Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಭಾರತೀಯ ಸಂವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಜನರಿಗೆ ಅರಿವು ಮೂಡಿಸುವ ಉದ್ದೇಶವೇ ಸಂವಿಧಾನ ದಿನಾಚರಣೆಯ ಉದ್ದೇಶವಾಗಿದೆ ಎಂದು ಸಿಂದಗಿಯ ಹಿರಿಯ ಸಿವ್ಹಿಲ್ ನ್ಯಾಯಾಧೀಶ ನಾಗೇಶ ಮೋಗೇರ ಹೇಳಿದರು.ಪಟ್ಟಣದ ಎಚ್.ಜಿ.ಕಾಲೇಜಿನಲ್ಲಿ ಮಂಗಳವಾರ ತಾಲೂಕು ಕಾನೂನು ಸೇವಾ ಸಮಿತಿ ಸಿಂದಗಿ, ವಕೀಲರ ಸಂಘ ಸಿಂದಗಿ ಹಾಗೂ ಎಚ್.ಜಿ.ಪದವಿಪೂರ್ವ ಮಹಾವಿದ್ಯಾಲಯ ಇವುಗಳ ಸಹಯೋಗದಲ್ಲಿ ಹಮ್ಮಿಕೊಂಡ ಭಾರತೀಯ ಸಂವಿಧಾನ ದಿನಾಚರಣೆ ಕುರಿತಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಇಂದು ಭಾರತದ ಸಂವಿಧಾನ ದಿನವಾಗಿದ್ದು, ದೇಶದ ಯುವಜನರಿಗೆ ಸಂವಿಧಾನದ ಮೌಲ್ಯಗಳನ್ನು ತಿಳಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ಅವರು ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಹಕ್ಕುಗಳು ಹಾಗೂ ಕಾನೂನುಗಳನ್ನು ವಿವರಿಸುವ ಕಾನೂನು ದಾಖಲೆಯ ತಯಾರಿಸುವಲ್ಲಿ ಬಹುದೊಡ್ಡ ಪಾತ್ರವನ್ನು ವಹಿಸಿದ್ದಾರೆ. ಅಂಬೇಡ್ಕರ್ ಸೇರಿದಂತೆ ಅಂತಹ ಮಹಾನ್ ವ್ಯಕ್ತಿಗಳ ಶ್ರಮವನ್ನು ಈ ದಿನದಂದು ನಾವೆಲ್ಲ ನೆನಪಿಸಿಕೊಳ್ಳಬೇಕು ಎಂದರು.ಈ ವೇಳೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎ.ಎ.ಮುಲ್ಲಾ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹರೀಶ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಶ್ವಾಸ ನಂಬಿಕೆಯೇ ಜೀವಮಾನದ ಸಾಧನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂದು ಶ್ರೀ ಗಜಾನನ ಸೌಹಾರ್ದ ಬ್ಯಾಂಕಿನ ಸಿಇಒ ಅವಧೂತ ಜೋಶಿ ಹೇಳಿದರು.ಪಟ್ಟಣದ ರಾಂಪೂರ ಪಿಎ ರಸ್ತೆಯಲ್ಲಿರುವ ಶ್ರೀಸಮರ್ಥ ವಿದ್ಯಾ ವಿಕಾಸ ವಿವಿದೊದ್ದೇಶಗಳ ಸಂಸ್ಥೆಯ ಪ್ರೇರಣಾ ಸಮೂಹ ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾನಿಕೇತನ ಪ್ರಾಥಮಿಕ ಶಾಲೆಗಳ ಶಿಕ್ಷಕರ ಬಳಗದ ಸಹಯೋಗದಲ್ಲಿ ಬೆಳಗಾವಿಯಲ್ಲಿ ನಡೆದ ೭೧ನೇ ಅಖಿಲ ಭಾರತ ಸಹಕಾರ ಸಪ್ತಾಹದ ನಿಮಿತ್ತ ಸಿಂದಗಿ ನಗರದಲ್ಲಿ ಹ್ಮಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಶ್ರೇಷ್ಠ ಸಹಕಾರಿ ರಾಜ್ಯ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾದ ಆರ್.ಡಿ.ಕುಲಕರ್ಣಿ ಅವರನ್ನು ಸನ್ಮಾನಿಸಿ ಗೌರವಿಸಿ ಮಾತನಾಡಿದರು.ಶಿಕ್ಷಕ ವೃತ್ತಿಯಿಂದ ಸಹಕಾರ ಕ್ಷೇತ್ರದಲ್ಲಿ ಸಾಧನೆ ಮಾಡಿದ ರೀತಿ ಅಮೋಘ. ವಿದ್ಯಾರ್ಥಿಗಳಲ್ಲಿ ಶಿಸ್ತು ಇದ್ದಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಾಧ್ಯ. ಅದರಂತೆ ಸಹಕಾರಿ ಕ್ಷೇತ್ರದಲ್ಲಿ ಯಶಸ್ವಿಯಾದವರು ಎಲ್ಲ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಲು ಸಾಧ್ಯ. ಅದಕ್ಕೆ ನಿದರ್ಶನವೆಂದರೆ ಕುಲಕರ್ಣಿಯವರು ಎಂದರು.ಕಾರ್ಯಕ್ರಮದಲ್ಲಿ ಪತ್ರಕರ್ತ ಶಾಂತು ಹಿರೇಮಠ, ಸಂಸ್ಥೆಯ ನಿದೇಶಕರಾದ ಪಿ.ಡಿ.ಕುಲಕರ್ಣಿ, ಕ್ಷೇತ್ರ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ದೇಶದ ಪ್ರತಿಯೊಬ್ಬ ನಾಗರಿಕನು ಸಂವಿಧಾನವನ್ನು ಅರಿಯುವುದು ಅಗತ್ಯವಾಗಿದೆ ಎಂದು ಪಿಯು ಪ್ರಥಮ ವರ್ಷದ ವಿದ್ಯಾರ್ಥಿ ಕಾಶಿನಾಥ ಬಳುಂಡಗಿ ಹೇಳಿದರು.ಪಟ್ಟಣದ ರಾಂಪೂರ ಪಿಎ ರಸ್ತೆಯಲ್ಲಿರುವ ಪಿ.ಇ.ಎಸ್.ಗಂಗಾಧರ ಎನ್. ಬಿರಾದಾರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ-ಪೂರ್ವ ಕಾಲೇಜಿನಲ್ಲಿ ಜರುಗಿದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕಾಶಿನಾಥ ಬಳುಂಡಗಿ ಸಹಮಿತ್ರರನ್ನು ಕುರಿತು ಮಾತನಾಡಿದರು.ದೇಶದ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನವಾಗಿದ್ದು, ದೇಶದ ಪ್ರತಿಯೊಬ್ಬ ಪ್ರಜೆಯೂ ಅದನ್ನು ಅರಿತು ಪಾಲಿಸಬೇಕಾಗಿರುವುದು ಎಲ್ಲರ ಕರ್ತವ್ಯ. ಆದರೆ ಇತ್ತೀಚಿನ ದಿನಗಳಲ್ಲಿ ಸಂವಿಧಾನವನ್ನು ಪಾಲಿಸಬೇಕಾದ ಜನಪ್ರತಿನಿಧಿಗಳು, ಅಧಿಕಾರಿಗಳು ಸಂವಿಧಾನದ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಸಮಾಜದಲ್ಲಿ ಅಸಮಾನತೆ, ಜಾತೀಯತೆ, ಭಿನ್ನತೆಗೆ ಕಾರಣವಾಗಿದೆ. ಇಂತಹ ಘಟನೆಗಳು ದೇಶದ ಏಕತೆಗೆ ಮಾರಕವಾಗುತ್ತಿವೆ. ವಿದ್ಯಾವಂತ ಯುವಪೀಳಿಗೆ ದೇಶದ ಸಂವಿಧಾನದ ಆಶಯಗಳನ್ನು ಈಡೇರಿಸಲು ಕಂಕಣಬದ್ಧರಾಗಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಪ್ರಾಚಾರ್ಯ ಆರ್.ಬಿ.ಗೋಡಕರ, ಗುರು ಕಡಣಿ, ಅಮೀರಬಾಷಾ ಮೋಪಗಾರ, ಮಹಾಂತೇಶ ದಂಡವತ, ಎಸ್.ಎಸ್.ಬಿರಾದಾರ, ಕೆ.ಎಚ್.ಸೋಮಾಪೂರ, ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಪ್ರೇರಣಾ ಶಾಲೆಪಟ್ಟಣದ ಹೊರವಲಯದ ಪ್ರೇರಣಾ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸ್ವತಂತ್ರ ದೊರೆತ ಬಳಿಕ ನಮ್ಮ ಆಡಳಿತವನ್ನು ಹೇಗೆ ಮುನ್ನೆಡೆಸಬೇಕು ಎಂಬ ವಿಚಾರವಾಗಿ ಸಂವಿಧಾನ ರಚಿಸಲು ಒಂದು ಕರಡು ಸಮಿತಿಯನ್ನು ರಚನೆ ಮಾಡಲಾಯಿತು. ಅದರ ಅದ್ಯಕ್ಷರನ್ನಾಗಿ ಡಾ.ಬಿ.ಆರ್.ಅಂಬೇಡ್ಕರರನ್ನು ನೇಮಕ ಮಾಡಿ ಹಲವಾರು ದೇಶಗಳ ಗ್ರಂಥಗಳನ್ನು ಅಧ್ಯಯನ ಮಾಡಿ ಸಂವಿಧಾನ ರಚಿಸಿ ಕಟ್ಟಕಡೆಯ ವ್ಯಕ್ತಿಯಿಂದ ಉಚ್ಚ ವ್ಯಕ್ತಿಯವರೆಗೆ ನ್ಯಾಯ ಸಮಾನತೆಯಿಂದ ಅಧಿಕಾರ ನೀಡಿದ್ದು ಒಂದು ಧರ್ಮ ಗ್ರಂಥವೆಂದರೆ ಅದುವೇ ಧರ್ಮಗ್ರಂಥವೆಂದು ಹೇಳಿದರೂ ತಪ್ಪಾಗದು ಎಂದು ತಾಪಂ ಇಒ ರಾಮು ಅಗ್ನಿ ಹೇಳಿದರು.ಪಟ್ಟಣದ ಡಾ.ಅಂಬೇಡ್ಕರ ವೃತ್ತದಲ್ಲಿ ತಾಲೂಕಾಡಳಿತ ವತಿಯಿಂದ ಸಂವಿಧಾನ ದಿನದ ನಿಮಿತ್ತ ಹಮ್ಮಿಕೊಂಡ ಸಂವಿಧಾನ ಪಿಠೀಕೆಯನ್ನು ತಾಪಂ ಇಒ ರಾಮು ಅಗ್ನಿ ಬೋಧಿಸಿ ಮಾತನಾಡಿದರು.ಭಾರತದ ಪ್ರಜೆಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಸಮಸ್ತ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ‍್ಯ, ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ಕಾಳಗಿ ಗ್ರಾಮದ ಅಪ್ರಾಪ್ತ ಬಾಲಕ ಸುರೇಶ ಮಾದರ(೧೬) ಕಾಣೆಯಾಗಿದ್ದಾನೆ ಎಂದು ಸುರೇಶ ನ ತಂದೆ ಶಿವಾನಂದ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.ಜಿಲ್ಲೆಯ ಉತ್ನಾಳ ಗ್ರಾಮಕ್ಕೆ ಹೋಗಿ ಬರುವದಾಗಿ ತಿಳಿಸಿ ಹೋದವನು ಮರಳಿ ಮನೆಗೆ ಬಾರದೇ ಎಲಿಯೋ ಹೋಗಿ ಕಾಣೆಯಾಗಿದ್ದಾನೆ. ಅವನನ್ನು ಯಾರೋ ಅಪಹರಿಸಿರಬಹುದು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಫೋಟೋದಲ್ಲಿರುವ ಬಾಲಕ ಯಾರಿಗಾದರೂ ಕಂಡಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ವಿನಂತಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕೊಂಡಗೂಳಿ ರೈತ ಸಮುದಾಯಕ್ಕೆ ಆಧಾರವಾಗಬೇಕಿದ್ದ ತೊಗರಿ ಬೆಳೆ ಹವಾಮಾನ ವೈಪರಿತ್ಯದಿಂದ ಸಂಪೂರ್ಣ ಹಾಳಾಗಿದೆ. ತಕ್ಷಣವೇ ರೈತರಿಗೆ ಬೆಳೆ ಹಾನಿಗೆ ಸಂಪೂರ್ಣ ವಿಮೆ ನೀಡಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಚೇರಿ ಆವರಣಕ್ಕೆ ಮಂಗಳವಾರ ಆಗಮಿಸಿದ ರೈತರು ಸಂಪೂರ್ಣ ವಿಮೆ ನೀಡಬೇಕೆಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ರೈತ ವೀರಘಂಟಯ್ಯ ಗದ್ದಗಿಮಠ ಮಾತನಾಡಿ, ಪೂರ್ವ ಮುಂಗಾರು ಬೆಳೆಯಾಗಿ ತೊಗರಿ ಬಿತ್ತನೆ ಮಾಡಲಾಗಿದ್ದು, ಬೆಳೆಯು ಹೂವಿನ ಹಂತದಲ್ಲಿ ಇರುವಾಗ ಹವಾಮಾನ ವೈಪರಿತ್ಯದಿಂದ ಪ್ರತಿ ದಿನ ಮಂಜು ಆವರಿಸಿದ್ದು, ಬೆಳೆಯ ಹೂ ಮತ್ತು ಚಿಗುರಿಕಾಯಿ ಸಂಪೂರ್ಣವಾಗಿ ಉದುರಿ ಹೋಗಿರುವುದರಿಂದ ಬೆಳೆ ಒಣಗಿ ಹೋಗಿರುತ್ತದೆ. ಕೃಷಿಕರು ಸಾವಿರಾರು ಹಣ ಸಾಲ ಮಾಡಿ ಬೀಜ, ಗೊಬ್ಬರ, ಕ್ರಿಮಿನಾಶಕ ಸಿಂಪಡಿಸಿ ವ್ಯವಸ್ಥೆ ಮಾಡಿದ್ದ ತೊಗರಿ ಬೆಳೆ ಈ ರೀತಿಯಾಗಿ ಸಂಪೂರ್ಣ ಹಾಳಾಗಿದೆ. ಇದನ್ನೆ ನಂಬಿದ ರೈತರ ಬದುಕು ದುಸ್ತರವಾಗಿದೆ. ಜೀವನಾಧಾರವಾಗಬೇಕಿದ್ದ ತೊಗರಿಬೆಳೆ ಹೊಡೆತ ನೀಡಿದೆ.ಕೊಂಡಗೂಳಿ ಗ್ರಾಮದಲ್ಲಿ ಸುಮಾರು ೯೦೦ ರೈತರು ಫಸಲ ಭೀಮಾ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕು ಆಡಳಿತ, ಪಟ್ಟಣ ಪಂಚಾಯಿತಿ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಂವಿಧಾನ ದಿನಾಚರಣೆ ಜರುಗಿತು.ಪಟ್ಟಣದ ಅಂಬೇಡ್ಕರ ವೃತ್ತದಲ್ಲಿ ಮಂಗಳವಾರ ತಹಶೀಲ್ದಾರ್ ಪ್ರಕಾಶ ಸಿಂದಗಿ ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆ ಓದುವುದರ ಮೂಲಕ ಪ್ರತಿಜ್ಞಾವಿಧಿ ಭೋಧಿಸಿ ಮಾತನಾಡಿದರು. ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದ ಸಂವಿಧಾನ ನಮ್ಮದಾಗಿದೆ. ಪ್ರತಿಯೊಂದು ಅಂಶಗಳು ನಮಗೆ ಮಾದರಿಯಾಗಿವೆ. ಸರ್ಕಾರ ನಡೆಸುವ ಪ್ರತಿಯೊಬ್ಬ ನಾಗರೀಕನಿಗೂ ಅನ್ವಯವಾಗುವ ಹಕ್ಕು ಮತ್ತು ಕರ್ತವ್ಯಗಳ ಕುರಿತು ಸಂವಿಧಾನ ಮಾಹಿತಿ ನೀಡುತ್ತದೆ. ಇಂತಹ ಸಂವಿಧಾನ ರಚನೆ ಮಾಡಿದ ಮಹನೀಯರೆಲ್ಲರಿಗೂ ನಾವು ಕೃತಜ್ಞರಾಗಿರಬೇಕು. ಸಂವಿಧಾನ ರಚನೆಯಲ್ಲಿ ಅಂಬೇಡ್ಕರ ಅವರ ಸೇವೆ ಶ್ಲಾಘನೀಯವಾಗಿದೆ. ಇಂತಹ ಸಂವಿಧಾನವನ್ನು ಸಂರಕ್ಷಣೆ ಮಾಡುವ ಕಾರ್ಯ ನಮ್ಮ ಮೇಲಿದೆ ಎಂದರು.ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಅಶೋಕ ಹೆಗಡೆ, ಶಿರಸ್ತೇದಾರ ಸುರೇಶ ಮ್ಯಾಕೇರಿ, ಪಟ್ಟಣ ಪಂಚಾಯಿತಿ ಸದಸ್ಯ ಕಾಸುಗೌಡ ಬಿರಾದಾರ(ಜಲಕತ್ತಿ), ಕಿರಿಯ ಆರೋಗ್ಯ ನಿರೀಕ್ಷಕ ಫಿರೋಜ್ ಮುಲ್ಲಾ, ಮುತ್ತುರಾಜ ಹಿರೇಮಠ, ಅಂಬೇಡ್ಕರ್ ಸುಧಾರಣಾ ಸಮೀತಿ ಅಧ್ಯಕ್ಷ ಕಾಶೀನಾಥ ತಳಕೇರಿ, ಬಸವರಾಜ…
ಉದಯರಶ್ಮಿ ದಿನಪತ್ರಿಕೆ ಇಂಡಿ: ನಮ್ಮ ಸಂವಿಧಾನವು ದೇಶದ ಜನರನ್ನು ಸಶಕ್ತಗೊಳಿಸಿ, ಸರ್ವರಿಗೂ ಸಮಾನತೆ, ಮೂಲಭೂತ ಹಕ್ಕು-ಕರ್ತವ್ಯಗಳನ್ನು ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲವಾಗಿದ್ದು, ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು ಆಗಿದೆ ಎಂದು ಹಿರೇರೂಗಿ ಯುಬಿಎಸ್ ಶಾಲಾ ಶಿಕ್ಷಕ ಸಂತೋಷ ಬಂಡೆ ಹೇಳಿದರು.ಅವರು ಮಂಗಳವಾರದಂದು ಪಟ್ಟಣದ ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಸಂವಿಧಾನ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ‘ಭಾರತದ ಸಂವಿಧಾನ ಹೆಜ್ಜೆಗಳು’ ಕುರಿತ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.ಸಂವಿಧಾನ ಸರ್ವ ಜನರ ಆಸ್ತಿ. ಭಾರತದಲ್ಲಿ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಉಳಿಯಬೇಕಾದರೆ, ಸಂವಿಧಾನದ ತತ್ವಗಳನ್ನು ನಾವೆಲ್ಲರೂ ಅನುಸರಿಸಬೇಕು.ಪ್ರಜಾಪ್ರಭುತ್ವದ ಯಶಸ್ಸು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು,ಪ್ರತಿಯೊಬ್ಬರಿಗೂ ಸಂವಿಧಾನ ಅಧ್ಯಯನ ಮತ್ತು ಓದು ಬಹಳ ಅಗತ್ಯ ಎಂದರು.ಪ್ರಭಾರಿ ಪ್ರಾಚಾರ್ಯ ಪಿ ವೈ ರಜನೀಕರ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಭೀಮಾಶಂಕರ ಶಿವೂರ ಭಾರತದ ಸಂವಿಧಾನ ಪೀಠಿಕೆಯನ್ನು ಓಡಿಸಿದರು. ಉಪನ್ಯಾಸಕರಾದ ಜಿ ಎಸ್ ಭಾಗೆಳ್ಳಿ, ರಮೇಶ ಮೇತ್ರಿ, ಸಂತೋಷ ಜಾಧವ, ಪ್ರೇಮಾನಂದ ದೇಸಾಯಿ, ರವಿ ಹಾದಿಮನಿ, ಅಬ್ದುಲ್ಲಾ, ರೇಶ್ಮಾ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು…
ಉದಯರಶ್ಮಿ ದಿನಪತ್ರಿಕೆ ಇಂಡಿ: ನ.26 ಸ್ವತಂತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ವದ ದಿನವಾಗಿದೆ. 1949ರ ನ.26ರಂದು ಸಂವಿಧಾನವನ್ನು ಅಳವಡಿಸಿಕೊಂಡ ಹಿನ್ನಲೆಯಲ್ಲಿ ಇಂದು ನ.26ರ ಮಂಗಳವಾರದಂದು ನಗರದ ತಾಲ್ಲೂಕು ಆಡಳಿತ ಕಚೇರಿ ಸಭಾಂಗಣದಲ್ಲಿ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ನೇತೃತ್ವದಲ್ಲಿ ಭಾರತದ ಸಂವಿಧಾನ ಪಿಠೀಕೆ ಓದುವ ಮೂಲಕ ಭಾರತದ ಸಂವಿಧಾನ ದಿನ ಆಚರಣೆ ಮಾಡಲಾಯಿತು.ಇದೇ ಸಂದರ್ಭದಲ್ಲಿ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಮಾತನಾಡಿದ ಅವರು, ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು.ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವದರ ಜತೆಗೆ ಅವರ ಸಾಧನೆಯ ಬಗ್ಗೆ ತಿಳಿಸಿ ಕೊಡುವುದು ಈ ದಿನದ ವಿಶೇಷತೆ. ಭಾರತದ ಸಂವಿಧಾನಕ್ಕೆ ವಿಶ್ವದಲ್ಲೇ ದೊಡ್ಡ ಸಂವಿಧಾನ ಎಂಬ ಹಿರಿಮೆ ಇದೆ ಎಂದು ಹೇಳಿದರು.ಈ…
ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಿದೆ.ಈ ಹಿಂದೆ ಆಂದ್ರದಲ್ಲಿನ ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿದಾಗ ರಾಜಕೀಯ ನಾಯಕರಾದ ಚಂದ್ರಬಾಬು ನಾಯ್ಡು ಸೋತಾಗ ಮತ್ತು ಜಗನ್ ಮೋಹನ್ ರೆಡ್ಡಿ ಇತ್ತೀಚಿನ ಚುನಾವಣೆಗಳಲ್ಲಿ ಸೋತಾಗ ಅವರೂ ಸಹ ಒಬ್ಬರಿಗೊಬ್ಬರು ಇವಿಎಂ ಗಳನ್ನು ತಿರುಚಬಹುದು ಎಂಬ ಆರೋಪ-ಪ್ರತ್ಯರೋಪಗಳ ಸ್ಮರಿಸಿದ ನ್ಯಾಯಾದೀಶರು ಅರ್ಜಿದಾರರ ವಾದವನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇಂಥ ವಾದ ಮಂಡಿಸಲು ಇದು ಸೂಕ್ತ ಜಾಗ ಅಲ್ಲ ಎಂದು ವಿಭಾಗೀಯ ಪೀಠ…
