Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಶೀತ ಗಾಳಿ ಬೀಸುವುದರಿಂದ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕಂದಾ ಇಲಾಖೆಯ ಸ್ವಾಯತ್ತ ಸಂಸ್ಥೆ) ರವರು ವಿಜಯಪುರ ಜಿಲ್ಲೆಯಲ್ಲಿ ತೀವ್ರವಾದ ಶೀತಗಾಳಿ ಬೀಡುವ ಸಾಧ್ಯತೆಯಿರುತ್ತದೆ ತಾಪಮಾನ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿರುತ್ತಾರೆ. ಇದರ ಹಿನ್ನೆಲೆ ಸಾರ್ವಜನಿಕರು ಬೆಳಿಗ್ಗೆ ಸೋಯೋದಯಕ್ಕಿಂತ ಮುಂಚೆ ಹಾಗೂ ಸೂರ್ಯಾಸ್ತದ ನಂತರ ವಾಕಿಂಗ್ ಮಾಡುವವರು ಮುನ್ನೆಚ್ಚರಿಕೆ ವಹಿಸಬೇಕೆಂದು ಸಾರ್ವಜನಿಕರಿಗೆ ತಿಳಿಸಬೇಕೆಂದು ನಗರದ ಕಾಂಗ್ರೇಸ್ ಮುಖಂಡ ಅಬ್ದುಲ್ ಹಮಿದ ಮುಶ್ರೀಫ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.ಹಾಗೂ ಬೆಳಿಗ್ಗೆ ೭ ಘಂಟೆಗೆ ಪ್ರಾರಂಭವಾಗುವ ಶಾಲೆಯ ಸಮಯವನ್ನು ಬದಲಿಸಿ ೨ ಗಂಟೆಗೆ ಲೇಟ್ ಆಗಿ ಪ್ರಾರಂಭಿಸಬೇಕು. ಇದರಿಂದ ಮಕ್ಕಳ ಆರೋಗ್ಯ ಸುಧಾರಿಸಬಹುದು. ಮಕ್ಕಳ ಶಾಲೆಗೆ ಕಳುಹಿಸುವ ಸಲುವಾಗಿ ಪಾಲಕರು ನಸುಕಿನ ಜಾವ ೫ ಘಂಟೆಗೆ ಚಳಿಯಲ್ಲಿ ಎದ್ದು ಅವರ ತಯಾರಿಗಾಗಿ ಶ್ರಮಿಸಬೇಕಾಗುತ್ತದೆ. ಮಕ್ಕಳಿಗೆ ತಯಾರು ಮಾಡಿ ೭ ಘಂಟೆಗೆ ಬಸ್‌ನಲ್ಲಿ ಕಳುಹಿಸದರೆ ನಸುಕಿನ ಜಾವ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಸವ ಜನ್ಮಭೂಮಿ ಪ್ರತಿಷ್ಠಾನದ ೧೪ನೇ ವಾರ್ಷಿಕೋತ್ಸವ ಹಾಗೂ ರಾಜ್ಯಮಟ್ಟದ ವಚನವೈಭವ ನಿಮಿತ್ತ ಕೊಡಮಾಡುವ ರಾಷ್ಟ್ರಮಟ್ಟದ ಬಸವವಿಭೂಷಣ ಹಾಗೂ ರಾಜ್ಯಮಟ್ಟದ ಬಸವಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ ಡಿ.೨೫ ರಂದು ಬೆಳಗ್ಗೆ ೧೧-೦೦ ಚೇತನಾ ಕಾಲೇಜ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಬಸವನಬಾಗೇವಾಡಿ ಹಿರೇಮಠದ ಶಿವಪ್ರಕಾಶಶ್ರೀ ಪಾವನ ಸಾನಿಧ್ಯ ವಹಿಸಲಿದ್ದು, ಚೇತನಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಜುಗತಿ ಅಧ್ಯಕ್ಷತೆ ವಹಿಸುವರು. ಬೆಂಗಳೂರಿನ ಸಾಹಿತಿ, ಋತುಸೌರಭ ಫೌಂಡೇಶನ ಅಧ್ಯಕ್ಷೆ ವಿಜಯಲಕ್ಷ್ಮಿ ಸತ್ಯಮೂರ್ತಿ ಉದ್ಘಾಟಿಸುವರು.ಚಿತ್ರದುರ್ಗ ಸಾಹಿತಿ ಶೈಲಾ ಜಯಕುಮಾರ, ಯಾದಗಿರಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಜಯಪ್ರಕಾಶ ಎಚ್., ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೆಡಶ್ಯಾಳ ಹಾಗೂ ಸಾಹಿತಿ ಶಂಕರ ಬೈಚಬಾಳ ಮುಖ್ಯ ಅತಿಥಿಗಳಾಗಿ ಆಗಮಿಸುವರು.ಈ ಸಂದರ್ಭದಲ್ಲಿ ನಾಡಿನ ೨೪ ಸಾಧಕರಿಗೆ ರಾಷ್ಟ್ರ ಹಾಗೂ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಸಂಚಾಲಕ, ಸಾಹಿತಿ ಮುರುಗೇಶ ಸಂಗಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಇಂದಿರಾನಗರದಲ್ಲಿ ಪುರಸಭೆ ವತಿಯಿಂದ ಬೋರ್‌ವೆಲ್ ಕೊರೆದು ಮೋಟರ್ ಪಂಪ್ ಸೆಟ್ ಆಳವಡಿಸಿರುವದಾಗಿ ಹೇಳಿ ಪುರಸಭೆಯಲ್ಲಿ ೩ ಲಕ್ಷ ರೂಪಾಯಿಗಳ ಬಿಲ್ ತೆಗೆದು ಪರಿಶಿಷ್ಟ ಜಾತಿಯ ಜನತೆಗೆ ಮತ್ತು ಸರ್ಕಾರಕ್ಕೆ ಮೋಸ ಮಾಡಿದ್ದು ಕೂಡಲೇ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಪಟ್ಟಣದ ಸಂಗಮೇಶ ನಗರದ ಪುರಸಭೆ ಸದಸ್ಯ ವಿರೇಶ ಹಡಲಗೇರಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.ಈ ಕುರಿತು ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ವಿರೇಶ, ಇಂದಿರಾನಗರದಲ್ಲಿ ಕಳೆದ ಒಂದು ವರ್ಷದಿಂದ ಯಾವುದೇ ಬೋರ್‌ವೆಲ್ ಕೊರೆದಿರುವದಿಲ್ಲ ಎಂದು ಸಾರ್ವಜನಿಕರು ತಿಳಿಸಿದ್ದಾರೆ. ನಾನೂ ಖುದ್ದಾಗಿ ಇಂದಿರಾ ನಗರಕ್ಕೆ ಭೆಟಿ ನೀಡಿ ಪರಿಶೀಲಿಸಿದಾಗ ಯಾವುದೇ ಬೋರ್‌ವೆಲ್ ಕೊರೆದಿರುವದಿಲ್ಲ. ಇದು ಪರಿಶಿಷ್ಟ ಜಾತಿಯ ಜನತೆಗೆ ಮತ್ತು ಸರ್ಕಾರಕ್ಕೆ ಮೋಸ ಎಸಗಿದ್ದು ಇವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ, ನಗರಾಭಿವೃದ್ಧಿ ಯೋನಾಧಿಕಾರಿಗಳಿಗೆ, ಜಿಲ್ಲಾ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಉಪಾಧೀಕ್ಷರಿಗೆ ಮನವಿ ಪತ್ರ ಸಲ್ಲಿಸಿದ್ದೇನೆ. ಸಂಬಂಧಿಸಿದ ಅಧಿಕಾರಿಗಳು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಮೌಲಾಲಿ ಆಲಗೂರ, ಬಸವ ಭೂಷಣ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬಸವನ ಬಾಗೇವಾಡಿಯ ಬಸವ ಜನ್ಮ ಪ್ರತಿಷ್ಠಾನ, ಜಿಲ್ಲಾ ಘಟಕ ವಿಜಯಪುರ ಇವರು ಕೊಡಮಾಡುವ ಈ ಪ್ರಶಸ್ತಿಯನ್ನು ಇದೆ ತಿಂಗಳ ಡಿ.೨೫ರಂದು ವಿಜಯಪುರದ ಚೇತನಾ ಕಾಲೇಜ ಸಭಾಂಗಣದಲ್ಲಿ ಜರುಗಲಿರುವ ರಾಜ್ಯ ಮಟ್ಟದ ವಚನ ವೈಭವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೌಲಾಲಿ ಆಲಗೂರ ಇವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಂಸ್ಥೆಯ ಸಂಚಾಲಕ ಮುರಗೇಶ ಸಂಗಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಪತ್ರಕರ್ತ ಶಿವಾನಂದ ಆಲಮೇಲ ಅವರ ತಂದೆ ಬಾಬು ಆಲಮೇಲ (೭೦) ಅವರು ಶುಕ್ರವಾರ ದೈವಾಧೀನರಾಗಿದ್ದಾರೆ.ಮೃತರು ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಸಂತಾಪ: ಮೃತರ ನಿಧನಕ್ಕೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು, ಜನಪ್ರತಿನಿಧಿಗಳು, ಸಮಾಜದ ಮುಖಂಡರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಸಂತಾಪ ಸೂಚಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಬ್ರಿಟಿಷರ ಕಾಲದಿಂದಲೂ ಅತೀ ಹಿಂದುಳಿದಿರುವ ಮುಂಬೈ ಕರ್ನಾಟಕ ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿಯಾಗಬೇಕಾದರೆ ಕೇಂದ್ರ ಸರ್ಕಾರ ಆಲಮಟ್ಟಿ-ಯಾದಗಿರಿ ರೈಲು ಮಾರ್ಗ ರಚಿಸಿ ರೈಲು ಓಡಿಸಬೇಕು ಎಂದು ಜಿಪಂ. ಮಾಜಿ ಸದಸ್ಯ ಶಿವಾನಂದ ಅವಟಿ ಹೇಳಿದರು.ಆಲಮಟ್ಟಿಯ ರವಿವಾರ ಸಂತೆ ಮಾರುಕಟ್ಟೆ ಪ್ರದೇಶದ ಬಳಿಯಿರುವ ಈಶ್ವರಲಿಂಗ ದೇವಸ್ಥಾನದಲ್ಲಿ ಆಲಮಟ್ಟಿ ರೈಲು ಅಭಿವೃದ್ಧಿ ಹೋರಾಟ ಸಮಿತಿಯ ನೂತನ ಪದಾಧಿಕಾರಿಗಳ ರಚನಾ ಸಭೆಯಲ್ಲಿ ಮಾತನಾಡಿದರು.ಇನ್ನು ವಿಜಯಪುರದಿಂದ ನೇರವಾಗಿ ಬೆಂಗಳೂರಿಗೆ ತಲುಪಲು ಆಲಮಟ್ಟಿ-ಚಿತ್ರದುರ್ಗ ರೈಲು ಮಾರ್ಗವೂ ಅವಶ್ಯವಾಗಿದ್ದು, ಈ ಕುರಿತು ಕೇಂದ್ರ ಸರ್ಕಾರವು ಎರಡೂ ರೈಲ್ವೆ ಮಾರ್ಗಕ್ಕೆ ಮೀಕ್ಷೆಯನ್ನೂ ನಡೆಸಿದ್ದು, ಕೂಡಲೇ ಕೇಂದ್ರ ಸರ್ಕಾರ ಎರಡೂ ಹೊಸ ರೈಲು ಮಾರ್ಗಗಳನ್ನು ನಿರ್ಮಿಸಬೇಕು ಎಂದರು.ಮಾಧ್ಯಮ ಸಲಹೆಗಾರರನ್ನಾಗಿ ನಿಡಗುಂದಿ ತಾಲ್ಲೂಕಿನ ಎಲ್ಲ ಪತ್ರಕರ್ತರನ್ನು ಇದೇ ಸಂದರ್ಭದಲ್ಲಿ ಘೋಷಿಸಲಾಯಿತು. ನೂತನ ಪದಾಧಿಕಾರಿಗಳ ಆಯ್ಕೆ ಆಲಮಟ್ಟಿ ರೈಲು ಅಭಿವೃದ್ಧಿ ಹೋರಾಟ ಸಮಿತಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಗೌರವಾಧ್ಯಕ್ಷರಾಗಿ ಆಲಮಟ್ಟಿಯ ಅನ್ನದಾನೇಶ್ವರ ಪುರವರಹಿರೇಮಠದ ಪೀಠಾಧಿಪತಿ ರುದ್ರಮುನಿಸ್ವಾಮೀಜಿ, ಅಧ್ಯಕ್ಷರಾಗಿ ಭರತರಾಜ ದೇಸಾಯಿ(ಗಣಿ),…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಎಂಸಿಎ ಕೋರ್ಸ್ಗೆ ಹಂಚಿಕೆಯಾಗಿ ಬಾಕಿ ಉಳಿದ ಸೀಟುಗಳಿಗಾಗಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕಂಪ್ಯೂಟರ್ ವಿಜ್ಞಾನ ವಿಭಾಗದಲ್ಲಿ ಎಂಸಿಎ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಈ (ಡಿಸೆಂಬರ್) ತಿಂಗಳ ೩೧ರ ವರೆಗೆ ಯುಯುಸಿಎಂಎಸ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್ www.kswu.ac.inಇಂದ ಅಥವಾ ವಿವಿಯ ಕಂಪ್ಯೂಟರ್ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಅಜೀಜ ಮಂಕಾದಾರ ದೂರವಾಣಿ ಸಂಖ್ಯೆ: ೯೮೪೫೦೫೧೦೯೭, ೯೯೦೨೯೯೬೯೫೯ ಸಂಪರ್ಕಿಸಬಹುದು ಎಂದು ವಿವಿ ಪ್ರಕಟಣೆ ತಿಳಿಸಿದೆ.

Read More

ಅಶ್ಲೀಲ ಪದ ಬಳಕೆ ಪ್ರಕರಣ | ಬಿಜೆಪಿ ಎಂಎಲ್ಸಿ ಸಿ.ಟಿ ರವಿಗೆ ಬಿಗ್ ರಿಲೀಫ್ | ಉಚ್ಚ ನ್ಯಾಯಾಲಯ ಮಧ್ಯಂತರ ಆದೇಶ B ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಉಚ್ಚ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ.ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಘಟನೆ ರಾಜ್ಯದ ನಾಗರಿಕರಿಗೆ ಅತ್ಯಂತ ದುರದೃಷ್ಟಕರವಾದದ್ದು ಎಂದು ಪರಿಗಣಿಸಿದ ನ್ಯಾಯಾಲಯ, ಅಗತ್ಯವಿರುವಾಗ ತನಿಖೆಗೆ ಸಹಕರಿಸುವಂತೆ ಷರತ್ತು ವಿಧಿಸಿ, ಸಿಟಿ ರವಿ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಪೊಲೀಸರಿಗೆ ಸೂಚಿಸಿತು.ಪೊಲೀಸರು ಕಾನೂನು ಕ್ರಮ ಅನುಸರಿಸದೆ ಬಂಧಿಸಿರುವುದನ್ನು ಪ್ರಶ್ನಿಸಿ ಜಾಮೀನು ಅರ್ಜಿ ಸಲ್ಲಿಸಿದ್ದ ಸಿಟಿ ರವಿ ತಾನು ಬಿಡುಗಡೆಗೆ ಅರ್ಹ ಎಂದು ಹೇಳಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ಜಿ. ಉಮಾ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ, ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅಲ್ಪಸಂಖ್ಯಾತ ಮುಸ್ಲಿಮರ ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಪ್ರತಿಭಟನೆಯಲ್ಲಿ ಸಮುದಾಯದ ಜನರು ಭಾಗವಹಿಸಿ, ಅಂಬೇಡ್ಕರ್ ಅವರ ಗೌರವವನ್ನು ಕಾಪಾಡುವ ಸಲುವಾಗಿ ಸರ್ಕಾರದಿಂದ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.ಸಮಿತಿಯ ಮುಖಂಡ ಸೈಯದ್ ಜೈನುಲ್ ಅಬಿದಿನ್ ಮಾತನಾಡಿ, “ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಭಾರತದ ಸಂವಿಧಾನದ ಶಿಲ್ಪಿ ಮಾತ್ರವಲ್ಲ, ಸಮಾನತೆ ಮತ್ತು ನ್ಯಾಯದ ಪರಿಕಲ್ಪನೆಯನ್ನು ಆಳವಾಗಿ ಬಿಂಬಿಸಿದ ವ್ಯಕ್ತಿ. ಅವರ ಕುರಿತು ಇಂತಹ ಹೇಳಿಕೆ ತೀವ್ರವಾಗಿ ಖಂಡನೀಯ” ಎಂದು ಹೇಳಿದರು.ಮುಖಂಡರಾದ ಅಕ್ರಂ ಮಾಶಾಳಕರ, ಇರ್ಫಾನ್ ಶೇಖ, ಹಫಿಜ್ ಸಿದ್ದಿಕಿ ಮಾತನಾಡಿದರು.ಪ್ರತಿಭಟನೆಯ ನಂತರ, ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮುಖಂಡರಾದ ಮುನ್ನಾ ಬಕ್ಷಿ ಕುಲದೀಪ್ ಪೋತಿವಾಲ್, ಇಖಲಾಸ್ ಸುನೇವಾಲೆ, ಒ. ಂ. ಪಿರಾಂ ವಕೀಲರು, ಇಮ್ರಾನ್ ಜಹಾಗಿರದಾರ, ಹಿದಾಯತ್ ಮಾಶಾಳಕರ್, ಇಂಮ್ತಿಯಾಜ್…

Read More

ಪ್ರಗತಿಪರ ಚಿಂತಕರು, ಅಂಬೇಡ್ಕರ ಅಭಿಮಾನಿಗಳಿಂದ ಪ್ರತಿಭಟನೆ | ಷಾ ಪ್ರತಿಕೃತಿ ದಹಿಸಿ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ಇಂಡಿ : ಡಾ.ಬಿ.ಆರ್‌.ಅಂಬೇಡ್ಕರ ಅವರ ಬಗ್ಗೆ ಹಗುರವಾಗಿ ,ಅವಮಾನಕರ ಹೇಳಿಕೆ ನೀಡಿರುವ ಗೃಹ ಸಚಿವ ಅಮಿತ ಷಾ ಅವರು ಕೂಡಲೆ ದೇಶದ ಜನತೆಯ ಕ್ಷಮೆ ಕೊರಬೇಕು. ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಪ್ರಗತಿಪರ ಚಿಂತಕರು ಹಾಗೂ ಅಂಬೇಡ್ಕರ ಅಭಿಮಾನಿಗಳು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.ಪ್ರತಿಭಟನೆ ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟು ಟಿಪ್ಪುಸುಲ್ತಾನ, ಬಸವೇಶ್ವರ, ಅಂಬೇಡ್ಕರ, ಮಹಾವೀರ ವೃತ್ತಗಳ ಮೂಲಕ ನಡೆದು ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ, ಟಾಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿ ಕೇಂದ್ರ ಸಚಿವ ಅಮಿತ ಷಾ ಅವರ ಪ್ರತಿಕೃತಿ ದಹಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಡಿಎಸ್ಎಸ್‌ ಸಂಚಾಲಕ ರಮೇಶ ನಿಂಬಾಳಕರ, ಸತ್ತಾರ ಬಾಗವಾನ, ಜಟ್ಟೆಪ್ಪ ರವಳಿ, ಇಲಿಯಾಸ ಬೊರಾಮಣಿ, ಸದಾಶಿವ ಪ್ಯಾಟಿ, ಭೀಮಣ್ಣ ಕವಲಗಿ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ ಅವರು, ರಾಜ್ಯಸಭೆಯಲ್ಲಿ ಅಂಬೇಡ್ಕರ್…

Read More