Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಾಜಶೇಖರ ಅವಜಿ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೋಡ ರವರ ಸಮ್ಮುಖದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಥಮ ಸಭೆ ಗುರುವಾರ ಜರುಗಿತು.ಅಧ್ಯಕ್ಷರು ನವೆಂಬರ್ ತಿಂಗಳ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.ಇಓ ಬಾಬು ರಾಠೋಡ ಮಾತನಾಡಿ, ಸರ್ಕಾರ ಘೋಷಿಸಿದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಗೆ ತಲುಪಿದಾಗ ಮಾತ್ರ ಯೋಜನೆಗಳ ಸಾರ್ಥಕತೆಯಾಗುವುದು. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಯೋಜನೆಗಳ ಅನುಷ್ಠಾನಕ್ಕಾಗಿ ಗುರಿ ಸಾಧಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಗ್ರಾಮೀಣ ಮತ್ತು ನಗರ, ಆಹಾರ ನಿರೀಕ್ಷಕರು, ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕರು, ಹೆಸ್ಕಾಂ ಅಧಿಕಾರಿಗಳು, ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿಗಳು, ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಎಲ್ಲ ಸದಸ್ಯರು ಉಪಸ್ಥಿತರಿದ್ದರು.ತಾಲೂಕ ಪಂಚಾಯತಿಯ ಯೋಜನಾಧಿಕಾರಿ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಲ್ಲಿಯ ಮುಖ್ಯ ಎಂಜಿನಿಯರ್ ಕಚೇರಿ ಎದುರು ಕೆಬಿಜೆಎಟಿಂಲ್ ಅರಣ್ಯ ಇಲಾಖೆಯ ದಿನಗೂಲಿ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಅಧಿಕಾರಿಗಳ ಭರವಸೆಯ ಮೇರೆಗೆ ತಾತ್ಕಾಲಿಕವಾಗಿ ಹಿಂದಕ್ಕೆ ಪಡೆಯಲಾಯಿತು.ಧರಣಿ ನಿರತರ ಜತೆ ಬೆಳಿಗ್ಗೆ ಹಾಗೂ ಸಂಜೆ ಎರಡು ಬಾರಿ ಭೇಟಿ ನೀಡಿ ಮಾತನಾಡಿದ ಉಪ ಅರಣ್ಯಸಂರಕ್ಷಣಾಧಿಕಾರಿ ರಾಜಣ್ಣ ನಾಗಶೆಟ್ಟಿ, ಎಸಿಎಫ್ ರಮೆಶ ಚವ್ಹಾಣ, ದಿನಗೂಲಿ ನೌಕರರ ನೇಮಕಕ್ಕೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಕ್ಕೆ ಕರೆದ ಟೆಂಡರ್ ನ್ನು ಕೆಬಿಜೆಎಟಿಂಲ್ ಎಂಡಿ ಅವರ ಮೌಖಿಕ ನಿರ್ದೇಶನದ ಮೇರೆಗೆ ತಾತ್ಕಾಲಿಕವಾಗಿ ಮುಂದಕ್ಕೆ ಹಾಕಿ ಯಥಾಸ್ಥಿತಿ ಕಾಪಾಡುವುದಾಗಿ ಭರವಸೆ ನೀಡಿದರು. ಹೀಗಾಗಿ ಈಗ ನಡೆಸುತ್ತಿರುವ ಧರಣಿ ಸತ್ಯಾಗ್ರಹವನ್ನು ಹಿಂದಕ್ಕೆ ಪಡೆಯಿರಿ ಎಂದು ಮನವಿ ಮಾಡಿದರು.ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ತಿಪ್ಪಣ್ಣ ಮಾದರ, ಸೀತಪ್ಪ ಗಣಿ, ವಿರೂಪಾಕ್ಷಿ ಮಾದರ, ದ್ಯಾಮಣ್ಣ ಬಿರಾದರ, ಸೀತಪ್ಪ ಗಣಿ, ಮಾತನಾಡಿ, ಅತ್ಯಂತ ಕಡಿಮೆ ಸಂಬಳದಲ್ಲಿ ಆಲಮಟ್ಟಿಯ ಅರಣ್ಯ ಕಾರ್ಮಿಕರು ದುಡಿಯುತ್ತಿದ್ದಾರೆ. ಇವರಿಗೆ ಕನಿಷ್ಠ ವೇತನವನ್ನು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮೈಸೂರ ಮುಕ್ತ ವಿಶ್ವವಿದ್ಯಾಲಯದದಲ್ಲಿ ಡಿ.೨೩ರಂದು ವಿಶ್ವ ರೈತ ದಿನಾಚರಣೆ, ರಾಜ್ಯ ಮಟ್ಟದ ರೈತರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕುರಬೂರ ಶಾಂತಕುಮಾರ ಅವರ ನೇತೃತ್ವದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲ ಮನ್ನಾ, ಕಬ್ಬಿನ ಇಳುವರಿ ಮತ್ತು ತೂಕದ ಮೋಸ, ತೊಗರಿ ಬೆಳೆಯ ವಿಫಲತೆ, ಬೆಳೆ ವಿಮೆ ಪರಿಹಾರ, ಏಕಾಏಕಿ ತೊರಗಿ ಬೆಲೆಯಲ್ಲಿ ಇಳಿಕೆ ಸೇರಿದಂತೆ ರೈತರ ಹಲವಾರು ಸಮಸ್ಯೆಗಳಲ್ಲಿ ಸಿಲುಕಿ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಸದರಿ ಮೈಸೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಕೀಟನಾಶಕಗಳ ಬೆಲೆ ಏರಿಕೆ ಮತ್ತು ಇತರ ಸಮಸ್ಯೆಗಳ ಪರಿಹಾರಕ್ಕಾಗಿ ಧ್ವನಿ ಎತ್ತಬೇಕಿದೆ. ಕಾರಣ ಆಲಮೇಲ, ದೇವರ ಹಿಪ್ಪರಗಿ ಹಾಗೂ ಸಿಂದಗಿ ತಾಲೂಕಿನ ರೈತರು, ವಿವಿಧ ಸಂಘಟನೆಯ ಮುಖಂಡರು ಡಿ.೨೩ರಂದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಿಂದಗಿ ಕಬ್ಬು ಬೆಳೆಗಾರರ ಸಂಘದ ತಾಲೂಕಾಧ್ಯಕ್ಷ ಧರೆಪ್ಪಗೌಡ ಬಿರಾದಾರ ವಿನಂತಿಸಿದ್ದಾರೆ.

Read More

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿ ಪದಾಧಿಕಾರಿಗಳಿಂದ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿ ವಿಜಯಪುರ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾಧ್ಯಕ್ಷೆ ಕಾಳಮ್ಮ ಬಡಿಗೇರ ಮಾತನಾಡಿ, ಶಾಲೆಗಳಲ್ಲಿ ಗ್ರೂಪ್ “ಡಿ” ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾ ಸ್ವಚ್ಚತೆ. ಕೈತೋಟ ನಿರ್ವಹಣೆ, ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ ನೌಕರರಿಗೆ ಶಾಲಾ ಸಿಬ್ಬಂದಿಗಳೆಂದು ನೇಮಿಸಿ ನೇಮಕಾತಿ ಆದೇಶ ನೀಡಬೇಕು. ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ಕಡ್ಡಾಯವಾಗಿ ನೀಡಬೇಕು. ಶಾಲಾ ಅವಧಿಯ ನಂತರ ನರೆಗಾ ಯೋಜನೆ ಅಡಿ ಶಾಲಾ ಕೈತೊಟದ ಕೆಲಸ ಇವರಿಗೆ ನೀಡಿ ಈ ಯೋಜನೆಯಿಂದ ವೇತನ ನೀಡಬೇಕು.…

Read More

ವಿವಿಧ ಧರ್ಮದ ಮುಖಂಡರೊಂದಿಗೆ ಸಮಾನತೆ ಮತ್ತು ಹಕ್ಕುಗಳ ಬಗ್ಗೆ ವಿಸ್ತೃತ ಚಿಂತನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಿಸೆಂಬರ್ ೧೮ ರಂದು ಅಲ್ಪಸಂಖ್ಯಾತರ ಹಕ್ಕುಗಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಅಲ್ಪಸಂಖ್ಯಾತ ಮುಸ್ಲಿಮರ ಅಭಿವೃದ್ಧಿ ಸಮಿತಿಯ (ಒಒಆಅ) ವತಿಯಿಂದ ನಗರದ ಸರ್ಕಾರಿ ನೌಕರರ ಭವನದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಕ್ರಿಶ್ಚಿಯನ್, ಮುಸ್ಲಿಂ, ಬೌದ್ಧ, ಜೈನ, ಮತ್ತು ಸಿಖ್ ಸಮುದಾಯಗಳ ಪ್ರಮುಖ ಮುಖಂಡರು ಪಾಲ್ಗೊಂಡು ಅಲ್ಪಸಂಖ್ಯಾತರ ಹಕ್ಕುಗಳು, ಸವಾಲುಗಳು, ಮತ್ತು ಅವುಗಳನ್ನು ಜಯಿಸುವ ಮಾರ್ಗಗಳ ಕುರಿತು ಸವಿಸ್ತಾರವಾಗಿ ಮಾತನಾಡಿದರು.ಮುಖಂಡರಾದ ಎಲ್. ಎಲ್ ಉಸ್ತಾದ್ ಮಾತನಾಡಿ, ನಗರದಲ್ಲಿ ಪ್ರಥಮ ಬಾರಿಗೆ ಈ ಅಲ್ಪಸಂಖ್ಯಾತರ ದಿನಾಚರಣೆ ಆಚರಿಸಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಅಲ್ಪಸಂಖ್ಯಾತ ಸಮುದಾಯದ ಸಾಮಾನ್ಯ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಜೊತೆಗೆ, ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಈ ಕಾರ್ಯಕ್ರಮವು ಸಮಾನತೆ ಮತ್ತು ಸಾಮರಸ್ಯದ ಸಂದೇಶವನ್ನು ಹರಡುತ್ತದೆ ಎಂದು ಅವರು ಹೇಳಿದರು.ಸಿಎನ್‌ಎಫ್‌ಇ ಸಂಸ್ಥೆಯ ಫಾದರ್ ಟಿಯೊಲೊ ಮಚ್ಚಾಡೊ ರವರು ಮಾತನಾಡಿ, ಅಲ್ಪಸಂಖ್ಯಾತರ ಸಮುದಾಯಗಳ ಒಗ್ಗಟ್ಟಿನ ಮಹತ್ವವನ್ನು ಗುರುತಿಸಿ, ಧಾರ್ಮಿಕ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಾಮಾಜಿಕ ಜಾಗೃತಿ, ಪರಿಸರ ಸಂರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿಯಂತಹ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸುವ ಮೂಲಕ ವೈಯಕ್ತಿಕ ಮತ್ತು ಸಾಮೂಹಿಕ ಪ್ರಗತಿಗೆ ಎನ್.ಎಸ್.ಎಸ್. ದಾರಿ ಮಾಡಿಕೊಡುತ್ತದೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ರಾಹುಲ ಡೊಂಗ್ರೆ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಎನ್.ಎಸ್.ಎಸ್ ಸ್ನಾತಕ ‘ಬ’ ಹಾಗೂ ಮುಕ್ತ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಷ್ಟ್ರೀಯ ಸೇವಾ ಯೋಜನೆ ಬೆಂಗಳೂರು, ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕೋಶದ ವತಿಯಿಂದ ಬುಧವಾರ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಎನ್‌ಎಸ್‌ಎಸ್ ವಿದ್ಯಾರ್ಥಿಗಳಲ್ಲಿ ಮುಖಂಡತ್ವದ ಗುಣಗಳು, ನೈತಿಕತೆ, ಶಿಸ್ತು ಮತ್ತು ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುತ್ತದೆ. ರಾಷ್ಟ್ರಸೇವೆ ಮತ್ತು ಸಮಾಜಸೇವೆಯ ಮೂಲಕ ಯುವಜನರನ್ನು ಜವಾಬ್ದಾರಿಯುತ ಪ್ರಜೆಗಳಾಗಿ ರೂಪಿಸುವಲ್ಲಿ ಎನ್‌ಎಸ್‌ಎಸ್ ಮಹತ್ವದ ಪಾತ್ರವಹಿಸುತ್ತದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನಕ ಅಧ್ಯಯನ ಪೀಠ ಹಾಗೂ ಬೆಂಗಳೂರಿನ ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ಇವರ ಸಹಯೋಗದಲ್ಲಿ ‘ಕನಕದಾಸ ಸಾಹಿತ್ಯದಲ್ಲಿ ಮಹಿಳಾ ನೋಟ’ ವಿಚಾರ ಸಂಕಿರಣ ಕಾರ್ಯಕ್ರಮ ಇದೇ ಡಿ.೨೬ ರಂದು ಬೆಳಿಗ್ಗೆ ೧೦:೩೦ ಗಂಟೆಗೆ ವಿವಿಯ ಕನ್ನಡ ಭವನದಲ್ಲಿ ಜರುಗಲಿದೆ.ಕಾರ್ಯಕ್ರಮವನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಬೆಂಗಳೂರಿನ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ.ತ.ಚಿಕ್ಕಣ್ಣ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹಾಗೂ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಭಾಗವಹಿಸಲಿದ್ದಾರೆ.ಗೋಷ್ಠಿಗಳುವಿಚಾರ ಸಂಕಿರಣದ ಮೊದಲ ಗೋಷ್ಠಿಯಲ್ಲಿ ‘ಕನಕದಾಸರ ಕೀರ್ತನೆಗಳಲ್ಲಿ ಸ್ತ್ರೀ ಜಗತ್ತು’ ಎಂಬ ವಿಷಯದ ಕುರಿತು ಕುಂದಾಪುರದ ಡಾ.ಜಯಪ್ರಕಾಶ ಶೆಟ್ಟಿ ವಿಚಾರವನ್ನು ಮಂಡಿಸಲಿದ್ದು, ಎರಡನೇಯ ಗೋಷ್ಠಿಯಲ್ಲಿ ಕಲಬುರಗಿಯ ಡಾ.ಶಿವಗಂಗಾ ರುಮ್ಮಾ ‘ಮೋಹನ ತರಂಗಿಣ ಕಾವ್ಯದಲ್ಲಿ ಮಹಿಳೆ’ ಎಂಬ ವಿಷಯದ ಕುರಿತು ತಮ್ಮ ವಿಚಾರವನ್ನು ಮಂಡಿಸಲಿದ್ದಾರೆ. ಮೂರನೇ ಗೋಷ್ಠಿಯಲ್ಲಿ ಬೆಂಗಳೂರಿನ ಡಾ.ಎಲ್.ಜಿ.ಮೀರಾ…

Read More

ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿನ ಎಲ್ಲ ಶಾಲೆಗಳಲ್ಲಿ ಶಾಲಾ ಆರಂಭದ ಅವಧಿಯಲಿ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಕಬ್ಬಿಣಾಂಶದ ಮಹತ್ವ ಹಾಗೂ ಅದರ ಕೊರತೆಯಿಂದಾಗುವ ಪರಿಣಾಮಗಳ ತಿಳಿವಳಿಕೆ ನೀಡಬೇಕು. ಅಂಗನವಾಡಿ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಕಬ್ಬಿಣಾಂಶದ ಕೊರತೆ ನಿವಾರಿಸಲು ಆರೋಗ್ಯ ಇಲಾಖೆಯಿಂದ ವಿತರಿಸಲಾಗಿರುವ ಕಬ್ಬಿಣಾಂಶದ ಮಾತ್ರೆಗಳನ್ನು (ಐಎಫ್‌ಎ) ಪ್ರತಿ ಸೋಮವಾರ ವಿದ್ಯಾರ್ಥಿಗಳಿಗೆ ವಿತರಿಸಿ, ಸೇವಿಸುವಂತೆ ಪ್ರೇರೇಪಿಸಬೇಕು. ಇದಕ್ಕಾಗಿ ಶಾಲೆಗಳಲ್ಲಿ ಓರ್ವ ನೋಡಲ್ ಶಿಕ್ಷಕರ ನೇಮಕ, ಆಯಾ ಶಾಲಾ ವ್ಯಾಪ್ತಿಯ ಬಿ.ಆರ್.ಸಿ ಮತ್ತು ಸಿ.ಆರ್.ಸಿಗಳು ಮತ್ತು ಅಂಗನವಾಡಿ ಮೇಲ್ವಿಚಾರಕಿಯರು ಮೇಲುಸ್ತುವಾರಿಯಲ್ಲಿ ಈ ಬಗ್ಗೆ ವರದಿಯನ್ನು ಆರೋಗ್ಯ ಇಲಾಖೆಯೊಂದಿಗೆ ಹಂಚಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಸೂಚಿಸಿದ್ದಾರೆ.ಅನಿಮಿಯಾ ಮುಕ್ತ ಜಿಲ್ಲೆಯನ್ನಾಗಿಸಲು ಡಬ್ಲುö್ಯಐಎಫ್‌ಎಸ್ ಕಾರ್ಯಕ್ರಮದ ಯಶಸ್ವಿ ಅನುಷ್ಠಾನ ಮೊದಲ ಹೆಜ್ಜೆಯಾಗಿರುತ್ತದೆ. ಜಿಲ್ಲೆಯಲ್ಲಿನ ಎಲ್ಲ ಶಾಲಾ ಮತ್ತು ಅಂಗನವಾಡಿ ಮಕ್ಕಳಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುವಾರ ಭೇಟಿ ನೀಡಿ, ಸಂಬಂಧಿಸಿದ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು.ವಿದ್ಯಾಲಯದ ಸಲಹಾ ಸಮಿತಿ ಸಭೆ ನಡೆಸಿದ ಅವರು, ವಿದ್ಯಾಲಯದ ಬೋಧನಾ ಗುಣಮಟ್ಟವನ್ನು ಹೆಚ್ಚಿಸಿ ಫಲಿತಾಂಶ ಹೆಚ್ಚಳಕ್ಕೆ ಕ್ರಮ ವಹಿಸಬೇಕು. ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ಬೆಳವಣಿಗೆ ದೃಷ್ಟಿಯಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿ, ಮಕ್ಕಳ ಕೌಶಲ್ಯತೆಯನ್ನು ಹೆಚ್ಚಿಸಲು ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಅಲ್ಲಿನ ವಸತಿ ಸೌಲಭ್ಯದ ಉನ್ನತೀಕರಣಕ್ಕೆ ಕ್ರಮವಹಿಸಬೇಕು. ಆವರಣದ ಸೌಂದರ್ಯಿಕರಣ, ಭೋಜನಾಲಯದ ಸ್ವಚ್ಚತೆ ಹಾಗೂ ಶುಚಿತ್ವಕ್ಕೆ ಆದ್ಯತೆ, ವಿದ್ಯಾಲಯದ ೧೦ನೇ ಹಾಗೂ ೧೨ನೇ ತರಗತಿಯ ಫಲಿತಾಂಶ ಮತ್ತಷ್ಟು ಹೆಚ್ಚಳಕ್ಕೆ ಕ್ರಮವಹಿಸಲು, ಆಟದ ಮೈದಾನದ ಅಭಿವೃದ್ಧಿ, ವಿದ್ಯಾಲಯಕ್ಕೆ ಅಗತ್ಯವಿರುವ ಮೂಲಸೌಲಭ್ಯ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದ ಅವರು, ೨೦೦ಮೀಟರ್ ಓಟದ ಟ್ರಾö್ಯಕ್ ಹಾಗೂ ಬಾಸ್ಕೆಟ್ ಬಾಲ್ ಆಟದ ಅಂಗಣದ ಕುರಿತಾಗಿ ಆಟದ ಮೈದಾನ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಅಲೆಮಾರಿ, ಬುಡಕಟ್ಟು ಮತ್ತು ಆದಿವಾಸಿ ಸಮುದಾಯಗಳ ನೋಂದಾಯಿತ ಸಂಘ-ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಿಗಮದ ಅಧ್ಯಕ್ಷರಾದ ಶ್ರೀಮತಿ ಪಲ್ಲವಿ ಜಿ ಅವರ ಅಧ್ಯಕ್ಷೆತಯಲ್ಲಿ ಡಿಸೆಂಬರ್ ೨೯ರಂದು ಸಮಾಲೋಚನಾ ಸಭೆ ಆಯೋಜಿಸಲಾಗಿದೆ.ಈ ಸಮಾಲೋಚನಾ ಸಭೆಯಲ್ಲಿ ಭಾಗವಹಿಸುವವರು ೮೬೬೦೭೨೯೮೪೮ ವ್ಯಾಟ್ಸಾಫ್ ಸಂಖ್ಯೆಗೆ ಅಥವಾ md.scstndc@gmail.com or scstntdntcell@gmail.com ಇಮೇಲ್ ಮೂಲಕ ಭಾಗವಹಿಸುವಿಕೆಯನ್ನು ಡಿಸೆಂಬರ್ ೨೪ರೊಳಗಾಗಿ ದಾಖಲಿಸುವಂತೆಯೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಇವರ ಕಚೇರಿಯನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲಿಕ ಮಾನವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More