Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದಲ್ಲಿ ಮಂಗಳವಾರ ಶ್ರೀ ವೀರಭದ್ರದೇವರು ಹಾಗೂ ಭದ್ರಕಾಳಿ ಅಮ್ಮನವರ ಬೆಳ್ಳಿ ರಥವನ್ನು ನೂರಾರು ಮಹಿಳೆಯರು ಎಳೆಯುವುದರ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. ಉತ್ತರ ಕರ್ನಾಟಕದಲ್ಲಿಯೇ ಅತ್ಯಂತ ವಿಶೇಷವಾಗಿ ಮಹಿಳೆಯರೆ ರಥವನ್ನು ಎಳೆಯುವುದು ಸಿಂದಗಿ ಪಟ್ಟಣದಲ್ಲಿ ಇರುವುದು ಈ ಭಾಗದ ಪುಣ್ಯವೇ ಸರಿ.ಸಾರಂಗಮಠದ ಪೂಜ್ಯ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಇಲ್ಲಿನ ವೀರಭದ್ರೇಶ್ವರ ಹಾಗೂ ಭದ್ರಕಾಳಿ ಅಮ್ಮನವರ ಭಕ್ತರ ಇಚ್ಚೇಷ್ಟೇಗಳ ಈಡೇರಿಕೆಗಾಗಿ ಕಳೆದ ಏಳು ವರ್ಷಗಳಿಂದ ಮಹಿಳೆಯರೇ ಈ ರಥವನ್ನು ಎಳೆಯುವ ಸಂಪ್ರದಾಯಕ್ಕೆ ವಿಶೇಷ ಮನ್ನಣೆ ಕೊಟ್ಟಿರುವುದು ಇತಿಹಾಸ. ರಥದ ಬೆಳ್ಳಿ ಪೀಠದಲ್ಲಿ ರಾರಾಜಿಸುತ್ತಿದ್ದ ವೀರಭದ್ರದೇವರು ಮತ್ತು ಭದ್ರಕಾಳಿ ಅಮ್ಮನವರ ಉತ್ಸವ ಮೂರ್ತಿಗಳೊಂದಿಗೆ ಸಾಗಿದ ರಥ ಮತ್ತು ಬೆಳ್ಳಿ ಪಲ್ಲಕ್ಕಿ, ನಗರದ ಸಾರಂಗಮಠದಿಂದ ಪ್ರಾರಂಭಗೊಂಡು ಸ್ವಾಮಿ ವಿವೇಕಾನಂದ ವೃತ್ತ, ತೋಂಟದ ಡಾ.ಸಿದ್ಧಲಿಂಗ ಮಹಾಸ್ವಾಮಿಗಳ ರಸ್ತೆಯ ಮಾರ್ಗವಾಗಿ, ಕಾಯಿಪಲ್ಲೆ ಮಾರ್ಕೆಟ್ ಬಳಿ ಇರುವ ಗಚ್ಚಿನಮಠದ ಚೆನ್ನವೀರ ಸ್ವಾಮೀಜಿ ಪ್ರೌಢಶಾಲೆಯ ಅವರಣದಲ್ಲಿರುವ ವೀರಭದ್ರೇಶ್ವರ ಹಾಗೂ ಭದ್ರಕಾಳಿ ಅಮ್ಮನವರ ದೇವಸ್ಥಾನಕ್ಕೆ ತೆರಳಿತು.ನಗರದುದ್ದಕ್ಕೂ ಉಡಪಿಯ ಸ್ಕಂದ ಚೆಂಡೆ…

Read More

’ಜಯ್ ನುಡಿ’ (ವ್ಯಕ್ತಿತ್ವ ವಿಕಸನ ಲೇಖನ ಮಾಲಿಕೆ) ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿ, ಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಜೀವನವೆಂಬುದು ಬಗೆಹರಿಸುವ ಸಮಸ್ಯೆಯಲ್ಲ. ಅದು ವಾಸ್ತವದ ಅನುಭವ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ವಾಸ್ತವವನ್ನು ನಿರ್ಲಕ್ಷಿಸಲು ಪ್ರಯತ್ನಿಸುತ್ತಾರೆ. ಕೆಲವೊಮ್ಮೆ ಅಸಮಾಧಾನ ಅಥವಾ ಅಹಿತಕರವಾದ ಸಂಗತಿಯನ್ನು ಒಪ್ಪಿಕೊಳ್ಳದಿರುವುದು ಸುಲಭ. ವಾಸ್ತವನ್ನು ಎದುರಿಸುವುದು ಕಷ್ಟ. ನಾವು ಎದುರಿಸಲು ಸಿದ್ಧರಿರದಿದ್ದರೂ ಅದನ್ನು ಎದುರಿಸುವುದು ನಮ್ಮ ಪ್ರಸ್ತುತ ಸಂದರ್ಭದಲ್ಲಿ ಅಗತ್ಯವಿದೆ. ಏಕೆಂದರೆ ನೆಮ್ಮದಿಯನ್ನು ಪಡೆಯಲು ಅದುವೇ ಅತ್ಯುತ್ತಮ ಮಾರ್ಗ. ಉಜ್ವಲ ಭವಿಷ್ಯವನ್ನು ಹೊಂದಲು ಕೆಲಸ ಮಾಡುವುದು ಕಷ್ಟವಲ್ಲ ಎನಿಸಬಹುದು. ಆದರೆ ಬದುಕಿನಲ್ಲಿ ಅತಿ ದೊಡ್ಡ ಸಾಲೆಂದರೆ ವಾಸ್ತವವನ್ನು ಅರಿಯುವುದು. ಪ್ರಸ್ತುತ ಪರಿಸ್ಥಿತಿಯನ್ನು ಹೇಗೆ ಸ್ವೀಕರಿಸುವುದು? ನಿಮ್ಮ ಭಾವನೆಗಳನ್ನು ಆರೋಗ್ಯಕರ ಮತ್ತು ಸಹಾನುಭೂತಿಯ ರೀತಿಯಲ್ಲಿ ನಿಭಾಯಿಸುವುದು ನಿಜಕ್ಕೂ ತುಸು ಕಠಿಣವೆನಿಸುತ್ತದೆ. ಸಂತೋಷಕರ ಜೀವನ ನಿರ್ಮಿಸಲು ವಾಸ್ತವತೆಯಲ್ಲಿ ಬದುಕುವುದು ಮುಖ್ಯವಾಗಿದೆ. ಐರಿಸ್ ಮುರ್ಡೊಕ್ ಹೇಳಿದಂತೆ ‘ನಾವು ಕಾಲ್ಪನಿಕ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ. ಭ್ರಮೆಯ ಜಗತ್ತಿನಲ್ಲಿ ಜೀವನದ ಸತ್ಯವನ್ನು ಕಂಡುಕೊಳ್ಳುವುದೇ ದೊಡ್ಡ ಕೆಲಸ..’…

Read More

ಉದಯರಶ್ಮಿ ದಿನಪತ್ರಿಕೆ ಗದಗ: ಕರ್ನಾಟಕ ಎಂದು ಹೆಸರಾಗಿ 50 ವರ್ಷ ಪೂರೈಸಿದ ಸವಿ ನೆನಪಿಗಾಗಿ ಹೆಸರಾಯಿತು ಕರ್ನಾಟಕ ಕನ್ನಡದ ಏಕೀಕರಣದ ಇತಿಹಾಸ ಪರಿಚಸುವ ಪುಸ್ತಕ ಹೊರತರುತಿದ್ದೇವೆ. ಈ ಪುಸ್ತಕಕ್ಕೆ ಈ ಕೆಳಗಿನ ವಿಷಯ ಆಯ್ಕೆ ಮಾಡಿಕೊಂಡು ಲೇಖನಗಳನ್ನು ಬರೆದು ಕಳಿಸಬಹುದುವಿಷಯ:

Read More

ವಚನ ಅಧ್ಯಯನ ವೇದಿಕೆ ಬಸವಾದಿ ಶರಣರ ಚಿಂತನ ಕೂಟ ಹಾಗೂ ಅಕ್ಕನ ಅರಿವು ಸಂಘಟನೆಗಳಿಂದ ವಿಶೇಷ ಉಪನ್ಯಾಸ – 271 ಉದಯರಶ್ಮಿ ದಿನಪತ್ರಿಕೆ ವರದಿ: ಸುಧಾ ಪಾಟೀಲಬೆಳಗಾವಿ: ಬೆಂಗಳೂರಿನ ನಿರ್ಮಾಣದಲ್ಲಿ ಎಲೆ ಮಲ್ಲಪ್ಪ ಶೆಟ್ಟರು, ಗುಬ್ಬಿ ತೋಟದಪ್ಪನವರ ಜೊತೆಗೆ ಕೆ. ಪಿ. ಪುಟ್ಟಣ್ಣ ಶೆಟ್ಟರದು ಸಹಿತ ಸಾಹಿತ್ತಿಕ, ಸಾಂಸ್ಕೃತಿಕ, ಸಾಮಾಜಿಕ ಹಿನ್ನೆಲೆಯಲ್ಲಿ ಮಹತ್ತರವಾದ ಯೋಗದಾನವಿದೆ ಎಂದು ಹೇಳುತ್ತಾ ಡಾ. ಶಶಿಕಾಂತ ಪಟ್ಟಣ ಸರ್ ಅವರು ತಮ್ಮ ಉಪನ್ಯಾಸವನ್ನು ಪ್ರಾರಂಭ ಮಾಡಿದರು.1856ರ ಏಪ್ರಿಲ್ 29ರಂದು ಬೆಂಗಳೂರು ಬಳಿಯ ಕೃಷ್ಣರಾಜಪುರದಲ್ಲಿ ಎಲ್ಲಪ್ಪಶೆಟ್ಟಿ ಮತ್ತು ಎಲ್ಲಮ್ಮ ದಂಪತಿಗಳ ಸುಪುತ್ರರಾಗಿ ಲಿಂಗಾಯತ ಕುಟುಂಬದಲ್ಲಿ ಜನಿಸಿದರು. ಇವರ ಪ್ರೌಢಶಾಲೆಯ ವಿದ್ಯಾಭ್ಯಾಸ ಬೆಂಗಳೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿಯೂ ಕಾಲೇಜಿನ ವಿದ್ಯಾಭ್ಯಾಸ ಸೆಂಟ್ರಲ್ ಕಾಲೇಜಿನಲ್ಲಿಯೂ ನಡೆಯಿತು.ಕೆ ಪಿ ಪುಟ್ಟಣ್ಣ ಶೆಟ್ಟಿಯವರು 1875ರಲ್ಲಿ ಮೈಸೂರು ಸರ್ಕಾರದಲ್ಲಿ ಕರಣಿಕರಾಗಿ, 1884ರಲ್ಲಿ ಮೈಸೂರು ರಾಜ್ಯ ರೈಲ್ವೆ ಇಲಾಖೆಯಲ್ಲಿ ಟ್ರಾಫಿಕ್ ಮ್ಯಾನೇಜರ್ ಆಗಿ, ನಂತರ 1886 ರಲ್ಲಿ ಸಹಾಯಕ ಕಮಿಷನರ್ ಆಗಿ . ಇದರ ಜೊತೆಗೆ ಜಿಲ್ಲಾಧಿಕಾರಿಗಳಾಗಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತಿಯ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದಿಂದ ಪ್ರಸಕ್ತ 2024-25ನೇ ಸಾಲಿಗೆ ಜಿಲ್ಲಾ ವಲಯ ಯೋಜನೆಯಡಿ ಅರ್ಹ ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳಿಗೆ ಉಚಿತವಾಗಿ ಉಪಕರಣಗಳನ್ನು ಒದಗಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹರು ನಿಗದಿತ ಅರ್ಜಿ ನಮೂನೆಯನ್ನುvijayapura.nic.in ವೆಬ್‍ಸೈಟ್ ಮೂಲಕ ಡೌನ್‍ಲೋಡ್ ಮಾಡಿಕೊಂಡು ಅಥವಾ ಕಚೇರಿಗೆ ಭೇಟಿ ನೀಡಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅವಶ್ಯಕ ದಾಖಲೆಗಳೊಂದಿಗೆ ದಿನಾಂಕ : 06-01-2025ರೊಳಗೆ ಉಪನಿರ್ದೇಶಕರ ಕಚೇರಿ, ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಸ್ಟೇಶನ್ ಬ್ಯಾಕ್ ರೋಡ, ಶಿಕಾರಖಾನೆ, ವಿಜಯಪುರ ಕಚೇರಿಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್: 9972162222 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತಿಯ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದಿಂದ ಪ್ರಸಕ್ತ 2024-25ನೇ ಸಾಲಿಗೆ ಆಧುನೀಕರಣ ತಾಂತ್ರಿಕ ತರಬೇತಿ ಕಾರ್ಯಕ್ರಮದಡಿ ಗ್ರಾಮೀಣ ಪ್ರದೇಶದವರಿಗೆ ಮೋಟರ್ ರಿವೈಂಡಿಂಗ್, ಪ್ಲಂಬಿಂಗ್ ಆಂಡ್ ಸ್ಯಾನಿಟರಿ ಮತ್ತು ರಿಪೇರಿಂಗ್ ಆಂಡ್ ಸರ್ವಿಸಿಂಗ್ ಆಫ್ ಹೋಮ್ ಅಪ್ಲೈನ್ಸಿಸ್ ವೃತ್ತಿಗಳಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಒದಗಿಸಲಾಗುತ್ತಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹರು ನಿಗದಿತ ಅರ್ಜಿ ನಮೂನೆಯನ್ನು vijayapura.nic.in ವೆಬ್‍ಸೈಟ್ ಮೂಲಕ ಡೌನ್‍ಲೋಡ್ ಮಾಡಿಕೊಂಡು ಅಥವಾ ಕಚೇರಿಗೆ ಭೇಟಿ ನೀಡಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅವಶ್ಯಕ ದಾಖಲೆಗಳೊಂದಿಗೆ ದಿನಾಂಕ : 15-12-2024ರೊಳಗೆ ಉಪನಿರ್ದೇಶಕರ ಕಚೇರಿ, ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಸ್ಟೇಶನ್ ಬ್ಯಾಕ್ ರೋಡ, ಶಿಕಾರಖಾನೆ, ವಿಜಯಪುರ ಕಚೇರಿಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್: 9972162222 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕ್ರೀಡಾಪಟುಗಳು ವಿಶಾಖ ಪಟ್ಟಣದಲ್ಲಿ ನಡೆಯಲಿರುವ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ತಂಡದ ಕ್ರೀಡಾಪಟುಗಳ ಜತೆಗೆ ತಂಡದ ವ್ಯವಸ್ಥಾಪಕರಾಗಿ ಬಳ್ಳಾರಿಯ ಅಲ್ಲಂ ಸುಮಂಗಲಮ್ಮ ಮಹಿಳಾ ಮಹಾವಿದ್ಯಾಲಯದ ಅಶೋಕ್ ಭಾಗವಹಿಸಲಿದ್ದಾರೆ. ಆಯ್ಕೆಯಾಗಿರುವ ಕ್ರೀಡಾಪಟುಗಳ ತಂಡಕ್ಕೆ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ, ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಡಾ.ಹನುಮಂತಯ್ಯ ಪೂಜಾರ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಥ ಪ್ರೊ.ಸಕ್ಪಾಲ್ ಹೂವಣ್ಣ ಶುಭ ಹಾರೈಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವರದಾನಿ ಲಕ್ಕಮ್ಮದೇವಿ ಪ್ರಧಾನ ವೇದಿಕೆ.ಇವಣಗಿ(ಬಸವನಬಾಗೇವಾಡಿ): ನಾಡಿನಲ್ಲಿ ಆಯೋಜಿಸುವ ಕನ್ನಡ ಸಾಹಿತ್ಯ ಸಮ್ಮೇಳನಗಳು ಭಾಷಾಭಿಮಾನ ಹೆಚ್ಚಲು ಪೂರಕವಾಗುತ್ತದೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.ಸುಕ್ಷೇತ್ರ ಇವಣಗಿ ಗ್ರಾಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸೋಮವಾರ ಹಮ್ಮಿಕೊಂಡಿದ್ದ ತಾಲೂಕು ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ಭಾಷೆ ಅನ್ನದ ಹಾಗೂ ಆಡಳಿತ ಭಾಷೆಯಾಗಿರುವದರಿಂದ ನಾವೆಲ್ಲರೂ ಕನ್ನಡ ಕಟ್ಟಾಳುಗಳಾಗಬೇಕು. ೨೦೧೨ ರಲ್ಲಿ ವಿಜಯಪುರದಲ್ಲಿ ಜರುಗಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಾನು ಅಭಿಮಾನದಿಂದ ಭಾಗವಹಿಸುವ ಮೂಲಕ ಕನ್ನಡಮ್ಮನ ಸೇವೆ ಮಾಡಿದ್ದನ್ನು ಸ್ಮರಿಸಿಕೊಂಡರು. ಇವಣಗಿ ಗ್ರಾಮದಲ್ಲಿ ಜರುಗಿದ ತಾಲೂಕು ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಗ್ರಾಮಸ್ಥರು ಸೇರಿದಂತೆ ಕಸಾಪ ಪದಾಧಿಕಾರಿಗಳು, ಎಲ್ಲ ಇಲಾಖೆಯ ನೌಕರ ಬಾಂಧವರು,ಶಿಕ್ಷಕರು ಹಗಲಿರುಳು ಶ್ರಮಿಸಿದ್ದು ಶ್ಲಾಘನೀಯ ಎಂದರು.ತಾಲೂಕು ಕಸಾಪ ಮಾಜಿ ಅಧ್ಯಕ್ಷ ನಿಂಗಪ್ಪ ಬೊಮ್ಮನಹಳ್ಳಿ ಮಾತನಾಡಿದರು. ವೇದಿಕೆಯಲ್ಲಿ ರಾಜೇಸಾಬ ಶಿವನಗುತ್ತಿ, ನಿಂಗಪ್ಪ ಬಾಗೇವಾಡಿ, ಯಲ್ಲಪ್ಪ ಇಟಗಿ, ಯಲಗೂರದಪ್ಪ ಸುಭಾನಪ್ಪರ,ದ್ಯಾವಪ್ಪ ರೂಡಗಿ ಇತರರು…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ತಾಲೂಕಾಡಳಿತ, ತಾಲೂಕು ಪಂಚಾಯತ್ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯಂಗವಾಗಿ ಸೋಮವಾರ ವಿಕಲಚೇತನ ಸಪ್ತಾಹದ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜರುಗಿತು.ಜಾಥಾ ಉದ್ದೇಶಿಸಿ ವಿಕಲಚೇತನರ ನೋಡಲ್ ಅಧಿಕಾರಿ ರವೀಂದ್ರ ಗುದಗೆನ್ನವರ ಮಾತನಾಡಿ,ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕುರಿತು ಜಾಗೃತಿ, ಸಮಾನ ಅವಕಾಶ ಹಾಗೂ ಸೌಲಭ್ಯ ಕಲ್ಪಿಸುವುದು ಈ ದಿನದ ಉದ್ದೇಶವಾಗಿದೆ. ಇಂದು ವಿಕಲಚೇತನರು ಎಲ್ಲ ರಂಗಗಳಲ್ಲಿ ಸಾಧನೆ ಮಾಡಿದ್ದಾರೆ. ವಿಕಲಚೇತನರ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇದರ ಸದುಪಯೋಗವನ್ನು ವಿಕಲಚೇತನರು ಪಡೆದುಕೊಳ್ಳಬೇಕೆಂದರು.ವಿಕಲಚೇತನ ರಾಜ್ಯ ಪ್ರಶಸ್ತಿ ಪುರಸ್ಕ್ರತರಾದ ಬಂದೇನವಾಜ ವಾಲೀಕಾರ ಮಾತನಾಡಿ, ವಿಕಲಚೇತನರ ಬಗ್ಗೆ ಸಮಾಜ ಗೌರವದಿಂದ ಕಾಣುವ ಮೂಲಕ ಅವರಿಗೂ ಎಲ್ಲರಂತೆ ಬದುಕಲು ಅವಕಾಶಕೊಡಬೇಕು. ವಿಕಲಚೇತನರಲ್ಲಿ ಅನೇಕ ಪ್ರತಿಭಾವಂತರಿದ್ದಾರೆ. ಅವರನ್ನು ಗುರುತಿಸುವ ಮೂಲಕ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಡಾ.ರಾಜೇಂದ್ರ ಪ್ರಸಾದ ಅವರ ಜನ್ಮದಿನದ ಸವಿ ನೆನಪಿಗಾಗಿ ವಕೀಲರ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಕೋಟೆಪ್ಪ ಕಾಂಬಳೆ ಹೇಳಿದರು.ಅವರು ಪಟ್ಟಣದ ನ್ಯಾಯಾಲದ ವಕೀಲರ ಭವನದಲ್ಲಿ ನಡೆದ ವಕೀಲರ ದಿನಾಚರಣೆ ಮತ್ತು ಹೊಸ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.ಅನ್ಯಾಯಕ್ಕೆ ಒಳಗಾದ ಕಕ್ಷೀದಾರರ ಪರವಾಗಿ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿ ತಮ್ಮ ಕಕ್ಷಿದಾರರಿಗೆ ನ್ಯಾಯ ದೊರಕಿಸಿಕೊಟ್ಟಾಗ ಕಕ್ಷಿದಾರರಿಗೆ ಆಗುವ ಸಂತೋಷ ಸಾರ್ಥಕ ಭಾವಕ್ಕೆ ಬೆಲೆ ಕಟ್ಟಲಾಗದು ಎಂದು ತಿಳಿಸಿದರು.ವಕೀಲರ ವೃತ್ತಿಯ ಘನತೆ ಗೌರವ ಕಾಪಾಡಿಕೊಂಡು ಹೋಗುವದು ವಕೀಲರ ಜವಾಬ್ದಾರಿಯಾಗಿದೆ ಎಂದರು.ವಕೀಲರ ಸಂಘದ ನೂತನ ಅಧ್ಯಕ್ಷ ಎಸ್.ಬಿ.ಬೂದಿಹಾಳ ಮಾತನಾಡಿ ಇಂಡಿಗೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತರುವ ಪ್ರಾಮಾಣಿಕ ಪ್ರಯತ್ನ ಮಾಡುವದಾಗಿ ತಿಳಿಸಿದ ಅವರು ರೈಲು ನಿಲ್ದಾಣ ರಸ್ತೆಯಲ್ಲಿ ಸ್ಥಳ ಗುರುತಿಸಲಾಗಿದೆ ಎಂದು ತಿಳಿಸಿದರು.ಹಿರಿಯ ನ್ಯಾಯವಾದಿ ಎ.ಎಂ.ಬಿರಾದಾರ ಮಾತನಾಡಿ ನ್ಯಾಯಾಲಯ ಕಲಾಪ ಸೂಸುತ್ರವಾಗಿ ನಡೆಯಬೇಕಿದ್ದರೆ ಇಡೀ ನ್ಯಾಯಾಲಯ ಒಂದು ತಂಡವಾಗಿ ಕೆಲಸ ಮಾಡಬೇಕಿದೆ ಎಂದರು.ನ್ಯಾಯವಾದಿಗಳಾದ ಅಜೀತ ಧನಶೆಟ್ಟಿ,…

Read More