Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ವತಿಯಿಂದ ೨೦೨೪-೨೫ ನೇ ಸಾಲಿನಲ್ಲಿ ರಾಜ್ಯ ಸಭಾ ಸಂಸದರಾದ ಶ್ರೀಮತಿ ಸುಧಾ ಮೂರ್ತಿ ಇವರ ಸಂಸದರ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಾಗರಿಕ ಸೌಲಭ್ಯ ವಸತಿ ನಿಲಯದ ಭೂಮಿ ಪೂಜೆ ಕಾರ್ಯಕ್ರಮವು ಅಕ್ಟೋಬರ್ ೨೭ ರಂದು ಬೆಳಿಗ್ಗೆ ೯.೩೦ ಕ್ಕೆ ಜರುಗಲಿದೆ.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ. ಬಿ. ಪಾಟೀಲ ಅವರು ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ, ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯಸಭಾ ಸಂಸದೆ ಡಾ. ಸುಧಾಮೂರ್ತಿ ಘನ ಉಪಸ್ಥಿತಿ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ತಿನ ಶಾಸಕರಾದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇವರಹಿಪ್ಪರಗಿ ೧೧೦ ಕೆವ್ಹಿ ಹತ್ತಿರ ಲಿಲೋ ಗೋಪುರದ ಮೇಲೆ ಜಂಪ್ ಜೋಡಿಸುವ ಕಾಮಗಾರಿ ಕೈಗೊಂಡಿರುವುದರಿಂದ ೧೧೦ ಕೆವ್ಹಿ ಅಥರ್ಗಾ, ದೇವರಹಿಪ್ಪರಗಿ ಹಿರೇಮಸಳಿ, ೩೩ ಕೆವ್ಹಿ ಕಡ್ಲೇವಾಡ, ಕೋರವಾರ ವಿದ್ಯುತ್ ವಿತರಣಾ ಕೇಂದ್ರಗಳಿಮದ ಸರಬರಾಜಾಗುವ ಎಲ್ಲ ೧೧ ಕೆವ್ಹಿ ಮಾರ್ಗಗಳಿಗೆ ಅ.೨೮ರಂದು ಬೆಳಿಗ್ಗೆ ೬-೩೦ ರಿಂದ ೯-೩೦ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸದರಿ ಮಾರ್ಗಗಳ ಮೇಲೆ ಬರುವ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಇಂಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಪಾರದರ್ಶಕವಾಗಿ ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಹುದ್ದೆಗಳ ನೇಮಕಾತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಖಾಲಿ ಇರುವ ೩೧೩ ಅಂಗನವಾಡಿ ಕಾರ್ಯಕರ್ತೆ ಹಾಗೂ ೮೫೭ ಅಂಗನವಾಡಿ ಸಹಾಯಕಿಯರನ್ನು ಗೌರವಧನದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಯಾವುದೇ ಮಧ್ಯವರ್ತಿಗಳು, ಅಧಿಕಾರಿ-ಸಿಬ್ಬಂದಿಗಳು ಅನ್ಯ ಮಾರ್ಗದಿಂದ ಆಯ್ಕೆಯಾಗಿ ಹಣದ ಬೇಡಿಕೆ ಇಟ್ಟಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಆಯ್ಕೆ ಪ್ರಕ್ರಿಯೆಯ ಮುನ್ನ ಪ್ರಥಮ ಹಂತದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲೂಕಾ ಮಟ್ಟದ ಪರಿಶೀಲನಾ ಸಮಿತಿ ಸಭೆಯಲ್ಲಿ ಅರ್ಜಿ ಪರಿಶೀಲಿಸಿ, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಇಲಾಖಾ ಮಾರ್ಗಸೂಚಿಯಂತೆ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತದೆ. ನೇಮಕಾತಿ ಬಯಸುವ ಅಭ್ಯರ್ಥಿಗಳು ಯಾವುದೇ ಹಣಕಾಸಿನ ವ್ಯವಹಾರ ಮಾಡಿ ಮೋಸ ಹೋಗದಂತೆ ಅವರು ಎಚ್ಚರಿಕೆ ನೀಡಿದ್ದಾರೆ.

Read More

ಕನ್ನಡ ನಾಮಫಲಕ ಅಳವಡಿಕೆಯಲ್ಲಿ ಲೋಪವಾದಲ್ಲಿ ಮುಖ್ಯಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಆಸ್ತಿ ತೆರಿಗೆ, ನೀರಿನ ಕರ, ವಾಣಿಜ್ಯ ಮಳಿಗೆಗಳ ಬಾಡಿಗೆ, ಜಾಹೀರಾತು, ಟ್ರೇಡ್ ಲೈಸನ್ಸ್ ವಸೂಲಾತಿಗಳಲ್ಲಿ ಪ್ರಗತಿ ಸಾಧಿಸುವಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ತೆರಿಗೆ ವಸೂಲಾತಿಯಲ್ಲಿ ಶೇಕಡಾ ನೂರರಷ್ಟು ಪ್ರಗತಿ ಸಾಧಿಸಬೇಕು. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಎಸ್‌ಎಫ್‌ಸಿ, ೧೪ನೇ, ೧೫ನೇ ಹಣಕಾಸ, ಕುಡಿಯುವ ನೀರು, ವಸತಿ, ಎಸ್‌ಬಿಎಂ ೧.೦, ೨.೦ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅಂಗಡಿ ಮುಂಗಟ್ಟುಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿ ಇರುವಂತೆ ನೋಡಿಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಕನ್ನಡ ನಾಮಫಲಕ ಅಳವಡಿಕೆಯಲ್ಲಿ ಲೋಪವಾದಲ್ಲಿ ಮುಖ್ಯಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ…

Read More

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಜಿಲ್ಲೆಯಲ್ಲಿ ಅಕ್ಟೋಬರ್ ೨೬ ರಂದು ಜಿಲ್ಲೆಯ ೯ ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಕಡ್ಡಾಯ ಹಾಗೂ ೨೭ ರಂದು ೮೦ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ವ್ಯವಸ್ಥಿತವಾಗಿ ನಡೆಯಲು ಹಾಗೂ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಿಗ್ಗೆ ೮-೩೦ರಿಂದ ಪರೀಕ್ಷೆ ಮುಗಿಯುವರೆಗೆ ನಿಷೇಧಾಜ್ಞೆ ಘೋಷಿಸಿದ್ದು, ಸದರಿ ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರನೆಟ್, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಪರೀಕ್ಷಾ ಅವಧಿಯಲ್ಲಿ ತೆರೆಯದಂತೆ ಆದೇಶಿಸಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸಮೀಪದ ವಂದಾಲ ಗ್ರಾಮದ ಶಾಕಂಬರಿ ಪ್ರೌಢಶಾಲೆಯ ಟೇಬಲ್ ಟೆನ್ನಿಸ್ ಬಾಲಕ ಹಾಗೂ ಬಾಲಕಿಯರ ತಂಡ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದೆ. ಈಚೆಗೆ ಅತಿಥೇಯ ಶಾಲೆಯಲ್ಲಿ ಆಯೋಜನೆಗೊಂಡಿದ್ದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಟೂರ್ನಿಯ ಬಾಲಕ, ಬಾಲಕಿಯರ ಡಬಲ್ಸ್ ವಿಭಾಗದ ಪಂದ್ಯದಲ್ಲಿ ಈ ಶಾಲೆಯ ಸ್ಪರ್ಧಾಳುಗಳು ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟದ ಕೂಟಕ್ಕೆ ಆರ್ಹತೆಯ ಪ್ರವೇಶ ಪಡೆದಿದ್ದಾರೆ. ೨೦೨೪-೨೫ ನೇ ಸಾಲಿನ ವಿಜಯಪುರ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿಭಾಗದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಕ್ರೀಡಾಕೂಟ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ವಿಜಯಪುರ ಸಂಯುಕ್ತಾಶ್ರಯದಲ್ಲಿ ವಂದಾಲ ಶಾಕಂಬರಿ ಪ್ರೌಢಶಾಲೆ ಆತಿಥ್ಯದಲ್ಲಿ ಜರುಗಿತು. ಈ ಶಾಲೆಯ ಬಾಲಕರ ಹಾಗೂ ಬಾಲಕಿಯರ ವಿಭಾಗದ ಟೇಬಲ್ ಟೆನ್ನಿಸ್ ತಂಡ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಿಟ್ಟಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು ವಿಶೇಷ. ಬಾಲಕರ ವಿಭಾಗದಲ್ಲಿ ಸೋಮನಾಥ ಮಾದರ, ಗುರುರಾಜ ತಳಗಡಿ, ಹನಮನಗೌಡ ಢವಳಗಿ, ವಿನೋದ ಮಾದರ ರವಿ…

Read More

ಕಸಾಪದಲ್ಲಿ ಲಂಚಗುಳಿತನ, ಜಾತೀಯತೆ, ಪಕ್ಷಪಾತ ಮತ್ತು ಉತ್ತರ ಕರ್ನಾಟಕದ ಕವಿಗಳ ಸಾಹಿತ್ಯ-ಸಂಸ್ಕೃತಿಯ ನಿರ್ಲಕ್ಷ್ಯದ ಆರೋಪ ಉದಯರಶ್ಮಿ ದಿನಪತ್ರಿಕೆ – ಡಾ ಶಶಿಕಾಂತ ಪಟ್ಟಣ, ರಾಮದುರ್ಗ ರಾಮದುರ್ಗ: ಸಾಹಿತ್ಯವೆನ್ನುವುದು ಒಂದು ಸೃಜನಶೀಲ ಮನಸ್ಸಿನ ಸುಂದರ ಅಭಿವ್ಯಕ್ತಿ. ಇದಕ್ಕೆಂದೇ ಕನ್ನಡ ಕವಿಗಳು ಸಾಹಿತಿಗಳು ನಾಲ್ವಡಿ ಕೃಷ್ಣರಾಜ ಒಡೆಯರ ಅವರ ಸಹಾಯದಿಂದ ಕನ್ನಡ ಸಾಹಿತ್ಯ ಪರಿಷತ್ತ್ ಆರಂಭಿಸಿದರು . ಬ್ರಿಟಿಷರ ಕಾಲದಲ್ಲಿ ಕನ್ನಡ ಪರ ಜನಪರ ಸಮಾಜಮುಖಿ ಕಾರ್ಯದ ಪ್ರಬಲ ಮಾಧ್ಯಮವೇ ಸಾಹಿತ್ಯ .ಭಾರತದ ಸ್ವಾತಂತ್ರ್ಯ ಕರ್ನಾಟಕ ಏಕೀಕರಣದಲ್ಲಿ ಕನ್ನಡ ಸಾಹಿತ್ಯದ ಪಾತ್ರ ಬಹು ದೊಡ್ಡದು. ಕುವೆಂಪು ಬೇಂದ್ರೆ ಕಾರಂತ ಮಾಸ್ತಿ ಗೋಕಾಕ ಮುಂತಾದ ಬಹು ದೊಡ್ಡ ದೈತ್ಯ ಪ್ರತಿಭೆಗಳ ಕನ್ನಡ ಸಾಹಿತ್ಯ ಸಮ್ಮೇಳನಗಳು ಇತ್ತೀಚೆಗೆ ಅರ್ಥ ಕಳೆದು ಕೊಳ್ಳುತ್ತಿವೆ.ಅದಕ್ಕೆ ಮುಖ್ಯ ಕಾರಣಗಳು ಲಂಚಗುಳಿತನ ಜಾತೀಯತೆ ಪಕ್ಷಪಾತ ಮತ್ತು ಮುಖ್ಯವಾಗಿ ಉತ್ತರ ಕರ್ನಾಟಕದ ಕವಿಗಳ ಸಾಹಿತ್ಯ ಸಂಸ್ಕೃತಿಯ ಸಂಪೂರ್ಣ ನಿರ್ಲಕ್ಷ.ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಹತ್ತನೇ ಶತಮಾನದಿಂದ ಸುಮಾರು ಹನ್ನೆರಡನೇ ಶತಮಾನದ ವರೆಗಿನ ಕಾಲಘಟ್ಟವನ್ನು ಹಳೆಗನ್ನಡ ಎಂದು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಿತ್ತೂರು ಚೆನ್ನಮ್ಮ ವಿಜಯೋತ್ಯೋತ್ಸವದ ಅಂಗವಾಗಿ ಅ.೨೩ರಂದು ಶಾಂತಿನಿಕೇತನ ಪ್ರಾಥಮಿಕ ಪ್ರೌಢಶಾಲೆ ಆಶ್ರಮ ರಸ್ತೆ ವಿಜಯಪುರದ ಸಭಾಂಗಣದಲ್ಲಿ ಚೆನ್ನಮ್ಮ ವಿದ್ಯಾವರ್ಧಕ ಸಂಸ್ಥೆ ಉತ್ನಾಳ, ಈ ಸಂಸ್ಥೆಯಿಂದ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟನೆ ಆಯಿತು,ಎಲ್ಲ ಅತಿಥಿಗಳೊಂದಿಗೆ ಸಸಿಗೆ ನೀರೆರೆಯುವ ಮೂಲಕ ಮತ್ತು ಚೆನ್ನಮ್ಮಾಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಲಾಯಿತುಕಾರ್ಯಕ್ರಮದ ಸಾನಿಧ್ಯ ಡಾ.ಶ್ರದ್ದಾನಂದ ಸ್ವಾಮೀಜಿ, ಶಿವಾನಂದ ಮಠ ಸದಲಗಾ ವಹಿಸಿದ್ದರು.ಅಧ್ಯಕ್ಷರಾಗಿ ಪ ಗು ಸಿದ್ದಾಪುರ ಮಕ್ಕಳ ಸಾಹಿತಿ ಮುಳವಾಡ, ಮುಖ್ಯ ಅತಿಥಿಗಳಾಗಿ ಬಸವರಾಜ್ ಯಲಿಗಾರ, ಡಿಎಸ್ಪಿ ವಿಜಯಪುರ, ಅತಿಥಿಗಳಾಗಿ ಡಾ, ಸುರೇಶ್ ಬಿರಾದಾರ, ಚೇರ್ಮನ್ನರು ಶಾಂತಿನಿಕೇತನ ಶಿಕ್ಷಣ ಸಮೂಹ ಸಂಸ್ಥೆ ವಿಜಯಪುರ, ರಾಜಶೇಖರ್ ದೈವಾಡಿ, ಕಚೇರಿ ಅಧ್ಯಕ್ಷರು ಸಹಾಯಕ ನಿರ್ದೇಶಕರು (ಗ್ರೇಡ್ ಒನ್ ) ಸಮಾಜ ಕಲ್ಯಾಣ ಇಲಾಖೆ, ಇಂಡಿ, ಮತ್ತು ಸಹಾಯಕ ನಿರ್ದೇಶಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ, ಸಂಸ್ಥೆಯ ಅಧ್ಯಕ್ಷ ಬಸವರಾಜ ನಂ ಬಾಗೇವಾಡಿ, ಸಾ ಉತ್ನಾಳ, ಸಂಸ್ಥೆಯ ಮಾಜಿ ಪ್ರಧಾನ ಕಾರ್ಯದರ್ಶಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ತ್ವರಿತ ನ್ಯಾಯಕ್ಕಾಗಿ ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ಜಿಲ್ಲಾ ಸಮಿತಿ, ವಿಜಯಪುರ ವತಿಯಿಂದ ರಾಜ್ಯದ ಸಮಾಜ ಕಲ್ಯಾಣ ಸಚಿವರಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಸಂಚಾಲಕರಾದ ಸಂಜು ವೈ.ಕಂಬಾಗಿ ಮಾತನಾಡಿ, ಇತ್ತೀಚಿಗೆ ರಾಜ್ಯದಲ್ಲಿ ದಿನಂಪ್ರತಿ ದಲಿತರ ಮೇಲೆ ದೌರ್ಜನ್ಯಗಳು ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರಿಂದ ದಲಿತರಿಗೆ ನ್ಯಾಯ ಸಿಗುತ್ತಿಲ್ಲ. ಕೇವಲ ಶೋಷಣೆಯಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ೧೯೮೯ರ ಪ್ರಕಾರ ದಲಿತರ ಮೇಲೆ ಆದ ದೌರ್ಜನ್ಯದ ಕುರಿತು ದೌರ್ಜನ್ಯ ಪ್ರಕರಣವನ್ನು ದಾಖಲಿಸಿದರೆ ಅದರ ವಿರುದ್ದವಾಗಿ ಕೌಂಟರ್ ಕೇಸುಗಳನ್ನು ದಾಖಲಾಗುತ್ತಿವೆ. ಆದ್ದರಿಂದ ಇಂತಹ ಕೌಂಟರ್ ಕೇಸುಗಳ ವಿರುದ್ದ ರಾಜ್ಯದಲ್ಲಿ ತ್ವರಿತ ನ್ಯಾಯಕ್ಕಾಗಿ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯುವ ಮೂಲಕ ದಲಿತರಿಗೆ ನ್ಯಾಯ ದೊರಕಿಸಿಕೊಡುವಂತೆ ದಿನಾಂಕ : ೨೫-೧೦-೨೦೨೪ ರಂದು ನಡೆಯುವ ರಾಜ್ಯದ…

Read More

ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಲ್ಲಿ ಧಾರವಾಡ ಕೃಷಿ ವಿವಿ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರೈತರು ಆರ್ಥಿಕವಾಗಿ ಸದೃಢವಾಗಬೇಕಾದರೆ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವುದರ ಜೊತೆಗೆ ಸಮಗ್ರ ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಧಾರವಾಡ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಸಲಹೆ ನೀಡಿದರು.ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಶ್ರೀ.ಪವಾಡ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ವಿಜಯಪುರದ ಕೃಷಿ ಕಾಲೇಜಿನ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ “ಕೃಷಿ ಸಂಪದ” ಕೃಷಿ ತಂತ್ರಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಈ ಕೃಷಿ ತಂತ್ರಜ್ಞಾನ ಮತ್ತು ವಸ್ತುಪ್ರದರ್ಶನದ ಪ್ರಯೋಜನಗಳನ್ನು ಪಡೆದುಕೊಂಡು ತಮ್ಮ ಕೃಷಿ ಉತ್ಪಾದನೆ ಹೆಚ್ಚಿಸಿಕೊಳ್ಳಬೇಕು ಎಂದರು.ಕೃಷಿ ಉತ್ಪಾದನೆ ಹೆಚ್ಚಿಸಬೇಕಾದರೆ ಮಣ್ಣು ಮತ್ತು ನೀರಿನ ನಿರ್ವಹಣೆ ಬಹಳ ಮುಖ್ಯ. ರೈತರು ನಿಯಮಿತವಾಗಿ ತಮ್ಮ ತಮ್ಮ ಭೂಮಿಯಲ್ಲಿನ ಮಣ್ಣು ಪರೀಕ್ಷೆ ಮಾಡಿಸಿ ಶಿಫಾರಸು ಮಾಡಿದಂತೆಯೇ ಗೊಬ್ಬರ ಬಳಸಬೇಕು. ಇದರಿಂದ ರೈತರು ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಾಗುತ್ತದೆ ಎಂದು…

Read More