Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪುರಾಣ ಕೇವಲ ಆಧ್ಯಾತ್ಮೀಕ, ಧಾರ್ಮಿಕ ಆಚಾರ ವಿಚಾರಗಳಿಗೆ ಸೀಮಿತವಲ್ಲ. ಇದು ಜಾನಪದ ಜಗತ್ತಿನ ಸೊಗಡನ್ನು ಪರಿಚಯಿಸಬಲ್ಲದು ಎನ್ನಲು ಭಾನುವಾರದ ರೈತರು ಹಂತಿ ಕಟ್ಟಿ ಜೋಳದ ರಾಶಿ ಮಾಡುವ ರೂಪಕ ಸಾಕ್ಷಿಯಾಯಿತು.ಪಟ್ಟಣದ ವೀರಭದ್ರೇಶ್ವರ ಕಾರ್ತಿಕೋತ್ಸವದ ಅಂಗವಾಗಿ ಕಳೆದ ೧೨ ದಿನಗಳಿಂದ ಜರುಗುತ್ತಿರುವ ಕಲಬುರ್ಗಿ ಶರಣಬಸವೇಶ್ವರ ಮಹಾಪುರಾಣ ಅಂಗವಾಗಿ ಶರಣ ಬಸವೇಶ್ವರ ಜೀವನದ ವಿವಿಧ ಘಟ್ಟಗಳನ್ನು ಪರಿಚಯಿಸುವ ಸಂದರ್ಭಕ್ಕೆ ಅನುಸಾರವಾಗಿ ಭಾನುವಾರ ನಾಡಿನ ಜಾನಪದ ಸಂಸ್ಕೃತಿಯ ಪ್ರತೀಕವಾದ ಹಂತಿ ಹಬ್ಬದ ರೂಪಕವನ್ನು ಭಕ್ತರು ಮುಖ್ಯವಾಗಿ ಪಟ್ಟಣದ ರೈತ ಸಮುದಾಯ ಹಾಗೂ ಮಹಿಳೆಯರು ವಿವಿಧ ಹಂತಿಹಾಡುಗಳನ್ನು ಹೇಳಿ ಹಂತಿ ಕಟ್ಟಿ ಜೋಳದ ರಾಶಿ ಮಾಡುವುದರ ಮೂಲಕ ಸಾಂಪ್ರದಾಯಿಕ ಕೃಷಿ ಪದ್ಧತಿಯನ್ನು ನೆನಪಿಸಿದರು.ರೈತರು ಸುಗ್ಗಿಯ ಕಾಲದಲ್ಲಿ ಸಂಭ್ರಮಿಸುತ್ತಿದ್ದ ದಿನಗಳನ್ನು ನೆನಪಿಸುವಂತೆ ಪ್ರತ್ಯಕ್ಷ ಹಂತಿ ಮಾಡುವು ಮೂಲಕ ತಮ್ಮ ಬದುಕಿನ ಸೊಗಡನ್ನು ಪುನಃ ಮೆಲಕು ಹಾಕುವಂತಾಯಿತು ಹಾಗೂ ಇಂದಿನ ಮಕ್ಕಳು ಹಾಗೂ ಯುವಕರಿಗೆ ಪರಿಚಯಿಸುವಂತಾಯಿತು. ವಿಶೇಷವಾಗಿ ಹಂತಿಹಬ್ಬದ ಎತ್ತುಗಳ ವೇಷದಾರಿಗಳು ಸಹ ನೋಡುಗರ ಗಮನ…
ಕಬ್ಬಿನ ಗದ್ದೆಗಳ ಮೇಲಿನ ವಿದ್ಯುತ್ ತಂತಿಗಳನ್ನು ಬದಲಾಯಿಸಲು ರೈತರ ಆಗ್ರಹ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ವಿದ್ಯುತ್ ಅವಘಡದಿಂದಾಗಿ ಪಟ್ಟಣದ ೪ ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ಸಂಭವಿಸಿದೆ.ಪಟ್ಟಣದ ಪಾಂಡುರಂಗ ದೇಶಪಾಂಡೆ ಅವರ ಆರು ಎಕರೆ ಜಮೀನಿನಲ್ಲಿ ಕಬ್ಬು ಬೆಳೆಯಲಾಗಿತ್ತು. ಶುಕ್ರವಾರ ಬೆಳಿಗ್ಗೆ ವಿದ್ಯುತ್ ತಂತಿಗಳ ಸ್ಪರ್ಶದಿಂದ ಘಟನೆ ಸಂಭವಿಸಿದ್ದು ಅಗ್ನಿಶಾಮಕ ತಂಡದವರು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಕಳೆದ ವರ್ಷವು ಇದೇ ಸಮಯದಲ್ಲಿ ಮೂರು ಎಕರೆಯಲ್ಲಿ ಬೆಳೆದ ಕಬ್ಬು ಬೆಂಕಿಗೆ ಆಹುತಿಯಾಗಿ ಲಕ್ಷಾಂತರ ನಷ್ಟ ಸಂಭವಿಸಿತ್ತು. ಆ ಸಂದರ್ಭದಲ್ಲಿ ಕಬ್ಬಿನ ಗದ್ದೆಯ ಮೇಲೆ ವಿದ್ಯುತ್ ತಂತಿಗಳು ಹಾದು ಹೋಗದಂತೆ ಕ್ರಮ ಕೈಗೊಳ್ಳಲು ರೈತರು ಸೂಚಿಸಿದ್ದರು. ಆದರೆ ಹೆಸ್ಕಾಂ ಯಾವುದೇ ಕ್ರಮ ವಹಿಸದ ಹಿನ್ನೆಲೆಯಲ್ಲಿ ಘಟನೆ ಈ ಬಾರಿಯು ಪುನರಾವರ್ತನೆಯಾದಂತಾಗಿದೆ.ಹೆಸ್ಕಾಂ ಸಿಬ್ಬಂದಿ ಕೂಡಲೇ ಪಟ್ಟಣ ಸೇರಿದಂತೆ ತಾಲ್ಲೂಕಿನ ಕಬ್ಬಿನ ಗದ್ದೆಗಳ ಮೇಲಿನ ವಿದ್ಯುತ್ ತಂತಿಗಳನ್ನು ಬದಲಾಯಿಸಬೇಕು. ಹಾಗೂ ರೈತರಿಗೆ ಆದ ನಷ್ಟವನ್ನು ತಕ್ಷಣವೇ ತುಂಬಿ ಕೊಡಬೇಕು. ಜೊತೆಗೆ ಸರ್ಕಾರ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಾಂಪ್ರದಾಯಿಕ ಛಟ್ಟಿ ಜಾತ್ರೆಯ ಅಂಗವಾಗಿ ರಾವುರಾಯನು ಪಲ್ಲಕ್ಕಿ ಉತ್ಸವದ ಮೂಲಕ ಮಲ್ಲಯ್ಯನ ದೇವಸ್ಥಾನ ಪ್ರವೇಶಿಸಿ ಮರಳಿ ಸ್ವಸ್ಥಾನಕ್ಕೆ ಮರಳುವುದರೊಂದಿಗೆ ಜಾತ್ರೆ ಸಂಪನ್ನಗೊಂಡಿತು.ಪಟ್ಟಣದಲ್ಲಿ ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ನಂತರ ಜರುಗುವ ರಾವುತರಾಯನ ಪಲ್ಲಕ್ಕಿ ಉತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಮಲ್ಲಯ್ಯನ ದೇವಸ್ಥಾನ ತಲುಪಿದ ರಾವುತರಾಯನು ಪಲ್ಲಕ್ಕಿ ಉತ್ಸವ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ನಂತರ ದೇವಸ್ಥಾನದಲ್ಲಿ ಆಸೀನನಾದನು. ಶನಿವಾರ ಛಟ್ಟಿ ಅಂಗವಾಗಿ ಕಾರ್ತಿಕೋತ್ಸವ ಹಾಗೂ ಮಹಾಪ್ರಸಾದ ನೆರವೇರಿಸಲಾಯಿತು. ನಂತರ ಪಲ್ಲಕ್ಕಿ ಉತ್ಸವದ ಮೂಲಕ ಭಾನುವಾರ ಮರಳಿ ಪಟ್ಟಣದ ತನ್ನ ದೇವಸ್ಥಾನಕ್ಕೆ ಮರಳಿದನು.ಸಾಂಪ್ರದಾಯಿಕವಾಗಿ ರಾವುತರಾಯನು ಮಲ್ಲಯ್ಯನ ದೇವಸ್ಥಾನದಲ್ಲಿ ಷಷ್ಠಿಯವರೆಗೆ ಅಂದರೆ ಆರು ದಿನಗಳವರೆಗೆ ಇದ್ದು ನಂತರ ಮರಳಿ ತನ್ನ ಮೂಲದೇವಸ್ಥಾನಕ್ಕೆ ಮರಳುವನು. ಈ ಛಟ್ಟಿ ಜಾತ್ರೆಯ ಅಂಗವಾಗಿ ಪ್ರತಿ ವರ್ಷ ಜಾನುವಾರಗಳ ಬೃಹತ್ ಪ್ರದರ್ಶನ, ಮಾರಾಟ ಮೇಳ ಹಾಗೂ ಅತ್ಯುತ್ತಮ ರಾಸುಗಳಿಗೆ ಬಹುಮಾನ ವಿತರಣೆಗಳು ಪ್ರತಿವರ್ಷದಂತೆ ಈ ಬಾರಿ ವಿಜಯಪುರ ರಸ್ತೆಯಲಿರುವ ಗುರುಬಾಳಪ್ಪ ಯರಗಲ್ ಇವರ ಜಮೀನಿನಲ್ಲಿ ಜರುಗಿತು. ಕಾರಣಿಕರ ಹೇಳಿಕೆಗಳುಪ್ರತಿವರ್ಷವು…
ರಾಷ್ಟ್ರೀಯ ಬಾಲ ಸ್ವಾಸ್ಥ್ಯ-ಕಿಶೋರ ಸ್ವಾಸ್ಥ್ಯ-ಪ್ಲೋರೋಸಿಸ್ ತಡೆ-ನಿಯಂತ್ರಣ ಕಾರ್ಯಕ್ರಮ ಯಶಸ್ವಿ ಅನುಷ್ಠಾನಕ್ಕೆ ಸಿಇಓ ರಿಷಿ ಆನಂದ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಂಬಂಧಿಸಿದ ಇಲಾಖೆಗಳು ಸಮನ್ವಯತೆ ಸಾಧಿಸಿಕೊಂಡು ರಾಷ್ಟ್ರೀಯ ಬಾಲ ಸ್ವಾಸ್ಥ್ಯ, ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಹಾಗೂ ರಾಷ್ಟ್ರೀಯ ಪ್ಲೋರೋಸಿಸ್ ತಡೆ ಮತ್ತು ನಿಯಂತ್ರಣ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚನೆ ನೀಡಿದರು.ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಸೇರಿದಂತೆ ರಾಷ್ಟ್ರೀಯ ಬಾಲ ಸ್ವಾಸ್ಥ್ಯ, ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಹಾಗೂ ರಾಷ್ಟ್ರೀಯ ಪ್ಲೋರೋಸಿಸ್ ತಡೆ ಮತ್ತು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಕಂಡು ಬಂದಿರುವ ಅಪೌಷ್ಠಿಕ ಮಕ್ಕಳ ಮಾಹಿತಿಯನ್ನು ಕ್ರೋಢೀಕರಿಸಿ ಅಪೌಷ್ಠಿಕತೆ ಹೊಂದಿರುವ ಮಕ್ಕಳಿಗೆ ಅವಶ್ಯವಿರುವ ಸೂಕ್ತ ಚಿಕಿತ್ಸೆಯನ್ನು ಕೊಡಿಸಲು ಕ್ರಮ ವಹಿಸುವಂತೆ ಸೂಚಿಸಿದ ಅವರು, ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯಲ್ಲಿರುವ ವಿವಿಧ ಇಲಾಖೆಯ ಅಧಿಕಾರಿಗಳು…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಾಂಗ್ರೆಸ್ ನಾಯಕರು ಹಾಗೂ ಗುತ್ತಿಗೆದಾರ ಸಂತೋಷ ಹರನಾಳ ಅವರನ್ನು ರಾಷ್ಟ್ರೀಯ ಅಹಿಂದ ಸಂಘಟನೆಯ ವಿಜಯಪುರ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಸಂಘಟನೆಯ ರಾಜ್ಯಾಧ್ಯಕ್ಷ ಮುತ್ತಣ್ಣ ಎಸ್.ಶಿವಳ್ಳಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೊ.ಬೀರಲಿಂಗೇಶ್ವರ ಪೂಜಾರಿ ನೇಮಕಾತಿ ಕುರಿತು ಆದೇಶ ಪತ್ರ ನೀಡಿದ್ದಾರೆ. ಮುಂದಿನ ಆದೇಶದವರೆಗೂ ವಿಜಯಪುರ ಜಿಲ್ಲಾಧ್ಯಕ್ಷರಾಗಿ, ಅಹಿಂದ ಸಂಘಟನೆಯ ವರ್ಗಗಳ, ಸಮುದಾಯದ, ಜಾತ್ಯಾತೀತ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಹಕ್ಕುಗಳ ಪರ ನ್ಯಾಯಯುತ ಸಂಘಟನೆಗೆ ಶ್ರಮಿಸಬೇಕು ಎಂದು ತಿಳಿಸಲಾಗಿದೆ.
ಲಿಂ. ರುದ್ರಮುನಿ ಶಿವಾಚಾರ್ಯರ ೪೭ನೇ ಪುಣ್ಯಾರಾಧನೆ | ಪುರಾಣ ಪ್ರವಚನ ಮಹಾಮಂಗಲ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇಂದಿನ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ಸಂಸ್ಕೃತಿ ನೀಡಬೇಕಾಗಿರುವುದು ಅನಿವಾರ್ಯ. ನಾವೆಲ್ಲರೂ ಹೃದಯ ಶ್ರೀಮಂತಿಕೆ ಬೆಳೆಸಿಕೊಳ್ಳೋಣ. ಧರ್ಮವನ್ನು ಎಲ್ಲರೂ ಸೇರಿ ಉಳಿಸೋಣ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.ತಾಲೂಕಿನ ಯಂಕಂಚಿ ಗ್ರಾಮದ ಕುಂಟೋಜಿ ಹಿರೇಮಠದಲ್ಲಿ ಲಿಂ. ರುದ್ರಮುನಿ ಶಿವಾಚಾರ್ಯರ ೪೭ನೇ ಪುಣ್ಯಾರಾಧನೆ ನಿಮಿತ್ತ ಹಮ್ಮಿಕೊಂಡ ಉಜ್ಜಯಿನಿ ಶ್ರೀಮದ್ ಸಿದ್ದಲಿಂಗ ಜಗದ್ಗುರುಗಳ ಪುರಾಣ ಪ್ರವಚನ ಕಾರ್ಯಕ್ರಮದ ಮಹಾಮಂಗಲ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವರ್ಷದಿಂದ ವರ್ಷಕ್ಕೆ ಸನಾತನ ಧರ್ಮವನ್ನು ಮಠಮಾನ್ಯಗಳು ಉಳಿಸಿ ಬೆಳೆಸುತ್ತಿವೆ. ಮಠಗಳಲ್ಲಿ ಸಂಸ್ಕಾರ, ಸಂಸ್ಕೃತಿ ಇಂದಿನ ಯುವ ಪೀಳಿಗೆಗೆ ದೊರೆಯುತ್ತಿದೆ ಎಂದರು.ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ಯಶವಂತರಾಯಗೌಡ ರೂಗಿ ಮಾತನಾಡಿ, ಶ್ರೀಗಳು ಯಂಕಂಚಿ ಗ್ರಾಮವನ್ನು ಕೈಲಾಸವನ್ನಾಗಿ ಮಾಡಿದ್ದಾರೆ. ನಮ್ಮ ನಡೆ ನುಡಿ, ಸಂಸ್ಕಾರ ಎಲ್ಲಿ ಎಂದರೆ ಅದು ಯಂಕಂಚಿ ಕುಂಟೋಜಿ ಮಠದಲ್ಲಿದೆ. ಎಲ್ಲರೂ ಸೇರಿಕೊಂಡು…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: “ಎಸ್ಟ್ಡಿ ಆನ್ ಟೊಪೋಲಾಜಿಕಲ್ ಇಂಡಸಿಸ್ ಓವರ್ ಗ್ರಾಫ್ಸ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದಲ್ಲಿ ಜರುಗಿದ ಘಟಿಕೋತ್ಸವದಲ್ಲಿ ಸಿಂದಗಿಯ ಜಿ.ಪಿ.ಪೋರವಾಲ್ ಕಲಾ, ವಾಣಿಜ್ಯ ಹಾಗೂ ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಪದವಿ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ರಂಜನಾ ಮಹಾದೇವ ಸಂಕಪಾಲ್ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ.ರಂಜನಾ ಮಹಾದೇವ ಸಂಕಪಾಲ್ ಅವರು ರಾಣಿಚೆನ್ನಮ್ಮ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ಅಧ್ಯಯನ ವಿಭಾಗದ ವಿಶ್ವನಾಥ ಅವಟಿ ಮಾರ್ಗದರ್ಶನದಲ್ಲಿ ಅವರ ಸಂಶೋಧನೆ ಕೈಗೊಂಡಿದ್ದರು.ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿ ನಿರ್ದೇಶಕರು, ಪ್ರಾಚಾರ್ಯ ಡಿ.ಎಂ.ಪಾಟೀಲ ಸೇರಿದಂತೆ ಮಹಾವಿದ್ಯಾಲಯದ ಸಿಬ್ಬಂದಿ ವರ್ಗದವರು ಅಭಿನಂಧಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಪ್ರಸ್ತುತ 2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ತಯಾರಿಗೆ ಮಕ್ಕಳು ಈಗಿಂದಲೇ ಮಾನಸಿಕವಾಗಿ ಸಿದ್ದತೆಗೊಳ್ಳಬೇಕು. ಆ ದಿಸೆಯಲ್ಲಿ ಎಲ್ಲ ಎಸ್ಸೆಸ್ಸೆಲ್ಸಿ ಮಕ್ಕಳನ್ನು ಪರೀಕ್ಷಾ ಮುಖ್ಯ ವಾಹಿನಿಗೆ ತರಲು ಶಿಕ್ಷಕರು ಪ್ರಯತ್ನಿಸಬೇಕಲ್ಲದೇ ಫಲಿತಾಂಶ ಸುಧಾರಣೆಗೆ ನಿರಂತರ ಶ್ರಮ ವಹಿಸಬೇಕು ಎಂದು ಬಾಗಲಕೋಟೆ ಶಾಲಾ ಶಿಕ್ಷಣ ಇಲಾಖೆ ಉಪನಿದೇ೯ಶಕರ ಕಚೇರಿಯ ವಿಜ್ಞಾನ ವಿಷಯ ಪರಿವೀಕ್ಷಕ ಎಂ.ಎಸ್.ನ್ಯಾಮಗೌಡ ಸಲಹೆಯಿತ್ತರು.ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ಗದುಗಿನ ತೋಂಟದಾರ್ಯ ವಿದ್ಯಾಪೀಠ ಸಂಸ್ಥೆಯ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಪರಿಶೀಲಿಸಿ ಅವರು ಮಾತನಾಡಿದರು.ಎಸ್ಸೆಸ್ಸೆಲ್ಸಿ ಮಕ್ಕಳ ಜೊತೆಗೆ ಪರೀಕ್ಷಾ ಪೂರ್ವ ತಯಾರಿ ಹಾಗೂ ಪಠ್ಯ ವಿಷಯ ಕುರಿತು ಸಂವಾದ ನಡೆಸಿದ ಅವರು, ಪರೀಕ್ಷೆಗೆ ಸಿದ್ದರಾಗಲು ಈಗಿನಿಂದಲೇ ಸಕಲ ಓದಾಭ್ಯಾಸದ ತಯಾರಿ ಮಾಡಿಕೊಳ್ಳಬೇಕು. ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಸನ್ನದ್ಧರಾಗಬೇಕು ಎಂದು ಮಕ್ಕಳಿಗೆ ಸಲಹೆ ನೀಡಿದರು.ಮಕ್ಕಳ ಕಲಿಕಾ ಹಾಗೂ ಫಲಿತಾಂಶ ಪ್ರಗತಿಗೆ ಶಿಕ್ಷಕರು ಒತ್ತು ನೀಡಬೇಕು. ಈ ಬಾರಿ ಗ್ರೇಡ್ ಅಂಕಗಳಿಲ್ಲ.ಪರೀಕ್ಷಾ…
ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಬಿಇಒ ವಸಂತ ರಾಠೋಡ ಅಭಿಮತ ಉದಯರಶ್ಮಿ ದಿನಪತ್ರಿಕೆ ನಿಡಗುಂದಿ: ಮಕ್ಕಳಲ್ಲಿ ಸುಪ್ತವಾಗಿ ಹುದುಗಿರುವ ಸೃಜನಾತ್ಮಕ ಸಾಂಸ್ಕೃತಿಕ ಕಲಾ ಚಟುವಟಿಕೆಗಳನ್ನು ಹೊರಹಾಕಲು ಪೂರಕವಾಗಿರುವ “ಪ್ರತಿಭಾ ಕಾರಂಜಿ-ಕಲೋತ್ಸವ” ಕಾರ್ಯಕ್ರಮ ಮಕ್ಕಳಿಗೆ ವೇದಿಕೆ ಮೇಲೆ ನಿಲ್ಲುವ ಆತ್ಮಸ್ಥೈರ್ಯ ತುಂಬುತ್ತದೆ. ಅಲ್ಲದೇ ಎಳೆ ಮನದಲ್ಲಿ ದಿಟ್ಟತೆಯ ಸ್ಟೇಜ್ ಕರೇಜ್ ದ ಕವರೇಜ್ ಗೆ ಸಹಕಾರಿಯಾಗಿದೆ ಎಂದು ಬಸವನ ಬಾಗೆವಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ ಅಭಿಪ್ರಾಯಿಸಿದರು.ಸಮೀಪದ ಗೊಳಸಂಗಿ ಗ್ರಾಮದ ಎಸ್.ಆರ್.ಎಡಿಪ್ರೌಢಶಾಲೆ, ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆ ಹಾಗೂ ಹೆಣ್ಣು ಮಕ್ಕಳ ಶಾಲೆ ಸಹಯೋಗದಲ್ಲಿ ಜಿಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಜಯಪುರ, ಕ್ಷೇತ್ರಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ – ವಿಭಾಗದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಎಳೆಯ ಬಾಲ-ಬಾಲೆಯರ ಮೊಗ್ಗಿನ ಮನಭಾವದಲ್ಲಿ ಪ್ರತಿಭಾ ಕಾರಂಜಿಯು ಉತ್ಸಾಹದ ಚಿಲುಮೆ ಮೂಡಿಸಿ ದಿಟ್ಟತೆಯಿಂದ ಸ್ಪಧಾ೯ ಮನಭಾವದಲ್ಲಿ ಪ್ರತಿಭಾ ಕಾರಂಜಿಯು ವಿಶಿಷ್ಟ ರೀತಿಯಲ್ಲಿ ಯಶಸ್ವಿಯಾಗುತ್ತಲಿದೆ ಎಂದರು.ಶಾಲಾ ಹಂತದಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಬೇಕು ಯುಕೆಪಿ ೩ನೇ ಹಂತ ಯಥಾವಿದಿಯಾಗಿ ಜಾರಿಯಾಗಬೇಕು ಎಂದು ಆಗ್ರಹಿಸಿ ರೈತರ ಹೋರಾಟಕ್ಕೆ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ವಿಜಯಪುರ ಜಿಲ್ಲಾ ಘಟಕವು ಬೆಂಬಲ ನೀಡಿ ಯೋಜನೆ ಸಂಪೂರ್ಣಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಏಷ್ಯಾಖಂಡದಲ್ಲಿಯೇ ಬೃಹತ್ ನೀರಾವರಿ ಯೋಜನೆ ಆಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಆರಂಭಗೊಂಡು ಧೀರ್ಘಕಾಲವಾದರೂ ಇದುವರೆಗೂ ಪೂರ್ಣಗೊಳ್ಳದಿರುವುದು ದುರಂತವೇ ಸರಿ. ಪಕ್ಷಾತೀತ, ಜ್ಯಾತ್ಯಾತೀತವಾಗಿ ಜಿಲ್ಲೆಯ ಯಾವುದೇ ಸಮಸ್ಯೆ ಹಾಗೂ ಅಭಿವೃದ್ದಿ ಕಾರ್ಯಗಳಿಗೆ ಜಿಲ್ಲಾ ಕರ್ನಾಟಕ ಕಾರ್ಯನಿರತ ಸಂಪಾದಕರ ಸಂಘವು ಬೆಂಬಲಿಸುತ್ತದೆ. ನ್ಯಾಯಯುತವಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ ಹೋರಾಟಕ್ಕೆ ಸ್ಪಂದಿಸಿ ಸರಕಾರವು ಎಚ್ಚೆತ್ತುಕೊಂಡು ಅಗತ್ಯ ಅನುದಾನ ನೀಡಿ ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.ನೆರೆಯ ಆಂದ್ರಪ್ರದೇಶ ಸರಕಾರವು ಆಣೆಕಟ್ಟುಗಳನ್ನು ಅನಧಿಕೃತವಾಗಿ ನಿರ್ಮಾಣ ಮಾಡಿ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ನ್ಯಾಯಬದ್ದವಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಲು ಆಗುತ್ತಿಲ್ಲ.…
