Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ನೇ ಸಾಲಿನ ಕೃಷಿ ಇಲಾಖೆಯ ಹೈಟೆಕ್ ಹಾರ್ವೆಸ್ಟರ್ ಹಬ್ ಕಾರ್ಯಕ್ರಮದಡಿ ಶುಗರ್‌ಕೇನ್ ಹಾರ್ವೆಸ್ಟರ್ ಹಬ್ ಹಾಗೂ ಕಂಬೈನ್ ಹಾರ್ವೆಸ್ಟರ್ ಹಬ್‌ಗಳನ್ನು ಸಹಾಯಧನದಡಿ ವಿತರಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿ ಸಾಮಾನ್ಯ ಹಾಗೂ ಪರಿಶಿಷ್ಟ ವರ್ಗದ ವೈಯಕ್ತಿಕ ಫಲಾನುಭವಿಗಳು ಹಾಗೂ ಸಂಘ- ಸಂಸ್ಥೆಗಳು ಶುಗರ್‌ಕೇನ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದ್ದು, ಸಾಮಾನ್ಯ ಹಾಗೂ ಪರಿಶಿಷ್ಟ ವರ್ಗದ ಫಲಾನುಭವಿಗಳಿಗೆ ಕಂಬೈನ್ ಹಾರ್ವೆಸ್ಟರ್ ಹಬ್‌ಗಳ ಸಹಾಯಧನದಡಿ ನೀಡಲಾಗುತ್ತಿದ್ದು.ಯಂತ್ರೋಪಕರಣಗಳ ಖರೀದಿಗೆ ಅನುದಾನ ಲಭ್ಯತೆ, ಆದ್ಯತೆಯ ಆಧಾರದ ಮೇಲೆ ಸಹಾಯಧನ ಮಂಜೂರು ಮಾಡಲಾಗುತ್ತಿದ್ದು .ಆಸಕ್ತ ರೈತರು, ರೈತ ಸಂಘಗಳು ಹಾಗೂ ಸಂಸ್ಥೆಗಳು ಕೊನೆಯ ದಿನಾಂಕ ಆಗಸ್ಟ್ ೧೦ ರೊಳಗೆ ಅರ್ಹರು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮರ್ಪಕವಾಗಿ ಕಾರ್ಯನಿರ್ವಹಿಸದೇ ಇರುವ ವಿವಿಧ ಸಂಘಗಳಿಗೆ ನೋಟೀಸ್ ನೀಡಲಾಗುತ್ತಿದ್ದು, ೭ ದಿನದೊಳಗಾಗಿ ಕಚೇರಿಗೆ ಖುದ್ದಾಗಿ ಹಾಜರಾಗಿ ಹೇಳಿಕೆ ಹಾಗೂ ದಾಖಲೆಗಳನ್ನು ಸಲ್ಲಿಸಬೇಕು. ಇಲ್ಲವಾದಲ್ಲಿ ಯಾವುದೇ ಆಕ್ಷೇಪಣೆ ಇಲ್ಲವೆಂದು ಭಾವಿಸಿ ಸಂಘಗಳ ನೋಂದಣಿ ರದ್ದತಿಗಾಗಿ ಕ್ರಮ ಕೈಗೊಳ್ಳಲಾಗುವುದು. ೭ ದಿನಗಳ ಮೇಲೆ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸಹಕಾರಿ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.ಮುದ್ರಣಾಲಯ ಸಹಕಾರ ಸಂಘ ನಿ, ವಿಜಯಪುರ, ವಿಜಾಪೂರ ಬ್ರಿಕ್ಸ್ ಮತ್ತು ಟಾಯಿಲ್ಸ್ ಕೂಲಿಕಾರರ ಸಹಕಾರ ಸಂಘ ನಿ, ವಿಜಯಪುರ. ಶ್ರೀ ಸಿದ್ದೇಶ್ವರ ಮಹಿಳಾ ವಿವಿದೋದ್ದೇಶಗಳ ಸಹಕಾರ ನಿ..ವಿಜಯಪುರ ಹಾಗೂ ಮಹಿಳಾ ವಿವಿದೋದ್ದೇಶಗಳ ವಿಜಯಪುರ. ಈ ಸಂಘಗಳು ಸಹಕಾರ ವರ್ಷದಿಂದ ಸ್ಥಗಿತಗೊಂಡಿದ್ದು, ಸಮರ್ಪಕವಾಗಿ ಕಾರ್ಯನಿರ್ವಹಿಸದೇ ಇರುವುದು ಗಮನಕ್ಕೆ ಬಂದಿದೆ.ಈ ಸಂಘಗಳಿಗೆ ಅಂತಿಮ ಅವಕಾಶವಿದ್ದು, ಸಮಾಪನೆಗೊಂಡ ಸಹಕಾರ ಸಂಘಗಳ ವಿರುದ್ಧ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ೧೯೫೯ ಕಲಂ ೭೨(೨)ರ ಮೇರೆಗೆ ಮೇಲಿನ ಸಂಘದ ಸದಸ್ಯರಿಗೆ ಹಾಗೂ ಆಡಳಿತ ಮಂಡಳಿಯವರು ಈ ಪ್ರಕಟಣೆಯನ್ನೇ ನೋಟೀಸ್ ಎಂದು ಪರಿಗಣಿಸಲು ಸಹಕಾರ…

Read More

ಡಿಸ್ಟಿಲರಿ 650 ಕೆಎಲ್‌ಪಿಡಿ ಹಾಗೂ ವಿದ್ಯುತ್ ಉತ್ಪಾದನೆ 43.5 ಮೆಗಾವಾಟ್‌ಗೆ ಹೆಚ್ಚಳದ ಯೋಜನೆಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ರೈತರ ಜೀವನಾಡಿಯಾಗಿರುವ ಶ್ರೀ ದತ್ತ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಹಾವಿನಾಳ ಸಕ್ಕರೆ ಕಾರ್ಖಾನೆಯ ಕಬ್ಬು ನುರಿಸುವ ಸಾಮರ್ಥ್ಯ ವಿಸ್ತರಣೆ ಹಾಗೂ ಇತರೆ ಅಭಿವೃದ್ಧಿ ಯೋಜನೆಗಳ ಕುರಿತು ಸಾರ್ವಜನಿಕ ಸಭೆಯು ಬುಧವಾರ ಕಾರ್ಖಾನೆಯ ಆವರಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಮ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.ಸಭೆಯನ್ನುದೇಶಿಸಿ ಮಾತನಾಡಿದ ಡಾ. ಔದ್ರಾಮ ಅವರು ಕಾರ್ಖಾನೆಯ ಕಬ್ಬು ನುರಿಸುವ ಸಾಮರ್ಥ್ಯ ಹೆಚ್ಚಿಸುವದರಿಂದ ರೈತರು ಹಾಗೂ ಸುತ್ತಮುತ್ತಲಿನ ಗ್ರಾಮದ ಸಾರ್ವಜನಿಕರ ಮೇಲೆ ಆಗುವ ಪರಿಣಾಮಗಳ ಕುರಿತು ಹಾಗೂ ಕಾರ್ಖಾನೆಯ ತ್ಯಾಜ್ಯಗಳಿಂದ ಪರಿಸರ ಹಾಳಾಗದಂತೆ ವೈಜ್ಞಾನಿಕವಾಗಿ ಕೈಗೊಂಡ ಕ್ರಮಗಳ ಕುರಿತು ಸವಿಸ್ತಾರ ಮಾಹಿತಿ ಕಲೆಹಾಕಿದ ಅವರು ರೈತರಿಂದ, ಸಾರ್ವಜನಿಕರಿಂದ ಹಾಗೂ ಪರಿಸರ ವಾದಿಗಳಿಂದ ಆಕ್ಷೇಪಣೆ ಇದ್ದರೆ ನಿಖರ ಪುರಾವೆಗಳೊಂದಿಗೆ ಮಾಹಿತಿ ತಿಳಿಸುವಂತೆ ಹೇಳಿದರು.ಸಭೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ವಿಜಯಪುರದ ಪರಿಸರ ಅಧಿಕಾರಿ ಎಸ್.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ರಾಜ್ಯ ಸಂಸ್ಥೆಯ ಉಪಾಧ್ಯಕ್ಷ ಗಜಾನನ ಮನ್ನಿಕೇರಿ, ರಾಜ್ಯ ಕಾಯ೯ಕಾರಿ ಸಮಿತಿ ಸದಸ್ಯ ಸಿ ಎ ಸಾವಳಗಿ, ರಾಜ್ಯ ಸಂಘಟನಾ ಆಯುಕ್ತೆ(ಗೈಡ್) ಮಂಜುಳಾ ಸಿ ರವರು ಗುರುವಾರ ಭೇಟಿ ನೀಡಿದರು.ಈ ವೇಳೆ ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಮತ್ತು ನಗರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ರಾಘವೇಂದ್ರ ಹೊಸೂರ ರವರನ್ನು ಭೇಟಿಮಾಡಿ ಸ್ಕೌಟ್ ಮತ್ತು ಗೈಡ್ ಚಟುವಟಿಕೆಗಳಿಗೆ ಸಹಕರಿಸಲು, ಪ್ರಾರಂಭಿಕ ತರಬೇತಿ ಆಯೋಜನೆ ಹಾಗೂ ಮೂಲ ತರಬೇತಿ ಸಂಘಟನೆಗೆ ಸಂಪೂರ್ಣವಾಗಿ ಸಹಕರಿಸಲು ತಿಳಿಸಿದರು.ನಂತರ ಲೊಯೋಲ ಆಂಗ್ಲ ಮಾಧ್ಯಮ ಶಾಲೆಯ ಪ್ರಾಚಾರ್ಯರನ್ನು ಭೇಟಿ ಮಾಡಿ ಬನ್ನಿ ಮತ್ತು ಕಬ್ ಬುಲ್ ಬುಲ್ ದಳಗಳನ್ನು ಪ್ರಾರಂಭಿಸುವಂತೆ ವಿನಂತಿಸಿದರು.ಮಧ್ಯಾಹ್ನ ಸ್ಕೌಟ್ ಭವನದಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯು ಜಿಲ್ಲಾ ಮುಖ್ಯ ಆಯುಕ್ತ ಸಿದ್ದಣ್ಣ ಸಕ್ರಿ ಅಧ್ಯಕ್ಷತೆಯಲ್ಲಿ ಜರುಗಿತು.ಸಭೆಯಲ್ಲಿ ಜಿಲ್ಲಾ ಸಂಸ್ಥೆಯ ಅಭಿವೃದ್ದಿಯ ಕುರಿತು ಚಚಿ೯ಸಲಾಯಿತು.ಸದರಿ ಸಭೆಯಲ್ಲಿ ಮಾನ್ಯ ಉಪನಿರ್ದೇಶಕರು(ಆಡಳಿತ) ಶಾಲಾ ಶಿಕ್ಷಣ ಇಲಾಖೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಇದೇ ದಿ.೨೬ ರಂದು ಕಾರ್ಗಿಲ್ ವಿಜಯೋತ್ಸವವನ್ನು ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಮಾಜಿ ಸೈನಿಕರ ಕಲ್ಯಾಣ ಸಂಘದ ಅಧ್ಯಕ್ಷ ಎಲ್.ಕೆ. ರಾಮಪ್ಪ ಹೇಳಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾಗಿದ್ದ ಸೈನಿಕರನ್ನು ಆಹ್ವಾನಿಸಲಾಗಿದ್ದು, ಅವರ ಅನುಭವ ಹಾಗು ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ. ಕಾರ್ಗಿಲ್ ಯುದ್ಧದ ಕಷ್ಟದ ಸನ್ನಿವೇಶಗಳು, ನಮ್ಮ ವೀರಯೋಧರ ಸಾಹಸದ ಗಾಥೆಯನ್ನು ವಿವರಿಸುವ ನಿಟ್ಟಿನಲ್ಲಿ ವಿಶೇಷ ವಿಡಿಯೋಗಳ ಪ್ರದರ್ಶನ ಹಾಗೂ ಮಾಜಿ ಸೈನಿಕರಿಗೆ ಗೌರವಾರ್ಪಣೆ ಸೇರಿದಂತೆ ವಿವಿಧ ಅರ್ಥಪೂರ್ಣ ಕಾರ್ಯಕ್ರಮಗಳು ಜರುಗಲಿವೆ.ಬೆಳಿಗ್ಗೆ ೭ ಕ್ಕೆ ಸೈನಿಕ ಶಾಲೆಯಲ್ಲಿರುವ ಹುತಾತ್ಮ ಸ್ತಂಭದಲ್ಲಿ ಬೆಳಿಗ್ಗೆ ೭ ಕ್ಕೆ ಗೌರವಾರ್ಪಣೆ ನಡೆಯಲಿದೆ. ಅಲ್ಲಿಂದ ಶಾಂತಿಯುತ ಮೆರವಣಿಗೆ ಆರಂಭವಾಗಲಿದ್ದು, ಸೈನಿಕ ಶಾಲೆಯ ಕೆಡೆಟ್‌ಗಳು, ಎನ್‌ಸಿಸಿ ಕೆಡೆಟ್‌ಗಳು ಈ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ, ನಗರ ಶಾಸಕ ಬಸನಗೌಡ…

Read More

ಹಣದ ಆಮಿಷವೊಡ್ಡಿ ಸೂಪರ್ ಸೀಡ್ ಮಾಡಲು ಯತ್ನ | ಟಿ ವೆಂಕಟೇಶ್ ಗಂಭೀರ ಆರೋಪ ಉದಯರಶ್ಮಿ ದಿನಪತ್ರಿಕೆ ಎಚ್ ಡಿ ಕೋಟೆ: ತಾಲೂಕಿನಿಂದ ತಾಲೂಕಿನಗೆ ಬಂದು ಶಾಸಕ ಅನಿಲ್ ಚಿಕ್ಕಮಾದು ಹಣ ದಂದೆಯಲ್ಲಿ ನಿರತರಾಗಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಂಡು 3 ಲಕ್ಷದವರೆಗೂ ಬಡ್ಡಿ ರಹಿತ ಸಾಲ ನೀಡುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಸೂಪರ್ ಸೀಡ್ ಮಾಡುವ ಮೂಲಕ ಅವುಗಳನ್ನು ನಿಷ್ಕ್ರಿಯಗೊಳಿಸಿ , ರೈತರಿಗೆ ಮೋಸ ಮಾಡುತ್ತಿದ್ದಾರೆ. ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಅಧಿಕಾರ ದುರುಪಯೋಗ ಮಾಡಲು ನಾವು ಬಿಡುವುದಿಲ್ಲ. ಟಿಎಪಿಸಿಎಂಎಸ್ ನ ೮ ಸ್ಥಾನಗಳಲ್ಲೂ ( ಬಿಜೆಪಿ -೦೫, ಜೆಡಿಎಸ್ -೦೩) ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ. ನಿಮಗೆ ತಕ್ಕಪಾಠ ಕಳಿಸುತ್ತಾರೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಟಿ ವೆಂಕಟೇಶ್ ವಾಗ್ದಾಳಿ ನಡೆಸಿದರು.ತಾಲೂಕಿನ ಗಂಗಡಹೊಸಹಳ್ಳಿಯಲ್ಲಿ ಮೈತ್ರಿ ಅಭ್ಯರ್ಥಿಗಳ ಪರ ಮತಯಾಚನೆ ಬಳಿಕ ಮಾತನಾಡಿದ ಅವರು, ಶಾಸಕ ಅನಿಲ್ ಚಿಕ್ಕಮಾದುಗೆ ಪಾಪದ ಕೊಡ ತುಂಬಿದೆ.…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಇಲ್ಲಿನ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ಹದಗೆಟ್ಟಿರುವ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಿಡಗುಂದಿ ತಾಲ್ಲೂಕು ಘಟಕದ ಪದಾಧಿಕಾರಿಗಳು ಗುರುವಾರ ಇಲ್ಲಿನ ಗ್ರಾಮ ಪಂಚಾಯಿತಿ ಎದುರು ಪ್ರತಿಭಟಿಸಿದರು.ಕರವೇ ನಿಡಗುಂದಿ ತಾಲ್ಲೂಕು ಘಟಕದ ಅಧ್ಯಕ್ಷ ಆನಂದ ಹಡಗಲಿ ಮಾತನಾಡಿ,ಆಲಮಟ್ಟಿ ಗ್ರಾಮ ಪಂಚಾಯಿತಿಯ ಎಲ್ಲಾ ವಾರ್ಡ್‌ಗಳಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಮುಳ್ಳಿನ ಕಂಟಿಗಳು ಬೆಳೆದಿವೆ. ರಸ್ತೆಯ ತುಂಬಾ ತಗ್ಗುಗಳು ಬಿದ್ದು ನೀರು ನಿಲ್ಲುತ್ತಿರುವುದರಿಂದ ಸೊಳ್ಳೆಗಳ ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಈಗಾಗಲೇ ವಾರ್ಡ್ ನಂ. 03ರಲ್ಲಿ ತಗ್ಗು-ಗುಂಡಿಗಳಿಂದಾಗಿ ಎರಡು ಬೈಕ್ ಅಪಘಾತಗಳು ಸಂಭವಿಸಿದ್ದು, ರಸ್ತೆಗಳು ಮೃತ್ಯುಕೂಪಗಳಾಗಿ ಪರಿವರ್ತನೆಯಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕಳೆದ ಹಲವು ದಿನಗಳಿಂದ ಗ್ರಾಮದಲ್ಲಿ ಕಸದ ವಾಹನ ಬಾರದ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಬಿಸಾಡುವಂತಾಗಿದೆ. ತಕ್ಷಣವೇ ರಸ್ತೆಗೆ ಮಣ್ಣು ಅಥವಾ ಮರಳು ಹಾಕಿ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು, ಮುಳ್ಳಿನ ಕಂಟಿಗಳನ್ನು ತೆರವುಗೊಳಿಸಬೇಕು ಹಾಗೂ ಪ್ರತಿದಿನ ಕಸದ ವಾಹನ…

Read More

ಜಮಖಂಡಿ ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆಯಲ್ಲಿ ಅಗ್ನಿಶಾಮಕ ದಳದ ಅಣುಕು ಪ್ರದರ್ಶನ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: “ಅಗ್ನಿ ಅವಘಡಗಳು ಹೇಳಿ ಬರುವುದಿಲ್ಲ; ಆದರೆ ಮುನ್ನೆಚ್ಚರಿಕೆ ಮತ್ತು ಸಮಯಪ್ರಜ್ಞೆ ಇದ್ದರೆ ಅಪಾಯವನ್ನು ತಪ್ಪಿಸಬಹುದು” ಎಂಬ ಸಂದೇಶವನ್ನು ಸಾರುವ ಉದ್ದೇಶದಿಂದ ಜಮಖಂಡಿಯ ಪ್ರತಿಷ್ಠಿತ ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ಅಗ್ನಿ ನಂದಿಸುವ ವಿಧಾನಗಳ ಅಣುಕು ಪ್ರದರ್ಶನ ಹಾಗೂ ಜಾಗೃತಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಜಮಖಂಡಿ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಎಂ.ಎಸ್. ಹೂಗಾರ, “ಅಗ್ನಿ ಅವಘಡ ಸಂಭವಿಸಿದಾಗ ಗಾಬರಿಯಾಗದೇ ಧೈರ್ಯದಿಂದ ಸೂಕ್ತ ಕ್ರಮ ಕೈಗೊಂಡರೆ ಜೀವಹಾನಿ ಹಾಗೂ ಆಸ್ತಿಪಾಸ್ತಿಯ ನಷ್ಟವನ್ನು ಬಹುಮಟ್ಟಿಗೆ ತಡೆಯಬಹುದು. ಪ್ರತಿಯೊಬ್ಬ ವಿದ್ಯಾರ್ಥಿಯೂ ಅಗ್ನಿ ಸುರಕ್ಷತೆಯ ಮೂಲಭೂತ ಜ್ಞಾನ ಹೊಂದಿರುವುದು ಇಂದಿನ ಅಗತ್ಯವಾಗಿದೆ” ಎಂದು ಹೇಳಿದರು.ಮನೆಗಳಲ್ಲಿ ಅಡುಗೆ ಅನಿಲ (LPG) ಸೋರಿಕೆಯಾದಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾಗುವ ಬೆಂಕಿಯನ್ನು ನಿಯಂತ್ರಿಸುವ ವಿಧಾನಗಳು ಹಾಗೂ ಅಗ್ನಿ ನಂದಿಸುವ ಉಪಕರಣಗಳ ಬಳಕೆಯ ಕುರಿತು ಸಿಬ್ಬಂದಿ ಪ್ರಾಯೋಗಿಕ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಾ.ಡಿ.ಜಿ.ಸಾಗರ ಬಣ) ಜಿಲ್ಲಾ ಸಮಿತಿ ವಿಜಯಪುರ ವತಿಯಿಂದ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ದೇಶದ ಇನ್ನಿತರ ಪರೀಕ್ಷೆಗಳ ಅವ್ಯವಸ್ಥೆಯನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಡಾ.ಆನಂದ ಅವರ ಮುಖಾಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು.ಈ ವೇಳೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣನವರ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗಳು ವ್ಯವಸ್ಥೆಯನ್ನು ಸುಧಾರಿಸುವ ಅವಕಾಶಗಳು ಆಗಿರುತವೆ. ಸರಕಾರಗಳು ಜನರ ಅಸಮಾಧನವನ್ನು ಅಲಿಸುವ ಸಾಮರ್ಥ್ಯ ಹೊಂದಿದಾಗ ಮಾತ್ರ ಅವು ಬಲಿಷ್ಠವಾಗುತ್ತದೆ. ದೇಶದ ಯುವ ಜನತೆ ಭವಿಷ್ಯಕ್ಕೆ ಧಕ್ಕೆ ತರುತ್ತಿರುವ ದೇಶದ ಪರೀಕ್ಷೆಗಳ ಅವ್ಯವಸ್ಥೆಯನ್ನು ಸರಿಪಡಿಸಬೇಕು. ಜೀವ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ಕೂಡಲೇ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡರಾದ ರಮೇಶ ದರಣಾಕರ, ಮಹಾಂತೇಶ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಕೂಲಿಕಾರರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ದೃಷ್ಟಿಯಿಂದ ಮತ್ತಷ್ಟು ಅನುಕೂಲವಾಗುವ ರೀತಿಯಲ್ಲಿ ಮಾರ್ಪಾಡು ಮಾಡಿ ವಿಬಿ ಜಿ ರಾಮ್ ಜಿ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ಅದರ ಉಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಸಿಂದಗಿ ತಾಲೂಕು ಪಂಚಾಯತ್ ಇಓ ರಾಮು ಜಿ ಅಗ್ನಿ ಹೇಳಿದರು.ಅವರು ತಾಲೂಕಿನ ಮಲಘಾಣ ಗ್ರಾಮ ಪಂಚಾಯತ ವ್ಯಾಪ್ತಿಯ ಮಲಘಾಣ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕಾ ಮಿಷನ್(ಗ್ರಾಮೀಣ) ಕಾಯ್ದೆ 2025 ಯೋಜನೆಯ ಮಾಹಿತಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮದಡಿ ಜನಜಾಗೃತಿ ಅಭಿಯಾನ ಕೈಗೊಂಡು ಕಾರ್ಯಕ್ರಮ ಉದ್ದೇಶೀಸಿ ಮಾತನಾಡುತ್ತಿದ್ದರು .ಜುಲೈ -1 ರಿಂದ ನರೇಗಾ ಯೋಜನೆ ಬದಲಾಗಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮೀಷನ್ ಗ್ರಾಮೀಣ ಕಾಯ್ದೆ ಯೋಜನೆ ಜಾರಿಗೆ ಬಂದಿದೆ ಇದರ ಅನ್ವಯ ಹೊಸ ಕೂಲಿ ದರ 370.ರೂ ರಿಂದ 382.ರೂ ಗೆ ಹೆಚ್ಚಿಸಲಾಗಿದೆ ಹಾಗೂ ಮಾವನ ದಿನಗಳನ್ನು100 ರಿಂದ 125 ಕ್ಕೆ ಹೆಚ್ಚಿಸಲಾಗಿದೆ ಆದ್ದರಿಂದ ಕೂಲಿಕಾರರು ವಲಸೆ…

Read More