Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾನಗರ ಪಾಲಿಕೆಯ ವಾರ್ಡ ನಂ.೨೯ಕ್ಕೆ ನಡೆದ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಪಕ್ಷದ ಗಿರೀಶ ವಿಜಯಕುಮಾರ ಪಾಟೀಲ ಅವರು ೨೭೫೪ ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ ಎಂದು ಉಪ ಚುನಾವಣೆ ಚುನಾವಣಾಧಿಕಾರಿ ವಿನಯಕುಮಾರ ಪಾಟೀಲ ಅವರು ತಿಳಿಸಿದ್ದಾರೆ.ವಾರ್ಡ ನಂ.೨೯ಕ್ಕೆ ನಡೆದ ಉಪ ಚುನಾವಣೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಭಾಗಪ್ಪ ಏಳಗಂಟಿ ೧೭೬೨ ಮತಗಳನ್ನು ಪಡೆದಿದ್ದು, ೩೮ ನೋಟಾ ಮತಗಳು ಚಲಾವಣೆಯಾಗಿವೆ.
ಮಾನವ ಸರಪಳಿ: ನಾವೀನ್ಯತೆ ವಿಭಾಗದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವ ಜಾಗೃತಿ ಮೂಡಿಸಲು ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಬಾಗಲಕೋಟೆ ಜಿಲ್ಲೆಯ ಗಡಿ ಭಾಗದ ಆಲಮಟ್ಟಿಯವರೆಗಿನ ಸುಮಾರು ೬೨ ಕಿ.ಮೀ.ವರೆಗೆ ಯಶಸ್ವಿಯಾಗಿ ಹಮ್ಮಿಕೊಂಡ ಮಾನವ ಸರಪಳಿ ನಿರ್ಮಾಣಕ್ಕೆ ಮಾನವ ಸರಪಳಿ ನಾವೀನ್ಯತೆ ವಿಭಾಗದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದೆ.ಪ್ರಜಾಪ್ರಭುತ್ವ ಜಾಗೃತಿ ಮೂಡಿಸಲು ಬೀದರನಿಂದ ಚಾಮರಾಜನಗರವರೆಗೆ ಮಾನವ ಸರಪಳಿ ನಿರ್ಮಾಣ ಹಾಗೂ ವಿಶಿಷ್ಟ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಲ್ಡ್ ಆಫ್ ಬುಕ್ ರೆಕಾರ್ಡ ಸೇರ್ಪಡೆಗೊಂಡಿದ್ದು, ಈ ಪೈಕಿ ವಿಜಯಪುರ ಜಿಲ್ಲೆಗೆ ನಾವೀನ್ಯತೆ ವಿಭಾಗದಲ್ಲಿ ಪ್ರಥಮ ಸ್ಥಾನ ಸಂದಿರುವ ಹಿನ್ನಲೆಯಲ್ಲಿ ನವೆಂಬರ್ ೨೬ ರಂದು ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಂದ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಶಸ್ತಿ ಸ್ವೀಕರಿಸಿದರು.
ವಿಜಯಪುರದಲ್ಲಿ ಸಂವಿಧಾನ ದಿನಾಚರಣೆ ಹಾಗೂ ವಿಚಾರ ಸಂಕಿರಣ -೨೦೨೪ | ಜಿಪಂ ಸಿಇಒ ರಿಷಿ ಆನಂದ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜದಲ್ಲಿ ನಾವೆಲ್ಲರೂ ಸಮಾನರು, ತಾರತಮ್ಯ ಬೇಧಭಾವ ತೊರೆದು ಎಲ್ಲರೂ ಸಮಾನರೆಂಬ ಸಂವಿಧಾನದ ಆಶಯಕ್ಕನುಗುಣವಾಗಿ ನಡೆಯುವ ಮೂಲಕ ಸಂವಿಧಾನದ ಆಶಯವನ್ನು ಪ್ರತಿಯೊಬ್ಬರು ಎತ್ತಿ ಹಿಡಿಯಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳವಾರ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಸಂವಿಧಾನ ದಿನಾಚರಣೆ ಹಾಗೂ ವಿಚಾರ ಸಂಕಿರಣ -೨೦೨೪ ಕಾರ್ಯಕ್ರಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರವರ ಜೀವನದ ಪ್ರಮುಖ ಘಟ್ಟಗಳ ಕುರಿತಾಗಿರುವ ಛಾಯಚಿತ್ರಗಳ ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ದೇಶದ ಸಂವಿಧಾನ ಜಗತ್ತಿನ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ. ಸಂವಿಧಾನದ ಪೀಠಿಕೆಯಲ್ಲಿಯೇ ಸಮಾನತೆ, ಭಾತೃತ್ವ, ಮೂಲಭೂತ ಹಕ್ಕುಗಳು ಹಾಗೂ ನಾಗರಿಕರ ಕರ್ತವ್ಯಗಳು, ಅಸ್ಪಶೃತೆ ನಿವಾರಣೆ, ಜೀವಿಸುವ ಹಕ್ಕು, ಉತ್ತಮ ಜೀವನ ನಿರ್ವಹಣೆ ಕುರಿತ ಅಂಶಗಳನ್ನು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾನಗರ ಪಾಲಿಕೆ ವಾರ್ಡ್ ನಂ.29ರ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಗಿರೀಶ ಪಾಟೀಲ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.ಫಲಿತಾಂಶ ಹೊರ ಬಿಳುತ್ತಿದ್ದಂತೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರು,. ನಂತರ ನಗರದ ವಿವಿಧ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ, ವಾರ್ಡ್ ನಂ.29 ಬಡಾವಣೆ/ಕಾಲೊನಿಗಳಲ್ಲಿ ಸಂಚರಿಸಿ ಮತದಾರರಿಗೆ ಅಭಿನಂದನೆ ಸಲ್ಲಿಸಲಾಯಿತು. ನಂತರ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ವಿಜಯೋತ್ಸವ ಆಚರಿಸಿದರು. ಭಾರತ್ ಮಾತಾ ಕೀ ಜೈ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರ ಪರ ಜಯಘೋಷ ಮೊಳಗಿಸಿದರು.ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರ ಅಭಿವೃದ್ಧಿ ಮೆಚ್ಚಿ ಹಾಗೂ ಅವರ ಮೇಲೆ ಅಪಾರವಾದ ಭರವಸೆಯಿಂದ ಹಾಗೂ ಮತ್ತಷ್ಟು ಅವರ ಕೈ ಬಲಪಡಿಸಲು ಮತದಾರರು ಆಶೀರ್ವದಿಸಿದ್ದರಿಂದ ನಮ್ಮ ಅಭ್ಯರ್ಥಿಯ ಅಭೂತಪೂರ್ವ ಗೆಲುವಾಗಿದೆ. ಶಾಸಕರು ಪಣತೊಟ್ಟಂತೆ ಮುಂದಿನ ಅವಧಿಗೆ…
ಉದಯರಶ್ಮಿ ದಿನಪತ್ರಿಕೆ ವಿಜಾಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕಂಪ್ಯೂಟರ್ ವಿಜ್ಞಾನ ವಿಭಾಗದಲ್ಲಿ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಎಂಸಿಎ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಎಂಸಿಎ ಕೋರ್ಸ್ಗೆ ಹಂಚಿಕೆಯಾಗಿ ಕೆಲವೇ ಕೆಲವು ಬಾಕಿ ಉಳಿದ ಸೀಟುಗಳಿಗಾಗಿ ಆಸಕ್ತ ಅಭ್ಯರ್ಥಿಗಳು ಯುಯುಸಿಎಮ್‌ಎಸ್ ತಂತ್ರಾಂಶದ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿಗದಿಪಡಿಸಿರುವ ಶುಲ್ಕ ಮಾತ್ರ ಪಾವತಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಯನ್ನು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ವಿಜಯಪುರ ವೆಬಸೈಟ್ ತಿತಿತಿ.ಞsತಿu.ಚಿಛಿ.iಟಿ ಸಂಪರ್ಕಿಸಬಹುದಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಇದೇ ನವೆಂಬರ್ ೨೭ ರಿಂದ ೨೯ ರವರೆಗೆ ಮೂರು ದಿನಗಳ ಕಾಲ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವ ‘ಶಕ್ತಿ ಸಂಭ್ರಮ’ ಹಮ್ಮಿಕೊಳ್ಳಲಾಗಿದೆ.ದಿ.೨೭ ರಂದು ಬೆಳಿಗ್ಗೆ ೧೧:೦೦ ಗಂಟೆಗೆ ವಿವಿಯ ಆಡಳಿತ ಭವನದ ಮುಂಭಾಗದಲ್ಲಿ ನಿರ್ಮಿಸಿರುವ ವಿಶೇಷ ವೇದಿಕೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮಹಿಳಾ ಮಹಾವಿದ್ಯಾಲಯಗಳ ಯುವಜನೋತ್ಸವ ‘ಶಕ್ತಿ ಸಂಭ್ರಮ’ ಉದ್ಘಾಟಿಸಲಿದ್ದಾರೆ. ನಗರ ಶಾಸಕರಾದ ಬಸನಗೌಡ ಆರ್ ಪಾಟೀಲ್ (ಯತ್ನಾಳ್) ಅಧ್ಯಕ್ಷತೆ ವಹಿಸಲಿದ್ದಾರೆ.ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬೃಹತ್ ಮತ್ತು ಮಾಧ್ಯಮ ಕೈಗಾರಿಕೆ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಡಾ.ಎಂ.ಬಿ. ಪಾಟೀಲ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ, ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ ತುಳಸಿಮಾಲ ಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಸಂಸದರಾದ ರಮೇಶ ಚಂ ಜಿಗಜಿಣಗಿ, ಡಾ.ಸುಧಾ ಮೂರ್ತಿ, ಶಾಸಕರಾದ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಇತ್ತಿಚಗೆ ಸಿಂದಗಿಯಲ್ಲಿ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಎಚ್.ಜಿ ಕಲಾ,ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯಗಳ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಮಹಾವಿದ್ಯಾಲಯಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಚಡಚಣದ ಸಂಗಮೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಪ್ರಥಮ ಸ್ಥಾನವನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಪ್ರಥ್ವಿ ಮುಂಡೇವಾಡಿ ಭಕ್ತಿ ಗೀತೆಯಲ್ಲಿ ಪ್ರಥಮ ಸ್ಥಾನ ಮತ್ತು ಚಿನ್ಮಯ ಸಾಂಗೋಲಿ ಮತ್ತು ಶಿವರಾಜಕುಮಾರ ಬನಪೂರೆ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಉಪ ನಿರ್ದೇಶಕ ಸಿ.ಕೆ.ಹೊಸಮನಿ, ಸಂಗೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯ ಮನೋಜ ಕಟಗೇರಿ, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಭಗವದ್ಗೀತೆಯಲ್ಲಿ ಆಧ್ಯಾತ್ಮ, ಮನ:ಶಾಸ್ತ್ರ, ನೀತಿ ಶಾಸ್ತ್ರ, ಆರೋಗ್ಯ ವಿಜ್ಞಾನ ಹೀಗೆ ಎಲ್ಲಾ ಜ್ಞಾನಗಳು ಅಡಗಿವೆ ಎಂದು ಶಿಕ್ಷಕ ಸುಖದೇವ ಹಂಜಗಿ ಹೇಳಿದರು.ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರದಲ್ಲಿ ಶಿರಸಿಯ ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಯತಿವರೇಣ್ಯರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಆಯೋಜಿಸಿರುವ ಭಗವದ್ಗೀತಾ ಅಭಿಯಾನ ಕರ್ನಾಟಕ-೨೦೨೪ ಸಂಬಂಧಿ ಶ್ಲೋಕ ಪಠಣ ಕೇಂದ್ರದಲ್ಲಿ ಅವರು ಮಾತನಾಡಿದರು.ಭಗವದ್ಗೀತೆಯ ಎಲ್ಲ ಅಧ್ಯಾಯಗಳನ್ನು ಓದಿಕೊಂಡು ಅದರಲ್ಲಿನ ಜ್ಞಾನವನ್ನು ನಮ್ಮಲ್ಲಿ ಅಳವಡಿಸಿಕೊಂಡಲ್ಲಿ ನಮ್ಮ ಭವಿಷ್ಯ ಉಜ್ವಲವಾಗುವದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.ಈ ವೇಳೆ ಅಭಿಯಾನದ ಸಂಚಾಲಕ ರಾಮಚಂದ್ರ ಹೆಗಡೆ, ಪ್ರಶಿಕ್ಷಕಿ ರಂಜಿತಾ ಹೆಗಡೆ, ಮಂಜುನಾಥ ಪಡದಾಳಿ, ವಿನಾಯಕ ನಾಗರಾಳ, ರೂಪಾ ನಾಟಿಕರ್, ಅನ್ನಪೂರ್ಣ ನಾಗರಾಳ, ಗುರುಬಾಯಿ ತಂಗಡಗಿ, ಭಾಗ್ಯ ಸಿದ್ದಾಪೂರ, ಮೀನಾಕ್ಷಿ ಗಣಚಾರಿ, ಅನ್ನಪೂರ್ಣ ಹೊಸಮನಿ ಸೇರಿದಂತೆ ಇತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಜಿಲ್ಲಾ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದಿಂದ ಸನ್ಮಾನ ಸ್ವೀಕರಿಸಿದ ತಾಲೂಕು ಜಾನಪದ ಪರಿಷತ್ ನ ಅಧ್ಯಕ್ಷ ಎ.ಆರ್.ಮುಲ್ಲಾ ಅವರಿಗೆ ವಿವಿಧಪರ ಸಂಘಟನೆಗಳಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ಈ ವೇಳೆ ರೈತ ಸಂಘದ ಸಂಗಣ್ಣ ಬಾಗೇವಾಡಿ, ಸಾಹಿತಿ ಪ್ರೊ.ಪ್ರಕಾಶ ನರಗುಂದ, ಪ್ರೊ.ಎಸ್.ಕೆ.ಹರನಾಳ, ಮುಖ್ಯಗುರುಗಳಾದ ಟಿ.ಎನ್.ರೂಢಗಿ, ಎಲ್.ಎಂ.ಚಲವಾದಿ, ಕಜಾಪ ಖಜಾಂಚಿ ಎಸ್.ವಾಯ್.ವಗ್ಗರ, ಸದಸ್ಯ ಬಸವರಾಜ ಹರನಾಳ, ಎಂ.ಪಿ.ವಾಳದವರ ಸೇರಿದಂತೆ ಇತರರು ಇದ್ದರು.
ಚನ್ನವೀರಸ್ವಾಮೀಜಿ ಪ್ರತಿಷ್ಠಾನದಿಂದ ಕೃಷಿ ವಿಜ್ಞಾನಿ ಪದ್ಮಶ್ರೀ ಡಾ.ಸುಬ್ಬಯ್ಯ ಅಯ್ಯಪ್ಪನ್ ಅವರಿಗೆಭಾಸ್ಕರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು ಎಂಬ ನಾಣ್ಣುಡಿಯಂತೆ ನಮ್ಮ ಜೀವನದಲ್ಲಿ ಆಧ್ಯಾತ್ಮಿಕತೆಯ ಜೊತೆಗೆ ವಿಷಯದ ಎಲ್ಲ ಶಾಸ್ತ್ರಗಳು ಅತ್ಯವಶ್ಯಕ ಎಂದು ಎಂದು ಖ್ಯಾತ ಕೃಷಿ ವಿಜ್ಞಾನಿ ಪದ್ಮಶ್ರೀ ಡಾ. ಸುಬ್ಬಯ್ಯ ಅಯ್ಯಪ್ಪನ್ ಹೇಳಿದರು.ಸಿಂದಗಿ ಪಟ್ಟಣದ ಸಾರಂಗಮಠದ ಪೂಜ್ಯಶ್ರೀ ಚೆನ್ನವೀರ ಮಹಾಸ್ವಾಮೀಜಿ ಪ್ರತಿಷ್ಠಾನದಿಂದ ದೇಶದ ಶ್ರೇಷ್ಠ ವಿಜ್ಞಾನಿಗಳಿಗೆ ಖ್ಯಾತ ಖಗೋಳಶಾಸ್ತ್ರಜ್ಞ ಭಾಸ್ಕರಾಚಾರ್ಯ-೨ ಹೆಸರಿನ ಮೇಲೆ ಕೊಡಮಾಡುವ ಭಾಸ್ಕರ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.ಈ ದೇಶದ ಪ್ರಗತಿ ಕೃಷಿ ಮತ್ತು ಅನ್ನದಾತನ ಮೇಲೆ ಅವಲಂಬಿತವಾಗಿದೆ. ಎಲ್ಲ ಕ್ಷೇತ್ರಗಳಿಗಿಂತ ಕೃಷಿ ಕ್ಷೇತ್ರ ಅತ್ಯಂತ ಪವಿತ್ರ. ಮಣ್ಣಿನ ಸುವಾಸನೆ, ಮಣ್ಣಿನ ಸಂಬಂಧ, ಮತ್ತು ಮಣ್ಣಿನ ಸಂಪರ್ಕ ನಮಗೆ ಹೆಚ್ಚಿಗೆ ಆದಷ್ಟು ಜೀವನದಲ್ಲಿ ಹೆಚ್ಚು ಅನುಭವ ಮೂಡುತ್ತದೆ. ಮಾಧ್ಯಮ ಮತ್ತು ಸಮೂಹ ಸಂವಹನಗಳು ರೈತರಿಗೆ ಹೆಚ್ಚು ಅನುಕೂಲವನ್ನು ಮಾಡಿಕೊಡುವುದರಿಂದ ಇಂದು ರೈತ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದಾನೆ.…
