Subscribe to Updates
Get the latest creative news from FooBar about art, design and business.
Author: editor.udayarashmi@gmail.com
ನಾಗಠಾಣ ಮತಕ್ಷೇತ್ರ ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ | ಮಾಜಿ ಶಾಸಕ ದೇವಾನಂದ ಚವ್ಹಾಣ ಆರೋಪ ಉದಯರಶ್ಮಿ ದಿನಪತ್ರಿಕೆ ಚಡಚಣ: ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕು ಸೇರಿದಂತೆ ನಾಗಠಾಣ ಮತಕ್ಷೇತ್ರದ ಬಹುತೇಕ ಗ್ರಾಮಗಳು ತೀವ್ರ ಮಳೆ ಕೊರತೆಯಿಂದ ಬರದ ಛಾಯೆಯಲ್ಲಿವೆ. ಆದರೆ ಜಿಲ್ಲೆಯ 13 ತಾಲ್ಲೂಕುಗಳ ಪೈಕಿ ಕೇವಲ ಮೂರು ತಾಲ್ಲೂಕುಗಳನ್ನು ಬರಪೀಡಿತವೆಂದು ಸರ್ಕಾರ ಘೋಷಿಸಿರುವುದು ಈ ಭಾಗದ ರೈತರಿಗೆ ಮಾಡಿದ ಅನ್ಯಾಯವಾಗಿದೆ. ಕೂಡಲೇ ಸಮಗ್ರ ನಾಗಠಾಣ ಮತಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಅಗತ್ಯ ಪರಿಹಾರೋಪಾಯಗಳನ್ನು ಕೈಗೊಳ್ಳಬೇಕು ಎಂದು ನಾಗಠಾಣ ಮತಕ್ಷೇತ್ರದ ಮಾಜಿ ಶಾಸಕ ದೇವಾನಂದ ಚವ್ಹಾಣ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಕೇವಲ ವಿಜಯಪುರ, ನಿಡಗುಂದಿ ಹಾಗೂ ಕೊಲ್ಹಾರ ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಿರುವುದು ಸರಿಯಲ್ಲ. ಸತತ ಬರಗಾಲದಿಂದ ತತ್ತರಿಸುತ್ತಿರುವ ಇಂಡಿ ಹಾಗೂ ಚಡಚಣ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವುದು ರೈತರಿಗೆ ಮಾಡಿದ ಬಹುದೊಡ್ಡ ದ್ರೋಹವಾಗಿದೆ ಎಂದು…
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ತಾಸಬಾವಡಿ ಆವರಣದಲ್ಲಿ ಗಣೇಶ ವಿಸರ್ಜನೆಗೆ ಶಾಶ್ವತವಾಗಿ 3080 ಅಳತೆಯ ಹೊಂಡ ನಿರ್ಮಾಣ ಮಾಡಲು ಪಾಲಿಕೆಯ ಆಯಕ್ತರಿಗೆ ಖಡಕ್ ಸೂಚನೆ ನೀಡಿದ ನಂತರ ಅದಕ್ಕೆ ಒಪ್ಪಿದರು ಎಂದು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ತಿಳಿಸಿದ್ದಾರೆ. ಮಂಗಳವಾರ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ್ ಮೆಕ್ಕಳಕಿ ಅವರನ್ನು ಕರೆಯಿಸಿ, ನಗರದ ತಾಸಬಾವಡಿಯಲ್ಲಿ ಅನೇಕ ವರ್ಷಗಳಿಂದ ಕುಂಭ ಪೂಜೆ, ಮರಗಮ್ಮ ದೇವಿ ಜಾತ್ರೆಗೆ ಮಡಿ ನೀರು ತರುವುದು ಹಾಗೂ ಗಣೇಶ ವಿಸರ್ಜನೆ ಮಾಡುತ್ತ ಬರಲಾಗಿದೆ. ಇಂತಹ ಹಿಂದುಗಳ ಪವಿತ್ರ ಹಬ್ಬದ ಸಂದರ್ಭದಲ್ಲಿ ಸಂಬಂಧವಿಲ್ಲದವರ ಜೊತೆಗೂಡಿ, ಯಾಕೆ ಈ ಗೊಂದಲ ಸೃಷ್ಠಿ ಮಾಡುತ್ತಿದ್ದೀರಿ? ಹೊಂಡದ ಅಳತೆ ಕಡಿಮೆ ಮಾಡಿದರೆ, ಹೋರಾಟ ಮಾಡಬೇಕಾಗುತ್ತದೆ ಎಂದು ಆಯುಕ್ತರಿಗೆ ಎಚ್ಚರಿಸಿ, ಅಲ್ಲಿ ಶಾಶ್ವತವಾಗಿ ಗಣೇಶ ವಿಸರ್ಜನೆಗೆ ವ್ಯವಸ್ಥೆ ಮಾಡುವ ಅಗತ್ಯವಿದೆ. ಆದ್ದರಿಂದ ಗಣೇಶ ಮಂಡಳಿಗಳ ಮತ್ತು ನಾಗರಿಕರ ಭಾವನೆಗೆ ಧಕ್ಕೆಯಾಗದಂತೆ, 3080 ಅಳತೆಯ ಹೊಂಡ…
ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ | ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಪ್ರಕಟಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ (ಎಸ್‌ಐಆರ್) ಪ್ರಕ್ರಿಯೆ ಪ್ರಸ್ತುತ ಚಾಲ್ತಿಯಲ್ಲಿದ್ದು, ಅರ್ಹ ಮತದಾರರು ತಮ್ಮ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ ೨೩ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಂಣಾಧಿಕಾರಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ತಿಳಿಸಿದ್ದಾರೆ.ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ನಮೂನೆ-೬, ಅನಿವಾಸಿ ಭಾರತೀಯ ಮತದಾರರ ಹೆಸರು ಸೇರ್ಪಡೆಗೆ ನಮೂನೆ-೬ಎ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ನಮೂನೆ-೭ ಹಾಗೂ ವಿಳಾಸ ಬದಲಾವಣೆ, ಹೆಸರು ಅಥವಾ ಇತರೆ ವಿವರಗಳ ತಿದ್ದುಪಡಿಗಾಗಿ ನಮೂನೆ-೮ರ ಮೂಲಕ ಅರ್ಜಿ ಅಥವಾ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಮತದಾರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಸ್ವೀಕರಿಸಲಾದ ಅರ್ಜಿ ಮತ್ತು ಆಕ್ಷೇಪಣೆಗಳಿಗೆ ಸಂಬಂಧಿಸಿದ ಪಟ್ಟಿಗಳನ್ನು ನಮೂನೆ-೯, ೧೦,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಲೂಕಿನಲ್ಲಿ ಹಲವು ವರ್ಷಳಿಂದ ಕಾರ್ಯನಿರ್ವಹಿಸದೆ ಸ್ಥಗಿತಗೊಂಡಿರುವ ೮ ಸಹಕಾರ ಸಂಘಗಳ ನೋಂದಣಿ ರದ್ದುಪಡಿಸಲು ನಿರ್ಧರಿಸಲಾಗಿದ್ದು, ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನಿಸಲಾಗಿದೆ.ಈ ಸಂಘಗಳು ಬೈಲಾದಂತೆ ಕಾರ್ಯನಿರ್ವಹಿಸದೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ ಉಪ ನಿಬಂಧಕರು ಇವುಗಳನ್ನು ಈಗಾಗಲೇ ಸಮಾಪನೆಗೊಳಿಸಿ ಆದೇಶಿಸಿದ್ದಾರೆ.ಈ ಸಂಘಗಳು ನೋಂದಾಯಿತ ವಿಳಾಸದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಹಾಗೂ ಆಡಳಿತ ಮಂಡಳಿ, ಕಾರ್ಯದರ್ಶಿಗಳ ವಿವರ ಮತ್ತು ಲೆಕ್ಕ ಪರಿಶೋಧನಾ ಮಾಹಿತಿ ಲಭ್ಯವಿಲ್ಲ ಎಂದು ಸಮಾಪನಾಧಿಕಾರಿಗಳು ತಿಳಿಸಿದ್ದಾರೆ.ಈ ಸಂಘಗಳಿಂದ ಸಾರ್ವಜನಿಕರಿಗೆ ಅಥವಾ ವ್ಯಕ್ತಿಗಳಿಗೆ ಯಾವುದೇ ಕೊಡತಕ್ಕ ಅಥವಾ ಬರತಕ್ಕ ಬಾಕಿಗಳಿದ್ದಲ್ಲಿ, ಸೂಕ್ತ ದಾಖಲೆಗಳೊಂದಿಗೆ ೭ ದಿನಗಳೊಗಾಗಿ ವಿಜಯಪುರ ಉಪ ವಿಭಾಗದ ಸಹಾಯಕ ನಿಬಂಧಕರ ಕಚೇರಿಯ ಸಮಾಪನಾಧಿಕಾರಿಗಳು,ಸಹಕಾರ ಸಂಘಗಳ ನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ.ನೋಂದಣಿ ರದ್ದತಿಗೊಳಗಾದ ಸಂಘಗಳ ವಿವರ: ಸುಹಾಗ ಪ್ರಾಥಮಿಕ ಗ್ರಾಹಕರ ಸಹಕಾರ ಸಂಘ ವಿಜಯಪುರ ಬಂಜಾರಾ ಗೃಹ ನಿರ್ಮಾಣ ಸಹಕಾರ ಸಂಘ ಹೆಗಡಿಹಾಳ ಗೃಹ ನಿರ್ಮಾಣ ಸಹಕಾರ ಸಂಘ ಲೋಹಗಾಂವ ಎಲ್.ಟಿ. ಆಶಾದೀಪ ವಿವಿಧೋದ್ದೇಶಗಳ ಸಹಕಾರ ಸಂಘ ವಿಜಯಪುರ ಶ್ರೀ ರೇಣುಕಾ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಲೂಕಿನಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸದೆ ನಿಷ್ಕ್ರಿಯವಾಗಿರುವ ವಿವಿಧ ಸಹಕಾರ ಸಂಘಗಳನ್ನು ಸಮಾಪನಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು, ಈ ಸಂಬಂಧ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರು ಹಾಗೂ ಸದಸ್ಯರಿಗೆ ೭ ದಿನಗಳ ಕಾಲಾವಕಾಶ ನೀಡಲಾಗಿದೆ.ಈ ಸಂಘಗಳಿಗೆ ಸಂಬಂಧಿಸಿದಂತೆ ಸದಸ್ಯರು, ಸಾರ್ವಜನಿಕರು ಅಥವಾ ಇತರೆ ಹಕ್ಕುದಾರರು ತಮ್ಮ ಹಕ್ಕು-ಬಾಧ್ಯತೆಗಳು ಹಾಗೂ ಕೊಡತಕ್ಕ-ಬರತಕ್ಕ ಬಾಬುಗಳ ಕುರಿತು ಮಾಹಿತಿ ಅಥವಾ ಆಕ್ಷೇಪಣೆಗಳಿದ್ದರೆ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಮಾಪನಾಧಿಕಾರಿಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರು, ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ, ವಿಜಯಪುರ ಉಪವಿಭಾಗ, ವಿಜಯಪುರ. ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ.ಸಮಾಪನೆಗೊಳ್ಳಲಿರುವ ಸಹಕಾರ ಸಂಘಗಳ ವಿವರ: ರಕ್ಷಾ ಪತ್ತಿನ ಸಹಕಾರ ಸಂಘ, ಬಂಜಾರಾ ಮತ್ತು ಮಹಿಳಾ ಕೈಗಾರಿಕಾ ಸಹಕಾರ ಸಂಘ, ವಿದ್ಯಾನಗರ ಗೃಹ ನಿರ್ಮಾಣ ಸಹಕಾರ ಸಂಘ, ಹುಣಶ್ಯಾಳ ಹಾಲು ಉತ್ಪಾದಕರ ಸಹಕಾರ ಸಂಘ ,ರೇಣುಕಾ ಪತ್ತಿನ ಸಹಕಾರ ಸಂಘ, ವಿಜಯಪುರ ಶಹರ ಟಿನ್ ತಗಡಿನ ಸಾಮಾನುಗಳ ತಯಾರಕರ ಕೂಲಿಕಾರರ ಸಹಕಾರ ಸಂಘ,ಕಲ್ಪವೃಕ್ಷ…
ವಿಜಯಪುರ ಜಿಲ್ಲೆಯ ಮತದಾರರಿಗೆ ಜಿಲ್ಲಾಧಿಕಾರಿ ಡಾ.ಆನಂದ್ ಕೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ (ಎಸ್‌ಐಆರ್) ಕರಡು ಮತದಾರರ ಪಟ್ಟಿಯನ್ನು ಎಲ್ಲ ತಹಶೀಲ್ದಾರರ ಕಚೇರಿ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಪ್ರಕಟಿಸಲಾಗಿದ್ದು, ಸಾರ್ವಜನಿಕರು ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಆ. ೨೪ ರಂದು ಕರಡು ಮತದಾರರ ಪಟ್ಟಿಯನ್ನು ಜಿಲ್ಲೆಯ ಎಲ್ಲ ತಹಶೀಲ್ದಾರರ ಕಚೇರಿ ಹಾಗೂ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಪ್ರಕಟಪಡಿಸಲಾಗಿದೆ. ಜೊತೆಗೆ ನಿಮ್ಮ ಮತಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳ ಬಳಿ ಇರುವ ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಬಹುದಾಗಿದೆ ಎಂದವರು ತಿಳಿಸಿದ್ದಾರೆ.ಜೊತೆಗೆ ಚುನಾವಣಾ ಆಯೋಗದ hಣಣಠಿs://voಣeಡಿs.eಛಿi.gov.iಟಿ/ಜoತಿಟಿಟoಚಿಜ-eಡಿoಟಟ ಮತ್ತು ಜಿಲ್ಲಾ ವೆಬ್ ಪೋರ್ಟಲ್ hಣಣಠಿs://viರಿಚಿಥಿಚಿಠಿuಡಿಚಿ.ಟಿiಛಿ.iಟಿ/eಟಿ/ ದಲ್ಲಿಯೂ ಸಹ ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಬಹುದಾಗಿದೆ ಎಂದವರು ತಿಳಿಸಿದ್ದಾರೆ.ಒಂದು ವೇಳೆ ಅರ್ಹ ಮತದಾರರ ಹೆಸರು ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ ಬಾರದೇ ಇದ್ದಲ್ಲಿ, ಯಾವುದಾದರೂ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ…
ವಿಜಯಪುರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿರುವ ಎಲ್ಲ ಗರ್ಭಿಣಿಯರ ಮಾಹಿತಿಯನ್ನು ಆರ್.ಸಿ.ಹೆಚ್ ತಂತ್ರಾಂಶದಲ್ಲಿ ಕಡ್ಡಾಯವಾಗಿ ನಿಗದಿತ ಸಮಯದಲ್ಲಿ ನೋಂದಣಿ ಮಾಡಬೇಕು ಹಾಗೂ ನಿಯಮಿತವಾಗಿ ಆರೋಗ್ಯ ತಪಾಸಣೆ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಹೇಳಿದರು.ನಗರದ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.ಎಲ್ಲ ತಾಲೂಕಾ ಆರೋಗ್ಯ ಅಧಿಕಾರಿಗಳು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಕಡಿಮೆ ಪ್ರಗತಿ ಸಾಧಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಸಭೆಯನ್ನು ಕರೆದು ಹೆಚ್ಚಿನ ಪ್ರಗತಿ ಸಾಧಿಸಲು ಕ್ರಮವಹಿಸಬೇಕು ಎಂದರು.ಆರ್.ಬಿ.ಎಸ್.ಕೆ ತಂಡದಿಂದ ಅಂಗನವಾಡಿ ಕೇಂದ್ರ ಹಾಗೂ ಶಾಲೆಯ ಮಕ್ಕಳ ಆರೋಗ್ಯ ತಪಾಸಣೆಯಲ್ಲಿ ನ್ಯೂನ್ಯತೆ ಕಂಡುಬಂದ ಮಕ್ಕಳು ಹಾಗೂ ಮೇಲ್ಮಟ್ಟದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮಕ್ಕಳ ಮಾಹಿತಿಯನ್ನು ನೀಡಲು ತಿಳಿಸಿದರು.೨೦೨೬-೨೭ ನೇ ಸಾಲಿನಲ್ಲಿ ರಾಷ್ಟ್ರೀಯ…
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಬೇಕು ಆಗ್ರಹಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಧರಣಿ ಸತ್ಯಾಗ್ರಹ ಮುಂದುವರೆದಿದೆ.ಮಂಗಳವಾರ ಮಹಿಳಾ ಬಿಜೆಪಿ ಕಾರ್ಯಕರ್ತೆಯರು ಪಾಲ್ಗೊಂಡು ತಮ್ಮ ಬೆಂಬಲ ಸೂಚಿಸಿದರು.ಮಹಿಳಾ ಮೋರ್ಚಾ ಅಧ್ಯಕ್ಷೆ ಬಸಮ್ಮ ಮರಡಿ, ವಿಜಯಲಕ್ಷ್ಮಿ ರೂಗಿಮಠ, ಗೀತಾ ರಾಠೋಡ, ಸುಧಾ ಕುಂಬಾರ, ಅಶ್ವಿನಿ ಕೊಟಗೊಂಡ ಶ್ರೀದೇವಿ ಕುಲಕಣಿ, ಶ್ರೀದೇವಿ ನಾವಿ ಮಾತನಾಡಿ, ಜಿಲ್ಲೆಯ ವಿಜಯಪುರ, ಕೋಲಾರ ಮತ್ತು ನಿಡಗುಂದಿ ತಾಲೂಕುಗಳನ್ನು ಬರ ಪೀಡಿತ ತಾಲೂಕು ಗಳಾಗಿ ಘೋಷಿಸಿರುವದು ಹಿನ್ನೆಲೆಯಲ್ಲಿ ಭೌಗೋಳೀಕವಾಗಿ ಸಮೀಪದಲ್ಲಿರುವ ಹಾಗೂ ಸಮಾನ ಹವಾಮಾನ ಪರಿಸ್ಥಿತಿಗಳನ್ನು ಹೊಂದಿರುವ ಇಂಡಿ ತಾಲೂಕಿನಲ್ಲಿ ಮಳೆಯ ಕೊರತೆ ಮತ್ತು ಕೃಷಿ ಪರಿಸ್ಥಿತಿಯನ್ನು ಪ್ರತ್ಯೇಕವಾಗಿ ಮರುಪರಿಶೀಲಿಸುವದು ಅಗತ್ಯವಾಗಿದೆ. ಇಂಡಿ ತಾಲೂಕಿನ ರೈತರು ಎದುರಿಸುತ್ತಿರುವ ಬೆಳೆ ಪರಿಸ್ಥಿತಿ ಮಣ್ಣಿನ ತೇವಾಂಶ ಕೊರತೆ ಬಿತ್ತನೆ ಹಾಗೂ ಬೆಳೆ ಸ್ಥಾಪನೆಯ ಮೇಲಿನ ಪರಿಣಾಮ ಮತ್ತು ಸ್ಥಳೀಯವಾಗಿ ಕಂಡು ಬಂದಿರುವ ಒಣಹವೆಯ ಅವಧಿಗಳನ್ನು ಪರಿಗಣಿಸಿ ತಾಲೂಕನ್ನು ಪರಿಗಣಿಸಬೇಕು…
ವಿಜಯಪುರದಲ್ಲಿ ಖ್ಯಾತ ನೀರಾವರಿ ತಜ್ಞ ಡಾ.ಕೃಷ್ಣ ಕೋಲ್ಹಾರ ಕುಲಕರ್ಣಿ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಲು ಇಲ್ಲಿಯವರೆಗೆ ಆಡಳಿತ ಮಾಡಿದ ಯಾವುದೇ ಪಕ್ಷದ ಸರ್ಕಾರ ಇದ್ದರೂ ಕೂಡ ಮುತುವರ್ಜಿ ವಹಿಸಿಲ್ಲ ಇದರಿಂದ ವಿಜಯಪುರ – ಬಾಗಲಕೋಟ ಸೇರಿದಂತೆ ಉತ್ತರ ಕರ್ನಾಟಕದ ಭಾಗದಲ್ಲಿ ನೀರಾವರಿ ಯೋಜನೆ ಸಂಪೂರ್ಣವಾಗಿ ಜಾರಿಯಾಗಿಲ್ಲ. ಇದರಿಂದ ರೈತರಿಗೆ ಕೃಷಿಗೆ ನೀರಿಲ್ಲದೇ ಪರಿತಪಿಸುವಂತಾಗಿದೆ ಎಂದು ಖ್ಯಾತ ನೀರಾವರಿ ತಜ್ಞರಾದ ಡಾ.ಕೃಷ್ಣ ಕೋಲ್ಹಾರ ಕುಲಕರ್ಣಿ ಹೇಳಿದರು.ಮಂಗಳವಾರದಂದು ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಭವನದಲ್ಲಿ ಕೃಷ್ಣಾ ಕೊಳ್ಳ ಜಲಸಂರಕ್ಷಣಾ ಹೋರಾಟ ಸಮಿತಿ ವತಿಯಿಂದ ಕರೆದಿದ್ದ ಮಾಧ್ಯಮಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮೊದಲಿನಿಂದಲೂ ಉತ್ತರ ಕರ್ನಾಟಕವನ್ನು ಕಡೆಗಣಿಸುತ್ತಾ ಬಂದಿದೆ ಒಂದು ರೀತಿ ಉತ್ತರ ಕರ್ನಾಟಕವೆಂದರೆ ರಾಜ್ಯ ಸರ್ಕಾರಕ್ಕೆ ಅಲರ್ಜಿ ಉಂಟಾಗುತ್ತದೆ ಉತ್ತರ ಕರ್ನಾಟಕದಲ್ಲಿ ಬೃಹತ್ ಜಲಾಶಯಗಳನ್ನು ನಿರ್ಮಿಸಿದ್ದರು. ಸಮರ್ಪಕವಾಗಿ ರೈತರಿಗೆ ನೀರು ಕೊಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಅದರಲ್ಲೂ ವಿಜಯಪುರ ಜಿಲ್ಲೆ ಎಂದರೆ ಸರಕಾರ ಸಂಪೂರ್ಣ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯೋಗ ತರಬೇತುದಾರ, ಮ್ಯಾರಾಥಾನ್ ಓಟಗಾರ ಹಾಗೂ ಅಲ್ಟ್ರಾ ರನ್ನರ್ ರೇಣುಕಾ ಪ್ರಸಾದ ಅವರು ಸೆಪ್ಟೆಂಬರ್ ಮೊದಲ ವಾರದಿಂದ ಡಿಸೆಂಬರ್ ಮೊದಲ ವಾರದ ವರೆಗೆ ಪ್ರತಿ ಶನಿವಾರ ಮತ್ತು ರವಿವಾರ ನಗರದಲ್ಲಿ ಉಚಿತ ತರಬೇತಿ ನೀಡಲಿದ್ದಾರೆ.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಹೊಸ ಕ್ಯಾಂಪಸ್ ನಲ್ಲಿರುವ ಎ.ಎಸ್.ಪಿ ಕಾಮರ್ಸ್ ಕಾಲೇಜಿನ ಕ್ರೀಡಾಂಗಣದಲ್ಲಿ ಶನಿವಾರ ಮತ್ತು ರವಿವಾರ ಬೆಳಿಗ್ಗೆ 6 ಗಂಟೆಗೆ ತರಬೇತಿ ನೀಡಲಿದ್ದಾರೆ. ವೃಕ್ಷಥಾನ್ ಹೆರಿಟೇಜ್ ರನ್- 2026ರಲ್ಲಿ ನಡೆಯಲಿರುವ 10 ಕಿ. ಮೀ. ಮತ್ತು 21 ಕಿ. ಮೀ. ಓಟಗಳಲ್ಲಿ ಪಾಲ್ಗೋಳ್ಳುವವರು ಇದರ ಪ್ರಯೋಜನ ಪಡೆಯಬಹುದಾಗಿದೆ.ರೇಣುಕಾ ಪ್ರಸಾದ ಅವರು ಭಾರತದಾದ್ಯಂತ ನಡೆದ ಹಲವು ಪ್ರತಿಷ್ಠಿತ ಓಟದ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದು, ಬೆಂಗಳೂರು ಮ್ಯಾರಥಾನ್ ಮತ್ತು ಮುಂಬೈ ಮ್ಯಾರಥಾನ್ ಸೇರಿದಂತೆ ಹಲವಾರು ಪ್ರಮುಖ ಮ್ಯಾರಥಾನ್‌ಗಳಲ್ಲಿ ಅಧಿಕೃತ ಪೇಸರ್ ಆಗಿ ಪಾಲ್ಗೊಂಡಿದ್ದಾರೆ. ಅಲ್ಲದೇ, ಅವರ 18ಕ್ಕೂ ಹೆಚ್ಚು ವರ್ಷಗಳ ಓಟದ ಅನುಭವದೊಂದಿಗೆ ಓಟಗಾರರಿಗೆ ಸರಿಯಾದ ವೇಗ, ತರಬೇತಿ ಮತ್ತು ಓಟದ ತಂತ್ರಗಳನ್ನು ಬೆಳೆಸಲು ಮಾರ್ಗದರ್ಶನ…
