Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಗುರುವಾರ ಜೆನಿತ್- 2024 ವಾರ್ಷಿಕ ಕ್ರೀಡಾ ದಿನ ಆಚರಿಸಲಾಯಿತು.ಶ್ರೀ ಬಿ.ಎಂ. ಪಾಟೀಲ್ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಗ್ರಂಥಾಲಯ ಕಟ್ಟಡದ ಸಭಾಂಗಣದಲಿ ಕ್ರೀಡಾ ವಿಭಾಗ ಆಯೋಜಿಸಿದ್ದ ಈ ಕಾರ್ಯಕ್ರಮವನ್ನು ಖ್ಯಾತ ಟ್ರ‍್ಯಾಕ್ ಸೈಕ್ಲಿಸ್ಟ್ ವೆಂಕಪ್ಪ ಕೆಂಗಲಗುತ್ತಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ವಿವಿ ಕುಲಪತಿ ಡಾ. ಆರ್.ಎಸ್.ಮುಧೋಳ, ಕ್ರೀಡಾ ಸಮಿತಿಯ ಉಪಾಧ್ಯಕ್ಷ ಡಾ.ಗಿರೀಶ್ ಕುಳ್ಳೊಳ್ಳಿ, ವೈದ್ಯಕೀಯ ವಿಭಾಗದ ಡೀನ್ ಡಾ.ತೇಜಸ್ವಿನಿ ವಲ್ಲಭ, ಉಪಪ್ರಾಚಾರ್ಯ ಡಾ. ಎಂ.ಬಿ.ಪಾಟೀಲ, ಡಾ.ಸುಮಂಗಲಾ ಪಾಟೀಲ, ಬಿ.ಎಲ್.ಡಿ.ಇ. ಸಂಘದ ದೈಹಿಕ ಶಿಕ್ಷಣ ನಿರ್ದೇಶಕ ಎಸ್. ಎಸ್. ಕೋರಿ, ಕ್ರೀಡಾ ವಿಭಾಗದ ಸಹಾಯಕ ನಿರ್ದೇಶಕಿ ಡಾ. ಮಹಾದೇವಿ ವಾಲಿ,ವಿದ್ಯಾರ್ಥಿ ಪ್ರತಿನಿಧಿಗಳಾದ ಡಾ.ರುತುಜಾ ನಿಕಮ್, ಡಾ. ಎಸ್. ರಾಹುಲ, ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಉಪಸ್ಥಿತರಿದ್ದರು.ಈ ಕಾರ್ಯಕ್ರಮದಲ್ಲಿ ಸುಮಾರು 500 ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಂಬಾಕು ಮತ್ತು ಮಾದಕವಸ್ತು ಸೇವನೆ ಒಂದು ದೊಡ್ಡ ಸಮಸ್ಯೆಯಾಗಿದ್ದು, ಇದನ್ನು ತಡೆಯಲು ಎಲ್ಲರೂ ಜಂಟಿಯಾಗಿ ಹೋರಾಟ ನಡೆಸಬೇಕಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ ಆರ್.ಎಸ್.ಮುಧೋಳ ಹೇಳಿದ್ದಾರೆ.ಮಂಗಳವಾರ ಬಿ.ಎಲ್.ಡಿ.ಈ. ವಿವಿಯ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ತಂಬಾಕು ವ್ಯಸನ ಮುಕ್ತಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.ತಂಬಾಕು ವ್ಯಸನ ಭಾರತವೂ ಸೇರಿದಂತೆ ಜಗತ್ತಿನಾದ್ಯಂತ ಒಂದು ದೊಡ್ಡ ಜಾಡ್ಯವಾಗಿ ಬೆಳೆದಿದೆ. ಸರಕಾರಗಳು, ವೈದ್ಯರು ಹಾಗೂ ಬೇರೆ ಬೇರೆ ಸಂಘ- ಸಂಸ್ಥೆಗಳು ಇದನ್ನು ತಡೆಯಲು ಹೋರಾಟ ನಡೆಸಿವೆ. ಕೇಂದ್ರ ಸರಕಾರ ಮತ್ತು ರಾಷ್ಟ್ರೀಯ ವೈದ್ಯಕೀಯ ಸಂಸ್ಥೆ ಈಗ ದೇಶದ ಪ್ರತಿಯೊಂದು ವೈದ್ಯಕೀಯ ಕಾಲೇಜುಗಳಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರ ತೆರೆಯಲು ನಿರ್ಧರಿಸಿವೆ. ಜನತೆಯ ಆರೋಗ್ಯದ ಬಗೆಗೆ ಸದಾ ತುಡಿಯುವ, ಅಪಾರ ಸಾಮಾಜಿಕ ಕಳಕಳಿ ಹೊಂದಿರುವ ಕೇಂದ್ರ ಆಸ್ಪತ್ರೆಯ ಮನೋವೈದ್ಯಕೀಯ ವಿಭಾಗದ ಓಪಿಡಿ ಸಂಖ್ಯೆ19ರಲ್ಲಿ ಪ್ರಾರಂಭವಾಗಿದ್ದು, ಇಲ್ಲಿ ಪರಿಣಿತ ಆಪ್ತ ಸಲಹಾಕಾರರು, ವೈದ್ಯರು ಲಭ್ಯರುತ್ತಾರೆ. ಅಲ್ಲದೇ, ವ್ಯಸನ ತಡೆಗಟ್ಟಲು ಅಗತ್ಯವಿರುವ ತಪಾಸಣೆ…
ಉದಯರಶ್ಮಿ ದಿನಪತ್ರಿಕೆ ಹೊನವಾಡ: ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದಲ್ಲಿ ವಿವಿದೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ನಿಯಮಿತ ಸಂಘದ 2023-24 ನೇ ಸಾಲಿನ 104ನೇ ವಾರ್ಷಿಕ ಮಹಾ ಸಭೆ ಸಂಘದ ಕಚೇರಿಯ ಆವರಣದಲ್ಲಿ ನಡೆಯಿತು.ಬ್ಯಾಂಕ್‌ನ ಅಧ್ಯಕ್ಷ ನಿಂಗಪ್ಪ ಗುಗ್ಗರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಶಿವರುದ್ರಯ್ಯ ಮಠಪತಿ ಸಭೆಯ ನಡಾವಳಿ ಓದಿದರು.ಸಹಕಾರಿ ಬ್ಯಾಂಕುಗಳಿಗೆ ಠೇವಣಿದಾರರು ಹಾಗೂ ಷೇರುದಾರರು ಜೀವಾಳವಾಗಿದ್ದು, ಸಾಲ ಪಡೆದವರು ಸರಿಯಾಗಿ ಮರುಪಾವತಿ ಮಾಡಿದಲ್ಲಿ ಮಾತ್ರ ಸಹಕಾರಿ ಸಂಘ ಸಂಸ್ಥೆಗಳು ಅಭಿವೃದ್ಧಿಯೊಂದಿಗೆ ಮುನ್ನಡೆಯಲು ಸಾಧ್ಯ ಎಂದು ಉದ್ಘಾಟಿಸಿ ಬಾಬುರಾವ್ ಮಹಾರಾಜರು ಮಾತನಾಡಿದರು.ರಸಗೊಬ್ಬರ ಸೇರಿದಂತೆ ನಾನಾ ಸಾಮಗ್ರಿಗಳನ್ನು ಮಾರಾಟ ಮಾಡುವ ಮೂಲಕ ಸಂಘವನ್ನು ಅಭಿವದ್ಧಿ ಪಥದತ್ತ ಸಾಗಿಸಲು ಸದಸ್ಯರು ಸೂಚಿಸಿದರು.ಸಾವಯವ ಕೃಷಿಯು ಬೆಳೆ ಉತ್ಪಾದನೆಯ ಪಶುಸಂಗೋಪನೆಯ ನಡುವೆ ಸಾಮರಸ್ಯದ ಸಮತೋಲನವನ್ನು ಸೃಷ್ಟಿಸುತ್ತದೆ ಮತ್ತು ನೈಸರ್ಗಿಕ ಪರಿಸರ ವ್ಯವಸ್ಥೆಗಳು ಮತ್ತು ಚಕ್ರಗಳ ಜೊತೆಗಿನ ಜೋಡಣೆಯನ್ನು ಸುಗಮಗೊಳಿಸುತ್ತದೆ ಎಂದು ತೆಲಸಂಗದ ಕೃಷಿ ಅಧಿಕಾರಿ ಯಂಕಪ್ಪ ಉಪ್ಪಾರ ಹೇಳಿದರುವೇದಿಕೆಯ ಮೇಲೆ ಕಾರ್ಯದರ್ಶಿ ದುಂಡಪ್ಪ ಗುಗ್ಗರಿ, ಹಿರಿಯರಾದ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಸೋಮವಾರ ರಾತ್ರಿ ಉತ್ತಮ ಮಳೆಯಾಗಿದೆ. ಪಟ್ಟಣದಲ್ಲಿ ಸೋಮವಾರ ಸಂಜೆ ಕೆಲ ಹೊತ್ತು ಮಳೆ ಸುರಿಯಿತು. ರಾತ್ರಿ ೯ ಗಂಟೆ ಸುಮಾರಿಗೆ ಸಿಡಿಲು,ಗುಡುಗು ಅಬ್ಬರದೊಂದಿಗೆ ಆರಂಭವಾದ ಜೋರಾದ ಮಳೆ ತಡರಾತ್ರಿಯವರೆಗೂ ಸುರಿಯಿತು.ತೊಗರಿ ಬೆಳೆ ಸೇರಿದಂತೆ ವಿವಿಧ ಮುಂಗಾರು ಬೆಳೆಗಳು ಮಳೆಯ ಕೊರತೆಯಿಂದ ಬೆಳೆ ಸರಿಯಾಗಿ ಬರುವುದಿಲ್ಲ ಎಂಬ ಆತಂಕದಲ್ಲಿದ್ದ ರೈತ ಬಾಂಧವರಿಗೆ ಈ ಮಳೆಯು ಒಂದಷ್ಟು ಬೆಳೆಗಳಿಗೆ ಆಸರೆ ತಂದಿರುವದರಿಂದ ಅವರ ಮುಖದಲ್ಲಿ ಮಂದಹಾಸ ಮೂಡಿಸಿದೆ.ಜೋರಾದ ಸುರಿದ ಮಳೆ ಪರಿಣಾಮ ಬಸವನಬಾಗೇವಾಡಿ ಪಟ್ಟಣ ಸೇರಿದಂತೆ ಉಕ್ಕಲಿ, ದಿಂಡವಾರ ಗ್ರಾಮದಲ್ಲಿ ತಲಾ ಒಂದೊಂದು ಕಚ್ಚಾ ಮನೆಗಳು ಭಾಗಶಃ ಕುಸಿದಿವೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.ಅಖಂಡ ಬಸವನಬಾಗೇವಾಡಿ ತಾಲೂಕಿನಲ್ಲಿರುವ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಾದ ಮಳೆ ವಿವರಃ ಬಸವನಬಾಗೇವಾಡಿ ಕೇಂದ್ರದಲ್ಲಿ ೫೯ ಎಂ.ಎಂ., ಹೂವಿನಹಿಪ್ಪರಗಿ ಕೇಂದ್ರದಲ್ಲಿ ೨೪.೨ ಎಂ.ಎಂ., ಮನಗೂಳಿ ಕೇಂದ್ರದಲ್ಲಿ ೩೧.೨ ಎಂ.ಎಂ., ಆಲಮಟ್ಟಿ ಕೇಂದ್ರದಲ್ಲಿ ೭೩.೮ ಎಂ.ಎಂ, ಅರೇಶಂಕರ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ. ಪೌರಕಾರ್ಮಿಕರು ಕಾರ್ಯನಿರ್ವಹಿಸುವಾಗ ಕಡ್ಡಾಯವಾಗಿ ಆರೋಗ್ಯ ರಕ್ಷಣಾ ಕವಚಗಳನ್ನು ಬಳಕೆ ಮಾಡುವದು ತುಂಬಾ ಅಗತ್ಯವಿದೆ ಎಂದು ಮನಗೂಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶಬ್ಬೀರ ರೇವೂರಕರ ಹೇಳಿದರು.ತಾಲೂಕಿನ ಮನಗೂಳಿ ಪಟ್ಟಣ ಪಂಚಾಯಿತಿಯ ಸಭಾ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೌರಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರೋಗ್ಯಕರ ಸಮಾಜ ನಿರ್ಮಾಣ ಮಾಡುವಲ್ಲಿ ಪೌರಕಾರ್ಮಿಕರ ಪಾತ್ರ ಅಮೂಲ್ಯವಾಗಿದೆ ಎಂದರು.ಸಾಹಿತಿ ಶಂಕರ ಬೈಚಬಾಳ ಮಾತನಾಡಿ, ಮನುಷ್ಯನ ಸುಖ ಜೀವನದಲ್ಲಿದೆ. ಜೀವನ ಕೆಲಸದಲ್ಲಿದೆ. ಕೆಲಸ ಯಾರ ಗೌರವವನ್ನು ತಗ್ಗಿಸುವುದಿಲ್ಲ. ಬಸವಾದಿ ಶರಣರು ಸ್ವಚ್ಛತೆಯ ಯಾವುದೇ ಕೆಲಸವನ್ನು ಮಾಡಿದರೂ ಅದಕ್ಕೆ ಕಾಯಕ ಎಂದು ಅದನ್ನು ದೈವತ್ವಕ್ಕೇರಿಸಿದರು. ಅಂತಹ ಕಾಯಕದ ಕಾಲ ಬಳಿ ಸ್ವರ್ಗವಿದೆ ಎಂದರು.ಇನ್ನೋರ್ವ ಸಾಹಿತಿ ಸಿದ್ದರಾಮ ಬಿರಾದಾರ ಮಾತನಾಡಿ, ಪೌರಕಾರ್ಮಿಕರ ಸೇವೆಯನ್ನು ಸ್ಮರಿಸುವ ಈ ದಿನ ಬಹಳ ಮಹತ್ವಪೂರ್ಣವಾಗಿದೆ ಎಂದರು.ಪಟ್ಟಣ ಪಂಚಾಯಿತಿ ಸದಸ್ಯ ಭಾಗ್ಯರಾಜ ಸೊನ್ನದ ಅವರು ಪೌರಕಾರ್ಮಿಕರ ಕುರಿತು ಮಾತನಾಡಿದರು.ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಡಾ.ಆರ್.ಕೆ.ಪತ್ತಾರ, ಶೇಖರಗೌಡ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಸೋಂಪುರ ಗ್ರಾಮದಿಂದ ಸಿಂದಗಿ ಪಟ್ಟಣಕ್ಕೆ ನಿತ್ಯ ನೂರಾರು ವಿದ್ಯಾರ್ಥಿಗಳು ಶಿಕ್ಷಣ ಕಲಿಯುವುದಕ್ಕೆ ಬರುತ್ತಲಿದ್ದಾರೆ. ಆ ಗ್ರಾಮದ ವಿದ್ಯಾರ್ಥಿಗಳ ಬಹುದಿನಗಳ ಬೇಡಿಕೆಯಾಗಿದ್ದ ಸೋಂಪುರ ಗ್ರಾಮದಿಂದ ಸಿಂದಗಿ ಪಟ್ಟಣಕ್ಕೆ ಬಸ್ಸಿನ ಸೌಕರ್ಯವನ್ನು ಕಲ್ಪಿಸುವ ಮೂಲಕ ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸೋಂಪುರ ಗ್ರಾಮದಿಂದ ಸಿಂದಗಿ ಪಟ್ಟಣದವರೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ನೂತನ ಬಸ್ಸಿಗೆ ಮಂಗಳವಾರ ವಿದ್ಯಾರ್ಥಿಗಳಿಂದಲೇ ಚಾಲನೆ ನೀಡಿಸಿ ಮಾತನಾಡಿದ ಅವರು, ಬಸ್ಸಿನ ಸೌಕರ್ಯವಿಲ್ಲದ ಕಾರಣ ಅನೇಕ ವಿದ್ಯಾರ್ಥಿಗಳು ಕಲಿಕೆಯಿಂದ ಹಿಂದೆ ಬೀಳುತ್ತಿದ್ದರು. ಇದನ್ನು ಅರ್ಥೈಸಿಕೊಂಡು ಆ ಗ್ರಾಮದ ಯಾವ ಮಕ್ಕಳಿಗೂ ಕಲಿಕಿಗೆ ತೊಂದರೆಯಾಗಬಾರದು ಎಂದು ನಿರ್ಧರಿಸಿ ಅವರ ಬೇಡಿಕೆಯನ್ನು ಪೂರೈಸಲು ಮುಂದಾಗಿದ್ದೇವೆ. ತಾಲೂಕಿನಲ್ಲಿ ಇನ್ನೂ ಕೆಲವು ಗ್ರಾಮಗಳಿಂದ ಸಿಂದಗಿ ನಗರಕ್ಕೆ ಶಾಲಾ ಕಾಲೇಜಿನ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಅಂತವುಗಳನ್ನು ಕೂಡಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಮುಂದಾಗುತ್ತೇನೆ ಎಂದರು.ಇದೇ ಸಂದರ್ಭದಲ್ಲಿ ಸಿಂದಗಿ ಘಟಕ ವಿಭಾಗಿ ವ್ಯವಸ್ಥಾಪಕ ರೇವಣಸಿದ್ದಪ್ಪ ಖೈನೂರ, ಸಿಂದಗಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಜಾಪ್ರಭುತ್ವ ಮಾದರಿ ದೇಶದಲ್ಲಿರುವ ಕಾರ್ಮಿಕರ ಹಕ್ಕುಗಳಾದ ಸಂಘಟನೆಯ ಹಕ್ಕು, ಮುಷ್ಕರದ ಹಕ್ಕು, ಅಗತ್ಯ ಕನಿಷ್ಟ ವೇತನ, ಸಮಾಜಿಕ ಮತ್ತು ಆರ್ಥಿಕ ಭದ್ರತೆ ಹಕ್ಕನ್ನು ಉಳಿಸಲು ದೇಶದ್ಯಾಂತ ಆಲ್ ಇಂಡಿಯಾ ಯನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ತಾಲೂಕು ಘಟಕ ಸಿಂದಗಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಂಟಿ ಜಿಲ್ಲಾ ಕಾರ್ಯದರ್ಶಿ ಮಹಾದೇವಿ ಧರ್ಮಶೆಟ್ಟಿ ಹೇಳಿದರು.ಪಟ್ಟಣದ ಆಡಳಿತ ಸೌಧದ ಮುಂಭಾಗದಲ್ಲಿ ಎಐಯುಟಿಸಿ ಕಾರ್ಮಿಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿ ಬಿಜೆಪಿ ನೇತೃತ್ವದ ಎನಡಿಎ ಸರಕಾರ ತಂದಿರುವ ೪ ಕಾರ್ಮಿಕ ವಿರೋಧಿ ನೀತಿ ಹಿಂಪಡೆಯುವಂತೆ ಆಗ್ರಹಿಸಿ ತಾಲೂಕು ದಂಡಾಧಿಕಾರಿಗಳ ಮೂಲಕ ಪಿಎಂ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಈ ದೇಶದ ಶ್ರೀಮಂತರಿಗೆ ಅನುಕೂಲವಾಗುವ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಕೇಂದ್ರ ಸರಕಾರ ಕಾರ್ಮಿಕ ವರ್ಗಕ್ಕೆ ದ್ರೋಹ ಬಗೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ರೂಪಾ ಆಲಮೇಲ, ಪಾರ್ವತಿ ಕಟ್ಟಿಮನಿ, ಶಿವಮ್ಮ ಬೂದಿಹಾಳ, ನಾಗಮ್ಮ, ರಜನಿ ಸೇರಿದಂತೆ ಆಲ್ ಇಂಡಿಯಾ ಯನೈಟೆಡ್…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕನ್ನಡ ಜಾನಪದ ಪರಿಷತ್ತಿನ ಸಿಂದಗಿ ತಾಲೂಕು ಘಟಕದ ನೂತನ ಅಧ್ಯಕ್ಷರನ್ನಾಗಿ ಉಪನ್ಯಾಸಕ ಹಾಗೂ ಪತ್ರಕರ್ತ ಮಹಾಂತೇಶ ನೂಲಾನವರ ಅವರನ್ನು ಆಯ್ಕೆಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಆದೇಶ ಹೊರಡಿಸಿದ್ದಾರೆ. ಜಾನಪದ ಕಲೆಗಳ ಕ್ಷೇತ್ರ ಕಾರ್ಯ, ದಾಖಲೀಕರಣ, ತರಬೇತಿ ಮೂಲಕ ಜಾನಪದ ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕ್ರಿಯಾಶೀಲರಾಗಿ ಮತ್ತು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಸಿದ್ದಾರೆ ಎಂದು ಕಜಾಪ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ೭೬ ಎಂಎಂ, ಇಂಡಿ ತಾಲೂಕಿನಲ್ಲಿ ಕನಿಷ್ಠ ೭ಎಂಎಂ, ವಿಜಯಪುರ ನಗರ ಸೇರಿದಂತೆ ವಿಜಯಪುರ ತಾಲೂಕಿನಲ್ಲಿ ೪೦ಎಂಎಂ ಮಳೆಯಾಗಿದ್ದು, ವಿಜಯಪುರ ನಗರದಲ್ಲಿ ವಿವಿಧೆಡೆ ನೀರು ನಿಂತಿರುವ ಪ್ರದೇಶಗಳಲ್ಲಿ ಮಹಾನಗರಪಾಲಿಕೆ ವತಿಯಿಂದ ಯಂತ್ರಗಳಿಂದ ನೀರು ಹೊರ ಹಾಕುವ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ.ಮನೆಹಾನಿ: ಜಿಲ್ಲೆಯಲ್ಲಿ ೫೭ ಮನೆಗಳು ಭಾಗಶಃ ಹಾನಿಯಾಗಿವೆ. ಸಂಪೂರ್ಣ ಮನೆಹಾನಿ ಯಾವುದು ಇಲ್ಲ. ಯಾವುದೇ ಜನ-ಜಾನುವಾರ ಸಂಭವಿಸಿರುವುದಿಲ್ಲ. ೨೦೦೦ ಹೆಕ್ಟೆರಷ್ಟು ಅಂದಾಜು ಬೆಳೆ ಹಾನಿಯಾಗಿದೆ. ಸಮೀಕ್ಷೆ ಕೈಗೊಂಡಿದ್ದು, ಸಮೀಕ್ಷೆ ಮುಗಿದ ನಂತರ ನಿಖರ ಮಾಹಿತಿ ದೊರೆಯಲಿದೆ ಎಂದು ಹೇಳಿದರು.ಸೆಪ್ಟೆಂಬರ್ ೨೫ರಂದು ಜಿಲ್ಲಾ ಉಸ್ತುವಾರಿ ಸಚಿವರು ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ, ಸಾರ್ವಜನಿಕರ ಮನವಿ ಹಾಗೂ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ, ಸಚಿವರ ನಿರ್ದೇಶನದಂತೆ ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಹೋರಾಟ | ಸತ್ಯಕ್ಕೆ ಜಯ | ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಲು ಹಿಂಜರಿಯುವುದಿಲ್ಲ. ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ಕಾನೂನು ಹೋರಾಟಗಳ ಕುರಿತು ತೀರ್ಮಾನಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ತನಿಖೆಗೆ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ತೀರ್ಪು ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಸತ್ಯಕ್ಕೆ ಜಯ ಸಿಗಲಿದೆ. ತನಿಖೆಯನ್ನು ಎದುರಿಸಲು ನಾನು ಹಿಂಜರಿಯುವುದಿಲ್ಲ, ಕಾನೂನಿನಡಿಯಲ್ಲಿ ಅಂತಹ ತನಿಖೆಗೆ ಅನುಮತಿ ಇದೆಯೇ ಅಥವಾ ಇಲ್ಲವೇ ಎಂಬುದನ್ನು ನಾನು ತಜ್ಞರನ್ನು ಸಂಪರ್ಕಿಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.ಕಾನೂನು ಮತ್ತು ಸಂವಿಧಾನದಲ್ಲಿ ನಂಬಿಕೆ ಇದೆ ಎಂದು ಹೇಳಿದ ಅವರು, ಈ ಹೋರಾಟದಲ್ಲಿ ಸತ್ಯಕ್ಕೆ ಜಯ ಸಿಗಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್ ತನಗೆ ತೊಂದರೆ…
