Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯ ನೇಮಕಾತಿ ಪರೀಕ್ಷೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯ ನೇಮಕಾತಿ ಪರೀಕ್ಷೆಯು ಡಿಸೆಂಬರ್ ೭ ಹಾಗೂ ೮ ರಂದು ಜರುಗಲಿದ್ದು, ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿರುವ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಟ್ಟುನಿಟ್ಟಿನಿಂದ ಕರ್ತವ್ಯ ನಿರ್ವಹಿಸಿ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.ಮಂಗಳವಾರ ದರಬಾರ ಕಾಲೇಜಿನ ಸಭಾಂಗಣದಲ್ಲಿ ಪಂಚಾಯತಿ ಅಭಿವೃದ್ದಿ ಅಧಿಕಾರಿ ಹುದ್ದೆಯ ನೇಮಕಾತಿ ಪರೀಕ್ಷೆಯ ಕುರಿತಾಗಿ ಪೂರ್ವಭಾವಿ ಸಭೆಯ ಅಧಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಡಿಸೆಂಬರ್ ೭ ರಂದು ೩೮ ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆಗೆ ೧೬,೦೫೯ ಅಭ್ಯರ್ಥಿಗಳು ಹಾಗೂ ಡಿಸೆಂಬರ್ ೮ ರಂದು ೫೭ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಪರಿಕ್ಷೆಯಲ್ಲಿ ೨೧,೨೨೬ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.ಪರೀಕ್ಷೆಯ ಎಲ್ಲ ಕೊಠಡಿಗಳಿಗೆ ಸಿ.ಸಿ ಕ್ಯಾಮರಾಗಳನ್ನು ಅಳವಡಿಸುವುದು, ಪರೀಕ್ಷಾ ದಿನದಂದು ಪ್ರತಿ ಕೊಠಡಿಗಳಲ್ಲಿ ಛಾಯಾಗ್ರಾಹಕರನ್ನು ನೇಮಿಸಬೇಕು, ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಮುಖ್ಯದ್ವಾರದೊಳಗೆ ಬರುವಾಗ ಮೊಬೈಲ್…
ಜಿಲ್ಲಾಧಿಕಾರಿ ಟಿ ಭೂಬಾಲನ್ ಅಭಿನಂದನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದ ಅತ್ಯುತ್ತಮ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕವೆಂದು ವಿಜಯಪುರದ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕವು ಪ್ರಶಸ್ತಿಯನ್ನು ಪಡೆದುಕೊಂಡಿದೆ. ಆರೋಗ್ಯ ಸಚಿವರಾದ ದಿನೇಶ್ ಗುಂಡುರಾವ ಅವರು ಬೆಂಗಳೂರಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲೆಯ ಈ ಕಾರ್ಯಕ್ರಮದ ಅಧಿಕಾರಿಗಳಾದ ಡಾ. ಮಲ್ಲನಗೌಡ ಬಿ ಬಿರಾದಾರ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.ಜಿಲ್ಲೆಯ ಏಡ್ಸ್ ನಿಯಂತ್ರಣ ಘಟಕವು ಹೆಚ್‌ಐವಿ/ಏಡ್ಸ್ ನಿಯಂತ್ರಣದಲ್ಲಿ ಹಾಗೂ ವಿವಿಧ ಸಮುದಾಯಗಳಿಗೆ ನಿರಂತರ ಕಾರ್ಯಕ್ರಮಗಳನ್ನು ಮತ್ತು ಅತಿ ಹೆಚ್ಚು ರಕ್ತದಾನ ಶಿಬಿರ ಸೇರಿದಂತೆ ಇನ್ನೀತರ ಗುರಿಗಳನ್ನು ಸಮರ್ಪಕವಾಗಿ ನಿರ್ವಹಿಸಿರುವುದಕ್ಕೆ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆಯು ರಾಜ್ಯ ಮಟ್ಟದ ಏಡ್ಸ್ ದಿನ ಕಾರ್ಯಕ್ರಮದಲ್ಲಿ ರಾಜ್ಯದ ಅತ್ಯುತ್ತಮ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕವೆಂದು ಪ್ರಶಸ್ತಿ ನೀಡಿದ್ದಾರೆ.ಪ್ರಶಸ್ತಿ ಪಡೆದು ಜಿಲ್ಲೆಗೆ ಕೀರ್ತಿ ತಂದಿರುವುದಕ್ಕೆ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಹಾಗೂ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಚ್‌ಐವಿ ಮುಕ್ತ ಜಿಲ್ಲೆಯನ್ನಾಗಿ ರೂಪಿಸಲು ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಾಗೂ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್ ಹಾಗರಗಿ ಅವರು ಹೇಳಿದರು.ರಾಜ್ಯ ಏಡ್ಸ ಪ್ರಿವೆಷನ್ಸ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿರೋಧಕ ಮತ್ತು ನಿಯಂತ್ರಣ ಘಟಕ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳು, ರೆಡ್ ರಿಬ್ಬನ ಕ್ಲಬ್ ಇವರ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಮಂಗಳವಾರ ನಗರದ ಗಗನ ಮಹಲ ಆವರಣದಲ್ಲಿ ಹಮ್ಮಿಕೊಂಡ ವಿಶ್ವ ಏಡ್ಸ್ ದಿನ-೨೦೨೪ ಕಾರ್ಯಕ್ರಮಕ್ಕೆ ಚಾಲನೆ ಅವರು ಮಾತನಾಡಿದರು.ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ಆಪ್ತ ಸಮಾಲೋಚನೆಯ ಮೂಲಕ ಸೋಂಕಿತರಲ್ಲಿ ಆತ್ಮಸ್ಥೈರ್ಯವನ್ನು ತುಂಬಬೇಕು ಎಂದು ಹೇಳಿದರು.ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾತನಾಡಿ, ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಏಡ್ಸ್ ರೋಗವನ್ನು ತಡೆಗಟ್ಟುವಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಏಡ್ಸ್ ನಿಯಂತ್ರಣಕ್ಕೆ…
ಆಲಮೇಲ ತಾಲ್ಲೂಕು ೨ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲ್ಲೂಕಿನ ಕಡಣಿ ಗ್ರಾಮದ ಲೇಖಕ, ಕವಿ, ಪ್ರವಚನಕಾರ, ಸಂಘಟಕ, ಸಾಂಸ್ಕೃತಿಕ, ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಚನ್ನವೀರಶಾಸ್ತ್ರೀ ಹಿರೇಮಠ ಅವರು ಆಲಮೇಲ ತಾಲ್ಲೂಕು ೨ನೆಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಕಾವ್ಯ, ಅಧ್ಯಾತ್ಮಿಕ ಗೀತೆ, ನಾಟಕ, ಸಂಪಾದನೆ, ಲೇಖನಗಳ ಸಂಕಲನ ಸೇರಿದಂತೆ ಹತ್ತಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ, ಕಲಾವಿಕಾಸ ಪರಿಷತ್ತಿನ ಅಧ್ಯಕ್ಷರಾಗಿ , ಶಾಸ್ತ್ರೀಯ ಸಂಗೀತದ ಶಿಕ್ಷಕರಾಗಿಯೂ ತರಬೇತಿಯನ್ನು ಕೊಡುತ್ತಾ ಬಂದಿದ್ದಾರೆ, ಸಂಗೀತ ಶಿಕ್ಷಕರ ನೇಮಕಾತಿಗಾಗಿ ನಾಡಿನಾದ್ಯಂತ ಹೋರಾಟಮಾಡಿ ಯಶಸ್ವಿಯಾಗಿದ್ದಾರೆ,ಚನ್ನವೀರಶಾಸ್ತ್ರೀ ಹಿರೇಮಠ ಅವರು ಮೂಲತಃ ಕಡಣಿ ಗ್ರಾಮದವರು ಈಗ ಗದುಗಿನಲ್ಲಿ ವಾಸವಾಗಿದ್ದು, ಸಂಘಟನೆ. ಸಾಹಿತ್ಯ, ಸಂಸ್ಕೃತಿಯ ರಾಯಭಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಹಲವು ಸಮ್ಮೇಳನಗಳಲ್ಲಿ ಭಾಗವಹಿಸಿ ಕವಿತಾ ವಾಚನ ಮಾಡಿದ್ದಾರೆ. ರಾಜ್ಯಮಟ್ಟದ ಸಂಘಸಂಸ್ಥೆಗಳನ್ನು ಸ್ಥಾಪಿಸಿ ನಾಡಿನ ತುಂಬ ಕಡಣಿ ಹೆಸರನ್ನು ತಮ್ಮ ಹೆಸರಿನೊಂದಿಗೆ ಪಸರಿಸಿದ್ದಾರೆ. ಪ್ರಕಾಶನ ಸಂಸ್ಥೆಯೊಂದನ್ನು ಕಟ್ಟಿ ಇಪ್ಪತ್ತಕ್ಕೂ ಹೆಚ್ಚು ಮೌಲಿಕ ಕೃತಿಗಳನ್ನು ಪ್ರಕಟಿಸಿದ ಚನ್ನವೀರಶಾಸ್ತ್ರೀ ಸಾಹಿತ್ಯ ಕೃಷಿಯಲ್ಲೂ ಉತ್ತಮ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕಳುವಿನಿಂದ ಅಕ್ರಮವಾಗಿ ಮರಳು ತುಂಬಿಕೊಂಡು ಹೊರಟಿದ್ದ ಟಿಪ್ಪರನವರ ಮೇಲೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಾಗಲಕೋಟೆ ಜಿಲ್ಲೆಯ ಕೊಣ್ಣೂರು ಗ್ರಾಮದ ಪರಶುರಾಮ ಗಂಗೂರ ಮತ್ತು ಇಳಕಲ್ಲನ ಪ್ರದೀಪಕುಮಾರ ಹಿರೇಮಠ ಇವರು ಪ್ರಕರಣದ ಆರೋಪಿ ಸ್ಥಾನದಲ್ಲಿದ್ದಾರೆ.ಈ ಇಬ್ಬರೂ ಅಶೋಕ ಲೆಲ್ಯಾಂಡ್ ಕಂಪನಿಯ ಟಿಪ್ಪರ ನಂಬರ: ಕೆ.ಎ:೩೭ ಬಿ:೦೯೩೪ ನೇದ್ದರಲ್ಲಿ ಯಾವುದೇ ರಾಯಲ್ಟಿ ಇಲ್ಲದೇ ಕಳುವಿನಿಂದ ಅಕ್ರಮವಾಗಿ ಮರಳು ತುಂಬಿಕೊಂಡು ಮಾರಾಟ ಮಾಡುವ ಉದ್ದೇಶದಿಂದ ತೆಗೆದುಕೊಂಡು ಹೊರಟಾಗ ಸಿಕ್ಕಿದ್ದು ಇಲ್ಲಿನ ಪಿಎಸ್‌ಐ ಸಂಜಯ ತಿಪರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಅಪ್ರಾಪ್ತೆ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ನಡೆದಿದೆ.ಅದೇ ಪಟ್ಟಣದ ಭಾಗ್ಯಾ ಹಳ್ಳಿ ಮೃತ ದುರ್ದೈವಿ. ಸ್ನೆಹಿತೆಯ ಅಣ್ಣನ ಜೊತೆ ಸಲುಗೆಯಿಂದ ಮಾತನಾಡಿದ್ದನ್ನು ತಪ್ಪಾಗಿ ಭಾವಿಸಿದ ಆತ ಮೈ ಕೈ ಮುಟ್ಟಿ ಮಾತನಾಡುವದು, ಲೈಂಗಿಕ ಕಿರುಕುಳ ನೀಡುವದಕ್ಕೆ ಬೇಸತ್ತು ತಮ್ಮ ಮನೆಯ ಮೇಲ್ಛಾವಣಿಯ ಜೋಕಾಲಿ ಕಟ್ಟುವ ಕಬ್ಬಿಣದ ಕೊಂಡಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮೃತಳ ತಾಯಿ ಲಕ್ಷಿö್ಮÃಬಾಯಿ ನೀಡಿದ ದೂರಿನ ಆಧಾರದ ಮೇಲೆ ಸಂಗಮೇಶ ಜುಂಜುವಾರ, ಚಿದಾನಂದ ಕಟ್ಟಿಮನಿ, ಮೌನೇಶ ಮಾದರ, ರಾಘವೇಂದ್ರ ಮಸಿಬಿನಾಳ, ಸಂಗಮೇಶ ಮಾದರ ಮತ್ತು ಗದ್ದೆಪ್ಪ ಸಿದ್ದಾಪೂರ(ಅಪ್ರಾಪ್ತ) ಇವರ ಮೇಲೆ ಪ್ರಕರಣ ದಾಖಲಾಗಿದೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಮಾಜದಲ್ಲಿನ ಪ್ರತಿಯೊಬ್ಬ ವ್ಯಕ್ತಿಯೂ ಮಠ, ಮಂದಿರಗಳಲ್ಲಿ ಜರುಗುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಮಾನಸಿಕ ನೆಮ್ಮದಿ ಕಂಡುಕೊಳ್ಳಬೇಕು ಎಂದು ಉದ್ದಿಮೇದಾರ ವೆಂಕಟೇಶ ಗುತ್ತೇದಾರ ಹೇಳಿದರು.ತಾಲೂಕಿನ ಯಂಕಂಚಿ ಗ್ರಾಮದ ಕುಂಟೋಜಿ ಹಿರೇಮಠದಲ್ಲಿ ಲಿಂ.ರುದ್ರಮುನಿ ಶಿವಾಚಾರ್ಯರ ೪೭ನೇ ಪುಣ್ಯಾರಾಧನೆ ನಿಮಿತ್ತ ಹಮ್ಮಿಕೊಂಡ ಉಜ್ಜಯಿನಿ ಶ್ರೀಮದ್ ಸಿದ್ದಲಿಂಗ ಜಗದ್ಗುರುಗಳ ಪುರಾಣ ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೃಷಿ ಪ್ರಧಾನ ಸಮಾಜದಲ್ಲಿ ಸಂಪ್ರದಾಯ, ಧರ್ಮಾಚರಣೆ, ಧಾರ್ಮಿಕ ಸಂಸ್ಕಾರ, ಸಂಸ್ಕೃತಿ, ಆಚಾರ-ವಿಚಾರ ನೈತಿಕ ಮೌಲ್ಯಗಳನ್ನು ಮನವರಿಕೆ ಮಾಡುವುದು ಅತ್ಯವಶ್ಯಕವಾಗಿದೆ ಎಂದರು.ಈ ವೇಳೆ ಮಳ್ಳಿ ಶ್ರೀಮಠದ ರುದ್ರಮುನಿ ಶಿವಾಚಾರ್ಯರು, ಚಿಕ್ಕರೂಗಿಯ ಈರಣ್ಣ ಶಾಸ್ತಿçಗಳು, ಶಂಕರಗೌಡ ಬಿರಾದಾರ, ಮಹೇಶ ಹಿರೇಮಠ, ಸಿದ್ದು ಬೇನಾಳ, ರಾಮನಗೌಡ ದೋರನಳ್ಳಿ ಸೇರಿದಂತೆ ಯಂಕಂಚಿ, ಚಟ್ಟರಕಿ, ಮಂಗಳೂರ, ಕುಂಟೋಜಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು, ಶ್ರೀಮಠದ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
೨೦೦೦ಕಿ.ಮೀ. ೫೫ ದಿನಗಳ ಪಯಣ | ಸತತ ೩೫ ವರ್ಷಗಳಿಂದ ವ್ರತಧಾರಣೆ | ೨೫ವರ್ಷದಿಂದ ಪಾದಯಾತ್ರೆ ಉದಯರಶ್ಮಿ ದಿನಪತ್ರಿಕೆ ವರದಿ: ರಶ್ಮಿ .ಎಂ. ನೂಲಾನವರಸಿಂದಗಿ: ನಿರಂತರವಾಗಿ ೨೫ ವರ್ಷಗಳಿಂದ ಸುಮಾರು ೨೦೦೦ಕಿ.ಮೀ ೫೫ದಿನಗಳವರೆಗೆ ಪಾದಯಾತ್ರೆಯ ಮೂಲಕ ಶಬರಿಮಲೆಯ ಅಯ್ಯಪ್ಪ ಸ್ವಾಮಿಯ ದರುಶನ ಪಡೆಯುವ ಭಕ್ತರೊಬ್ಬರು ಸಿಂದಗಿ ನಗರಕ್ಕೆ ಮಂಗಳವಾರ ಆಗಮಿಸಿದ್ದರು. ಅವರನ್ನು ಪಟ್ಟಣದ ಎಪಿಎಂಸಿ ಯಾರ್ಡಿನ್ ಶ್ರೀಧರ್ಮಶಾಸ್ತಾ ಸನ್ನಿಧಾನಂನ್ ಅಯ್ಯಪ್ಪಸ್ವಾಮಿ ಮಾಲಾಧಾರಿ ಕಿರಣ ಶಿವಸಿಂಪಿ ಗುರುಸ್ವಾಮಿ ಹಾಗೂ ವ್ರತಧಾರಿಗಳು ಅವರನ್ನು ಸ್ವಾಗತಿಸಿ, ಭಕ್ತಿಪೂರ್ವಕವಾಗಿ ಬೀಳ್ಕೊಟ್ಟರು.ಉಪೇಂದ್ರಸ್ವಾಮಿ ಪೂಜಾರಿ ಎಂಬುವವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ನಿವಾಸಿ. ಇವರೇ ಈ ಯಾತ್ರೆಯ ಭಕ್ತರು. ಹಲವು ವರ್ಷಗಳ ಹಿಂದಯೇ ಜೀವನೋಪಾಯಕ್ಕಾಗಿ ಉದ್ಯೋಗವನ್ನು ಆವರಿಸಿಕೊಂಡು ದೂರದ ಮುಂಬೈ ಪಟ್ಟಣಕ್ಕೆ ತೆರಳಿದ್ದರು. ೧೯೮೯ರಲ್ಲಿ ಮುಂಬೈನಲ್ಲಿ ಯಾರೋಬ್ಬರು ಶಬರಿಮಲೆ ಸ್ವಾಮಿ ಅಯ್ಯಪ್ಪನ ವ್ರತ ಆಚರಣೆ ಮಾಡು ಮಾಲೆ ಧರಿಸು ಎಂದು ಹೇಳಿದ್ದಕ್ಕಾಗಿ ಭಕ್ತಿಯಿಂದ ಮಾಲೆ ಧರಿಸಿ ಸು.೩-೪ ವರ್ಷಗಳವರೆಗೆ ಶಬರಿಗೆ ಹೋಗಿ ಬಂದಿದ್ದರು. ೩೫ವರ್ಷಗಳಿಂದ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಸರಕಾರಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ಯ ಜರುಗಿದ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಪೂಜಾ ಸಾರಂಗಮಠ ಹಾಗೂ ಈರಮ್ಮ ಅಗಸರ ಪ್ರಥಮ ಸ್ಥಾನ ಮತ್ತು ರೀಲ್ಸ್ ಸ್ಪರ್ಧೆಯಲ್ಲಿ ಪೂಜಾ ಸಾರಂಗಮಠ ಪ್ರಥಮ ಸ್ಥಾನ ಪಡೆದು ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಕಾಲೇಜಿನ ಪ್ರಾಚಾರ್ಯ ಎಸ್.ಎಮ್.ಪೂಜಾರಿ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿಯೊಬ್ಬರು ಸಹಕಾರ ನೀಡುವ ಮೂಲಕ ಯಶಸ್ವಿಗೆ ಶ್ರಮಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಸಾರಂಗಮಠದ ಆವರಣದಲ್ಲಿ ಆಲಮೇಲ ತಾಲೂಕಾ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದರ ಅವರು, ಅಕ್ಷರ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಆಗಮಿಸಬೇಕು. ಕನ್ನಡ ಸಾಹಿತ್ಯ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ಜರುಗಲು ಎಲ್ಲ ಸೌಲಭ್ಯಗಳನ್ನು ಒದಗುಸಲು ನಾನು ಸಿದ್ದನಿದ್ದೇನೆ. ಸಂಘಟಕರು ಎಲ್ಲರನ್ನು ತೊಡಗಿಸಿಕೊಂಡು ಕಾರ್ಯಚಟುವಟಿಕೆಗಳನ್ನು ಮಾಡಬೇಕು ಎಂದು ಸಲಹೆ ನೀಡಿದರು.ಈ ವೇಳೆ ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು, ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ, ಆಲಮೇಲ ತಾಲೂಕಾಧ್ಯಕ್ಷ ಶಿವಶರಣ ಗುಂದಗಿ, ಸಿಂದಗಿ ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ, ಗಿರೀಶ ಗತಾಟೆ, ರಮೇಶ ಭಂಟನೂರ, ಡಾ.ರವಿ ಗೋಲಾ, ಅಪ್ಪುಗೌಡ ಪಾಟೀಲ, ರವಿರಾಜ ದೇವರಮನಿ, ಸಿದ್ದಲಿಂಗ ಕಿಣಗಿ ಸೇರಿದಂತೆ ಅನೇಕರಿದ್ದರು
