Author: editor.udayarashmi@gmail.com

ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ೧೯ನೇ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವ ‘ಶಕ್ತಿ ಸಂಭ್ರಮ’ ಸಮಾರೋಪ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದಿನ ದಿನಮಾನದಲ್ಲಿ ನಮ್ಮ ಸಾಂಸ್ಕೃತಿಕ ಕಲೆಗಳು ಮರೆಯಾಗುತ್ತಿದ್ದು, ಇಂತಹ ಯುವಜನೋತ್ಸವ ಕಾರ್ಯಕ್ರಮಗಳು ನಮ್ಮ ಕಲೆಗಳನ್ನು ಉಳಿಸಿ ಬೆಳೆಸುವಂತೆ ಮಾಡುತ್ತಿರುವುದು ಸಂತಸದ ವಿಷಯ ಎಂದು ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಸಂಘದ ಅಧ್ಯಕ್ಷ ಡಾ.ಜಾವೀದ ಜಮಾದಾರ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿರುವ ೧೯ನೇ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವ ‘ಶಕ್ತಿ ಸಂಭ್ರಮ’ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಪ್ರಸ್ತುತ ಕಾಲದಲ್ಲಿ ನಾವೆಲ್ಲರೂ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗುವ ಮೂಲಕ ನಮ್ಮ ಸಂಸ್ಕೃತಿ, ಕಲೆ, ಭಾಷೆ ಎಲ್ಲವನ್ನು ಮರೆಯುತ್ತಿದ್ದೇವೆ. ಅದರಲ್ಲೂ ಇಂದಿನ ಯುವಜನತೆಗೆ ನಮ್ಮ ಸಾಂಸ್ಕೃತಿಕ ಕಲೆಗಳ ಬಗ್ಗೆ ತಿಳುವಳಿಕೆಯೆ ಇರದ ಮಟ್ಟಿಗೆ ನಾವೆಲ್ಲರೂ ತಲುಪಿದ್ದೇವೆ. ಇಂತಹ ಸಂದರ್ಭದಲ್ಲಿ ನಮ್ಮ ಸಂಸ್ಕೃತಿ, ಕಲೆಯನ್ನು ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ. ನಮ್ಮ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವತಿಯಿಂದ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ದೃಢಸಂಕಲ್ಪ, ಸತತಪ್ರಯತ್ನ, ಪರಿಶ್ರಮಗಳೇ ಯಶಸ್ಸಿಗೆ ದಾರಿ ಎಂದು ವಿಜಯಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಬಿ.ಜಿ.ಪತ್ತಾರ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಜರುಗಿದ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ, ರಾಸೇಯೋ, ರೆಡ್‌ಕ್ರಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿದರು.ವಿದ್ಯಾರ್ಥಿಗಳು ಕೇವಲ ಪದವಿ ಪಡೆದರೆ ಸಾಲದು, ಅದರ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ವ್ಯಕ್ತಿತ್ವವನ್ನು ವಿಕಸನ ಮಾಡಿಕೊಳ್ಳಬೇಕು. ಬಾಳಿಗೊಂದು ನಿಶ್ಚಲವಾದ ಗುರಿಯನ್ನು ಇಟ್ಟುಕೊಳ್ಳಬೇಕು ಅದನ್ನು ತಲುಪಲು ಧೃಡವಾದ ಸಂಕಲ್ಪ ಮಾಡಬೇಕು. ಸತತ ಪರಿಶ್ರಮವೇ ಜಯದ ದಾರಿ ಎಂದು ಕಿವಿಮಾತು ಹೇಳುತ್ತಾ, ಅನೇಕ ಸಾಧಕರ ಉದಾಹರಣೆಗಳನ್ನು ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಅಶೋಕ ಹೆಗಡೆ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ಎಲ್ಲ ಸೌಲಭ್ಯಗಳನ್ನು ಬಳಸಿಕೊಂಡು ಸತ್ಪçಜೆಗಳಾಗಿ ಹೊರಹೊಮ್ಮಬೇಕು ಎಂದು ಹಾರೈಸಿದರು.ಅರ್ಥಶಾಸ್ತç ಪ್ರಾಧ್ಯಾಪಕ ಪಿ.ಎಂ.ಪರುಗೊಂಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಪ್ರಿಯಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಎಂ.ಎಂ. ಲಕ್ಷೀಶ ಸ್ವಾಗತಿಸಿದರು.…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಡಿವಾಳೇಶ್ವರ ಸ್ವಾಮೀಜಿಯವರ ೯೫ನೇ ವರ್ಷದ ಜನ್ಮವರ್ಧಂತಿ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮಗಳು ಯಶಸ್ವಿಯಾಗಲಿ ಎಂದು ಶಿರಹಟ್ಟಿ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.ಪಟ್ಟಣದ ಗದ್ದಿಗೆಮಠದಲ್ಲಿ ಗುರುವಾರ ಜಾಲವಾದ ಗ್ರಾಮದ ಮುರುಗೇಂದ್ರ ಶಿವಯೋಗಿಗಳ ಜಾತ್ರಾ ಮಹೋತ್ಸವದ ವಿಶೇಷ ಕಾರ್ಯಕ್ರಮಗಳ ಮಾಹಿತಿಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಕಾರ್ಯಕ್ರಮ ಕೊಡೆಕಲ್ ದುರದುಂಡೇಶ್ವರಶ್ರೀ ಹಾಗೂ ಕಿರಿಯ ಮಹಾಂತ ಸ್ವಾಮೀಜಿ ನೇತೃತ್ವದಲ್ಲಿ ಎಲ್ಲ ರೀತಿಯಿಂದಲೂ ಸಾಂಗವಾಗಿ ಸಾಗಲಿ ಎಂದರು.ಮಠದ ಮಹಾಂತಸ್ವಾಮಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿ, ಜಾಲವಾದ ಗ್ರಾಮದ ಮುರುಗೇಂದ್ರ ಶಿವಯೋಗಿಗಳ ಆಶ್ರಮದಲ್ಲಿ ಡಿಸೆಂಬರ್ ೩ ರಿಂದ ಕಾರ್ಯಕ್ರಮಗಳು ಆರಂಭಗೊAಡು ಜನೇವರಿ ೧೮ ವರೆಗೆ ಜರುಗಲಿವೆ. ಡಿಸೆಂಬರ್ ೧ ರಿಂದ ೩೦ ರವರೆಗೆ ಪ್ರತಿ ಗ್ರಾಮದಲ್ಲಿ ೫ ದಿನಗಳಂತೆ ಜನಜಾಗೃತಿ ಸಂಚಾರಿ ಪ್ರವಚನ. ಜನೇವರಿ ೧ ರಂದು ಜಾಲವಾದ ಆಶ್ರಮದಲ್ಲಿ ಕಲಬುರ್ಗಿ ಶರಣ ಬಸವೇಶ್ವರ ಪುರಾಣ ಹಾಗೂ ದಾಸೋಹ, ಜನೇವರಿ ೧೪ ರಂದು ಬಸವ ಬ್ರೇನ್ ಆಸ್ಪತ್ರೆಯಿಂದ ನರ ಮತ್ತು ಪಾರ್ಶ್ವವಾಯು ರೋಗಿಗಳ ತಪಾಸಣೆ, ಜನೇವರಿ…

Read More

ನಮ್ಮ ಶೌಚಾಲಯ ನಮ್ಮ ಗೌರವ ವಿಶೇಷ ಆಂದೋಲನಕ್ಕೆ ಚಾಲನೆ ಉದಯರಶ್ಮಿ ದಿನಪತ್ರಿಕೆ ಚಡಚಣ: ಪ್ರತಿಯೊಬ್ಬರು ತಮ್ಮ ಮನೆ, ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಚವಾಗಿ, ನೈರ್ಮಲ್ಯದಿಂದ ಕಾಪಾಡಬೇಕು. ಪ್ರತಿಯೊಬ್ಬ ಸಾರ್ವಜನಿಕರು ಶೌಚಾಲಯಗಳನ್ನು ತಮ್ಮ ಮನೆ ಶೌಚಾಲಯಗಳಂತೆ ಬಳಸಿಕೊಂಡ ಬಹಿರ್ದೇಸೆ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಿ.ಎಸ್ ರಾಠೋಡ ಅವರು ಹೇಳಿದರು.ಚಡಚಣ ತಾಲೂಕಿನ ನಿವರಗಿ ಹಾಗೂ ಹಲಸಂಗಿ ಗ್ರಾಮದಲ್ಲಿ ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಚಡಚಣ ತಾಲೂಕು ಪಂಚಾಯಿತಿ ವತಿಯಿಂದ ವಿಶ್ವ ಶೌಚಾಲಯ ದಿನದ ಅಂಗವಾಗಿ ನವೆಂಬರ್ 19 ರಿಂದ ಡಿಸೆಂಬರ್ 10 ರವರೆಗೆ ನಡೆಯುತ್ತಿರುವ ‘ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ’ಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.ಸಮಾಜದಲ್ಲಿ ನೈರ್ಮಲ್ಯ ಕಾಪಾಡುವುದರಿಂದ ನಮ್ಮ ಆರೋಗ್ಯ ವೃದ್ಧಿಸಿಕೊಳ್ಳಬಹುದು. ಹಾಗಾಗಿ ಪ್ರತಿಯೊಬ್ಬರೂ ಬಯಲು ಶೌಚ ಮಾಡುವುದನ್ನು ಬಿಟ್ಟು ಮನೆ ಶೌಚಾಲಯಗಳನ್ನು ಬಳಸುವ ಜತೆಗೆ ಸುತ್ತ ಮುತ್ತಲಿನ ಪ್ರತಿಯೊಬ್ಬ ಜನರು ಶೌಚಾಲಯ ಬಳಸುವಂತೆ ಪ್ರೇರಣೆ ತುಂಬಬೇಕು ಎಂದು ಸಾರ್ವಜನಿಕರಲ್ಲಿ ಕರೆ ನೀಡಿದರು.ಈ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಡಿಸೆಂಬರ್ 22 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2024ರಲ್ಲಿ ಪಾಲ್ಗೊಳ್ಳಲು ಹೆಸರು ನೋಂದಾಯಿಸಲು ನವೆಂಬರ್ 30 ಕೊನೆಯ ದಿನವಾಗಿದ್ದು, ಆಸಕ್ತರು ಕೂಡಲೇ ತಮ್ಮ ಹೆಸರು ನೊಂದಾಯಿಸಬೇಕು ಎಂದು ಕೋರ್ ಕಮಿಟಿ ನೋಂದಣಿ ವಿಭಾಗದ ಡಾ.ರಾಜು ಯಲಗೊಂಡ ಮತ್ತು ವೀರೇಂದ್ರ ಗುಚ್ಚೆಚ್ಚಿ ತಿಳಿಸಿದ್ದಾರೆ.ಈಗಾಗಲೇ ನೋಂದಣಿ ಕಾರ್ಯ ಭರದಿಂದ ಸಾಗಿದ್ದು, ಕರ್ನಾಟವಷ್ಟೇ ಅಲ್ಲ ಬೇರೆ ಬೇರೆ ರಾಜ್ಯಗಳಿಂದಲೂ ಹೆಸರಾಂತ ಓಟಗಾರರು ತಮ್ಮ ಹೆಸರು ನೋದಾಯಿಸಿದ್ದಾರೆ. ಕಳೆದ ಬಾರಿ ಸುಮಾರು 10 ಸಾವಿರ ಓಟಗಾರರು ಪಾಲ್ಗೊಂಡಿದ್ದರು. ಈ ಬಾರಿ ಸುಮಾರು 15 ರಿಂದ 20 ಸಾವಿರ ಜನ ಪಾಲ್ಗೋಳ್ಳುವ ನಿರೀಕ್ಷೆಯಿದೆ. ಈ ಓಟದಲ್ಲಿ ಪಾಲ್ಗೋಳ್ಳಲು ಅನೇಕ ಸಂಘ, ಸಂಸ್ಥೆಗಳು ಗ್ರುಪ್ ರೆಜಿಸ್ಟ್ರೇಷನ್ ಕೂಡ ಮಾಡಿಸಿವೆ. ಹೀಗಾಗಿ ಆಸಕ್ತರು ಗ್ರುಪ್ ನೋಂದಣಿ ಸಹಿತ ಮಾಡಿಸಬಹುದಾಗಿದೆ. ಆನಲೈನ್ ಮೂಲಕ https://www.eventzalley.com/event-details/211 ನಲ್ಲಿ ಹೆಸರು ನೋಂದಾಯಿಸಬಹುದಾಗಿದೆ.ನೋಂದಣಿ ಸಂಬಂಧಿತ ಮಾಹಿತಿಗಾಗಿ ಮೊಬೈಲ್ ಸಂಖ್ಯೆ- 8095190218 ಮತ್ತು 9886668498 ಸಂಪರ್ಕಿಸಬಹುದಾಗಿದೆ ಎಂದು ಡಾ. ರಾಜು ಯಲಗೊಂಡ ಮತ್ತು…

Read More

ವೃಕ್ಷಥಾನ್ ಹೆರಿಟೇಜ್ ರನ್ ನಲ್ಲಿ ಪಾಲ್ಗೊಳ್ಳಲು ಹೆಸರು ನೋಂದಾಯಿಸಿದ ಐಎಎಸ್ ಅಧಿಕಾರಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿರಿಯ ಐಎಎಸ್ ಅಧಿಕಾರಿ ಮತ್ತು ಕೃಷಿ ಇಲಾಖೆ ಆಯುಕ್ತರಾಗಿರುವ ವೈ. ಎಸ್. ಪಾಟೀಲ ಅವರು ವೃಕ್ಷಥಾನ್ ಹೆರಿಟೇಜ್ ರನ್ ನಲ್ಲಿ ಪಾಲ್ಗೋಳ್ಳಲು ಹೆಸರು ನೋಂದಾಯಿಸುವ ಮೂಲಕ ಅಧಿಕಾರಿ ವರ್ಗಕ್ಕೆ ಸ್ಪೂರ್ತಿಯಾಗಿದ್ದಾರೆ.ವಿಜಯಪುರ ನಗರದಲ್ಲಿ ಡಿಸೆಂಬರ್ 22 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್- -2024 ಮ್ಯಾರಾಥಾನ್ ನಲ್ಲಿ 5 ಕಿ. ಮೀ. ಓಟದಲ್ಲಿ ಪಾಲ್ಗೋಳ್ಳಲು ಅವರು ಹೆಸರು ನೋಂದಣಿ ಮಾಡಿದ್ದಾರೆ. ಈ ಮುಂಚೆ ವಿಜಯಪುರ ಉಪವಿಭಾಗಾಧಿಕಾರಿಯಾಗಿ ಮತ್ತು ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಅವರು, ತೋಟಗಾರಿಕೆ ಇಲಾಖೆಯ ಆಯುಕ್ತರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ.ಸದಾ ಲವಲವಿಕೆಯಿಂದ ಇರುವ ಹಿರಿಯ ಐಎಎಸ್ ಅಧಿಕಾರಿಯೂ ಆಗಿರುವ ವೈ. ಎಸ್. ಪಾಟೀಲ ಅವರು, ಕೊರೊನಾ ಲೌಕಡೌನ್ ಸಮಯದಲ್ಲಿ ಮಾಡಿರುವ ಸೇವೆ ಜನಮಾನಸದಲ್ಲಿ ಇಂದಿಗೂ ಸ್ಮರಣೀಯವಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಉಪವಿಭಾಗಾಧಿಕಾರಿ ಮತ್ತು ನಂತರ ಜಿಲ್ಲಾಧಿಕಾರಿಯಾಗಿದ್ದಾಗ ಅವರು ಮಾಡಿರುವ ಕೆಲಸಗಳನ್ನು ಇಂದಿಗೂ ಸಾರ್ವಜನಿಕರು ಸ್ಮರಿಸುತ್ತಿದ್ದಾರೆ.ವೈ. ಎಸ್. ಪಾಟೀಲ…

Read More

ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಸರೀಕರಣ-ಅರಣ್ಯೀಕರಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಡಿ.22ರಂದು ನಗರದಲ್ಲಿ ವೃಕ್ಷೋತ್ಥಾನ ಪಾರಂಪರಿಕ ಓಟ-2024 ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿಕೊಂಡು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ ಮಾಡಿಕೊಂಡಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವೃಕ್ಷ ಅಭಿಯಾನ ಪ್ರತಿಷ್ಠಾನ ವಿಜಯಪುರ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳುವ ವೃಕ್ಷೋತ್ಥಾನ ಕಾರ್ಯಕ್ರಮದ ಕುರಿತು ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ಪಾರಂಪರಿಕ ಓಟದಲ್ಲಿ ಭಾಗವಹಿಸಲು ಈಗಾಗಲೇ ಹಲವರು ಆನ್‍ಲೈನ್ ಮೂಲಕ ನೊಂದಾಯಿಸಿಕೊಂಡಿದ್ದು, ನೊಂದಣಿಗೆ ನವೆಂಬರ್ 30 ಕೊನೆಯ ದಿನವಾಗಿದ್ದು, ಕ್ರೀಡಾಸಕ್ತರು ಕೂಡಲೇ ತಮ್ಮ ಹೆಸರನ್ನು https://www.vrukshathon.co.in ರಲ್ಲಿ ನೊಂದಾಯಿಸಿಕೊಳ್ಳುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.ಪರಿಸರ ಹಾಗೂ ಪಾರಂಪರಿಕ ಸ್ಮಾರಕಗಳ ರಕ್ಷಣೆ ಜಾಗೃತಿ ಹಾಗೂ ಜಲ. ವೃಕ್ಷ, ಶಿಕ್ಷಣ ಎಂಬ ಧ್ಯೇಯ ವಾಕ್ಯದೊಂದಿಗೆ ಹಸಿರು ಪರಿಸರ ಬೆಳೆಸುವ ಜೊತೆಗೆ ಅರಣ್ಯವನ್ನು ಕಾಪಾಡುವ ವೃಕ್ತೋತ್ಥಾನ ಪಾರಂಪರಿಕ ಓಟದಲ್ಲಿ ಅಂದಾಜು 15 ಸಾವಿರಕ್ಕೂ ಹೆಚ್ಚು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಅಲ್ಲಲ್ಲಿ ತೊಗರಿ ಬೆಳೆದ ರೈತರ ಜಮೀನುಗಳಲ್ಲಿ ಹವಾಮಾನ ವೈಪರಿತ್ಯದಿಂದ ಹೂ ಮತ್ತು ಕಾಯಿ ಉದುರುತ್ತಿರುವುದು ಕಂಡು ಬಂದಲ್ಲಿ ರೈತರು ಬೆಳೆ ವಿಮೆ ನೋಂದಣಿ ಮಾಡಿದ ರಶೀದಿ, ಜಿಪಿಎಸ್ ಫೋಟೋದೊಂದಿಗೆ ಅರ್ಜಿಯನ್ನು ಆಯಾ ರೈತ ಸಂಪರ್ಕ ಕೇಂದ್ರ ಅಥವಾ ವಿಮಾ ಸಂಸ್ಥೆಯ ಪ್ರತಿನಿಧಿಗಳಿಗೆ ಸಂಪರ್ಕಿಸುವಂತೆ ವಿಜಯಪುರ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ವಿಜಯಪುರ ತಾಲೂಕಿನ ವಿಮಾ ಸಂಸ್ಥೆ ಪ್ರತಿನಿಧಿ ಸಂತೋಷ ಜಗರಿ ಮೊ: 7349113727, ಬಬಲೇಶ್ವರ ತಾಲೂಕಿನ ಸಾಗರ ಔರಸಂಗ ಮೊ: 9590921699 ಹಾಗೂ ತಿಕೋಟಾ ತಾಲೂಕಿನ ರಮೇಶ ಹಳ್ಳಿ ಮೊ: 7892547066 ಸಂಖ್ಯೆಗೆ ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರದಿಂದ ಇಂಡಿ ಮಾರ್ಗವಾಗಿ ಕಾರ್ಯಾಚರಣೆಯಾಗುವ ವೇಗದೂತ, ಸಾಮಾನ್ಯ ಸಾರಿಗೆ ಬಸ್‍ಗಳು ಹಾಗೂ ಅಲಿಯಾಬಾದ್‍ಗೆ ಹೋಗುವ ನಗರ ಸಾರಿಗೆ ಬಸ್‍ಗಳನ್ನು ಪ್ರಯಾಣಿಕರು, ವಿದ್ಯಾರ್ಥಿಗಳು ಹಾಗೂ ವ್ಯಾಪಾರಸ್ಥರಿಗೆ ಅನುಕೂಲ ಕಲ್ಪಿಸಲು ಗಾಂಧಿಚೌಕ-ನೆಹರು ಮಾರ್ಕೆಟ್, ಕಾಯಿಪಲ್ಯ ಮಾರ್ಕೆಟ್, ಅಟಲ್ ಬಿಹಾರಿ ವಾಜಪೇಯಿ ರಸ್ತೆ ಮೂಲಕ ಸಂಚರಿಸಲಿವೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ವತಿಯಿಂದ ವಾರ್ಡ ನಂ.13ರ ಜನತಾ ಬಜಾರ, ನೆಹರು ಮಾರುಕಟ್ಟೆ ಬಳಿ ಹಾಗೂ ಎಲ್‍ಬಿಎಸ್ ಮಾರುಕಟ್ಟೆ ಹತ್ತಿರ ಅತಿಕ್ರಮಣವನ್ನು ತೆರವುಗೊಳಿಸಲಾಯಿತು.ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಪಾಲಿಕೆಯ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ ಅವರ ನೇತೃತ್ವದಲ್ಲಿ ಶುಕ್ರವಾರ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಂಡಿದ್ದು, ನಗರದ ನೆಹರು ಮಾರ್ಕೆಟ್ ಹಿಂಭಾಗ, ಎಂ.ಆರ್.ಹೋಟೆಲ್ ಹತ್ತಿರ, ಕೆಎಸ್‍ಆರ್‍ಟಿಸಿ ಡಿಪೋ ಪಕ್ಕ, ಪ್ರವಾಸೋದ್ಯಮ ಮಂದಿರದ ಹಿಂದುಗಡೆ, ಸೈನಿಕ ಶಾಲೆ ರಸ್ತೆಯ ಜಿಮಖಾನಾ ಕ್ಲಬ್ ಹಿಂದೆ ಹಾಗೂ ಆಹಾರ ಮಾರಾಟಕ್ಕೆ ಇಂಡಿ ರಸ್ತೆಯಲ್ಲಿ ಜಿಲ್ಲಾ ಕ್ರೀಡಾಂಗಣದ ಹತ್ತಿರ ವೆಂಡಿಂಗ್ ಜೋನ್‍ಗಳನ್ನು ಗುರುತಿಸಲಾಗಿದ್ದು, ಸದರಿ ನಿಗದಿತ ಸ್ಥಳಗಳಲ್ಲಿಯೇ ಬೀದಿ ಬದಿ ವ್ಯಾಪಾರಸ್ಥರು ವ್ಯಾಪಾರ-ವಹಿವಾಟು ನಡೆಸುವಂತೆ ತಿಳಿಸಲಾಗಿದೆ.ಇಂದು ನಡೆದ ಅತಿಕ್ರಮಣ ತೆರವು ಕಾರ್ಯಾಚರಣೆಯಲ್ಲಿ ವಲಯ ಕಛೇರಿ-1ರ ವಲಯ ಆಯುಕ್ತರಾದ ಸುನೀಲ ಪಾಟೀಲ ಸೇರಿದಂತೆ ಪಾಲಿಕೆ ಅಧಿಕಾರಿ-ಸಿಬ್ಬಂದಿಗಳು, ಪೊಲೀಸ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು

Read More