Author: editor.udayarashmi@gmail.com

ಪಿಸಿಪಿಎನ್‌ಡಿಟಿ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ವಿಜಯಪುರ: ಅನಧಿಕೃತವಾಗಿ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಅಪರಾಧವಾಗಿದ್ದು, ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಿ, ಸಂಬಂಧಿಸಿದ ಅಧಿಕಾರಿಗಳು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಿಸಿಪಿಎನ್‌ಡಿಟಿ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಕಾಯ್ದೆಯನ್ವಯ ಅಪರಾಧವಾಗಿದ್ದು, ಒಂದು ವೇಳೆ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಅಂತಹವರ ಮೇಲೆ ಕಾಯ್ದೆಯನ್ವಯ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.ಅಧಿಕಾರಿಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಕ್ಯಾನಿಂಗ್ ಕೇಂದ್ರಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅನಿರೀಕ್ಷಿತವಾಗಿ ಭೇಟಿ ನೀಡುವ ಮೂಲಕ ಕೇಂದ್ರಗಳಲ್ಲಿ ಕಾಯ್ದೆಯನ್ವಯ ನಿಯಮಗಳನ್ನು ಪಾಲಿಸಲಾಗುತ್ತಿವೆಯೇ, ಇಲ್ಲ ಎಂಬುದನ್ನು ಹಾಗೂ ಸ್ಕ್ಯಾನಿಂಗ್ ಕೇಂದ್ರಗಳು ಕಡ್ಡಾಯವಾಗಿ ನೊಂದಣಿಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಗೋಚರಿಸುವ ಹಾಗೆ ಮಾಹಿತಿ ಫಲಕಗಳು,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ, ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕಾಗಿ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.ಸೇವಾಸಿಂಧು ಪೋರ್ಟಲ್ ನಲ್ಲಿ https://dom.karnataka.gov.inಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: ೨೫-೧೨-೨೦೨೪ ಆಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ ಹಾಗೂ ಸಹಾಯವಾಣಿ ಸಂಖ್ಯೆ: ೮೨೭೭೭೯೯೯೯೦ ಅಥವಾ ಅಲ್ಪ ಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ, ಬಬಲೇಶ್ವರ ಹಾಗೂ ಸಿಂದಗಿಯ ಒಟ್ಟು ೫೭ ಪರೀಕ್ಷಾ ಕೇಂದ್ರಗಳಲ್ಲಿ ದಿನಾಂಕ : ೦೭-೧೨-೨೦೨೪ ಮತ್ತು ೦೮-೧೨-೨೦೨೪ರಂದು ಪಂಚಾಯತಿ ಅಭಿವೃದ್ದಿ ಅಧಿಕಾರಿ ಹುದ್ದೆಗಳ ಪರೀಕ್ಷೆಗಳು ಜರುಗಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ದಿನದಂದು ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ, ಸಿಬ್ಬಂದಿ ಹಾಗೂ ಅಭ್ಯರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟವಾಚ್, ಬ್ಲೂಟೂತ್ ಡಿವೈಸ್, ಪೇಜರ್, ವೈರ್‌ಲೆಸ್, ಕ್ಯಾಲ್ಕುಲೇಟರ್ ಮುಂತಾದ ಎಲೆಕ್ಟಾçನಿಕ ವಸ್ತುಗಳನ್ನು ತರುವುದು ಹಾಗೂ ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ಬೆಳಿಗ್ಗೆ ೮-೩೦ ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರನೆಟ್, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಯಾಳವಾರ ಗ್ರಾಮದಲ್ಲಿ ನಡೆದ ವಿವಿಧ ಕಟ್ಟಡಗಳ ಉದ್ಘಾಟನೆ ಸಮಾರಂಭದಲ್ಲಿ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಇವರು ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪರದಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಮಾಡಿರುವ ಆಪಾದನೆ ಅವರಿಗೆ ಶೋಭೆ ತರುವಂತದ್ಧಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸಂಗನಗೌಡ ಹರನಾಳ ಹೇಳಿದ್ದಾರೆ.ಪಟ್ಟಣದಲ್ಲಿ ಗುರುವಾರ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ, ಯಾಳವಾರ ಗ್ರಾಮದಲ್ಲಿ ಅಧ್ಯಕ್ಷತೆ ವಹಿಸಿ ವಿವಿಧ ಕಟ್ಟಡ ಉದ್ಘಾಟನೆ ನೆರವೇರಿಸಿದ ನಂತರ ರಾಜ್ಯ ಸರ್ಕಾರದ ಕುರಿತು ಹೇಳಿದ ಹೇಳಿಕೆ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು ಕರ್ನಾಟಕದ ಎಲ್ಲಾ ಬಡ ಜನತೆಗೆ ಗ್ಯಾರಂಟಿ ಯೋಜನೆಗಳ ಅಡಿಯಲ್ಲಿ ಪ್ರತಿಯೊಬ್ಬ ಫಲಾನುಭವಿಗಳಿಗೆ ಮನೆ ಮನೆಗೆ ಮುಟ್ಟಿಸುವ ಕೆಲಸ ನಿರಂತರವಾಗಿ ಕಾಂಗ್ರೆಸ್ ಪಕ್ಷ ಸರ್ಕಾರ ನಡೆಸುತ್ತಿದ್ದು, ಬಡವರ ನಿರ್ಗತಿಕರ ಕಣ್ಣೀರು ಒರಿಸುವ ಕೆಲಸ ಸರ್ಕಾರ ಮಾಡುತ್ತಿದೆ. ವಿಜಯಪುರ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ರಾಜ್ಯಾದ್ಯಂತ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿವೆ, ಮಾನ್ಯ ಶಾಸಕರು ತಾವು ಮುದ್ದೇಬಿಹಾಳ, ಬಬಲೇಶ್ವರ, ಇಂಡಿ,ಸಿಂದಗಿ, ಬಸವನ ಬಾಗೇವಾಡಿ,…

Read More

ಸಿಂದಗಿಯಲ್ಲಿ ಭಾರತೀಯ ಜನತಾ ಪಕ್ಷದಿಂದ ಎತ್ತಿನ ಬಂಡಿಯ ಮೂಲಕ ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಈ ಭಾಗದ ಬಹುತೇಕ ರೈತರು ಕೃಷಿ ಇಲಾಖೆಯಲ್ಲಿ ೨೦೨೪-೨೪ನೇ ಸಾಲಿನಲ್ಲಿ ವಿತರಿಸಿದ ತೊಗರಿ ಬೀಜಗಳನ್ನು ಖರೀದಿಸಿ ಬೆಳೆದಿದ್ದಾರೆ. ಎತ್ತರಕ್ಕೆ ಬೆಳೆದ ಬೆಳೆ ಹೂವುಗಳು ಉದುರಿ ಕಾಯಿ ಕಟ್ಟದೆ ಶೇ.೫೦ರಷ್ಟು ಬೆಳೆಗಳು ಹಾಳಾಗಿವೆ ಎಂದು ಮಾಜಿ ಶಾಸಕ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.ಸಿಂದಗಿ ಮತ್ತು ಆಲಮೇಲ ತಾಲೂಕಿನ ರೈತರು ಬೆಳೆದ ತೊಗರಿ ಬೆಳೆ ಈ ಬಾರಿ ನಷ್ಟದಲ್ಲಿದ್ದು ಕೂಡಲೇ ಸಂಭಂಧಿಸಿದ ಅಧಿಕಾರಿಗಳು ಸರ್ವೆಮಾಡಿಸಿ ಸರಕಾರಕ್ಕೆ ವಾಸ್ತವಿಕ ವರದಿಯನ್ನು ಸಲ್ಲಿಸಿ ಸೂಕ್ತ ಪರಿಹಾರ ನೀಡುವಲ್ಲಿ ಮುಂದಾಗಬೇಕು ಎಂದು ಒತ್ತಾಯಿಸಿ ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷದ ಸಿಂದಗಿ ಮಂಡಲದ ವತಿಯಿಂದ ಎತ್ತಿನ ಬಂಡಿಯ ಮೂಲಕ ಪ್ರತಿಭಟನೆ ನಡೆಸಿ ತಹಶೀಲ್ದಾರ ಮತ್ತು ತಾಲೂಕು ಕೃಷಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಅನ್ನದಾತ ತೀವ್ರ ಸಂಕಷ್ಟದ ಬದುಕನ್ನು ಎದುರಿಸುತಿದ್ದಾನೆ. ಇದಕ್ಕೆ ಸಂಬಂದಿಸಿದಂತೆ ಈ ಭಾಗದ ಅನೇಕ ರೈತರು ಅಧಿಕಾರಿಗಳೇ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಕಲಚೇತನರು ಸಮಾಜದಲ್ಲಿ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ ಆತ್ಮವಿಶ್ವಾಸದಿಂದ ಬದುಕು ನಡೆಸುವಂತೆ ಅವಕಾಶ ಕಲ್ಪಿಸುವುದು ಸಮಾಜ ಹಾಗೂ ಸರಕಾರದ ಜವಾಬ್ದಾರಿ ಎಂದು ಸರಕಾರಿ ಪಪೂ ಕಾಲೇಜಿನ ಉಪನ್ಯಾಸಕ ಬಸನಗೌಡ ಬಿರಾದಾರ ಹೇಳಿದರು.ಪಟ್ಟಣದ ದಿವ್ಯಚೇತನ ವಿಶೇಷ ಬುದ್ಧಿಮಾಂಧ್ಯ ಮಕ್ಕಳ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ದಿನಾಚರಣೆ ಕಾರ್ಯಕ್ರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಗವಿಕಲ ಮಕ್ಕಳ ಸಬಲೀಕರಣಕ್ಕಾಗಿ ಅನೇಕ ಶಾಲಾ-ಕಾಲೇಜು ಹಾಗೂ ಸಂಘ-ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ಕಾಲದಲ್ಲಿ ವಿಕಲಚೇತನರಿಗೆ ವಿದ್ಯಾಭ್ಯಾಸದ ಅವಕಾಶಗಳ ಜೊತೆಗೆ ಕೌಶಲ್ಯಾಭಿವೃದ್ಧಿಯ ಕಲಿಕೆಯು ಅವರ ಬದುಕಿನಲ್ಲಿ ಸಾಧನೆ ಮಾಡುವಂತಹ ಭರವಸೆ ಮೂಡಿಸುತ್ತಿದೆ. ಅಂಗವಿಕಲ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸಬೇಕು. ಅಂದಾಗ ಅವರಲ್ಲಿರುವ ಅದಮ್ಯ ಶಕ್ತಿ ಇದೆ ಎಂಬುದನ್ನು ನಿರೂಪಿಸಲು ಸಾಧ್ಯ ಎಂದರು.ಈ ವೇಳೆ ಸಂಸ್ಥೆಯ ಅಧ್ಯಕ್ಷೆ ಆರ್.ಎಂ.ಯಾಳಗಿ ಮಾತನಾಡಿ, ವಿಕಲಚೇತನರು ಸಹ ಮಾನವರೆ ಅವರಿಗೂ ಭಾವನೆಗಳಿವೆ. ಜಗತ್ತಿನ ಆಗುಹೋಗುಗಳಿಗೆ ಸ್ಪಂದಿಸುವ ಬೌದ್ಧಿಕ ಸಾಮರ್ಥ್ಯವಿದೆ. ಸಮಾಜದ ಮುಖ್ಯ ವಾಹಿನಿಗೆ ತರಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಕಾಯದರ್ಶಿ ಎಂ.ಕೆ.ಯಾಳಗಿ, ಆರೋಗ್ಯ ಇಲಾಖೆಯ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ವಿಕಲಚೇತನರಲ್ಲಿರುವ ವಿಶೇಷ ಆಸಕ್ತಿ ಕ್ಷೇತ್ರವನ್ನು ಗುರುತಿಸಿ ಶಿಕ್ಷಣ ಇಲಾಖೆಯಿಂದ ಪ್ರೋತ್ಸಾಹ ಹಾಗೂ ಸಹಕಾರ ನೀಡಲಾಗುವುದು. ಅವರಿಗೆ ಅನುಕಂಪಕ್ಕಿಂತ ಅವಕಾಶಗಳು ಮುಖ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತಾ ಹುನ್ನೂರ ಹೇಳಿದರು.ಅವರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಹಾಗೂ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಸಂಗಮೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡಿರುವ ವಿಶ್ವ ವಿಕಲ ಚೇತನರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ವಿಕಲಚೇತನರು ತಮ್ಮಲ್ಲಿರುವ ಕೀಳರಿಮೆ ತೊರೆದು, ಎಲ್ಲರಂತೆ ನಾವೂ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಜಿಲ್ಲೆಯ ವಿಕಲಚೇತನರು ಸರ್ಕಾರದ ಸೌಲಭ್ಯ ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದರು.ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸೊಸೈಟಿಯ ಅಧ್ಯಕ್ಷ ಎಸ್ ಎಸ್ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಕಲಚೇತನರು ಸಮಾಜದಲ್ಲಿ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ ಆತ್ಮವಿಶ್ವಾಸದಿಂದ ಜೀವನ ನಡೆಸುವಂತೆ ಅವಕಾಶ ಕಲ್ಪಿಸುವುದು ಸಮಾಜದ ಜವಾಬ್ದಾರಿ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.ಸೋಮನಿಂಗ ಬೋರಗಿ ಸ್ವಾಗತಿಸಿದರು. ಭೀಮಾಶಂಕರ ವಾಘಮೋರೆ ನಿರೂಪಿಸಿದರು.…

Read More

ಸಮ್ಮೇಳನಾಧ್ಯಕ್ಷರಿಗೆ ಅಧಿಕೃತ ಆವ್ಹಾನ ನೀಡಿದ ಆಲಮೇಲ ತಾಲೂಕು ಕಸಾಪ ಘಟಕ ಉದಯರಶ್ಮಿ ದಿನಪತ್ರಿಕೆ ಆಲಮೇಲ: ಆಲಮೇಲ ತಾಲ್ಲೂಕು ೨ನೇ ಕನ್ನಡ‌ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಸಾಹಿತಿ, ಕಲಾವಿದ ಚನ್ನವೀರಶಾಸ್ತ್ರೀ ಅವರನ್ನು ಆಯ್ಕೆ ಮಾಡಿದ್ದು ಅತ್ಯಂತ ಸೂಕ್ತವಾದುದು ಎಂದು ಗದಗ ಜಿಲ್ಲಾ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಚಂದ್ರಶೇಖರ ವಸ್ತ್ರದ ಹೇಳಿದರು.ಆಲಮೇಲ ತಾಲ್ಲೂಕು ಕಸಾಪ ಘಟಕವು ಗದಗ ನಗರದ ಚನ್ನವೀರಶಾಸ್ತ್ರೀ ಹಿರೇಮಠ ಅವರ ಮನೆಯಲ್ಲಿ ಅಧಿಕೃತ ಆವ್ಹಾನ ನೀಡಿದ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.ನಿಕಟಪೂರ್ವ ಅಧ್ಯಕ್ಷ ಡಾ.ರಮೇಶ ಕತ್ತಿ ‘ಆಲಮೇಲ‌ ಕಸಾಪ ಪರವಾಗಿ ಅಭಿನಂದಿಸಿ ಸಮ್ಮೇಳನಕ್ಕೆ ಆವ್ಹಾನಿಸಿ ಪರಿಷತ್ತಿನ ಪರವಾಗಿ ಆಮಂತ್ರಣ ನೀಡಿದರು.ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ ” ಕಡಣಿ ಶಾಸ್ತ್ರೀಗಳು ಕಲೆ, ಸಾಹಿತ್ಯ ಸಂಸ್ಕೃತಿಯಲ್ಲಿ ನಾಲ್ಕು ದಶಕಗಳಿಂದಲೂ ಗಮನಾರ್ಹ ಸೇವೆ ಮಾಡಿದ್ದಾರೆ, ಅವರ ಸೇವೆಗೆ ಸಂದ ಗೌರವ ಇದು, ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಿರುವುದು ಪರಿಷತ್ತಿನ ಪದಾಧಿಕಾರಿಗಳು ಉತ್ತಮ ನಿರ್ಧಾರ ಮಾಡಿದ್ದಾರೆ ಎಂದರು.ವಿಭೂತಿ ಪತ್ರಿಕೆ ಸಂಪಾದಕ…

Read More

ನಾಗಠಾಣದಲ್ಲಿ ನಡೆದ ಚಿಂತನಗೋಷ್ಠಿ ಉದ್ಘಾಟಿಸಿದ ಇಸ್ರೋ ವಿಜ್ಞಾನಿ ಸಂಜೀವ ಗೌರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತದ ಬಾಹ್ಯಾಕಾಶ ತಂತ್ರಜ್ಞಾನವು ನಿರಂತರ ಪ್ರಯೋಗ, ಹೊಸ ಅನ್ವೇಷಣೆ ಮತ್ತು ಆವಿಷ್ಕಾರಗಳ ಮೂಲಕ ಮನುಕುಲದ ಸಮಸ್ಯೆಗಳ ಪರಿಹಾರ ಮತ್ತು ಮಾನವಕಲ್ಯಾಣದ ಗುರಿಯನ್ನು ಹೊಂದಿದೆ ಎಂದು ಹಾಸನ ಎಂಸಿಎಫ್ ಇಸ್ರೋ ಕೇಂದ್ರದ ಹಿರಿಯ ವಿಜ್ಞಾನಿ ಸಂಜೀವ ಚಂದ್ರಶೇಖರ ಗೌರ ಹೇಳಿದರು.ಗುರುವಾರದಂದು ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ‘ಬಾಹ್ಯಾಕಾಶದಲ್ಲಿ ಭಾರತದ ಹೆಜ್ಜೆಗಳು’ ಕುರಿತ ಚಿಂತನಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.ಸಂಪರ್ಕ, ಆರೋಗ್ಯ, ಶಿಕ್ಷಣ, ಕೃಷಿ, ಪರಿಸರ, ಹವಾಮಾನ ಬದಲಾವಣೆ ಅಧ್ಯಯನ ಹೀಗೆ ಹತ್ತು ಹಲವು ಕ್ಷೇತ್ರಗಳಿಗೆ ಇಸ್ರೋ ಸೇವೆ ಒದಗಿಸುತ್ತಿದೆ. ಶಿಸ್ತುಬದ್ದ ಅಧ್ಯಯನದೊಂದಿಗೆ ಜ್ಞಾನ ಗಳಿಸಿಕೊಂಡು ಮಕ್ಕಳು ಬದುಕಿನಲ್ಲಿ ಯಶಸ್ಸು ಪಡೆಯಲು ಸಾಧ್ಯ. ಸೌಲಭ್ಯಗಳ ಕೊರತೆ ಇದ್ದಾಗಲೂ ಸತತ ಪ್ರಯತ್ನ, ಪರಿಶ್ರಮ, ನಿರ್ಧಿಷ್ಟ ಗುರಿಯೊಂದಿಗೆ ಮುನ್ನಡೆದಾಗ ಗ್ರಾಮೀಣ ಭಾಗದ ಮಕ್ಕಳು ಕೂಡ ವಿಜ್ಞಾನಿಯಾಗಿ, ದೇಶಸೇವೆ ಸಲ್ಲಿಸಲು ಸಾಧ್ಯ.ಕಡಿಮೆ ವೆಚ್ಚ, ಉತ್ತಮ…

Read More

ಬಿ.ಎಲ್.ಡಿ.ಇ.ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಿಂದ ನಡೆದ ಕ್ಷೇತ್ರ ವರದಿಗಾರಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿಗಳಿಗೆ ಕ್ಷೇತ್ರ ವರದಿಗಾರಿಕೆ ವೃತ್ತಿ ಕೌಶಲ್ಯ ಹೆಚ್ಚಿಸುವುದರ ಜೊತೆಗೆ ಸೃಜನಾತ್ಮಕ ಬರವಣಿಗೆಗೆ ಸಹಕಾರಿಯಾಗುತ್ತದೆ ಎಂದು ಎಸ್.ಬಿ.ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರೊ.ಮಲಿಕ್ ಜಮಾದಾರ ಹೇಳಿದರು.ನಗರದ ಎಸ್.ಬಿ.ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಆದಿಲ್ ಶಾಹಿ ಐತಿಹಾಸಿಕ ಕುಮಟಗಿ ಕೆರೆ ಕ್ಷೇತ್ರ ವರದಿಗಾರಿಕೆ ವಿಶೇಷ ಭೇಟಿ ನೀಡಿ ಮಾತನಾಡಿದ ಅವರು, ವೃತ್ತಿ ಜೀವನಕ್ಕೆ ಕೌಶಲ್ಯ ಅತೀ ಮುಖ್ಯ ಎಂದರು.ಪತ್ರಿಕೋದ್ಯಮ ನಿರಂತರ ಕ್ರಿಯಾಶೀಲತೆ ಬೇಡುತ್ತದೆ. ಓದುಗರಿಗೆ ನಿತ್ಯ ಹೊಸದನ್ನು ಕೊಡುವ ಜವಾಬ್ದಾರಿ ನಿಭಾಯಿಸುವುದು ಅತ್ಯಂತ ಕಷ್ಟದ ಕೆಲಸ. ಅದರಲ್ಲೂ ನಾವು ಕಂಪ್ಯೂಟರ್ ಹಾಗೂ ಸ್ಪರ್ಧಾತ್ಮಕ ಯುಗದಲ್ಲಿ ಕಾರ್ಯನಿರ್ವಹಿಸಬೇಕಾಗಿರುವುದರಿಂದ ವೃತ್ತಿ ಬದುಕು ಕಠಿಣ ಅನುಭವಗಳನ್ನು ನೀಡುತ್ತದೆ ಹಾಗಾಗಿ ನಾವು ವಿದ್ಯಾರ್ಥಿ ಜೀವನದಲ್ಲೇ ಎಲ್ಲವನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಹೇಳಿದರು.ವಿದ್ಯಾರ್ಥಿಗಳಿಗೆ ಪಾಠ ಎಷ್ಟು ಮುಖ್ಯವೋ ಪ್ರಯೋಗತ್ಮಕ…

Read More