Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಇದೇ ನವೆಂಬರ್ ೨೭ ರಿಂದ ೨೯ ರವರೆಗೆ ಮೂರು ದಿನಗಳ ಕಾಲ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವ ‘ಶಕ್ತಿ ಸಂಭ್ರಮ’ ಹಮ್ಮಿಕೊಳ್ಳಲಾಗಿದೆ.ದಿ.೨೭ ರಂದು ಬೆಳಿಗ್ಗೆ ೧೧:೦೦ ಗಂಟೆಗೆ ವಿವಿಯ ಆಡಳಿತ ಭವನದ ಮುಂಭಾಗದಲ್ಲಿ ನಿರ್ಮಿಸಿರುವ ವಿಶೇಷ ವೇದಿಕೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮಹಿಳಾ ಮಹಾವಿದ್ಯಾಲಯಗಳ ಯುವಜನೋತ್ಸವ ‘ಶಕ್ತಿ ಸಂಭ್ರಮ’ ಉದ್ಘಾಟಿಸಲಿದ್ದಾರೆ. ನಗರ ಶಾಸಕರಾದ ಬಸನಗೌಡ ಆರ್ ಪಾಟೀಲ್ (ಯತ್ನಾಳ್) ಅಧ್ಯಕ್ಷತೆ ವಹಿಸಲಿದ್ದಾರೆ.ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬೃಹತ್ ಮತ್ತು ಮಾಧ್ಯಮ ಕೈಗಾರಿಕೆ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಡಾ.ಎಂ.ಬಿ. ಪಾಟೀಲ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ, ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ ತುಳಸಿಮಾಲ ಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಸಂಸದರಾದ ರಮೇಶ ಚಂ ಜಿಗಜಿಣಗಿ, ಡಾ.ಸುಧಾ ಮೂರ್ತಿ, ಶಾಸಕರಾದ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಇತ್ತಿಚಗೆ ಸಿಂದಗಿಯಲ್ಲಿ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಎಚ್.ಜಿ ಕಲಾ,ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯಗಳ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಮಹಾವಿದ್ಯಾಲಯಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಚಡಚಣದ ಸಂಗಮೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಪ್ರಥಮ ಸ್ಥಾನವನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಪ್ರಥ್ವಿ ಮುಂಡೇವಾಡಿ ಭಕ್ತಿ ಗೀತೆಯಲ್ಲಿ ಪ್ರಥಮ ಸ್ಥಾನ ಮತ್ತು ಚಿನ್ಮಯ ಸಾಂಗೋಲಿ ಮತ್ತು ಶಿವರಾಜಕುಮಾರ ಬನಪೂರೆ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಉಪ ನಿರ್ದೇಶಕ ಸಿ.ಕೆ.ಹೊಸಮನಿ, ಸಂಗೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯ ಮನೋಜ ಕಟಗೇರಿ, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಭಗವದ್ಗೀತೆಯಲ್ಲಿ ಆಧ್ಯಾತ್ಮ, ಮನ:ಶಾಸ್ತ್ರ, ನೀತಿ ಶಾಸ್ತ್ರ, ಆರೋಗ್ಯ ವಿಜ್ಞಾನ ಹೀಗೆ ಎಲ್ಲಾ ಜ್ಞಾನಗಳು ಅಡಗಿವೆ ಎಂದು ಶಿಕ್ಷಕ ಸುಖದೇವ ಹಂಜಗಿ ಹೇಳಿದರು.ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರದಲ್ಲಿ ಶಿರಸಿಯ ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಯತಿವರೇಣ್ಯರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಆಯೋಜಿಸಿರುವ ಭಗವದ್ಗೀತಾ ಅಭಿಯಾನ ಕರ್ನಾಟಕ-೨೦೨೪ ಸಂಬಂಧಿ ಶ್ಲೋಕ ಪಠಣ ಕೇಂದ್ರದಲ್ಲಿ ಅವರು ಮಾತನಾಡಿದರು.ಭಗವದ್ಗೀತೆಯ ಎಲ್ಲ ಅಧ್ಯಾಯಗಳನ್ನು ಓದಿಕೊಂಡು ಅದರಲ್ಲಿನ ಜ್ಞಾನವನ್ನು ನಮ್ಮಲ್ಲಿ ಅಳವಡಿಸಿಕೊಂಡಲ್ಲಿ ನಮ್ಮ ಭವಿಷ್ಯ ಉಜ್ವಲವಾಗುವದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.ಈ ವೇಳೆ ಅಭಿಯಾನದ ಸಂಚಾಲಕ ರಾಮಚಂದ್ರ ಹೆಗಡೆ, ಪ್ರಶಿಕ್ಷಕಿ ರಂಜಿತಾ ಹೆಗಡೆ, ಮಂಜುನಾಥ ಪಡದಾಳಿ, ವಿನಾಯಕ ನಾಗರಾಳ, ರೂಪಾ ನಾಟಿಕರ್, ಅನ್ನಪೂರ್ಣ ನಾಗರಾಳ, ಗುರುಬಾಯಿ ತಂಗಡಗಿ, ಭಾಗ್ಯ ಸಿದ್ದಾಪೂರ, ಮೀನಾಕ್ಷಿ ಗಣಚಾರಿ, ಅನ್ನಪೂರ್ಣ ಹೊಸಮನಿ ಸೇರಿದಂತೆ ಇತರರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಜಿಲ್ಲಾ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದಿಂದ ಸನ್ಮಾನ ಸ್ವೀಕರಿಸಿದ ತಾಲೂಕು ಜಾನಪದ ಪರಿಷತ್ ನ ಅಧ್ಯಕ್ಷ ಎ.ಆರ್.ಮುಲ್ಲಾ ಅವರಿಗೆ ವಿವಿಧಪರ ಸಂಘಟನೆಗಳಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ಈ ವೇಳೆ ರೈತ ಸಂಘದ ಸಂಗಣ್ಣ ಬಾಗೇವಾಡಿ, ಸಾಹಿತಿ ಪ್ರೊ.ಪ್ರಕಾಶ ನರಗುಂದ, ಪ್ರೊ.ಎಸ್.ಕೆ.ಹರನಾಳ, ಮುಖ್ಯಗುರುಗಳಾದ ಟಿ.ಎನ್.ರೂಢಗಿ, ಎಲ್.ಎಂ.ಚಲವಾದಿ, ಕಜಾಪ ಖಜಾಂಚಿ ಎಸ್.ವಾಯ್.ವಗ್ಗರ, ಸದಸ್ಯ ಬಸವರಾಜ ಹರನಾಳ, ಎಂ.ಪಿ.ವಾಳದವರ ಸೇರಿದಂತೆ ಇತರರು ಇದ್ದರು.

Read More

ಚನ್ನವೀರಸ್ವಾಮೀಜಿ ಪ್ರತಿಷ್ಠಾನದಿಂದ ಕೃಷಿ ವಿಜ್ಞಾನಿ ಪದ್ಮಶ್ರೀ ಡಾ.ಸುಬ್ಬಯ್ಯ ಅಯ್ಯಪ್ಪನ್ ಅವರಿಗೆಭಾಸ್ಕರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು ಎಂಬ ನಾಣ್ಣುಡಿಯಂತೆ ನಮ್ಮ ಜೀವನದಲ್ಲಿ ಆಧ್ಯಾತ್ಮಿಕತೆಯ ಜೊತೆಗೆ ವಿಷಯದ ಎಲ್ಲ ಶಾಸ್ತ್ರಗಳು ಅತ್ಯವಶ್ಯಕ ಎಂದು ಎಂದು ಖ್ಯಾತ ಕೃಷಿ ವಿಜ್ಞಾನಿ ಪದ್ಮಶ್ರೀ ಡಾ. ಸುಬ್ಬಯ್ಯ ಅಯ್ಯಪ್ಪನ್ ಹೇಳಿದರು.ಸಿಂದಗಿ ಪಟ್ಟಣದ ಸಾರಂಗಮಠದ ಪೂಜ್ಯಶ್ರೀ ಚೆನ್ನವೀರ ಮಹಾಸ್ವಾಮೀಜಿ ಪ್ರತಿಷ್ಠಾನದಿಂದ ದೇಶದ ಶ್ರೇಷ್ಠ ವಿಜ್ಞಾನಿಗಳಿಗೆ ಖ್ಯಾತ ಖಗೋಳಶಾಸ್ತ್ರಜ್ಞ ಭಾಸ್ಕರಾಚಾರ್ಯ-೨ ಹೆಸರಿನ ಮೇಲೆ ಕೊಡಮಾಡುವ ಭಾಸ್ಕರ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.ಈ ದೇಶದ ಪ್ರಗತಿ ಕೃಷಿ ಮತ್ತು ಅನ್ನದಾತನ ಮೇಲೆ ಅವಲಂಬಿತವಾಗಿದೆ. ಎಲ್ಲ ಕ್ಷೇತ್ರಗಳಿಗಿಂತ ಕೃಷಿ ಕ್ಷೇತ್ರ ಅತ್ಯಂತ ಪವಿತ್ರ. ಮಣ್ಣಿನ ಸುವಾಸನೆ, ಮಣ್ಣಿನ ಸಂಬಂಧ, ಮತ್ತು ಮಣ್ಣಿನ ಸಂಪರ್ಕ ನಮಗೆ ಹೆಚ್ಚಿಗೆ ಆದಷ್ಟು ಜೀವನದಲ್ಲಿ ಹೆಚ್ಚು ಅನುಭವ ಮೂಡುತ್ತದೆ. ಮಾಧ್ಯಮ ಮತ್ತು ಸಮೂಹ ಸಂವಹನಗಳು ರೈತರಿಗೆ ಹೆಚ್ಚು ಅನುಕೂಲವನ್ನು ಮಾಡಿಕೊಡುವುದರಿಂದ ಇಂದು ರೈತ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದಾನೆ.…

Read More

ಬಿ.ಎಲ್.ಡಿ.ಇ.ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ | ೭೬ ನೇ ಎನ್‌ಸಿಸಿ ರೈಸಿಂಗ್ ದಿನಾಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದಿನ ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ಇದ್ದರೆ ಮಾತ್ರ ಗುರಿ ಮುಟ್ಟಲು ಸಾಧ್ಯ.ತಮ್ಮಲ್ಲಿ ಮೊದಲು ಶಿಸ್ತುನ್ನು ಅಳವಡಿಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ವಿಜಯಪುರದ ೩೬ ಕರ್ನಾಟಕ ಬಟಾಲಿಯನ್ ಎನ್‌ಸಿಸಿ ಕಮಾಂಡಿಂಗ್ ಅಧಿಕಾರಿ ಗಿರೀಷ್ ಶಿಂಧೆ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ,ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯ, ಸರ್ಕಾರಿ ಪದವಿ ಪೂರ್ವ ಕಾಲೇಜು, ಅಂಜುಮನ್ ಪದವಿ ಕಾಲೇಜು, ಎಸ್.ಎಸ್ ಪಿಯು ಕಾಲೇಜು, ಬಿ.ಎಲ್.ಡಿ.ಇ ವಿದ್ಯಾರ್ಥಿನಿಯರ ಹೈ ಸ್ಕೂಲ್ ಮತ್ತು ವಿಜಯಪುರದ ೩೬ ಕರ್ನಾಟಕ ಬಟಾಲಿಯನ್ ಎನ್‌ಸಿಸಿ ಸಂಯೋಜನೆಯಡಿಯಲ್ಲಿನ ಎನ್ ಸಿ ಸಿ ೭೬ ನೇ ರೈಸಿಂಗ್ ದಿನಾಚರಣೆ ಕಾರ್ಯಕ್ರವನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಾವು ಗುರಿ ಮುಟ್ಟಬೇಕೆಂದರೆ ತಮ್ಮಲ್ಲಿ ಮೊದಲು ತಮ್ಮಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳಬೇಕು. ತಮ್ಮ ಕೆಲಸ ಕಾರ್ಯಗಳನ್ನು ತಾವೇ ಮಾಡಿಕೊಳ್ಳಬೇಕು. ಇದರಿಂದ ನಿಮ್ಮಲ್ಲಿ ಸಮಯ ಪ್ರಜ್ಞೆ…

Read More

ಲೇಖನ- ಡಾ.ಶಶಿಕಾಂತ ಪಟ್ಟಣ -ರಾಮದುರ್ಗC-103 SANGRIA APARTMENT, MEGAPOLIS, 3RD PHASE HINJEWADI, PUNE – 411057 MAHARSTRHA. ಉದಯರಶ್ಮಿ ದಿನಪತ್ರಿಕೆ ಈ ಜನಪದ ನುಡಿಯಿಂದಾ ಕೇತಯ್ಯನು ಮಲೆನಾಡಿನ ಬೇಲೂರನವನಾಗಿದ್ದನು ಎಂದು ತಿಳಿದು ಬರುತ್ತದೆ. ಅಲ್ಲದೆ ಆತನು ಕಲ್ಯಾಣಕ್ಕೆ ಬರುವ ಪೂರ್ವದಲ್ಲಿ ಶಿವ ಭಕ್ತನಾಗಿದ್ದನು. ದಟ್ಟ ಕಾಡಿನೊಳಗೆ ಅಲೆಯುತ್ತ ಸ್ವಾಭಿಮಾನಿ ಜೀವನ ನಡೆಸಿದನು ಕೇತಯ್ಯ.ಮೇದಾರ ಕೇತಯ್ಯನ ವಚನಾಂಕಿತ “ಗವರೇಶ್ವರ” ಸುಮಾರು ಹದಿನಾಲ್ಕು ವಚನಗಳು ಲಭ್ಯವಾಗಿವೆ. (14 ).ಗವರಗ ಎಂದರೆ ಬಿದಿರು ಕಾಯಕ, ಮೊರ, ಬುಟ್ಟಿ,ತೊಟ್ಟಿಲು, ನಿಚ್ಚಣಿಕೆ ಮುಂತಾದ ಬಿದಿರಿನಿಂದ ಉತ್ಪನ್ನವಾಗುವ ಸಿದ್ಧ ವಸ್ತುಗಳು. ಕೇತಯ್ಯ ತನ್ನ ವಚನಗಳಲ್ಲಿ ಬಸವಣ್ಣ, ಪ್ರಭುದೇವ, ಚೆನ್ನಬಸವಣ್ಣ, ಘಟ್ಟಿವಾಳಯ್ಯ, ಸಿದ್ಧರಾಮ, ಶಂಕರ ದೇವಾ, ಮಡಿವಾಳ ಮಾಚಿದೇವ ಮುಂತಾದ ಶರಣರನ್ನು ಸ್ಮರಿಸುತ್ತಾನೆ. ತಾನು ಮಾಡುವ ಕಾಯಕದ ಮೂಲಕತನ್ನ ಲಿಂಗಾಂಗ ಸಾಮರಸ್ಯ ಕಂಡುಕೊಂಡ ಶ್ರೇಷ್ಠ ಶರಣ.ಕೇತಯ್ಯ ನಿನ್ನ ಮಡದಿ I ಸಾತವ್ವಳೆ೦ಬವಳು |ಜಾತಿ ಮೇದರದು ಕಸುಬಿನಲಿ I ನಾಡೊಳಗೆನೀತಿ ಶಿವಮತದ ಒರೆಗಲ್ಲು||ಕೇತಯ್ಯನ ಮಡದಿ ಸಾತವ್ವ ಮತ್ತು ಅವರ ಮೂಲ ಕಸುಬು…

Read More

’ಜಯ್ ನುಡಿ’ (ವ್ಯಕ್ತಿತ್ವ ವಿಕಸನ ಲೇಖನ ಮಾಲೆ) ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರು,ಬೆಳಗಾವಿ, ಮೊ:೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನಮ್ಮಲ್ಲಿ ಬಹುತೇಕ ಜನರು ಗುರಿ ಮುಟ್ಟದೇ ವಿಫಲರಾಗಲು ಕಾರಣ ಸಂವಹನ ಕಲೆ ಗೊತ್ತಿಲ್ಲದೇ ಇರುವುದು. ಅದರಲ್ಲೂ ಅಪರಿಚಿತರೊಂದಿಗೆ ಮಾತನಾಡಲು ಭಯಗೊಳ್ಳುವುದು ಸಾಮಾನ್ಯ. ಮಾತಿನ ಕಲೆ ತಲೆ ಎತ್ತಿ ನಡೆಯುವುದನ್ನು ದೈರ್ಯವನ್ನು ತುಂಬುತ್ತದೆ. ಕರಗತ ಮಾಡಿಕೊಂಡರೆ ಅಪರಿಚಿತರೊಂದಿಗೆ ಮಾತು ಹೇಗೆ ಆರಂಭಿಸಬೇಕೆಂಬುದು ಸಲೀಸಾಗಿ ಬಿಡುತ್ತದೆ. ನಾಲ್ಕಾರು ಜನರ ಗುಂಪಿನಲ್ಲಿರುವಾಗ ಏನು ಮಾತನಾಡುವುದೆಂದು ತಿಳಿಯದೆ ಆ ಕಡೆ ಈ ಕಡೆ ನೋಡುತ್ತ ನಿಂತು ಬಿಡುತ್ತೇವೆ. ಅವರಲ್ಲಿ ನಾವೂ ಒಬ್ಬರೆಂಬ ಭಾವನೆ ಬರದೇ ಅವರ ಇರುವಿಕೆಯನ್ನು ಸಂತಸದಿಂದ ಕಳೆಯದೆ ಪೇಚಾಡುತ್ತೇವೆ. ಉಸಿರುಗಟ್ಟಿದ ವಾತಾವರಣದಲ್ಲಿ ನಿಂತಂತೆನಿಸಿ ಅಲ್ಲಿಂದ ಹೊರ ನಡೆದರೆ ಸಾಕೆಂದು ಅನಿಸುವುದೂ ಉಂಟು. ಅಂಥ ಸಮಯದಲ್ಲಿ ನೀವೂ ಅವರಲ್ಲೊಬ್ಬರು ಅಂತೆನಿಸಲು ಹೇಗೆ ಮಾತನಾಡಬೇಕೆಂದು ಯೋಚಿಸುತ್ತೀರಿ ಆದರೆ ಮಾತನಾಡಿ ಏನಾದರೂ ತಪ್ಪಾದರೆಂದು ಬಾಯಿ ಮುಚ್ಚಿಕೊಂಡಿರುತ್ತೀರಿ. ನಡೆಯುತ್ತಿರುವ ಸಂಭಾಷಣೆಯಲ್ಲಿ ನೀವೂ ಭಾಗ ತೆಗೆದುಕೊಳ್ಳಬೇಕೆಂದರೆ ಏನು ಮಾಡಬೇಕೆಂಬುದಕ್ಕೆ ಇಲ್ಲಿವೆ ಕೆಲವು ಸಲಹೆಗಳು.ಸಾಮಾನ್ಯವಾದುದನ್ನು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಕದಾಸ ಬಡಾವಣೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ೧೫೦ ಸಂಖ್ಯಾಬಲಕ್ಕೆ ಅನುಗುಣವಾಗಿ ಹತ್ತು ವಿದ್ಯಾರ್ಥಿಗಳಿಗೆ ಅಗತ್ಯ ಸೌಕರ್ಯವುಳ್ಳ ಕಟ್ಟಡ ಬಾಡಿಗೆಗಾಗಿ ಅರ್ಜಿ ಆಹ್ವಾನಿಸಿಲಾಗಿದೆ. ವಸತಿ ನಿಲಯಕ್ಕಾಗಿ ಬಾಡಿಗೆ ಕಟ್ಟಡ ಒದಗಿಸಲು ಆಸಕ್ತಿ ಇರುವ ಕಟ್ಟಡ ಮಾಲೀಕರು ದಿನಾಂಕ: ೨೨-೧೧-೨೦೨೪ ರೊಳಗಾಗಿ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಡಿ. ದೇವರಾಜ್ ಅರಸು ಭವನ, ಜಿಲ್ಲಾ ಪಂಚಾಯತ್ ಕಚೇರಿ ಹತ್ತಿರ ಕನಕದಾಸ ಬಡಾವಣೆ ಇವರಿಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: ೦೮೩೫೨-೨೬೭೯೯೩, ಮೊಬೈಲ್ ೯೬೧೧೫೧೮೪೭೬ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸಕ್ತ ೨೦೨೪-೨೫ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ-ಅತಿವೃಷ್ಟಿಯಿಂದ ವಿಜಯಪುರ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಉಂಟಾದ ಬೆಳ ಹಾನಿ ಪರಿಹಾರವನ್ನು ಪಾವತಿಸಲು ಬೆಳೆ ಹಾನಿಯಾದ ರೈತರ ಪಟ್ಟಿ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಆಯಾ ತಹಶೀಲ್ದಾರರು, ಆಯಾ ಗ್ರಾಮ ಪಂಚಾಯತ್ ಮತ್ತು ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ನವೆಂಬರ್ ೧೯ರಂದು ಪ್ರಕಟಿಸಲಾಗಿದೆ.ಪ್ರಕಟಿತ ಪಟ್ಟಿಗೆ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ತಹಶೀಲ್ದಾರ-ಕೃಷಿ ತೋಟಗಾರಿಕೆ ಇಲಾಖೆಗಳ ತಾಲೂಕಾ ಕಚೇರಿಗಳಲ್ಲಿ ೦೭ ದಿನಗಳೊಳಗಾಗಿ ದಿ:೨೮-೧೧-೨೦೨೪ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದ್ದು, ಜಿಲ್ಲೆಯ ಅಂತರ್ಜಾಲ ವಿಳಾಸ https://vijayapura.nic.inದಲ್ಲಿಯೂ ಸಹ ಪರಿಶೀಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More