Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಜ್ಯದಲ್ಲಿ ಅನೇಕ ಮಠಮಾನ್ಯಗಳಿದ್ದು, ಧರ್ಮ ರಕ್ಷಣೆ, ಶಿಕ್ಷಣ, ಸಾಹಿತ್ಯ ಸೇರಿದಂತೆ ಜನರ ನೋವು-ನಲಿವುಗಳಿಗೆ ಸ್ಪಂದಿಸುವ ಕಾರ್ಯವನ್ನು ಮಾಡುತ್ತಾ ಬಂದಿರುತ್ತವೆ. ರಾಜ್ಯದ ಶ್ರೇಯೋಭಿವೃದ್ಧಿಯಲ್ಲಿ ಮಠಗಳ ಮಾತ್ರ ದೊಡ್ಡದು ಎಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಕವಿ ಡಾ.ಸಿದ್ದಪ್ಪ ಬಿದರಿ ಹೇಳಿದರು.ಸಿಂದಗಿ ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ ಸಾರಂಗಮಠದ ಆರ್.ಡಿ.ಪಾಟೀಲ ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಸಿ ಮಾತನಾಡಿದ ಅವರು, ದೇಶವು ಪ್ರಗತಿ ಸಾದಿಸಬೇಕಾದರೆ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಪ್ರಬಲವಾಗಿರಬೇಕು. ಸಾಮಾಜಿಕ ಪ್ರಗತಿಗೆ ಶತಮಾನಗಳಿಂದ ಮಠಮಾನ್ಯಗಳು ಶಿಕ್ಷಣಕ್ಕೆ ಒತ್ತು ಕೊಟ್ಟಿವೆ. ಶೈಕ್ಷಣಿಕ ಪ್ರಗತಿಯಲ್ಲಿ ಮಠಗಳ ಪಾತ್ರ ದೊಡ್ಡದಿದೆ ಎಂದರು.ಈ ವೇಳೆ ೨೦೨೩-೨೪ನೆಯ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ವಿವಿಧ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾಥಿಗಳನ್ನು ಪಾರಿತೋಷಕ ನೀಡಿ ಗೌರವಿಸಲಾಯಿತು. ಮತ್ತು ಮಹಾವಿದ್ಯಾಲಯದಲ್ಲಿ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇವರ ವತಿಯಿಂದ ಕೊಡಮಾಡುವ ರಾಜ್ಯ ಯುವ ಪ್ರಶಸ್ತಿಯನ್ನು ಪಟ್ಟಣದ ಮಾರುತಿ ನಗರದ ನಿವಾಸಿ, ಕನ್ನಡಪರ ಸಂಘಟನೆಗಳ ಹೋರಾಟಗಾರ ರಾಜುಗೌಡ ತುಂಬಗಿ ಭಾಜನರಾಗಿ ಸವಣೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು
ರೂ.457 ಕೋಟಿ ಬಿಡುಗಡೆಗೆ ಸಚಿವ ಎಂ.ಬಿ.ಪಾಟೀಲ ಸೂಚನೆ ಉದಯರಶ್ಮಿ ದಿನ ವಿಜಯಪುರ: ವಿಜಯಪುರ ಜಿಲ್ಲೆಯ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಮುಗಿದು, ಕಾಲುವೆಗಳಲ್ಲಿ ನೀರು ಹರಿಯುತ್ತಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ 3,048 ಎಕರೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ಈ ಸಂಬಂಧ ಕೂಡಲೇ ಅಗತ್ಯ ಕ್ರಮವಹಿಸಿ, 457 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.ಭೂಸ್ವಾಧೀನ ಪ್ರಕ್ರಿಯೆ ನೆನಗುದಿಗೆ ಬಿದ್ದಿರುವ ಬಗ್ಗೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಂಬಂದಪಟ್ಟ ಎಲ್ಲ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಭೂಸ್ವಾಧೀನಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ಈ ಯೋಜನೆಯಿಂದ 52,700 ಎಕರೆಗೆ ನೀರಾವರಿ ಸೌಲಭ್ಯ ಸಿಗಲಿದೆ. ಇದರಲ್ಲಿ 37,200 ಎಕರೆ ಜಮೀನು ನಾನು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರದ ವ್ಯಾಪ್ತಿಯಲ್ಲೇ ಇದೆ. ಈಗಾಗಲೇ ವಿತರಣಾ ಕಾಲುವೆ, ಉಪಕಾಲುವೆ, ಹೊಲಗಾಲುವೆ ಕಾಮಗಾರಿಗಳೆಲ್ಲ ಮುಗಿದು ನೀರು ಹರಿಯುತ್ತಿದೆ. ಇದರ ಪ್ರಯೋಜನ ರೈತರಿಗೂ ಆಗುತ್ತಿದೆ ಎಂದು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಾರಿಗೆ ಇಲಾಖೆ ವತಿಯಿಂದ ರಾಷ್ಟ್ರೀಯ ಸುರಕ್ಷತಾ ಮಾಸಾಚರಣೆ-೨೦೨೫ರ ಅಂಗವಾಗಿ ಜ.೨೩ರ ಬೆಳಿಗ್ಗೆ ೧೦ಗಂಟೆಗೆ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಬೃಹತ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ವಿಜಯಪುರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರದ ಬಿ.ಆರ್.ಅಂಬೇಡ್ಕರ್ ವೃತ್ತದ ಹತ್ತಿರ ಇರುವ ಸಹಕಾರ ಸಂಘಗಳ ಉಪ ನಿಬಂಧಕರ ಕಛೇರಿಯಲ್ಲಿ ಫೆ.೬ರ ಮದ್ಯಾಹ್ನ ೧೨ಗಂಟೆಗೆ ಒಂದು ವಾಹನ ಹರಾಜು ಪ್ರಕ್ರಿಯೆ ಜರುಗಲಿದೆ. ಆಸಕ್ತರು ಈ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಮೊ.ಸಂ.೯೬೩೨೨೨೯೨೨೦ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ “ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ” (ಬೇಟಿ ಪಡಾವೋ ಬೇಟಿ ಬಚಾವೋ) ಯೋಜನೆಯು ೧೦ ವರ್ಷ ಪೂರ್ಣವಾದ ಹಿನ್ನಲೆಯಲ್ಲಿ ವಿನೂತನವಾಗಿ ದಶಮಾನೋತ್ಸವ ಸರಣಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.ಜ.೨೨ರ ಬೆಳಿಗ್ಗೆ ೯ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಹಿ ಸಂಗ್ರಹ, ಪ್ರತಿಜ್ಞಾ ವಿಧಿ ಬೋಧನೆ ಹಾಗೂ ಮಹಿಳಾ ಸಿಬ್ಬಂದಿಗಳಿಂದ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಜ. ೨೧ ರಿಂದ ೨೪ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.೨೨ರ ಬೆಳಿಗ್ಗೆ ೯.೩೦ಕ್ಕೆ ಮುದ್ದೇಬಿಹಾಳ ತಾಲೂಕಿನ ಶಿರೋಳ್ ರಸ್ತೆಯಲ್ಲಿರುವ ಅಲೆಮಾರಿ ಜನಾಂಗದ ವಾಸಸ್ಥಾನಕ್ಕೆ ಭೇಟಿ ನೀಡಲಿದ್ದಾರೆ, ಮದ್ಯಾಹ್ನ ೧೨ ಗಂಟೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವುರು. ಮದ್ಯಾಹ್ನ ೨.೩೦ಕ್ಕೆ ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡುವುರು. ಮದ್ಯಾಹ್ನ ೩.೩೦ಕ್ಕೆ ವಿಜಯಪುರ ಜಿಲ್ಲೆಯ ಡೊಂಕಮಡು ಗ್ರಾಮಕ್ಕೆ ಭೇಟಿ ನೀಡುವುರು.೨೩ರ ಬೆಳಿಗ್ಗೆ ೯.೩೦ಕ್ಕೆ ರಾಷ್ಟ್ರೀಯ ಕಾನೂನು ಶಾಲೆಯ ಡಾ.ಬಾಬು ಜಗಜೀವನರಾಮ್ ಸಂಶೋಧನಾ ಸಂಸ್ಥೆ, ಸಾಮಾಜಿಕ ಪ್ರತ್ಯೇಕತೆ ಮತ್ತು ಒಳಗೊಳ್ಳುವಿಕೆ ನೀತಿಯ ಅಧ್ಯಯನ ಕೇಂದ್ರ ಹಾಗೂ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಸಾಮಾಜಿಕ ಕಾರ್ಯಕರ್ತರಿಗೆ ಸಂವಿಧಾನ, ಸಾಮಾಜಿಕ ನ್ಯಾಯದ ಕಾನೂನುಗಳ ಕುರಿತು ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸುವರು. ಮದ್ಯಾಹ್ನ ೧.೩೦ಕ್ಕೆ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮಕ್ಕೆ ಭೇಟಿ ನೀಡುವರು. ಸಂಜೆ ೫ಗಂಟೆಗೆ ವಿಜಯಪುರ ಮಹಿಳಾ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ವಿಜಯಪುರದಲ್ಲಿ ಹೊಸದಾಗಿ ಪ್ರಾರಂಭವಾದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ ವಸತಿ ನಿಲಯಕ್ಕೆ ಬಾಡಿಗೆ ಆಧಾರದ ಮೇಲೆ ೧೦೦ ವಿದ್ಯಾರ್ಥಿಗಳಿಗೆ ವಾಸಿಸಲು ಯೋಗ್ಯವಾದಂತಹ ಬಾಡಿಗೆ ಆಧಾರದ ಕಟ್ಟಡ ಅವಶ್ಯಕತೆ ಇದ್ದು, ಲೋಕೊಪಯೋಗಿ ಇಲಾಖೆ ನಿಗದಿ ಪಡಿಸಿದ ಬಾಡಿಗೆ ಆಧಾರದ ಮೇಲೆ ಕಟ್ಟಡ ನೀಡಲು ಇಚ್ಚಯಿಸುವ ಕಟ್ಟಡ ಮಾಲೀಕರು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಇಲಾಹಿ ನಾಗರಾಳ ಮೊ.ಸಂ. ೮೯೭೦೭೦೪೯೮೬, ಮೆ.ನಂ.ಬಾಲಕರ ವಸತಿ ನಿಲಯದ ನಿಲಯಪಾಲಕ ಗವಿಸಿದ್ದಪ್ಪ ಸಜ್ಜನ ಮೊ.ಸಂ. ೯೯೭೨೭೮೨೬೯೩ ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಶಿಕ್ಷಣವು ಎಲ್ಲರಿಗೆ ಅಭಿವೃದ್ಧಿ, ಶಾಂತಿ, ನ್ಯಾಯ, ಸ್ವಾತಂತ್ರ ಮತ್ತು ಸಮಾನತೆಯ ಜಗತ್ತನ್ನು ಸಾಧಿಸುವ ಸಾಧನವಾಗಿದೆ. ಹೀಗಾಗಿ ಶಿಕ್ಷಣ ಎಲ್ಲರಿಗೂ ಅತ್ಯಗತ್ಯ. ಶಿಕ್ಷಣವಿಲ್ಲದೆ ಉತ್ತಮ ಜೀವನ ಸಾಧ್ಯವಿಲ್ಲ ಎಂದು ಲಾಡಲಿ ಫೌಂಡೇಶನ ಟ್ರಸ್ಟದ ರಾಯಭಾರಿ ಶಿಫಾ ಜಮಾದಾರ ಹೇಳಿದರು.ಪಟ್ಟಣದ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಾಡಲಿ ಫೌಂಡೇಶನ ಟ್ರಸ್ಟದ ವತಿಯಿಂದ ಇತ್ತಿಚಿಗೆ ಆಯೋಜಿಸಲಾಗಿದ್ದ ಶಿಕ್ಷಣದ ಮಹತ್ವ ಹಾಗೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಿಟ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಣವು ವಿವಿಧ ಉದ್ಯೋಗಗಳಿಗೆ ಜನರನ್ನು ಸಿದ್ದಪಡಿಸುವ ಮೂಲಕ ಆರ್ಥಿಕ ಬೆಳವಣಿಗೆಗೆ ಕಾರಣವಾಗುತ್ತದೆ. ಸುಶಿಕ್ಷಿತ ಸಮಾಜದ ಅಭಿವೃದ್ದಿಯಿಂದ ದೇಶದ ಬೆಳವಣಿಗೆಯಾಗಲಿದೆ. ಜ್ಞಾನ ಎಂಬ ಬೆಳಕಿನಿಂದ ಅಂಧಕಾರ ಎಂಬ ಕತ್ತಲೆ ದೂರವಾಗುತ್ತದೆ. ಹೀಗಾಗಿ ಶಿಕ್ಷಣ ಬದುಕಿನ ಭಾಗವಾಗಬೇಕು. ವಿದ್ಯಾರ್ಥಿ ಹಂತದಲ್ಲಿ ಹೆಚ್ಚಿನ ಸಮಯವನ್ನು ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು. ವ್ಯರ್ಥವಾಗಿ ಸಮಯ ವ್ಯವಸುವ ಬದಲು ಉತ್ತಮ ಪುಸ್ತಕವನ್ನು ಓದಿ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು. ಜ್ಞಾನ ಯಾರು ಕಸಿದುಕೊಳ್ಳಲಾಗದ ಸಂಪತ್ತು ಎಂದರು.ಸಮಾರಂಭದ ಅಧ್ಯಕ್ಷತೆ ವಹಿಸಿದ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಾ ಐದನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆಯಲಿರುವ ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಲಿಚ್ಚಿಸುವ ಕವಿಗಳಿಂದ ಕವನಗಳನ್ನು ಆಹ್ವಾನಿಸಲಾಗಿದೆ. ತಾಲೂಕು ವ್ಯಾಪ್ತಿಯ ಆಸಕ್ತ ಕವಿಗಳು ೨೦ ಸಾಲುಗಳಿಗೆ ಮೀರದ ತಮ್ಮ ಕವಿತೆಗಳನ್ನು ಜ.೨೬ ರ ಒಳಗಾಗಿ ಆಯ್ಕೆ ಸಮಿತಿಗೆ ಖುದ್ದಾಗಿ ಅಥವಾ ವಾಟ್ಸ್ಅಪ್ ಮೂಲಕ ಕಳಿಸಿಕೊಡಲು ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಾಟ್ಸ್ಅಪ್ ಸಂಖ್ಯೆಗಳು – ೯೬೬೩೩೧೬೧೧೦ ಮತ್ತು ೭೨೫೯೦೫೧೫೯೨
