Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಬರುವ ಜನರಿಗೆ ಉತ್ತಮ ಚಿಕಿತ್ಸೆ ಹಾಗೂ ಮೂಲಭುತ ಸೌಕರ್ಯಗಳು ದೊರೆಯಬೇಕು ಎಂಬ ದಿಸೆಯಲ್ಲಿ ಉನ್ನತೀಕರಣ ಕಾಮಗಾರಿ ಹಾಕಿಕೊಳ್ಳಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರ ಘಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜನೀಯರಿಂಗ್ ಇಲಾಖೆ ಹಮ್ಮಿಕೊಂಡ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮೂಲಭೂತ ಸೌಕರ್ಯಗಳ ೧ಕೋಟಿ ೨೦ಲಕ್ಷ ರೂ. ಅನುದಾನದ ಉನ್ನತೀಕರಣ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿದ ಅವರು, ಆಸ್ಪತ್ರೆಯ ಹಲವಾರು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಆಸ್ಪತ್ರೆಯ ಅಧಿಕಾರಿಗಳ ಜೊತೆಗೆ ಸಭೆ ಮಾಡಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ೧ಕೋಟಿ ೨೦ಲಕ್ಷ ರೂ. ವೆಚ್ಚದಲ್ಲಿ ನಾಲ್ಕೈದು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಸಿಂದಗಿ ಮತಕ್ಷೇತ್ರದಲ್ಲಿ ಬರುವ ಎಲ್ಲ ಆಸ್ಪತ್ರೆಗಳನ್ನು ಸುಸಜ್ಜಿತವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಸ್ಥಳೀಯ ಶಾಸಕರ ಅನುದಾನದಲ್ಲಿ ಆಲಮೇಲ,…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರವನ್ನು ಸೌಂದರ್ಯೀಕರಣಗೊಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿರುವೆ. ಅಭಿವೃದ್ಧಿಯೇ ನನ್ನ ಮೂಲ ಮಂತ್ರ ಎಂದು ಶಾಸಕ ಅಶೋಕ್ ಮನಗೂಳಿ ಹೇಳಿದರು.ಪಟ್ಟಣದ ಬೀದಿ ದ್ವೀಪಗಳನ್ನು ಶಾಸಕ ಅಶೋಕ ಮನಗೂಳಿ ಚಾಲನೆ ಮಾತನಾಡಿದ ಅವರು, ಅಲಂಕಾರಿಕ ವಿದ್ಯುತ್ ದ್ವೀಪ ಕಂಬಗಳ ಕಾಮಾಗಾರಿ ಕಳೆದ ೨೪ದಿನಗಳ ಹಿಂದೆಯೇ ಬಸವೇಶ್ವರ ವೃತ್ತದಲ್ಲಿ ೫ಕೋಟಿ ರೂ.ವೆಚ್ಚದ ಭೂಮಿ ಪೂಜೆ ನೆರವೇರಿಸಲಾಗಿತ್ತು. ಇಂದು ಬೆಳಕಿನ ಹಬ್ಬ ದೀಪಾವಳಿಯಂದು ಅದಕ್ಕೆ ಚಾಲನೆ ನೀಡಲಾಗಿದೆ. ವೇಗದಿಂದ ಸಾಗುತ್ತಿರುವ ಕಾಮಗಾರಿಗೆ ಸಿಂದಗಿ ಸಾರ್ವಜನಿಕರು ಅಭಿನಂದನೆ ಸಲ್ಲಿಸುವುದಲ್ಲದೇ ಹರ್ಷ ವ್ಯಕ್ತಪಡಿಸುತ್ತಿದ್ದಾರೆ ಎಂದರು.ಈ ವೇಳೆ ಪುರಸಭೆ ಮುಖ್ಯಾಧಿಕಾರಿ ರಾಜಶೇಖರ, ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ, ಸದಸ್ಯರಾದ ಸಂದೀಪ ಚೌರ, ಹಾಸೀಂ ಆಳಂದ, ಪುರಸಭೆ ಸಿಬ್ಬಂದಿ ನಬಿರಸೂಲ್ ಉಸ್ತಾದ್, ಅಜರ್ ನಾಟಿಕಾರ್, ಕುಮಾರ ದೇಸಾಯಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಸಿಂದಗ ನಗರವನ್ನು ಶಾಸಕ ಅಶೋಕ ಮನಗೂಳಿ ಅವರು ಅಭಿವೃದ್ಧಿ ಪಡಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಕಾಂಗ್ರೆಸ್ ಮುಖಂಡೆ ಸುನಂದಾ ಯಂಪುರೆ ಹೇಳಿದರು.ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ೨೪ದಿನಗಳ ಹಿಂದೆ ಬಸವೇಶ್ವರ ವೃತ್ತದಲ್ಲಿ ಸಿಂದಗಿ ನಗರವನ್ನು ಸೌಂದರ್ಯೀಕರಣಗೊಳಿಸುವ ದಿಸೆಯಲ್ಲಿ ಬೀದಿ ದ್ವೀಪಗಳ ಕಂಬ ಅಳವಡಿಕೆಗೆ ಚಾಲನೆ ನೀಡಿದ್ದರು. ಬರುವ ದೀಪಾವಳಿಗೆ ಅಲಂಕಾರಿಕ ಬೀದಿ ದ್ವೀಪಗಳ ಕಂಬಗಳನ್ನು ಅಳವಡಿಸಿ ವಿದ್ಯುತ್ ಸಂಪರ್ಕ ಕೊಡಿಸುವುದಾಗಿ ಹೇಳಿದ್ದರು. ಕೊಟ್ಟ ಮಾತಿನಂತೆ ಇಮದು ದೀಪಾವಳಿ ಹಬ್ಬದಂದು ಅಲಂಕಾರಿಕ ವಿದ್ಯುತ್ ದ್ವೀಪಗಳಿಗೆ ಚಾಲನೆ ನೀಡಿದ್ದಾರೆ. ಇದಕ್ಕೆ ಸಿಂದಗಿ ನಗರದ ಜನತೆಯ ವತಿಯಿಂದ ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಹರ್ಷವ್ಯಕ್ತಪಡಿಸುತ್ತಿದ್ದಾರೆ. ರಾಜಕೀಯ ಜೀವನದಲ್ಲಿ ಸವಾಲುಗಳನ್ನು ಎದುರಿಸಿ ಮುನ್ನಡೆಯುದೇ ನಿಜವಾದ ನಾಯಕ. ಆ ನಿಟ್ಟಿನಲ್ಲಿ ನಿಮ್ಮ ಕಾರ್ಯಗಳು ಸದಾ ಹೀಗೆ ಮುಂದುವರೆಯಲಿ ಎಂದು ಹೇಳಿದ್ದಾರೆ.
ಚಿಕ್ಕಪಡಸಲಗಿ ಹರಳಯ್ಯ ಶಾಲೆಯಲ್ಲಿ ಕನ್ನಡ ಕಂಪು | ರಾಜ್ಯೋತ್ಸವ ವೈಭವ | ಮಕ್ಕಳ ಹಷೋ೯ಲ್ಲಾಸ ಸಂಭ್ರಮ ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಕನ್ನಡ ಭಾಷೆ ಉತ್ಕಟ,ಸುಗಂಧ ಭರಿತ ಭಾಷೆ. ಅದು ಕರುನಾಡಿನ ಹೃದಯ ಶ್ರೀಮಂತಿಕೆಯುಳ್ಳ ಮಾತೃಭಾಷೆ. ಎಲ್ಲರ ಮನಸ್ಸು ಸುಲಲಿತವಾಗಿ ಸೆಳೆಯುವ ಕನ್ನಡ ಪ್ರೀತಿಯ ಭಾಷೆ ಬಗೆಗೆ ಕಿಂಚಿತ್ತೂ ಉದಾಸೀನ ಮನೋಭಾವ ಯಾರಲ್ಲೂ ಬೇಡ ಎಂದು ಸಮಾಜ ವಿಜ್ಞಾನ ಶಿಕ್ಷಕಿ ಕವಿತಾ ಅಂಬಿ ನುಡಿದರು.ಇಲ್ಲಿನ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಶುಕ್ರವಾರ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆ ಬಗ್ಗೆ ಪ್ರತಿಯೊಬ್ಬರೂ ಪ್ರೇಮಭಾವ ಹೊಂದಿದಾಗ ಮಾತ್ರ ಕನ್ನಡದ ಪ್ರಗತಿ ಕಾಣಲು ಸಾಧ್ಯ ಎಂದರು.ವಿಶ್ರಾಂತ ದೈಹಿಕ ಶಿಕ್ಷಣ ಶಿಕ್ಷಕ ಬಸವರಾಜ ಅನಂತಪೂರ ಮಾತನಾಡಿ, ಕನ್ನಡ ನುಡಿಗೆ ನವತನದ ಸೊಗಸಿದೆ. ಕನ್ನಡ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದೆ. ಕನ್ನಡ ನಾಡಿನ ಸ್ಥಾಪನೆಗೆ ಹಲವರು ಶ್ರಮಿಸಿದ್ದಾರೆ. ಅವರೆಲ್ಲರನ್ನು ಇಂದು ಗೌರವದಿಂದ ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.ಮುಖ್ಯ ಶಿಕ್ಷಕ ಬಸವರಾಜ ಜಾಲೋಜಿ ಮಾತನಾಡಿ, ವಿಜ್ಞಾನ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಭಿವೃದ್ಧಿಯಲ್ಲಿ ಭಾಷೆಯ ಪಾತ್ರ ತುಂಬಾ ಮಹತ್ವದ್ದಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ಬಿ.ಕೆ ತುಳಸಿಮಾಲ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಆಯೋಜಿಸಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕನ್ನಡವು ಸಮೃದ್ಧ ಸಾಹಿತ್ಯ ಪರಂಪರೆ ಮತ್ತು ಶ್ರೇಷ್ಠ ಸಂಸ್ಕೃತಿಯನ್ನು ಹೊಂದಿದ ಭಾಷೆಯಾಗಿದ್ದು, ಇಂದಿನ ಸಮಾಜದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಅಭಿವೃದ್ಧಿಯ ಭಾಷೆಯಾಗಿ ಬೆಳೆಯಬೇಕಾಗಿದೆ. ಕನ್ನಡದಲ್ಲಿ ಈ ಕ್ಷೇತ್ರಗಳಿಗೆ ಸಂಬಂಧಿಸಿದ ಜ್ಞಾನವನ್ನು ಸೃಷ್ಟಿಸುವುದು ಮತ್ತು ನವೀನ ಪೀಳಿಗೆಗೆ ಸ್ಥಳೀಯ ಭಾಷೆಯಲ್ಲಿ ಬೋಧನೆ ನೀಡುವುದು ಅತ್ಯಾವಶ್ಯಕವಾಗಿದೆ. ಇದಕ್ಕಾಗಿ ಕನ್ನಡದಲ್ಲಿ ವಿಜ್ಞಾನ, ತಂತ್ರಜ್ಞಾನ ಮತ್ತು ತತ್ವಜ್ಞಾನ ಸಾಹಿತ್ಯವನ್ನು ರಚನೆ ಮಾಡುವುದರ ಜೊತೆಗೆ ಪಠ್ಯಪುಸ್ತಕಗಳಲ್ಲಿ ಕನ್ನಡ ಬಳಕೆಯನ್ನು ಪ್ರೋತ್ಸಾಹಿಸುವುದು ಮತ್ತು ಸಂಶೋಧನೆಗೆ ಉತ್ತೇಜನ ನೀಡುವುದು ಕನ್ನಡದ ಬೆಳವಣಿಗೆಗೆ ಅವಶ್ಯಕವಾಗಿದೆ ಎಂದರು.ಇದೇ ಸಂದರ್ಭದಲ್ಲಿ ಸಾಹಿತಿ ಪ. ಗು. ಸಿದ್ದಾಪುರ ಅವರು ಮಾತನಾಡಿ ಕನ್ನಡದ ಕಂಪು ಗಡಿಯಾಚೆ, ಕಡಲಾಚೆ ಪಸರಿಸಿ ಬೇಕು. ಮಹಾರಾಷ್ಟçದಲ್ಲಿ ಕನ್ನಡ ಹೆಸರಿನ ಊರಿನ ಬಗ್ಗೆ ಪ್ರಸ್ತಾಪಿಸಿ,…
’ಅಪ್ರತಿಮ ಮಹಿಳೆ’ ಲೇಖನಸುಧಾ ಪಾಟೀಲ (ಬೆಳಗಾವಿ)ವಿಶ್ವಸ್ಥರು, ಬಸವ ತಿಳುವಳಿಕೆ ಮತ್ತು ಅಧ್ಯಯನ ಕೇಂದ್ರ, ಪುಣೆ ಉದಯರಶ್ಮಿ ದಿನಪತ್ರಿಕೆ ಭಾರತ ಸ್ವಾತಂತ್ರ್ಯ ಹೋರಾಟವು ಕೇವಲ ರಾಜಕೀಯ ಹೋರಾಟವಾಗಿರಲಿಲ್ಲ. ಅದು ರಕ್ತಸಿಕ್ತ ಅಧ್ಯಾಯವೂ ಆಗಿತ್ತು. ತ್ಯಾಗ ಬಲಿದಾನಗಳ ಚಳುವಳಿಯೂ ಆಗಿತ್ತು. ಅದು ಪುರುಷ ಮತ್ತು ಮಹಿಳೆ ಎಂಬ ತಾರತಮ್ಯಗಳಿಲ್ಲದ ಒಂದು ಸಮಗ್ರ ಹೋರಾಟವಾಗಿತ್ತು. ಬೆಳವಡಿ ಮಲ್ಲಮ್ಮ ಕರ್ನಾಟಕದ ಬೆಳಗಾವಿ ಜಿಲ್ಲೆಯ ವೀರರಾಣಿ. ಮರಾಠರ ವಿರುದ್ಧ ಹೋರಾಡಲು ಮಹಿಳಾ ಸೇನೆಯನ್ನು ಸಂಘಟಿಸಿದ ಮೊದಲ ಮಹಿಳೆ. ವಿಶ್ವದಲ್ಲಿ ಪ್ರಥಮ ಮಹಿಳಾ ಸೈನ್ಯ ಕಟ್ಟಿದ್ದು ವೀರ ರಾಣಿ ಮಲ್ಲಮ್ಮ. ಕನ್ನಡ ನಾಡಿನ ಅತ್ಯಮೂಲ್ಯ ಅನರ್ಘ್ಯ ರತ್ನವಾದ ವೀರರಾಣಿ ಮಲ್ಲಮ್ಮ ಬ್ರಿಟಿಷರ ವಿರುದ್ಧ ಹೋರಾಡಿದ ಕನ್ನಡ ನಾಡಿನ ವೀರ ವನಿತೆಯರಲ್ಲಿ ಒಬ್ಬಳು. ಸ್ವಾತಂತ್ರ ಹೋರಾಟದಲ್ಲಿ ಮುಖ್ಯವಾಗಿ ಹೆಸರಿಸಲಾದ ಹೆಸರುಗಳಲ್ಲಿ ಮೊದಲನೇ ಹೆಸರು ಬೆಳವಡಿ ಮಲ್ಲಮ್ಮ,ಸೋಂದೆಯ ಯುವರಾಣಿ ಒಂದು ತಿಂಗಳಿನಲ್ಲಿ 21 ಹುಲಿಗಳನ್ನು ಹೊಡೆದು ಹಾಕಿದ ಬೆಳವಡಿಯ ರಾಜ ಈಶಪ್ರಭುವಿನ ಮಡದಿ ರಾಣಿ ಮಲ್ಲಮ್ಮಳ ಕುರಿತ ಸಾಹಸ ಪರಾಕ್ರಮಗಳ ರೋಚಕ ಕಥೆ…
ಉದಯರಶ್ಮಿ ದಿನಪತ್ರಿಕೆ ವರದಿ: ಬಸವರಾಜ ನಂದಿಹಾಳ ಬಸವನಬಾಗೇವಾಡಿ: ಪಟ್ಟಣದಲ್ಲಿ ಶುಕ್ರವಾರ ಬೆಳಕಿನ ಹಬ್ಬ ದೀಪಾವಳಿಯ ಅಮವಾಸ್ಯೆಯ ಸಂಭ್ರಮ ಎಲ್ಲೆಡೆ ಕಂಡುಬಂದಿತ್ತು. ಪಟ್ಟಣದ ಐತಿಹಾಸಿಕ ಮೂಲನಂದೀಶ್ವರ (ಬಸವೇಶ್ವರ) ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ದೇವರಿಗೆ ಅಲಂಕಾರ ಪೂಜೆ ನೆರವೇರಿಸಲಾಗಿತ್ತು. ಎಲ್ಲೆಲ್ಲೂ ವಿಶೇಷ ಪೂಜೆ, ಪುನಸ್ಕಾರಗಳಲ್ಲಿ ಜನರು ನಿರತರಾಗಿದ್ದರು.ಪಟ್ಟಣದ ಬಸವೇಶ್ವರ ವೃತ್ತದ ಸುತ್ತಲೂ ಸೇರಿದಂತೆ ಮಾರುಕಟ್ಟೆ ಪ್ರದೇಶದಲ್ಲಿ ದೀಪಾವಳಿ ಹಬ್ಬದ ಖರೀದಿಯ ಭರಾಟೆ ಜೋರಾಗಿರುವದು ಕಂಡು ಬಂದಿತ್ತು. ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರಲ್ಲಿ ಜನಜಂಗುಳಿಯೋ ಜನಜಂಗುಳಿ. ಬೆಳಗ್ಗೆಯಿಂದಲೇ ಮಾರುಕಟ್ಟೆಗೆ ಲಗ್ಗೆ ಇಟ್ಟ ಜನರು ಪೂಜೆಗೆ ಅಗತ್ಯವಿರುವ ಚೆಂಡು ಹೂ, ಸೇವಂತಿಗೆ, ಬಾಳೆದಿಂಡು, ಕಬ್ಬು, ಸೇಬು, ಬಾಳೆಹಣ್ಣು , ಕಬ್ಬು, ಕುಂಬಳಕಾಯಿ ಸೇರಿದಂತೆ ವಿವಿಧ ಹಣ್ಣು-ಹಂಪಲಗಳನ್ನು ಖರೀದಿಸಿದರು.ಮಾರುಕಟ್ಟೆಯಲ್ಲಿ ಚೆಂಡು ಹೂವು, ಸೇವಂತಿಗೆ ಹೂ ಯಥೇಚ್ಛವಾಗಿ ಮಾರಾಟ ಮಾಡಲಾಗುತ್ತಿತ್ತು. ಕಳೆದ ಸಲದ ದೀಪಾವಳಿಗೆ ಹೋಲಿಸಿದರೆ ಈ ವರ್ಷದ ಹಬ್ಬದಲ್ಲಿ ಈ ಹೂವಿನ ಮಾರಾಟ ದರ ಹೆಚ್ಚಳವಾಗಿರಲಿಲ್ಲ. ಚೆಂಡು ಹೂ ಪ್ರತಿ ಕೆಜಿಗೆ ರೂ. ೭೦-೧೦೦ ರವರೆಗೆ,…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ನಿತ್ಯ ಜೀವನದಲ್ಲಿ ಕನ್ನಡ ಭಾಷೆಯನ್ನು ಬಳಕೆ ಮಾಡದೇ ಹೋದರೆ ಅದು ನಶಿಸಿಹೋಗುವದರಲ್ಲಿ ಸಂದೇಹವಿಲ್ಲ. ಅದಕ್ಕಾಗಿ ಮಕ್ಕಳು ತಮ್ಮ ತಂದೆ-ತಾಯಿಯನ್ನು ಪಪ್ಪಾ-ಮಮ್ಮಿ ಎಂದು ಕರೆಯದೇ ಅಪ್ಪ-ಅಮ್ಮಾ ಎಂದು ಕರೆಯುವ ಮೂಲಕ ಮನೆಯಿಂದಲೇ ಕನ್ನಡ ಭಾಷೆಯ ಬಳಕೆ ಮಾಡಿದರೆ ಖಂಡಿತ ಕನ್ನಡ ಉಳಿಸುವಲ್ಲಿ ಪ್ರತಿಯೊಬ್ಬರೂ ತಮ್ಮ ಪಾತ್ರ ವಹಿಸಿದಂತೆ ಎಂದು ಸ್ಥಳೀಯ ಅಕ್ಕನಾಗಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಅಶೋಕ ಹಂಚಲಿ ಹೇಳಿದರು.ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕಾಡಳಿತ ಶುಕ್ರವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಇಂದು ಪ್ರತಿಯೊಬ್ಬ ಮಗು ಪಪ್ಪಾ-ಮಮ್ಮಿ, ಅಂಕಲ್-ಆಂಟಿ ಬಳಕೆ ಹೆಚ್ಚು ಮಾಡುವದನ್ನು ನೋಡುತ್ತಿದ್ದೇವೆ. ಮಕ್ಕಳು ಈ ಆಂಗ್ಲ ಶಬ್ದಗಳ ಬದಲಾಗಿ ಕನ್ನಡದ ಅಜ್ಜ-ಅಜ್ಜಿ, ಅಪ್ಪ-ಅಮ್ಮ, ಕಾಕಾ-ಚಿಕ್ಕಮ್ಮ, ಅತ್ತೆ, ಅಕ್ಕ-ಅಣ್ಣ, ಮಾಮಾ-ಅತ್ತಿಗೆ ಇಂತಹ ಶಬ್ದಗಳನ್ನು ನಿತ್ಯವೂ ಬಳಕೆ ಮಾಡುವ ಮೂಲಕ ಕನ್ನಡ ಭಾಷೆಯ ಉಳಿಕೆಗೆ ನಾವೆಲ್ಲರೂ ಮುಂದಾಗುವ ಅಗತ್ಯವಿದೆ. ಬದುಕಿನಲ್ಲಿ ಆದಷ್ಟು ಕನ್ನಡ ಭಾಷೆಯನ್ನು ಬಳಕೆ ಮಾಡಲು ಮುಂದಾಗಬೇಕೆಂದರು.ತಾಯಿ ನುಡಿ…
ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಖಾದಿ ಉತ್ಸವ-೨೦೨೪ಕ್ಕೆ ಚಾಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಖಾದಿ ಬಳಕೆಯೊಂದಿಗೆ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರು ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು ಡಾ.ಎಂ.ಬಿ.ಪಾಟೀಲ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಖಾದಿ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನವೆಂಬರ್. ೧ರಿಂದ ೧೫ರವರೆಗೆ ನಗರದ ಸ್ಟೇಶನ್ ರಸ್ತೆಯಲ್ಲಿರುವ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದ ಆವರಣದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಖಾದಿ ಮತ್ತು ಗ್ರ‍್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದ ಖಾದಿ ಉತ್ಸವ-೨೦೨೪ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ದೇಶದ ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಮಹಾತ್ಮಗಾಂಧೀಜಿಯವರು ವಿದೇಶಿ ಉತ್ಪನ್ನಗಳಿಗೆ ಕಡಿವಾಣ ಹಾಕಿ ಖಾದಿ ಉತ್ಪನ್ನಗಳನ್ನು ಸ್ವ ನೇಯುವ ಮೂಲಕ…
ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಜಿಲ್ಲೆಯಲ್ಲಿ ೯,೩೦೦ ಲಕ್ಷ ರೂಪಾಯಿಗಳ ಬಂಡವಾಳ ಹೂಡಿಕೆಯೊಂದಿಗೆ ಸ್ಥಾಪಿತಗೊಂಡಿರುವ ೪,೫೩೭ ಕೈಗಾರಿಕೋದ್ಯಮಗಳಲ್ಲಿ ೨೪,೬೪೫ ಉದ್ಯೋಗಾವಕಾಶ ಕಲ್ಪಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು ಡಾ.ಎಂ.ಬಿ.ಪಾಟೀಲ ಹೇಳಿದರು.ಜಿಲ್ಲಾಡಳಿತದ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಕೆ.ಐ.ಎ.ಡಿ.ಬಿ ಅಲಿಯಾಬಾದ ಹಂತ-೩ ಹೊಸ ಕೈಗಾರಿಕಾ ಪ್ರದೇಶ ಸ್ಥಾಪನೆಗಾಗಿ ೧೮೭೦ ಎಕರೆ ಜಮೀನು ಭೂಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಕೈಗಾರಿಕೆ ಅಭಿವೃದ್ಧಿಗಾಗಿ ಒಟ್ಟು ೩೨೩೯ ಎಕರೆ ಕೈಗಾರಿಕಾ ಪ್ರದೇಶ ಅಭಿವೃದ್ಧಿಗಾಗಿ ಕ್ರಮವಹಿಸಲಾಗಿದೆ. ಈಗಾಗಲೆ ೨೪೫ ಕೋಟಿ ರೂಪಾಯಿಗಳ ಬಂಡವಾಳ ಹೂಡಿ ಕೊಲ್ಹಾರ ತಾಲೂಕಿನಲ್ಲಿ ೬೧೪ ಎಕರೆ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸಲಾಗಿದ್ದು, ಹೊಸ ಕೈಗಾರಿಕೆಗಳ ಸ್ಥಾಪನೆಗಾಗಿ…
