Author: editor.udayarashmi@gmail.com

ವಿಶೇಷ ಲೇಖನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೀನುಗಾರಿಕೆ ಇಲಾಖೆಯಡಿ ಜಿಲ್ಲೆಯಲ್ಲಿ ಇರುವ ಸೌಲಭ್ಯಗಳನ್ನು ಬಳಸಿಕೊಂಡು ಸ್ಥಳೀಯ ಮೀನುಗಾರರು ಮತ್ಸ್ಯ ಕೃಷಿಯಲ್ಲಿ ತೊಡಗಿಕೊಳ್ಳುವುದುರ ಮೂಲಕ ತಮ್ಮ ಜೀವನವನ್ನು ಬೆಳಕಾಗಿಸಿಕೊಂಡಿದ್ದಾರೆ.ವಿಜಯಪುರ ಜಿಲ್ಲೆಯಲ್ಲಿ ೭,೨೧೯.೭೧ ಹೆಕ್ಟೇರ್ ಜಲ ವಿಸ್ತೀರ್ಣವುಳ್ಳ ೧೬೦ ದೊಡ್ಡ ಕೆರೆಗಳು, ೮೧ ಗ್ರಾಮ ಪಂಚಾಯತಿ ಕೆರೆಗಳು ಹಾಗೂ ಹಲವು ಸಣ್ಣ ಹೊಂಡಗಳು ಇರುವುದಲ್ಲದೇ ೧೪೨.೦೦ ಕಿ.ಮೀ ಉದ್ದದ ವ್ಯಾಪ್ತಿಯಲ್ಲಿ ಕೃಷ್ಣ, ಭೀಮಾ ಮತ್ತು ಡೋಣಿ ನದಿಗಳು ಇವೆ. ಆಲಮಟ್ಟಿ ಹಾಗೂ ಬಸವಸಾಗರ ಜಲಾಶಯಗಳು ಜಿಲ್ಲೆಯ ಮೀನುಗಾರಿಕೆ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರವಹಿಸಿವೆ.ಜಿಲ್ಲೆಯಲ್ಲಿ ೨೪ ಮೀನುಗಾರಿಕೆ ಸಹಕಾರ ಸಂಘಗಳು ಕಾರ್ಯನಿರತವಾಗಿದ್ದು, ೬,೩೫೮ ಮೀನುಗಾರರು ಮೀನುಗಾರಿಕೆ ವೃತ್ತಿಯ ಮೇಲೆ ಅವಲಂಬಿತರಾಗಿದ್ದಾರೆ. ಪ್ರತಿ ವರ್ಷ ಶೇಕಡಾ ೧೦ ರಷ್ಟು ಮೀನು ಉತ್ಪಾದನೆ ಹೆಚ್ಚಳದ ಗುರಿ ಇದ್ದು, ಕಳೆದ ವರ್ಷ ಜಿಲ್ಲೆಯ ಆಲಮಟ್ಟಿ & ಬಸವಸಾಗರ ಜಲಾಶಯಗಳು ತುಂಬಿದ ಕಾರಣ ಮೀನು ಉತ್ಪಾದನೆ ಗಣನೀಯವಾಗಿ ಏರಿಕೆಯಾಗಿದೆ.ಜಿಲ್ಲೆಯ ಎಲ್ಲ ಇಲಾಖೆಯ ಕೆರೆಗಳು, ಗ್ರಾಮ ಪಂಚಾಯತಿ ಕೆರೆಗಳು, ಪ್ರಮುಖ ಮೂರು ನದಿ ಭಾಗಗಳು,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುಳವಾಡ ಸಮೀಪದಲ್ಲಿ ಟೋಲ್‌ನ್ನು ಏಕಾಏಕಿ ಪ್ರಾರಂಭಿಸಿ ಟೋಲ್ ಸಂಗ್ರಹಣೆ ಮಾಡುತ್ತಿದ್ದು, ರೈಲ್ವೆ ಹಳಿಯ ಮೇಲೆ ನಿರ್ಮಿಸುತ್ತಿರುವ ಸೇತುವೆ ಸಂಪೂರ್ಣ ಮಾಡದೇ ಹಾಗೂ ಅಲ್ಲಿ ಇರಬೇಕಾದ ಮೂಲಭೂತ ಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ಅಂಬೂಲೇನ್ಸ್, ಕ್ರೇನ್, ಶೌಚಾಲಯ, ಸೇರಿದಂತೆ ಅನಿವಾರ್ಯ ಕಾರಣಗಳಿಂದ ನಿಂತಿರುವ ವಾಹನಗಳಿಗೆ ಪೆಟ್ರೋಲ್ ಅಥವಾ ಡಿಸೇಲ್ ವ್ಯವಸ್ಥೆ, ತುರ್ತು ಪಂಚರ್ ತಿದ್ದುವ ವ್ಯವಸ್ಥೆ, ಸೇರಿದಂತೆ ಇನ್ನಿತರ ವ್ಯವಸ್ಥೆಗಳನ್ನು ಹೊಂದಿದ ನಂತರವೇ ಟೊಲ್ ಸಂಗ್ರಹ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಿದರು.ಒಂದು ತಿಂಗಳ ಸಮಯಾವಕಾಶದಲ್ಲಿ ಕಾಮಗಾರಿ ಮುಗಿಸಬೇಕು ಇಲ್ಲವಾದಲ್ಲಿ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.ಜಿಲ್ಲಾಧ್ಯಕ್ಷ ಸಂಗಮೇಶಗ ಸಗರ ಮನವಿ ಸಲ್ಲಿಸಿ ಮಾತನಾಡಿ, ರೈಲ್ವೇ ಸೇತುವೆ ನಿರ್ಮಿಸದೇ ಟೊಲ್ ಸಂಗ್ರಹಿಸುತ್ತಿದ್ದಾರೆ, ಇದು ಕಾನೂನು ಬಾಹೀರ ಹಾಗೂ ನ್ಯಾಶನಲ್ ಹೈವೇಯವರೇ ಹೊರಡಿಸಿರುವ ಮಾರ್ಗಸೂಚಿಯ ಪ್ರಕಾರ ಎಲ್ಲಾ ವ್ಯವಸ್ಥೆಗಳು ಕಲ್ಪಿಸಿದ ನಂತರವೇ ಟೊಲ್ ಸಂಗ್ರಹ ಮಾಡಬೇಕು…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕಳಪೆ ಗುಣಮಟ್ಟದ ಬೀಜ ವಿತರಿಸಿ ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಶ್ರೀ ಅಮರೇಶ್ವರ ಸೀಡ್ಸ್ ಏಜೆನ್ಸಿಯ ಬೀಜಗಳನ್ನು ರಾಜ್ಯಾದ್ಯಂತ ಕೃಷಿ ಇಲಾಖೆ ಪೂರೈಕೆ ಮಾಡಲು ನಿಷೇದಿಸಬೇಕು ಮತ್ತು ಅಮರೇಶ್ವರ ಸೀಡ್ಸ್ ಏಜೆನ್ಸಿಯವರ ಮೇಲೆ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿರುವದರಿಂದ ಈ ಏಜೆನ್ಸಿಯನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ಯುವಜನ ಸೇನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಕೃಷಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ.ಪತ್ರದ ಸ್ವೀಕೃತಿ ಪ್ರತಿ ಪತ್ರಿಕೆಗೆ ನೀಡಿದ್ದು, ಇದೇ ಎಜೆನ್ಸಿಯು ೨೦೨೨ ರಲ್ಲಿ ಶೇಂಗಾ ತಳಿಯ ಬೀಜಗಳನ್ನು ಕಕ್ಕೇರಾ ರೈತ ಸಂಪರ್ಕ ಕೇಂದ್ರಕ್ಕೆ ಪೂರೈಸಿದ್ದು ಆ ಬೀಜಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿ ಕಡಿಮೆ ಗುಣಮಟ್ಟದ್ದಾಗಿದೆ ಎಂದು ಸಾಬೀತುಪಡಿಸಲಾಗಿದೆ. ಹೀಗಿದ್ದರೂ ತಾಲೂಕು ಸೇರಿದಂತೆ ರಾಜ್ಯದ ಹಲವು ಕಡೆ ಈ ಏಜೆನ್ಸಿಯವರಿಗೆ ಬೀಜ ವಿತರಿಸಲು ಅನುಮತಿ ಕೊಟ್ಟಿರುವದು ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ಇದೇ ಏಜೆನ್ಸಿಯವರು ವಿತರಿಸಿದ ತೊಗರಿ ಬಿತ್ತನೆ ಬೀಜಗಳು ಹೂ ಉದುರಿ ಕಾಳು ಕಟ್ಟದೇ ಇರುವದು…

Read More

ನ್ಯಾಯಾಲಯದ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಡಿ.೧೪ ರಂದು ಪಟ್ಟಣದ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌ಅನ್ನು ಹಮ್ಮಿಕೊಳ್ಳಲಾಗಿದೆ. ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿರುವ ಪಕ್ಷಗಾರರು ತಮ್ಮ ವಕೀಲರಿಗೆ ಭೇಟಿ ಮಾಡಿ ನಿಮ್ಮ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಇಲ್ಲಿನ ಹಿರಿಯ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಹೇಳಿದರು.ಪಟ್ಟಣದ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ್ ಅಧಾಲತ್ ಕುರಿತು ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ಪ್ರಕರಣಗಳು ಬಹು ಬೇಗನೇ ಇತ್ಯರ್ಥವಾಗದ ಹಿನ್ನೆಲೆ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡು ತುರ್ತು ನ್ಯಾಯ ಪಡೆದುಕೊಳ್ಳಲು ಪಕ್ಷಗಾರರಿಗೆ ಕಾನೂನು ಸೇವಾ ಸಮಿತಿಯ ವತಿಯಿಂದ ಅವಕಾಶ ಕಲ್ಪಿಸಿ ಕೊಡಲಾಗಿದೆ. ಇದರ ಸದುಪಯೋಗವನ್ನು ಪಡೆದುಕೊಂಡಲ್ಲಿ ಶೀಘ್ರವಾಗಿ ನಿಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಪ್ರಕರಣಗಳನ್ನು ಲೋಕ್ ಅದಾಲತ್ ನಲ್ಲಿ ಇತ್ಯರ್ಥಪಡಿಸಿ ಅದಾಲತ್ ಅನ್ನು ಯಶಶ್ವಿಗೊಳಿಸಲು ನ್ಯಾಯವಾದಿಗಳು ಸಹಕಾರ ನೀಡುವಂತೆ ತಾಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವ್ಯವಹಾರ ಅಧ್ಯಯನ ವಿಭಾಗದಲ್ಲಿ ೨೦೨೪-೨೫ನೆಯ ಶೈಕ್ಷಣಿಕ ಸಾಲಿನ ಎಂಬಿಎ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಎಂಬಿಎ ಕೋರ್ಸ್ ಹಂಚಿಕೆಯಾಗಿ ಕೆಲವೇ ಕೆಲವು ಬಾಕಿ ಉಳಿದ ಸೀಟುಗಳಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಇದೇ ಡಿಸೆಂಬರ್ ೩೧ ರವರೆಗೆ ಯುಯುಸಿಎಂಎಸ್ ತಂತ್ರ‍್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಪ್ರಾಧಿಕಾರ ನಿಗದಿಪಡಿಸಿರುವ ಶುಲ್ಕ ಮಾತ್ರ ಪಾವತಿಸಲು ಅವಕಾಶವಿದ್ದು, ಹೆಚ್ಚಿನ ಮಾಹಿತಿಗಾಗಿ www.kswu.ac.in£ÀÄß ಅಥವಾ ಮೊಬೈಲ್ ಸಂಖ್ಯೆ: ೯೮೪೫೯೮೮೪೮೯, ೯೮೪೪೯೦೧೯೯೯ ಸಂಪರ್ಕಿಸಬಹುದು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಇದೇ ಡಿ.೬ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಜಯಪುರದ ವಿಜಯವಾಣಿ ದಿನಪತ್ರಿಕೆಯ ಪತ್ರಕರ್ತ ಪರಶುರಾಮ ಬಾಸಗಿ ಭಾಗವಹಿಸಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಶೃತಿ ಬೆಳ್ಳುಂಡಗಿ, ಮಲ್ಲಮ್ಮಾ ಪೂಜಾರ, ಲಕ್ಷ್ಮೀ ಎಸ್, ದೀಪಿಕಾ ಖರ್ತಿ, ದೀಕ್ಷಾ ಮುಚ್ಚಂಡಿ ಮತ್ತು ಖುದಿಜಾ ಖಾನ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ವಹಿಸಲಿದ್ದಾರೆ. ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ತಹಮೀನಾ ಕೋಲಾರ ಮತ್ತು ಸಂದೀಪ ನಾಯಕ, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

Read More

ಅರಕೇರಿ ಗ್ರಾಮ ಪಂಚಾಯತಿಗೆ ಮುಖ್ಯ ಲೆಕ್ಕಾಧಿಕಾರಿಗಳು ಭೇಟಿ, ಪರಿಶೀಲನೆ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲೂಕಿನ ಅರಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಪ್ರೌಢಶಾಲೆ, ಗ್ರಾಮ ಪಂಚಾಯತಿ ಕಾರ್ಯಾಲಯ, ಗ್ರಂಥಾಲಯ, ವಸತಿ ನಿಲಯಗಳಿಗೆ ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗಳು ಹಾಗೂ ತಿಕೋಟಾ ತಾಲೂಕು ಪಂಚಾಯತಿಯ ಆಡಳಿತಾಧಿಕಾರಿಗಳಾದ ಶ್ರೀ ರಾಮಣ್ಣ ಅಥಣಿ ರವರು ಅನೀರಿಕ್ಷಿತ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲನೆ ಮಾಡಿ, ಶಾಲೆಯಲ್ಲಿ ಮತ್ತು ವಿವಿಧ ಸರಕಾರಿ ಕಾರ್ಯಾಲಯಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಆರಂಭದಲ್ಲಿ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದ ಅವರು ಶಾಲೆಯಲ್ಲಿ ಗುಣಮಟ್ಟದ ಗ್ರಂಥಾಲಯ ಸಿದ್ಧಪಡಿಸಲುಶಿಕ್ಷಕರಿಗೆ ತಿಳಿಸಿದರು. ಅದಕ್ಕೆ ಬೇಕಾಗುವ ಸಾಮಗ್ರಿಗಳ ಪಟ್ಟಿ ತಯಾರಿಸಿ ತಾಲೂಕು ಪಂಚಾಯತಿಗೆ ಸಲ್ಲಿಸಲು ಸೂಚಿಸಿ, ಅಗತ್ಯ ಸಾಮಗ್ರೀಗಳನ್ನು ತಾಲೂಕು ಪಂಚಾಯತಿಯ ಅನುದಾನದಲ್ಲಿ ನೀಡುವ ಭರವಸೆ ನೀಡಿದರು. ನಂತರ ಅಡುಗೆ ಕೋಣೆ, ಉಗ್ರಾಣ ಕೋಣೆ, ಐಟಿ ಕೋಣೆ ಸೇರಿದಂತೆ ವಿವಿಧ ಕೊಠಡಿಗಳನ್ನು ವೀಕ್ಷಣೆ ಮಾಡಿ, ಶಾಲಾ ಮಕ್ಕಳೊಂದಿಗೆ…

Read More

ಅಫಜಲಪುರದಲ್ಲಿ ೧೦ ಕೋಟಿ ವೆಚ್ಚದ ಮಿನಿ ವಿಧಾನಸೌಧ ಕಾಮಗಾರಿಗೆ ಆರಂಭದಲ್ಲೇ ಅವಗಢ ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ೨೦೨೨-೨೩ನೇ ಸಾಲಿನ ೪೦೫೯ ಅಪೆಂಡಿಕ್ಸ್ ಹಡ್‌ನಲ್ಲಿ ೧೦೨.೩೯ ಲಕ್ಷ ವೆಚ್ಚದಲ್ಲಿ ಅಫಜಲಪುರ ಪಟ್ಟಣದ ಹೊರ ವಲಯದ ಕಲಬುರಗಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡು ನಿರ್ಮಾಣವಾಗುತ್ತಿರುವ ಮಿನಿ ವಿಧಾನ ಸೌಧ ಕಟ್ಟಡ ಮೂರನೇ ಮಹಡಿಯ ಮೇಲ್ಛಾವಣ ಗಾಗಿ ಅಳವಡಿಸಿದ್ದ ಸಲಕರಣೆಗಳು ಕುಸಿದು ನಾಲ್ವರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಬುಧವಾರ ಸಂಜೆ ೫.೩೦ರ ಸುಮಾರಿಗೆ ಜರುಗಿದೆ.ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ೫೦ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದು ಮೂರನೇ ಮಹಡಿ ಹಾಗೂ ಮಿನಿ ವಿಧಾನಸೌಧದ ಮುಂಭಾಗದ ಮೇಲ್ಛಾವಣ ಹಾಕುವುದಕ್ಕಾಗಿ ಕಬ್ಬಿಣದ ರಾಡ್, ಪ್ಲೌಡ್ ಸಹಿತ ಅಗತ್ಯ ಸಾಮಗ್ರಿಗಳನ್ನು ಜೋಡಿಸುವ ಕೆಲಸ ಭರದಿಂದ ನಡೆದಿತ್ತು. ಬೆಳಿಗ್ಗೆಯಿಂದ ಎಲ್ಲವು ಜೋಡಿಸಿ ಇನ್ನೇನು ಕೆಲಸ ಮುಗಿಸಿ ಮನೆಗಳತ್ತ ತೆರಳಬೇಕೆನ್ನುವಷ್ಟರಲ್ಲಿ ಈ ಅವಗಢ ಸಂಭವಿಸಿ ಅದರೊಳಿಗೆ ನಾಲ್ಕು ಜನ ಕಾರ್ಮಿಕರು ಸಿಲುಕಿಕೊಳ್ಳುವಂತಾಯಿತು. ನಾಲ್ವರ ಪೈಕಿ ಒರ್ವನ ಸ್ಥಿತಿ ಗಂಭೀರವಾಗಿದ್ದು ಉಳಿದವರಿಗೆಲ್ಲಾ ತಲೆ, ಬೆನ್ನು, ಹೊಟ್ಟೆ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ” ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ, ವಿಶೇಷ ಲೇಖನಗಳ ಪ್ರಕಟಣೆಯನ್ನು ಗುರುತಿಸಿ, ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿಯವರು ೨೦೨೪ ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ “ವಡ್ಡರ್ಸೆ ರಘುರಾಮಶೆಟ್ಟಿ” ಅವರ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದ್ದರು. ನ್ಯಾ.ಅಶೋಕ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಶಸ್ತಿ ಆಯ್ಕೆ ಸಮಿತಿಯು ಒಮ್ಮತದಿಂದ ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಪ್ರಶಸ್ತಿಯು ೨ ಲಕ್ಷ ರೂ.ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಡಿ.ಉಮಾಪತಿ ಅವರ ಪರಿಚಯ ಮಾರ್ಚ್ ೧೮,೧೯೫೯ ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಜನಿಸಿದ…

Read More

ಎಚ್‌ಐವಿ-ಏಡ್ಸ್, ಟಿಬಿ ಸಮನ್ವಯ ಸಭೆ ಮತ್ತು ರಕ್ತ ಸನ್ನದ್ಧತಾ ಪಡೆ ಸಮಿತಿ ಸಭೆ ಅಧ್ಯಕ್ಷತೆ ವಹಿಸಿದ ಡಿಸಿ ಟಿ.ಭೂಬಾಲನ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮ ನಡಿಗೆ ಕ್ಷಯಮುಕ್ತ ಕಡೆಗೆ ಎಂದು ಕ್ಷಯಮುಕ್ತ ಭಾರತವನ್ನಾಗಿಸುವ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ವಿವಿಧ ಆಯಾಮಗಳಲ್ಲಿ ವಯಸ್ಕ ಬಿಸಿಜಿ ಲಸಿಕಾ ಕಾರ್ಯಕ್ರಮ ವಿಜಯಪುರ ಸೇರಿದಂತೆ ರಾಜ್ಯದ ೬ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಹಮ್ಮಿಕೊಳ್ಳಲಿದ್ದು, ಜಿಲ್ಲೆಯಾದ್ಯಂತೆ ೧೦೦ ದಿನದ ಕ್ಷಯ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಎಚ್‌ಐವಿ-ಏಡ್ಸ್, ಟಿಬಿ ಸಮನ್ವಯ ಸಭೆ ಮತ್ತು ರಕ್ತ ಸನ್ನದ್ಧತಾ ಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಾದ್ಯಂತೆ ಯಶಸ್ವಿಯಾಗಿ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಜನಸಮುದಾಯಗಳಿಗೆ ಕ್ಷಯರೋಗದ ಕುರಿತು ಸೂಕ್ತ ಅರಿವು ಮೂಡಿಸುವಂತೆ ಅವರು ಸೂಚನೆ ನೀಡಿದರು.ನಿಕ್ಷಯ ಪೋಷಣೆ ಯೋಜನೆ ಭಾರತ ಸರ್ಕಾರದ ಮಹಾತ್ವಾಂಕ್ಷೆಯ ಯೋಜನೆಯಾಗಿದ್ದು, ಅಪೌಷ್ಠಿಕತೆಯನ್ನು ನಿವಾರಿಸುವಲ್ಲಿ ಕ್ಷಯರೋಗಿಗಳಿಗೆ ಆರ್ಥಿಕ ಸಹಾಯ ನೀಡುವುದು, ಚಿಕಿತ್ಸೆ ಪಡೆಯುತ್ತಿರುವ…

Read More