Author: editor.udayarashmi@gmail.com

ನಮ್ಮ ಶೌಚಾಲಯ ನಮ್ಮ ಗೌರವ ವಿಶೇಷ ಆಂದೋಲನಕ್ಕೆ ಚಾಲನೆ ಉದಯರಶ್ಮಿ ದಿನಪತ್ರಿಕೆ ಚಡಚಣ: ಪ್ರತಿಯೊಬ್ಬರು ತಮ್ಮ ಮನೆ, ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಚವಾಗಿ, ನೈರ್ಮಲ್ಯದಿಂದ ಕಾಪಾಡಬೇಕು. ಪ್ರತಿಯೊಬ್ಬ ಸಾರ್ವಜನಿಕರು ಶೌಚಾಲಯಗಳನ್ನು ತಮ್ಮ ಮನೆ ಶೌಚಾಲಯಗಳಂತೆ ಬಳಸಿಕೊಂಡ ಬಹಿರ್ದೇಸೆ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಿ.ಎಸ್ ರಾಠೋಡ ಅವರು ಹೇಳಿದರು.ಚಡಚಣ ತಾಲೂಕಿನ ನಿವರಗಿ ಹಾಗೂ ಹಲಸಂಗಿ ಗ್ರಾಮದಲ್ಲಿ ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಚಡಚಣ ತಾಲೂಕು ಪಂಚಾಯಿತಿ ವತಿಯಿಂದ ವಿಶ್ವ ಶೌಚಾಲಯ ದಿನದ ಅಂಗವಾಗಿ ನವೆಂಬರ್ 19 ರಿಂದ ಡಿಸೆಂಬರ್ 10 ರವರೆಗೆ ನಡೆಯುತ್ತಿರುವ ‘ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ’ಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.ಸಮಾಜದಲ್ಲಿ ನೈರ್ಮಲ್ಯ ಕಾಪಾಡುವುದರಿಂದ ನಮ್ಮ ಆರೋಗ್ಯ ವೃದ್ಧಿಸಿಕೊಳ್ಳಬಹುದು. ಹಾಗಾಗಿ ಪ್ರತಿಯೊಬ್ಬರೂ ಬಯಲು ಶೌಚ ಮಾಡುವುದನ್ನು ಬಿಟ್ಟು ಮನೆ ಶೌಚಾಲಯಗಳನ್ನು ಬಳಸುವ ಜತೆಗೆ ಸುತ್ತ ಮುತ್ತಲಿನ ಪ್ರತಿಯೊಬ್ಬ ಜನರು ಶೌಚಾಲಯ ಬಳಸುವಂತೆ ಪ್ರೇರಣೆ ತುಂಬಬೇಕು ಎಂದು ಸಾರ್ವಜನಿಕರಲ್ಲಿ ಕರೆ ನೀಡಿದರು.ಈ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಡಿಸೆಂಬರ್ 22 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2024ರಲ್ಲಿ ಪಾಲ್ಗೊಳ್ಳಲು ಹೆಸರು ನೋಂದಾಯಿಸಲು ನವೆಂಬರ್ 30 ಕೊನೆಯ ದಿನವಾಗಿದ್ದು, ಆಸಕ್ತರು ಕೂಡಲೇ ತಮ್ಮ ಹೆಸರು ನೊಂದಾಯಿಸಬೇಕು ಎಂದು ಕೋರ್ ಕಮಿಟಿ ನೋಂದಣಿ ವಿಭಾಗದ ಡಾ.ರಾಜು ಯಲಗೊಂಡ ಮತ್ತು ವೀರೇಂದ್ರ ಗುಚ್ಚೆಚ್ಚಿ ತಿಳಿಸಿದ್ದಾರೆ.ಈಗಾಗಲೇ ನೋಂದಣಿ ಕಾರ್ಯ ಭರದಿಂದ ಸಾಗಿದ್ದು, ಕರ್ನಾಟವಷ್ಟೇ ಅಲ್ಲ ಬೇರೆ ಬೇರೆ ರಾಜ್ಯಗಳಿಂದಲೂ ಹೆಸರಾಂತ ಓಟಗಾರರು ತಮ್ಮ ಹೆಸರು ನೋದಾಯಿಸಿದ್ದಾರೆ. ಕಳೆದ ಬಾರಿ ಸುಮಾರು 10 ಸಾವಿರ ಓಟಗಾರರು ಪಾಲ್ಗೊಂಡಿದ್ದರು. ಈ ಬಾರಿ ಸುಮಾರು 15 ರಿಂದ 20 ಸಾವಿರ ಜನ ಪಾಲ್ಗೋಳ್ಳುವ ನಿರೀಕ್ಷೆಯಿದೆ. ಈ ಓಟದಲ್ಲಿ ಪಾಲ್ಗೋಳ್ಳಲು ಅನೇಕ ಸಂಘ, ಸಂಸ್ಥೆಗಳು ಗ್ರುಪ್ ರೆಜಿಸ್ಟ್ರೇಷನ್ ಕೂಡ ಮಾಡಿಸಿವೆ. ಹೀಗಾಗಿ ಆಸಕ್ತರು ಗ್ರುಪ್ ನೋಂದಣಿ ಸಹಿತ ಮಾಡಿಸಬಹುದಾಗಿದೆ. ಆನಲೈನ್ ಮೂಲಕ https://www.eventzalley.com/event-details/211 ನಲ್ಲಿ ಹೆಸರು ನೋಂದಾಯಿಸಬಹುದಾಗಿದೆ.ನೋಂದಣಿ ಸಂಬಂಧಿತ ಮಾಹಿತಿಗಾಗಿ ಮೊಬೈಲ್ ಸಂಖ್ಯೆ- 8095190218 ಮತ್ತು 9886668498 ಸಂಪರ್ಕಿಸಬಹುದಾಗಿದೆ ಎಂದು ಡಾ. ರಾಜು ಯಲಗೊಂಡ ಮತ್ತು…

Read More

ವೃಕ್ಷಥಾನ್ ಹೆರಿಟೇಜ್ ರನ್ ನಲ್ಲಿ ಪಾಲ್ಗೊಳ್ಳಲು ಹೆಸರು ನೋಂದಾಯಿಸಿದ ಐಎಎಸ್ ಅಧಿಕಾರಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿರಿಯ ಐಎಎಸ್ ಅಧಿಕಾರಿ ಮತ್ತು ಕೃಷಿ ಇಲಾಖೆ ಆಯುಕ್ತರಾಗಿರುವ ವೈ. ಎಸ್. ಪಾಟೀಲ ಅವರು ವೃಕ್ಷಥಾನ್ ಹೆರಿಟೇಜ್ ರನ್ ನಲ್ಲಿ ಪಾಲ್ಗೋಳ್ಳಲು ಹೆಸರು ನೋಂದಾಯಿಸುವ ಮೂಲಕ ಅಧಿಕಾರಿ ವರ್ಗಕ್ಕೆ ಸ್ಪೂರ್ತಿಯಾಗಿದ್ದಾರೆ.ವಿಜಯಪುರ ನಗರದಲ್ಲಿ ಡಿಸೆಂಬರ್ 22 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್- -2024 ಮ್ಯಾರಾಥಾನ್ ನಲ್ಲಿ 5 ಕಿ. ಮೀ. ಓಟದಲ್ಲಿ ಪಾಲ್ಗೋಳ್ಳಲು ಅವರು ಹೆಸರು ನೋಂದಣಿ ಮಾಡಿದ್ದಾರೆ. ಈ ಮುಂಚೆ ವಿಜಯಪುರ ಉಪವಿಭಾಗಾಧಿಕಾರಿಯಾಗಿ ಮತ್ತು ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಅವರು, ತೋಟಗಾರಿಕೆ ಇಲಾಖೆಯ ಆಯುಕ್ತರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ.ಸದಾ ಲವಲವಿಕೆಯಿಂದ ಇರುವ ಹಿರಿಯ ಐಎಎಸ್ ಅಧಿಕಾರಿಯೂ ಆಗಿರುವ ವೈ. ಎಸ್. ಪಾಟೀಲ ಅವರು, ಕೊರೊನಾ ಲೌಕಡೌನ್ ಸಮಯದಲ್ಲಿ ಮಾಡಿರುವ ಸೇವೆ ಜನಮಾನಸದಲ್ಲಿ ಇಂದಿಗೂ ಸ್ಮರಣೀಯವಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಉಪವಿಭಾಗಾಧಿಕಾರಿ ಮತ್ತು ನಂತರ ಜಿಲ್ಲಾಧಿಕಾರಿಯಾಗಿದ್ದಾಗ ಅವರು ಮಾಡಿರುವ ಕೆಲಸಗಳನ್ನು ಇಂದಿಗೂ ಸಾರ್ವಜನಿಕರು ಸ್ಮರಿಸುತ್ತಿದ್ದಾರೆ.ವೈ. ಎಸ್. ಪಾಟೀಲ…

Read More

ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಸರೀಕರಣ-ಅರಣ್ಯೀಕರಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಡಿ.22ರಂದು ನಗರದಲ್ಲಿ ವೃಕ್ಷೋತ್ಥಾನ ಪಾರಂಪರಿಕ ಓಟ-2024 ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿಕೊಂಡು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ ಮಾಡಿಕೊಂಡಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವೃಕ್ಷ ಅಭಿಯಾನ ಪ್ರತಿಷ್ಠಾನ ವಿಜಯಪುರ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳುವ ವೃಕ್ಷೋತ್ಥಾನ ಕಾರ್ಯಕ್ರಮದ ಕುರಿತು ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ಪಾರಂಪರಿಕ ಓಟದಲ್ಲಿ ಭಾಗವಹಿಸಲು ಈಗಾಗಲೇ ಹಲವರು ಆನ್‍ಲೈನ್ ಮೂಲಕ ನೊಂದಾಯಿಸಿಕೊಂಡಿದ್ದು, ನೊಂದಣಿಗೆ ನವೆಂಬರ್ 30 ಕೊನೆಯ ದಿನವಾಗಿದ್ದು, ಕ್ರೀಡಾಸಕ್ತರು ಕೂಡಲೇ ತಮ್ಮ ಹೆಸರನ್ನು https://www.vrukshathon.co.in ರಲ್ಲಿ ನೊಂದಾಯಿಸಿಕೊಳ್ಳುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.ಪರಿಸರ ಹಾಗೂ ಪಾರಂಪರಿಕ ಸ್ಮಾರಕಗಳ ರಕ್ಷಣೆ ಜಾಗೃತಿ ಹಾಗೂ ಜಲ. ವೃಕ್ಷ, ಶಿಕ್ಷಣ ಎಂಬ ಧ್ಯೇಯ ವಾಕ್ಯದೊಂದಿಗೆ ಹಸಿರು ಪರಿಸರ ಬೆಳೆಸುವ ಜೊತೆಗೆ ಅರಣ್ಯವನ್ನು ಕಾಪಾಡುವ ವೃಕ್ತೋತ್ಥಾನ ಪಾರಂಪರಿಕ ಓಟದಲ್ಲಿ ಅಂದಾಜು 15 ಸಾವಿರಕ್ಕೂ ಹೆಚ್ಚು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಅಲ್ಲಲ್ಲಿ ತೊಗರಿ ಬೆಳೆದ ರೈತರ ಜಮೀನುಗಳಲ್ಲಿ ಹವಾಮಾನ ವೈಪರಿತ್ಯದಿಂದ ಹೂ ಮತ್ತು ಕಾಯಿ ಉದುರುತ್ತಿರುವುದು ಕಂಡು ಬಂದಲ್ಲಿ ರೈತರು ಬೆಳೆ ವಿಮೆ ನೋಂದಣಿ ಮಾಡಿದ ರಶೀದಿ, ಜಿಪಿಎಸ್ ಫೋಟೋದೊಂದಿಗೆ ಅರ್ಜಿಯನ್ನು ಆಯಾ ರೈತ ಸಂಪರ್ಕ ಕೇಂದ್ರ ಅಥವಾ ವಿಮಾ ಸಂಸ್ಥೆಯ ಪ್ರತಿನಿಧಿಗಳಿಗೆ ಸಂಪರ್ಕಿಸುವಂತೆ ವಿಜಯಪುರ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ವಿಜಯಪುರ ತಾಲೂಕಿನ ವಿಮಾ ಸಂಸ್ಥೆ ಪ್ರತಿನಿಧಿ ಸಂತೋಷ ಜಗರಿ ಮೊ: 7349113727, ಬಬಲೇಶ್ವರ ತಾಲೂಕಿನ ಸಾಗರ ಔರಸಂಗ ಮೊ: 9590921699 ಹಾಗೂ ತಿಕೋಟಾ ತಾಲೂಕಿನ ರಮೇಶ ಹಳ್ಳಿ ಮೊ: 7892547066 ಸಂಖ್ಯೆಗೆ ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರದಿಂದ ಇಂಡಿ ಮಾರ್ಗವಾಗಿ ಕಾರ್ಯಾಚರಣೆಯಾಗುವ ವೇಗದೂತ, ಸಾಮಾನ್ಯ ಸಾರಿಗೆ ಬಸ್‍ಗಳು ಹಾಗೂ ಅಲಿಯಾಬಾದ್‍ಗೆ ಹೋಗುವ ನಗರ ಸಾರಿಗೆ ಬಸ್‍ಗಳನ್ನು ಪ್ರಯಾಣಿಕರು, ವಿದ್ಯಾರ್ಥಿಗಳು ಹಾಗೂ ವ್ಯಾಪಾರಸ್ಥರಿಗೆ ಅನುಕೂಲ ಕಲ್ಪಿಸಲು ಗಾಂಧಿಚೌಕ-ನೆಹರು ಮಾರ್ಕೆಟ್, ಕಾಯಿಪಲ್ಯ ಮಾರ್ಕೆಟ್, ಅಟಲ್ ಬಿಹಾರಿ ವಾಜಪೇಯಿ ರಸ್ತೆ ಮೂಲಕ ಸಂಚರಿಸಲಿವೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ವತಿಯಿಂದ ವಾರ್ಡ ನಂ.13ರ ಜನತಾ ಬಜಾರ, ನೆಹರು ಮಾರುಕಟ್ಟೆ ಬಳಿ ಹಾಗೂ ಎಲ್‍ಬಿಎಸ್ ಮಾರುಕಟ್ಟೆ ಹತ್ತಿರ ಅತಿಕ್ರಮಣವನ್ನು ತೆರವುಗೊಳಿಸಲಾಯಿತು.ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಪಾಲಿಕೆಯ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ ಅವರ ನೇತೃತ್ವದಲ್ಲಿ ಶುಕ್ರವಾರ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಂಡಿದ್ದು, ನಗರದ ನೆಹರು ಮಾರ್ಕೆಟ್ ಹಿಂಭಾಗ, ಎಂ.ಆರ್.ಹೋಟೆಲ್ ಹತ್ತಿರ, ಕೆಎಸ್‍ಆರ್‍ಟಿಸಿ ಡಿಪೋ ಪಕ್ಕ, ಪ್ರವಾಸೋದ್ಯಮ ಮಂದಿರದ ಹಿಂದುಗಡೆ, ಸೈನಿಕ ಶಾಲೆ ರಸ್ತೆಯ ಜಿಮಖಾನಾ ಕ್ಲಬ್ ಹಿಂದೆ ಹಾಗೂ ಆಹಾರ ಮಾರಾಟಕ್ಕೆ ಇಂಡಿ ರಸ್ತೆಯಲ್ಲಿ ಜಿಲ್ಲಾ ಕ್ರೀಡಾಂಗಣದ ಹತ್ತಿರ ವೆಂಡಿಂಗ್ ಜೋನ್‍ಗಳನ್ನು ಗುರುತಿಸಲಾಗಿದ್ದು, ಸದರಿ ನಿಗದಿತ ಸ್ಥಳಗಳಲ್ಲಿಯೇ ಬೀದಿ ಬದಿ ವ್ಯಾಪಾರಸ್ಥರು ವ್ಯಾಪಾರ-ವಹಿವಾಟು ನಡೆಸುವಂತೆ ತಿಳಿಸಲಾಗಿದೆ.ಇಂದು ನಡೆದ ಅತಿಕ್ರಮಣ ತೆರವು ಕಾರ್ಯಾಚರಣೆಯಲ್ಲಿ ವಲಯ ಕಛೇರಿ-1ರ ವಲಯ ಆಯುಕ್ತರಾದ ಸುನೀಲ ಪಾಟೀಲ ಸೇರಿದಂತೆ ಪಾಲಿಕೆ ಅಧಿಕಾರಿ-ಸಿಬ್ಬಂದಿಗಳು, ಪೊಲೀಸ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು

Read More

ಬಾಲಮಂದಿರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಬಾಲಕಿಯರ ಬಾಲ ಮಂದಿರ ಹಾಗೂ ಸರ್ಕಾರಿ ಬಾಲಕರ ಬಾಲ ಮಂದಿರಕ್ಕೆ ಗುರುವಾರ ಸಂಜೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಾಲ ಮಂದಿರಗಳ ಮೂಲಭೂತ ಸೌಕರ್ಯ ಪರಿಶೀಲಿಸಿದ ಅವರು, ಬಾಲ ಮಂದಿರದಲ್ಲಿರುವ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಯಾವುದೇ ಕಾರಣಕ್ಕೂ ಮಕ್ಕಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಶೌಚಾಲಯಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಸ್ನಾನಕ್ಕೆ ಬಿಸಿ ನೀರು, ಉತ್ತಮ ಆಹಾರ ಸೇರಿದಂತೆ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಮಕ್ಕಳಿಗೆ ಒದಗಿಸಬೇಕು. ಕೌಶಲ್ಯತೆಯನ್ನು ಹೆಚ್ಚಿಸಲು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬಾಲಮಂದಿರದ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ಮಕ್ಕಳಯೋಗ ಕ್ಷೇಮ ವಿಚಾರಿಸಿದರು.ಸತತ ಅಧ್ಯಯನಶೀಲತೆ ರೂಢಿಸಿಕೊಳ್ಳಬೇಕು.…

Read More

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿ, ಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ದಾಂಪತ್ಯ ಎಂಬುದು ಕೇವಲ ಹೂವಿನ ಹಾಸಿಗೆಯಲ್ಲ.. ಸಮಾಜ ಒಪ್ಪಿದ ರೀತಿಯಲ್ಲಿ ಒಂದು ಜೋಡಿ ಗಂಡು ಹೆಣ್ಣು ಮದುವೆ ಎಂಬ ಸುಮಧುರ ಬಂಧದಲ್ಲಿ ಒಂದಾಗಿ ಬದುಕಿನಲ್ಲಿ ಮುಂದೆ ಸಾಗುತ್ತಾರೆ. ಸುಖದಲ್ಲಿ ದುಃಖದಲ್ಲಿ ಜೊತೆಯಾಗಿ ಸಾಗುವ ದಂಪತಿಗಳ ಬದುಕಿನಲ್ಲಿ ಸಾಕಷ್ಟು ತೊಂದರೆಗಳು, ನೋವುಗಳು, ಆರ್ಥಿಕ ಪಡಿಪಾಟಲುಗಳು, ಸಂತಸ, ದುಃಖ ಹೀಗೆ ಹತ್ತು ಹಲವಾರು ಕಂತೆಗಳು ಇರುತ್ತವೆ. ಜೀವನ ನಮ್ಮೆಡೆಗೆ ಎಸೆಯುವ ಪ್ರತಿ ಸವಾಲಿಗೂ, ಪ್ರತಿ ಸಂಕಷ್ಟದ ಗಳಿಗೆಗೂ, ಪ್ರತಿಯೊಂದು ಒತ್ತಡಭರಿತ ತೊಂದರೆಗಳನ್ನು ದಂಪತಿಗಳು ಎದುರಿಸಲೇಬೇಕಾಗುತ್ತದೆ.ಆದರೆ ಜೀವನದ ಎಲ್ಲಾ ಸುಖ ದುಃಖಗಳಲ್ಲಿ ನಿಮಗೆ ಹೆಗಲು ಕೊಟ್ಟು ಎಲ್ಲವನ್ನು ನೀಗಿಸಿಕೊಂಡು ಹೋಗುವ ಸಂಗಾತಿ ಇದ್ದರೆ ಬದುಕು ಭಾರವೆನಿಸುವುದಿಲ್ಲ.ಒಬ್ಬರಿಗೊಬ್ಬರು ಜೊತೆಯಾಗಿಬದುಕಿನ ಎಲ್ಲ ಬವಣೆಗಳನ್ನು ನೀಗಿಕೊಂಡು ಒಬ್ಬರಿಗೊಬ್ಬರು ಆಸರೆಯಾಗುತ್ತಾರೆ, ಚೈತನ್ಯ ಶಕ್ತಿಯಾಗುತ್ತಾರೆ.ಒಬ್ಬರಿನ್ನೊಬ್ಬರ ಭಾರವನ್ನು ಹೊರುವ ಮೂಲಕ ಪ್ರೀತಿಯ ನವ ಪರಿಭಾಷೆಯನ್ನು ಬರೆಯುತ್ತಾರೆ. ಹಲವಾರು ಬಾರಿ ಸೋತರೂ ಜೊತೆಯಾಗಿ ಗೆಲ್ಲುತ್ತಾರೆ. ಒಬ್ಬರಿಗೊಬ್ಬರು ಪರಸ್ಪರ ಸಹಾಯವಾಗಿ ಬದುಕುತ್ತಾರೆ. ಜೀವನದ ಕಠಿಣ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಿಸೆಂಬರ ೨ ರಂದು ಇವಣಗಿ ಗ್ರಾಮದಲ್ಲಿ ನಡೆಯುವ ಬಸವನಬಾಗೇವಾಡಿ ತಾಲೂಕು ೧೦ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಸಿದ್ಧರಾಮ ಬಿರಾದಾರ ಅವರನ್ನು ಬಸವ ಜನ್ಮಭೂಮಿ ಪ್ರತಿಷ್ಠಾನ ಹಾಗೂ ಕನ್ನಡ ಪುಸ್ತಕ ಪರಿಷತ್ತಿನ ಪದಾಧಿಕಾರಿಗಳು ವಿಜಯಪುರದ ಅವರ ನಿವಾಸದಲ್ಲಿ ಆತ್ಮೀಯವಾಗಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಪ್ರತಿಷ್ಠಾನದ ಸಂಚಾಲಕ, ಸಾಹಿತಿ ಮುರುಗೇಶ ಸಂಗಮ ಮಾತನಾಡಿ, ಬಸವೇಶ್ವರರು ಜನಿಸಿ ಓಡಾಡಿದ ಬಸವನಬಾಗೇವಾಡಿಯ ನೆಲವೆ ಪಾವನ ಭೂಮಿ. ಈ ಪವಿತ್ರ ಕ್ಷೇತ್ರಕ್ಕೆ ಸಮೀಪದ ಇವಣಗಿ ಗ್ರಾಮ ಒಂದು ಸುಕ್ಷೇತ್ರ. ಇಂಥ ಪಾವನ ಪರಿಸರದಲ್ಲಿ ಜರುಗಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯ ಸ್ಥಾನ ಸಾಹಿತಿ ಸಿದ್ಧರಾಮ ಬಿರಾದಾರ ಅವರಿಗೆ ಒಲಿದು ಬಂದಿರುವುದು ಸಂತಸದ ಸಂಗತಿ.ಮನಗೂಳಿ ಪಟ್ಟಣದ ಬಿರಾದಾರ ಅವರು ಉಕ್ಕಲಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದು, ಸಾಹಿತ್ಯ ಕೃಷಿ ಮಾಡುತ್ತ ಖುಷಿಯಾಗಿದ್ದಾರೆ. ಇವರ ೧೧ ಕೃತಿಗಳು ಕನ್ನಡ ಸಾರಸ್ವತ ಲೋಕಕ್ಕೆ ಅರ್ಪಣೆಯಾಗಿದ್ದು ಹಿರಿಯ ಸಾಹಿತಿಗಳ…

Read More