Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ಮನುಷ್ಯ ಬದುಕ ಬೇಕಾದರೆ ರಕ್ತ ಮುಖ್ಯ. ಆದರೆ ಅಪಘಾತದಂಥ ತುರ್ತು ಸಂದರ್ಭದಲ್ಲಿ ಅಗತ್ಯವಿದ್ದವರಿಗೆ ರಕ್ತದಾನ ಮಾಡುವದರಿಂದ ಇನ್ನೊಬ್ಬರ ಜೀವ ಉಳಿಸಿದ ಪೂಣ್ಯ ಬರುತ್ತದೆ. ಆದ್ದರಿಂದ ಪ್ರತಿಯೊಬ್ಬ ಆರೋಗ್ಯವಂತನೂ ರಕ್ತದಾನ ಮಾಡುವ ಮೂಲಕ ಇನ್ನೊಬ್ಬರ ಜೀವ ಉಳಿಸುವ ಪ್ರಯತ್ನ ಮಾಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಕಾರ್ಯದರ್ಶಿ ಬಸವರಾಜ ಸಾಹುಕಾರ ಕುಮಸಗಿ ಹೇಳಿದರು.ಪಟ್ಟಣದ ಕರ್ನಾಟಕ ಬಿಇಡಿ ಮಹಾವಿದ್ಯಾಲಯದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಘಟಕ ಇಂಡಿ, ಶ್ರೀ ಸತ್ಯ ಸಾಯಿಬಾಬಾ ಸಾಯಿ ಸಮಿತಿ, ಸಹಯೋಗದಲ್ಲಿ ಭಗವಾನ ಸಾಯಿಬಾಬಾರ ೧೦೦ ನೇ ಹುಟ್ಟು ಹಬ್ಬದ ಪ್ರಯುಕ್ತ ನಡೆದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.ಆರೋಗ್ಯ ಅಧಿಕಾರಿ ಡಾ|| ರಾಜೇಶ ಕೋಳೆಕರ ಮಾತನಾಡಿ ರಕ್ತದಾನ ಮಾಡುವದು ಒಳ್ಳೆಯ ಕಾರ್ಯ ರಕ್ತದಾನ ಮತ್ತೊಬ್ಬರ ಪ್ರಾಣ ಉಳಿಸುವ ಜತೆಗೆ ವ್ಯಕ್ತಿ ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಲಿದೆ. ರಕ್ತದ ತೊಂದರೆ ಎದುರಾದಾಗ ಪ್ರತಿಯೊಬ್ಬರೂ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದರು.ಅಧ್ಯಕ್ಷರು ಅಖಿಲ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಹಿರಿಯ ಸಾಹಿತಿ ಅಶೋಕ ಅವರನ್ನು ಆರೂಢಶ್ರೀ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಮಾಡಿ ಬಸವನ ಬಾಗೇವಾಡಿಯ ಆರೂಢ ಸೇವಾ ಸಂಸ್ಥೆಯ ಗುರುರಾಜ ಕನ್ನೂರ ಆದೇಶಿಸಿದ್ದಾರೆ.ಮಣಿ ಅವರ ಕನ್ನಡ ನಾಡು-ನುಡಿಗಾಗಿ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಗಣನೀಯ ಸೇವೆಯನ್ನು ಪರಿಗಣಿಸಿ ೨೦೨೪-೨೫ ನೇ ಸಾಲಿನ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ಸುಲ್ತಾನಪುರ ಗ್ರಾಮದ ಗಂಗಮ್ಮ ಪಟ್ಟಣದ ಕಾಣೆಯಾದ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಾಲತವಾಡದ ಕಾಲೇಜಿಗೆ ಹೋಗಿ ಬರುವದಾಗಿ ತಿಳಿಸಿ ಮನೆಯಿಂದ ಹೋದವಳು ಮರಳಿ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿದ್ದಾಳೆ ಎಂದು ಗಂಗಮ್ಮಳ ತಂದೆ ಯಮನಪ್ಪ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಹೆಣ್ಣು ಮಕ್ಕಳನ್ನು ಸಮಾಜದಲ್ಲಿ ಆತ್ಮಸ್ಥೆರ್ಯದಿಂದ ಬದುಕಲು ಮಾನಸಿಕವಾಗಿ ಸದೃಢವಾಗಿರುವಂತೆ ಬೆಳೆಸಬೇಕೆಂದು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಹೇಳಿದರು.ಸೋಮವಾರ ಜಿ.ಪಂ, ತಾ.ಪಂ ಹಾಗೂ ಶಿಶು ಅಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಜರುಗಿದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಬೇಟಿ ಬಚಾವೋ, ಬೇಟಿ ಪಡಾವೋ ದಶಮಾನೋತ್ಸವ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ತಾಲ್ಲೂಕು ಆಡಳಿತ ಸೌದಧ ಕಚೇರಿ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು.ಹೆಣ್ಣು ಮಗು ಮನೆಯ ನಂದಾದೀಪ, ಹೆಣ್ಣು ಮಕ್ಕಳ ಲಿಂಗಾನುಪಾತ ಹೆಚ್ಚಿಸುವುದರ ಜೊತೆಗೆ ಹೆಣ್ಣು ಭ್ರೂಣಹತ್ಯೆ ಹೊಗಲಾಡಿಸಲು ಇಲಾಖೆ ಅನೆಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮನೆಯಲ್ಲಿ ಹೆಣ್ಣು ಮಕ್ಕಳಿಗೆ ಮಾತ್ರ ಉತ್ತಮ ನಡವಳಿಕೆಗಳ ಬಗ್ಗೆ ತಿಳುವಳಿಕೆ ನೀಡುವುದು ಮಾತ್ರವಲ್ಲದೆ ಗಂಡು ಮಕ್ಕಳಿಗೂ ಸಹ ಉತ್ತಮ ಸಂಸ್ಕಾರ ನೀಡಿ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಗೌರವ ಹಾಗೂ ರಕ್ಷಣೆ ನೀಡುವ ಬಗ್ಗೆ ತಿಳಿಹೇಳಬೇಕು ಎಂದರು.ಅನೀಮೀಯಾ ಮುಕ್ತ ಪೌಷ್ಠಿಕ ಕರ್ನಾಟಕ ಯೋಜನೆ ಹೆಣ್ಣು ಮಕ್ಕಳ ರಕ್ತ ಹೀನತೆ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಬೇಸಿಗೆಯ ಮುನ್ನವೇ ನೀರಿಲ್ಲದೇ ಒಣಗಿ ನಿಂತಿರುವ ಗ್ರಾಮದ ಕೆರೆಗೆ ನೀರು ಹರಿಸಿ ಜನ, ಜಾನುವಾರಗಳಿಗೆ ಅನುಕೂಲ ಕಲ್ಪಿಸುವಂತೆ ಹುಣಶ್ಯಾಳ ಗ್ರಾಮಸ್ಥರು ಆಗ್ರಹಿಸಿದ್ದಾರೆ.ತಾಲ್ಲೂಕಿನ ಹುಣಶ್ಯಾಳ ಗ್ರಾಮದ ಕೆರೆ ಬರುವ ಬೇಸಿಗೆಯ ಮುನ್ನವೇ ಹನಿ ನೀರು ಇಲ್ಲದೇ ಒಣಗಿದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಪ್ರತಿ ವರ್ಷ ಬೇಸಿಗೆಯ ಬಿಸಿಲು ಹೆಚ್ಚಾಗುತ್ತಲೇ ಇದ್ದು, ಬರುವ ಬೇಸಿಗೆಯ ಪ್ರಖರತೆ ಈಗಲೇ ಆರಂಭಗೊಂಡಿದೆ. ಒಂದು ವೇಳೆ ಬಿಸಿಲು ಹೆಚ್ಚಾದಲ್ಲಿ ಗ್ರಾಮದಲ್ಲಿ ನೀರಿನ ತಾಪತ್ರಯ ತಪ್ಪಿದ್ದಲ್ಲ. ಆದ್ದರಿಂದ ಬೇಸಿಗೆಯ ಆರಂಭಕ್ಕೆ ಮುನ್ನವೇ ಕೆರೆಗೆ ನೀರು ಹರಿಸುವುದು ಅಗತ್ಯವಾಗಿದೆ. ಈ ಬಗ್ಗೆ ಗ್ರಾಮದ ಯುವಧುರೀಣ ಮೈನೂದ್ಧಿನ್ ಬಾಗವಾನ ಹಾಗೂ ಶಾಂತಗೌಡ ಕೋಟಿಖಾನಿ ಮಾತನಾಡಿ, ನಮ್ಮೂರಿನ ಕೆರೆ ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆಯ ಪೈಪ ಲೈನ್‌ನಿಂದ ಕೇವಲ ಒಂದು ಕಿಲೋಮೀಟರ್ ಅಂತರದಲ್ಲಿದೆ. ರಾಂಪೂರ ಕ್ರಾಸ್ ಹತ್ತಿರ ವಾಲ್ ಅಳವಡಿಸುವುದರ ಮೂಲಕ ಕೆರೆಗೆ ನೀರು ಪೂರೈಸಲು ಅವಕಾಶವಿದೆ. ಇದಕ್ಕೆ ಕೆಬಿಜೆಎನ್‌ಎಲ್ ಅಧಿಕಾರಿಗಳು ಕ್ರಮವಹಿಸಬೇಕಾಗಿದೆ.೨೦೧೯ರಲ್ಲಿ ಹುಣಶ್ಯಾಳ ಕೆರೆಗೆ ನೀರು ತುಂಬಿಸಲು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ಹಾಗೂ ಹುಬ್ಬಳ್ಳಿ ವಿದ್ಯುತ ಸರಬರಾಜು ಕಂಪನಿ ನಿಯಮಿತ ವತಿಯಿಂದ ಇಂಡಿ ತಾಲೂಕಿನ ಅಗಸನಾಳ ಗ್ರಾಮದಲ್ಲಿ ೩೩ ಕೆ.ವ್ಹಿ ೧೬ ಸಣ್ಣ ನೀರಾವರಿ ಕೆರೆ ತುಂಬುವ ಯೋಜನೆಯ ಏತ ನೀರಾವರಿ ಮುಖ್ಯ ಸ್ಥಾವರಕ್ಕೆ ೩೩ ಕೆ.ವ್ಹಿ ವಿದ್ಯುತ್ ಮಾರ್ಗ ವನ್ನು ಹಾಗೂ ಈಗಾಗಲೇ ಇರುವ ೩೩ ಕೆ.ವ್ಹಿ ಹೊರ್ತಿ ವಿದ್ಯುತ್ ವಿದ್ಯುತ್ ಕೇಂದ್ರದಲ್ಲಿ ಒಂದು ಟರ್ಮಿನಲ್ ಬೇ. ನಿರ್ಮಿಸುವ ಮೂಲಕ ೮.೨೫ ಕಿ.ಮೀ ೩೩ ಕೆವ್ಹಿ ವಿದ್ಯುತ್ ಮಾರ್ಗ ನಿರ್ಮಾಣ ಕಾಮಗಾರಿ ಮುಕ್ತಾಯಗೊಂಡಿದೆ.ಶೀಘ್ರದಲ್ಲೇ ಈ ಮಾರ್ಗದಲ್ಲಿ ವಿದ್ಯುಧೀಕರಸಲಾಗುತ್ತಿದ್ದು, ಸಾರ್ವಜನಿಕರು ಹೊರ್ತಿ, ಅಗಸನಾಳ ಗ್ರಾಮಗಳ ವಿವಿಧ ಸರ್ವೆ ನಂಬರ ಮಾರ್ಗಗಳಲ್ಲಿನ ವಿದ್ಯುತ್ ಕಂಬಗಳನ್ನು ಹತ್ತುವುದು, ಕಂಬಗಳ ಮೇಲೆ ಕೊಂಬೆ ಅಥವಾ ಬಳ್ಳಿಗಳನ್ನು ನೆಡುವುದು, ವಿದ್ಯುತ್ ಪ್ರವಹಿಸುವ ವಸ್ತುಗಳನ್ನು ವಿದ್ಯುತ್ ತಂತಿ ಮೇಲೆ ಎಸೆಯುವುದು ಅಥವಾ ದನಕರುಗಳನ್ನು ಕಂಬಗಳಿಗೆ ಕಟ್ಟುವುವುದು ಮಾಡಿರುವುದರಿಂದ ಆಗುವಂತಹ ಅನಾಹುತಗಳಿಗೆ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ಹಾಗೂ ಹುಬ್ಬಳ್ಳಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ “ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ” ಕಾರ್ಯಕ್ರಮದ ಅಂಗವಾಗಿ ಜ.೩೦ರ ಬೆಳಿಗ್ಗೆ ೯ಗಂಟೆಗೆ ಜನಜಾಗೃತಿ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ. ರ‍್ಯಾಲಿಯು ನಗರದ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿಚೌಕ ಮಾರ್ಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯಕ್ಕೆ ಬಂದು ಮುಕ್ತಾಯವಾಗಲಿದೆ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಧಾರ ದಾಖಲಾತಿಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಆಧಾರ ಉಸ್ತುವಾರಿ ಸಮಿತಿ ಸಭೆಯಲ್ಲಿ ಚರ್ಚಿಸಿದಂತೆ ಶಾಲೆ/ ಕಾಲೇಜಿನಲ್ಲಿರುವ ೫ರಿಂದ ೧೭ ವರ್ಷ ಪೂರೈಸಿದ ಮಕ್ಕಳ ಆಧಾರ ತಿದ್ದುಪಡಿ (ಶಾಲಾ ದಾಖಲಾತಿಯಂತೆ), ಜೈವಿಕ ಅಪಡೇಟ್ ನ್ನು ಪ್ರಸಕ್ತ ಶೈಕ್ಷಣಿಕ ವರ್ಷ ಮುಗಿಯುವುದರಲ್ಲಿ ಮಾಡಿಕೊಳ್ಳಲು ಸೂಚಿಸಿದೆ.ಜಿಲ್ಲೆಯಲ್ಲಿ ೨,೫೦,೩೧೭ ಮಕ್ಕಳಲ್ಲಿ ೫ ರಿಂದ ೭ ವರ್ಷದ ೧,೫೬,೫೮೨ ಮಕ್ಕಳು ಹಾಗೂ ೧೫ ರಿಂದ ೧೭ ವರ್ಷದ ೯೩,೭೩೫ ಮಕ್ಕಳ ಕಡ್ಡಾಯ ಜೈವಿಕ ಅಪಡೇಟ್ ಗೆ ಬಾಕಿ ಇದೆ. ಪಾಲಕರು ಹತ್ತಿರದ ಆಧಾರ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಮಕ್ಕಳ ಕಡ್ಡಾಯ ಜೈವಿಕ ಅಪಡೇಟ್ ಮಾಡಿಕೊಳ್ಳಬಹುದು.೧೦ ವರ್ಷಗಳ ಹಿಂದೆ ಆಧಾರ ಸೃಜಿಸಲಾದ ನಾಗರಿಕರು ತಮ್ಮ ಗುರುತಿನ ಹಾಗೂ ವಿಳಾಸದ ಪುರಾವೆಗಳನ್ನು ಕಾಲೋಚಿತಗೊಳಿಸಲು ಅಪಡೇಟ್ ಮಾಡಿಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ ೧,೮೬,೬೭೫ ಆಧಾರ ಸಂಖ್ಯೆಗಳ ಗುರುತಿನ ಹಾಗೂ ವಿಳಾಸದ ಪುರಾವೆಗಳನ್ನು ಅಪಡೇಟ್ ಮಾಡಬೇಕಾದ ಒಟ್ಟು ೧,೮೬,೬೭೫ ಆಧಾರ ಕಾರ್ಡ್ಗಳಿದ್ದು, ಸದರಿ ಸೇವೆಯನ್ನು ಸಾರ್ವಜನಿಕರು ಆಧಾರ ಕೇಂದ್ರಗಳಿಗೆ ಭೇಟಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಕೇಂದ್ರ ಕಾರಾಗೃಹದ ತೋಟದಲ್ಲಿರುವ ಹುಣಸೇ ಹಣ್ಣಿನ ಮರಗಳಲ್ಲಿ ಬಿಟ್ಟಿರುವ ಹಣ್ಣನ್ನು ಫೆ.೫ ರ ಬೆಳಿಗ್ಗೆ ೧೧ಗಂಟೆಗೆ ಬಹಿರಂಗ ಹರಾಜು ಮಾಡಲು ನಿರ್ಧರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೩೫೨-೨೭೨೦೪೪ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೇಂದ್ರ ಕಾರಾಗೃಹ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ ವತಿಯಿಂದ ಫೆ.೧ರಂದು ಮಡಿವಾಳ ಮಾಚಿದೇವ, ಫೆ.೫ ರಂದು ಸವಿತಾ ಮಹರ್ಷಿ ಜಯಂತಿ ಹಾಗೂ ಫೆ.೧೦ರಂದು ಕಾಯಕ ಶರಣರ ಜಯಂತಿ ಕಾರ್ಯಕ್ರಮಗಳನ್ನು ಅತ್ಯಂತ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಯಿತು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ, ಫೇಬ್ರವರಿ ೧ರಂದು ಮಡಿವಾಳ ಮಾಚಿದೇವ ಹಾಗೂ ಫೆಬ್ರವರಿ ೧೦ ರಂದು ಕಾಯಕರ ಶರಣರ ಜಯಂತಿ ಕಾರ್ಯಕ್ರಮಗಳನ್ನು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮಹನೀಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಕಾರ್ಯಕ್ರಮವನ್ನು ನಗರದ ರಂಗಮಂದಿರ ದಲ್ಲಿ ಆಯೋಜಿಸಲಾಗಿದೆ.ಬೆಳಿಗ್ಗೆ ೧೦ ಘಂಟೆಗೆ ಸಿದ್ದೇಶ್ವರ ದೇವಸ್ಥಾನದಿಂದ ರಂಗಮಂದಿರದವರೆಗೆ ಮೆರವಣಿಗೆ ಆಯೋಜನೆ ಮಾಡಲಾಗಿದೆ. ನಂತರ ವೇದಿಕೆ ಕಾರ್ಯಕ್ರಮ ಮಾಡುವ ಮೂಲಕ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉಪನ್ಯಾಸ ಸಂಗೀತ ಕಾರ್ಯಕ್ರಮ ಏರ್ಪಡಿಸಲು ನಿರ್ಧರಿಸಲಾಯಿತು.ಜಿಲ್ಲಾಡಳಿತದಿಂದ ಆಚರಿಸಲಾಗುವ ಈ ಎಲ್ಲ ಮಹನಿಯರ ಜಯಂತಿ ದಿನಗಳಂದು, ಜಯಂತಿ ಕಾರ್ಯಕ್ರಮ ಹಾಗೂ ಮೆರವಣಿಗೆ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸ್ವಚ್ಛತೆ, ಸಮರ್ಪಕ ವಿದ್ಯುತ್…

Read More