Author: editor.udayarashmi@gmail.com

ವಿಜಯಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಜನತೆಯ ಸಹಕಾರದಿಂದ ಅಭಿವೃದ್ಧಿ ವಂಚಿತವಾಗಿದ್ದ ವಿಜಯಪುರ ನಗರವನ್ನು ಪ್ರಸ್ತುತ ಮಾದರಿ ನಗರವನ್ನಾಗಿ ಅಭಿವೃದ್ಧಿಪಡಿಸಲು ಸಾಧ್ಯವಾಯಿತು ಎಂದು ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದರು.ನಗರಾಭಿವೃದ್ದಿ ಪ್ರಾಧಿಕಾರದಿಂದ ಸನ್ 2023ನೇ ಸಾಲಿನಲ್ಲಿ ಕೈಗೆತ್ತಿಕೊಂಡ ಕಾಮಗಾರಿಗಳಿಗೆ ಹಿಂದೇಯೇ ಮಂಜೂರಿಸಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ನಗರದ ವಿವಿಧೆಡೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಪ್ರತಿಯೊಂದರಲ್ಲಿಯೂ ಕೊನೆಯ ಸ್ಥಾನದಲ್ಲಿರುತ್ತಿದ್ದ ವಿಜಯಪುರ ನಗರ ಸದ್ಯ, ಅಭಿವೃದ್ಧಿ ಮತ್ತು ಸಾಧನೆಯಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಲಾಗಿದೆ ಎಂದರು.ಮೊದಲಿಗೆ ಲಿಂಗೇಶ್ವರ ಕಾಲನಿ ಉದ್ಯಾನವನದಲ್ಲಿ, ನಮರ್ಥ ನಗರದ ರಿಂಗ್ ಮನಗೂಳಿ ರಸ್ತೆ ಉದ್ಯಾನವನದಲ್ಲಿ, ಯೋಗಾಪುರ ಕಾಲೊನಿಯ ಡಾ.ಅಂಬೇಡ್ಕರ್ ವೃತ್ತದ ಹತ್ತಿರ, ರಿಂಗ್ ರಸ್ತೆಯ ಚಿದಂಬರ ಗುಡಿ ಹತ್ತಿರ ಹಾಗೂ ವಾ.ನಂ.22 ರಲ್ಲಿ ಬರುವ ಓನಕೆ ಓಬವ್ವ ಉದ್ಯಾನವನದಲ್ಲಿ, ರೂ.22.70 ಲಕ್ಷ ಮೊತ್ತದಲ್ಲಿ 12.00/12.50 ಮೀ ಎತ್ತರದ ಹೈಮಾಸ್ಟ್ ಗಳ ಅಳವಡಿಕೆ ಕಾಮಗಾರಿಗಳಿಗೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಾಗತಿಕ ಆರೋಗ್ಯಕ್ಕಾಗಿ ಆಯುರ್ವೇದ ನಾವಿನ್ಯತೆಯೊಂದಿಗೆ ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ ಎಂಬ ಘೋಷವಾಕ್ಯದೊಂದಿಗೆ ಅ.೨೯ರಂದು ನಗರದ ಆರ್.ಕೆ.ಎಂ. ಆಯುರ್ವೇದ ಮೆಡಿಕಲ್ ಕಾಲೇಜ್‌ನಲ್ಲಿ ೯ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೯ ಗಂಟೆಗೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-೨ ನವದೆಹಲಿ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದ ರಮೇಶ ಜಿಗಜಿಣಗಿ ಸೇರಿದಂತೆ ಜಿಲ್ಲೆಯ ವಿವಿಧ ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ೨೦೨೪-೨೫ನೇ ಸಾಲಿನ ಇಲಾಖೆ ಯೋಜನೆಗಳಾದ ಶುಲ್ಕ ಮರುಪಾವತಿ, ವಿವಾಹ ಪ್ರೋತ್ಸಾಹ ಧನ, ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಿಂದ ಆಫಲೈನ್ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ದಿನಾಂಕ : ೨೮-೧೧-೨೦೨೪ ಕೊನೆಯ ದಿನವಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತ್ ಕಾರ್ಯಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ವಿಜಯಪುರ ರವಿ ರಾಠೋಡ ಮೊ: ೯೦೦೩೫೫೫೩೩೭, ಇಂಡಿ ಪರಶುರಾಮ ಭೋಸಲೆ ಮೊ: ೯೯೭೨೪೪೧೪೬೪, ಸಿಂದಗಿ ಮುತ್ತುರಾಜ ಸಾತಿಹಾಳ ಮೊ: ೯೯೮೦೦೧೯೬೩೫, ಬಸವನಬಾಗೇವಾಡಿ ಎಸ್.ಡಿ.ಬಿರಾದಾರ ಮೊ: ೮೭೨೨೧೩೫೬೬೦ ಹಾಗೂ ಮುದ್ದೇಬಿಹಾಳ ಎಸ್.ಕೆ.ಘಾಟಿ ಮೊ: ೯೭೪೦೬೮೨೯೭೯ ಇವರನ್ನು ಹಾಗೂ ಕಚೇರಿ ದೂರವಾಣಿ : ೦೮೩೫೨-೭೯೬೦೬೦ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿಗಳಾದ ಶ್ರೀಮತಿ ಸವಿತಾ ಕಾಳೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿವಿಧ ಗ್ರಾಮ ಪಂಚಾಯತಿಗಳಿಗೆ ಉಪ ಚುನಾವಣೆ ಘೋಷಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ಚುನಾವಣಾ ಆಯೋಗ ವಿಜಯಪುರ ಜಿಲ್ಲೆಯ ವಿವಿಧ ಕಾರಣಗಳಿಂದ ಖಾಲಿ-ತೆರವಾಗಿರುವ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ಘೋಷಿಸಿ ಆದೇಶ ಹೊರಡಿಸಿದ್ದು, ಉಪಚುನಾವಣೆಗೆ ಸಂಬಂಧಿಸಿದಂತೆ ಉಪ ಚುನಾವಣೆ ನಡೆಯುವ ವಿವಿಧ ಗ್ರಾಮ ಪಂಚಾಯತಿಯ ಮತದಾರರನ್ನು ಅಳವಡಿಸಿಕೊಂಡು ಕರಡು ಮತದಾರರ ಪಟ್ಟಿಯನ್ನು ಅ.೨೫ರಂದು ನಿಡಗುಂದಿ, ಇಂಡಿ, ಬಸವನಬಾಗೇವಾಡಿ, ಬಬಲೇಶ್ವರ, ವಿಜಯಪುರ, ಮುದ್ದೇಬಿಹಾಳ, ತಾಳಿಕೋಟೆ ಹಾಗೂ ಚಡಚಣ ತಾಲೂಕಾ ಕಚೇರಿಗಳಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.ದಿನಾಂಕ: ೨೨-೦೧-೨೦೨೪ರಂದು ಪ್ರಕಟವಾಗಿರುವ ವಿಧಾನಸಭಾ ಅಂತಿಮ ಮತದಾರರ ಪಟ್ಟಿ ಹಾಗೂ ಅರ್ಹತಾ ದಿನಾಂಕ : ೦೧-೦೪-೨೦೨೪ರಂತೆ ದಿನಾಂಕ : ೦೪-೦೪-೨೦೨೪ರಂದು ಪ್ರಕಟಗೊಂಡಿರುವ ಪೂರಕ ಪಟ್ಟಿಯ ಮುದ್ರಿತ ಪ್ರತಿಯನ್ನು ಅಳವಡಿಸಿಕೊಂಡು ಹಾಗೂ ಉಪ ಚುನಾವಣೆ ನಡೆಯುವ ನಿಡಗುಂದಿ ತಾಲೂಕಿನ ಆಲಮಟ್ಟಿ ಹಾಗೂ ಚಿಮ್ಮಲಗಿ, ಇಂಡಿ ತಾಲೂಕಿನ ಸಾಲೋಟಗಿ ಹಾಗೂ ಖೇಡಗಿ, ಬಸವನಬಾಗೇವಾಡಿ ತಾಲೂಕಿನ ವಡವಡಗಿ, ಮತ್ತಗಿ ಹಾಗೂ ಬ್ಯಾಕೋಡ, ಬಬಲೇಶ್ವರ ತಾಲೂಕಿನ ಬೋಳಚಿಕ್ಕಲಕಿ, ವಿಜಯಪುರ ತಾಲೂಕಿನ ಕನ್ನೂರ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾನಗರ ಪಾಲಿಕೆಯ ವಿಶೇಷ ಸಾಮಾನ್ಯ ಸಭೆಯನ್ನು ದಿನಾಂಕ : ೩೦-೧೦-೨೦೨೪ ರಂದು ಬೆಳಿಗ್ಗೆ ೧೧ ಗಂಟೆಗೆ ಜಲನಗರದ ಮಹಾನಗರ ಪಾಲಿಕೆಯ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಪರಿಷತ್ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read More

ವಿಜಯಪುರ ವಾರ್ಡ ನಂ.೨೯ಕ್ಕೆ ಉಪ ಚುನಾವಣೆ ಘೋಷಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ಚುನಾವಣಾ ಆಯೋಗ ವಿಜಯಪುರ ಮಹಾನಗರ ಪಾಲಿಕೆಯ ವಾರ್ಡ-೨೯ಕ್ಕೆ ಉಪ ಚುನಾವಣೆಯನ್ನು ಘೋಷಿಸಿ ಆದೇಶ ಹೊರಡಿಸಿದ್ದು, ಉಪಚುನಾವಣೆಗೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆಯ ವಾರ್ಡ ನಂ.೨೯ ಒಳಗೊಂಡಿರುವ ಮತದಾರರನ್ನು ಅಳವಡಿಸಿಕೊಂಡು ಕರಡು ಮತದಾರರ ಪಟ್ಟಿಯನ್ನು ಅ.೨೫ರಂದು ವಿಜಯಪುರ ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.ದಿನಾಂಕ : ೨೨-೦೧-೨೦೨೪ರಂದು ಪ್ರಕಟವಾಗಿರುವ ವಿಧಾನಸಭಾ ಅಂತಿಮ ಮತದಾರರ ಪಟ್ಟಿ ಹಾಗೂ ಅರ್ಹತಾ ದಿನಾಂಕ : ೦೧-೦೪-೨೦೨೪ರಂತೆ ದಿನಾಂಕ : ೦೪-೦೪-೨೦೨೪ರಂದು ಪ್ರಕಟಗೊಂಡಿರುವ ಪೂರಕ ಪಟ್ಟಿಯ ಮುದ್ರಿತ ಪ್ರತಿಯನ್ನು ಅಳವಡಿಸಿಕೊಂಡು ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರು ಹಾಗೂ ಮತದಾರರ ವೀಕ್ಷಣೆಗೆ ಪ್ರಕಟಿಸಲಾಗಿದ್ದು, ಪ್ರಕಟಿತ ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ : ೨೯-೧೦-೨೦೨೪ರೊಳಗಾಗಿ ವಾಸವಿರುವ ವಾರ್ಡನ ವ್ಯಾಪ್ತಿಯಲ್ಲಿ ಇರದ ಬೇರೆ ವಾರ್ಡಗಳ ಮತದಾರರು ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಅಥವಾ ವಿಧಾನಸಭಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೇ ಇರುವ ಹೆಸರುಗಳನ್ನು ವಿಜಯಪುರ ವಾರ್ಡ ನಂ.೨೯ರಲ್ಲಿ ತಯಾರಿಸಲಾದ ಮತದಾರರ ಪಟ್ಟಿಯಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಮಾಧ್ಯಮ ಅಕಾಡೆಮಿ ನೂತನ ಸದಸ್ಯರಾಗಿ ನೇಮಕಗೊಂಡಿರುವ ವಿಜಯ ಕರ್ನಾಟಕ ಪತ್ರಿಕೆ ವಿಜಯಪುರ ಜಿಲ್ಲಾ ಹಿರಿಯ ವರದಿಗಾರ ಸಂಗಮೇಶ ಟಿ. ಚೂರಿ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ಸೋಮವಾರ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ ಸಲಹಾ ಸಮಿತಿ ಸದಸ್ಯರ ವಿಶೇಷ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಮಾಧ್ಯಮ ಅಕಾಡೆಮಿಗೆ ನೇಮಕಗೊಂಡ ಸಂಘದ ಜಿಲ್ಲಾಧ್ಯಕ್ಷರೂ ಆಗಿರುವ ಸಂಗಮೇಶ ಟಿ. ಚೂರಿ ಅವರಿಗೆ ಸಂಘದ ಪರವಾಗಿ ಹಿರಿಯ ಪತ್ರಕರ್ತ ಹಾಗೂ ಸಲಹಾ ಸಮಿತಿ ಸದಸ್ಯರಾದ ವಾಸುದೇವ ಹೆರಕಲ್ ಅವರು ಶಾಲು ಹೊದಿಸಿ ಮಾಲಾರ್ಪಣೆ ಮಾಡಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂಗಮೇಶ ಚೂರಿ ಅವರು ತುಂಬಾ ಕ್ರಿಯಾಶೀಲರಾಗಿದ್ದು, ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ್ಳೆಯ ರೀತಿಯಲ್ಲಿ ಸಂಘವನ್ನು ಮುನ್ನಡೆಸುತ್ತಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ಸ್ಥಾನಮಾನ, ಗೌರವ ಸಿಗಲೆಂದು ಹಾರೈಸಿದರು.ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜ್ಞಾನ ವಸ್ತು ಪ್ರದರ್ಶನಗಳು ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರಜ್ಞೆ ಮತ್ತು ಜ್ಞಾನವನ್ನು ಹೊರತರಲು ಅತ್ಯಂತ ಉಪಯುಕ್ತವಾಗುತ್ತವೆ ಎಂದು ಬಿ.ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯ ವಿಶ್ರಾಂತ ಉಪಕುಲಪತಿ ಡಾ. ಸತೀಶ ಜಿಗಜಿನ್ನಿ ಹೇಳಿದ್ದಾರೆ.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ನಲ್ಲಿ ಶನಿವಾರ ಆಯೋಜಿಸಲಾಗಿದ್ದ ಮೈ ನಿವರೇಳಿಸುವ ವಿಜ್ಞಾನ ಮತ್ತು ಭಾಷಾ ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಶಾಲೆಗಳಲ್ಲಿ ಇಂಥ ಪ್ರದರ್ಶನಗಳನ್ನು ಆಯೋಜಿಸುವುದರಿಂದ ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳಲ್ಲಿ ವೈಜ್ಞಾನಿಕ ವಿಷಯಗಳತ್ತ ಹೆಚ್ಚು ಆಸಕ್ತಿ ಬೆಳೆಸಲು ಅನುಕೂಲವಾಗುತ್ತದೆ. ಅಲ್ಲದೇ, ಭವಿಷ್ಯದಲ್ಲಿ ಈ ವಿದ್ಯಾರ್ಥಿಗಳು ವಿಜ್ಞಾನಿಗಳಾಗಲು ಪ್ರೋತ್ಸಾಹ ನೀಡುತ್ತವೆ ಎಂದು ಅವರು ಹೇಳಿದರು.ಇಗ್ನೋ ಪ್ರಾದೇಶಿಕ ನಿರ್ದೇಶಕ ರವಿಕಾಂತ ಕೆ. ಮಾತನಾಡಿ, ವಸ್ತು ಪ್ರದರ್ಶನಗಳು ಮಕ್ಕಳನ್ನು ವಿಜ್ಞಾನದ ಬಗ್ಗೆ ಜ್ಞಾನ ಒದಗಿಸುತ್ತವೆ. ಅಲ್ಲದೇ, ಹೊಸ ಆವಿಷ್ಕಾರಗಳನ್ನು ಕೈಗೊಳ್ಳಲು ಸ್ಪೂರ್ತಿ ನೀಡುತ್ತವೆ ಎಂದು ತಿಳಿಸಿದರು.ಕಾರ್ಯ ಸಂಯೋಜಕ ಆಶೀಶ ಕುಲಕರ್ಣಿ ಮಾತನಾಡಿ, ಶಾಲೆಯ ವಿದ್ಯಾರ್ಥಿಗಳು ಮಾಡಿರುವ ಮಾದರಿಗಳು, ಅದ್ಭುತವಾಗಿವೆ. ಅವರಲ್ಲಿರುವ ಕ್ರಿಯಾಶೀಲತೆ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ರಾಮಾಯಣ ಮತ್ತು ಮಹಾಭಾರತ ನಮ್ಮ ದೇಶದ ಜನತೆಗೆ ಮಾತ್ರವಲ್ಲದೇ ಇಡೀ ಜಗತ್ತಿಗೆ ಭಾರತ ಕೊಟ್ಟ ಅತ್ಯಮೂಲ್ಯ ಕೊಡುಗೆ ಎಂದು ಆರ್‌ಎಸ್‌ಎಸ್ ನ ಉತ್ತರ ಕರ್ನಾಟಕ ಪ್ರಾಂತ ಕಾರ್ಯಕಾರಿಣಿ ಸದಸ್ಯ ಅರವಿಂದರಾವ್ ದೇಶಪಾಂಡೆ ಹೇಳಿದರು.ರಾಮಾಯಣ ಮತ್ತು ಮಹಾಭಾರತ ಪುರಾಣದ ಕಥೆಗಳಲ್ಲ ಅವು ಇತಿಹಾಸ. ರಾಮ ಕಾಲ್ಪನಿಕ ಪುರುಷನಲ್ಲ ಐತಿಹಾಸಿಕ ಪುರುಷ ಎನ್ನುವದು ಇಂದು ವೈಜ್ಞಾನಿಕವಾಗಿ ಸಿದ್ಧವಾಗುತ್ತಿದೆ. ದೆಹೆಲಿಯ ಸಂಶೋಧನಾ ಸಂಸ್ಥೆಯೊಂದು ೩೫ ವರ್ಷಗಳಿಂದ ಸಂಶೋದನೆ ಮಾಡಿ ರಾಮನ ಇತಿಹಾಸದ ಕುರುಗಳನ್ನ ಗುರುತಿಸಿದ್ದಾರೆ. ಶ್ರೀರಾಮ ಲಂಕೆಗೆ ಹೋಗುವಾಗ ಸಮುದ್ರದ ಮಧ್ಯೆ ಸೇತುವೆ ನಿರ್ಮಿಸಿದ್ದೂ ಕೂಡ ಶೋಧನೆಯಿಂದ ಖಚಿತವಾಗಿದೆ ಈ ಎಲ್ಲವನ್ನೂ ಗಮನಿಸಿದಾಗ ರಾಮ ಕಾಲ್ಪನಿಕ ಪುರುಷನಲ್ಲ ಇತಿಹಾಸ ಪುರುಷ ಎಂದು ಖಚಿತವಾಗಿದೆ ಎಂದರು.ಸಂಘದ ಶಾಖೆಯಲ್ಲಿ ಪ್ರತಿನಿತ್ಯ ಶಾರೀರಿಕ ಕಾರ್ಯಕ್ರಮಗಳಾದ ಸೂರ್ಯ ನಮಸ್ಕಾರ, ಯೋಗ, ದಂಡಾಭ್ಯಾಸ ಹೇಳಿಕೊಟ್ಟು ಶರೀರ, ಮನಸ್ಸು, ಬುದ್ಧಿಗಳಿಗೆ ಸಂಸ್ಕಾರ ಕೊಡುವ ಮೂಲಕ ವ್ಯಕ್ತಿ ನಿರ್ಮಾಣದ ಕೆಲಸ ಮಾಡಲಾಗುತ್ತೆ. ಇದರಿಂದ ಸಮಾಜದಲ್ಲಿ ಆತ್ಮ ವಿಶ್ವಾಸ ಹೆಚ್ಚುತ್ತದೆ ಎಂದರು.ಜಾತಿ, ಮತ,…

Read More