Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಂಕ್ರಾಂತಿ ನಿಮಿತ್ಯ ತೊರವಿ ಗ್ರಾಮದಲ್ಲಿ ನಡೆಯುವ ಶ್ರೀ ಸಿದ್ದೇಶ್ವರ ಜಾನುವಾರು ಜಾತ್ರೆಯನ್ನು ಜನವರಿ 10 ರಿಂದ 16ರ ವರೆಗೆ ನಡೆಸಲು ನಿರ್ಧರಿಸಲಾಗಿದೆ. ಜಿಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಜಾತ್ರೆಯ ವ್ಯವಸ್ಥೆ ಬಗ್ಗೆ ಪೂರ್ವಭಾವಿ ಸಭೆ ಜನವರಿ 7ರ ಸಂಜೆ 4ಗಂಟೆಗೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆಯಲಿದೆ ಎಂದು ಪ್ರಕಟಣೆಯು ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ ಇಂಡಿ ಹಾಗೂ ಹಾಪ್‌ಕಾಮ್ಸ್ ವಿಜಯಪುರ ಇವರ ಸಹಯೋಗದಲ್ಲಿ ಜ.13 ರಿಂದ 15ರವರೆಗೆ ನಗರದ ಬಸವ ವನದ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಮೂರು ದಿಗಳ ಫಲ-ಪುಷ್ಪ ಪ್ರದರ್ಶನ, ಹಣ್ಣುಗಳ ಮೇಳ ಹಾಗೂ ತೋಟಗಾರಿಕೆ ಅಭಿಯಾನ ಆಯೋಜಿಸಲಾಗಿದೆ.ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ರೈತರು ಬೆಳೆದಿರುವ ವಿವಿಧ ಹಾಗೂ ಅತ್ಯುತ್ತಮ ತೋಟಗಾರಿಕೆ ಬೆಳೆಗಳ ಪ್ರದರ್ಶನ, ಇಲಾಖಾ ಯೋಜನೆಗಳ ಬಗ್ಗೆ ರೈತರಿಗೆ ಮಾಹಿತಿಯ ಜೊತೆಗೆ ಹಣ್ಣು, ಹೂ, ತರಕಾರಿಗಳಲ್ಲಿ ವಿವಿಧ ಕಲಾಕೃತಿಗಳ ಪ್ರದರ್ಶನ ಮತ್ತು ತೋಟಗಾರಿಕೆಯಲ್ಲಿ ಯಾಂತ್ರೀಕರಣ, ಯಂತ್ರೋಪಕರಣಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.ಕಾರ್ಯಕ್ರಮದಲ್ಲಿ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ ಮತ್ತು ಲಿಂಬೆ ಕುರಿತು ಒಂದು ದಿನದ ವಿಚಾರ ಸಂಕೀರ್ಣ ಹಾಗೂ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಜಿಲ್ಲೆಯ ರೈತರು, ನಾಗರಿಕರು ಮತ್ತು ಶಾಲಾ ಕಾಲೇಜಿನ ಮಕ್ಕಳು ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿ ಕುರಿತು ಜರುಗಿದ ಜಿಲ್ಲಾಮಟ್ಟದ ಟಾಸ್ಕ ಪೋರ್ಸ್ ಸಮಿತಿ ಸಭೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಜನವರಿ 3ರ ಸಂಜೆ 4ಗಂಟೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಪ್ರತಿ ಕ್ವಿಂಟಾಲ್ ತೊಗರಿ ಬೆಲೆಯನ್ನು ರೂ .7550/- ನಂತೆ ಪ್ರತಿ ರೈತನಿಂದ ಗರಿಷ್ಠ 40 ಕ್ವಿಂಟಾಲ್ ತೊಗರಿ ಖರೀದಿಸಲು ಆದೇಶ ನೀಡಲಾಯಿತು.ಖರೀದಿ ಕೇಂದ್ರಗಳಲ್ಲಿ ತೊಗರಿಯನ್ನು ಖರೀದಿಸುವ ಪೂರ್ವದಲ್ಲಿ ರೈತರ ನೋಂದಣಿಯನ್ನು NIC ಸಂಸ್ಥೆಯು ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಬೆಳೆಗಳ ಉತ್ಪನ್ನವನ್ನು ಖರೀದಿಸಲು ಸಿದ್ಧಪಡಿಸಿರುವ ತಂತ್ರಾಂಶವನ್ನು ಸೂಕ್ತವಾಗಿ ಉನ್ನತೀಕರಿಸಿ, ಬಯೋಮೆಟ್ರಿಕ್ ಮೂಲಕ ತೊಗರಿ ಬೆಂಬಲ ಬೆಲೆ ಯೋಜನೆಯಡಿ ನೋಂದಾಯಿಸಲು ಬಳಸಬೇಕು. NIC ಸಂಸ್ಥೆಯು ಅಭಿವೃದ್ಧಿಪಡಿಸಿರುವ ಸದರಿ ನೋಂದಣಿ ತಂತ್ರಾಂಶವು ಈಗಾಗಲೇ FRUITS ತಂತ್ರಾಂಶದೊಂದಿಗೆ ಸಂಯೋಜಿಸಲಾಗಿದೆ. FRUITS ದತ್ತಾಂಶದಲ್ಲಿ ರೈತರಿಗೆ ಸಂಬಂಧಿಸಿದ ವಿವರಗಳನ್ನು ಭೂಮಿ. UIDAI ಮತ್ತು ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ತಾಳೆ ಮಾಡಿ ವಿವರಗಳನ್ನು ಇಂದೀಕರಿಸಲಾಗಿದೆ.…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಪ್ರಗತಿ ಪಟ್ಟಣ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ವೈ.ಬಿ.ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ಡಾ.ಮಂಜುನಾಥ ಮಠ ಪುನರಾಯ್ಕೆಯಾಗಿದ್ದಾರೆ.ಪಟ್ಟಣದ ಬ್ಯಾಂಕ್‌ನಲ್ಲಿ ಶುಕ್ರವಾರ ಅಧ್ಯಕ್ಷ ಹಾಗೂ ಉಪಾದ್ಯಕ್ಷರ ಆಯ್ಕೆಗಾಗಿ ಜರುಗಿದ ಸಭೆ ಸಭೆಯಲ್ಲಿ ಎಲ್ಲ ನಿರ್ದೇಶಕರು ಒಮ್ಮತದಿಂದ ಡಾ.ವೈ.ಬಿ.ಪಾಟೀಲರನ್ನು ಎರಡನೆಯ ಬಾರಿಗೆ ಅಧ್ಯಕ್ಷರನ್ನಾಗಿ ಹಾಗೂ ಹಿಂದಿನ ಉಪಾಧ್ಯಕ್ಷ ಮಂಜುನಾಥ ಮಠ ಅವರನ್ನೇ ಪುನಃ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ೨೦೨೫-೩೦ರ ಅವಧಿಗಾಗಿ ಆಯ್ಕೆ ಮಾಡಿದರು. ನಂತರ ನಿರ್ದೇಶಕ ಮಂಡಳಿಯಿಂದ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮಾತನಾಡಿ, ಮುಂದಿನ ದಿನಗಳಲ್ಲಿ ಬ್ಯಾಂಕ್ ಗ್ರಾಹಕರ ಸಹಕಾರದೊಂದಿಗೆ ಹೊಸ ಹೊಸ ಯೋಜನೆಗಳ ಮೂಲಕ ಹೆಚ್ಚಿನ ಪ್ರಗತಿ ಸಾಧಿಸಲು ಕ್ರಮ ವಹಿಸುತ್ತದೆ ಎಂದು ಹೇಳುತ್ತಾ. ನಮ್ಮ ಆಯ್ಕೆ ಎಲ್ಲ ನಿರ್ದೆಶಕ ಮಂಡಳಿ ಹಾಗೂ ಸರ್ವಸದಸ್ಯರ ನಂಬಿಕೆ, ಭರವಸೆಯ ಪ್ರತೀಕವಾಗಿದೆ ಎಂದರು.ನಿರ್ದೇಶಕರಾದ ಬಿ.ಜಿ.ಪಾಟೀಲ, ಪಿ.ವ್ಹಿ.ದೇಶಪಾಂಡೆ, ಎಸ್.ಕೆ.ಸಜ್ಜನ, ಡಿ.ಡಿ.ಲಮಾಣಿ ಬಿ.ಎಮ್.ಪಾಟೀಲ, ಎಸ್.ಎಸ್.ಉತ್ನಾಳ, ವಿ.ಜಿ.ಪಾಟೀಲ, ಸಿ.ಕೆ.ಮಸಳಿ ಆಯ್.ಸಿ.ಕುದರಿ, ವ್ಹಿ. .ಎಸ್.ಪಾಟೀಲ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಎಸ್.ಪಾಟೀಲ ಹಾಗೂ ಸಿಬ್ಬಂದಿ ಇದ್ದರು.

Read More

ದೇವರಹಿಪ್ಪರಗಿ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳು ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕು ಪ್ರಥಮ ಸಾಹಿತ್ಯ ಸಮ್ಮೇಳನ ಮೂರು ಗೋಷ್ಠಿ, ಬಹಿರಂಗ ಅಧಿವೇಶನದ ನಂತರ ಸಮಾರೋಪಗೊಂಡಿತು.ಪಟ್ಟಣದಲ್ಲಿ ಶುಕ್ರವಾರ ಜರುಗಿದ ಸಾಹಿತ್ಯ ಸಮ್ಮೇಳನದಲ್ಲಿ ಮಧ್ಯಾನ್ಹವೇ ಆರಂಭಗೊಳ್ಳಬೇಕಿದ್ದ ಗೋಷ್ಠಿಗಳು ಸುಮಾರು ೨ ಗಂಟೆಗಳ ಕಾಲ ವಿಳಂಬವಾಗಿ ಆರಂಭಗೊಂಡವು. ಸಾಯಂಕಾಲ ಶರಣ ಗೋಷ್ಠಿಯೊಂದಿಗೆ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.೧ನೇ ಗೋಷ್ಠಿ,ಶರಣ ಗೋಷ್ಠಿ: ನ್ಯಾಯವಾದಿ ಮಹ್ಮದ್‌ಗೌಸ ಹವಾಲ್ದಾರ ಉದ್ಘಾಟಿಸಿ ಮಾತನಾಡಿದರು.ಸಾಹಿತಿ ಶ್ರೀಧರ ಆಸಂಗಿಹಾಳ ಮಾತನಾಡಿ, ಸರ್ವರಿಗೂ ಹಿತವೇನಿಸುವುದೇ ಸಾಹಿತ್ಯ. ಪ್ರೇಮದ ನುಡಿ, ಭಾಷೆಯನ್ನು ಜಗಕ್ಕೆ ನೀಡುವುದೇ ಸಾಹಿತ್ಯ ಇಂಥ ಸಾಹಿತ್ಯ ರಕ್ಷಕ ಮಾಡಿವಾಳ ಮಾಚಿದೇವ ಎಂದು ಹೇಳುತ್ತಾ ಮಾಚಿದೇವರ ಕಾರ್ಯ, ಕೊಡುಗೆಗಳ ಕುರಿತು ಉಪನ್ಯಾಸ ನೀಡಿದರು.ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎಸ್.ಎನ್.ಬಸವರೆಡ್ಡಿ ಮೊಹರೆ ಹಣಮಂತ್ರಾಯರ ಕುರಿತು ಮಾತನಾಡಿ, ಪತ್ರಿಕಾರಂಗದಲ್ಲಿ ಅವರು ಸಲ್ಲಿಸಿದ ಸೇವೆ, ನಡೆದುಬಂದ ದಾರಿಯ ಕುರಿತು ವಿವರಿಸಿದರು.ಹೂವಿನಹಿಪ್ಪರಗಿ ಪತ್ರಿಮಠದ ದ್ರಾಕ್ಷಾಯಣಿ ಮಾತಾಜಿ ಹಾಗೂ ಪರದೇಶಿಮಠದಶ್ರೀ ಸಾನಿಧ್ಯ ವಹಿಸಿದ್ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂಡಿಯನ್ ಅಕಾಡೆಮಿ ಆಫ್ ಪೆಡಿಯಾಟ್ರಿಕ್ಸ್ (ಐಎಪಿ) ಕರ್ನಾಟಕ ರಾಜ್ಯ ಘಟಕ-2025 ರ ಅನುಸ್ಥಾಪನಾ ಸಮಾರಂಭ ಜನವರಿ 5 ರಂದು ರವಿವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಆಸ್ಪತ್ರೆಯ ಟ್ರಾಮಾ ಸೆಂಟರ್‌ನ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ (ಐಎಪಿ) ಕರ್ನಾಟಕ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಡಾ. ಎಸ್. ವಿ. ಪಾಟೀಲ, ಕಾರ್ಯದರ್ಶಿಯಾಗಿ ಡಾ. ಸಿದ್ದು ಚರ್ಕಿ ಹಾಗೂ ಇತರ ಸದಸ್ಯರು ಹೊಸ ಪದಾಧಿಕಾರಿಗಳಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.ಈ ಸಮಾರಂಭದಲ್ಲಿ ವಿಜಯಪುರ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಐಎಪಿ ರಾಷ್ಟ್ರೀಯ ಅಧ್ಯಕ್ಷ ಡಾ. ಜಿ. ವಿ. ಬಸವರಾಜ ಹಾಗೂ ಡಾ. ಎಲ್. ಎಚ್. ಬಿದರಿ ಅಶ್ವಿನಿ ಆಸ್ಪತ್ರೆ ಮತ್ತು ಕರ್ನಾಟಕದ ನೆರೆಯ ರಾಜ್ಯಗಳ ನಾನಾ ಭಾಗಗಳಿಂದ ಪ್ರತಿಷ್ಠಿತ ವೈದ್ಯರು, ಶಿಕ್ಷಣ ತಜ್ಞರು ಹಾಗೂ ಗಣ್ಯರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಂಜಾರಾ ಕ್ರಾಸ್ ಬಳಿ ಇರುವ ಕೂಡು ರಸ್ತೆಗೆ ಸಂತ ಶ್ರೀ ಸೇವಾಲಾಲ ಮಹಾರಾಜರ ವೃತ್ತ ಎಂದು ನಾಮಕರಣ ಮಾಡಲು ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರನ್ನು ಬಂಜಾರಾ ಸಮುದಾಯದ ಧರ್ಮ ಗುರುಗಳು ಮತ್ತು ಮುಖಂಡರು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.ಶನಿವಾರ ಶಾಸಕರ ಕಚೇರಿಗೆ ಆಗಮಿಸಿದ ಬಂಜಾರಾ ಧರ್ಮ ಗುರುಗಳು ಮತ್ತು ಮುಖಂಡರು ನಮ್ಮ ಬಹುದಿನಗಳ ಬೇಡಿಕೆಯಾಗಿತ್ತು. ನಮ್ಮ ಮನವಿಗೆ ಸ್ಪಂದಿಸಿದ ಸಚಿವರಾದ ಎಂ. ಬಿ. ಪಾಟೀಲ ಮತ್ತು ಶಾಸಕರಾದ ಸುನೀಲಗೌಡ ಪಾಟೀಲ ಅವರು ಇತ್ತೀಚಿಗೆ ನಡೆದ ಮಹಾನಗರ ಪಾಲಿಕೆ ಸಭೆಯಲ್ಲಿ ನಗರದ ಸೋಲಾಪುರ ರಸ್ತೆಯಲ್ಲಿರುವ ಶ್ರೀ ಡಿ. ಎಲ್. ಚವ್ಹಾಣ ಅವರ ವಾಣಿಜ್ಯ ಮಳಿಗೆ ಮತ್ತು ರಿಲಾಯನ್ಸ್ ಪೆಟ್ರೋಲ್ ಪಂಪ ಹತ್ತಿರ ಇರುವ ಕೂಡು ರಸ್ತೆಗೆ ಸಂತ ಶ್ರೀ ಸೇವಾಲಾಲ ಮಹಾರಾಜರ ವೃತ್ತ ಎಂದು ನಾಮಕರಣ ಮಾಡಲು ಠರಾವು ಪಾಸ್ ಮಾಡಲು ಕ್ರಮ ಕೈಗೊಂಡಿದ್ದಾರೆ. ಇದರಿಂದಾಗಿ ನಮ್ಮ ಸಮುದಾಯಕ್ಕೆ ಅತೀವ ಸಂತೋಷವಾಗಿದೆ.…

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ನಡೆದ ನಗರ ಆಶ್ರಯ ಸಮಿತಿಯ ನೂತನ ಅಧ್ಯಕ್ಷರ ಹಾಗೂ ಸದಸ್ಯರ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಮಾಜಿ ಜಿಪಂ ಅಧ್ಯಕ್ಷೆ ಸಿದ್ದನಗೌಡ ಪೊಲೀಸ್ ಪಾಟೀಲ ಕ್ಷೇತ್ರದ ಅಭಿವೃದ್ಧಿಗೆ ಸದಾ ತುಡಿಯುವ ಮನಸ್ಸು ಸಚಿವ ಶರಣಬಸಪ್ಪಗೌಡ ದರ್ಶನಪುರವರ ಆಶಯದಂತೆ ಆಶ್ರಯ ಕಮಿಟಿ ಅಧ್ಯಕ್ಷ ಹಾಗೂ ಸದಸ್ಯರು‌ ಸೂಕ್ತ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಕಾರ್ಯಪ್ರವೃತ್ತರಾಗಿ ಎಂದರು.ಶರಣಬಸ್ಸು (ಕಾಕ) ಡಿಗ್ಗಾವಿ ಅಧ್ಯಕ್ಷರು, ಮತ್ತು ಸೋಮಶೇಖರ ಶಹಾಪುರ, ರೇವಣಸಿದ್ದಪ್ಪ ಯಾಳಗಿ, ದೇವೇಂದ್ರಪ್ಪ ವಠಾರ, ಶ್ರೀಮತಿ ಹೀನಾ ಕೌಸರ ಎಮ್ ಪಟೇಲ್ ಕಾಚೂರ ಇವರುಗಳಿಗೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.ಇದೇ ವೇಳೆ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ವಾಮನರಾವು ದೇಶಪಾಂಡೆ, ಮಾಜಿ ತಾಪಂ ಸದಸ್ಯ ಖಾಜಾಪಟೇಲ್ ಕಾಚೂರ, ಮಹಿಪಾಲರೆಡ್ಡಿ ಡಿಗ್ಗಾವಿ. ಪುರಸಭೆ ಸದಸ್ಯರು ಹಾಗೂ ನಾಮನಿರ್ದೇಶನ ಸದಸ್ಯರುಗಳು ಸೇರಿದಂತೆ ಪುರಸಭೆ ಮುಖ್ಯಾಧಿಕಾರಿಗಳು, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Read More

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮಹಿಳಾ ಮತ್ತು ಪುರುಷರ ವಿಭಾಗದ ಸೈಕ್ಲಿಂಗ್ ಆಯ್ಕೆ ಪ್ರಕ್ರಿಯೆ ಜರುಗಿತು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಸೈಕ್ಲಿಂಗ್ ಪಟುಗಳ ಆಯ್ಕೆ ಪ್ರಕ್ರಿಯೆಯಲ್ಲಿ ೬ ಜನರನ್ನೊಳಗೊಂಡ ೧ ಪುರುಷ ತಂಡ ಹಾಗೂ ೬ ಜನ ಮಹಿಳೆಯರನ್ನೊಳಗೊಂಡ ೧ ಮಹಿಳಾ ತಂಡವನ್ನು ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಹಾವಿದ್ಯಾಲಯ ಉಪ ಪ್ರಾಚಾರ್ಯ ಡಾ.ಅನಿಲ ಬಿ ನಾಯಕ, ಐಕ್ಯೂಎಸಿ ಸಂಯೋಜಕ ಡಾ.ಪಿ. ಎಸ್. ಪಾಟೀಲ, , ದೈಹಿಕ ನಿರ್ದೆಶಕ ಎಸ್.ಕೆ.ಪಾಟೀಲ, ದಿಲೀಪಗೌಡ ಪಾಟೀಲ, ಶಶಿಧರ ಹೆರಲಗಿ, ಎಂ. ಪಿ. ಕುಪ್ಪಿ, ಅಲ್ಕಾ ಪಡತಾರೆ, ಶಿರಹಟ್ಟಿ ಮತ್ತಿತರರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಜ.5 ರಂದು ಸಂಜೆ 5:30ಕ್ಕೆ ಮುದ್ದೇಬಿಹಾಳ ಕ್ರಿಕೇಟ್ ಪ್ರೀಮಿಯರ್ ಲೀಗ್ ಸೀಸನ್-7 ನ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಗಳ ಉದ್ಘಾಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಅಧ್ಯಕ್ಷ, ಸೀಸನ್ ನ ರೂವಾರಿ ಕಾಮರಾಜ ಬಿರಾದಾರ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಘಾಟನಾ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ಮತ್ತು ತಾಳಿಕೋಟೆ ಖಾಸ್ಗತೇಶ್ವರ ಮಠದ ಬಾಲ‌ ಶಿವಯೋಗಿ ಸಿದ್ಧಲಿಂಗ ದೇವರು ವಹಿಸಿಕೊಳ್ಳಲಿದ್ದು, ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿಯವರು ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಪಂದ್ಯಾವಳಿಯ ಪ್ರಥಮ ಬಹುಮಾನ ವಿತಕರಕರಾದ ಅಸ್ಕಿ ಫೌಂಡೇಶನ ಅಧ್ಯಕ್ಷ ಸಿ.ಬಿ.ಅಸ್ಕಿ ಮತ್ತು ಕರ್ನಾಟಕ ಯುತ್ ಕಾಂಗ್ರೇಸ್ ನ ಪ್ರಾಧಾನ ಕಾರ್ಯದರ್ಶಿ ಸತ್ಯಜಿತ್ ಪಾಟೀಲ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ವಿ.ಎಂ.ನಾಗಠಾಣ ವಕೀಲರು, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಕಾಳಗಿ ಗ್ರಾ.ಪಂ ಮಾಜಿ…

Read More