Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಭಾರತ ಸಂವಿಧಾನ ದಿನದ ಕಾರ್ಯಕ್ರಮದಲ್ಲಿ ಬಸವರಾಜ್ ಕೌಲಗಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಡತಾಯಿಯ ಮಗನೊಬ್ಬ ಜಿಲ್ಲಾಧಿಕಾರಿಯಾಗುವ ಕನಸು ಕಾಣುವುದಕ್ಕೆ ಹಾಗೂ ಕಂಡಂತ ಕನಸನ್ನು ನನಸು ಮಾಡಿಕೊಳ್ಳುವುದಕ್ಕೆ ಸಾಧ್ಯವಾಗಿಸಿದ್ದು ಭಾರತದ ಸಂವಿಧಾನ. ಜಗತ್ತಿನ ಶ್ರೇಷ್ಠ ಸಂವಿಧಾನ ಎಂದು ಗುರುತಿಸಿಕೊಳ್ಳುವ ನಮ್ಮ ಸಂವಿಧಾನ ಇಲ್ಲದೇ ಹೋಗಿದ್ದರೆ ಈ ದೇಶದ ಸ್ಥಿತಿ ಪಾತಾಳ ಗರಿಡಿಯಂತಾಗುತ್ತಿತ್ತು ಎಂದು ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಕೌಲಗಿ ಹೇಳಿದರು.ನಗರದ ಎಕ್ಸಲಂಟ್ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಸಂವಿಧಾನ ದಿನದ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು; ಒಂದು ದೇಶದ ಆಡಳಿತ ಸೂತ್ರ ಹೇಗಿರಬೇಕು, ದೇಶದ ಪ್ರಜೆಗಳಿಗೆ ಯಾವ ರೀತಿಯ ಹಕ್ಕುಗಳಿರಬೇಕು, ಹಕ್ಕುಗಳಿಗೆ ಪ್ರತಿಯಾಗಿ ಎಂಥಹ ಕರ್ತವ್ಯಗಳನ್ನು ನಾವು ಮಾಡಬೇಕು ಎನ್ನುವುದನ್ನು ತಿಳಿಸಿಕೊಡುವ ಭಾರತೀಯ ಸಂವಿಧಾನ ಜಗತ್ತು ಕಂಡಂತ ಅತ್ಯುತ್ತಮವಾದ ಸಂವಿಧಾನ ಎಂದು ಗುರುತಿಸಿಕೊಳ್ಳುತ್ತದೆ. ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಬೇರೆ ಬೇರೆ ದೇಶಗಳ ಸಂವಿಧಾನಗಳನ್ನು ಓದಿ ಅರ್ಥೈಸಿಕೊಂಡು ನಮ್ಮ ದೇಶಕ್ಕೆ ಎಂಥಹ ಸಂವಿಧಾನ ಬೇಕು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ವತಿಯಿಂದ ಗಿರಿಜನ ಉಪಯೋಜನೆಯಡಿ ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಪಡೆಯಲು ಗ್ರಾಮೀಣ ಭಾಗದ ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಕಾರಿ ಸಂಘದ ಪರಿಶಿಷ್ಟ ಪಂಗಡದ ಸದ್ಯಸರು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಜಿಲ್ಲೆಗೆ ಒಟ್ಟು-೦೨ ಗುರಿ ನಿಗದಿಪಡಿಸಲಾಗಿದ್ದು, ಈ ಯೋಜನೆಯಡಿ ಶೇ.೯೦ರಷ್ಟು ಸಹಾಯಧನ ಒದಗಿಸಲಾಗುವುದು.ನಿಗದಿತ ಅರ್ಜಿ ನಮೂನೆಯನ್ನು ಪಡೆದು, ದಿನಾಂಕ : ೧೫-೧೨-೨೦೨೪ರೊಳಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ, ಪಶು ಆಸ್ಪತ್ರೆ ಆವರಣ, ಶಿಕಾರಖಾನೆ ವಿಜಯಪುರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಬಿ ಎಲ್ ಡಿ ಈ ಸಂಸ್ಥೆ, ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರ ಫೆಡರೇಶನ್, ಎನ್ ಎಸ್ ಎಸ್ ಘಟಕ ಇವರ ಸಹಯೋಗದಲ್ಲಿ ಬಿಎಲ್ಡಿಈ ನ್ಯೂ ಕ್ಯಾಂಪಸ್ ನ ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ವಿಜೇತ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ಪಾರಿತೋಷಕ ವಿತರಿಸಲಾಯಿತು.ಜನಪದ ನೃತ್ಯ, ಜನಪದ ಗೀತೆ, ಸಾಯಿನ್ಸ ಮೇಳ, ಕವಿತೆ,ಕಥೆ ಬರೆಯುವುದು, ಚಿತ್ರಕಲೆ, ಘೋಷಣೆ, ಗುಡಿ ಕೈಗಾರಿಕೆ, ನೇಕಾರಿಕೆ, ಕೃಷ್ಟಿ ಉತ್ಪನ್ನಗಳ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದ ಈ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಾಳುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ಧೈವಾಡಿ, ಎಸ್.ಜಿ.ಲೋಣಿ, ನೆಹರು ಯುವ ಕೇಂದ್ರದ ಅಧಿಕಾರಿ ರಾಹುಲ ಡೊಂಗ್ರೆ, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ…
ಆಟೋ-ದ್ವಿಚಕ್ರ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ನಿಗದಿತ ಸ್ಥಳಗಳಲ್ಲಿ ವ್ಯಾಪಾರ-ವಾಹನಗಳ ನಿಲುಗಡೆ ಮಾಡದವರ ಮೇಲೆ ಕಾನೂನು ರಿತ್ಯ ಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬೀದಿ ಬದಿ ವ್ಯಾಪಾರಸ್ಥರಿಗೆ ವೆಂಡಿಂಗ್ ಝೋನ್ ಜಾಗದ ವ್ಯವಸ್ಥೆ ಹಾಗೂ ಆಟೋ-ದ್ವಿಚಕ್ರ ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಜಾಗ ಗುರುತಿಸಲಾಗಿದ್ದು, ಸೂಚಿಸಿರುವ ಸ್ಥಳಗಳಲ್ಲಿ ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಕೈಗೊಳ್ಳದೇ ಇರುವುದು ಮತ್ತು ನಿಗದಿತ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡದೇ ಇರುವುದನ್ನು ಕಂಡು ಬಂದಲ್ಲಿ ಅಂತಹವರ ಮೇಲೆ ಕಾನೂನು ರಿತ್ಯ ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರು ತಿಳಿಸಿದ್ದಾರೆ.ವಿಜಯಪುರ ನಗರದ ಬೀದಿ ಬದಿ ವ್ಯಾಪಾರಸ್ಥರು ಎಲ್ಲೆಂದರಲ್ಲಿ ವ್ಯಾಪಾರ ಮಾಡುವುದನ್ನು ತಡೆಗಟ್ಟಲು ಮಾನ್ಯ ಉಚ್ಛನ್ಯಾಯಾಲಯದ ಆದೇಶದಂತೆ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಮಹಾಪೌರರರ ಮಾರ್ಗದರ್ಶನ ಮತ್ತು ಜಿಲ್ಲಾಧಿಕಾರಿಗಳ ನಿರ್ದೇಶನದಲ್ಲಿ ನಗರದ ಸೌಂದರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ನೆಹರು ಮಾರ್ಕೆಟ್ ಹಿಂಭಾಗ, ಎಂ.ಆರ್.ಹೋಟೆಲ್ ಹತ್ತಿರ, ಕೆಎಸ್‍ಆರ್‍ಟಿಸಿ ಡಿಪೋ ಪಕ್ಕ, ಅಂಬೇಡ್ಕರ್…
ಅಂತರ ಮಹಿಳಾ ಮಹಾವಿದ್ಯಾಲಯಗಳ ಯುವ ಜನೋತ್ಸವ ‘ಶಕ್ತಿ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜೀವನದಲ್ಲಿ ಪ್ರತಿಯೊಬ್ಬರು ಗುರಿಯನ್ನಿಟ್ಟುಕೊಳ್ಳಬೇಕು. ಗುರಿ ಹೊಂದಿದಾಗ ಮಾತ್ರ ಏನನ್ನಾದರೂ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಜೀವನದಲ್ಲಿನ ಎಲ್ಲ ಕಷ್ಟ ಕಾರ್ಪಣ್ಯಗಳನ್ನು ಸಮರ್ಥವಾಗಿ ಎದುರಿಸಿ ಉತ್ತಮ ಸಾಧನೆಗೆ ಮುಂದಾಗಬೇಕು ಎಂದು ವಿದ್ಯಾರ್ಥಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಕರೆ ನೀಡಿದರು.ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಅಂತರ ಮಹಿಳಾ ಮಹಾವಿದ್ಯಾಲಯಗಳ ಯುವ ಜನೋತ್ಸವ ‘ಶಕ್ತಿ ಸಂಭ್ರಮ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅತ್ಯಂತ ಶಿಸ್ತು ಪ್ರದರ್ಶಿಸುವ ಕಾರ್ಯಕ್ರಮ ಇದಾಗಿದೆ. ಒಬ್ಬ ಮಹಿಳೆಯಾಗಿ, ತಾಯಿಯಾಗಿ, ರೈತನ ಮಗಳಾಗಿ ನಾನು ಜೀವನದಲ್ಲಿ ಹಲವು ಏಳುಬೀಳುಗಳನ್ನು ಕಂಡಿದ್ದೇನೆ. ಎಲ್ಲ ಕಷ್ಟ ಕಾರ್ಪಣ್ಯಗಳನ್ನು ಸಮರ್ಥವಾಗಿ ಎದುರಿಸಿ, ಇಂದು ಸಮಾಜದಲ್ಲಿ ಉನ್ನತ ಸ್ಥಾನ ಹೊಂದಿ, ಸರ್ಕಾರದಲ್ಲಿ ಸಚಿವೆಯಾಗಿದ್ದೇನೆ ಎಂದು ಹೇಳಿದರು.ಒಂದು ಕಾಲದಲ್ಲಿ ಮಹಿಳೆ ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತ…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿ, ಗದಗ್ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ತನ್ನ ಪಾಲಕರು ತನ್ನನ್ನು ಪ್ರಶಂಸಿಸಬೇಕು ಎಂಬುದು ಪ್ರತಿ ಮಗುವಿನ ಕನಸು. ಹಾಗೆಯೇ ತಮ್ಮ ಮಕ್ಕಳ ನಡವಳಿಕೆ ನಾಲ್ಕು ಜನ ಮೆಚ್ಚುವ ಆಗಿರಬೇಕು ಎಂಬುದು ಪಾಲಕರ ಆಶಯ. ಮಕ್ಕಳ ಕ್ರಿಯೆಗಳನ್ನು ಅವಹೇಳನ ಮಾಡದೆ, ಶಿಕ್ಷೆ ಕೊಡದೆ ಭಾವನಾತ್ಮಕವಾಗಿ ಅವರಲ್ಲಿ ಶಿಸ್ತನ್ನು ತರುವ, ಆತ್ಮವಿಶ್ವಾಸವನ್ನು ಮೂಡಿಸುವ ನಿಟ್ಟಿನಲ್ಲಿ ಪಾಲಕರು ಕಾರ್ಯನಿರ್ವಹಿಸಲೇಬೇಕು ಎಂದು ಖ್ಯಾತ ಲೇಖಕಿ ಸಾರಾ ಓಕ್ವಲ ಸ್ಮಿತ್ ಹೇಳುತ್ತಾಳೆ.ನಿಜವಲ್ಲವೇ ಆಕೆಯ ಮಾತುಗಳು.ಪ್ರೀತಿಯ ಮಾತು, ವಾತ್ಸಲ್ಯದ ಸಿಂಚನ, ಮಮತೆಯ ಮಡಿಲುಗಳು ಮಕ್ಕಳನ್ನು ಭಾವನಾತ್ಮಕವಾಗಿ ಒಳಗೊಳ್ಳುವ ಮೂಲಕ ಅವರಲ್ಲಿ ಮಹತ್ತರ ಬದಲಾವಣೆಗಳನ್ನು ತರಬಹುದು.ಮಕ್ಕಳ ಮಾನಸಿಕತೆಯನ್ನು ಅರಿಯುವ ಮೂಲಕ ಮಕ್ಕಳ ನಡವಳಿಕೆಯಲ್ಲಿ ತರಬಹುದಾದ ಬದಲಾವಣೆಗಳು ಇಂತಿವೆಪಾಲಕರು ಮತ್ತು ಮಕ್ಕಳ ನಡುವೆ ಭಾವನಾತ್ಮಕ ಸಂಬಂಧ ಬಲವಾಗಿರಬೇಕು. ಭಾವನಾತ್ಮಕ ಬಂಧವು ಮಕ್ಕಳಲ್ಲಿ ನಂಬಿಕೆ, ಸುರಕ್ಷಿತ ಮನೋಭಾವವನ್ನು ಮೂಡಿಸುವ ಮೂಲಕ ಮಕ್ಕಳು ತಮ್ಮ ಪಾಲಕರ ಸಲಹೆ ಮತ್ತು ಶಿಸ್ತು ಬದ್ದತೆಗೆ ಧನಾತ್ಮಕವಾಗಿ ಪ್ರತಿಕ್ರಿಯಿಸುತ್ತಾರೆ.ಮಗುವಿನ ದೈಹಿಕ ಬೆಳವಣಿಗೆಯ ಹಂತಗಳು ಪಾಲಕರಿಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ.ಟಿ. ಆ್ಯಕ್ಟ್ ೧೯೪೯ ರದ್ದು ಮಾಡಬೇಕು ಬಿಹಾರದ ಬುದ್ದಗಯಾ ಮಹಾಬೋಧಿ ಮಹಾ ವಿಹಾರದ ಆಡಳಿತ ಸಂಪೂರ್ಣ ಬೌದ್ಧರಿಗೆ ನೀಡಬೇಕು ಎಂದು ಒತ್ತಾಯಿಸಿ ಭಾರತೀಯ ಬೌದ್ಧ ಮಹಾಸಭಾ, ಅಖಿಲ ಭಾರತ ಬೌದ್ಧ ವೇದಿಕೆ ವಿಜಯಪುರ, ಮತ್ತು ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ರಾಷ್ಟ್ರಪತಿ ಹಾಗೂ ದೇಶದ ಪ್ರಧಾನಿ ಮಂತ್ರಿ ಹಾಗೂ ರಾಜ್ಯದ ರಾಜ್ಯಪಾಲರಿಗೆ, ಮುಖ್ಯಮಂತ್ರಿಗಳಿಗೆ ಅಲ್ಪಸಂಖ್ಯಾತರ ಆಯೋಗದ ಮುಖ್ಯಸ್ಥರಿಗೆ ಮನವಿ ಸಲ್ಲಿಸಲಾಯಿತು.ಆಲ್ ಇಂಡಿಯಾ ಬುದ್ಧಿಸ್ಟ್ ಫೋರಂ ನೇತೃತ್ವದಲ್ಲಿ ೨೬, ನವ್ಹಂಬರ್ ೨೦೨೪ ರಂದು ರಾಷ್ಟ್ರ ಮಟ್ಟದಲ್ಲಿ ಜರುಗುವ ಮಹಾಬೋಧಿ ಮಹಾ ವಿಹಾರ ಮುಕ್ತಿ ಆಂದೋಲನಕ್ಕೆ ಬೆಂಬಲಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಬೌದ್ಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿದರು.ಈ ಸಭೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಆಯು,ಬಸವರಾಜ್ ಹೋಳ್ಕರ್, ಸಂಯೋಜಕರು, ಅಖಿಲ ಭಾರತೀಯ ಬೌದ್ಧ ವೇದಿಕೆಯ ಆಯು ವೆಂಕಟೇಶ್ ವಾಗ್ಯನವರ ಪ್ರಭುಗೌಡ ಪಾಟೀಲ ವಿದ್ಯಾರ್ಥಿ ಪರಿಷತ್ ರಾಜ್ಯ ಅಧ್ಯಕ್ಷರಾದ ಶ್ರೀನಾಥ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಕುವೆಂಪು ಅವರು ಕನ್ನಡ ನಾಡಿನ ಅಸ್ಮಿತೆಯಂತಿದ್ದರು, ಅವರ ಬರಹಗಳನ್ನು ಕಾಲೇಜು ವಿದ್ಯಾರ್ಥಿಗಳಿಗೆ ತಲುಪಿಸುವಲ್ಲಿ ಕುವೆಂಪು ಓದು ಕಮ್ಮಟ ಸಹಕಾರಿಯಾಗಲಿದ್ದು ಅವರ ಕೃತಿಗಳ ಮರುಓದು ಹೊಸವಿಚಾರಗಳನ್ನು ನೀಡುತ್ತದೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಚನ್ನಪ್ಪ ಕಟ್ಟಿ ಹೇಳಿದರು.ಅವರು ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಬೆಂಗಳೂರು ಹಾಗೂ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕುವೆಂಪು ಓದು: ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು.ಕಾಲೇಜಿನ ಪ್ರಾಚಾರ್ಯ ಪ್ರೊ.ರಮೇಶ ಆರ್.ಎಚ್. ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು.ಪ್ರಾಧಿಕಾರದ ಸದಸ್ಯ ಜೆ. ಕರಿಯಪ್ಪ ಮಾಳಿಗೆ ಪ್ರಾಸ್ತಾವಿಕವಾಗಿ ಮಾತನಾಡಿ ಕುವೆಂಪು ಓದು ಕಮ್ಮಟವು ಈ ವರ್ಷದ ಕಾರ್ಯಕ್ರಮಗಳು ಇಂಡಿಯಿಂದಲೇ ಪ್ರಾರಂಭಿಸುತ್ತಿದ್ದೇವೆ, ಮುಂದಿನ ದಿನಗಳಲ್ಲಿ ಕರ್ನಾಟಕದಾದ್ಯಂತ ಭಾಷಾಭಾರತಿ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುತ್ತಿದೆ ಎಂದರು. ಕರ್ನಾಟಕ ರಾಜ್ಯ ಮಹಿಳಾ ವಿವಿ ಸಿಂಡಿಕೇಟ್ ಸದಸ್ಯರಾದ ಪ್ರೊ.ಎಸ್.ಜೆ.ಮಾಡ್ಯಾಳ ಅವರು ವೇದಿಕೆಯಲ್ಲಿದ್ದರು.ಮೊದಲ ಗೋಷ್ಠಿಯಲ್ಲಿ ಕುವೆಂಪು ಅವರ ಕುವೆಂಪು ಅವರ ನಾಟಕಗಳು ಕುರಿತು ಸಂಶೋಧಕ ಡಾ. ಎಸ್.ಕೆ.ಕೊಪ್ಪಾ ಉಪನ್ಯಾಸ ನೀಡಿದರು.೨ನೇ ಗೋಷ್ಠಿಯಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಸುಪರ್ ಸ್ಪೇಶಾಲಿಟಿ ಆಸ್ಪತ್ರೆಗೆ ವಿಜಯಪುರ ರೋಟರಿ ಕ್ಲಬ್ ಉತ್ತರ ವತಿಯಿಂದ ನೀಡಲಾದ ಡೆಡ್ ಬಾಡಿ ಪ್ರಿಜರ್ ರನ್ನು ಜೆ.ಎಸ್.ಎಸ್ ಆಸ್ಪತ್ರೆ ಅಧ್ಯಕ್ಷರು, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಹಾಗೂ ಸಿಇಒ ಡಾ.ಶರಣ ಮಳಖೇಡ್ಕರ್ ರವರು ಈಚೆಗೆ ಸ್ವೀಕರಿಸಿದರು.ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಪದಾಧಿಕಾರಿಗಳಾದ ಡಾ.ಪ್ರಾಣೇಶ ಜಾಗಿರದಾರ, ಡಾ.ಶ್ರೀಪಾದ ಕುಲಕರ್ಣಿ, ದೀಲಿಪಕುಮಾರ ಪೂಜಾರಿ, ಡಾ.ಅಶೋಕ ವಾಲಿ, ಸುಹರ್ಷ ಶಾಹ, ರವಿ ಶಿಲ್ಲೇದಾರ, ಬಸವರಾಜ ಸೊನ್ನದ, ದಿಲೀಪ ತಾಳಿಕೋಟಿ, ಗುರುಶಾಂತ ನಿಡೋಣಿ, ಡಿ.ಎಸ್.ಪಾಟೀಲ ಮತ್ತಿತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಂವಿಧಾನ ಒಂದು ಶ್ರೇಷ್ಠ ಧರ್ಮ. ಈ ಸಂವಿಧಾನ ಧರ್ಮವನ್ನು ನಾವೆಲ್ಲರೂ ಶ್ರದ್ಧೆ, ಪ್ರಾಮಾಣಿಕತೆಯಿಂದ ಪಾಲನೆ ಮಾಡಿದಾಗ ಮಾತ್ರ ದೇಶದ ಪ್ರಜಾಪ್ರಭುತ್ವ ಗಟ್ಟಿಯಾಗಿರುತ್ತದೆ ಎಂದು ಮಹಿಳಾ ವಿವಿಯ ಕುಲಪತಿ ಬಿ.ಕೆ.ತುಳಸಿಮಾಲ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ ಅಧ್ಯಯನ ಕೇಂದ್ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕದ ವತಿಯಿಂದ ಮಂಗಳವಾರ ಆಯೋಜಿಸಿದ್ದ “ಭಾರತದ ಸಂವಿಧಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಂವಿಧಾನದಲ್ಲಿರುವ ಪೀಠಿಕೆಯನ್ನು ನಾವು ಸರಿಯಾಗಿ ಗ್ರಹಿಸಿಕೊಂಡಾಗ ಅದು ನಮ್ಮ ವ್ಯಕ್ತಿತ್ವದ ವಿಕಾಸಕ್ಕೆ ಮತ್ತು ದೈನಂದಿನ ಚಟುವಟಿಕೆಗಳಿಗೆ ಮಾರ್ಗಸೂಚಿಯಾಗುತ್ತದೆ. ಸಂವಿಧಾನದ ಆಶಯಗಳು ಹಾಗೂ ಆಶೋತ್ತರಗಳನ್ನು ನಾವು ಹೇಗೆ ಅನುಸರಿಸುತ್ತೇವೆ ಮತ್ತು ಅದನ್ನು ಪಾಲಿಸುತ್ತೇವೆ ಎಂಬುದು ನಮಗೆ ಮುಖ್ಯವಾಗಬೇಕು ಎಂದರು.ಸಂವಿಧಾನದ ಮೌಲ್ಯಗಳನ್ನು ಕೇವಲ ವಿದ್ಯಾರ್ಥಿಗಳಲ್ಲ, ಶಿಕ್ಷಕರೂ ಪಾಲಿಸಬೇಕು. ಭಾರತೀಯ ಪ್ರಜೆಗಳಾದ ನಾವೆಲ್ಲರೂ ಸಂವಿಧಾನದ ಆದರ್ಶಗಳನ್ನು ಅಳವಡಿಸಿಕೊಂಡು, ಅದರ ಮಾರ್ಗಸೂಚಿಗಳನ್ನು ಜೀವನದಲ್ಲಿ ಪಾಲಿಸುವ ಜವಾಬ್ದಾರಿಯನ್ನು ಹೊತ್ತಿರಬೇಕು. ಇದರಿಂದ ಮಾತ್ರ ನಾವು ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ‍್ಯದಂತೆ ಸಂವಿಧಾನದಲ್ಲಿ…
