Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿದ್ದೇಶ್ವರ ಶ್ರೀಗಳ ಜಯಂತ್ಯೋತ್ಸವದಲ್ಲಿ ಇಲಕಲ್-ಚಿತ್ತರಗಿ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ ಅಭಿಮತ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಬಿಜ್ಜರಗಿಯಲ್ಲಿ ಅರಳಿದ ಜ್ಞಾನದ ಪುಷ್ಪದ ಹೂವಿನಬಳ್ಳಿ ಜಗತ್ತಿಗೆ ಜ್ಞಾನದ ವಾಸನೆ ನೀಡಿತು. ಒಬ್ಬ ಶಿಕ್ಷಕನ ಕೈಯಲ್ಲಿ ಕಲಿತು ಜಗತ್ತಿಗೆ ಶಿಕ್ಷಕರಾದವರು ಶ್ರೀ ಸಿದ್ದೇಶ್ವರ ಶ್ರೀಗಳು ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಗುರುಗಳಾದ ಶ್ರೀ ಬಸವಲಿಂಗ ಸ್ವಾಮೀಜಿ ಹೇಳಿದರು.ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲಾ ಆವರಣದಲ್ಲಿ ಸೋಮವಾರ ಸಂಜೆ ನಡೆದ ಶತಮಾನ ಕಂಡ ಶ್ರೇಷ್ಠ ಸಂತ, ನಡೆದಾಡುವ ದೇವರು, ಜ್ಞಾನಯೋಗಿ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ 84 ನೇಯ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು.ಇಲಕಲ್ ಚಿತ್ತರಗಿ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ ಮಾತನಾಡಿ, ಸಿದ್ದೇಶ್ವರ ಶ್ರೀಗಳು ಇಡೀ ಜಗತ್ತಿಗೆ ಒಂದು ನಕ್ಷತ್ರ. ಜಗತ್ತಿಗೆ ಬೆಳಕು ನೀಡಿದವರು. ಕೋಟ್ಯಾಂತರ ಜನರ ಹೃದಯದಲ್ಲಿ ಜ್ಞಾನದ ಜ್ಯೋತಿ ಹಚ್ಚಿಸಿದವರು. ಅವರ ಬಗ್ಗೆ ವರ್ಣನೆ ಅಸಾಧ್ಯವಾದದ್ದು. ಅವರು ಹುಟ್ಟಿದ ನೆಲ ಪವಿತ್ರ ಕ್ಷೇತ್ರ. ಈ ಹಳ್ಳಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಶ್ರೀಕೃಷ್ಣ ವಾದಿರಾಜ ಮಠದಲ್ಲಿ ಇಂದು ಸಂಜೆ (ಬುಧವಾರ ಅ.೨೩ ರ) ಸಂಜೆ ೫.೩೦ ಗಂಟೆಗೆ “ಮಾತುಕತೆ ವಿತ್ ವಸುಧೇಂದ್ರ” ಸಂವಾದ ಕಾರ್ಯಕ್ರಮ ಜರುಗಲಿದೆ.”ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ವಿಜಯಪುರ” ಆಯೋಜನೆಯ ಈ ಕಾರ್ಯಕ್ರಮದಲ್ಲಿ “ತೇಜೋ ತಂಗಭ್ರ” ಕಾದಂಬರಿಯ ಖ್ಯಾತಿಯ , ಜನಪ್ರಿಯ ಕಾದಂಬರಿಕಾರ “ವಸುಧೇಂದ್ರ” ಅವರು ಭಾಗವಹಿಸಲಿದ್ದಾರೆ.ಈ ಸಂದರ್ಭದಲ್ಲಿ ವಸುಧೇಂದ್ರ ಅವರು ಹೊಸ ಕಾದಂಬರಿ “ರೇಷ್ಮೆ ಬಟ್ಟೆ” ರಿಯಾಯಿತಿ ದರದಲ್ಲಿ ಕೊಡಲಾಗುವುದು ಮತ್ತು ಓದುಗರು, ಲೇಖಕರ ಹಸ್ತಾಕ್ಷರ ಮತ್ತು ಅವರೊಟ್ಟೆಗೆ ಸೆಲ್ಫಿ ಕೂಡ ಪಡೆಯಬಹದುದೆಂದು “ಅಭಾಸಾಪ ವಿಜಯಪುರ” ಜಿಲ್ಲಾಧ್ಯಕ್ಷ ನಾರಾಯಣ ಬಾಬಾನಗರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಹಾಗೂ ಪುಸ್ತಕಗಳಿಗಾಗಿ ಸಂಪರ್ಕಿಸಿ – 9880050818 ವಿವೇಕ ಕುಲಕರ್ಣಿ , 87480 03989 ರಂಜಿತ್ ಸಿಂಗ್ ರಜಪೂತ
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪಸಂಖ್ಯಾತ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮೌಲಾನಾ ಆಜಾದ್ ಮಾದರಿ ಶಾಲೆಯನ್ನು ದೇವರಹಿಪ್ಪರಗಿ ಮತಕ್ಷೇತ್ರಕ್ಕೆ ಮಂಜೂರು ಮಾಡಿತ್ತು. ಆದರೀಗ ಅಧಿಕಾರಿಗಳ, ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷತನದಿಂದ ಮಂಜೂರಾಗಿರುವ ಆಂಗ್ಲ ಮಾಧ್ಯಮ ಮೌಲಾನ ಅಜಾದ್ ಶಾಲೆಯನ್ನು ರದ್ದುಪಡಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಮನವಿ ಸಲ್ಲಿಸಿದರು.ಈ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ಮತಕ್ಷೇತ್ರದಲ್ಲಿ ಜೆಡಿಎಸ್ ಚುನಾಯಿತ ಶಾಸಕರು ಇರುವುದರಿಂದಾಗಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರುಗಳು ತಾಲೂಕಿಗೆ ಬಂದಿರುವ ಮೌಲಾನ ಆಜಾದ್ ಮಾದರಿ ಶಾಲೆಯನ್ನು ಬೇರೆ ಕಡೆಗೆ ಮಂಜೂರಾತಿಯನ್ನು ಪಡದಿರುವುದನ್ನು ಕೆ.ಆರ್.ಎಸ್. ಪಕ್ಷವು ಖಂಡಿಸುತ್ತದೆ.ಮತಕ್ಷೇತ್ರದಲ್ಲಿ ೪೦ ಸಾವಿರಕಿಂತಲೂ ಹೆಚ್ಚು ಅಲ್ಪಸಂಖ್ಯಾತ ಮತದಾರರು ಇದ್ದಾರೆ. ಅದರಲ್ಲೂ ತುಂಬಾ ಬಡತನದ ಜೀವನ ಸಾಗಿಸುವ ಕುಟುಂಬಗಳ ಸಂಖ್ಯೆ ಹೆಚ್ಚಾಗಿದ್ದು ಅವರು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಲವಾರು ದಶಕಗಳಿಂದ ವಂಚಿತರಾಗಿದ್ದಾರೆ. ಅಂತ ಕುಟುಂಬಗಳ ಮಕ್ಕಳು ಉಚಿತವಾಗಿ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆಯುವುದು ನಾಡಿನ ಮತ್ತು…
ವೃಕ್ಷಥಾನ್ ಹೆರಿಟೇಜ್ ರನ್-೨೦೨೪ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪರಿಸರ, ಪ್ರಾಚೀನ ಸ್ಮಾರಕ, ಆರೋಗ್ಯ ಮತ್ತು ಪ್ರವಾಸೋದ್ಯಕ್ಕೆ ಉತ್ತೇಜನ ನೀಡುವ ದಿಶೆಯಿಂದ ಡಿಸೆಂಬರ್ ೨೨ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-೨೦೨೪ರ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು, ಇಲಾಖಾ ನೌಕರರು ನೋಂದಣಿ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವೃಕ್ಷಥಾನ್ ಹೆರಿಟೇಜ್ ರನ್ -೨೦೨೪ರ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತದ ಸಹಕಾರದೊಂದಿಗೆ, ಕೋಟಿ ವೃಕ್ಷ ಅಭಿಯಾನ, ಸೊಸೈಟಿ ಪಾರ್ ಪ್ರೋಟೆಕ್ಷನ್ ಆಫ್ ಪ್ಲಾಂಟ್ ಆ್ಯಂಡ್ ಅನಿಮಲ್ಸ, ನಗರಾಭಿವೃದ್ಧಿ ಪ್ರಾಧಿಕಾರ ವಿಜಯಪುರ, ಬಿಎಲ್‌ಡಿಇ ಅಸೋಷಿಯೇಶನ್, ಪ್ರವಾಸೋಧ್ಯಮ ಇಲಾಖೆ, ಅರಣ್ಯ ಇಲಾಖೆ, ಸಿಆರ್‌ಡಿಎಸ್ ಪೌಂಡೇಷನ್, ಮಹಾನಗರ ಪಾಲಿಕೆ ವಿಜಯಪುರ ಹಾಗೂ ಇತರರ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರ ಪಾಲ್ಗೊಳ್ಳುವಿಕೆಗೆ ನೋಂದಣಿ ಮಾಡುವ ಗುರಿ ಹೊಂದಬೇಕು ಎಂದು ಹೇಳಿದರು.೨೧ ಕಿಮೀ, ೧೦ಕಿಮೀ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಕಾಲೇಜಿನಲ್ಲಿ ರಕ್ತವಿಸ್ರಾವಿಯ ಉಚಿತ ಚಿಕಿತ್ಸೆ ಶಿಬಿರ ಮೂರು ದಿನಗಳ ಕಾಲ ನಡೆಯಲಿದೆ.ಅಕ್ಟೋಬರ್ 24 ರಿಂದ ಅಕ್ಟೋಬರ್ 26ರ ವರೆಗೆ ಈ ಶಿಬಿರ ನಡೆಯಲಿದ್ದು, ಉಬ್ಬಿರುವ ರಕ್ತನಾಳಗಳು(Varicose Veins) ಮತ್ತು ಚರ್ಮಗತ ವಿಕಾರಗಳಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಗುವುದು. ಸಾರ್ವಜನಿಕರು ಈ ಉಚಿತ ಶಿಬಿರದ ಸದುಪಯೋಗ ಪಡೆಯಬೇಕು ಎಂದು ಕಾಲೇಜಿನ ಪ್ರಾಚಾರ್ಯರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ- 9513397413 ನ್ನು ಸಂಪರ್ಕಿಸಬಹುದಾಗಿದೆ.
ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರಿಂದ ಭೂಮಿಪೂಜೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಬಲೇಶ್ವರ ಮತಕ್ಷೇತ್ರದಲ್ಲಿ ಸರಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸಿಎಸ್ಆರ್ ಫಂಡ್ ನಲ್ಲಿ ರೂ.100 ಯೋಜನೆಯಡಿ ನಾನಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಬಬಲೇಶ್ವರ ತಾಲೂಕಿನ ನಿಡೋಣಿಯಲ್ಲಿ ಕೆ.ಆರ್.ಐ.ಡಿ.ಎಲ್. ವತಿಯಿಂದ ರೂ.50 ಲಕ್ಷ ವೆಚ್ಚದಲ್ಲಿ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ಸಿಸಿ ರಸ್ತೆ ಕಾಮಗಾರಿ ಮತ್ತು ಪಿ.ಆರ್.ಇ.ಡಿ ವತಿಯಿಂದ ರೂ. 100 ಲಕ್ಷ ವೆಚ್ಚದಲ್ಲಿ ನಿಡೋಣಿ-ತಿಗಣಿ ಬಿದರಿ ರಸ್ತೆ ಸುಧಾರಣೆ ಕಾಮಗಾರಿ ಹಾಗೂ ಶೇಗುಣಸಿ ಗ್ರಾಮದಲ್ಲಿ ಕೆ.ಆರ್.ಐ.ಡಿ.ಎಲ್. ವತಿಯಿಂದ ರೂ. 25 ಲಕ್ಷ ವೆಚ್ಚದಲ್ಲಿ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಸಚಿವ ಎಂ.ಬಿ.ಪಾಟೀಲ ಅವರ ದೂರದೃಷ್ಠಿಯ ಫಲವಾಗಿ ಬಬಲೇಶ್ವರ ಮತಕ್ಷೇತ್ರದಲ್ಲಿ ಈ ಬಾರಿ ಶೈಕ್ಷಣಿಕ ಕ್ರಾಂತಿ ಮಾಡಲಾಗುತ್ತಿದ್ದು, ರೂ.100 ಕೋ. ಸಿ.ಎಸ್.ಆರ್ ಫಂಡ್ ಬಳಸಿ ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲಾಗುತ್ತಿದೆ. ಹೆಚ್ಚುವರಿಯಾಗಿ ಹೊಸ ಕೊಠಡಿಗಳ ನಿರ್ಮಾಣ, ಕೊಠಡಿಗಳ ದುರಸ್ಥಿ,…
ಇಂದು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರು ಉತ್ಸವದ (ಅ.23) ಪ್ರಯುಕ್ತ ಈ ವಿಶೇಷ ಲೇಖನ – ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿ – ಗದಗ ವೀಣಾಂತರಂಗ ಉದಯರಶ್ಮಿ ದಿನಪತ್ರಿಕೆ ಇಂದಿನ ಬೆಳಗಾವಿ ಮತ್ತು ಧಾರವಾಡ ನಗರಗಳ ಮಧ್ಯದಲ್ಲಿರುವ ಸಣ್ಣ ಪ್ರದೇಶವೇ ಕಿತ್ತೂರು ಸಂಸ್ಥಾನ. ಸುಮಾರು 250 ವರ್ಷಕ್ಕೂ ಹೆಚ್ಚು ಕಾಲ ರಾಜಧಾನಿಯಾಗಿ ಮೆರೆದ ಊರು ಕಿತ್ತೂರು ಇಂದಿನ ಬೆಳಗಾವಿ, ಕಾರವಾರ, ಧಾರವಾಡ,ಕಿತ್ತೂರು, ಖಾನಾಪುರ, ಕಲಘಟಗಿ, ಮನೋಳಿ ಮತ್ತು ನರಗುಂದ ಪ್ರದೇಶಗಳನ್ನು ಒಳಗೊಂಡ ರಾಜ್ಯವಾಗಿತ್ತು. ವಿಜಾಪುರದ ಆದಿಲಶಾಹಿಗಳ ಬಳಿ ಕಾರ್ಯ ನಿರ್ವಹಿಸುತ್ತಿದ್ದ ಹಿರೇಮಲ್ಲ ಶೆಟ್ಟಿ ಎಂಬ ಸೇನಾನಿಗೆ ರಾಜರು ಹುಬ್ಬಳ್ಳಿಯ ಈ ಭಾಗವನ್ನು ಬಳುವಳಿಯಾಗಿ ನೀಡಿದರು ಮುಂದೆ ಆತನ ಉತ್ತರಾಧಿಕಾರಿಯಾದ ಅಲ್ಲಪ್ಪ ಗೌಡನು ಗೀಜಗನಹಳ್ಳಿ ಎಂದು ಕರೆಯಲ್ಪಡುತ್ತಿದ್ದ ಹಳ್ಳಿಗೆ ರಾಜಧಾನಿಯನ್ನು ಸ್ಥಳಾಂತರಿಸಿ ಅದನ್ನು ಕಿತ್ತೂರು ಎಂದು ಕರೆದನು.ಕಿತ್ತೂರು ಸಂಸ್ಥಾನವನ್ನು ಆಳಿದ ರಾಜರಲ್ಲಿಯೇ ಅತ್ಯಂತ ಯಶಸ್ವಿ ಆಡಳಿತಗಾರ ಮಲ್ಲಸರ್ಜ. ಸುಧರ್ಮಿಯೂ, ಶೂರನೂ , ನೀತಿವಂತನೂ ಆಗಿದ್ದ ಮಲ್ಲಸರ್ಜನು ಕಿತ್ತೂರು ರಾಜ್ಯವನ್ನು ಸುಮಾರು 34 ವರ್ಷಗಳ…
Udayarashmi kannada daily newspaper
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗೋ ಸಂಪತ್ತು ದೇಶದ ಸಂಪತ್ತು. ಆದ್ದರಿಂದ ಪಶು ಇಲಾಖೆ ಸಿಬ್ಬಂದಿ ರೈತರ ಮನೆ ಬಾಗಿಲಿಗೆ ತೆರಳಿ ಪ್ರತಿ ಜಾನುವಾರಗಳಿಗೆ ಲಸಿಕೆ ಹಾಕಿ ಅವುಗಳನ್ನು ಕಾಪಾಡಬೇಕೆಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಕರೆ ನೀಡಿದರು.ಅವರು ಸೋಮವಾರ ತಾಲೂಕಿನ ಕಗ್ಗೋಡ ಗ್ರಾಮದಲ್ಲಿರುವ ಗೋಶಾಲೆಯಲ್ಲಿ ಗೋಪೂಜೆ ಮಾಡುವ ಮೂಲಕ ಅ.೨೧ ರಿಂದ ನ.೨೧ ರವರೆಗೆ ರಾಷ್ಟ್ರೀಯ ಕಾರ್ಯಕ್ರಮವಾದ ಕಾಲು ಬಾಯಿ ರೋಗದ ವಿರುದ್ಧ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಈ ಸಂದರ್ಭದಲ್ಲಿ ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಡಾ.ಅಶೋಕ ಘೊಣಸಗಿ ಉಪಸ್ಥಿತರಿದ್ದರು.ಮುಖ್ಯ ಪಶು ವೈದ್ಯಾಧಿಕಾರಿ ಡಾ. ಬಿ.ಎಸ್.ಕನಮಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ವೇಳೆ ಹಿರಿಯ ಪಶು ವೈದ್ಯಾಧಿಕಾರಿ ಡಾ.ಬಾಳಾಸಾಹೇಬ ಬಂಡಿ ಹಾಗೂ ಇಲಾಖೆ ಸಿಬ್ಬಂದಿ ಇದ್ದರು.
ಉದಯರಶ್ಮಿ ದಿನಪತ್ರಿಕೆ ಯಡ್ರಾಮಿ: ಕರ್ನಾಟಕ ರಕ್ಷಣಾ ವೇದಿಕೆಯ (ಟಿ.ಎ.ನಾರಾಯಣ ಗೌಡರ ಬಣ) ಯಡ್ರಾಮಿ ತಾಲೂಕು ಅಧ್ಯಕ್ಷ ದೇವಿಂದ್ರಪ್ಪ ಗೌಡ ನಿಂಗನಗೌಡ ಪೊಲೀಸ್ ಪಾಟೀಲ್ ಇವರ ನೇತೃತ್ವದಲ್ಲಿ ಸೋಮವಾರ ಯಡ್ರಾಮಿ ತಾಲೂಕಿಗೆ 12ನೇ ತರಗತಿಯ ವಾರ್ಷಿಕ ಪರೀಕ್ಷೆ ಕೇಂದ್ರವನ್ನು ಮುಂದೆ ಬರುವ ಮಾರ್ಚ್ ತಿಂಗಳ ಒಳಗಾಗಿ ಪರೀಕ್ಷಾ ಕೇಂದ್ರವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಕೊಡಬೇಕೆಂದು ತಾಲೂಕು ದಂಡಾಧಿಕಾರಿಗಳ ಮುಖಾಂತರ ಜಿಲ್ಲಾ ಅಧಿಕಾರಿಗಳಿಗೂ ಮತ್ತು ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೂ ಮನವಿ ಪತ್ರ ಸಲ್ಲಿಸಲಾಯಿತು. ಇದಕ್ಕೂ ಮುನ್ನ, ಸರ್ದಾರ್ ಶರಣಗೌಡ ಸರ್ಕಲ್ ದಿಂದ ನೂರಾರು ಕಾರ್ಯಕರ್ತರು ಸಾಮೂಹಿಕ ಬೈಕ್ ಸವಾರಿಯೊಂದಿಗೆ ಬಂದು ದಂಡಾಧಿಕಾರಿಗಳಿಗೆ ಮನವಿ ಪುತ್ರ ಸಲ್ಲಿಸಲಾಯಿತು.ಈ ವೇಳೆ ದೇವಿಂದ್ರಪ್ಪಗೌಡ ಮಾತನಾಡಿ, ಯಡ್ರಾಮಿ ತಾಲೂಕು ಕೇಂದ್ರವಾಗಿದೆ. ಸರ್ಕಾರಿ, ಖಾಸಗಿ ಸೇರಿದಂತೆ ಮೂರು ಪಿಯು ಕಾಲೇಜುಗಳಿವೆ. ಈಗಿರುವ ಪರೀಕ್ಷಾ ಕೇಂದ್ರ ಜೇವರ್ಗಿಗೆ ವಿದ್ಯಾರ್ಥಿಗಳು ಹೋಗಿ ಬರಲು ಅನಾನುಕೂಲ ಆಗುತ್ತಿದೆ . ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಸಮಸ್ಯೆ ಕುರಿತು ಗಮನ ಹರಿಸಿ ಪಿಯು ಪರೀಕ್ಷಾ…
