Author: editor.udayarashmi@gmail.com

ವಿಜಯಪುರದಲ್ಲಿ ೨ದಿನಗಳ ಉದ್ಯೋಗ ಮೇಳ | ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಬಡ ಪ್ರತಿಭಾವಂತ ಐಟಿಐ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಚಿವ ಎಂ.ಬಿ.ಪಾಟೀಲ ಅವರ ಆಶಯದಂತೆ ಟೊಯೊಟಾ ಕಂಪನಿ ವಿಜಯಪುರದಲ್ಲಿಯೇ ಎರಡು ದಿನಗಳ ಉದ್ಯೋಗ ಮೇಳ ಆಯೋಜಿಸಿದೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಕಂಪನಿಗಳು ಉದ್ಯೋಗ ಮೇಳ ಏರ್ಪಡಿಸಲು ಸಚಿವರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ ಎಂದು ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಹೇಳಿದ್ದಾರೆ.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಪಾಲಿಟೆಕ್ನಿಕ್ ನಲ್ಲಿ ಇಂದು ಬುಧವಾರದಿಂದ ಆರಂಭವಾಗಿರುವ ಎರಡು ದಿನಗಳ ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದಾಗಿ ಎಂಜನಿಯರಿಂಗ್ ಮತ್ತಿತರ ಕೋರ್ಸುಗಳಿಗೆ ಪ್ರವೇಶ ಪಡೆಯಲಾಗದೆ ಐಟಿಐ ಮತ್ತು ಡಿಪ್ಲೋಮಾ ಓದುತ್ತಾರೆ. ಈ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಲು ಇಂಥ ಉದ್ಯೋಗ ಮೇಳಗಳು ನೆರವಾಗಲಿವೆ. ಟೊಯೊಟಾ ಕಿರ್ಲೋಸ್ಕರ್ ಕಂಪನಿಯವರು ಮಾನವೀಯ ಮೌಲ್ಯಗಳೊಂದಿಗೆ ಸಿಬ್ಬಂದಿಯ ಹಿತ ಕಾಪಾಡುವ…

Read More

ಇಂದು (ನ.೨೧) ‘ವಿಶ್ವ ಮೀನುಗಾರಿಕಾ ದಿನ’ ನಿಮಿತ್ತ ಈ ವಿಶೇಷ ಲೇಖನ ಲೇಖನಡಾ.ಗೌತಮ್ ಆರ್. ಚೌಧರಿರಾಷ್ಟ್ರೀಯ ಉಪಾಧ್ಯಕ್ಷರು, ರಾಷ್ಟ್ರೀಯ ಮೀನುಗಾರರ ಸಂಘ ಉದಯರಶ್ಮಿ ದಿನಪತ್ರಿಕೆ ಸಮುದ್ರ ಬಹುರತ್ನಾ ವಸುಂಧರಾ. ಮುತ್ತು, ರತ್ನ, ವಜ್ರ, ವೈಡೂರ್ಯ ಇತ್ಯಾದಿ ಹಲವು ಅಮೂಲ್ಯ ಹರಳುಗಳಿಗೆ ಆಗರ ಈ ಸಾಗರ. ಜೊತೆಗೇ ಮೀನೂ ಸೇರಿದಂತೆ ದೊಡ್ಡ ಮಟ್ಟದ ಸಮುದ್ರಜೀವಿಗಳ ರಾಶಿಯೂ ಇಲ್ಲಿದೆ. ಇದು ಬಹುದೊಡ್ಡ ಮಾನವ ಸಮುದಾಯವನ್ನೂ ಪೊರೆಯುತ್ತಿದೆ. ಸಮುದ್ರದ ಒಡಲು ಇಷ್ಟು ಮೌಲ್ಯವಾದುದೇನೋ ನಿಜ. ಹಾಗಂತ, ಸಾಗರ ಎಲ್ಲ ಮಾಲಿನ್ಯಕಾರಕ ವಸ್ತುಗಳಿಗೂ ಆಕರ ಎಂದೇನಲ್ಲ. ಮನುಷ್ಯನ ಚಟುವಟಿಕೆಗಳ ಪರಿಣಾಮವಾಗಿ ಈ ರತ್ನಗರ್ಭೆ ಇಂದು ‘ಮಲಿನಗರ್ಭೆ’ಯಾಗುತ್ತಿದೆ. ಹೀಗಾಗದಂತೆ ಎಚ್ಚರಿಸಿ, ವಿವೇಕಯುತ ಮೀನುಗಾರಿಕೆಗೆ ಪ್ರೇರೇಪಿಸುವ ದಿನವೇ ನ.೨೧ ರ ‘ವಿಶ್ವ ಮೀನುಗಾರಿಕಾ ದಿನ’.ಈ ದಿನವು ನಮಗೆ ಸಮುದ್ರದ ಸಂಪತ್ತನ್ನು ರಕ್ಷಿಸುವ ಮತ್ತು ಮೀನುಗಾರಿಕೆ ಉದ್ಯಮದ ಸ್ಥಿರತೆಯನ್ನು ಕಾಪಾಡಿಕೊಳ್ಳುವ ಅಗತ್ಯತೆಯನ್ನು ನೆನಪಿಸುತ್ತದೆ. ನಾವು ಒಟ್ಟಾಗಿ ಸುಸ್ಥಿರ ಮೀನುಗಾರಿಕೆ ಪದ್ಧತಿಗಳನ್ನು ಅನುಸರಿಸುವುದು, ಸಮುದ್ರ ಮಾಲಿನ್ಯವನ್ನು ತಡೆಗಟ್ಟುವುದು ಮತ್ತು ಹವಾಮಾನ ಬದಲಾವಣೆಯ ಪರಿಣಾಮಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಂತ ಕನಕದಾಸರ ಸಮಾನತೆಯ ಕಳಕಳಿಯುಳ್ಳ ಚಿಂತನೆಗಳು ಸರ್ವಕಾಲಕ್ಕೂ ಶ್ರೇಷ್ಠವಾಗಿದ್ದು, ಅವರ ಬದುಕೇ ನಮಗೆಲ್ಲ ಆದರ್ಶದ ಹೊತ್ತಿಗೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಅವರು ತಾಲೂಕಿನ ನಾಗಠಾಣ ಗ್ರಾಮದಲ್ಲಿ ಶ್ರೀ ಭೀರದೇವರ ದೇವಸ್ಥಾನ ಸಮೀತಿ ವತಿಯಿಂದ ಹಮ್ಮಿಕೊಂಡ ಸಂತ ಕನಕದಾಸರ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಮಾತನಾಡಿದರು.ದಾಸರು ಹೊಸಗನ್ನಡ ಸಾಹಿತ್ಯ ಕೋಗಿಲೆಯಾಗಿ, ಸಮಾಜದಲ್ಲಿದ್ದ ಮೇಲು-ಕೀಳು, ಬಡವ-ಬಲ್ಲಿದ ಎಂಬ ಬೇಧಭಾವ ದೂರ ಮಾಡಿ ಸಮಸಮಾಜ ನಿರ್ಮಿಸಿದ ವಿಶ್ವಬಂಧು ಸಂತಕವಿಯಾಗಿದ್ದಾರೆ. ಅವರ ಚಿಂತನೆಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ ಅರಕೇರಿ ಮಾತನಾಡಿ, ಸರಳ ಕನ್ನಡದಲ್ಲಿ ಕೀರ್ತನೆಗಳನ್ನು ರಚನೆ ಮಾಡಿ, ಸಮಾಜದಲ್ಲಿರುವ ಮೂಢ ನಂಬಿಕೆ, ಮೌಢ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾದ ಕನಕರ ಚಿಂತನೆ ಇಂದಿಗೂ ಪ್ರಸ್ತುತ ಎಂದು ಹೇಳಿದರು.ಭೀರದೇವರ ಪಟ್ಟದ ಪೂಜಾರಿ ಗೂಳಪ್ಪ ಪೂಜಾರಿ, ಪೂಜಣ್ಣ ಪೂಜಾರಿ, ಸಮಿತಿಯ ಕಾರ್ಯದರ್ಶಿ ಸುರೇಶ ಗಿರಿಸಾಗರ, ಸದಸ್ಯ ಬಸವರಾಜ ಹೊಸಟ್ಟಿ, ವಿಶ್ವನಾಥ ಕಲಗೊಂಡ, ಗ್ರಾಪಂ…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಅನುಧಾನಿತ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿಗಳು ಸಿಂದಗಿಯ ಆರ್ ಡಿ ಪಾಟೀಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ೨೦೨೪-೨೫ ನೇ ಸಾಲಿನ ಮತದಾರರ ಸಾಕ್ಷರತಾ ಸಂಘದ ಅಡಿಯಲ್ಲಿ ತಾಲೂಕು ಮಟ್ಟದ ರಸಪ್ರಶ್ನೆ ಹಾಗೂ ಇಂಗ್ಲೀಷ ಪ್ರಭಂದ ಸ್ಪರ್ಧೆಗಳಲ್ಲಿ ಕುಮಾರಿ ಗುರುಬಾಯಿ ಕರಗಾರ ಹಾಗೂ ಲಕ್ಷ್ಮೀ ತೊಗಾಯಿ ಪ್ರಥಮ ಸ್ಥಾನ ಹಾಗೂ ಇಂಗ್ಮೀಷ ಪ್ರಬಂದ ಸ್ಪರ್ಧೆಯಲ್ಲಿ ಕುಮಾರಿ ಮಲ್ಲಿಕಾ ಪಡೇಕನೂರ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ವಿಧ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯರು, ಇಎಲ್‌ಸಿ ಕ್ಲಬ್ ಸಂಚಾಲಕ ಬಸವರಾಜ್ ಕುಂಬಾರ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಜಗನ್ಮಾತಾ ಶ್ರೀ ಕಾಳಿಕಾದೇವಿ ದೇವಸ್ಥಾನ ಭೂಮಿ ಪೂಜಾ ಸಮಾರಂಭ | ಧರ್ಮಸಭೆ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಕಾಯಕ ತತ್ವದಲ್ಲಿ ನಂಬಿಕೆ ಇಟ್ಟ ವಿಶ್ವಕರ್ಮ ಸಮಾಜದ ಬಾಂಧವರು ಎಲ್ಲರನ್ನೂ ಪ್ರೀತಿಸುವ ವಿಶಾಲ ಹೃದಯ ಹೊಂದಿದವರಾಗಿದ್ದು, ಸಮಾಜಕ್ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ದೇವರಹಿಪ್ಪರಗಿ ಶಾಸಕರಾದ ರಾಜುಗೌಡ ಪಾಟೀಲ ಕುದರಿಸಾಲೊಡಗಿ ಹೇಳಿದರು.ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮದ ಶ್ರೀ ಕಾಳಿಕಾದೇವಿ ದೇವಸ್ಥಾನ ಸಮಿತಿ ವತಿಯಿಂದÀ ಹಮ್ಮಿಕೊಂಡ ದೇವಸ್ಥಾನ ಭೂಮಿ ಪೂಜಾ ಮತ್ತು ಧರ್ಮಸಭೆ ಸಮಾರಂಭದಲ್ಲಿ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಜಗನ್ಮಾತೆ ಶ್ರೀ ಕಾಳಿಕಾದೇವಿ ದೇವಸ್ಥಾನದ ಭೂಮಿ ಪೂಜೆ ನೆರವೇರಿಸಿದ್ದು ನನ್ನ ಸೌಭಾಗ್ಯವಾಗಿದೆ. ದೇವಸ್ಥಾನ ನಿರ್ಮಾಣಕ್ಕಾಗಿ ನನ್ನ ಅನುದಾನದ ಜೊತೆಗೆ ವೈಯಕ್ತಿಕವಾಗಿಯೂ ನಾನು ಆರ್ಥಿಕ ಸಹಾಯ ಮಾಡುತ್ತೇನೆ ಎಂದರು.ನಂತರ ನಡೆದ ಧರ್ಮಸಭೆಯಲ್ಲಿ ಶ್ರೀ ಕಾಳೀಕಾದೇವಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಪ್ರಭುಗೌಡ ಲಿಂಗದಳ್ಳಿ ಅವರು ಜಗವೆಲ್ಲ ನಗುತಿರಲು ಜಗದ ನೋವು ನನಗಿರಲಿ ಎಂಬಂತೆ ಎಲ್ಲಾ ಸಮುದಾಯಗಳ ಸಂತೋಷವನ್ನು ಬಯಸುವ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಅಂಚೆ ಇಲಾಖೆ ಹಲವು ವರ್ಷಗಳಿಂದ ಕೇವಲ ಸಂವಹನ ಹಾಗೂ ಪತ್ರವ್ಯವಹಾರಗಳ ನಿರ್ವಹಣೆಗೆ ಸೀಮಿತವಾಗಿತ್ತು. ಆದರೆ ಇಂದು ಬ್ಯಾಂಕ್‌ಗಳಂತೆ ಭ್ರಷ್ಟಾಚಾರರಹಿತ, ಸಾರ್ವಜನಿಕ ಆರ್ಥಿಕತೆ ವ್ಯವಹಾರಗಳ, ಜನಸ್ನೇಹಿ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿದೆ, ಎಂದು ವಿಜಯಪೂರ ಜಿಲ್ಲೆಯ ಅಂಚೆ ಅಧೀಕ್ಷಕ ಎಂ ಕುಮಾರಸ್ವಾಮಿ ಹೇಳಿದರು.ತಾಲೂಕೀನ ತಡವಲಗಾ ಗ್ರಾಮದ ಅಂಚೆ ಕಛೇರಿ ಆವರಣದಲ್ಲಿ ನಡೆದ ತಡವಲಗಾ ಉಪ ಅಂಚೆ ಕಛೇರಿಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಡವಲಗಾ ಗ್ರಾಮದಲ್ಲಿ ಉಪ ಅಂಚೆ ಕಛೇರಿಯಾಗಿ ಒಂದು ವರ್ಷವಾಗಿದೆ. ಲಿಂಗದಳ್ಳಿ, ನಿಂಬಾಳ ಹಂಜರಗಿ, ಹಿರೇರೂಗಿ, ಗುಂಡು ತಂಡಾ, ಹೀಗೆ ಆರು ಬ್ರ್ಯಾಂಚ್ ಅಂಚೆ ಕಚೇರಿಗಳು ಈ ಗ್ರಾಮದ ಉಪ ಅಂಚೆ ಕಛೇರಿಯ ವ್ಯಾಪ್ತಿಯಲ್ಲಿ ಬರುತ್ತವೆ. ಇದರಿಂದ ಸಾರ್ವಜನಿಕರು ಕಛೇರಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ಜಿಲ್ಲಾ ಅಂಚೆ ಕಛೇರಿಯ ಉಪ ಅಧೀಕ್ಷಕರಾದ ಬಿ.ಎಸ್. ದಾಸರ ಮಾತನಾಡಿ, ಭಾರತ ಸರಕಾರ ಬಡವರ ಹಾಗೂ ಕೂಲಿ ಕಾರ್ಮಿಕರಿಗೆ ಮತ್ತು ರೈತರಿಗೆ ಪ್ರಧಾನ ಮಂತ್ರಿ ಜೀವ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜದಲ್ಲಿ ಸಮಾನತೆಗಾಗಿ ಹೋರಾಡಿದ ಭಕ್ತಶ್ರೇಷ್ಠ ಕನಕದಾಸರ ತತ್ವಾದರ್ಶಗಳು ಎಲ್ಲರಿಗೂ ಸದಾ ದಾರಿದೀಪವಾಗಿವೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ಸೋಮವಾರ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಅವರು ಕನಕದಾಸ ಭಾವಚಿತ್ರಕ್ಕೆ ಪೂಜೆ ಪುಷ್ಪಾರ್ಚನೆ ಮೂಲಕ ನಮನ ಸಲ್ಲಿಸಿದ ಬಳಿಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. .ಭಕ್ತಿ ಪಂಥದ ಕಾಲದಲ್ಲಿ ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರು ಮುಂಚೂಣಿಯಲ್ಲಿದ್ದರು. ಕನ್ನಡ ಸಾಹಿತ್ಯದ ಮೂಲಕ ಅವರು ಜಾತಿ ವ್ಯವಸ್ಥೆಯ ಅಂಕುಡೊಂಕುಗಳನ್ನು ತಿದ್ದಿದ್ದಾರೆ. ಕನಕದಾಸರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಾಗಿಲ್ಲ. ಅವರಿಗೆ ಸರ್ವ ಸಮುದಾಯಗಳಲ್ಲಿ ಭಕ್ತರಿದ್ದಾರೆ. ಇಂಥ ಮಹಾನ್ ಸಂತರ ಬಗ್ಗೆ ನಾವೆಲ್ಲರೂ ಇನ್ನೂ ಹೆಚ್ಚಿನ ಮಟ್ಟದಲ್ಲಿ ಪ್ರಚಾರ ಮಾಡುವ ಮೂಲಕ ಅವರ ತತ್ವಗಳು ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸುವ ಕೆಲಸ ಮಾಡಬೇಕಿದೆ ಎಂದು ಸುನೀಲಗೌಡ ಪಾಟೀಲ ಹೇಳಿದರು.ಈ ಸಂದರ್ಭದಲ್ಲಿ ಬಬಲಾದಿಯ ಶ್ರೀ ಅಪ್ಪಾಜಿ ಹಿರೇಮಠ, ಮುಖಂಡರಾದ ಬಸವರಾಜ ಲೋಕುರಿ, ವಿ. ಎಸ್. ಪಾಟೀಲ,…

Read More

ಸಿಎಂ ಜೊತೆಗೆ ಸಭೆ | ನಿರ್ಧಾರ ವಾಪಸ್ ಪಡೆದ ಫೆಡರೇಷನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಷನ್ ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಫೆಡರೇಷನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್‌ ಕರ್ನಾಟಕ ನಾಳೆ ಕರೆ ನೀಡಿದ್ದ ಮದ್ಯ ಮಾರಾಟ ಬಂದ್ ಕರೆಯನ್ನು ವಾಪಸ್ ಪಡೆದುಕೊಂಡಿದೆ. ಸಿಎಂ ಸಿದ್ದರಾಮಯ್ಯ ಸಂಘದ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಹಿನ್ನೆಲೆ ಈ ನಿರ್ಧಾರ ಕೈಗೊಂಡಿದ್ದಾರೆ.ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಸೇರಿದಂತೆ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಸೋಸಿಯೇಷನ್ ಒಂದು ದಿನ ಪ್ರತಿಭಟನೆ ನಡೆಸಲು ಮಂದಾಗಿತ್ತು. ಬಂದ್‌ಗೂ ಮುನ್ನಾ ದಿನವಾದ ಇಂದು ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಂಘದ ಸದಸ್ಯರನ್ನು ಭೇಟಿಯಾಗಿ ಸಿದ್ದರಾಮಯ್ಯ ಮಾತುಕತೆ ನಡೆಸಿದರು.ಈ ವೇಳೆ ಸಂಘದವರ ಬೇಡಿಕೆಗಳನ್ನು ಈಡೇರಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.ಪ್ರತಿಭಟನೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದ ರಾಜ್ ಹೆಗ್ಡೆ ತಿಳಿಸಿದರು.ಅಸೋಸಿಯೇಷನ್ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುವುದು, ಸರ್ಕಾರಕ್ಕೆ ಹೆಚ್ಚಿನ ಆದಾಯ ಬರುವಲ್ಲಿ ಲಿಕ್ಕರ್ ಮಾರಾಟಗಾರರನ್ನು ಬೆಂಬಲಿಸಲು ಸೂಕ್ತ ಕ್ರಮ…

Read More

ಲಿಂ.ಕಾಯಕಯೋಗಿ ಚೆನ್ನವೀರ ಮಹಾಸ್ವಾಮೀಜಿಯವರ ೧೩೧ನೇಯ ಜಯಂತೋತ್ಸವ | ಸಾರಂಗಶ್ರೀ ಕೃಷಿ ಪ್ರಶಸ್ತಿ ಪ್ರಧಾನ | ಸುನೀಲ ನಾರಾಯಣಕರ ಗೆ ಪ್ರಶಸ್ತಿ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಲಿಂ.ಚೆನ್ನವೀರ ಮಹಾಸ್ವಾಮಿಗಳು ತಮ್ಮ ಬದುಕಿನುದ್ದಕ್ಕೂ ಕೃಷಿಯ ಜೀವನವನ್ನು ಮೈಗೂಡಿಸಿಕೊಂಡವರು. ಶೈಕ್ಷಣಿಕ ಮತ್ತು ಸಾಮಾಜಿಕ ಕಾರ್ಯವನ್ನು ಮಾಡುವುದರ ಜೊತೆಗೆ ಕೃಷಿ ಕ್ಷೇತ್ರಕ್ಕೂ ಹೆಚ್ಚು ಒತ್ತು ನೀಡುವ ಮೂಲಕ ಕಾಯಕಯೋಗಿ ಯಾದವರು ಎಂದು ಮರೆಗುದ್ದಿ ಅಡವಿ ಸಿದ್ದೇಶ್ವರ ಮಠದ ಡಾ.ನಿರುಪಾಧೀಶ್ವರ ಮಹಾಸ್ವಾಮಿಗಳು ಹೇಳದರು.ಸಿಂದಗಿಯ ಸಾರಂಗಮಠದ ಪರಮಪೂಜ್ಯ ಲಿಂಗೈಕ್ಯ ಕಾಯಕಯೋಗಿ ಚೆನ್ನವೀರ ಮಹಾಸ್ವಾಮೀಜಿಯವರ ೧೩೧ನೇಯ ಜಯಂತೋತ್ಸವ ನಿಮಿತ್ಯವಾಗಿ ಲಿಂಗೈಕ್ಯ ಶ್ರೀಗಳ ಹೆಸರಿನ ಮೇಲೆ ಕೊಡಮಾಡುವ ಸಾರಂಗಶ್ರೀ ಕೃಷಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶ್ರೀಗಳ ಬದುಕು ನಿಜವಾಗಲೂ ಒಂದು ಇತಿಹಾಸ. ಅವರ ವ್ಯಕ್ತಿತ್ವದ ಬಗ್ಗೆ ಅವರ ಕಾರ್ಯದ ಬಗ್ಗೆ ನಾವು ಸದಾ ಸ್ಮರಿಸಿಕೊಂಡು ಅವರ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ತತ್ವ ಸಿದ್ದಾಂತಗಳನ್ನು ಇಂದಿನ ಯುವ ಪೀಳಿಗೆಗೆ ಪಸರಿಸುವ ಕಾರ್ಯ ಶ್ರೀಮಠದಿಂದ…

Read More

ಓತಿಹಾಳ ಗ್ರಾಮದ ಪಿಕೆಪಿಎಸ್ ಬ್ಯಾಂಕಿನಲ್ಲಿ ನಡೆದ ಘಟನೆ | ಆಡಳಿತ ಮಂಡಳಿ ಅವ್ಯವಹಾರ ತನಿಖೆಗೆ ಆಗ್ರಹ | ಶಿವಾಜಿ ಮೆಟಗಾರ ಆರೋಪ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಓತಿಹಾಳ ಗ್ರಾಮದ ಪಿಕೆಪಿಎಸ್ ಬ್ಯಾಂಕಿನಲ್ಲಿ ೨೦೨೪ರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಯಾಗಿ ಸಂಗಮ್ಮ ಕೊರಬು ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಸದರಿ ಸಂಘದ ಅಧ್ಯಕ್ಷರನ್ನು ಒಳಗೊಂಡು ನಿರ್ದೇಶಕರು ಸಂಘದ ಸಭೆಯಲ್ಲಿ ದುರಾಡಳಿತದಿಂದ ೧೫.೧೧.೨೦೨೪ರ ತುರ್ತು ಸಭೆಯಲ್ಲಿ ಹಣ ದುರುಪಯೋಗ ಮಾಡಿಕೊಂಡಿದಲ್ಲದೆ ವಜಾಗೊಂಡಿದ್ದ ಕಾರ್ಯದರ್ಶಿ ಅಂಬಣ್ಣ ಹೂಗಾರ ಅವರನ್ನು ಕಾರ್ಯದರ್ಶಿಯಾಗಿ ಮರು ನೇಮಕ ಮಾಡಿಕೊಳ್ಳಲು ಸಭೆಯ ನಕಲಿ ಠರಾವು ಪಾಸ್ ಮಾಡಿದ್ದಾರೆ ಎಂದು ತಳವಾರ ಸಮಾಜದ ರಾಜ್ಯ ಮಹಾಸಭಾ ಅಧ್ಯಕ್ಷ ಶಿವಾಜಿ ಮೆಟಗಾರ ಆರೋಪಿಸಿದರು.ಸಿಂದಗಿ ತಾಲೂಕಿನ ಓತಿಹಾಳ ಗ್ರಾಮದ ಪಿಕೆಪಿಎಸ್ ಬ್ಯಾಂಕಿನಲ್ಲಿ ನಡೆಯುತ್ತಿರುವ ಆಡಳಿತ ಮಂಡಳಿಯ ಅವ್ಯವಹಾರವನ್ನು ಕೂಡಲೇ ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿ ತಳವಾರ ಸಮಾಜದ ರಾಜ್ಯ ಮಹಾಸಭಾದಿಂದ ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಕಾನೂನಾತ್ಮಕವಾಗಿ ನಿರ್ದೇಶಕರಾಗಿ…

Read More