Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದಿಂದ ಬಿಂಜಲಭಾವಿ ಮಾರ್ಗವಾಗಿ ರಸ್ತೆ ಡಾಂಬರೀಕರಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಳಿಕೋಟಿ ತಾಲೂಕ ರಾಷ್ಟ್ರೀಯ ರೈತರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನೇತೃತ್ವದಲ್ಲಿ ಬಿಂಜಲಭಾವಿ ಹಳ್ಳದ ಸಮೀಪದ ರಸ್ತೆ ತಡೆ ಮತ್ತು ಪ್ರತಿಭಟನೆ ಹಾಗು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.ದಿ. ೨೦ರ ಬೆಳಿಗ್ಗೆ ಬಿಂಜಲಭಾವಿ ಗ್ರಾಮದಿಂದ ಪ್ರತಿಭಟನೆ ಮೂಲಕ ಕಲಕೇರಿ ಹತ್ತಿರವಿರುವ ಬಿಂಜಲಭಾವಿ ಹಳ್ಳದ ವರೆಗೆ ಪಾದಯಾತ್ರೆಯ ಮೂಲಕ ರೈತರು ಮತ್ತು ಸಾರ್ವಜನಿಕರೊಂದಿಗೆ ಆಗಮಿಸಿದ ರಾಷ್ಟ್ರೀಯ ರೈತರ ಸಂಘದ ತಾಳಿಕೋಟಿ ತಾಲೂಕ ಅಧ್ಯಕ್ಷರು ಮತ್ತು ಪದಾಧಿಕಾರಿಗಳೊಂದಿಗೆ ಪ್ರತಿಭಟನೆ ಮತ್ತು ಧರಣಿಯನ್ನು ಆರಂಭಿಸಿದ್ದಾರೆ.ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು ಸುಮಾರು ೨೦ ವರ್ಷಗಳಿಂದ ಕಲಕೇರಿ ಬಿಂಜಲಭಾವಿ ಮತ್ತು ಕೆಸರಟ್ಟಿ ಮಾರ್ಗದ ರಸ್ತೆಯು ಸಂಪೂರ್ಣ ಹಾಳಾಗಿದ್ದು, ಅಂದಾಜು ೧೦ ಕೀ.ಮೀ ರಸ್ತೆ ತಗ್ಗು ದಿಣ್ಣೆಗಳಿಂದ ಕೂಡಿದ್ದು, ಸಂಪೂರ್ಣ ಕೆಸರು ಗದ್ದೆಯಂತಾಗಿ ದಿನಬೆಳಗಾದರೆ ವಾಹನ ಸವಾರರ ರಸ್ತೆ ಸಂಚಾರಕ್ಕೆ ಸಂಚಕಾರ ತಂದೊಡ್ಡಿದ್ದು, ಹಲವು ಸಾವು ನೋವುಗಳು, ರಸ್ತೆ ಅಪಘಾತಗಳಿಗೆ ಕಾರಣವಾಗಿದೆ. ಕೂಡಲೇ…

Read More

ಶ್ರೀ ಶರಣಜ್ಯೋತಿ ವಿದ್ಯಾ ಸಂಸ್ಥೆಯ ಗ್ರಾಮೀಣ ಬಾಲಕಿಯರ ವಸತಿ ನಿಲಯದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ದೀಪಾಕ್ಷಿ ಜಾನಕಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಿಯಮಿತ ಆರೋಗ್ಯ ತಪಾಸಣೆಗಳು ಗಂಭೀರವಾಗಿ ಅನಾರೋಗ್ಯಕ್ಕೆ ಒಳಗಾಗುವ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸುಲಭವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಶ್ರೀಮತಿ ದೀಪಾಕ್ಷಿ ಜಾನಕಿ ಹೇಳಿದರು.ನಗರದ ಕೀರ್ತಿ ನಗರದಲ್ಲಿರುವ ಶ್ರೀ ಶರಣಜ್ಯೋತಿ ವಿದ್ಯಾ ಸಂಸ್ಥೆಯ ಗ್ರಾಮೀಣ ಬಾಲಕಿಯರ ವಸತಿನಿಲಯ (ಹಾಸ್ಚೆಲ್) ದಲ್ಲಿರುವ ಬಾಲಕಿಯರಿಗಾಗಿ ಜುಲೈ ೨೦ ಸೋಮವಾರ ಏರ್ಪಡಿಸಿದ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಈ ಸಂಸ್ಥೆಯ ಅಧಿಕಾರಿಗಳು ನಮ್ಮ ಇಲಾಖೆಯ ಅನುದಾನದ ಸಹಾಯ ಪಡೆದು ಇಲ್ಲಿಯ ಬಾಲಕಿಯರ ಆರೋಗ್ಯದ ಹಿತದೃಷ್ಟಿಯಿಂದ ಇಂತಹ ಉಪಯುಕ್ತ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.ಶರಣಜ್ಯೋತಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ದೇವನಗಾಂವ ಮಾತನಾಡಿ, ಮಕ್ಕಳ ಆರೋಗ್ಯ ತಪಾಸಣೆ ಮಾಡುವುದರಿಂದ ಇಲ್ಲಿಯ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳು ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಅತ್ಯಂತ ಹೆಚ್ಚು ಬಾಧಿತವಾಗಿರುವ ಜಿಲ್ಲೆಗಳಾಗಿದ್ದು, ಈ ಭಾಗದ ಸಂತ್ರಸ್ತರು ಹಲವು ವರ್ಷಗಳಿಂದ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ, (ಪ್ರವೀಣ ಶೆಟ್ಟಿ ಬಣ) ಕೊಲ್ಹಾರ ತಾಲೂಕ ಘಟಕದ ವತಿಯಿಂದ ರವಿ ಗೊಳಸಂಗಿ ಅವರು ಪ್ರಕಟಣೆಯಲ್ಲಿ ತಿಳಿಸಿದರು.ಜಲ ಸಂಪನ್ಮೂಲ ಸಚಿವರು ಹಾಗೂ ಇಲಾಖೆಯ ಅಧಿಕಾರಿಗಳು ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಮುಂಚಿತವಾಗಿ ಮಾಹಿತಿ ನೀಡದೆ ಏಕಾಏಕಿ ಬಂದು ಹೋಗುತ್ತಿರುವುದು ಸರಿಯಾದ ಕ್ರಮವಲ್ಲ. ಸರ್ಕಾರವು ಜನರ ಅಹವಾಲುಗಳನ್ನು ಆಲಿಸಿ ಪರಿಹಾರ ನೀಡುವುದು ತನ್ನ ಪ್ರಮುಖ ಕರ್ತವ್ಯವಾಗಿದ್ದು, ಈ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಅವರು ಆಗ್ರಹಿಸಿದರು.ಬಾಗಲಕೋಟೆ ಮತ್ತು ಆಲಮಟ್ಟಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಚೇರಿಗಳು ಇದ್ದು, ಜನರ ಅಹವಾಲುಗಳನ್ನು ಸ್ವೀಕರಿಸಲು ನಿಗದಿತ ಸಮಯವನ್ನು ಘೋಷಿಸಿ ಮುಂಚಿತವಾಗಿ ಪತ್ರಿಕಾ ಪ್ರಕಟಣೆ ನೀಡಬೇಕು. ಇದರಿಂದ ಸಂತ್ರಸ್ತರು ಹಾಗೂ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಂಬಂಧಿಸಿದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ವತಿಯಿಂದ 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಹ.ಮ. ಪೂಜಾರ್ ಗುರುಗಳಿಗೆ ಅಭಿಮಾನ ಪೂರ್ವಕವಾಗಿ ಸನ್ಮಾನಿಸಿ ಮಾತನಾಡಿದ ಹಿರಿಯ ಮಕ್ಕಳ ಸಾಹಿತಿ ಪ. ಗು. ಸಿದ್ದಾಪುರವರು, ಹ. ಮ. ಪೂಜಾರ ಗುರುಗಳಿಗೆ 21ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನ ಬಯಸದೇ ಬಂದ ಭಾಗ್ಯವಾಗಿದೆ ಎಂದರು.ರಾಜ್ಯೋತ್ಸವ ಪ್ರಶಸ್ತಿಯ ನಂತರ ಸಿಂದಗಿಯಎಚ್. ಜಿ. ಕಾಲೇಜಿನಲ್ಲಿ ದಿನಾಂಕ 21 ಮತ್ತು 22 ರಂದು ನಡೆಯಲಿರುವ ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಿದ್ದು ಸಂಗಮದ ಎಲ್ಲ ಸದಸ್ಯರಿಗೆ ಹರ್ಷವನ್ನುಂಟು ಮಾಡಿದೆ ಎಂದರು.ಹ.ಮ. ಪೂಜಾರ್ ಗುರುಗಳು ವಯೋಸಹಜ ತೊಂದರೆಗಳಿದ್ದರೂ ಮಾನಸಿಕವಾಗಿ ಚೈತನ್ಯವನ್ನು ಹೊಂದಿದ್ದಾರೆ. ಶೀಘ್ರದಲ್ಲಿಯೇ ಅವರ ಅವರ ಅಭಿನಂದನಾ ಗ್ರಂಥದ ಸಿದ್ಧತೆ ನಡೆಯಲಿ ಎಂದು ಸಲಹೆ ನೀಡಿದರು.ಸನ್ಮಾನಕ್ಕೆ ಉತ್ತರವಾಗಿ ಸಮ್ಮೇಳನದ ಸರ್ವಾಧ್ಯಕ್ಷರಾದ ಹ.ಮ. ಪೂಜಾರ ಗುರುಗಳು, ಸಂಗಮದ ಸದಸ್ಯರೆಲ್ಲರೂ ನನ್ನ ಆತ್ಮೀಯ ಬಂಧುಗಳು ನಿಮ್ಮೆಲ್ಲರ ಆತ್ಮೀಯ ಸನ್ಮಾನಕ್ಕೆ ನಾನು ಚಿರಋಣಿಯಾಗಿದ್ದೇನೆ ಮಕ್ಕಳಿಗಾಗಿ ಕಾರ್ಯಕ್ರಮಗಳನ್ನು ನಾನು…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕು ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿರುವ ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹಿಸಿ ತಹಶೀಲ್ದಾರ ನಿಂಗಣ್ಣ ಬಿರಾದಾರ ಅವರಿಗೆ ಮನವಿ ಸಲ್ಲಿಸಲಾಯಿತು.ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಶುಕ್ರವಾರ ಆಗಮಿಸಿದ ವಿಕಲಚೇತನರ ವಿವಿಧ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಕಳೆದ ಆರು ತಿಂಗಳಿನಿಂದ ಸ್ಥಗಿತಗೊಂಡಿರುವ ಅರ್ಹ ವಿಕಲಚೇತನರ ಮಾಸಾಶನವನ್ನು (ಪಿಂಚಣಿ) ತಕ್ಷಣವೇ ಪುನರ್ ಆರಂಭಿಸಬೇಕೆಂದು ಒತ್ತಾಯಿಸಿದರು.ಜೊತೆಗೆ ಇಲ್ಲಿನ ಎಂ.ಆರ್.ಡಬ್ಲ್ಯೂ ವಿ.ಆರ್.ಡಬ್ಲ್ಯೂ , ಯು.ಆರ್.ಡಬ್ಲ್ಯೂ ಪದಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ ಮೂಲಕ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಯಾದ ಸಂಗಪ್ಪ ಸುರಗಿಹಳ್ಳಿ ಮಾತನಾಡಿ, ಪಿಂಚಣಿ ಸ್ಥಗಿತದಿಂದಾಗಿ ತಾಲ್ಲೂಕಿನ ನೂರಾರು ವಿಕಲಚೇತನರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.ತಹಶೀಲ್ದಾರರ ಸಕಾರಾತ್ಮಕವಾಗಿ ಸ್ಪಂದಿಸುವುದರ ಮೂಲಕ ಮನವಿ ಸ್ವೀಕರಿಸಿ ವಿಕಲಚೇತನರ ಪಿಂಚಣಿ ಮರುಚಾಲನೆಗೆ ಅಗತ್ಯವಿರುವ ಪೂರಕ ದಾಖಲಾತಿಗಳನ್ನು ಒದಗಿಸಿದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಅಲ್ಲದೆ, ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ ಸಿಬ್ಬಂದಿಗಳು ತಮ್ಮ ವ್ಯಾಪ್ತಿಯಲ್ಲಿ ರದ್ದಾಗಿರುವ ಅರ್ಹ ವಿಕಲಚೇತನರ ಪಿಂಚಣಿ ವಿವರಗಳು ಮತ್ತು ಅಗತ್ಯ…

Read More

ಉದಯರಶ್ಮಿ ದಿನಪತ್ರಿಕೆ ​ಆಲಮೇಲ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಜಿಲ್ಲಾ ಪತ್ರಿಕೋದ್ಯಮ ಪ್ರಶಸ್ತಿಗೆ ಆಲಮೇಲ ತಾಲೂಕು ಘಟಕದ ಅಬ್ದುಲಘನಿ ಎಂ. ದೇವರಮನಿ ಅವರು ಆಯ್ಕೆಯಾಗಿದ್ದಾರೆ.​ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಅತ್ಯುತ್ತಮ ಸೇವೆ ಸಲ್ಲಿಸುತ್ತಾ ಬಂದಿರುವ ಇವರು, ಸಮಾಜಮುಖಿ ವರದಿಗಾರಿಕೆ, ಜನಪರ ಸಮಸ್ಯೆಗಳನ್ನು ಬೆಳಕಿಗೆ ತರುವ ಕಾರ್ಯ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.​ಇಂದು (19.07.2026) ಪ್ರಶಸ್ತಿ ಪ್ರದಾನ:ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಇಂದು ಹಮ್ಮಿಕೊಳ್ಳಲಾಗಿರುವ ‘ಪತ್ರಿಕಾ ದಿನಾಚರಣೆ’ ಸಮಾರಂಭದಲ್ಲಿ ಅಬ್ದುಲಘನಿ ಎಂ. ದೇವರಮನಿ ಅವರಿಗೆ ಈ ಪ್ರತಿಷ್ಠಿತ ಜಿಲ್ಲಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.​ಅಬ್ದುಲಘನಿ ಎಂ. ದೇವರಮನಿ ಅವರ ಈ ಆಯ್ಕೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು, ಪತ್ರಕರ್ತರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಗಣ್ಯರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೂರ್‌ನಲ್ಲಿ ಹೈನುಗಾರಿಕೆ ಸಮಾಲೋಚನಾ ಸಭೆ | ಮಹಾಂತೇಶ್ ವಿ.ಎ. ಹೇಳಿಕೆ ಉದಯರಶ್ಮಿ ದಿನಪತ್ರಿಕೆ ಚಡಚಣ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) ವತಿಯಿಂದ ಚಡಚಣ ತಾಲೂಕಿನ ಲೋಣಿ ಬಿ.ಕೆ. ವಲಯದ ತದ್ದೇವಾಡಿ ಕಾರ್ಯಕ್ಷೇತ್ರದ ಕೆರೂರ್ ಗ್ರಾಮದಲ್ಲಿ ಹೈನುಗಾರಿಕೆ ಸಮಾಲೋಚನಾ ಸಭೆಯನ್ನು ಆಯೋಜಿಸಿ ರೈತರು ಹಾಗೂ ಮಹಿಳೆಯರಿಗೆ ಕೃಷಿ ಮತ್ತು ಹೈನುಗಾರಿಕೆ ಕುರಿತ ವಿವಿಧ ಯೋಜನೆಗಳ ಮಾಹಿತಿ ಶನಿವಾರ ನೀಡಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ವಲಯದ ಮೇಲ್ವಿಚಾರಕರಾದ ಮಹಾಂತೇಶ್ ವಿ.ಎ., ಭಾರತವು ಕೃಷಿ ಪ್ರಧಾನ ದೇಶವಾಗಿದ್ದು, ಪ್ರತಿಯೊಂದು ಕುಟುಂಬವೂ ಕೃಷಿ ಆಧಾರಿತ ಚಟುವಟಿಕೆಗಳತ್ತ ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದು ಹೇಳಿದರು. ಹೈನುಗಾರಿಕೆ, ದ್ವಿದಳ ಬೆಳೆಗಳ ಬೆಳವಣಿಗೆ, ಹೊಲ ಹದಗೊಳಿಸುವಿಕೆ, ಬೋರ್‌ವೆಲ್ ಕೊರೆಸುವುದು, ಆಕಳು ಹಾಗೂ ಆಡು ಸಾಕಾಣಿಕೆ, ದ್ರಾಕ್ಷಿ ಸಸಿ ನಾಟಿ ಹಾಗೂ ದ್ರಾಕ್ಷಿ ತೋಟದ ಆರೈಕೆ ಸೇರಿದಂತೆ ವಿವಿಧ ಕೃಷಿ ಚಟುವಟಿಕೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: “ಗುರ್ಜಿ, ಗುರ್ಜಿ ಹಳ್ಳಾಡಿ ಬಂದೆ, ಹಳ್ಳಕೊಳ್ಳ ತಿರಿಗ್ಯಾಡಿ ಬಂದೆ, ಕಾರ ಮಳೆಯೋ ಕಪ್ಪತ್ತು ಮಳೆಯೋ, ಸುರಿಸುರಿ ಸುರಿಯೋ ಮಳೆಯೋ”.. ಎಂದು ಹಳ್ಳಿಗಳಲ್ಲಿ ಮಹಿಳೆಯರು ಮಳೆಗಾಗಿ ಮನೆ ಮನೆ ತಿರುಗುತ್ತಾ ಗುರ್ಜಿ ಹೊತ್ತು ಪ್ರಾರ್ಥನೆ ಸಲ್ಲಿಸಿದರು.ತಾಲ್ಲೂಕಿನ ಕಳ್ಳಕವಟಗಿ ಗ್ರಾಮದಲ್ಲಿ ಶನಿವಾರ ಜಯಶ್ರೀ ಗಿಡ್ನವರ ಮಹಿಳೆಯ ತಲೆ ಮೇಲೆ ತವೆ ಇಟ್ಟು ಅದರ ಮೇಲೆ ಜಿಗಟು ಮಣ್ಣಿನಿಂದ ತಯಾರಿಸಿದ ಗುರ್ಜಿ ಮಾಡಿದ್ದರಿ. ಗುರ್ಜಿ ಹೊತ್ತ ಮಹಿಳೆಯು ಗುರ್ಜಿ ಗುರ್ಜಿ ಎಂದು ಹಾಡು ಹೇಳುತ್ತಾ ಗ್ರಾಮದ ಎಲ್ಲ ಮನೆ ಮುಂದೆ ಹೋಗಿ ನಿಲ್ಲುತ್ತಾರೆ. ಆಗ ಮನೆಯವರು ಬಂದು ಗುರ್ಜಿ ಹೊತ್ತವಳ ತಲೆ ಮೇಲೆ ನೀರು ಸುರಿದು ಗುರ್ಜಿ ಪೂಜೆ ಮಾಡಿ ಬೇಗ ಮಳೆ ಬಂದು ಭೂಮಿ ತಾಯಿ ತಂಪೆರಗಲಿ‌ ಎಂದು ಪೂಜೆ ಮಾಡುತ್ತಾರೆ.ಮಳೆ ಬಾರದೆ ಇದ್ದಾಗ ಪೂರ್ವಜರ ಕಾಲದಿಂದಲೂ ಗ್ರಾಮೀಣ ಪ್ರದೇಶಗಳಲ್ಲಿ ಹಿರಿಯರ ಕಾಲದಿಂದಲೂ ಆಚರಣೆಯಲ್ಲಿರುವ ಗುರ್ಜಿಪೂಜೆ ಹಳ್ಳಿಗಳಲ್ಲಿ ಮಹಿಳೆಯರು ವಿಶಿಷ್ಟ್ಟವಾಗಿ ಆಚರಣೆ ಮಾಡುತ್ತಾರೆ. ಈ ರೀತಿ ಪೂಜೆ ಮಾಡುವುದರಿಂದ ಮಳೆ…

Read More