Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಆಲಮೇಲ: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿ ವಿಜಯಪುರ ಇವರ ವತಿಯಿಂದ ಪಟ್ಟಣದಲ್ಲಿ ನಿಯೋಜಿತ ಹಿರೇಮಠ ತೋಟದ ವಸತಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ವತಿಯಿಂದ ಗ್ರಾಮ ಸಭೆ ಮಾಡಲಾಯಿತುಈ ಸಭೆಯನ್ನು ಉದ್ದೇಶಿ ಸಂಘದ ಕ್ಯಾಂಪ್ ಆಫೀಸರ್ ಎಸ್ ಎಸ್ ಅಥಣಿ ಮಾತನಾಡಿ, ದಕ್ಷಿಣ ಭಾರತದಲ್ಲಿ ಅತ್ಯಧಿಕವಾಗಿ ಹಾಲು ಉತ್ಪಾದನೆ ಮಾಡುವುದರಲ್ಲಿ ನಂದಿನಿ ಅಗ್ರಸ್ಥಾನದಲ್ಲಿದೆ. ನಂದಿನಿ ಎಲ್ಲದರಲ್ಲೂ ಉತ್ತಮವಾಗಿದೆ. ನಮ್ಮಲ್ಲಿ ಅನೇಕ ಉತ್ಪನಗಳನ್ನು ತಯಾರಿಸಿ ಗ್ರಾಹಕರಿಗೆ ನೀಡುತ್ತವೆ. ಇದರ ಹಿಂದೆ ರೈತರ ಸಹಕಾರ ಬಹಳ ಮುಖ್ಯವಿದೆ. ಈ ಭಾಗದಲ್ಲಿ ಹಾಲು ಉತ್ಪಾದನೆ ಸಹಕಾರ ಸಂಘ ಸ್ಥಾಪನೆ ಮಾಡಲು ನೀವೆಲ್ಲರ ಸಹಕಾರ ಅಗತ್ಯವಿದೆ. ನೀವು ಪ್ರತಿಯೊಂದು ಮನೆಯಲ್ಲೂ ಹೈನುಗಳ ಸಾಕಾಣಿಕೆ ಮಾಡಬೇಕು. ಇದರಿಂದ ನಿಮಗೂ ಅನುಕೂಲ ಮತ್ತು ನಿಮ್ಮ ಉಪಜೀವನಕ್ಕೆ ಸಹಕಾರವಾಗಲಿದೆ ಆದ್ದರಿಂದ ನೀವು ಎಲ್ಲರೂ ನಮಗೆ ಹಾಲು ನೀಡಿ ನಾವು ನಿಮ್ಮ ಹಾಲು ಉತ್ತಮ ಬೆಲೆಗೆ ಕೊಂಡು ಕೊಳ್ಳಲಿದ್ದೇವೆ ಎಂದು ಹೇಳಿದರು.ಸಾನಿದ್ಯ ವಹಿಸಿದ ಆಲಮೇಲ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸಮ್ಮೇಳನದ ಪೋಸ್ಟರಗಳನ್ನು ರಾಜ್ಯ ಸಂಘಟನಾ ಕಾರ್ಯದರ್ಶಿ ಪೃಥ್ವಿ ಕುಮಾರ್, ರಾಜ್ಯ ಅಧ್ಯಕ್ಷ ಡಾ|| ಆನಂದ್ ಹೊಸೂರ ಹಾಗೂ ರಾಜ್ಯ ಕಾರ್ಯದರ್ಶಿ ಸಚಿನ್ ಕುಳಗೇರಿ ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಪೃಥ್ವಿ ಕುಮಾರ್ ಮಾತನಾಡಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಳೆದ ೭೫ ವರ್ಷಗಳಿಂದ ರಾಷ್ಟ್ರೀಯ ಪುನರ್ ನಿರ್ಮಾಣಕ್ಕಾಗಿ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವಂತಹ ಜಗತ್ತಿನ ಅತ್ಯಂತ ದೊಡ್ಡ ವಿದ್ಯಾರ್ಥಿ ಸಂಘಟನೆ. ರಾಷ್ಟ್ರೀಯ, ಧ್ಯಾನ, ಆಧ್ಯಾತ್ಮಿಕ ಚಾರಿತ್ರ‍್ಯ, ವೈಶ್ಚಿಕ ಏಕತೆಯ ಆಧಾರದ ಮೇಲೆ ವ್ಯಕ್ತಿ ನಿರ್ಮಾಣ ಮಾಡುವ ಮೂಲಕ ರಾಷ್ಟ್ರ ಪುನರ್ ನಿರ್ಮಾಣದ ಮಹಾನ್ ಧೈಯದ ಕನಸನ್ನು ನನಸಾಗಿಸುತ್ತಾ ಬಂದಿದೆ. ಇಂದಿನ ವಿದ್ಯಾರ್ಥಿ ಇಂದಿನ ಪ್ರಜೆ, ಶೈಕ್ಷಣಿಕ ಪರಿವಾರದಲ್ಲಿ ಪರಿವರ್ತನೆಯ ಪ್ರಯತ್ನ, ಪಕ್ಷರಾಜ ಕಾರಣದಿಂದ ಮೇಲೇರಿ ರಾಷ್ಟ್ರ ರಾಜಕಾರಣದಲ್ಲಿ ಪಾಲ್ಗೊಳ್ಳುವ ರಾಷ್ಟ್ರ ಹಿತದ ರಾಜನೀತಿ, ರಚನಾತ್ಮಕ, ಆಂದೋಲನಾತ್ಮಕ. ಪ್ರಾತಿಧ್ಯಾತ್ಮಕ ಕಾರ್ಯಪದ್ದತಿಯ ಮೂಲಕ ಪ್ರತಿಯೊಬ್ಬ ಕಾರ್ಯಕರ್ತರೂ ಸ್ವಾಮಿ ವಿವೇಕಾನಂದರು ಬಯಸಿದ…
ತನು ಕನ್ನಡ ಮನ ಕನ್ನಡ ಪ್ರಶಸ್ತಿ ಪ್ರದಾನ ಹಾಗೂ ಕೃತಿಗಳ ಲೋಕಾರ್ಪಣಾ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಶಸ್ತಿಗಳನ್ನು ನೀಡುವುದರ ಉದ್ಧೇಶ ಕಾರ್ಯ ಮಾಡುವ ವ್ಯಕ್ತಿಯ ಜವಾಬ್ದಾರಿಯನ್ನು ಹೆಚ್ಚಿಸಿ ಇನ್ನೂ ಹೆಚ್ಚಿನ ಜವಾಬ್ದಾರಿಯನ್ನು ನಿಭಾಯಿಸುವುದಕ್ಕೆ ಸಮರ್ಥನನ್ನಾಗಿ ಮಾಡುವುದಾಗಿದೆ. ಪ್ರಶಸ್ತಿ ಪಡೆದುಕೊಳ್ಳುವ ವ್ಯಕ್ತಿಯೂ ತನ್ನ ಜವಾಬ್ದಾರಿಯನ್ನು ಹೆಚ್ಚಿಸಿಕೊಂಡು ಕಾರ್ಯ ಮಾಡಬೇಕೆ ಹೊರತು ಪ್ರಶಸ್ತಿ ಪಡೆದುಕೊಂಡಿದ್ದೇನೆಂದು ಮೈ ಮರೆಯಬಾರದು ಎಂದು ಅನುಗ್ರಹ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞ ಡಾ.ಪ್ರಭುಗೌಡ ಬಿ.ಎಲ್ ಹೇಳಿದರು.ನಗರದ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ ತನು ಫೌಂಡೇಷನ್ ವತಿಯಿಂದ ಜರುಗಿದ ತನು ಕನ್ನಡ ಮನ ಕನ್ನಡ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಲೇಖಕ ಮಂಜುನಾಥ ಮ. ಜುನಗೊಂಡ ಅವರು ಬರೆದ ಐದು ಕೃತಿಗಳ ಲೋಕಾರ್ಪಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು; ಸಮಾಜಕ್ಕಾಗಿ ನಿಸ್ವಾರ್ಥವಾಗಿ ದುಡಿದ ಜನಗಳನ್ನು ಗುರುತಿಸಿ ಪ್ರಶಸ್ತಿ ನೀಡಿದರೆ ಅದಕ್ಕೊಂದು ಅರ್ಥ ಬರುತ್ತದೆ. ಅದನ್ನು ಬಿಟ್ಟು ಸಿಕ್ಕ ಸಿಕ್ಕವರಿಗೆಲ್ಲ ಪ್ರಶಸ್ತಿಗಳನ್ನು ನೀಡುತ್ತ ಸಾಗಿದರೆ ಪ್ರಶಸ್ತಿ ಎನ್ನುವ ಪದವೇ…
ದೇವರಹಿಪ್ಪರಗಿ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಭೈರವಾಡಗಿ ಗ್ರಾಮದ ಸಂಗಮೇಶ ಕರೆಪ್ಪಗೋಳ ಆಯ್ಕೆಯಾಗಿದ್ದಾರೆ.ಪಟ್ಟಣದ ಶಾಸಕರ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಜರುಗಿದ ಸಭೆಯಲ್ಲಿ ತಾಲ್ಲೂಕು ಕಸಾಪ ಪದಾಧಿಕಾರಿಗಳು ಹಾಗೂ ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ ನೇತೃತ್ವದಲ್ಲಿ ಈ ಆಯ್ಕೆ ಮಾಡಲಾಯಿತು.ತಾಲ್ಲೂಕಿನ ಭೈರವಾಡಗಿ ಗ್ರಾಮದಲ್ಲಿ ೧೯೬೫ ರಲ್ಲಿ ಜನಿಸಿದ ಸಂಗಮೇಶ ಕರೆಪ್ಪಗೋಳ ಅತ್ಯಂತ ಕಡು ಬಡತನದಲ್ಲಿ ಜನಿಸಿ ಕೂಲಿ ಕಾರ್ಮಿಕನಾಗಿ ಜೀವಿಸುತ್ತಾ ಎಂಟು ಕೃತಿಗಳನ್ನು ಹೊರತಂದಿದ್ದಾರೆ.ಜಿಲ್ಲೆಯಲ್ಲಿ ಜರುಗುವ ಅನೇಕ ಕವಿಗೋಷ್ಠಿಗಳಲ್ಲಿ ಭಾಗವಹಿಸಿ ಪ್ರಚಲಿತ ವಿಷಯಗಳ ಆಧಾರಿತ ಕವನಗಳನ್ನು ವಾಚಿಸಿ ಸಭಿಕರ ಮನಸ್ಸನ್ನು ಗೆದ್ದುಕೊಂಡಂತಹ ಪ್ರಬುದ್ಧ ಕವಿ ಸಂಗಮೇಶ ಅವರನ್ನು ಜಿಲ್ಲಾ ಅಧ್ಯಕ್ಷರ ನೇತೃತ್ವದಲ್ಲಿ ಬಂದಿರುವ ಅರ್ಜಿಗಳನ್ನು ತಾಲ್ಲೂಕಿನ ಹಿರಿಯರ ಸಮ್ಮುಖದಲ್ಲಿ ಆಯ್ಕೆಮಾಡಲಾಯಿತು. ತಾಲ್ಲೂಕು ಆಧ್ಯಕ್ಷ ಜಿ.ಪಿ.ಬಿರಾದಾರ ಅನುಮೋದಿಸಿದರುಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎಸ್.ಎನ್.ಬಸವರೆಡ್ಡಿ, ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಚ್.ವಾಲೀಕಾರ, ಕಾಶೀನಾಥ ಸಾಲಕ್ಕಿ, ಸೋಮಶೇಖರ ಹಿರೇಮಠ, ಕೆ.ಎಸ್.ಕೋರಿ,…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಕಾರ್ತಿಕ ರಾಠೋಡ ಮತ್ತು ವಿಕಾಸ ಪಾಟೀಲ ಇವರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯ ಕ್ರಿಕೆಟ ಆಯ್ಕೆ ಪ್ರಕ್ರಿಯೆಯಲ್ಲಿ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾರೆ.ಫೆಬ್ರುವರಿಯಲ್ಲಿ ಚೆನ್ನೈನಲ್ಲಿ ನಡೆಯುವ ದಕ್ಷಿಣ ವಿಭಾಗೀಯ ಪಂದ್ಯಾವಳಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಪ್ರತಿನಿಧಿಸುತ್ತಿದ್ದಾರೆ .ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಚಾರ್ಯ ಅಶೋಕ ಹೆಗಡೆ ಮತ್ತು ದೈಹಿಕ ನಿರ್ದೇಶಕ ಎಂ.ಎಂ.ಲಕ್ಷ್ಮಿಶ ಮತ್ತು ಕಾಲೇಜಿನ ಸಿಬ್ಬಂದಿ ಅಭಿನಂದಿಸಿದ್ದಾರೆ.
ಸಿದ್ದೇಶ್ವರ ಶ್ರೀಗಳ ಗುರುನಮನ ಪ್ರಚಾರ ಸಮಿತಿ ಪೂರ್ವಭಾವಿ ಸಭೆ ವಿಜಯಪುರ: ಹೂವಿನ ಪರಿಮಳವನ್ನು ಪರಿಸರಕ್ಕೆ ಹರಡುವ ವಾಯುವಿನಂತೆ ಸಮಾಜದಲ್ಲಿ ಸಚ್ಚಿಂತನೆಗಳನ್ನು ಬಿತ್ತರಿಸುವ ಮಾಧ್ಯಮಗಳ ಪಾತ್ರ ಪರಮ ಪವಿತ್ರ ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಗುರುಗಳಾದ ಶ್ರೀ ಬಸವಲಿಂಗ ಸ್ವಾಮೀಜಿ ಹೇಳಿದರು.ಜ್ಞಾನಯೋಗಾಶ್ರಮದ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ೨ನೇ ವರ್ಷದ ಗುರುನಮನ ಕಾರ್ಯಕ್ರಮದ ಅಂಗವಾಗಿ ಬುಧವಾರ ಆಶ್ರಮದಲ್ಲಿ ಆಯೋಜಿಸಲಾಗಿದ್ದ ಪ್ರಚಾರ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀಗಳು, ಮಾಧ್ಯಮಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕೆಲಸ ಮಾಡುತ್ತಿವೆ ಎಂದರು.ಶ್ರೀ ಸಿದ್ದೇಶ್ವರ ಸ್ವಾಮೀಜಿ ಮಾಧ್ಯಮಗಳ ಬಗ್ಗೆ ಅಪಾರ ನಂಬಿಕೆ ಇಟ್ಟಿದ್ದರು. ಪ್ರತಿದಿನ ಪತ್ರಿಕೆಗಳನ್ನು ಓದುವುದು ಅವರ ದಿನಚರಿಯ ಭಾಗವಾಗಿತ್ತು. ತಮ್ಮ ಕೊನೆಯ ದಿನಗಳಲ್ಲಿ ತಮ್ಮ ಆರೋಗ್ಯ ವಿಚಾರಿಸಲು ಬಂದಿದ್ದ ಮಾಧ್ಯಮಗಳ ಪ್ರತಿನಿಧಿಗಳ ಯೋಗಕ್ಷೇಮವನ್ನು ವಿಚಾರಿಸಿದ್ದ ಶ್ರೀಗಳು ಅವರಿಗೆಲ್ಲ ಹೋಳಿಗೆ ಪ್ರಸಾದ ಮಾಡಿಸಿದ್ದನ್ನು ಮೆಲುಕು ಹಾಕಿದರು.ಪ್ರಸಕ್ತ ವರ್ಷದ ಗುರುನಮನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಮಾಧ್ಯಮಗಳ ಸಹಕಾರವೂ ಅಗತ್ಯ. ಸಾರ್ವಜನಿಕರಿಗೆ ಕಾಲ ಕಾಲಕ್ಕೆ ಇಲ್ಲಿನ ಕಾರ್ಯಕ್ರಮಗಳ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಬಳ್ಳಾರಿ ಜಿಲ್ಲೆ ಶಿರಗುಪ್ಪ ನಗರದ ಸುಧಿಕ್ಷಾ ಇಂಟರ್ನ್ಯಾಷನಲ್ ಸ್ಕೂಲ್ ಪಿ ಯು ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಕೆಟಿಂಗ್ ಪಂದ್ಯಾವಳಿಯಲ್ಲಿ ಪಟ್ಟಣದ ಏಕಲವ್ಯ ರೂಲರ್ ಸ್ಕೆಟಿಂಗ್ ಅಕಾಡೆಮಿಯ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಭಾಗಿಯಾಗಿ ಬಂಗಾರ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಪಡೆದು ಸಾಧನೆ ಮಾಡುವ ಮೂಲಕ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ಸುಧಿಕ್ಷಾ ಇಂಟರ್ನ್ಯಾಷನಲ್ ಸ್ಕೂಲ್ ಪಿ.ಯು ಕಾಲೇಜು, ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಹಾಗೂ ಕಲ್ಯಾಣ ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ದೆಯಲ್ಲಿ, ರಾಜ್ಯದ ವಿವಿಧ ಜಿಲ್ಲೆಗಳ ೩೦೦ ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿ ಪ್ರತಿಭೆ ಪ್ರದರ್ಶಿಸಿದ್ದರು. ಈ ಪೈಕಿ ೫ ರಿಂದ ೬ ವರ್ಷದ ವಯೋಮಾನದ ೧೦೦ ಮೀಟರ್ ಕೆನಾಸಿಟಿ ಬಾಲಕಿಯರ ವಿಭಾಗದಲ್ಲಿ ಕಾವ್ಯಾ ಕಾಮನಕೇರಿ ಕಂಚಿನ ಪದಕ, ೬ ರಿಂದ ೮ ವರ್ಷದ ೧೦೦ ಮೀಟರ್ ಬಾಲಕರ ವಿಭಾಗದಲ್ಲಿ ಮಿತಿಲ್ ಅನ್ನಗೌನಿ ಬೆಳ್ಳಿ ಪದಕ, ೧೨ ರಿಂದ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸುವ ಉದ್ಧೇಶದಿಂದ ಪಟ್ಟಣದ ವಿದ್ಯಾಚೇತನ ಪ್ರಕಾಶನವು ಪ್ರತಿವರ್ಷದಂತೆ ಪ್ರಸಕ್ತ ವರ್ಷದಲ್ಲಿ ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಕೊಡಮಾಡುವ ಹವ್ಯಾಸಿ ಓದುವ ಪ್ರಶಸ್ತಿಗೆ ಆಲಮೇಲ ತಾಲೂಕಿನ ಮೋರಟಗಿ ಗ್ರಾಮದ ಕಲ್ಪವೃಕ್ಷ ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತಿಯ ಪಿಯುಸಿ ವಿದ್ಯಾರ್ಥಿ ದತ್ತಾತ್ರೇಯ ಬಂದ್ರಾಡ ಆಯ್ಕೆ ಆಗಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಕೊಡಮಾಡುವ ಪುಸ್ತಕ ಮಿತ್ರ ಪ್ರಶಸ್ತಿಗೆ ಸಿಂದಗಿ ಪ್ರೇರಣಾ ಪಬ್ಲಿಕ್ ಸ್ಕೂಲ್‌ನ ೧೦ನೇ ತರಗತಿ ವಿದ್ಯಾರ್ಥಿನಿ ನಂದಿನಿ ಚವ್ಹಾಣ ಆಯ್ಕೆಯಾಗಿದ್ದಾರೆ ಎಂದು ಹ.ಮ.ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಡಬ್ಲ್ಯೂ.ಐ.ಎಫ್.ಎಸ್ ಹಾಗೂ ಜಂತುಹುಳ ನಿವಾರಣಾ ಕಾರ್ಯಕ್ರಮ ಬಾಲ್ಯಾವಸ್ಥೆಯಿಂದ ವಯಸ್ಕರ ಹಂತಕ್ಕೆ ಹೋಗುವ ಮದ್ಯಕಾಲವೇ “ಹದಿಹರೆಯ” ಕಾಲ. ಜೀವನದಲ್ಲಿ ಇದೊಂದು ಮಹತ್ತರವಾದ ಘಟ್ಟ ಅಥವಾ ಎರಡನೇ ಹಂತ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಎ.ಎ.ಮಾಗಿ ಹೇಳಿದರು.ಸಿಂದಗಿ ಪಟ್ಟಣದ ಸರಕಾರಿ ಹೆಣ್ಣುಮಕ್ಕಳ ಶಾಲೆಯ ಆವರಣದಲ್ಲಿ ಆರೋಗ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೊಗದೊಂದಿಗೆ ಹಮ್ಮಿಕೊಂಡ ಹದಿಹರೆಯದವರಿಗೆ ಕಬ್ಬಿಣಾಂಶದ ಮಾತ್ರೆ ನೀಡುವ ಕಾರ್ಯಕ್ರಮದಲ್ಲಿ ಮಾತ್ರೆ ನುಂಗಿಸಿ ಮಾತನಾಡಿದ ಅವರು, ತೀವ್ರವಾಗಿ ಬೆಳವಣಿಗೆ ಹೊಂದುವ ಈ ಸಂಧಿಕಾಲದಲ್ಲಿ ಹಾರ್ಮೋನುಗಳ ಬದಲಾವಣೆಗಳಿಂದ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು ಆಗುತ್ತವೆ. ಈ ವಯಸ್ಸಿನಲ್ಲಿ ಪೌಷ್ಠಿಕಾಂಶದ ಅವಶ್ಯಕತೆ ಹೆಚ್ಚಾಗಿರುತ್ತದೆ. ಅದರಲ್ಲೂ ಕಬ್ಬಿಣಾಂಶದ ಕೊರತೆ ಮುಖ್ಯ ಕಾರಣವಾಗಿರುತ್ತದೆ. ಆದ್ದರಿಂದ ಎಲ್ಲಾ ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿರುವ ಮಕ್ಕಳಿಗೆ ಪ್ರತಿ ಸೋಮವಾರ ಕಬ್ಬಿಣಾಂಶದ ಮಾತ್ರೆಯನ್ನು ಬಿಸಿಯೂಟದ ನಂತರ ಮಕ್ಕಳಿಗೆ ನೀಡಬೇಕು ಎಂದರು.ಈ ವೇಳೆ ತಾಲೂಕು ಆರೋಗ್ಯ ಕ್ಷೇತ್ರದ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಮಾತನಾಡಿ, ೧೦-೧೯ ವಯಸ್ಸಿನ ಹದಿಹರೆಯವದರಲ್ಲಿ ರಕ್ತ ಹೀನತೆ ಮತ್ತು ತೀವ್ರತೆ ಕಡಿಮೆ…
ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಯಾವುದೇ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನಿಗಾವಹಿಸಿ, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಯೋಜನೆ ಸಿದ್ಧಪಡಿಸಿಕೊಂಡು ಮಕ್ಕಳ ಉಜ್ವಲ ಭವಿಷ್ಯ ರೂಪಿಸಲು ಒತ್ತು ನೀಡಲು ಮುಂದಾಗುವಂತೆ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್‌ಕುಮಾರ ಘೋಷ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಶಾಲೆಯಿಂದ ಹೊರಗುಳಿಯಲು ಕಾರಣ ಪತ್ತೆ ಹಚ್ಚಿ ಸಂಬಂಧಿಸಿದ ಪಾಲಕರಿಗೆ ಮಕ್ಕಳ ಶಿಕ್ಷಣದ ಮಹತ್ವದ ಬಗ್ಗೆ ತಿಳಿಸಿಕೊಡುವ ಮೂಲಕ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವ ಸಾಮಾಜಿಕ ಕಾಳಜಿ ಹೊಂದಿ ಕಾರ್ಯ ನಿರ್ವಹಿಸುವಂತೆ ಅವರು ಹೇಳಿದರು.ವಿವಿಧ ಇಲಾಖೆಯಲ್ಲಿ ಸಕಾಲದಲ್ಲಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಕಾಲಮಿತಿಯೊಳಗೆ ಇತ್ಯರ್ಥಪಡಿಸಿ ಬಾಕಿ ಉಳಿಯದಂತೆ ಕ್ರಮವಹಿಸಬೇಕು. ಕಂದಾಯ ಗ್ರಾಮಗಳ ಹಕ್ಕು ಪತ್ರ ವಿತರಣೆ ಹಾಗೂ ಖಾತಾಗಳಿಗೆ ತಾಲೂಕಿನ…
