Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಜನಸಾಮಾನ್ಯರಲ್ಲಿ ಇಲ್ಲದ ಗೊಂದಲ-ಆತಂಕ ಮೂಡಿಸುವುದು ಬೇಡ ಎಂದ ಸಚಿವ ಎಂ.ಬಿ ಪಾಟೀಲ್ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ 10 ಸರ್ವೇ ನಂಬರುಗಳ 11 ಎಕರೆ ಆಸ್ತಿ ಮಾತ್ರ ವಕ್ಫ್ ಆಸ್ತಿ ಎಂದು ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಅದರಲ್ಲಿ 10 ಎಕರೆ 14 ಗುಂಟೆ ಖಬರಸ್ತಾನ ಇದೆ. ಉಳಿದದ್ದು ಈದ್ಗಾ, ಮಸೀದಿ ಇತ್ಯಾದಿ ಕಟ್ಟಡಗಳಿವೆ ಹಾಗೂ ಈ ಭೂಮಿಯು ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಸೇರಿದ್ದು, ಯಾವುದೇ ರೈತರ ಖಾಸಗಿ ಜಮೀನು ಒಳಪಟ್ಟಿಲ್ಲ ಎಂಬುದನ್ನು ಗಮನಿಸಬೇಕು ಎಂದು ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲೆ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.ಈ ಕುರಿತು ಶನಿವಾರ ಪ್ರಕಟಣೆ ನೀಡಿರುವ ಅವರು ಹಜರತ್ ಪೀರ ದಸ್ತಿಗೀರ ಸಾಬ್ ಮೊಹಮ್ಮದ ಚಿಂಗ್ ಸಿಯಾ ತಖಿಯಾ ದರ್ಗಾ ವಿಜಯಪುರ ಮಹಾಲಬಾಗಯತ ಸೇರಿದ ಆಸ್ತಿಯಾಗಿದ್ದು, ಕೆಳಗಡೆ ತಪ್ಪಾಗಿ ಹೊನವಾಡ ಎಂದು ಸೇರಿದೆ. ಇದು ಗೊಂದಲಕ್ಕೆ ಕಾರಣವಾಗಿದೆ. ಈ ಯಾವ ರೈತರಿಗೂ ವಕ್ಫ್ ಸಮಿತಿ ಅಥವಾ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶುಕ್ರವಾರ ರಾತ್ರಿ ದೆಹಲಿಯ ವಿಕಾಸಪುರಿ ವಿಧಾನಸಭಾ ಕ್ಷೇತ್ರದಲ್ಲಿ ಅರವಿಂದ್ ಕೇಜ್ರಿವಾಲ್ ರವರ ಮೇಲಿನ ಬಿಜೆಪಿ ಯುವ ಮೋರ್ಚಾದ ಗೂಂಡಾಗಳ ಹಲ್ಲೆ ತೀವ್ರ ಖಂಡನೀಯವಾಗಿದ್ದು, ಬಿಜೆಪಿ ಗೂಂಡಾ ನಾಯಕರು ಹತಾಶೆಯಿಂದ ಈ ರೀತಿಯ ದಾಳಿಗೆ ಕೈ ಹಾಕಿದ್ದಾರೆ. ಈ ಕೂಡಲೇ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ರಾಷ್ಟ್ರದ ಮುಂದೆ ಕ್ಷಮೆ ಯಾಚಿಸಬೇಕೆಂದು ವಿಜಯಪುರ ಆಮಆದ್ಮಿ ಪಾಕ್ಟಿ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಅಗ್ರಹಿಸಿದರು.”ರಾಷ್ಟ್ರೀಯ ಪಕ್ಷವೊಂದರ ರಾಷ್ಟ್ರೀಯ ಸಂಚಾಲಕ ಹಾಗೂ 3 ಬಾರಿ ಮುಖ್ಯಮಂತ್ರಿಯಾಗಿದ್ದ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಪೊಲೀಸರ ಜತೆ ಶಾಮೀಲಾಗಿ ಬಿಜೆಪಿ ಗುಂಪೊಂದು ದಾಳಿ ನಡೆಸುತ್ತಿದೆ.ಇದು ಗಂಭೀರ ಹಾಗೂ ಆತಂಕದ ವಿಚಾರ. ಖೊಟ್ಟಿ ಪ್ರಕರಣಗಳನ್ನು ದಾಖಲಿಸಿ ಆಮ್ ಆದ್ಮಿ ಪಕ್ಷದ ನಾಯಕರುಗಳನ್ನು ಜೈಲಿನಲ್ಲಿಟ್ಟರೂ ಸಹ ರಾಷ್ಟ್ರದ ಜನತೆ ನಮ್ಮೊಂದಿಗೆ ಇರುವುದನ್ನು ಸಹಿಸಲಾಗದೆ ಹತಾಶೆಯಿಂದ ಈ ರೀತಿಯ ದಾಳಿಗಳಿಗೆ ಬಿಜೆಪಿ ಗೂಂಡಾಗಳು ಮುಂದಾಗಿರುವುದು ಅಸಹ್ಯ ವೆನಿಸುತ್ತಿದೆ” ಎಂದು ಭೋಗೇಶ್ ಸೋಲಾಪುರ್ ಕಿಡಿಕಾರಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಭಾವನಾ ವಿಕ್ರಂ ಮಾರು ಅವರು ಸಲ್ಲಿಸಿದ್ದ “ಎ ಕಂಪಾರೇಟಿವ್ ಸ್ಟಡಿ ಆಫ್ ದ ಕರೆಂಟ್ ಸ್ಟೇಟಸ್ ಅಂಡ್ ಫ್ಯೂಚರ್ ನೀಡ್ಸ್ ಆಫ್ ಲೈಬ್ರರಿ ಆಟೋಮೇಷನ್ ಅಂಡ್ ನೆಟ್ವರ್ಕಿಂಗ್ ಇನ್ ಡಿಲೆವರಿಗ್ ಲೈಬ್ರರಿ ಸರ್ವಿಸಸ್ ಅಟ್ ಗೋವಾ ಸ್ಟೇಟ್ ಸೆಂಟ್ರಲ್ ಲೈಬ್ರರಿ ಅಂಡ್ ಕರ್ನಾಟಕ ಸ್ಟೇಟ್ ಸೆಂಟ್ರಲ್ ಲೈಬ್ರರಿ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.ಭಾವನಾ ವಿಕ್ರಂ ಮಾರು ಅವರು ಸಮಾಜ ವಿಜ್ಞಾನ ಅಧ್ಯಯನ ವಿಭಾಗದ ಪ್ರೊ. ಪಿ. ಜಿ. ತಡಸದ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಭಾವನಾ ವಿಕ್ರಂ ಮಾರು ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಖರ ಅಭಿನಂದಿಸಿದ್ದಾರೆ.
– ಜಯಶ್ರೀ .ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರು, ಬೆಳಗಾವಿ ಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ನಮ್ಮ ಹಿಂದಿನ ಹಿರಿಯರು ಪಡುತ್ತಿದ್ದ ಶ್ರಮಜೀವನ ಈಗಿಲ್ಲ. ಆದರೂ ವರ್ಗ ವಯಸ್ಸು ಲಿಂಗಭೇದವನ್ನು ಲೆಕ್ಕಿಸದೇ ದಿನದಿಂದ ದಿನೇ ಒತ್ತಡ ಹೆಚ್ಚುತ್ತಲೇ ಇದೆ. ಶಾಂತವಿರಬೇಕೆನ್ನುವ ಮನಸ್ಸುಗಳು ಸಹ ಗದ್ದಲ ಗೋಜಲಿನಲ್ಲೇ ದಿನಗಳನ್ನು ದೂಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದಿನವಿಡೀ ಏನೂ ಕೆಲಸ ಮಾಡದಿದ್ದರೂ ದಣಿವು ಕಾಡುತ್ತದೆ. ಅಂತಹ ದೇಹಕ್ಕೆ ಒಂದೇ ಒಂದು ಸಣ್ಣ ದನಿ ಕೇಳಿದರೂ ರೇಜಿಗೇಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಮನೆಯಿಂದ ದೂರ ಇರುವವರು, ಬೇರೆ ಊರಿನಲ್ಲಿ ಕೆಲಸ ನಿರ್ವಹಿಸುವವರು ಪುಟ್ಟ ಬೀಜದ ಮೊಳಕೆಯಂತೆ ಹೊಸ ಆಸೆಯನ್ನು ಹೊತ್ತು ವಾರಕ್ಕೆ ಒಮ್ಮೆ ಅಥವಾ ಎರಡು ಸಲ ಇಲ್ಲವೇ ವಾರಾಂತ್ಯಕ್ಕ್ಲೆ ಬಂದು ಮನೆಯವರೊಂದಿಗೆ ಕಾಲ ಕಳೆಯುವ ವಾಡಿಕೆ ಹಲವರದು. ಇದಕ್ಕೆ ಸಂತೋಷದಿಂದ ಕೈ ಜೋಡಿಸುವ ಜೋಡಿಗಳು ಜೊತೆ ಜೊತೆಯಲಿ ಕಾಲ ಕಳೆಯಬೇಕೆನ್ನುವ ಬಯಕೆ ಮನದಲ್ಲಿದ್ದರೂ ಒತ್ತಡದಿಂದಾಗಿ ಬಯಕೆ ಕೈಗೂಡುವುದು ಕಡಿಮೆಯೇ ಅನ್ನಿ.ಕೈತುಂಬ ಹಣ ಎಣಿಸುವ ಹಲವಾರು ಜನರ ಬದುಕು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೧ನೇ ಜಾನುವಾರು ಗಣತಿಯನ್ನು ಮಹಾನಗರ ಪಾಲಿಕೆ ಮಹಾಪೌರೆ ಶ್ರೀಮತಿ ಮಾಹೇಜಬಿನ ಅ ಹೊರ್ತಿ ಅ.೨೫ರಂದು ಅಧಿಕೃತವಾಗಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಸಹಾಯಕ ನಿರ್ದೆಶಕ ಡಾ. ಬಿ ಎಸ್ ಕನಮಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿಜಯಪುರ ತಾಲ್ಲೂಕಿನಲ್ಲಿ ಒಟ್ಟು ೧೭ ಎಣಿಕೆದಾರರು, ೨ ಜನ ಮೇಲ್ವಿಚಾರಕರಿದ್ದು, ವಿಜಯಪುರ ಶಹರದಲ್ಲಿ ಒಬ್ಬ ಎಣಿಕೆದಾರರು ೬೦೦೦ ಮನೆ ಎಣಿಕೆಯನ್ನು ಮಾಡುತ್ತಾರೆ. ಮತ್ತು ಗ್ರಾಮಿಣ ಪ್ರದೇಶದಲ್ಲಿ ೪೫೦೦ ಮನೆಯನ್ನು ಒಬ್ಬ ಎಣಿಕೆದಾರರು ಎಣಿಕೆ ಮಾಡುತ್ತಾರೆ. ಈ ಬಾರಿಯ ಜಾನುವಾರು ಗಣತಿ ಕಾರ್ಯಗಳನ್ನು ಆಫ್ಲೈನ್ ಮೂಡ್’ನಲ್ಲಿಯೂ ಸಹ ನಿರ್ವಹಿಸಲೂ ಅನುವುವಾಗುವಂತೆ ಸಾಫ್ಟವೇರ್ ಅಭಿವೃದ್ಧಿ ಪಡಿಸಲಾಗಿದ್ದೂ, ಇದಕ್ಕೆ ಸಂಬಂಧಿಸಿದಂತೆ ಗಣತಿ ಕಾರ್ಯ ಪ್ರಾರಂಭಿಸುವ ಮುನ್ನ ಎಲ್ಲ ಗಣತಿದಾರರು ತಮ್ಮ ತಮ್ಮ ಮೂಬೈಲ್’ಗಳಲ್ಲಿ ಜಾನುವಾರು ಗಣತಿಯ ಮೊಬ್ಯಲ್ ಅಪ್ಲಿಕೇಶನ್’ನ್ನು ಡೌನಲೋಡ್ ಮಾಡಿಕೊಂಡು ಸದರಿ ಜಾನುವಾರು ಗಣತಿಯನ್ನು ಈ ಸಲ ನಿರ್ವಹಿಸಲಾಗುತ್ತದೆ. ಈ ಜಾನುವಾರು ಗಣತಿ ಕಾರ್ಯಕ್ರಮವು ಅ.೨೫ ರಿಂದ ಫೆಬ್ರುವರಿ ೨೦೨೫ ರ ಒಳಗಾಗಿ ಜಾನುವಾರು ಗಣತಿಯನ್ನು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಭಾವನಾ ವಿಕ್ರಂ ಮಾರು ಅವರು ಸಲ್ಲಿಸಿದ್ದ “ಎ ಕಂಪಾರೇಟಿವ್ ಸ್ಟಡಿ ಆಫ್ ದ ಕರೆಂಟ್ ಸ್ಟೇಟಸ್ ಅಂಡ್ ಫ್ಯೂಚರ್ ನೀಡ್ಸ್ ಆಫ್ ಲೈಬ್ರರಿ ಆಟೋಮೇಷನ್ ಅಂಡ್ ನೆಟ್ವರ್ಕಿಂಗ್ ಇನ್ ಡಿಲೆವರಿಗ್ ಲೈಬ್ರರಿ ಸರ್ವಿಸಸ್ ಅಟ್ ಗೋವಾ ಸ್ಟೇಟ್ ಸೆಂಟ್ರಲ್ ಲೈಬ್ರರಿ ಅಂಡ್ ಕರ್ನಾಟಕ ಸ್ಟೇಟ್ ಸೆಂಟ್ರಲ್ ಲೈಬ್ರರಿ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.ಭಾವನಾ ವಿಕ್ರಂ ಮಾರು ಅವರು ಸಮಾಜ ವಿಜ್ಞಾನ ಅಧ್ಯಯನ ವಿಭಾಗದ ಪ್ರೊ. ಪಿ. ಜಿ. ತಡಸದ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಭಾವನಾ ವಿಕ್ರಂ ಮಾರು ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಕರ ಅಭಿನಂದಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಎಲ್ಲ ಅಂಗಡಿಕಾರರು ತಮ್ಮ ಅಂಗಡಿಗಳ ನಾಮಫಲಕದಲ್ಲಿ ೬೦% ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರ ನಿಯಮ ರೂಪಿಸಿದೆ. ಎಲ್ಲರೂ ತಪ್ಪದೇ ಈ ನಿಯಮವನ್ನು ಪಾಲಿಸಬೇಕು ಎಂದು ತಹಶೀಲ್ದಾರ ಬಲರಾಮ ಕಟ್ಟಿಮನಿ ಹೇಳಿದರು.ಪಟ್ಟಣದ ಪುರಸಭೆ ಸಭಾಭವನದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.ಬೇರೆ ಭಾಷೆಯ ನಾಮ ಫಲಕವನ್ನು ಬಳಸುವದರಿಂದ ಕನ್ನಡಕ್ಕೆ ಅಪಮಾನ ಮಾಡಿದಂತಾಗುತ್ತದೆ. ಹಾಗಾಗಿ ಎಲ್ಲರೂ ಕಡ್ಡಾಯವಾಗಿ ಕನ್ನಡ ಭಾಷೆಗೆ ಹೆಚ್ಚು ಒತ್ತು ನೀಡುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಂತಾಗಬೇಕು ಎಂದರು.ಈ ವೇಳೆ ಪುರಸಭೆ ಮುಖ್ಯಾಧಿಖಾರಿ ಮಲ್ಲನಗೌಡ ಬಿರಾದಾರ ಮಾತನಾಡಿ, ಸರ್ಕಾರದ ಆದೇಶವನ್ನು ಪಾಲಿಸುವದು ನಮ್ಮೆಲ್ಲರ ಕರ್ತವ್ಯ. ನ೧ ರಿಂದ ಎಲ್ಲ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ೬೦ ರಷ್ಟು ಕನ್ನಡ ಬಾಷೆಯನ್ನು ಬಳಸಬೇಕು. ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆಯೂ ಸಹ ಆದೇಶವಾಗಿದ್ದು ಅದನ್ನೂ ಕಡ್ಡಾಯವಾಗಿ ಎಲ್ಲ ಪಟಾಕಿ ವ್ಯಾಪಾರಸ್ಥರು ತಹಸೀಲ್ದಾರ ಕಚೇರಿಯಿಂದ ಅನುಮತಿ ಪಡೆದು ಪಾಲಿಸಬೇಕು. ನಿಯಮಗಳನ್ನ ಮೀರಿ ನಡೆದು…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ೨೦೨೪-೨೫ ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ ೧೦೦ ಸಂಖ್ಯಾಬಲದ ಒಟ್ಟು ೬೨ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-೨ ಆದೇಶ ಹೊರಡಿಸಿದ್ದಾರೆ.ಈ ವಸತಿ ನಿಲಯದ ಮಂಜೂರಾತಿಗೆ ಕ್ಷೇತ್ರದ ಶಾಸಕ, ಸಚಿವ ಶಿವಾನಂದ ಪಾಟೀಲರು ಪ್ರಸ್ತಾವನೆ ಸಲ್ಲಿಸಿದ ಮೇರೆಗೆ ಬಸವನಬಾಗೇವಾಡಿ ತಾಲೂಕಿಗೆ ಒಂದು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಮಂಜೂರಾಗಿದೆ ಎಂದು ಶಾಸಕ, ಸಚಿವ ಶಿವಾನಂದ ಪಾಟೀಲ ಆಪ್ತಸಹಾಯಕ ಐ.ಟಿ.ಕೊಪ್ಪಳ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ನ.೧ ರಂದು ನಡೆಯುವ ಕರ್ನಾಟಕ ರಾಜ್ಯೋತ್ಸವದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವ ಜೊತೆಗೆ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ವಿವಿಧ ಗಣ್ಯರು ಭಾಗವಹಿಸುವ ಮೂಲಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವ ಮೂಲಕ ಕನ್ನಡ ರಾಜ್ಯೋತ್ಸವ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ಗುರುವಾರ ಜರುಗಿದ ಕರ್ನಾಟಕ ರಾಜ್ಯೋತ್ಸವ ಆಚರಣೆ ಕುರಿತಂತೆ ಕರೆಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನವೆಂಬರ್ ೧ ರಂದು ಬೆಳಗ್ಗೆ ೮ ಗಂಟೆಗೆ ತಮ್ಮ ಶಾಲಾ-ಕಾಲೇಜುಗಳಲ್ಲಿ, ವಿವಿಧ ಇಲಾಖೆಯ ಕಚೇರಿಗಳಲ್ಲಿ ನಾಡದೇವಿ ಭುವನೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕನ್ನಡ ನಾಡು-ನುಡಿಗೆ ನಮನ ಸಲ್ಲಿಸಿದ ನಂತರ ೮.೩೦ ಗಂಟೆಗೆ ಪಟ್ಟಣದ ಬಸವೇಶ್ವರ ವೃತ್ತದಿಂದ ಆರಂಭವಾಗುವ ಕನ್ನಡ ರಾಜ್ಯೋತ್ಸವದ ಮೆರವಣಿಗೆಯಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲಾ-ಕಾಲೇಜುಗಳ ಮುಖ್ಯಸ್ಥರು, ಸಿಬ್ಬಂದಿಗಳು, ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಜನತೆ ಭಾಗವಹಿಸುವ ಮೂಲಕ ಮೆರವಣಿಗೆಯನ್ನು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶುಕ್ರವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ಹಾಗೂ ನಗರದ ಜಿಲ್ಲಾ ಪಂಚಾಯತ್ ಹತ್ತಿರವಿರುವ ಈಜುಕೊಳಕ್ಕೆ (ಸ್ವೀಮ್ಮಿಂಗ್ ಫೂಲ್) ಜಿಲ್ಲಾಧಿಕಾರಿ ಟಿ. ಭೂಬಾಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಅಭ್ಯಾಸಕ್ಕೆ ಆಗಮಿಸುವ ಕ್ರೀಡಾಪಟುಗಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಕುಡಿಯುವ ನೀರಿನ ವ್ಯವಸ್ಥೆ, ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಮಳೆ ನೀರು ಕ್ರೀಡಾಂಗಣದಲ್ಲಿ ನಿಲ್ಲದಂತೆ ನೋಡಿಕೊಂಡು ಸ್ವಚ್ಚತೆಗೆ ಆದ್ಯತೆ ನೀಡಬೇಕು. ಕ್ರೀಡಾಂಗಣ ದೊಡ್ಡದಾಗಿರುವುದರಿಂದ ಹೆಚ್ಚಿನ ಸ್ವಚ್ಚತಾ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಕ್ರಮವಹಿಸಬೇಕು. ಕ್ರೀಡಾಂಗಣದ ಆವರಣದಲ್ಲಿರುವ ಅಂಗಡಿಗಳ ಬಾಡಿಗೆ ದರ ಪರಿಷ್ಕರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.ನಗರದ ಕಂದಗಲ್ ಹನುಮಂತರಾಯ ರಂಗಮಂದಿರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ರಂಗಮಂದಿರದ ನವೀಕರಣಕ್ಕಾಗಿ ಕಾಮಗಾರಿ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ರಂಗಮಂದಿರವನ್ನು ಆಕರ್ಷಣೀಯವಾಗಿಸುವ ನಿಟ್ಟಿನಲ್ಲಿ ಪೇಟಿಂಗ್, ಗೋಡೆ ಚಿತ್ರ ಬರೆಯಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದ ಅವರು, ಆವರಣದಲ್ಲಿ…
