Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿದ್ದ ಸಮಗ್ರ ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರ (ಐ.ಸಿ.ಟಿ.ಸಿ.) ಅನ್ನು ತಕ್ಷಣ ಮರುಸ್ಥಾಪಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ರವಿ ಗೊಳಸಂಗಿ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ತಹಶೀಲ್ದಾರ್ ಸಂತೋಷ ಮ್ಯಾಗೇರಿ ಅವರ ಮುಖಾಂತರ ವಿಜಯಪುರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಕೊಲ್ಹಾರ ಹೊಸ ತಾಲೂಕು ಕೇಂದ್ರವಾಗಿದ್ದು, ರೋಣಿಹಾಳ, ತೆಲಗಿ, ಕೂಡಗಿ, ಮುಳವಾಡ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಆರೋಗ್ಯ ಸೇವೆಗಾಗಿ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರವನ್ನು ಅವಲಂಬಿಸಿದ್ದಾರೆ. ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐ.ಸಿ.ಟಿ.ಸಿ. ಕೇಂದ್ರದ ಮೂಲಕ ಎಚ್‌ಐವಿ ಪರೀಕ್ಷೆ, ಆಪ್ತ ಸಮಾಲೋಚನೆ ಹಾಗೂ ಜಾಗೃತಿ ಸೇವೆಗಳು ಪರಿಣಾಮಕಾರಿಯಾಗಿ ದೊರೆಯುತ್ತಿದ್ದು, ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಿತ್ತು ಎಂದು ಮನವಿಯಲ್ಲಿ ತಿಳಿಸಿದ್ದಾರೆ.ಯಾವುದೇ ಸಮರ್ಪಕ ಕಾರಣವಿಲ್ಲದೆ ಐ.ಸಿ.ಟಿ.ಸಿ. ಕೇಂದ್ರವನ್ನು ಸ್ಥಗಿತಗೊಳಿಸಿರುವುದರಿಂದ ಸುಮಾರು 28 ರಿಂದ 30 ಸಾವಿರ ಜನಸಂಖ್ಯೆ ಹೊಂದಿರುವ ಕೊಲ್ಹಾರ ತಾಲೂಕಿನ ಜನರು ಅಗತ್ಯ ಆರೋಗ್ಯ ಸೇವೆಯಿಂದ…

Read More

ಉದಯರಶ್ಮಿ ದಿನಪತ್ರಿಕೆ ವರದಿ: ಸಿದ್ದಪ್ಪ ಹೂಗಾರಆಲಮಟ್ಟಿ: ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ಅರಳದಿನ್ನಿ ಗ್ರಾಮದ ಗ್ರಾಮಸ್ಥರು ಮಳೆಗಾಗಿ ದೇವರ ಮೊರೆ ಹೋಗಿದ್ದಾರೆ. ಗ್ರಾಮದ ಆರಾಧ್ಯ ದೇವತೆಯಾದ ಶ್ರೀ ಚಂದ್ರಮ್ಮದೇವಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನೆರವೇರಿಸಿ, ಸಾಂಪ್ರದಾಯಿಕ ಗುರ್ಜಿ ಸೇವೆಯ ಮೂಲಕ ಮಳೆಗಾಗಿ ಪ್ರಾರ್ಥಿಸಲಾಯಿತು.ಶುಕ್ರವಾರ ಬೆಳಿಗ್ಗೆ ಗ್ರಾಮದ ಮಹಿಳೆಯರು ಹಾಗೂ ಹಿರಿಯರು ದೇವಸ್ಥಾನದಲ್ಲಿ ಒಟ್ಟುಗೂಡಿ ವಿಶೇಷ ಪೂಜೆ ಸಲ್ಲಿಸಿದರು. ಪೂಜೆಯ ಬಳಿಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭಕ್ತಿ ಪೂರ್ವಕವಾಗಿ ಮೆರವಣಿಗೆ ನಡೆಸಲಾಯಿತು.ಈ ವೇಳೆ ಮಹಿಳೆಯರು ತಲೆಯ ಮೇಲೆ ಗುರ್ಜಿ ಹೊತ್ತು, ಮನೆ ಮನೆಗೆ ಭೇಟಿ ನೀಡಿದರು. ಮನೆಗಳ ಮುಂದೆ ನೀರು ಹಾಕಿಸಿಕೊಂಡು, ಭಕ್ತಿಗೀತೆಗಳು ಮತ್ತು ಸಾಂಪ್ರದಾಯಿಕ ಪದಗಳನ್ನು ಹಾಡುತ್ತಾ ಮಳೆಗಾಗಿ ಬೇಡಿಕೊಂಡರು.ಮೆರವಣಿಗೆಯ ಸಂದರ್ಭದಲ್ಲಿ ಗ್ರಾಮಸ್ಥರಿಂದ ರೊಟ್ಟಿ, ಅಕ್ಕಿ, ಬೇಳೆ ಮತ್ತು ದುಡ್ಡನ್ನು ಸಂಗ್ರಹಿಸಲಾಯಿತು. ಸಂಗ್ರಹಿಸಿದ ಸಾಮಗ್ರಿಗಳಿಂದ ಇಡೀ ಊರಿಗೆ ಸಾಮೂಹಿಕವಾಗಿ ಪ್ರಸಾದವನ್ನು ತಯಾರಿಸಿ ಗ್ರಾಮ ದೇವತೆಯಾದ ಕೊಣಮ್ಮದೇವಿ ದೇವಸ್ಥಾನದಲ್ಲಿ ವಿತರಿಸಲಾಯಿತು.”ಮಳೆ ಬಾರದೆ ಬೆಳೆಗಳು ಒಣಗುತ್ತಿವೆ. ದೇವರಲ್ಲಿ ಪ್ರಾರ್ಥಿಸಿದರೆ…

Read More

ಉದಯರಶ್ಮಿ ದಿನಪತ್ರಿಕೆ ​ವಿಜಯಪುರ: ಕರ್ನಾಟಕ ಲೋಕ ಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿರುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ೫೦ ದಿನಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.​ಮೈಸೂರಿನಲ್ಲಿರುವ ಮುಕ್ತ ವಿಶ್ವವಿದ್ಯಾನಿಲಯದ ಕೇಂದ್ರ ಕಚೇರಿಯಲ್ಲಿ ಈ ತರಬೇತಿ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಜುಲೈ ೨೧ರ ಒಳಗಾಗಿ ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೪:೩೦ರವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.​ ತರಬೇತಿಯ ವಿವರಗಳು ಹಾಗೂ ಹೆಸರು ನೋಂದಣಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ ೦೮೨೧-೨೫೧೫೯೪೪ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರಾಮುವಿ ಕುಲಸಚಿವರಾದ ಪ್ರೊ. ನವೀನ್‌ಕುಮಾರ್ ಎಸ್.ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಕುರಿತು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ರಾಜ್ಯ ಸರಕಾರ ಜಾರಿಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ. ಪುಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ವಿವಿಧ ಬೆಳೆಗಳಿಗೆ ರೈತರು ಬೆಳೆ ವಿಮೆ ಮಾಡಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.ತಾಲ್ಲೂಕುವಾರು ಹಾಗೂ ಗ್ರಾಮ ಪಂಚಾಯಿತಿವಾರು ಅಧಿಸೂಚಿಸಲಾಗಿರುವ ವಿವಿಧ ಬೆಳೆಗಳ ವಿಮಾ ಮೊತ್ತ ವಿಮಾ ಕಂತು ಮತ್ತು ನೋಂದಣಿಯ ಅಂತಿಮ ದಿನಾಂಕದ ಮಾಹಿತಿಯನ್ನು ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಿಗೆ ಸಂಪರ್ಕಿಸಲು ವಿನಂತಿಸಲಾಗಿದೆ. ಈ ಯೋಜನೆಗೆ ಒಳಪಡುವ ವಿವಿಧ ಬೆಳೆಗಳಿಗೆ, ಬೆಳೆ ಸಾಲ ಪಡೆದ ರೈತರು, ಸಾಲ ನೀಡಿದ ಬ್ಯಾಂಕ್ ಗಳಲ್ಲಿ ವಿಮೆ ನೋಂದಾಯಿಸಬೇಕು ಎಂದವರು ತಿಳಿಸಿದ್ದಾರೆ. ಬೆಳೆ ಸಾಲ ಪಡೆಯದ ರೈತರು ನೋಂದಣಿಗಾಗಿ ಅರ್ಜಿಯೊಂದಿಗೆ ರೈತರು ಕೃಷಿ ಸಾಲ ಪಡೆಯದಿರುವ ಕುರಿತು ಕಡ್ಡಾಯವಾಗಿ ಸ್ವಯಂ ಘೋಷಣೆ ಪತ್ರ ಹಾಗೂ ಭೂಮಿ ಹೊಂದಿರುವುದಕ್ಕೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಕುರಿತು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ಸರಕಾರ ಅಧಿಸೂಚನೆ ಹೊರಡಿಸಿದ್ದು, ಜಿಲ್ಲೆಯಲ್ಲಿ ವಿವಿಧ ಬೆಳೆಗಳಿಗೆ ರೈತರು ಬೆಳೆ ವಿಮೆ ಮಾಡಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ.ಅವರು ತಿಳಿಸಿದ್ದಾರೆ.ತಾಲ್ಲೂಕುವಾರು ಹಾಗೂ ಗ್ರಾಮ ಪಂಚಾಯಿತಿವಾರು ಅಧಿಸೂಚಿಸಲಾಗಿರುವ ವಿವಿಧ ಬೆಳೆಗಳ ವಿಮಾ ಮೊತ್ತ, ವಿಮಾ ಕಂತು ಮತ್ತು ನೋಂದಣಿಯ ಅಂತಿಮ ದಿನಾಂಕದ ಮಾಹಿತಿಯನ್ನು ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಕಚೇರಿಗಳಿಗೆ ಸಂಪರ್ಕಿಸಬಹುದಾಗಿದೆ ಎಂದವರು ತಿಳಿಸಿದ್ದಾರೆ.ಈ ಯೋಜನೆಗೆ ಒಳಪಡುವ ವಿವಿಧ ಬೆಳೆಗಳಿಗೆ, ಬೆಳೆ ಸಾಲ ಪಡೆದ ರೈತರು, ಸಾಲ ನೀಡಿದ ಬ್ಯಾಂಕ್ ಗಳಲ್ಲಿ ವಿಮೆ ನೋಂದಾಯಿಸಬೇಕು. ಜೊತೆಗೆ ಬೆಳೆ ಸಾಲ ಪಡೆಯದ ರೈತರು ನೋಂದಣಿಗಾಗಿ ಅರ್ಜಿ ಜೊತೆ ಕೃಷಿ ಸಾಲ ಪಡೆಯದಿರುವ ಕುರಿತು ಕಡ್ಡಾಯವಾಗಿ ಸ್ವಯಂ ಘೋಷಣೆ ಪತ್ರ ಲಗತ್ತಿಸಬೇಕು.ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಆಧಾರ ಸಂಖ್ಯೆ ಜೋಡಿಸಿದ ಬ್ಯಾಂಕ್ ಪಾಸ್ ಬುಕ್…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರದಲ್ಲಿ ೨೦೨೬-೨೭ನೇ ಸಾಲಿನ ವಿವಿಧ ಸ್ನಾತಕ, ಸ್ನಾತಕೋತ್ತರ, ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿ ಪ್ರಾರಂಭವಾಗಿವೆ.ಆಸಕ್ತ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತಿತಿತಿ.ಞsoumಥಿsuಡಿu.ಚಿಛಿ.iಟಿ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದಾಗಿದೆ.ಬಿಪಿಎಲ್ ಮಹಿಳೆಯರು, ಮಾಜಿ ಸೈನಿಕರು, ಆಟೋ ಕ್ಯಾಬ್ ಚಾಲಕರು ಹಾಗೂ ಕೆಎಸ್‌ಆರ್‌ಟಿಸಿ ನೌಕರರಿಗೆ ಶುಲ್ಕ ರಿಯಾಯಿತಿ ನೀಡಲಾಗಿದ್ದು, ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳು, ತೃತೀಯ ಲಿಂಗದವರು ಹಾಗೂ ದೃಷ್ಟಿಹೀನ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಸೌಲಭ್ಯವಿದೆ.ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು.ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಅಥವಾ ಮೊಬೈಲ್ ಸಂಖ್ಯೆ ೯೪೮೩೯೨೦೦೬೫, ೯೧೧೦೨೫೬೭೩೮ ಹಾಗೂ ೭೮೯೨೫೫೦೦೫೩ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬರಪರಿಹಾರ ಕುರಿತು ಕೇಂದ್ರಕ್ಕೆ ಪತ್ರ ಬರೆಯುತ್ತಿರುವ ರಾಜ್ಯದ ವಿರುದ್ಧ ಸಂಸದ ರಮೇಶ ಜಿಗಜಿಣಗಿ ವಾಗ್ದಾಳಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದಲ್ಲಿ ತೀವ್ರ ಬರಪರಿಸ್ಥಿತಿ ಎದುರಾಗಿದ್ದು ಬರಘೋಷಣೆಯಾಗದೆ, ಸಮೀಕ್ಷೆ ನಡೆಸದೇ, ಪ್ರಸ್ತಾವನೆ ಸಲ್ಲಿಸದೇ ಪರಿಹಾರಕ್ಕಾಗಿ ನಿರಂತರವಾಗಿ ಕೇಂದ್ರದತ್ತ ಬೊಟ್ಟು ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಾಯಕರ ವಿರುದ್ಧ ಸಂಸದ ರಮೇಶ ಜಿಗಜಿಣಗಿ ಹರಿಹಾಯ್ದಿದ್ದಾರೆ‌.”ಬರಪರಿಹಾರಕ್ಕಾಗಿ ಈಗ ಕೇಂದ್ರಕ್ಕೆ ಪತ್ರ ಬರೆಯುವ ಕುರಿತು ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರು, ಮೊದಲು ತಮ್ಮ ಜವಾಬ್ದಾರಿ ಏನು ಅಂತ ಯೋಚಿಸಬೇಕು. ಎಲ್ಲದಕ್ಕೂ ಕೇಂದ್ರವೇ ಮಾಡಬೇಕು ಅಂದ್ರೆ ರಾಜ್ಯ ಸರ್ಕಾರದ ಪಾತ್ರವೇನು?” ಎಂದು ಪ್ರಶ್ನಿಸಿದ್ದಾರೆ.”NDRF ಮಾರ್ಗಸೂಚಿ ಪ್ರಕಾರ ರಾಜ್ಯ ತನ್ನ SDRF ನಿಧಿಯಿಂದ ಮೊದಲು ಪರಿಹಾರ ನೀಡಬೇಕು. ನಂತರ ಕೇಂದ್ರದಿಂದ ಹೆಚ್ಚುವರಿ ನೆರವು ಕೇಳಬೇಕು. ಆದರೆ ಇಲ್ಲಿ ರಾಜ್ಯ ಸರ್ಕಾರ ಯಾವುದೇ ಕೆಲಸ ಮಾಡದೇ ನೇರವಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತಿದೆ. ಇದು ಜನರನ್ನು ದಾರಿ ತಪ್ಪಿಸುವ ಕೆಲಸ” ಎಂದು ಅವರು ಕಿಡಿಕಾರಿದ್ದಾರೆ.ರಾಜ್ಯ ಸರ್ಕಾರ ಕೂಡಲೇ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ,…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣ ಪಂಚಾಯತಿ ಅಧ್ಯಕ್ಷ ಕಾಂಗ್ರೆಸ್ ಪಕ್ಷದ ಸದಸ್ಯ ಸಾಧಿಕ ಫರಿದಾಸಬ ಸುಂಬಡ ಅವರನ್ನು ಅಧ್ಯಕ್ಷ ಸ್ಥಾನದ ಅವಿಶ್ವಾಸ ನಿಲುವಳಿ ಮಂಡಿಸಲು ೧೨ ಸದಸ್ಯರು ಸಹಿ ಮಾಡಿ ಮುಖ್ಯಾಧಿಕಾರಿ ರವಿ ಸಿರಗುಪ್ಪಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.ಒಟ್ಟು ೧೯ ಸಂಖ್ಯಾಬಲದ ಸದಸ್ಯರನ್ನು ಹೊಂದಿರುವ ಆಲಮೇಲ ಪಟ್ಟಣ‌ ಪಂಚಾಯತಿ ಜಿಲ್ಲೆಯಲ್ಲಿಯೇ ದೊಡ್ಡ ಪಟ್ಟಣ‌ಪಂಚಾಯತಿ ಆಗಿದೆ , ೧೦ ಸದಸ್ಯರು ಬೆಂಬಲ ಬೇಕಿರುವ ಈಗಿನ ಅಧ್ಯಕ್ಷರಿಗೆ ೧೨ ಸದಸ್ಯರು ಬೆಂಬಲ ಹಿಂಪಡೆದುಕೊಂಡಿದ್ದಾರೆ. ಬಿಜೆಪಿ, ಕಾಂಗ್ರೆಸ್ ನಿಂದ ತಲಾ ಎಂಟು ಸದಸ್ಯರು ಚುನಾಯಿತರಾಗಿದ್ದು ಮೂವರು ಪಕ್ಷೇತರರು ಆಯ್ಕೆಯಾಗಿದ್ದರು. ಈಗ ಅವಿಶ್ವಾಸ ನಿಲುವಳಿ ಸಭೆ ನಡೆಸುವಂತೆ ಆಗ್ರಹಿಸಿದ. ಅಧ್ಯಕ್ಷ ಸಾದಿಕ ಸುಂಬಡ ಅವಧಿಯಲ್ಲಿನ ಅಕ್ರಮಗಳ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ಸದಸ್ಯ ಸಂಜೀವಕುಮಾರ ಯಂಟಮಾನ ‘ ಅಧ್ಯಕ್ಷರು ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದ್ದಾರೆ, ಸದಸ್ಯರ ಗಮನಕ್ಕೂ ತರದೆ ತೀರ್ಮಾನ‌ ಮಾಡುತ್ತಿದ್ದು, ಸರಿಯಾದ ಕ್ರಮವಲ್ಲ , ಕೆ.ಪಿ.ಆರ್ ಸಕ್ಕರೆ ಕಾರ್ಖಾನೆ ತೆರಿಗೆ, ತರಕಾರಿ ಮಾರುಕಟ್ಟೆಯ ಲಿಲಾವಿನಿಂದ ಬಂದ…

Read More

ತ್ರೈಮಾಸಿಕ ಡಿಸ್ಟ್ರಿಕ್ಟ್ ಕನ್ಸಲ್ಟೇಟಿವ್ ಕಮಿಟಿ ಸಭೆ ಹಾಗೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬ್ಯಾಂಕರ್ಸ್ಗಳಿಗೆ ಜಿ.ಪಂ. ಸಿಇಓ ರಿಷಿ ಆನಂದ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಹಕರು ಬ್ಯಾಂಕಿಗೆ ಕಾರ್ಯ ನಿಮಿತ್ತ ಆಗಮಿಸಿದ ಸಂದರ್ಭದಲ್ಲಿ ಅವರ ಕುಂದು ಕೊರತೆ ಆಲಿಸುವ ಮೂಲಕ ಅವರಿಗೆ ಸರಿಯಾಗಿ ಸ್ಪಂದನೆ ಮಾಡಬೇಕು. ಬ್ಯಾಂಕುಗಳಿಗೆ ಆಗಮಿಸುವ ಗ್ರಾಹಕರೊಂದಿಗೆ ಸಹಾನುಭೂತಿಯಿಂದ ವರ್ತಿಸಬೇಕು. ಸಕಾರಾತ್ಮಕ ಮನೋಭಾವದೊಂದಿಗೆ ಅವರ ಸಮಸ್ಯೆಗಳಿಗೆ ಕಿವಿಯಾಗಬೇಕು. ಆರ್.ಬಿ.ಐ ಮಾರ್ಗಸೂಚಿ ಪ್ರಕಾರ ಬ್ಯಾಂಕ್ ಯೋಜನೆಗಳ ಬಗ್ಗೆ ಗ್ರಾಹಕರಿಗೆ ಜಾಗೃತಿ ಮೂಡಿಸಬೇಕು ಮತ್ತು ಸೌಲಭ್ಯಗಳ ಕುರಿತು ಮಾರ್ಗದರ್ಶನ ನೀಡಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಹೇಳಿದರು ಅವರು, ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಗ್ರಣೀಯ (ಲೀಡ್) ಬ್ಯಾಂಕ್ ವತಿಯಿಂದ ತ್ರೈಮಾಸಿಕ ಡಿಸ್ಟ್ರಿಕ್ಟ್ ಕನ್ಸಲ್ಟೇಟಿವ್ ಕಮಿಟಿ ಸಭೆ ಹಾಗೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು.ಸಾಲ ಸೌಲಭ್ಯಗಳಿಗಾಗಿ ಅರ್ಜಿ ಸಲ್ಲಿಸಿದವರ ಅರ್ಜಿಗಳನ್ನು…

Read More

ಬೆಳಗಾವಿಯಲ್ಲಿ ನಡೆದ ಅನುಭಾವ ಗೋಷ್ಠಿಯಲ್ಲಿ ಸಾಹಿತಿ ಪ್ರೋ.ಜಯಶ್ರೀ ಅಬ್ಬಿಗೇರಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಬೆಳಗಾವಿ: ‘12ನೇ ಶತಮಾನದ ಶರಣರ ವಚನಗಳು ಸಮಾಜಕ್ಕೆ ನೈತಿಕ ಶಿಕ್ಷಣ ನೀಡುತ್ತವೆ. ಮನದ ಕಲ್ಮಶವನ್ನು ನಿವಾರಿಸಿ ಜ್ಞಾನವನ್ನು ಹರಡುವಲ್ಲಿ ವಚನಗಳ ಕೊಡುಗೆ ಅನನ್ಯವಾಗಿದೆ’ ಎಂದು ಸಾಹಿತ್ಯ ಪ್ರೋ. ಜಯಶ್ರೀ ಅಬ್ಬಿಗೇರಿ ಹೇಳಿದರು.ಇಲ್ಲಿನ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಹಮ್ಮಿಕೊಂಡಿದ್ದ ಅಮಾವಾಸ್ಯೆ ಅನುಭಾವ ಗೋಷ್ಠಿಯಲ್ಲಿ ‘ವಚನಗಳಲ್ಲಿ ವ್ಯಕ್ತಿತ್ವ ವಿಕಸನ ಪರಿಕಲ್ಪನೆ’ ವಿಷಯ ಕುರಿತು ಅವರು ಮಾತನಾಡಿದರು.‘ಶರಣರ ವಚನಗಳಲ್ಲಿ ಜೀವನ ಮೌಲ್ಯ ಅಡಗಿದೆ. ಅತ್ಯಂತ ಸರಳವಾಗಿ ಬದುಕಿನ ಸೂತ್ರಗಳನ್ನು ಸೂತ್ರೀಕರಿಸಿದವರು ಶರಣರು. ಬಸವಣ್ಣನವರ “ಕಳಬೇಡ ಕೊಲಬೇಡ..” ಎಂಬ ವಚನವು ಮಾನವನ ಸುಂದರ ಬದುಕಿಗೆ ಬಹು ದೊಡ್ಡ ವ್ಯಾಖ್ಯಾನವಾಗಿದೆ. ನಮ್ಮ ಅಂತರಂಗ ಶುದ್ಧಿ, ಬಹಿರಂಗ ಶುದ್ಧಿಗೆ ಇನ್ನೇನು ಬೇಕು ಎಂದರು.ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷ ರತ್ನಪ್ರಭಾ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಕಾರಂಜಿ ಮಠದ ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.ಮಹಾದೇವಿ ಪಾಟೀಲ ವಚನ ಪ್ರಾರ್ಥನೆ ಮಾಡಿದರು.…

Read More