ತಪ್ಪದೆ ಬ್ರಷ್ ಮಾಡಬೇಕು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಈ ವೇಳೆ ದಂತ ವೈದ್ಯ ಸಿದ್ದು ಚಿಂಚೋಳ್ಳಿ ಮಾತನಾಡಿ, ಹಲ್ಲುಗಳಲ್ಲಿ ಸಣ್ಣ ಬ್ಯಾಕ್ಟೀರಿಯಾದಿಂದ ಸಮಸ್ಯೆ ಪ್ರಾರಂಭವಾಗಿ ಮುಂದೆ ದೊಡ್ಡ ಸಮಸ್ಯೆಗೆ ಕಾರಣವಾಗುತ್ತದೆ. ಹಾಗಾಗಿ ಹಲ್ಲಿನ ಸ್ವಚ್ಛತೆಗೆ ಹೆಚ್ಚಿನ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ರೈತರು ತೊಗರಿ ಬೆಳೆಗೆ ವಿಮೆ ತುಂಬಿದ್ದು ಅಂತಹ ರೈತರಿಗೆ ವಿಮೆ ಪರಿಹಾರ ಕೂಡಲೇ ನೀಡಬೇಕೆಂದು ಆಗ್ರಹಿಸಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಎದುರು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೃಷಿ ಅಧಿಕಾರಿ ಮಹಾಂತೇಶ ಶೆಟ್ಟೆನ್ನವರ ಅವರಿಗೆ ಮನವಿ ಸಲ್ಲಿಸಿದರು.ಇಂಡಿ ತಾಲೂಕಿನ ಕರವೇ ಅಧ್ಯಕ್ಷ ಬಾಳು ಮುಳಜಿ ಮಾತನಾಡಿ, ಈ ಬಾರಿ ತೊಗರಿ ಬೆಳೆ ವಿಫಲವಾಗಿದ್ದು ರೈತರಿಗೆ ನಷ್ಟವಾಗಿದೆ. ಶೇ ೯೦ ರಷ್ಟು ತೊಗರಿ ಬೆಳೆ ಹಾಳಾಗಿದೆ.ಕೃಷಿ ಇಲಾಖೆಯಿಂದ ಕಳಪೆ ಮಟ್ಟದ ಬೀಜ ವಿತರಣೆ, ಹವಾಮಾನದಲ್ಲಿ ಏರುಪೇರು ಹೀಗೆ ಹಲವಾರು ಕಾರಣಗಳಿಂದ ಬೆಳೆ ವಿಫಲವಾಗಿದೆ ಎಂದರು.ವಿಮಾ ಕಂಪನಿಯಿಂದ ಒಂದು ಹೇಕ್ಟರ ಪ್ರದೇಶಕ್ಕೆ ೪೮೫೬೪ ರೂ ಪರಿಹಾರ ನೀಡಬೇಕೆಂದು ಆದೇಶವಿದೆ. ಅದರಂತೆ ರೈತರಿಗೆ ಈ ಕೂಡಲೇ ಪರಿಹಾರ ನೀಡಿ ರೈತರ ತೊಂದರೆಗಳಿಗೆ ಸ್ಪಂದಿಸಲು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಮಹೇಶ ಹೂಗಾರ, ರಾಜು ಕುಲಕರ್ಣಿ, ಮಂಜು ದೇವರ, ಅಶೋಕ ಅಕಲಾದಿ, ಮಹಿಬೂಬ ಬೇವನೂರ, ಸಚೀನ ನಾವಿ, ಸುನೀಲ ಹಿರೇಮಠ, ಶಿವಾನಂದ ಮಡಿವಾಳ, ಪ್ರಶಾಂತ ಲಾಳಸಂಗಿ,…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ರಾಜ್ಯಾದ್ಯಾಂತ ವಕ್ಫ ಗುಮ್ಮ ವಿರುದ್ಧ ಹೋರಾಟ ಮಾಡಲು ಸಿದ್ದರಾಗಿದ್ದೆವೆ. ರಾಜ್ಯದ ಮೂಲೆ ಮೂಲೆ ತಿರಗಾಡಿ “ಬ್ರೀಗೆಡ್” ಸಂಘಟನೆ ಮಾಡುವ ಮೂಲಕ, ಸಾಧು ಸಂತರ ಒಳಗೊಂಡು ಬರುವ ದಿನಗಳಲ್ಲಿ ಬಸವಕಲ್ಯಾಣದಿಂದ ಹೋರಾಟ ಪ್ರಾರಂಭ ಮಾಡುತ್ತೆವೆ ಎಂದು‌‌ ಮಾಜಿ ಉಪ ಮುಖ್ಯ ಮಂತ್ರಿ ಕೆ ಎಸ್ ಈಶ್ವರಪ್ಪ ಹೇಳಿದರು.ತಾಲ್ಲೂಕಿನ ಝಳಕಿ ಗ್ರಾಮದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಹೋರಾಟ ಮಾಡುವುದರ ಮೂಲಕ ರಾಜ್ಯದ ಗಮನ ಸೆಳೆಯುವ ಕೆಲಸ ಮಾಡುತ್ತವೆ. ಬರದಿಂದ ರೈತರು ತತ್ತರಿಸಿ ಸಾಲಶೂಲ ಮಾಡಿ ಮನೆ, ಜಮೀನು ಕಳೆದುಕೊಂಡಿದ್ದಾರೆ.‌ ಅವರ ಧ್ವನಿಯಾಗಿ ನಿಲ್ಲುವೆ. ಇನ್ನೂ ವಕ್ಫ ಕಾಯ್ದೆ ತಿದ್ದುಪಡಿ ಯಾಗುವರೆಗೂ ಹೋರಾಟ ಮಾಡುತ್ತೆವೆ ಎಂದು ಖಡಕ ಎಚ್ಚರಿಕೆ ನೀಡಿದರು.ರಾಜ್ಯದಲ್ಲಿ ಇರುವ ಸರಕಾರ ಬಡ ಜನರ, ರೈತರ ಜಮೀನುಗಳನ್ನು ವಕ್ಫ ಕಾಯ್ದೆ ಮೂಲಕ ವಶಪಡಿಕೊಳ್ಳುವ ತವಕದಲ್ಲಿತ್ತು. ಆದರೆ ಜನರು ಎಚ್ಚತ್ತುಕೊಂಡು‌ ಸರಕಾರದ ವಿರುದ್ಧ ಬಂಡೆದ್ದಿದ್ದರಿಂದ ಸರಕಾರ ಸ್ವಲ್ಪ ಈ ಕಾರ್ಯ…

Read More

ಮೈಕ್ರೊ ಪೈನಾನ್ಸ ಕಂಪನಿಗಳು ಆರ್.ಬಿ.ಐ ನಿರ್ದೇಶನಗಳನ್ನು ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಖಡಕ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕೃತ ಫೈನಾನ್ಸಗಳು ಸಂಸ್ಥೆಗಳು ಆರ್.ಬಿ.ಐನಲ್ಲಿ ನೋಂದಣಿ ಕುರಿತ ಸಮಗ್ರ ಮಾಹಿತಿಯನ್ನು ಒಂದು ವಾರದೊಳಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮೈಕ್ರೋ ಫೈನಾನ್ಸ ಕಂಪನಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲೆಯ ಮೈಕ್ರೋ ಫೈನಾನ್ಸ್ ಕಂಪನಿಗಳ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ಫೈನಾನ್ಸ್ ಸಿಬ್ಬಂದಿಗಳು ಸಾಲ ವಸೂಲಾತಿ ಸಂದರ್ಭದಲ್ಲಿ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸುವುದು ಹಾಗೂ ದೌರ್ಜಗಳ ಕುರಿತು ದೂರು ಬಂದಿವೆ. ಈ ಹಿನ್ನೆಲೆಯಲ್ಲಿ ಆರ್.ಬಿ.ಐ ನಿರ್ದೇಶನದಡಿಯಲ್ಲಿ ಫೈನಾನ್ಸ ಕಂಪನಿಗಳು ಕಾರ್ಯ ನಿರ್ವಹಿಸಬೇಕಾಗುತ್ತದೆ. ಒಂದು ವೇಳೆ ಆರ್.ಬಿ.ಐ ನಿರ್ದೇಶನದಂತೆ ನಡೆದುಕೊಳ್ಳದೆ ಇದ್ದಲ್ಲಿ ಅಂತಹ ಪ್ರಕರಣಗಳು ಕಂಡು ಬಂದಲ್ಲಿ ಅಥವಾ ದೂರುಗಳು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಮೈಕ್ರೋ ಪೈನಾನ್ಸ ಕಂಪನಿಗಳು ಆರ್.ಬಿ.ಐ ನಿರ್ದೇಶನಗಳನ್ನು ಸರಿಯಾಗಿ ಮನವರಿಕೆ ಮಾಡಿಕೊಳ್ಳಬೇಕು ಹಾಗೂ ಕಟ್ಟು ನಿಟ್ಟಾಗಿ ನಿಯಮಗಳನ್ನು ಪಾಲಿಸಬೇಕು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ೨೦೨೪-೨೫ನೇ ಸಾಲಿನ ಬೀದಿ ನಾಯಿಗಳ ಸಂತಾನ ಹರಣ ಚಿಕಿತ್ಸೆ ಹಾಗೂ ಹುಚ್ಚುನಾಯಿ ರೋಗದ ಲಸಿಕೆ ಕಾರ್ಯಕ್ರಮ ಕೈಗೊಳ್ಳಲಾಗಿದೆ.ನಗರದ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಬೀದಿ ನಾಯಿ ಹಾಗೂ ಹುಚ್ಚುನಾಯಿಗಳ ಹಾವಳಿ ಕಂಡುಬಂದಲ್ಲಿ ೨೪×೭ ಸಹಾಯವಾಣಿ ಸಂಖ್ಯೆ ೮೧೦೫೮೫೭೦೬೬ಗೆ ಕರೆ ಮಾಡಿ ಸದುಪಯೋಗ ಪಡೆದುಕೊಳ್ಳಬಹುದು ಎಂದು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರಕ್ಕೆ ಜ.೨೮ರಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿ, ರಂಗಮಂದಿರದ ಆವರಣದಲ್ಲಿರುವ ಹಂದಿಗನೂರು ಸಿದ್ರಾಮಪ್ಪ ಬಯಲು ರಂಗಮಂದಿರದ ಕಾಮಗಾರಿಯನ್ನು ಪರಿಶೀಲಿಸಿ ಕಾಮಗಾರಿಯ ಇನ್ನುಳಿದ ಕೆಲಸಗಳನ್ನು ತುರ್ತಾಗಿ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ನೀಡವಂತೆ ಕ್ರಮವಹಿಸಲು ಸೂಚಿಸಿದರು.ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದ ವೇದಿಕೆ, ರ್ಯಾಂಪ್, ಪ್ರಸಾದ ಕೊಠಡಿ, ಶೌಚಾಲಯಗಳ ದುರಸ್ತಿ ಮತ್ತು ರಂಗಮಂದಿರದ ಹಾಲ್‌ನಲ್ಲಿರುವ ವಸ್ತುಗಳನ್ನು ವಿಲೇವಾರಿ ಮಾಡಲು ಹಾಗೂ ಅಗತ್ಯವಿದಲ್ಲಿ ಕಚೇರಿಯ ಮೆಟ್ಟಿಲುಗಳ ಕೆಳಗಡೆ ಇರುವ ಸ್ಥಳವನ್ನು ಪ್ಲೈವುಡ್ ಅಳವಡಿಸಿ ಸ್ಟೋರೂಂ ರೀತಿ ಬಳಸಲು ತಿಳಿಸಿದರು.ರಂಗಮಂದಿರ ಕಂಪೌಂಡ್‌ನಲ್ಲಿ ಸಸಿಗಳನ್ನು ನೆಡಲು ಹಾಗೂ ರಂಗಮಂದಿರ ಮತ್ತು ಬಯಲು ರಂಗಮಂದಿರ ಆವರಣದವನ್ನು ಸ್ವಚ್ಛವಾಗಿಡಲು ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

Read More

ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಡಿಸಿ ಟಿ.ಭೂಬಾಲನ್ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಸ್ತೆಗಳನ್ನು ದಾಟುವಾಗ, ವಾಹನಗಳನ್ನು ಚಲಾಯಿಸುವಾಗ ಕಡ್ಡಾಯವಾಗಿ ಸುರಕ್ಷತಾ ನಿಯಮ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ, ಜಿಲ್ಲಾ ಸಂಚಾರಿ ಪೊಲೀಸ್ ಠಾಣೆ, ಹಾಗೂ ಭಾರತ ಸ್ಕೌಟ್ & ಗೈಡ್ಸ್ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚಿಗೆ ಗಾಂಧಿ ವೃತ್ತದ ಪೊಲೀಸ್ ಠಾಣೆ ಆವರಣದಲ್ಲಿ ಆಯೋಜಿಸಿದ “ರಸ್ತೆ ಸುರಕ್ಷತಾ ಜಾಗೃತಿ ಆಂದೋಲನ” ಹಾಗೂ “ರಸ್ತೆ ಸಂಚಾರಿಕೆ ಸ್ವಯಂ ಸೇವಕರ ಬೆಂಬಲ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ೧೮ ವರ್ಷ ಒಳಗಿನ ಮಕ್ಕಳಿಗೆ ವಾಹನ ಚಾಲನೆ ಮಾಡದಂತೆ ಪಾಲಕರು ನಿಗಾ ವಹಿಸಬೇಕು ಎಂದು ಅವರು ತಿಳಿಸಿದರು.ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳಾದ ರಾಹುಲ ಎಸ್ ಡೊಂಗರೆ ಪ್ರಾಸ್ತಾವಿಕವಾಗಿ ಮಾತನಾಡಿ, ನಗರದ ವಿವಿಧ ಜನನಿಬಿಡ ಪ್ರದೇಶಗಳಲ್ಲಿ ರಸ್ತೆ ಸುರಕ್ಷತಾ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.ಭಾರತ…

Read More