Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮ ಸಂವಿಧಾನವನ್ನು ನಾವಿಂದು ರಕ್ಷಿಸಿಕೊಳ್ಳದಿದ್ದರೆ ಮುಂದಿನ ನಮ್ಮ ಪೀಳಿಗೆಯ ಭವಿಷ್ಯ ಕರಾಳವಾಗಲಿದೆ ಎಂದು ಬಹುಜನ ಚಳವಳಿಯ ಮುಖಂಡ ಕಲ್ಲಪ್ಪ ತೊರವಿ ಎಚ್ಚರಿಕೆ ನೀಡಿದರು.ಮಂಗಳವಾರ ಸಂಜೆ ನಗರದ ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರದಲ್ಲಿ ಬುದ್ಧವಿಹಾರ ನಿರ್ಮಾಣ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಸಮರ್ಪಣಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಸರಕಾರಿ ಸಂಸ್ಥೆಗಳೆಲ್ಲ ಖಾಸಗಿಯವ ಪಾಲಾಗುತ್ತಿವೆ. ಸರಕಾರಿ ವಲಯದಲ್ಲಿ ಉದ್ಯೋಗಗಳು ಸೃಷ್ಟಿಯಾಗುತ್ತಿಲ್ಲ. ನಮ್ಮ ಮಕ್ಕಳು ಉದ್ಯೋಗದ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ. ಈಗಲೇ ನಾವೆಲ್ಲ ಎಚ್ಚತ್ತುಕೊಳ್ಳದಿದ್ದರೆ ಮುಂದೆ ಅಪಾಯ ತಪ್ಪಿದ್ದಲ್ಲ ಎಂದು ಹೇಳಿದರು.ಡಾ. ಅಂಬೇಡ್ಕರ್ ಅವರ ಕನಸಿನ ಪ್ರಬುದ್ಧ ಭಾರತದ ನಿರ್ಮಾಣ ನನಸಾಗಬೇಕಾದರೆ ಸಂವಿಧಾನವು ಸಂಪೂರ್ಣವಾಗಿ ಜಾರಿಯಾಗಬೇಕು. ಆದರೆ ಸಂವಿಧಾನವನ್ನು ಜಾರಿ ಮಾಡುವ ಸ್ಥಾನದಲ್ಲಿ ಮನುವಾದಿಗಳು ಕುಳಿತಿದ್ದಾರೆ. ಈ ಸಂವಿಧಾನವೇ ಬೇಡ ಎನ್ನುವವರ ಕೈಯಲ್ಲಿ ಅಧಿಕಾರವಿದೆ. ಶೋಷಿತ ವರ್ಗಗಳು ಒಂದಾಗಿ ರಾಜ್ಯಾಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಅವರು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬುದ್ಧ ವಿಹಾರ ನಿರ್ಮಾಣ ಸಮಿತಿಯ ಅಧ್ಯಕ್ಷ ರಾಜಶೇಖರ…

Read More

ಉದಯರಶ್ಮಿ ದಿನಪತ್ರಿಕೆ ದೇವಣಗಾಂವ: ವಿದ್ಯಾರ್ಥಿಗಳಲ್ಲಿ ಸಾಮಾಜಿಕ ನ್ಯಾಯ, ದೇಶದ ಏಕತೆ, ದೇಶ ಗೌರವ, ದೇಶಭಕ್ತಿ, ಭ್ರಾತೃತ್ವ ಭಾವನೆಯನ್ನು ಮೂಡಿಸಬೇಕು ಎಂದು ದೇವಣಗಾಂವ ವಲಯ ಸಿ ಆರ್ ಪಿ ಎಸ್.ಆರ್.ಮುಲ್ಲಾ ಹೇಳಿದರು.ಅವರು ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ಅರಿವು ಕೇಂದ್ರ ಗ್ರಾಮ ಪಂಚಾಯತ ಗ್ರಂಥಾಲಯದಲ್ಲಿ ಸಂವಿಧಾನ ಅಂಗೀಕಾರದ 75 ನೇ ವರ್ಷಾಚರಣೆ ಅಂಗವಾಗಿ ನಡೆದ ಸಂವಿಧಾನ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಿದ್ದರು.ಸಂವಿಧಾನ ನಮ್ಮ ದೇಶದ ಪವಿತ್ರವಾದ ಗ್ರಂಥ, ಭಾರತದ ಸಂವಿಧಾನವು ಜಗತ್ತಿನ ಅತಿ ದೊಡ್ಡ ಸಂವಿಧಾನವಾಗಿದೆ ಇದು ಲಿಖಿತ ರೂಪದಲ್ಲಿದೆ ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ , ಸಮಾನತೆ, ಭಾತೃತ್ವ ಭಾವನೆಯನ್ನು ಮೂಡಿಸಿಕೊಂಡು ದೇಶದ ಐಕ್ಯತೆಗಾಗಿ ಶ್ರಮಿಸೋಣ ಎಂದರು.ಬಿ ಆರ್ ಪಿ ಸಾಹೇಬ್ ಗೌಡ ಬಿರಾದಾರ ಮಾತನಾಡಿದರು.ಹಿರಿಯರಾದ ರಾವುತಪ್ಪ ಭೂಸನೂರ ಅಧ್ಯಕ್ಷತೆ ವಹಿಸಿದ್ದರುದೇವರನಾವದಗಿ ಸಿ ಆರ್ ಪಿ ಎನ್. ವಿ.ನಿಂಬರ್ಗಿ, ಶಿಕ್ಷಕರಾದ ಬಿ.ಬಿ.ಸಿಂಪಿ, ಎಂ.ಬಸವರಾಜ, ಎ.ಎಂ. ಮರಾಠೆ, ಎಂ.ಡಿ.ಭೂಸನೂರ, ವಿನಾಯಕ ಅಥರ್ಗಾ, ಗ್ರಂಥಪಾಲಕ ಗುರು ಆರ್ ಹಿರೇಮಠ, ದತ್ತಾತ್ರೇಯ…

Read More

ಭಾರತ ಸಂವಿಧಾನ ದಿನದ ಕಾರ್ಯಕ್ರಮದಲ್ಲಿ ಬಸವರಾಜ್ ಕೌಲಗಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಡತಾಯಿಯ ಮಗನೊಬ್ಬ ಜಿಲ್ಲಾಧಿಕಾರಿಯಾಗುವ ಕನಸು ಕಾಣುವುದಕ್ಕೆ ಹಾಗೂ ಕಂಡಂತ ಕನಸನ್ನು ನನಸು ಮಾಡಿಕೊಳ್ಳುವುದಕ್ಕೆ ಸಾಧ್ಯವಾಗಿಸಿದ್ದು ಭಾರತದ ಸಂವಿಧಾನ. ಜಗತ್ತಿನ ಶ್ರೇಷ್ಠ ಸಂವಿಧಾನ ಎಂದು ಗುರುತಿಸಿಕೊಳ್ಳುವ ನಮ್ಮ ಸಂವಿಧಾನ ಇಲ್ಲದೇ ಹೋಗಿದ್ದರೆ ಈ ದೇಶದ ಸ್ಥಿತಿ ಪಾತಾಳ ಗರಿಡಿಯಂತಾಗುತ್ತಿತ್ತು ಎಂದು ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಕೌಲಗಿ ಹೇಳಿದರು.ನಗರದ ಎಕ್ಸಲಂಟ್ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಸಂವಿಧಾನ ದಿನದ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು; ಒಂದು ದೇಶದ ಆಡಳಿತ ಸೂತ್ರ ಹೇಗಿರಬೇಕು, ದೇಶದ ಪ್ರಜೆಗಳಿಗೆ ಯಾವ ರೀತಿಯ ಹಕ್ಕುಗಳಿರಬೇಕು, ಹಕ್ಕುಗಳಿಗೆ ಪ್ರತಿಯಾಗಿ ಎಂಥಹ ಕರ್ತವ್ಯಗಳನ್ನು ನಾವು ಮಾಡಬೇಕು ಎನ್ನುವುದನ್ನು ತಿಳಿಸಿಕೊಡುವ ಭಾರತೀಯ ಸಂವಿಧಾನ ಜಗತ್ತು ಕಂಡಂತ ಅತ್ಯುತ್ತಮವಾದ ಸಂವಿಧಾನ ಎಂದು ಗುರುತಿಸಿಕೊಳ್ಳುತ್ತದೆ. ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಬೇರೆ ಬೇರೆ ದೇಶಗಳ ಸಂವಿಧಾನಗಳನ್ನು ಓದಿ ಅರ್ಥೈಸಿಕೊಂಡು ನಮ್ಮ ದೇಶಕ್ಕೆ ಎಂಥಹ ಸಂವಿಧಾನ ಬೇಕು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ವತಿಯಿಂದ ಗಿರಿಜನ ಉಪಯೋಜನೆಯಡಿ ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಪಡೆಯಲು ಗ್ರಾಮೀಣ ಭಾಗದ ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಕಾರಿ ಸಂಘದ ಪರಿಶಿಷ್ಟ ಪಂಗಡದ ಸದ್ಯಸರು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಜಿಲ್ಲೆಗೆ ಒಟ್ಟು-೦೨ ಗುರಿ ನಿಗದಿಪಡಿಸಲಾಗಿದ್ದು, ಈ ಯೋಜನೆಯಡಿ ಶೇ.೯೦ರಷ್ಟು ಸಹಾಯಧನ ಒದಗಿಸಲಾಗುವುದು.ನಿಗದಿತ ಅರ್ಜಿ ನಮೂನೆಯನ್ನು ಪಡೆದು, ದಿನಾಂಕ : ೧೫-೧೨-೨೦೨೪ರೊಳಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ, ಪಶು ಆಸ್ಪತ್ರೆ ಆವರಣ, ಶಿಕಾರಖಾನೆ ವಿಜಯಪುರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಬಿ ಎಲ್ ಡಿ ಈ ಸಂಸ್ಥೆ, ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರ ಫೆಡರೇಶನ್, ಎನ್ ಎಸ್ ಎಸ್ ಘಟಕ ಇವರ ಸಹಯೋಗದಲ್ಲಿ ಬಿಎಲ್ಡಿಈ ನ್ಯೂ ಕ್ಯಾಂಪಸ್ ನ ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ವಿಜೇತ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ಪಾರಿತೋಷಕ ವಿತರಿಸಲಾಯಿತು.ಜನಪದ ನೃತ್ಯ, ಜನಪದ ಗೀತೆ, ಸಾಯಿನ್ಸ ಮೇಳ, ಕವಿತೆ,ಕಥೆ ಬರೆಯುವುದು, ಚಿತ್ರಕಲೆ, ಘೋಷಣೆ, ಗುಡಿ ಕೈಗಾರಿಕೆ, ನೇಕಾರಿಕೆ, ಕೃಷ್ಟಿ ಉತ್ಪನ್ನಗಳ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದ ಈ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಾಳುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ಧೈವಾಡಿ, ಎಸ್.ಜಿ.ಲೋಣಿ, ನೆಹರು ಯುವ ಕೇಂದ್ರದ ಅಧಿಕಾರಿ ರಾಹುಲ ಡೊಂಗ್ರೆ, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ…

Read More

ಆಟೋ-ದ್ವಿಚಕ್ರ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ನಿಗದಿತ ಸ್ಥಳಗಳಲ್ಲಿ ವ್ಯಾಪಾರ-ವಾಹನಗಳ ನಿಲುಗಡೆ ಮಾಡದವರ ಮೇಲೆ ಕಾನೂನು ರಿತ್ಯ ಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬೀದಿ ಬದಿ ವ್ಯಾಪಾರಸ್ಥರಿಗೆ ವೆಂಡಿಂಗ್ ಝೋನ್ ಜಾಗದ ವ್ಯವಸ್ಥೆ ಹಾಗೂ ಆಟೋ-ದ್ವಿಚಕ್ರ ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಜಾಗ ಗುರುತಿಸಲಾಗಿದ್ದು, ಸೂಚಿಸಿರುವ ಸ್ಥಳಗಳಲ್ಲಿ ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಕೈಗೊಳ್ಳದೇ ಇರುವುದು ಮತ್ತು ನಿಗದಿತ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡದೇ ಇರುವುದನ್ನು ಕಂಡು ಬಂದಲ್ಲಿ ಅಂತಹವರ ಮೇಲೆ ಕಾನೂನು ರಿತ್ಯ ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರು ತಿಳಿಸಿದ್ದಾರೆ.ವಿಜಯಪುರ ನಗರದ ಬೀದಿ ಬದಿ ವ್ಯಾಪಾರಸ್ಥರು ಎಲ್ಲೆಂದರಲ್ಲಿ ವ್ಯಾಪಾರ ಮಾಡುವುದನ್ನು ತಡೆಗಟ್ಟಲು ಮಾನ್ಯ ಉಚ್ಛನ್ಯಾಯಾಲಯದ ಆದೇಶದಂತೆ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಮಹಾಪೌರರರ ಮಾರ್ಗದರ್ಶನ ಮತ್ತು ಜಿಲ್ಲಾಧಿಕಾರಿಗಳ ನಿರ್ದೇಶನದಲ್ಲಿ ನಗರದ ಸೌಂದರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ನೆಹರು ಮಾರ್ಕೆಟ್ ಹಿಂಭಾಗ, ಎಂ.ಆರ್.ಹೋಟೆಲ್ ಹತ್ತಿರ, ಕೆಎಸ್‍ಆರ್‍ಟಿಸಿ ಡಿಪೋ ಪಕ್ಕ, ಅಂಬೇಡ್ಕರ್…

Read More

ಅಂತರ ಮಹಿಳಾ ಮಹಾವಿದ್ಯಾಲಯಗಳ ಯುವ ಜನೋತ್ಸವ ‘ಶಕ್ತಿ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜೀವನದಲ್ಲಿ ಪ್ರತಿಯೊಬ್ಬರು ಗುರಿಯನ್ನಿಟ್ಟುಕೊಳ್ಳಬೇಕು. ಗುರಿ ಹೊಂದಿದಾಗ ಮಾತ್ರ ಏನನ್ನಾದರೂ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಜೀವನದಲ್ಲಿನ ಎಲ್ಲ ಕಷ್ಟ ಕಾರ್ಪಣ್ಯಗಳನ್ನು ಸಮರ್ಥವಾಗಿ ಎದುರಿಸಿ ಉತ್ತಮ ಸಾಧನೆಗೆ ಮುಂದಾಗಬೇಕು ಎಂದು ವಿದ್ಯಾರ್ಥಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಕರೆ ನೀಡಿದರು.ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಅಂತರ ಮಹಿಳಾ ಮಹಾವಿದ್ಯಾಲಯಗಳ ಯುವ ಜನೋತ್ಸವ ‘ಶಕ್ತಿ ಸಂಭ್ರಮ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅತ್ಯಂತ ಶಿಸ್ತು ಪ್ರದರ್ಶಿಸುವ ಕಾರ್ಯಕ್ರಮ ಇದಾಗಿದೆ. ಒಬ್ಬ ಮಹಿಳೆಯಾಗಿ, ತಾಯಿಯಾಗಿ, ರೈತನ ಮಗಳಾಗಿ ನಾನು ಜೀವನದಲ್ಲಿ ಹಲವು ಏಳುಬೀಳುಗಳನ್ನು ಕಂಡಿದ್ದೇನೆ. ಎಲ್ಲ ಕಷ್ಟ ಕಾರ್ಪಣ್ಯಗಳನ್ನು ಸಮರ್ಥವಾಗಿ ಎದುರಿಸಿ, ಇಂದು ಸಮಾಜದಲ್ಲಿ ಉನ್ನತ ಸ್ಥಾನ ಹೊಂದಿ, ಸರ್ಕಾರದಲ್ಲಿ ಸಚಿವೆಯಾಗಿದ್ದೇನೆ ಎಂದು ಹೇಳಿದರು.ಒಂದು ಕಾಲದಲ್ಲಿ ಮಹಿಳೆ ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತ…

Read More

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿ, ಗದಗ್ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ತನ್ನ ಪಾಲಕರು ತನ್ನನ್ನು ಪ್ರಶಂಸಿಸಬೇಕು ಎಂಬುದು ಪ್ರತಿ ಮಗುವಿನ ಕನಸು. ಹಾಗೆಯೇ ತಮ್ಮ ಮಕ್ಕಳ ನಡವಳಿಕೆ ನಾಲ್ಕು ಜನ ಮೆಚ್ಚುವ ಆಗಿರಬೇಕು ಎಂಬುದು ಪಾಲಕರ ಆಶಯ. ಮಕ್ಕಳ ಕ್ರಿಯೆಗಳನ್ನು ಅವಹೇಳನ ಮಾಡದೆ, ಶಿಕ್ಷೆ ಕೊಡದೆ ಭಾವನಾತ್ಮಕವಾಗಿ ಅವರಲ್ಲಿ ಶಿಸ್ತನ್ನು ತರುವ, ಆತ್ಮವಿಶ್ವಾಸವನ್ನು ಮೂಡಿಸುವ ನಿಟ್ಟಿನಲ್ಲಿ ಪಾಲಕರು ಕಾರ್ಯನಿರ್ವಹಿಸಲೇಬೇಕು ಎಂದು ಖ್ಯಾತ ಲೇಖಕಿ ಸಾರಾ ಓಕ್ವಲ ಸ್ಮಿತ್ ಹೇಳುತ್ತಾಳೆ.ನಿಜವಲ್ಲವೇ ಆಕೆಯ ಮಾತುಗಳು.ಪ್ರೀತಿಯ ಮಾತು, ವಾತ್ಸಲ್ಯದ ಸಿಂಚನ, ಮಮತೆಯ ಮಡಿಲುಗಳು ಮಕ್ಕಳನ್ನು ಭಾವನಾತ್ಮಕವಾಗಿ ಒಳಗೊಳ್ಳುವ ಮೂಲಕ ಅವರಲ್ಲಿ ಮಹತ್ತರ ಬದಲಾವಣೆಗಳನ್ನು ತರಬಹುದು.ಮಕ್ಕಳ ಮಾನಸಿಕತೆಯನ್ನು ಅರಿಯುವ ಮೂಲಕ ಮಕ್ಕಳ ನಡವಳಿಕೆಯಲ್ಲಿ ತರಬಹುದಾದ ಬದಲಾವಣೆಗಳು ಇಂತಿವೆಪಾಲಕರು ಮತ್ತು ಮಕ್ಕಳ ನಡುವೆ ಭಾವನಾತ್ಮಕ ಸಂಬಂಧ ಬಲವಾಗಿರಬೇಕು. ಭಾವನಾತ್ಮಕ ಬಂಧವು ಮಕ್ಕಳಲ್ಲಿ ನಂಬಿಕೆ, ಸುರಕ್ಷಿತ ಮನೋಭಾವವನ್ನು ಮೂಡಿಸುವ ಮೂಲಕ ಮಕ್ಕಳು ತಮ್ಮ ಪಾಲಕರ ಸಲಹೆ ಮತ್ತು ಶಿಸ್ತು ಬದ್ದತೆಗೆ ಧನಾತ್ಮಕವಾಗಿ ಪ್ರತಿಕ್ರಿಯಿಸುತ್ತಾರೆ.ಮಗುವಿನ ದೈಹಿಕ ಬೆಳವಣಿಗೆಯ ಹಂತಗಳು ಪಾಲಕರಿಗೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ.ಟಿ. ಆ್ಯಕ್ಟ್ ೧೯೪೯ ರದ್ದು ಮಾಡಬೇಕು ಬಿಹಾರದ ಬುದ್ದಗಯಾ ಮಹಾಬೋಧಿ ಮಹಾ ವಿಹಾರದ ಆಡಳಿತ ಸಂಪೂರ್ಣ ಬೌದ್ಧರಿಗೆ ನೀಡಬೇಕು ಎಂದು ಒತ್ತಾಯಿಸಿ ಭಾರತೀಯ ಬೌದ್ಧ ಮಹಾಸಭಾ, ಅಖಿಲ ಭಾರತ ಬೌದ್ಧ ವೇದಿಕೆ ವಿಜಯಪುರ, ಮತ್ತು ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ರಾಷ್ಟ್ರಪತಿ ಹಾಗೂ ದೇಶದ ಪ್ರಧಾನಿ ಮಂತ್ರಿ ಹಾಗೂ ರಾಜ್ಯದ ರಾಜ್ಯಪಾಲರಿಗೆ, ಮುಖ್ಯಮಂತ್ರಿಗಳಿಗೆ ಅಲ್ಪಸಂಖ್ಯಾತರ ಆಯೋಗದ ಮುಖ್ಯಸ್ಥರಿಗೆ ಮನವಿ ಸಲ್ಲಿಸಲಾಯಿತು.ಆಲ್ ಇಂಡಿಯಾ ಬುದ್ಧಿಸ್ಟ್ ಫೋರಂ ನೇತೃತ್ವದಲ್ಲಿ ೨೬, ನವ್ಹಂಬರ್ ೨೦೨೪ ರಂದು ರಾಷ್ಟ್ರ ಮಟ್ಟದಲ್ಲಿ ಜರುಗುವ ಮಹಾಬೋಧಿ ಮಹಾ ವಿಹಾರ ಮುಕ್ತಿ ಆಂದೋಲನಕ್ಕೆ ಬೆಂಬಲಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಬೌದ್ಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿದರು.ಈ ಸಭೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಆಯು,ಬಸವರಾಜ್ ಹೋಳ್ಕರ್, ಸಂಯೋಜಕರು, ಅಖಿಲ ಭಾರತೀಯ ಬೌದ್ಧ ವೇದಿಕೆಯ ಆಯು ವೆಂಕಟೇಶ್ ವಾಗ್ಯನವರ ಪ್ರಭುಗೌಡ ಪಾಟೀಲ ವಿದ್ಯಾರ್ಥಿ ಪರಿಷತ್ ರಾಜ್ಯ ಅಧ್ಯಕ್ಷರಾದ ಶ್ರೀನಾಥ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಕುವೆಂಪು ಅವರು ಕನ್ನಡ ನಾಡಿನ ಅಸ್ಮಿತೆಯಂತಿದ್ದರು, ಅವರ ಬರಹಗಳನ್ನು ಕಾಲೇಜು ವಿದ್ಯಾರ್ಥಿಗಳಿಗೆ ತಲುಪಿಸುವಲ್ಲಿ ಕುವೆಂಪು ಓದು ಕಮ್ಮಟ ಸಹಕಾರಿಯಾಗಲಿದ್ದು ಅವರ ಕೃತಿಗಳ ಮರುಓದು ಹೊಸವಿಚಾರಗಳನ್ನು ನೀಡುತ್ತದೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಚನ್ನಪ್ಪ ಕಟ್ಟಿ ಹೇಳಿದರು.ಅವರು ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಬೆಂಗಳೂರು ಹಾಗೂ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕುವೆಂಪು ಓದು: ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು.ಕಾಲೇಜಿನ ಪ್ರಾಚಾರ್ಯ ಪ್ರೊ.ರಮೇಶ ಆರ್.ಎಚ್. ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು.ಪ್ರಾಧಿಕಾರದ ಸದಸ್ಯ ಜೆ. ಕರಿಯಪ್ಪ ಮಾಳಿಗೆ ಪ್ರಾಸ್ತಾವಿಕವಾಗಿ ಮಾತನಾಡಿ ಕುವೆಂಪು ಓದು ಕಮ್ಮಟವು ಈ ವರ್ಷದ ಕಾರ್ಯಕ್ರಮಗಳು ಇಂಡಿಯಿಂದಲೇ ಪ್ರಾರಂಭಿಸುತ್ತಿದ್ದೇವೆ, ಮುಂದಿನ ದಿನಗಳಲ್ಲಿ ಕರ್ನಾಟಕದಾದ್ಯಂತ ಭಾಷಾಭಾರತಿ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುತ್ತಿದೆ ಎಂದರು. ಕರ್ನಾಟಕ ರಾಜ್ಯ ಮಹಿಳಾ ವಿವಿ ಸಿಂಡಿಕೇಟ್ ಸದಸ್ಯರಾದ ಪ್ರೊ.ಎಸ್.ಜೆ.ಮಾಡ್ಯಾಳ ಅವರು ವೇದಿಕೆಯಲ್ಲಿದ್ದರು.ಮೊದಲ ಗೋಷ್ಠಿಯಲ್ಲಿ ಕುವೆಂಪು ಅವರ ಕುವೆಂಪು ಅವರ ನಾಟಕಗಳು ಕುರಿತು ಸಂಶೋಧಕ ಡಾ. ಎಸ್.ಕೆ.ಕೊಪ್ಪಾ ಉಪನ್ಯಾಸ ನೀಡಿದರು.೨ನೇ ಗೋಷ್ಠಿಯಲ್ಲಿ…

Read More