Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಬಣಜಿಗ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಪಟ್ಟಣದ ಬಣಜಿಗ ಸಮಾಜದ ಮುಖಂಡರು ಸೋಮವಾರ ಮಾನ್ಯ ತಹಸೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.ಬಣಜಿಗ ಸಮುದಾಯವು ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದ್ದು, ಸಮುದಾಯದ ಯುವಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸೂಕ್ತ ಅವಕಾಶಗಳು ಸಿಗುತ್ತಿಲ್ಲ. ಹೀಗಾಗಿ ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ಬಣಜಿಗ ಸಮಾಜವನ್ನು 2ಎ ಮೀಸಲಾತಿ ಪಟ್ಟಿಗೆ ಸೇರಿಸಬೇಕು ಎಂದು ಈ ಸಂದರ್ಭದಲ್ಲಿ ಮುಖಂಡರು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಆಲಮೇಲ ಬಣಜಿಗ ಸಮಾಜದ ಅಧ್ಯಕ್ಷರಾದ ಸಿದ್ದಲಿಂಗ ಸುಬೇಧಾರ, ಪ್ರಧಾನ ಕಾರ್ಯದರ್ಶಿ ರವೀಂದ್ರ ವಾರದ, ಕೋಶಾಧಿಕಾರಿ ಶಿವಾನಂದ ಮಾರ್ಸನಳ್ಳಿ ಹಾಗೂ ಯುವ ಘಟಕದ ಅಧ್ಯಕ್ಷ ವಿಶ್ವ ಕೋರಳ್ಳಿ ಉಪಸ್ಥಿತರಿದ್ದರು.ಸಮಾಜದ ಪ್ರಮುಖ ಮುಖಂಡರಾದ ಡಾ. ಪ್ರಮೋದ್ ಮಹಾಜನ, ಗೊಲ್ಲಾಳ ಉಪ್ಪಿನ, ಮಲ್ಲು ಧನಶ್ರೀ, ಮಲ್ಲು ಅಚಲೇರಿ, ಬಾಬು ಜಾನಾ, ಶರಣು ಶ್ರೀಗಿರಿ, ಆನಂದ ಲಾಳಸಂಗಿ, ಸಂದೀಪ್ ಸೊನ್ನದ, ಈಸಪ್ಪ ಮಹಾಜನ, ಅಮರೇಶ್ ಸಾಲಕ್ಕಿ, ಈಸಪ್ಪ ತೆಲ್ಲೂರ, ಈರಣ್ಣ ತೆಲ್ಲೂರ, ಪ್ರಕಾಶ್ ಜಂಗಮಶೆಟ್ಟಿ ಸೇರಿದಂತೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಭೀಮಾನದಿಯ ದಡದಲ್ಲಿ ಒಟ್ಟು ೧೬೪ ಹಳ್ಳಿಗಳು ೧೦ ನಗರಗಳು ಲಕ್ಷಾಂತರ ಜನ ಮತ್ತು ಜಾನುವಾರು ಭೀಮಾ ನೀರನ್ನು ನಂಬಿಕೊಂಡು ಬದುಕುತ್ತಿದ್ದಾರೆ. ಹೀಗಾಗಿ ಕೂಡಲೆ ಭೀಮಾನದಿಗೆ ನೀರು ಹರಿಸುವ ಕಾರ್ಯವನ್ನು ರಾಜ್ಯ ಸರಕಾರ ಮಾಡಬೇಕೆಂದು ಕರವೇ ಕಾರ್ಯಕರ್ತರು ಕಂದಾಯ ಉಪವಿಭಾಗಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಅಧ್ಯಕ್ಷ ಬಾಳು ಮುಳಜಿ ಹಾಗೂ ಮುಖಂಡರು, ಈ ಬಾರಿ ಭೀಕರ ಬರಗಾಲ ಆವರಿಸಿದೆ. ಭೀಮಾನದಿ ನೀರನ್ನೆ ನಂಬಿಕೊಂಡಿರುವ ಇಂಡಿ ಚಡಚಣ, ಆಲಮೇಲ, ಸಿಂದಗಿ ತಾಲೂಕಿನ ರೈತರಿಗೆ ಸಮಸ್ಯೆ ಆಗುವ ಹಂತದಲ್ಲಿದೆ, ಮತ್ತೊಂದೆಡೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತತ್ವಾರವೂ ಏರ್ಪಟ್ಟಿದೆ. ಆದ್ದರಿಂದ ಭೀಮಾನದಿಗೆ ಕಾನೂನಾತ್ಮಕವಾಗಿ ಬರಬೇಕಿರುವ ನೀರಿನ ಪಾಲನ್ನು ಪಡೆಯುವ ನಿಟ್ಟಿನಲ್ಲಿ ನೆರೆಯ ಮಹಾರಾಷ್ಟ್ರ ರಾಜ್ಯ ಸರಕಾರದ ಮೇಲೆ ಒತ್ತಡ ಹೇರುವ ತುರ್ತು ಅಗತ್ಯವಿದೆ ಎಂದರು.ನ್ಯಾಯಮೂರ್ತಿ ಬಚಾವತ್ ಅಧ್ಯಕ್ಷೆತೆಯ ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ ಪೀಠದ ಭೀಮಾನದಿಯ ನೀರು ಹಂಚಿಕೆಯ ಎಲ್ಲಾ ನಿಯಮಗಳನ್ನು ಉಲ್ಲಂಘನೆ ಮಾಡಲಾಗುತ್ತಿದೆ.…

Read More

ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣವೇ ಬೆಳೆ ಪರಿಹಾರ ವಿತರಿಸಲು ಬಿಜೆಪಿ ಮುಖಂಡರ ಒತ್ತಾಯ ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕನ್ನು ತಕ್ಷಣವೇ ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಬೇಕು ಮತ್ತು ರೈತರ ವಿವಿಧ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಸೋಮವಾರ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ವಿರುಧ್ಧ ಹರಿಹಾಯ್ದರು.ಬಿಜೆಪಿ ಮಂಡಲ ಅಧ್ಯಕ್ಷ ಹಣಮಂತ್ರಾಯಗೌಡ ಪಾಟೀಲ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಸ್.ಎ. ಪಾಟೀಲ ಮಾತನಾಡಿ, ತಾಲೂಕಿನ ಅಭಿವೃದ್ಧಿಗೆ ವೇಗ ನೀಡದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.ಇಂಡಿ ತಾಲೂಕಿನಲ್ಲಿ ತೀವ್ರ ಬರಗಾಲ ಆವರಿಸಿದ್ದು, ಸರ್ಕಾರ ತಕ್ಷಣವೇ ತಾಲೂಕನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಬೇಕು. ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣವೇ ಬೆಳೆ ಪರಿಹಾರ ವಿತರಿಸಬೇಕು ಹಾಗೂ ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ವಿಶೇಷ ಪ್ಯಾಕೇಜ್ ಪ್ರಕಟಿಸಬೇಕು. ಇಂಡಿ ತಾಲೂಕು ನಿಂಬೆ ಬೆಳೆಗೆ ಜಗತ್ಪ್ರಸಿದ್ಧಿಯಾಗಿದೆ. ಆದರೆ ಇಲ್ಲಿನ ನಿಂಬೆ ಬೆಳೆಗಾರರು ಸೂಕ್ತ ಮಾರುಕಟ್ಟೆ ಮತ್ತು ಸೌಲಭ್ಯಗಳಿಲ್ಲದೆ ನಲುಗುತ್ತಿದ್ದಾರೆ. ನಿಂಬೆ ಅಭಿವೃದ್ಧಿ…

Read More

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ಪತ್ರಿಕಾ ದಿನಾಚರಣೆ | ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ | ವಾರ್ಷಿಕ ಪ್ರಶಸ್ತಿ ಪ್ರದಾನ | ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪತ್ರಿಕೆ ಹಾಗೂ ಮಾಧ್ಯಮಗಳ ಜವಾಬ್ದಾರಿ ಬಹಳ ದೊಡ್ಡದಿದ್ದು, ಅನ್ಯಾಯವಾದಾಗ ನ್ಯಾಯದ ಪರವಾಗಿ ಬೆಳಕಿಗೆ ತರುವ ಕೆಲಸ ಪತ್ರಕರ್ತರು ಮಾಡುತ್ತಾರೆ. ರಾಜ್ಯಕ್ಕಾಗಿ, ದೇಶಕ್ಕಾಗಿ, ನ್ಯಾಯ, ನೀತಿಯ ಪರವಾಗಿ ಪತ್ರಕರ್ತರ ಪೆನ್ನು ಓಡಬೇಕು. ಬಡವರ ಪರವಾಗಿ, ಅನ್ಯಾಯಕ್ಕೊಳಗಾದವರ ಪರವಾಗಿ ಪತ್ರಕರ್ತರು ಕೆಲಸ ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಲಹೆ ನೀಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ನಗರದ ಕಂದಗಲ್ಲ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಪತ್ರಿಕಾ ದಿನಾಚರಣೆ-2026 ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸದಾ ಒತ್ತಡದಲ್ಲಿರುವ ಪತ್ರಕರ್ತರು ವರ್ಷಕ್ಕೊಮ್ಮೆಯಾದರೂ ಒಂದೆಡೆ ಸೇರಬೇಕು. ಹಣವುಳ್ಳವರು, ದಬ್ಬಾಳಿಕೆ ಮಾಡುವವರ ಕುರಿತು ಬಯಲಿಗೆಳೆಯುವ ಕೆಲಸವನ್ನು ಪತ್ರಕರ್ತರು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಸೌಂದರ್ಯಿಕರಣಕ್ಕೆ ೩೪ ರಸೆಗಳ ಅಭಿವೃದ್ದಿಗೆ ಒಟ್ಟು ರೂ.೨೫ ಕೋಟಿ ಅನುದಾನ ತರಲಾಗಿದ್ದು, ಈ ರಸ್ತೆ ೬ನೇ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ನಗರದ ಪಂಚತಂತ್ರ ಶಾಲೆಯ ಸಮೀಪ ಮುಖ್ಯಮಂತ್ರಿ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ರೂ.೨೦ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನಗರದ ವಿವಿಧ ವಾರ್ಡ್ಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುತ್ತಿದ್ದು, ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಸಾರ್ವಜನಿಕರ ಸಹಕಾರದೊಂದಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಮಾದರಿ ನಗರವನ್ನಾಗಿ ಅಭಿವೃದ್ಧಿ ಪಡಿಸುವುದು ನನ್ನ ಧ್ಯೇಯವಾಗಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ನಗರದ ಪಂಚತಂತ್ರ ಶಾಲೆ ಮುಂದುಗಡೆ ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ರೂ ೨೦…

Read More

ಕುಡಿಯುವ ನೀರಿನ ಸಮಸ್ಯೆ ಕುರಿತ ಪ್ರಗತಿ ಪರಿಶೀಲನೆ ಸಭೆಯಲ್ಲಿ ಶಾಸಕ ಅಶೋಕ ಮನಗೂಳಿ ಅಧಿಕಾರಿಗಳಿಗೆ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಾಗಾವಿ ಬಿಕೆ ಗ್ರಾಪಂ ವ್ಯಾಪ್ತಿಯ ಗೊರವಗುಂಡಗಿ ಗ್ರಾಮದ ಬಗ್ಗೆ, ರಾಂಪುರ ಪಿಎ ಗ್ರಾಪಂ ವ್ಯಾಪ್ತಿಯ ರಾಂಪುರ ಮತ್ತು ಗಣಿಹಾರ ಗ್ರಾಮಗಳ ವರದಿ ನೀಡಬೇಕು, ಗುಬ್ಬೆವಾಡ ಗ್ರಾಪಂ ವ್ಯಾಪ್ತಿಯ ಬೋರಗಿ ಮತ್ತು ಪುರದಾಳ ಗ್ರಾಮಗಳಲ್ಲಿ ೨ ಬೋರವೆಲ್‌ಬೇಕು ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದರು.ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಸಂಜೆ ಹಮ್ಮಿಕೊಂಡ ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ಷೇತ್ರದ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯತ್‌ಗಳಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೆ ತಕ್ಷಣ ವರದಿ ನೀಡಲು ಅಭಿವೃದ್ಧಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಅದೇ ರೀತಿ ಚಾಂದಕವಟೆ ಪಂಚಾಯತ್ ವ್ಯಾಪ್ತಿಯ ಕೆರೆಯಲ್ಲಿ ಟಿಸಿ ಬದಲಿಸಬೇಕು. ಸುರಗಿಹಳ್ಳಿ ಗ್ರಾಮದಲ್ಲಿ ಪದೇ ಪದೇ ಟಿಸಿ ಸುಡುತ್ತಿದೆ ಪಿಡಿಓ ಮಾಹಿತಿ ನೀಡಿಬೇಕು ಎಂದರು.ಬ್ಯಾಕೋಡ ಗ್ರಾಮ…

Read More

ಉತ್ತಮ ಆರೋಗ್ಯಕ್ಕಾಗಿ ವ್ಯಾಯಾಮ ಮಾಡಲು ಶಾಸಕ ಅನಿಲ್ ಚಿಕ್ಕಮಾದು ಸಲಹೆ ಉದಯರಶ್ಮಿ ದಿನಪತ್ರಿಕೆ ಎಚ್ ಡಿ ಕೋಟೆ: ಇತ್ತೀಚಿನ ದಿನಗಳಲ್ಲಿ ನಮ್ಮ ತಾಲೂಕಿನಲ್ಲಿ ಲಾಟರಿ, ಡ್ರಗ್ಸ್, ಗಾಂಜಾ, ಜೂಜಾಟ ಪ್ರಕರಣಗಳು ಕಡಿಮೆಯಾಗಿವೆ. ಕೇರಳ ಲಾಟರಿ ಸಂಬಂಧ 18 ಜನರ ವಿರುದ್ಧ ಕೇಸ್ ದಾಖಲಿಸಿ, ಕಾನೂನು ಕ್ರಮ ಕೈಗೊಂಡಿದ್ದಾರೆ. ಇದಕ್ಕೆ ನಾನು ಪೊಲೀಸರಿಗೆ ಧನ್ಯವಾದ ಹೇಳುತ್ತೇನೆ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಎಚ್ ಡಿ ಕೋಟೆ ಪೊಲೀಸ್ ಠಾಣೆ ವತಿಯಿಂದ ಹಮ್ಮಿಕೊಂಡಿದ್ದ ಡ್ರಗ್ಸ್ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯುವಕರು ತಮ್ಮ ಗ್ರಾಮಗಳಲ್ಲಿ ಬೆಳಗ್ಗೆ 5 ಅಥವಾ 6 ಗಂಟೆಗೆ ಎದ್ದು ವ್ಯಾಯಾಮ ಮಾಡಬೇಕು. ವಾಕಿಂಗ್, ಜಾಗಿಂಗ್ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು. ಯಾರನ್ನ ಸ್ನೇಹ ಮಾಡಬೇಕು, ಮಾಡಬಾರದು ಎಂಬುದರ ಅರಿವು ನಿಮಗೆ ಇರಬೇಕು. ಯಾಕಂದ್ರೆ ಇತ್ತೀಚಿನ ದಿನಗಳಲ್ಲಿ ಸ್ನೇಹಿತರಿಂದಲೇ ಅದೆಷ್ಟೋ ಮಂದಿ ದಾರಿ ತಪ್ಪುತ್ತಿದ್ದಾರೆ. ಅಡ್ಡದಾರಿ ಹಿಡಿಯುತ್ತಿದ್ದಾರೆ. ಹಣವನ್ನು ಯಾವುದೇ ವಯಸ್ಸಿನಲ್ಲಾದರೂ ಯಾವಾಗಲಾದರೂ ಸಂಪಾದನೆ…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಎ. ಬಿ. ಜತ್ತಿ ಪದವಿಪೂರ್ವ ಕಾಲೇಜಿನಲ್ಲಿ ಶಾಲಾ ಸಂಸತ್ ಚುನಾವಣೆ ನಡೆಯಿತು.ಚುನಾವಣೆ ನಿಮಿತ್ಯ ಕಾಲೇಜು ವಿದ್ಯಾರ್ಥಿಗಳಿಗೆ ಶಾಲಾ ಸಂಸತ್ ಕುರಿತು ಪ್ರಾಚಾರ್ಯ ಕವಿತಾ ಹೊಸಟ್ಟಿ ಮಾತನಾಡಿ, ಭಾರತವು ಒಂದು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಮತ ಚಲಾಯಿಸು ಹಕ್ಕು ಪ್ರಜೆಗಳಿಗೆ ಮಾತ್ರ ಇರುವದು. ಮುಂದಿನ ದಿನಗಳಲ್ಲಿ ಇಂದಿನ ಯುವಕರು ನಾಳಿನ ನಾರಿಕರಾಗುವರು. ಬದ್ರಬುನಾದಿ ರಾಷ್ಟ್ರದ ನಿರ್ಮಾಣಕ್ಕೆ ಯುವಕರ ಪಾತ್ರ ಮುಖ್ಯವಾಗಿದೆ. ಚುನಾವಣೆ ಹೇಗೆ ನಡೆಯುತ್ತದೆ ಎಂಬುದನ್ನು ಕಾಲೇಜು ಮಟ್ಟದಲ್ಲಿ ವಿದ್ಯಾರ್ಥಿಗಳಲ್ಲಿ ಮತದಾನದ ಅರಿವು ಇದರಿಂದ ಮೂಡುತ್ತದೆ ಎಂದರು.ಬಿ. ಎಲ್. ನಾಟೀಕಾರ, ಎಂ. ಕೆ. ತುಂಗಳ ಮಾತನಾಡಿ ಮತದಾನದ ನಮ್ಮ ಹಕ್ಕು, ಈ ಹಕ್ಕನ್ನು ಯಾರು ಕಸಿದುಕೋಳ್ಳುವದಿಲ್ಲ. ಪ್ರತಿಯೊಬ್ಬರು ಅರಿತುಕೊಳ್ಳಬೇಕು. ಮುಂಬರುವ ದಿನಗಳಲ್ಲಿ ಭಾರತದ ಭವಿಷ್ಯ ನಿಮ್ಮ ಕೈಯಲ್ಲಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಉಪನ್ಯಾಸಕರು, ಭೋದಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಒಬ್ಬ ಶಿಕ್ಷಕನ ನಿಜವಾದ ಸಂಪತ್ತು ಕಟ್ಟಡಗಳಲ್ಲ ಅಥವಾ ಅಥವಾ ಪ್ರಶಸ್ತಿಗಳಲ್ಲ. ತನ್ನಿಂದ ಶಿಕ್ಷಣ ಪಡೆದ ವಿದ್ಯಾರ್ಥಿಗಳ ಸಾಧನೆಗಳೇ ಅವನ ದೊಡ್ಡ ಹೆಮ್ಮೆ ಎಂದು ಶಿಕ್ಷಕ ಎಸ್.ಜಿ.ನಂದಾ ಹೇಳಿದರು.ಬಬಲೇಶ್ವರ ತಾಲ್ಲೂಕಿನ ಲಿಂಗದಳ್ಳಿಯಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಇಂದು ನನ್ನ ಅನೇಕ ವಿದ್ಯಾರ್ಥಿಗಳು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸ್ಥಾನಗಳನ್ನು ಅಲಂಕರಿಸಿರುವುದನ್ನು ನೋಡಿದಾಗ ಶಿಕ್ಷಕನಾಗಿ ನನಗೆ ಹೆಮ್ಮೆಯಾಗುತ್ತದೆ.ಶಿಕ್ಷಣ ಎಂದರೆ ಕೇವಲ ಪುಸ್ತಕದ ಜ್ಞಾನವಲ್ಲ. ಉತ್ತಮ ವ್ಯಕ್ತಿತ್ವ, ಶಿಸ್ತು, ಮಾನವೀಯತೆ, ಪ್ರಾಮಾಣಿಕತೆ ಮತ್ತು ದೇಶಪ್ರೇಮವನ್ನು ಬೆಳೆಸುವುದೇ ನಿಜವಾದ ಶಿಕ್ಷಣ. ಈ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗುತ್ತಾರೆ.ಇಂದಿನ ಶಿಕ್ಷಕರು ಅತ್ಯುತ್ತಮ ರೀತಿಯಲ್ಲಿ ಶಾಲೆಯನ್ನು ಮುನ್ನಡೆಸುತ್ತಿದ್ದಾರೆ ಎಂಬುದು ಸಂತಸದ ವಿಷಯ. ಅವರಿಗೆ ನನ್ನ ಅಭಿನಂದನೆಗಳು. ಪ್ರೀತಿಯ ವಿದ್ಯಾರ್ಥಿಗಳೇ, ನಿಮ್ಮ ಶಿಕ್ಷಕರನ್ನು ಗೌರವಿಸಿ. ಅವರು ನೀಡುವ ಮಾರ್ಗದರ್ಶನವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ. ನಿಮ್ಮ ಯಶಸ್ಸೇ ನಿಮ್ಮ ಶಿಕ್ಷಕರಿಗೆ ನೀಡುವ ಅತ್ಯುತ್ತಮ ಗೌರವ ಎಂದು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲ್ಲೂಕಿನ ತೆಗ್ಗಿಹಳ್ಳಿ ಗ್ರಾಮದಲ್ಲಿ ವಸತಿ ಶಾಲೆ ನಿರ್ಮಾಣಕ್ಕಾಗಿ ಮಠದ ಜಮೀನು ನೀಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ಹಾಗೂ ಶ್ರೀ ಮಠದ ಆಡಳಿತ ಮಂಡಳಿಯವರು ಶ್ರೀಮಠದ ಅಭಿನವ ಮುರುಘೇಂದ್ರ ಶಿವಾಚಾರ್ಯರ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್‌ಕುಮಾರ್ ಪಿ. ಅವರಿಗೆ ಮನವಿ ಸಲ್ಲಿಸಿದರು.ಈ ಕುರಿತು ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅಧಿಕೃತ ಮನವಿ ಪತ್ರ ಸಲ್ಲಿಸಲಾಗಿದ್ದು, ಮಠದ ಹಿಂದಿನ ಉತ್ತರಾಧಿಕಾರಿಗಳು ಅಧಿಕಾರ ದುರುಪಯೋಗಪಡಿಸಿಕೊಂಡು ಜಮೀನು ಬಿಟ್ಟುಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.ತೆಗ್ಗಿಹಳ್ಳಿ ಗ್ರಾಮದ ಸರ್ವೆ ನಂಬರ್ ೮೯/೧ರಲ್ಲಿರುವ ಶ್ರೀ ಶಿವಾನಂದ ಸ್ವಾಮಿಗಳ ದೇವಸ್ಥಾನದ ಮಠಕ್ಕೆ ಸೇರಿದ ೫ ಎಕರೆ ಜಮೀನನ್ನು ಈ ಹಿಂದೆ ವಸತಿ ಶಾಲೆ ಸ್ಥಾಪನೆಗಾಗಿ ದಾನಪತ್ರದ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹೆಸರಿಗೆ ಮಾಡಿಕೊಡಲಾಗಿತ್ತು. ಆದರೆ, ಹಿಂದಿನ ಮಠದ ಮುಖ್ಯಸ್ಥರಾದ ವಿಜಯ ಮಹಾಂತೇಶ ಪ್ರಭಯ್ಯ ಕೆರಿಮಠ ಅವರು ಗ್ರಾಮಸ್ಥರ ಹಾಗೂ ಮಠದ ಆಡಳಿತ ಮಂಡಳಿಯ ಒಪ್ಪಿಗೆ ಪಡೆಯದೇ, ಯಾವುದೇ ಕರಾರು ದಾಖಲೆಗಳಿಲ್ಲದೆ ಈ ಜಮೀನನ್ನು ಸರ್ಕಾರಕ್ಕೆ…

Read More