Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ಪ್ರಯಾಣಿಕರ ಅಹವಾಲು-ಕುಂದುಕೊರತೆಗಳನ್ನು ಆಲಿಸಲು ನವೆಂಬರ್ ೪ರಂದು ಮಧ್ಯಾಹ್ನ ೩-೩೦ರಿಂದ ೪-೩೦ರವರೆಗೆ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಸಾರ್ವಜನಿಕರು-ಪ್ರಯಾಣಿಕರು ದೂರವಾಣಿ ಸಂಖ್ಯೆ : ೬೩೬೬೪೨೩೮೮೭ಗೆ ಕರೆ ಮಾಡುವ ಮೂಲಕ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರಿಗೆ ಸೌಕರ್ಯದ ಅಹವಾಲು-ಕುಂದು ಕೊರತೆಗಳಿದ್ದಲ್ಲಿ ಪರಿಹರಿಸಿಕೊಳ್ಳುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ದೌರ್ಜನ್ಯ ಪ್ರತಿಬಂಧ ಅಧಿನಿಯಮ-ಅಸ್ಪೃಶ್ಯತೆ ನಿವಾರಣೆ ಅರಿವು ಮೂಡಿಸುವ ವಿಚಾರಗೋಷ್ಠಿ- ಕಾರ್ಯಾಗಾರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜದಲ್ಲಿ ಉತ್ತಮ ಬದಲಾವಣೆಯನ್ನು ತರಲು ನಮ್ಮ ಇಲಾಖೆ ಕಾರ್ಯ ನಿರ್ವಹಿಸುತ್ತಿದ್ದು, ಸಮಾಜದಲ್ಲಿನ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಲು ಪ್ರತಿಯೊಬ್ಬರು ಜಾಗೃತ ಹೊಂದುವುದು ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಹೇಳಿದರು.ಸೋಮವಾರ ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸಮಾಜ ಕಲ್ಯಾಣ ಇಲಾಖಾ ಕಾರ್ಯಕ್ರಮಗಳ ಮಾಹಿತಿ ದೌರ್ಜನ್ಯ ಪ್ರತಿಬಂಧ ಅಧಿನಿಯಮ, ಅಸ್ಪೃಶ್ಯತೆ ನಿವಾರಣೆ ಕುರಿತು ಅರಿವು ಮೂಡಿಸುವ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅಸ್ಪ್ರಶ್ಯತೆಯಂತಹ ಅನಿಷ್ಟ ಪದ್ದತಿಗಳು ವರದಿಯಾದ ತಕ್ಷಣ ಘಟನೆಗೆ ಸಂಬಂದಿಸಿದಂತೆ ಪ್ರಕರಣ ದಾಖಲಿಸಿಕೊಂಡು ಕ್ರಮ ವಹಿಸಲಾಗುತ್ತದೆ. ಸಮಾಜದಲ್ಲಿನ ಪ್ರತಿಯೊಬ್ಬರು ಮೇಲು-ಕೀಳು ಭಾವನೆ ತೊಡೆದು ಹಾಕಬೇಕು ಎಂದು ಅವರು ಹೇಳಿದರು.ಪ್ರತಿಯೊಬ್ಬರು ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಮುಂದೆ ಬರಬೇಕು, ಬಾಬಾ ಸಾಹೇಬ ಅಂಬೇಡ್ಕರ್, ಸೇರಿದಂತೆ ಮಹನೀಯರು ಹಾಕಿ ಕೊಟ್ಟ…

Read More

ವಿಜಯಪುರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ೨೦೨೩-೨೪ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವಾದಿ ಶರಣರು ಸತ್ಯ ತತ್ವಗಳನ್ನು ಸಾಮರಸ್ಯಗೊಳಿಸಿದವರು. ಶರಣರ ವಿಚಾರಗಳು ನಮಗೆ ಆದರ್ಶ, ನಿತ್ಯ ಸ್ಪೂರ್ತಿ. ಸಮಾಜದಲ್ಲಿರುವ ಬಡಜನರ ಶೈಕ್ಷಣಿಕ, ಧಾರ್ಮಿಕ ಮತ್ತು ಸಾಮಾಜಿಕವಾಗಿ ಎಲ್ಲರನ್ನು ಒಗ್ಗೂಡಿಸಿದ ಕೀರ್ತಿ ಪೂಜ್ಯ ಹಾನಗಲ್ ಕುಮಾರಸ್ವಾಮಿಗಳಿಗೆ ಸಲ್ಲುತ್ತದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯಾಧ್ಯಕ್ಷ ಶಂಕರ ಬಿದರಿ ಹೇಳಿದರು.ಅಖಿಲ ಭಾರತ ವೀರಶೈವ ಲಿಂಗಾಯತ ಸಾಂಸ್ಕೃತಿಕ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ೨೦೨೩-೨೪ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ನಮ್ಮ ಸಮಾಜದಲ್ಲಿ ವೀರಶೈವ, ಲಿಂಗಾಯತ ಸ್ವಲ್ಪ ಅಂತರವಿದೆ. ತಲತಲಾಂತರದಿAದ ಬಂದ ವೀರಶೈವ ಸಮಾಜ ಧರ್ಮ ಉಳಿಯಬೇಕಾಗಿದೆ. ಎಲ್ಲ ವರ್ಗಗಳ ಸಹಕಾರ ಇಂದು ಅವಶ್ಯಕತೆ ಇದೆ. ನೆರೆಯ ಮಹಾರಾಷ್ಟç, ತೆಲಂಗಾಣ ರಾಜ್ಯಗಳಲ್ಲಿ ವೀರಶೈವ ಲಿಂಗಾಯತ ಸಮಾಜ ಇದೆ. ಎಲ್ಲರನ್ನು ಜೊತೆಗೂಡಿ ಒಗ್ಗಟ್ಟಾಗಿ ಹೋಗಬೇಕಾಗಿದೆ. ವೀರಶೈವ ಪದ ಹಿಂದುಳಿದ ಓಬಿಸಿ ಪಟ್ಟಿಯಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸುವರ್ಣ ಮಹೊತ್ಸವ ಕಂಡ ಮುಳವಾಡದ ಶ್ರೀ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘವೂ ಸ್ಥಾಪನೆಗೊಂಡು ಇಂದಿಗೆ ೬೨ ವರ್ಷಗಳಾದವು. ಸಂಘದಡಿಯಲ್ಲಿ ಪ್ರೌಢ ಶಾಲೆ, ಪ್ರಾಥಮಿಕ ಶಾಲೆ, ಮತ್ತು ಇಂಗ್ಲೀಷ ಮಾಧ್ಯಮ ಪ್ರಾಥಮಿಕ ಶಾಲೆಗಳು ಅಸ್ತಿತ್ವದಲ್ಲಿವೆ. ಇತ್ತೀಚೆಗೆ ಸಂಘದ ಕಾರ್ಯಕಾರಿ ಮಂಡಳಿಗೆ ಚುನಾವಣೆ ನಡೆಯಿತು. ಹನ್ನೊಂದು ಜನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಗೊಂಡರು.ಎ.ಎಸ್. ಐಹೊಳ್ಳಿ (ಅಧ್ಯಕ್ಷರು) ಬಿ.ಆಯ್.ಪಾಟೀಲ (ಉಪಾಧ್ಯಕ್ಷರು) ಜೆ.ಎಸ್. ಕಂಚ್ಯಾಣಿ (ಗೌರವ ಕಾರ್ಯದರ್ಶಿ) ಎ.ಜಿ. ಕಳಸಗೊಂಡ (ಕೋಶಾಧಿಕಾರಿ) ಹಾಗೂ ಎಸ್.ಪಿ. ಕೆಂಗನಾಳ ಆರ್.ಡಿ. ಐಹೊಳ್ಳಿ ಆಯ್.ಕೆ. ಗುಚ್ಚೆಟ್ಟಿ, ಎಸ್.ಬಿ. ಪಾಟೀಲ ಡಾ. ಎಸ್.ಎಂ. ಕುಬಸದ, ಎಸ್.ಎಸ್. ಮಂಟೂರ, ಶ್ರೀಮತಿ ಉಮಾ ಟಿ. ಹುಂಡೇಕಾರ, ಇವರೆಲ್ಲ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಡಾ. ವಿ.ಡಿ. ಐಹೊಳ್ಳಿ ಅವರನ್ನು ಶಿಕ್ಷಣ ತಜ್ಞರಾಗಿ ಮತ್ತು ಎಸ್.ಎಚ್. ಬುಸಾರಿ ಅವರನ್ನು ಕಾನೂನು ಸಲಹೆಗಾರರನ್ನಾಗಿ ನೇಮಿಸಿ, ಗೌರವ ಸದಸ್ಯ ಸ್ಥಾನವನ್ನು ನೀಡಲಾಗಿದೆ ಎಂದು ಗೌ. ಕಾರ್ಯದರ್ಶಿಗಳಾದ ಜಂಬುನಾಥ ಕಂಚ್ಯಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಮಕ್ಕಳಲ್ಲಿ ಅಡಗಿರುವ ಸೂಪ್ತ ಪ್ರತಿಭೆಯನ್ನು ಗುರುತಿಸಿ ಅದಕ್ಕೆ ವೇದಿಕೆ ನೀಡಲು ಸರಕಾರ ಪ್ರತಿಭಾಕಾರಂಜಿಯAತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಇದನ್ನು ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕೆಂದು ಶಾಸಕ ಸಿದ್ದು ಸವದಿ ಹೇಳಿದರು.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶೀಕ್ಷಣಾಧಿಕಾರಿಗಳ, ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಹಾಗೂ ಶ್ರೀ ಪ್ರಭುಲಿಂಗೇಶ್ವರ ಇಂಟರನ್ಯಾಷನಲ್ ಸ್ಕೂಲ್ ಚಿಮ್ಮಡ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ೨೦೨೪-೨೫ನೇ ಸಾಲಿನ ಪ್ರತಿಭಾಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದ ಉದ್ಘಾಟಣೆ ನೆರವೇರಿಸಿ ಮಾತನಾಡಿದ ಅವರು ದೇಶದ ಬಹುತೇಕ ದಿಗ್ಗಜ ಕಲಾವಿದರು, ಸಂಗೀರಗಾರರ ಪಾದಾರ್ಪಣೆಗೆ ಮೊದಲ ವೇದಿಕೆಯೇ ಪ್ರತಿಭಾ ಕಾರಂಜಿಯAತಹ ಕಾರ್ಯಕ್ರಮಗಳು, ಇಂತಹ ದೇಶ ಕಟ್ಟುವಲ್ಲಿ ಸಹಕಾರಿಯಾಗಬಲ್ಲ ಕಾರ್ಯಕ್ರಮಗಳಿಗೆ ವೇದಿಕೆಯಾಗಲು ಪ್ರತೀವರ್ಷವೂ ನಮ್ಮ ಸಂಸ್ಥೆ ಸಿದ್ದವಿದೆ ಎಂದರು.ಕ್ಷೇತ್ರ ಶಿಕ್ಷ ಣಾಧಿಕಾರಿ ಅಶೋಕ ಬಸಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿ ಶಿಕ್ಷಣದ ಮೂಖ್ಯ ಭಾಗ ಈ ಪ್ರತಿಭಾ ಕಾರಂಜಿಯಲ್ಲಿ ಅಡಗಿದ್ದು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವುದನ್ನೂ ಈ ವೇದಿಕೆ ಕಲಿಸಿ ಕೊಡುತ್ತದೆ. ವಿವಿಧತೆಯಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಪ್ರೋ ಕಬ್ಬಡ್ಡಿ ಲೀಗ್ ೧೧ರ ತಂಡಗಳಿಗೆ ಚಿಮ್ಮಡ ಗ್ರಾಮದಲ್ಲಿ ವಿದ್ಯಾರ್ಜನೆ ಮಾಡಿದ ವಿದ್ಯಾರ್ಥಿಗಳು ಆಯ್ಕೆಯಾಗುವ ಮೂಲಕ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ.ಇಲ್ಲಿನ ಭೂಮಿಕಾ ವಸತಿ ಶಾಲೆಯ ವಿದ್ಯಾರ್ಥಿಗಳಾದ ಚಂದ್ರನಾಯ್ಕ ಬೆಂಗಳೂರು ಬುಲ್ಸ ತಂಡಕ್ಕೆ ಹಾಗೂ ಸತ್ಯಪ್ಪಾ ಮಟ್ಟಿ ಪುನೇರಿ ಪಲ್ಟನ್ ತಂಡಗಳಿಗೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಸ್ಪರ್ದಾಳುಗಳಿಗೆ ಇಲ್ಲಿನ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಮಾಲಾ ಅಶೋಕ ಮೋಟಗಿ ಹಾಗೂ ಭೂಮಿಕಾ ವಿದ್ಯಾ ಸಂಸ್ಥೆಯ ಸಂಸ್ಥಾಪಕಅಧ್ಯಕ್ಷ ಮುತ್ತು ಢವಳೇಶ್ವರ ಅಭಿನಂದಿಸಿದ್ದಾರೆ.

Read More

ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ಕ್ಷೇತ್ರದಲ್ಲಿ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಯಾಗಾರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸ್ತುತ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ಕ್ಷೇತ್ರದಲ್ಲಿ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಅಧ್ಯಾಪಕರ ‘ಸಾಮರ್ಥ್ಯ ವೃದ್ಧಿ’ ಕಾರ್ಯಾಗಾರಗಳು ಮಹತ್ವಪೂರ್ಣವಾಗಿದ್ದು, ಲಭ್ಯವಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮಾರ್ಗಗಳನ್ನು ಕಲಿಯಲು ಈ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಎಮ್.ಪಾಟೀಲ್ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ಮತ್ತು ವ್ಯವಹಾರ ನಿರ್ವಹಣೆ ಅಧ್ಯಯನ ವಿಭಾಗಗಳು ಹಾಗೂ ನವದೆಹಲಿಯ ಐಸಿಎಸ್‌ಎಸ್‌ಆರ್ ಪ್ರಾಯೋಜಕತ್ವದಲ್ಲಿ ಜಂಟಿಯಾಗಿ ಆಯೋಜಿಸಿದ್ದ ‘ಶೈಕ್ಷಣಿಕ ಸಂಶೋಧನಾ ಬರವಣಿಗೆ’ ಎಂಬ ವಿಷಯದ ಕುರಿತು ಎರಡು ವಾರಗಳ ‘ಸಾಮರ್ಥ್ಯ ವೃದ್ಧಿ’ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.ಈ ಕಾರ್ಯಾಗಾರ ದೈಹಿಕ ಶಿಕ್ಷಣ, ಸಮಾಜ ವಿಜ್ಞಾನ, ವಾಣಿಜ್ಯ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ಸಂಶೋಧನೆಯಲ್ಲಿ ಎದುರಿಸಬೇಕಾದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮುಖ್ಯ ವೇದಿಕೆಯಾದಂತಾಗಿದೆ ಎಂದರು.ಇದೇ ಸಂದರ್ಭದಲ್ಲಿ ಕುಪ್ಪಂ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಅನ್ನದಾತರ ಪಹಣಿಯಲ್ಲಿ ವಕ್ಸ್ ಆಸ್ತಿ ಎಂದು ಅಧಿಕಾರಿಗಳು ಮತ್ತು ಸರಕಾರ ರೈತರ ಮೇಲೆ ದೌರ್ಜನ್ಯ ಮಾಡುತ್ತಿರುವುದನ್ನು ಕೂಡಲೆ ಕೈಬಿಡಬೇಕು. ಇಲ್ಲವಾದಲ್ಲಿ ಉಗ್ರಹೋರಾಟ ಮಾಡಲಾಗುವದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆ ಕೋಡಹಳ್ಳಿ ಚಂದ್ರಶೇಖರ ಬಣದ ಜಿಲ್ಲಾ ರೈತ ಸಂಘದ ಅಧ್ಯಕ್ಷ ಎಸ್.ಬಿ. ಕೆಂಬೋಗಿ ತಿಳಿಸಿದರು.ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ತಲೆತಲಾಂತರದಿಂದ ಉಳುಮೆ ಮಾಡುತ್ತ ಬಂದಿರುವ ಕೃಷಿ ಭೂಮಿ ಮೇಲೆ ‘ವಕ್ಸ್ ಆಸ್ತಿ ಅನ್ನದಾತರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಕೆಲವು ಹಳ್ಳಿಯಲ್ಲಿ ಕೃಷಿ ಭೂಮಿ ರೈತರ ಜಮೀನುಗಳಿಗೆ ವಕ್ಸ್ ಮಂಡಳಿ ನೋಟಿಸ್ ಮತ್ತು ಪಹಣಿಯಲ್ಲಿ ನಮೂದಿಸಿದ್ದು ತಕ್ಷಣ ಹಿಂಪಡೆಯಬೇಕು. ಇಲ್ಲವಾದರೆ ವಿವಾದದ ವ್ಯಾಪಕತೆ, ಗಂಭೀರತೆಯನ್ನು ಅರಿಯಲು ರಾಜ್ಯ ರೈತ ಸಂಘ ಅಧ್ಯಯನ ಸಮಿತಿ ರಚನೆಗೆ ಮುಂದಾಗಿದೆ.ತಲೆಮಾರುಗಳಿಂದ ರೈತರು ಉಳುಮೆ ಮಾಡಿಕೊಂಡು ಬಂದ ಜಮೀನಿನ ಪಹಣಿಯಲ್ಲಿ ವಕ್ಸ್ ದಾಖಲಾಗಿ ಮಂಡಳಿ ನೋಟಿಸ್ ನೀಡಿರುವುದು ರೈತರಿಗೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಭೂ ದಾಖಲೆಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪ್ರಕೃತಿ ನಮ್ಮ ಬದುಕಿಗೆ ಬೇಕಾದ ಎಲ್ಲವನ್ನು ನೀಡಿದೆ. ಅದಕ್ಕಾಗಿಯೇ ನಾವು ದೇವರನ್ನು ವಿವಿಧ ರೂಪದಲ್ಲಿ ಆರಾಧಿಸುತ್ತಿದ್ದೇವೆ. ದೇವರು ಸರ್ವವ್ಯಾಪಿಯಾಗಿದ್ದಾನೆ. ಪ್ರತಿಯೊಬ್ಬರೂ ಏಕಾಗ್ರತೆಯಿಂದ ಧ್ಯಾನದಲ್ಲಿ ತೊಡಗುವ ಮೂಲಕ ಬದುಕಿನಲ್ಲಿ ಸಾಧನೆ ಮಾಡಬೇಕೆಂದು ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದರು.ಪಟ್ಟಣದ ಬಸವ ಭವನದಲ್ಲಿ ಮಹಾರಾಜ ಮಠದ ಸಿದ್ದರಾಮೇಶ್ವರ ಮಹಾರಾಜರ ಪುಣ್ಯಸ್ಮರಣೋತ್ಸವದಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಸತ್ಸಂಗ ಕಾರ್ಯಕ್ರಮದ ಸಾನಿದ್ಯ ವಹಿಸಿ ಮಾತನಾಡಿದ ಅವರು, ನಮ್ಮ ಹಿಂದು ಧರ್ಮದ ಸಂಸ್ಕ್ರತಿಯ ಜಗತ್ತಿನಲ್ಲಿಯೇ ವೈಶಿಷ್ಟ್ಯಪೂರ್ಣವಾಗಿದೆ. ನಮ್ಮ ಧರ್ಮದಲ್ಲಿ ಅವರ ಭಾವಕ್ಕೆ ತಕ್ಕಂತೆ ದೇವರನ್ನು ಪೂಜಿಸುವ ಸ್ವಾತಂತ್ರ್ಯ ಕೊಟ್ಟಿದೆ. ದೇವರನ್ನು ಮೂರ್ತಿ, ಪ್ರಾಣಿ, ವೃಕ್ಷ,ಜಲ, ಮಣ್ಣು ಸೇರಿದಂತೆ ವಿವಿಧ ರೂಪದಲ್ಲಿ ಪೂಜಿಸಲಾಗುತ್ತಿದೆ ಎಂದರು.ಸಮಾಜವನ್ನು ಸನ್ಮಾರ್ಗದಲ್ಲಿ ತರುವ ನಿಟ್ಟಿನಲ್ಲಿ ದೇಶದ ಎಲ್ಲ ರಾಜ್ಯಗಳಲ್ಲಿಯೂ ಭಕ್ತಿ ಆಂದೋಲನ ನಡೆದಿವೆ. ೧೨ ನೇ ಶತಮಾನದಲ್ಲಿ ಬಸವೇಶ್ವರರು ಸಮಾನತೆ ಸಂದೇಶ ಸಾರುವ ಮೂಲಕ ಇಷ್ಟಲಿಂಗ ಪೂಜೆ ಮಹತ್ವ ಸಾರುವ ಮೂಲಕ ಭಕ್ತಿ ಆಂದೋಲನ ಮಾಡಿದ್ದಾರೆ. ಏಕನಾಥ ಮಹಾರಾಜರು ಭಕ್ತಿ ಆಂದೋಲನದ…

Read More

ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: ಶಾಲೆಯಿಂದ ಮರಳಿ ಮನೆಗೆ ಹೋಗುವಾಗ ತನಗೆ ಸಿಕ್ಕ ರೂ. 3100 ರೂಪಾಯಿಗಳನ್ನು ಬಬಲೇಶ್ವರ ತಾಲ್ಲೂಕಿನ ಹೊನಗನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಕೊರಮ್ಮದೇವಿ ತೋಟದ ವಸ್ತಿ ಶಾಲೆಯ ಐದನೇ ತರಗತಿ ವಿದ್ಯಾರ್ಥಿ ಮಲ್ಲಿಕಾರ್ಜುನ್ ಮಾದರ ಶಾಲೆಯ ಮುಖ್ಯ ಗುರುಮಾತೆ ಎಸ್.ಆರ್. ಮೇಡೇಗಾರ್ ಅವರ ಕೈಯಲ್ಲಿ ತಂದುಕೊಟ್ಟು ಪ್ರಾಮಾಣಿಕತೆಯನ್ನು ಮೆರೆದಿದ್ದಾನೆ.ಹಣ ತಂದು ಕೊಟ್ಟ ನಂತರ ಮುಖ್ಯಗುರುಮಾತೆ ವಿಧ್ಯಾರ್ಥಿಗೆ ಪ್ರೋತ್ಸಾಹಿಸಿ ಹಣ ಕಳೆದುಕೊಂಡ ರಾಜಪ್ಪ ಕವಟಗಿ ಅವರನ್ನು ಶಾಲೆಗೆ ಕರೆಸಿ ಆ ಮಗುವಿನ ಕೈಯಿಂದ ಅವರಿಗೆ ಹಣ ಮರಳಿ ಕೊಡಿಸಿ ಮಗುವಿನ ಪ್ರಾಮಾಣಿಕತೆಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಪ್ರಾಮಾಣಿಕತೆ ಇತರೆ ಮಕ್ಕಳಿಗೂ ಮಾದರಿಯಾಗಿದೆ.

Read More