Author: editor.udayarashmi@gmail.com

ಲಿಂಬೆ ನಾಡಿನಲ್ಲಿ ರಾರಾಜಿಸಿದ ಕನ್ನಡ ವೈಭವ | ಸಾಂಸ್ಕೃತಿಕ ಕಾರ್ಯಕ್ರಮ | ಸನ್ಮಾನ ಉದಯರಶ್ಮಿ ದಿನಪತ್ರಿಕೆ ಇಂಡಿ: ಲಿಂಬೆ ನಾಡಿನ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಟ್ಟಣದ ಹೃದಯಭಾಗದ ಪ್ರಮುಖ ಮುಖ್ಯ ರಸ್ತೆಯಲ್ಲಿ ಕನ್ನಡ ಬಾವುಟ ಹಿಡಿದು, ಕರ್ನಾಟಕದ ಕನ್ನಡ ಶಕ್ತಿ ಪ್ರದರ್ಶಿಸಿದರು. ವಿದ್ಯಾರ್ಥಿಗಳಿಂದ ಕನ್ನಡ ನಾಡಿನ ಹಬ್ಬದ ಸಾಂಸ್ಕೃತಿಕ ಕಾರ್ಯಕ್ರಮಗಳು ಬಹಳ ಅದ್ದೂರಿ ಮತ್ತು ವಿಜೃಂಭಣೆಯಿಂದ ಜರುಗಿದವು.ಶುಕ್ರವಾರ ಪಟ್ಟಣದ ಪೋಲಿಸ ಪರೇಡ ಮೈದಾನದಲ್ಲಿ ತಾಲೂಕಾ ಆಡಳಿತದಿಂದ ನಡೆದ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಜರುಗಿತು.ಇದೆ ಸಂದರ್ಭದಲ್ಲಿ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಮಾತನಾಡಿದ ಅವರು, ಸಾವಿರಾರು ವರ್ಷ ಇತಿಹಾಸವಿರುವ ಕನ್ನಡನಾಡು, ನುಡಿ, ಸಂಸ್ಕೃತಿಗೆ ಅನೇಕ ಮಹನೀಯರ ಕೊಡುಗೆ ಇದೆ. ಕನ್ನಡನಾಡು ಹಚ್ಚ ಹಸುರಿನ ಸುಂದರ ಬೆಟ್ಟಗುಡ್ಡಗಳ ನದಿಗಳು ಹರಿಯುವ ಬೀಡು, ಸಾಧು ಸಂತರು, ದಾಸರು ಶರಣರು, ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂದರು.ಕಸಾಪ ಮಾಜಿ ಅಧ್ಯಕ್ಷ ಡಾ. ಕಾಂತು ಇಂಡಿ ಮಾತನಾಡಿ, ಬೇಲೂರು, ಹಳೆಬೀಡು, ಹಂಪಿ, ಬಾದಾಮಿ, ಐಹೊಳೆ, ಪಟ್ಟದಕಲ್ಲು, ಶ್ರೇಷ್ಠ ವಾಸ್ತು…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಶಾಲೆ, ಕಾಲೇಜು ಸೇರಿದಂತೆ ತಾಲ್ಲೂಕಿನ ವಿವಿಧೆಡೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ವಿಜೃಂಭಣೆಯಿಂದ ಆಚರಿಸಲಾಯಿತು.ತಾಲ್ಲೂಕು ಆಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ಕನ್ನಡ ರಾಜ್ಯೋತ್ಸವದ ನಿಮಿತ್ತ ನಾಡದೇವಿಯ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ಜರುಗಿಸಲಾಯಿತು.ಮೊಹರೆ ಹಣಮಂತ್ರಾಯ ವೃತ್ತದಿಂದ ಹೊರಟ ಮೆರವಣಿಗೆ ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತದ ಮೂಲಕ ಪಂಚಾಚಾರ್ಯ ಕಲ್ಯಾಣ ಮಂಟಪ ತಲುಪಿತು. ನಾಡದೇವಿಯ ಭಾವಚಿತ್ರದೊಂದಿಗೆ ಮಕ್ಕಳು ಧರಿಸಿದ್ದ ವೇಷಭೂಷಣಗಳು ಜನತೆಯ ಗಮನ ಸೆಳೆದವು.ನಂತರ ಜರುಗಿದ ಕಾರ್ಯಕ್ರಮಕ್ಕೆ ತಹಶೀಲ್ದಾರ ಪ್ರಕಾಶ ಸಿಂದಗಿ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ದೇವಣಗಾಂವ, ಉಪಾಧ್ಯಕ್ಷ ರಮೇಶ ಮಸಬಿನಾಳ, ತಾಲ್ಲೂಕು ಕಸಾಪ ಅಧ್ಯಕ್ಷ ಜಿ.ಕೆ.ಬಿರಾದಾರ, ವಿಜಯಲಕ್ಷ್ಮಿ ನವಲಿ, ರಹಿಮಾನ್ ಕಣಕಾಲ, ಶಿವರಾಜ ತಳವಾರ, ಅರುಣ ಕೋರವಾರ ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು, ಸಂಘಟನೆಗಳ ಪದಾಧಿಕಾರಿಗಳು ಇದ್ದರು.ತಾಲ್ಲೂಕು ನಿವೃತ್ತ ನೌಕರರ ಸಂಘಕನ್ನಡ ರಾಜ್ಯೋತ್ಸವ ಅಂಗವಾಗಿ ನಾಡದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಅಧ್ಯಕ್ಷ ಸಿ.ಕೆ.ಕುದರಿ, ಎಸ್.ವ್ಹಿ.ಆಲಾಳಮಠ, ಪಿ.ಜಿ.ಹಿರೇಮಠ, ಎಂ.ಆರ್.ಶಿರಸಂಗಿಮಠ, ಬಸವರಾಜ ಬಬಲೇಶ್ವರ,…

Read More

ಕನ್ನಡ ನಾಡು-ನುಡಿ, ಭಾಷೆ-ಸಾಹಿತ್ಯ ವಿಶ್ವಕ್ಕೆ ಮಾದರಿ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕನ್ನಡ ನಾಡು ಸಂಪದ್ಭರಿತವಾದ ನಾಡು. ಇಲ್ಲಿನ ನೆಲ, ಜಲ, ನಾಡು-ನುಡಿ, ಭಾಷೆ, ಸಾಹಿತ್ಯ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಆದ್ದರಿಂದ ನಾಡಿನ ಸಂಪತ್ತು ಮತ್ತು ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗುವದು ನಮ್ಮೆಲ್ಲರ ಜವಾಬ್ದಾರಿ ಎಂದು ಪ್ರಾಚಾರ್ಯ ಆರ್.ಬಿ.ಗೋಡಕರ ಹೇಳಿದರು.ಇದೇ ಸಂದರ್ಭದಲ್ಲಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಜಿ.ಎಸ್.ಕಡಣಿ ಹಿರಿಯ ಉಪನ್ಯಾಸಕ ಪಿ.ಎಂ. ಮಡಿವಾಳರ, ಉಪನ್ಯಾಸಕ ಮಾಂತೇಶ ದಂಡವತ, ಸಿ.ಜೆ.ರಾಠೋಡ, ಅಶ್ವಿನಿ ಚನಾಳ, ವಸುಧಾ ಭಟ್, ಅಮೀರ ಮೋಪಗಾರ, ಅಶೋಕ ತಳವಾರ ಹಾಗೂ ಮಲ್ಲು ಹೊಸಮನಿ ಉಪಸ್ಥಿತರಿದ್ದರು.ಪ್ರೇರಣಾ ಶಾಲೆ ಸಿಂದಗಿಪಟ್ಟಣದ ಹೊರವಲಯದ ಪ್ರೇರಣಾ ಶಾಲೆಯಲ್ಲಿ ಕನ್ನಡ ರಾಜ್ಯೊತ್ಸವವನ್ನು ಆಚರಣೆ ಮಾಡಲಾಯಿತು.ಈ ವೇಳೆ ಶ್ರೀ ಸಮರ್ಥ ವಿದ್ಯಾ ವಿಕಾಸ ಸಂಸ್ಥೆಯ ಅಧ್ಯಕ್ಷ ಆರ್.ಡಿ ಕುಲಕರ್ಣಿ, ನಿರ್ದೇಶಕ ಪಿ.ಡಿ. ಕುಲಕರ್ಣಿ, ಮುಖ್ಯ ಗುರಮಾತೆ ಎಸ್.ಐ ಅಸ್ಕಿ ಸೇರಿದಂತೆ ಸಂಸ್ಥೆಯ ನಿರ್ದೇಶಕ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.ಶ್ರೀ ಪದ್ಮರಾಜ ಮಹಿಳಾ ಕಾಲೇಜುಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಮಹಾವಿದ್ಯಾಲಯದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದಲ್ಲಿ ಪ್ರಮುಖ ರಸ್ತೆಗಳಲ್ಲಿನ ತೆರವು ಕಾರ್ಯವನ್ನು ಪುರಸಭೆಯವರು ನಿಲ್ಲಿಸಿದ್ದು ಈಗಾಗಲೇ ತೆರವುಗೊಳಿಸಿದ ಅಂಗಡಿಕಾರರಿಗೆ ಅನ್ಯಾಯವಾಗಿದೆ ಎಂದು ಕೆಲ ಅತೃಪ್ತ ಆತ್ಮಗಳು ಜನರ ಮನಸ್ಸನ್ನು ಕಲುಷಿತಗೊಳಿಸುವ ಕಾರ್ಯ ಮಾಡುತ್ತಿದ್ದಾರೆ. ಸಿಂದಗಿಯ ಜನತೆ ಇಂತಹ ಊಹಾಪೋಹಗಳಿಗೆ ಕಿವಿಗೊಡಬಾರದು ಎಂದು ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಮನವಿ ಮಾಡಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪಟ್ಟಣದ ಪ್ರಮುಖ ಬೀದಿಗಳಾದ ಅಂಬೇಡ್ಕರ್ ವೃತ್ತದಿಂದ ಗಾಂಧಿ ವೃತ್ತದವರೆಗೆ, ಅಂಬೇಡ್ಕರ್ ವೃತ್ತದಿಂದ ಕನ್ನಡಶಾಲೆಯ ಕಾಂಪೌಂಡಿಗೆ ಹೊಂದಿಕೊಂಡಿರುವ ಎಲ್ಲ ಅಂಗಡಿಗಳನ್ನು, ಬಸವೇಶ್ವರ ವೃತ್ತದಿಂದ ಕೆಇಬಿವರೆಗಿನ ಎರಡೂ ಬದಿಗಳಲ್ಲಿನ ಅಂಗಡಿಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ. ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಹಬ್ಬ ಇರುವುದರಿಂದ ಮೂರ್ನಾಲ್ಕು ದಿನಗಳವರೆಗೆ ಪುರಸಭೆ ಸಿಬ್ಬಂದಿಗಳಿಗೆ ರಜೆ ಇರುವುದರಿಂದ ಕಾರ್ಯಾಚರಣೆಯನ್ನು ಎರಡು ಮೂರು ದಿನಗಳವರೆಗೆ ಸ್ಥಗಿತಗೊಳಿಸಲಾಗಿದೆ. ಇನ್ನುಳಿದಂತೆ ಬಸವೇಶ್ವರ ವೃತ್ತದಿಂದ ವಿವೇಕಾನಂದ ವೃತ್ತದ ಹಾಗೂ ಕನಕದಾಸ ವೃತ್ತದವರೆಗೆ, ಕೆಇಬಿಯಿಂದ ಅಂಬೇಡ್ಕರ್ ವೃತ್ತದವರೆಗೆ,ಟಿಪ್ಪು ಸುಲ್ತಾನ್ ವೃತ್ತದಿಂದ ಮೋರಟಗಿ ನಾಕಾವರೆಗಿನ ಅಂಗಡಿಕಾರರಿಗೆ ತೆರವುಗೊಳಿಸುವಿಕೆಯ ಬಗ್ಗೆ ಮುನ್ಸೂಚನೆ ನೀಡಲಾಗಿದ್ದು ಕಾರ್ಯಾಚರಣೆಯನ್ನು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕನ್ನಡ ಸಾಹಿತ್ಯಕ್ಕೆ ೨ಸಾವಿರ ವರ್ಷಗಳ ಇತಿಹಾಸವಿದೆ. ಈ ಕನ್ನಡವನ್ನು ಉಳಿಸಿ ಬೆಳೆಸುವ ಕಾರ್ಯ ನಾವು ಮಾಡಬೇಕಾಗಿದೆ. ಕಾವೇರಿ ನದಿಯಿಂದ ಗೋದಾವರಿಯವರೆಗೆ ಕನ್ನಡದ ಕಂಪು ಮೊಳಗಿದೆ. ಕನ್ನಡದ ಮೊದಲ ಕಹಳೆಯನ್ನು ಮೊಳಗಿಸಿದ್ದು ಆಲೂರ ವೆಂಕಟರಮಣರು ಎಂದು ಸಿಂದಗಿ ಸರಕಾರಿ ಹೆಣ್ಣು ಮಕ್ಕಳ ಶಾಲೆಯ ಮುಖ್ಯಗುರು ಶರಣಬಸವ ಲಂಗೋಟಿ ಹೇಳಿದರು.ಶುಕ್ರವಾರ ನಗರದ ಬಸವ ಮಂಟಪದಲ್ಲಿ ತಾಲೂಕು ಆಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಹಮ್ಮಿಕೊಂಡ ೨೦೨೪ರ ಕರ್ನಾಟಕ ರಾಜ್ಯೋತ್ಸವದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ನಾವೆಲ್ಲರೂ ನವೆಂಬರ್ ಕನ್ನಡಿಗರಾಗದೇ ನಂ:೦೧ ಕನ್ನಡಿಗರಾಗೋಣ. ನಂ:೦೧ ಕನ್ನಡಿಗರಾದರೇ ಸಾವಿರ ಸಾವಿರ ವರ್ಷಗಳ ಸುದೀರ್ಘ ಇತಿಹಾಸವನ್ನು ನಾವೆಲ್ಲ ಕಾಣುತ್ತೇವೆ. ಕನ್ನಡ ನಾಡನ್ನು ಕನ್ನಡ ನಾಡು, ಶ್ರೀಗಂಧದ ನಾಡು, ಕರುನಾಡ ನಾಡು, ಸಾಧು-ಸಂತರು, ದಾಸರು, ಶಿವಶರಣರು ಹಾಗೂ ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ. ಕನ್ನಡ ಅನ್ನದ ಭಾಷೆ, ಜೀವದ ಭಾಷೆ, ಪವಿತ್ರ ಭಾಷೆ, ಹೃದಯ ಭಾಷೆಯಾಗಿ ನಾವು…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕನ್ನಡ ಭಾಷೆಗೆ ತನ್ನದೇ ಆದ ವೈಶಿಷ್ಟತೆ ಇದೆ. ಪ್ರತಿಯೊಬ್ಬ ಕನ್ನಡಿಗ ಕನ್ನಡದ ಕಂಪನ್ನು ಜಗತ್ತಿನೆಲ್ಲೆಡೆ ಪಸರಿಸಬೇಕು ಎಂದು ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಹೇಳಿದರು.ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ತಾಲೂಕಾಡಳಿತದ ವತಿಯಿಂದ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದ ಅತಿಥಿಯಾಗಿ ಅವರು ಮಾತನಾಡಿದರು.ಆಗಿನ ಕರ್ನಾಟಕವನ್ನು ಮೈಸೂರು ರಾಜ್ಯ ಅಂತ ಕರೆಯಲಾಗುತ್ತಿತ್ತು. 1956 ರಲ್ಲಿ ಕರ್ನಾಟಕ ರಾಜ್ಯವನ್ನಾಗಿ ಘೋಷಿಸಲಾಯಿತು. ಅಂದಿನಿಂದ ಪ್ರತೀ ವರ್ಷ ನ.1 ರ ದಿನವನ್ನು ಹಬ್ಬವನ್ನಾಗಿ ಆಚರಿಸುತ್ತ ಬರಲಾಗಿದೆ. ಈ ಬಾರಿ ದೀಪಾವಳಿ ಹಬ್ಬವಿದ್ದರೂ ಆರಣೆಯಲ್ಲಿ ಹಲವು ಜನ ಭಾಗಿಯಾಗಿದ್ದು ಸಂತಸ ತಂದಿದೆ ಎಂದರು.ಕಾರ್ಯಕ್ರಮದಲ್ಲಿ ಕನ್ನಡ ಭಾಷೆಯಲ್ಲಿ 125ಕ್ಕೆ 125 ಅಂಕ ಪಡೆದ ತಾಲೂಕಿನ 34 ವಿದ್ಯಾರ್ಥಿಗಳನ್ನು, ಸಾಹಿತಿಗಳಾದ ಶಿವಪುತ್ರ ಅಜಮನಿ, ಐ.ಬಿ.ಹಿರೇಮಠ, ಎಚ್.ಆರ್.ಬಾಗವಾನ, ಪ್ರಕಾಶ ನರಗುಂದ ಮತ್ತು ಸಾರಿಗೆ ಬಸ್ ನ್ನು ತಮ್ಮ ಸ್ವಂತ ಖರ್ಚಿನಿಂದ ಅಲಂಕೃತಗೊಳಿಸಿದ್ದ ಚಾಲಕ ಹಾಗೂ ನಿರ್ವಾಹಕರನ್ನು ಗೌರವಿಸಲಾಯಿತು.ಸ್ಥಬ್ಧ ಚಿತ್ರಗಳ ಮೆರವಣಿಗೆಯಲ್ಲಿ ಆಕರ್ಷಕವಾಗಿದ್ದ 3 ಶಾಲಾ ತಂಡಗಳಿಗೆ ಪ್ರಥಮ, ದ್ವಿತೀಯ ಹಾಗೂ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಸಾಲ ನೀಡುವ ಮೂಲಕ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮುಖ್ಯವಾಗಿ ರೈತರ ಶ್ರೇಯೋಭಿವೃಧ್ಧಿಗಾಗಿ ಶ್ರಮಿಸುತ್ತಿದೆ. ರೈತರ ಪ್ರೋತ್ಸಾಹಕ್ಕೆ ನಿಂತಿದೆ ಎಂದು ಬ್ಯಾಂಕಿನ ಅಭಿವೃದ್ಧಿ ಅಧಿಕಾರಿ ಎಮ್.ಜಿ. ಪಾಟೀಲ ಹೇಳಿದರು.ಅವರು ಬುಧವಾರ ಪಟ್ಟಣದ ವಿಜಯಪೂರ ರಸ್ತೆಯಲ್ಲಿನ ವಿಡಿಸಿಸಿ ಬ್ಯಾಂಕ್ ಸಭಾಭವನದಲ್ಲಿ ಇಂಡಿ ಶಾಖೆಯಿಂದ ಹಮ್ಮಿಕೊಂಡಿದ್ದ ಗ್ರಾಹಕರ ಸಭೆಯಲ್ಲಿ ಮಾತನಾಡಿದರು.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉದ್ದೇಶ, ಬೆಳವಣಿಗೆ ಹಾಗೂ ಪ್ರಗತಿ ಕುರಿತಂತೆ ವಿವರವಾಗಿ ತಿಳಿಸಿದರು. ಬ್ಯಾಂಕು ಈಗಾಗಲೇ ೨೪೯೬೮೪ ರೈತರಿಗೆ ಒಟ್ಟು ರೂ.೧೮.೬೩ ಕೋಟಿ ಕೃಷಿ ಸಾಲವನ್ನು ಸರಕಾರದ ಬಡ್ಡಿ ಸಹಾಯಧನ ಯೋಜನೆಯಡಿ ನೀಡಿದೆ. ಇದರೊಂದಿಗೆ ಬ್ಯಾಂಕಿನ ಗ್ರಾಹಕರಿಗೆ ವಿವಿಧ ಕೃಷಿಯೇತರ ಉದ್ದೇಶಗಳಿಗಾಗಿ ಒಟ್ಟು ರೂ.೧೨೪೭ ಕೋಟಿ ಸಾಲ ನೀಡಿದೆ ಎಂದು ತಿಳಿಸಿದರು.ಸಭೆಯಲ್ಲಿ ಉಪಸ್ಥಿತರಿದ್ದ ಗ್ರಾಹಕರಿಂದ ಬಂದ ಬೇಡಿಕೆಗಳು ಮತ್ತು ಪ್ರಶ್ನೆಗಳಿಗೆ ಉತ್ತರಿಸಿ ಸಾಲ ವಿತರಣೆಯಲ್ಲಿ ಸರಳತೆ ತರಲು ಬ್ಯಾಂಕಿನ ಆಡಳಿತ ಮಂಡಳಿ ಒಪ್ಪಿಗೆ ಮೇರೆಗೆ ಕ್ರಮವಹಿಸಲಾಗುವುದೆಂದು ಹೇಳಿದರು.ಸಭೆಯ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ನಿರ್ದೇಶಕ…

Read More

ತೊರವಿ ಗ್ರಾಪಂನಲ್ಲಿ ಭ್ರಷ್ಟಾಚಾರ ವಿರುದ್ದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಸರ್ಕಾರಿ ನೌಕರರು ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಕೆಲಸ ಮಾಡಬೇಕು. ಕಛೇರಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯತೆಯಿಂದ ವರ್ತಿಸಬೇಕು ಎಂದು ಉಪಪೋಲಿಸ್ ಅಧಿಕ್ಷಕರು ಕರ್ನಾಟಕ ಲೋಕಾಯುಕ್ತನ ಸುರೇಶರೆಡ್ಡಿ ಎಂ.ಎಸ್. ಹೇಳಿದರು.ತಾಲ್ಲೂಕಿನ ತೊರವಿ ಗ್ರಾಮ ಪಂಚಾಯತಿಯಲ್ಲಿ ಬುಧವಾರ ಭ್ರಷ್ಟಾಚಾರ ವಿರುದ್ದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಕಛೇರಿಗಳಲ್ಲಿ ಸಾರ್ವಜನಿಕರು ಕೊಟ್ಟ ಅಂದಿನ ಅರ್ಜಿ ಅಂದೇ ವಿಲೇವಾರಿ ಮಾಡಿ ಅವರಿಗೆ ಸ್ವೀಕೃತಿ ಕೊಡಬೇಕು. ಅರ್ಜಿಗೆ ಸಂಭಂದಿಸಿದಂತೆ ಕಛೇರಿಯಲ್ಲಿ ಪೈಲ್ ಮಾಡಿ ಇಟ್ಟುಕೊಳ್ಳಬೇಕು. ಅರ್ಜಿ ಜೊತೆ ಯಾವುದಾದರೂ ದಾಖಲೆ ಕಡಿಮೆ ಇದ್ದರೆ ಆಗಲೇ ತಿಳಿಸಬೇಕು. ಅಪೂರ್ಣ ಅರ್ಜಿ ಇದ್ದು ಮಾಡಲಿಕೆ ಆಗದಿದ್ದರೆ ಹಿಂಬರಹ ಬರೆದು ಕೊಡಬೇಕು. ಮಾಡುವ ಕೆಲಸ ಕಾನೂನಾತ್ಮಕವಾಗಿಯೇ ಇರಬೇಕು. ಸಾರ್ವಜನಿಕ ಅಧಿಕಾರಿ ಮನಸ್ಸು ಮಾಡಿದರೆ ಸಮಾಜವ ಬದಲಾವಣೆ ಮಾಡಿ ಸುಧಾರಣೆ ಮಾಡಬಹುದು ಎಂದರು.ತಿಕೋಟಾ ಹಾಗೂ ಬಬಲೇಶ್ವರ ಪಟ್ಟಣದಲ್ಲಿರುವ ತಹಶಿಲ್ದಾರ ಕಛೇರಿಗಳಲ್ಲಿ ಸಹ ಭ್ರಷ್ಟಾಚಾರ ವಿರುದ್ದ ಜಾಗೃತಿ ಅರಿವು…

Read More

ಜೇನು ಕೃಷಿ ತರಬೇತಿ, ಮೌಲ್ಯವರ್ಧನೆ ಹಾಗೂ ಪ್ರಾತ್ಯಕ್ಷಿಕೆ ತರಬೇತಿ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರೈತರು ಕೃಷಿ ಕ್ಷೇತ್ರದಲ್ಲಿ ವಿಷಮುಕ್ತ ಉತ್ಪಾದನೆ ಹಾಗೂ ಸಾವಯವ ಕೃಷಿಯಲ್ಲಿ ತೊಡಗಿದರೆ ಜೇನುಹುಳುಗಳ ಪರಾಗದಿಂದ ಇಳುವರಿಯಲ್ಲಿ ಹೆಚ್ಚಳವಾಗಿ, ರೈತರಿಗೆ ಹೆಚ್ಚುವರಿ ಆದಾಯ ತರುವಲ್ಲಿ ಸಹಕಾರಿಯಾಗಲಿ ಎಂದು ಹಿಟ್ನಳ್ಳಿ ಕೃಷಿ ವಿಜ್ಞಾನ ಕೇಂದ್ರದ ಕೀಟಶಾಸ್ತ್ರಜ್ಞ ಡಾ.ಪ್ರಸನ್ನ ಹೇಳಿದರು.ಧಾರವಾಡದ ಹಿಟ್ನಳ್ಳಿ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಕೀಟಶಾಸ್ತ್ರ ವಿಭಾಗದಿಂದ ರೈತರಿಗೆ ಆಯೋಜಿಸಿದ್ದ ಜೇನು ಕೃಷಿ ತರಬೇತಿ, ಮೌಲ್ಯವರ್ಧನೆ ಹಾಗೂ ಪ್ರಾತ್ಯಕ್ಷಿಕೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸಮಗ್ರ ಕೃಷಿಯಲ್ಲಿ ಜೀವವೈವಿಧ್ಯತೆ ಸಂರಕ್ಷಿಸುವಲ್ಲಿ ಹಾಗೂ ರೈತರ ಆದಾಯ ಹೆಚ್ಚಿಸುವಲ್ಲಿ ಜೇನು ಕೃಷಿ ಮಹತ್ವದ ಪಾತ್ರ ವಹಿಸುತ್ತದೆ. ಜೇನುಕೃಷಿಯಿಂದ ಜೇನು ಸಂಗ್ರಹ ಮಾತ್ರವಲ್ಲದೆ ರಾಜಶಾಹಿ ರಸ, ಪರಾಗ, ಜೇನುಹುಳುವಿಷ, ಮೇಣ, ಅಂಟು, ಗೂಡು ಪಾಲು ಮಾಡುವಿಕೆ, ಜೇನುಹುಳು ಹಾಗೂ ಪೆಟ್ಟಿಗೆ ಮಾರಾಟದ ಮೂಲಕ ಆರ್ಥಿಕ, ವಾಣಿಜ್ಯಿಕವಾಗಿ ಉದ್ಯಮದಲ್ಲಿ ತೊಡಗಲು ಸಹಕಾರಿ ಆಗಲಿದೆ ಎಂದರು.ಆಲಮಟ್ಟಿ ಕೃಷ್ಣಾ ಭಾಗ್ಯ ಜಲ ನಿಗಮದ ಅರಣ್ಯ…

Read More

ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭವಿಷ್ಯದಲ್ಲಿ ಮಕ್ಕಳ ದಾಖಲೆಗಳಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲು ಪ್ರಾಥಮಿಕ ಹಂತದಲ್ಲಿಯೇ ಶಿಕ್ಷಣ ಇಲಾಖೆ ಹೊಂದಿರುವ ತಂತ್ರಾಂಶದಡಿ ಹೆಸರು ದಾಖಲಿಸುವ ಸಂದರ್ಭದಲ್ಲಿ ದಾಖಲಾಗುತ್ತಿರುವ ಮಕ್ಕಳ ಹೆಸರು-ಆಧಾರನೊಂದಿಗೆ ತಾಳೆಯಾಗಲು ಕ್ರಮ ವಹಿಸುವಂತೆ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಶಿಕ್ಷಣ ಇಲಾಖೆ ತಂತ್ರಾಂಶದಡಿ ಈಗಾಗಲೇ ದಾಖಲಾಗಿರುವ ಮಕ್ಕಳ ಹೆಸರುಗಳು ಆಧಾರದೊಂದಿಗೆ ಸರಿಪಡಿಸಲು ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳುವ ಮೂಲಕ ದಾಖಲೆಗಳನ್ನು ಸರಿಪಡಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.ಮಕ್ಕಳ ಶಿಕ್ಷಣದಲ್ಲಿ ಸುಧಾರಣೆಗೆ ಕ್ರಮ ವಹಿಸಬೇಕು. ಈ ನಿಟ್ಟಿನಲ್ಲಿ ತಾಲೂಕಿನ ಬಿಇಓಗಳೊಂದಿಗೆ ಹಾಗೂ ಶಾಲೆ ಮುಖ್ಯೋಪಾಧ್ಯಾಯರೊಂದಿಗೆ…

Read More