Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸರ್ವೇ ನಂ.೪೮೭ರ ಜಾಗವು ವಿವಾದಿತವಾಗಿದ್ದು, ಅದರ ಬಗ್ಗೆ ಸಂಪೂರ್ಣ ಮಾಹಿತಿ ಸಾರ್ವಜನಿಕರಿಗೆ ತಿಳಿಯದೆಯೇ ಸಮಾಜ ಭವನ ನಿರ್ಮಾಣ ಕಾರ್ಯಕೈಗೊಳ್ಳಲಾಗಿದೆ ಎಂದು ಪತ್ರಕರ್ತ ಸಂಗಮೇಶ ಡಿಗ್ಗಿ ಆರೋಪಿಸಿದ್ದಾರೆ.ಈ ಸ್ಥಳದ ಸುತ್ತಮುತ್ತ ಸರ್ಕಾರಿ ಶಾಲೆಗಳು, ಆದರ್ಶ ಶಾಲೆ ಹಾಗೂ ವಿದ್ಯಾರ್ಥಿ ವಸತಿ ನಿಲಯಗಳಿದ್ದು, ಇಲ್ಲಿ ಸಮಾಜ ಭವನ ನಿರ್ಮಾಣವಾದರೆ ಸಭೆ-ಸಮಾರಂಭಗಳ ಕಾರಣದಿಂದ ಉಂಟಾಗುವ ಶಬ್ದಮಾಲಿನ್ಯ ವಿದ್ಯಾರ್ಥಿಗಳ ಅಧ್ಯಯನಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ ಎಂದು ಸಂಗಮೇಶ ಡಿಗ್ಗಿ ತಿಳಿಸಿದ್ದಾರೆ.ಮನವಿ ಸಲ್ಲಸಿ ಮಾತನಾಡಿದ ಅವರು, ಇದೇ ಜಾಗವನ್ನು ಒಂದು ಸಮುದಾಯಕ್ಕೆ ನೀಡಿದರೆ, ಮುಂದಿನ ದಿನಗಳಲ್ಲಿ ಇತರೆ ಸಮುದಾಯಗಳು ಹಾಗೂ ಧರ್ಮದವರೂ ಸಹ ಭವನ ಅಥವಾ ಧಾರ್ಮಿಕ ಕೇಂದ್ರಗಳಿಗಾಗಿ ಇದೇ ರೀತಿಯ ಬೇಡಿಕೆ ಮುಂದಿಡುವ ಸಾಧ್ಯತೆ ಇದ್ದು, ಇದರಿಂದ ಸಾಮಾಜಿಕ ಸೌಹಾರ್ದತೆಗೆ ಧಕ್ಕೆಯಾಗುವ ಆತಂಕ ವ್ಯಕ್ತಪಡಿಸಿದ್ದಾರೆ.ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಜಾತಿ-ಧರ್ಮ ಸಂಬಂಧಿತ ಸಂಘರ್ಷಕ್ಕೆ ಅವಕಾಶ ನೀಡಬಾರದು ಎಂದು ಅವರು ಒತ್ತಾಯಿಸಿದ್ದಾರೆ.ನಗರದಲ್ಲಿ ಸಮುದಾಯ ಭವನ ಅಥವಾ ಧಾರ್ಮಿಕ ಕೇಂದ್ರಗಳನ್ನು ನಿರ್ಮಿಸಬೇಕಾದರೆ, ಲೇಔಟ್‌ಗಳಲ್ಲಿರುವ ಸಿ.ಎ.ಸೈಟ್‌ಗಳಲ್ಲಿ ನಿರ್ಮಿಸಬೇಕು.…
ವಿಜಯಪುರ ಜಿಲ್ಲೆ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಮತ್ತು ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆ ಪೂರ್ಣಗೊಳಿಸಲು ಒತ್ತಾಯ ಉದಯರಶ್ಮಿ ದಿನಪತ್ರಿಕೆ ತಾಳಿಕೋಟೆ: ಬೂದಿಹಾಳ- ಪೀರಾಪೂರ ಏತ ನೀರಾವರಿ ಯೋಜನೆ ಸಂಪೂರ್ಣ ಅನುಷ್ಠಾನಗೊಳಿಸುವುದು ವಿಜಯಪುರ ಜಿಲ್ಲೆ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶ್ರೀ ಖಾಸ್ಗತೇಶ್ವರ ಮಠದ ಬಾಲಶಿವಯೋಗಿ ಸಿದ್ದಲಿಂಗ ದೇವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ವಾಸುದೇವ ಮೇಟಿ ಬಣ) ತಾಲೂಕ ಘಟಕದ ನೇತೃತ್ವದಲ್ಲಿ ರೈತರು ಪಟ್ಟಣದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ತಾಳಿಕೋಟೆ ತಾಲೂಕಿನ ಹಾಗೂ ಸುರಪೂರ ಭಾಗದ ರೈತರ ಪ್ರತಿಭಟನಾ ಮೆರವಣಿಗೆಗೆ ಶ್ರೀ ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು ಚಾಲನೆ ನೀಡಿ ಆಶೀರ್ವಚನ ನೀಡಿದರು.ಅಲ್ಲಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಬಸವೇಶ್ವರ ವೃತ್ತಕ್ಕೆ ತಲುಪಿ ಅಲ್ಲಿ ಮಾನವ ಸರ್ಪಳಿ ನಿರ್ಮಿಸಿ ಕೆಲ ಹೊತ್ತು ರಸ್ತೆ ತಡೆ ನಡೆಸಿ ಯೋಜನೆ ವಿಳಂಬ ಖಂಡಿಸಿ…
ಯುವಸಿರಿ ಸೌಹಾರ್ದ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ ಉದಯರಶ್ಮಿ ದಿನಪತ್ರಿಕೆ ತಾಳಿಕೋಟೆ: ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಕೂಲಿಕಾರ್ಮಿಕರು, ಸಣ್ಣ ವ್ಯಾಪಾರಸ್ಥರು, ದಿನಗೂಲಿ ನೌಕರರ ಸ್ವಸಹಾಯ ಗುಂಪುಗಳು ಹಾಗೂ ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಆರ್ಥಿಕವಾಗಿ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಈ ಯುವಸಿರಿ ಸೌಹಾರ್ದ ಸಹಕಾರಿ ಸಂಘವನ್ನು ಸ್ಥಾಪಿಸಲಾಗಿದೆ ಎಂದು ಯರನಾಳ ಯುವಸಿರಿ ಸೌ.ಸ.ಸಂ.ಅಧ್ಯಕ್ಷರಾದ ಶಂಕರಗೌಡ ಪಾಟೀಲ ಹೇಳಿದರು.ಗುರುವಾರ ತಾಲೂಕಿನ ಹಿರೂರು ಗ್ರಾಮದಲ್ಲಿ ಸಂಘದ ಹತ್ತನೇ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಬಾಗೇವಾಡಿ ತಾಲೂಕಿನ ಯರನಾಳ ಗ್ರಾಮದಲ್ಲಿ ೨೦೦೧ರಲ್ಲಿ ಆರಂಭವಾದ ಈ ಸಂಘವು ಕೇವಲ ೫ ವರ್ಷಗಳಲ್ಲಿ ೧೦ ಶಾಖೆಗಳನ್ನು ಹೊಂದಿದ್ದು, ೨೫ ಕೋಟಿ ಠೇವಣಿ, ೩೦ ಕೋಟಿ ದುಡಿಯುವ ಬಂಡವಾಳ ಹಾಗೂ ೧.೫ ಕೋಟಿ ಶೇರು ಬಂಡವಾಳ ಹೊಂದಿ ಪ್ರಗತಿ ಹಂತದಲ್ಲಿದೆ. ಸಂಘವು ವಿಶೇಷವಾಗಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ವಿಶೇಷ ಒತ್ತು ಕೊಟ್ಟು ಕೆಲಸ ಮಾಡುತ್ತಿದೆ. ಗ್ರಾಮೀಣ ಜನರ ಆರ್ಥಿಕ ಸಂಕಷ್ಟವನ್ನು ದೂರ ಮಾಡಿ ಸುಲಭವಾಗಿ ಸಾಲ ಸೌಲಭ್ಯ ಒದಗಿಸುವ ಮೂಲಕ…
ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ದೇಶದ ಶಕ್ತಿಯಾಗಲಿರುವ ಯುವ ಜನತೆ ದುಶ್ಚಟಗಳಿಂದ ದೂರವಿದ್ದು ದೇಶದ ಪ್ರಗತಿಗೆ ಆಸರೆಯಾಗಬೇಕು ಎಂದು ಮದರ್ ತೆರೆಸಾ ಪಿಯು ಕಾಲೇಜಿನ ಪ್ರಾಚಾರ್ಯ ಶಶಿಕಾಂತ ಪತ್ತಾರ ಹೇಳಿದರು.ಪಟ್ಟಣದ ಮದರ್ ತೆರೆಸಾ ಪದವಿ ಪೂರ್ವ ಕಾಲೇಜಿನಲ್ಲಿ ತಂಬಾಕು ಮುಕ್ತ ಜಾಗೃತಿ ಹಾಗೂ ಪ್ರತಿಜ್ಞಾ ವಿಧಿಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತಂಬಾಕು ಮುಕ್ತ ಪ್ರತಿಜ್ಞೆ ಬೋಧಿಸಿದ ಬಳಿಕ ಮಾತನಾಡಿದ ಅವರು, ತಂಬಾಕು ಸೇವನೆ ಮಾಡುವುದರಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮಗಳು ಬೀರುತ್ತವೆ. ಜೊತೆಗೆ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು ಹಾಗೂ ಉಸಿರಾಟದ ಸಮಸ್ಯೆಗಳಂತಹ ಮಾರಕ ರೋಗಗಳಿಗೆ ಕಾರಣವಾಗುತ್ತದೆ. ವಿದ್ಯಾರ್ಥಿ ಜೀವನವು ಭವಿಷ್ಯ ರೂಪಿಸುವ ಅಮೂಲ್ಯ ಹಂತವಾಗಿದ್ದು, ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯಕರ ಜೀವನವನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಇಂದಿನ ಯುವಜನರು ಸ್ನೇಹಿತರ ಒತ್ತಡಕ್ಕೆ ತಂಬಾಕು ಸೇವನೆಗೆ ಒಳಗಾಗುವ ಸಂಭವ ಹೆಚ್ಚಿದೆ. ಆದ್ದರಿಂದ ವಿದ್ಯಾರ್ಥಿಗಳು ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದರೊಂದಿಗೆ ಕುಟುಂಬ ಮತ್ತು ಸಮಾಜದಲ್ಲಿಯೂ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದ ಅವರು ತಂಬಾಕು…
ನಗರ ಹಾಗೂ ತಾಲೂಕು ಕೇಂದ್ರಗಳಲ್ಲಿ ಹಾಲು ಪರೀಕ್ಷಾ ಕೇಂದ್ರಗಳನ್ನು (ಲ್ಯಾಬ್) ಸ್ಥಾಪಿಸಲು ಒತ್ತಾಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಕೆಮಿಕಲ್ ಮಿಶ್ರಿತ ವಿಷಯುಕ್ತ ಹಾಲು ವಿತರಣೆಯಾಗುತ್ತಿದ್ದು, ಅದನ್ನು ತಡೆಗಟ್ಟಲು ಆಗ್ರಹಿಸಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರು ಗುರುವಾರ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರು, ಹಲವಾರು ತಿಂಗಳುಗಳಿಂದ ನಮ್ಮ ವಿಜಯಪುರ ಜಿಲ್ಲೆ ಹಾಗೂ ನಗರದಲ್ಲಿ ನೆರೆಯ ಮಹಾರಾಷ್ಟ್ರದಿಂದ ಮತ್ತು ಬೇರೆ ತಾಲೂಕುಗಳಿಂದ ಕೆಮಿಕಲ್ ನಿಂದ ತಯಾರಿಸಿದ ಹಾಲು ಪೂರೈಸುತ್ತಿರುವುದು ಕಂಡು ಬಂದಿದೆ. ಯಾವುದೇ ಕಂಪನಿಯ ಪ್ಯಾಕೇಟ್ ಇಲ್ಲದೆ ಕ್ಯಾನುಗಳಲ್ಲಿ ಇದನ್ನು ತಂದು ಜನಸಾಮಾನ್ಯರ ಮನೆಗಳಿಗೆ ಇಂತಹ ಹಾಲನ್ನು ವಿತರಿಸುತ್ತಿದ್ದಾರೆ. ಇದನ್ನು ತಡೆಗಟ್ಟಲು ವಿಜಯಪುರ ನಗರ ಹಾಗೂ ಸುತ್ತಮುತ್ತಲಿನ ತಾಲೂಕುಗಳಲ್ಲಿ ಹಾಲು ಪರೀಕ್ಷಾ ಕೇಂದ್ರಗಳನ್ನು(ಲ್ಯಾಬ್) ಸ್ಥಾಪಿಸಿ ಹಾಲನ್ನು ವಿತರಿಸುವವರು ಕಡ್ಡಾಯವಾಗಿ ಇಲ್ಲಿ ಪರೀಕ್ಷಿಸಿ ನಂತರ ವಿತರಿಸಬೇಕು ಎಂದು ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಬೇಕು. ನಿರ್ಜನ ಪ್ರದೇಶದಲ್ಲಿ ಇದನ್ನು ತಯಾರಿಸುತ್ತಿದ್ದು, ಈ ಹಾಲನ್ನು ಸೇವಿಸಿದ ಜನರಲ್ಲಿ…
ದಲಿತ ಸೇನೆ ಚಡಚಣ ತಾಲೂಕು ನೂತನ ಪದಾಧಿಕಾರಿಗಳ ಆಯ್ಕೆ | ಮಹಾದೇವ ಬನಸೋಡೆ ಕರೆ ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ಶೋಷಿತರು, ನೊಂದವರು ಹಾಗೂ ಸಮಾಜದ ವಂಚಿತ ವರ್ಗಗಳ ಧ್ವನಿಯಾಗಿ ಕಾರ್ಯನಿರ್ವಹಿಸುವ ಸಂಕಲ್ಪದೊಂದಿಗೆ ದಲಿತ ಸೇನೆ ಚಡಚಣ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ದಲಿತ ಸೇನೆ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಅವರ ಆದೇಶದ ಮೇರೆಗೆ ಹಾಗೂ ವಿಜಯಪುರ ಜಿಲ್ಲಾಧ್ಯಕ್ಷ ಖಾಜು ಹೊಸಮನಿ ಅವರ ನೇತೃತ್ವದಲ್ಲಿ ಚಡಚಣ ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ವಿಶೇಷ ಸಭೆಯಲ್ಲಿ ಗುರುವಾರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಹಿರಿಯ ಮುಖಂಡ ಮಹಾದೇವ ಬನಸೋಡೆ, ಸಂಘಟನೆಯಲ್ಲಿ ಜವಾಬ್ದಾರಿ ವಹಿಸಿಕೊಂಡವರು ಹುದ್ದೆಗೆ ಮಾತ್ರ ಸೀಮಿತರಾಗದೆ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.ನೊಂದವರು ಹಾಗೂ ತುಳಿತಕ್ಕೊಳಗಾದವರ ಪರವಾಗಿ ನಿರಂತರ ಹೋರಾಟ ನಡೆಸುವ ಮನೋಭಾವ ಬೆಳೆಸಿಕೊಳ್ಳಬೇಕು. ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರನ್ನು ಸಮಾನವಾಗಿ ಕಾಣುವ ಮೂಲಕ ಸಮಾಜದಲ್ಲಿ ಸೌಹಾರ್ದತೆ ಮತ್ತು…
15 ವರ್ಷಗಳಿಂದ ಹದಗೆಟ್ಟ ರಸ್ತೆ | ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ಗುಂದವಾನದಿಂದ ಶೀಗಣಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ವಹಿವಾಟು ರಸ್ತೆ ಕಳೆದ ಸುಮಾರು ಹದಿನೈದು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ.ಈ ಕುರಿತು ಹಲವು ಬಾರಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ರೈತ ಮಲ್ಲಿಕಾರ್ಜುನ ತುಪ್ಪದ ಮಾತನಾಡಿ, “ಈ ರಸ್ತೆಯ ದುಸ್ಥಿತಿಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಹಿಡಿದು ಗ್ರಾಮ ಪಂಚಾಯತ್ ಅಧಿಕಾರಿಗಳವರೆಗೆ ಎಲ್ಲರ ಗಮನಕ್ಕೆ ತಂದಿದ್ದೇವೆ. ಆದರೆ ಕಣ್ಣಿದ್ದೂ ಕುರುಡರು, ಕಿವಿಯಿದ್ದೂ ಕಿವುಡರಂತೆ ಅಧಿಕಾರಿಗಳು ವರ್ತಿಸುತ್ತಿದ್ದಾರೆ. ಶಾಲಾ ವಿದ್ಯಾರ್ಥಿಗಳ ಹಾಗೂ ರೈತರ ಸಂಕಷ್ಟ ಯಾರಿಗೂ ಕಾಣುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.ರೈತ ತುಕಾರಾಮ ಕರಗಣಿ ಮಾತನಾಡಿ, “ಸುಮಾರು 15 ವರ್ಷಗಳಿಂದ ರಸ್ತೆ ದುರಸ್ತಿಯಾಗಿಲ್ಲ.…
ವಿಜಯಪುರ ದಲ್ಲಿ ವಿಶ್ವ ಹಾವುಗಳ ದಿನವನ್ನು ಉದ್ಘಾಟಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿಗಳಿಗೆ ಹಾವುಗಳ ಕುರಿತು ಜಾಗೃತಿ ಮತ್ತು ಹಾವು ರಕ್ಷಕರಿಗೆ ಸ್ನೇಕ್ ಕ್ಯಾಚಿಂಗ್ ಕಿಟ್ ಹಾಗೂ ಆರೋಗ್ಯ ಕಾರ್ಡ್ ವಿತರಿಸುವ ಮೂಲಕ ವಿಶ್ವ ಹಾವುಗಳ ದಿನವನ್ನು ನಗರದಲ್ಲಿ ವಿನೂತನ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಯಿತು.ಗುರುವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮತ್ತು ವಿಜಯಪುರ ಅರಣ್ಯ ಇಲಾಖೆ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಹಾವುಗಳ ಬಗ್ಗೆ ಇರುವ ಮೂಢ ನಂಬಿಕೆಗಳನ್ನು ತೊರೆದು ಅವುಗಳನ್ನು ರಕ್ಷಿಸುವ ಮೂಲಕ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.ಬೆಳಗಾವಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ ಮಾತನಾಡಿ, ಕಾಡು ಪ್ರಾಣಿಗಳು ಹಾಗೂ ವನ್ಯಜೀವಿಗಳೊಂದಿಗೆ ಸುರಕ್ಷಿತ…
ವಿಧಾನಸೌಧದಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ ಮತ್ತು ಎಂ.ಬಿ.ಪಾಟೀಲ ನೇತೃತ್ವದಲ್ಲಿ ಸಣ್ಣ ನೀರಾವರಿ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳ ಜತೆ ಸಭೆ | ಸಂಪುಟಕ್ಕೆ ವಿಷಯ ಮಂಡನೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ವಿಜಯಪುರ ಜಿಲ್ಲೆ, ಬಬಲೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಮದಾಪುರ ಕೆರೆಯಲ್ಲಿ ನೀರು ತುಂಬಿದಾಗ ಮುಳುಗಡೆ ಆಗುವ 178 ಎಕರೆ ಜಮೀನನ್ನು ರೈತರ ಕೋರಿಕೆಯ ಮೇರೆಗೆ ಭೂಸ್ವಾಧೀನಕ್ಕೆ ಸಕಾರಾತ್ಮಕ ತೀರ್ಮಾನವಾಗಿದ್ದು ಈ ವಿಷಯವನ್ನು ಸಂಪುಟದ ಮುಂದೆ ತರಲು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.ಈ ಸಂಬಂಧವಾಗಿ ಗುರುವಾರ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಮತ್ತು ಎಂ ಬಿ ಪಾಟೀಲ ಇಬ್ಬರೂ ವಿಧಾನಸೌಧದಲ್ಲಿ ಸಣ್ಣ ನೀರಾವರಿ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳ ಜತೆ ಸಭೆ ನಡೆಸಿದರು.ಮುಳುಗಡೆ ಪ್ರದೇಶದ ರೈತರಿಗೆ ಆಗುತ್ತಿರುವ ಅನಾನುಕೂಲ ಮತ್ತು ನಷ್ಟ ತಪ್ಪಿಸಲು ಸ್ವಾಧೀನದ ಅಗತ್ಯ ಇದ್ದು, ಆದಷ್ಟು ಬೇಗ ಈ ಕುರಿತು ಸಂಪುಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.ಕ್ಷೇತ್ರದ ಶಾಸಕರೂ ಆದ…
ಬಬಲೇಶ್ವರದಲ್ಲಿ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯುವಕರು ವೃತ್ತಿಪರ ಕ್ರೀಡಾಪಟುಗಳಾಗಲು ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಬುಧವಾರ ಬಬಲೇಶ್ವರದಲ್ಲಿ ದಿ. ಶ್ರೀ ಬಿ. ಎಂ. ಪಾಟೀಲ ಅವರ ಸ್ಮರಣಾರ್ಥ ಶಾಂತವೀರ ಕ್ರಿಕೆಟ್ ಕ್ಲಬ್ ಮತ್ತು ಶ್ರೀ ಸುನೀಲಗೌಡ ಪಾಟೀಲ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಬಬಲೇಶ್ವರ ಪ್ರೀಮಿಯರ್ ಲೀಗ್ ಸೀಸನ್-2 ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರಧಾನ ಮಾಡಿ ಅವರು ಮಾತನಾಡಿದರು.ಯುವಕರು ದೇಶದ ಅಮೂಲ್ಯ ಸಂಪತ್ತು. ಈ ಯುವಕರು ದೈಹಿಕ ಮತ್ತು ಮಾನಸಿಕವಾಗಿ ಸದೃಢರನ್ನಾಗಿ ಮಾಡಿ ಉತ್ತಮ ಆರೋಗ್ಯ ಹೊಂದಲು ಕ್ರೀಡೆಗಳು ಬಹುಪಯೋಗಿಯಾಗಿವೆ. ಹೀಗಾಗಿ ಬಬಲೇಶ್ವರ ಪ್ರೀಮಿಯರ್ ಲೀಗ್ ಕ್ರಿಕೆಟ್ ಸೇರಿದಂತೆ ನಾನಾ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಸ್ಪೋರ್ಟ್ಸ್ ಅಕ್ಯಾಡೆಮಿ ಮೂಲಕವೂ ಮಕ್ಕಳಿಗೆ ಬಾಲ್ಯದಿಂದಲೇ ಕ್ರಿಕೆಟ್, ಫುಟಬಾಲ, ಹಾಕಿ, ಬಾಸ್ಕೆಟ್ ಬಾಲ್, ಟೆನಿಕಾಯ್ಟ್, ಬ್ಯಾಡ್ಮಿಂಟನ್, ಟೆನಿಸ್ ಸೇರಿದಂತೆ ನಾನಾ…
