Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಬಡ ಮಕ್ಕಳಿಗೆ, ಬಾಣಂತಿಯರಿಗೆ ಪೌಷ್ಟಿಕ ಅಹಾರ ದೊರಬೇಕು ಎನ್ನುವ ಉದ್ದೇಶದಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಲವು ಯೋಜನೆಗಳನ್ನು ರೂಪಿಸಿವೆ. ಸಾರ್ವಜನಿಕರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಹೇಳಿದರು.ಪಟ್ಟಣದ ಖಾಸಗಿ ಹೋಟಲ್ ಒಂದರಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಇಲಾಖೆ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪೌಷ್ಟಿಕ ದಿನಾಚರಣೆ ಮತ್ತು ಬೇಟಿ ಪಡಾವೋ ಬೇಟಿ ಬಚಾವೋ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಯೋಜನೆಗಳ ಸದುಪಯೋಗ ಪಡೆದುಕೊಳ್ಳದ ಕಾರಣ ಹಲವು ಮಕ್ಕಳಲ್ಲಿ, ಬಾಣಂತಿಯರಲ್ಲಿ ಪೌಷ್ಟಿಕಾಂಶದ ಕೊರತೆ ಕಾಣುತ್ತಿದ್ದೇವೆ. ಸರ್ಕಾರಗಳು ಜಾರಿಗೆ ತಂದಂಥ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಜವಾಬ್ದಾರಿ ಅಂಗನವಾಡಿ ಕಾರ್ಯಕರ್ತರ ಮೇಲಿದೆ. ಫಲಾನುಭವಿಗಳಿಗೆ ತಲುಪಬೇಕಾದ ಪೌಷ್ಟಿಕಾಂಶಗಳನ್ನು ತಲುಪಿಸುವ ಕಾರ್ಯವನ್ನು ಚಾಚೂ ತಪ್ಪದೇ ಪಾಲಿಸುವಂತೆ ತಿಳಿಸಿದರು.ತಾಲೂಕು ಆರೋಗ್ಯ ಅಧಿಕಾರಿ ಸತೀಶ ತಿವಾರಿ ಮಾತನಾಡಿ, ಹಲವು ಗರ್ಭಿಣಿಯರಲ್ಲಿ ಪೌಷ್ಟಿಕಾಂಶದ ಕೊರತೆ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬಿಜೆಪಿ ಪಕ್ಷವನ್ನು ಬಲಿಷ್ಠಗೊಳಿಸಲು ಸದಸ್ಯತ್ವ ಅಭಿಯಾನ ನೋಂದಣಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹೇಳಿದರು.ತಾಲೂಕಿನ ಯಂಕಂಚಿ ಗ್ರಾಮದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಂಡ ಸದಸ್ಯತ್ವ ಅಭಿಯಾನದಲ್ಲಿ ಮನೆ ಮನೆಗೆ ಭೇಟಿ ನೀಡಿ ಬಿಜೆಪಿ ಸದಸ್ಯತ್ವ ನೋಂದಣಿ ಮಾಡಿಸಿ ಮಾತನಾಡಿದ ಅವರು, ದೇಶದಾದ್ಯಂತ ಸ್ವ-ವ್ಯಾಪಾರ ಮಾಡುವವರಿಗೆ ಪ್ರದಾನಮಂತ್ರಿ ಸ್ವನಿಧಿ ಯೋಜನೆ ನೀಡುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅವಕಾಶ ಮಾಡಿಕೊಟ್ಟ ಪಿಎಂ ಮೋದಿ ಅವರಿಗೆ ಬೆಂಬಲ ನೀಡಲು ತಮ್ಮ ಕುಟುಂಬದ ಸದಸ್ಯರೆಲ್ಲರೂ ಬಿಜೆಪಿ ಸದಸ್ಯತ್ವ ಪಡೆಯುವಂತೆ ಮನವಿ ಮಾಡಿಕೊಂಡರು.ಈ ವೇಳೆ ಶ್ರೀಶೈಲಗೌಡ ಬಿರಾದಾರ ಯಂಕಂಚಿ, ಎಸ್.ಆರ್.ಪಾಟೀಲ, ಮಹಾಂತೇಶ ಸಾತಿಹಾಳ, ಎಸ್.ಎನ್ ಹಿರೇಮಠ, ಶಿವಾನಂದಗೌಡ ಪಾಟೀಲ, ರಾಜಶೇಖರ ನಗನೂರ, ಗೊಲ್ಲಾಳ್ಳಪ್ಪಗೌಟ ಪಾಟೀಲ, ಮಾಳು ಗುಡಿಹಾಳ, ಪ್ರಶಾಂತ ಕೊಪ್ಪಳ ಸೇರಿದಂತೆ ಗ್ರಾಮಸ್ಥರು, ಪಕ್ಷದ ಕಾರ್ಯಕರ್ತರು ಇದ್ದರು.
ರೂ೨೦ಲಕ್ಷ ಅನುದಾನದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿ ಪೂಜೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣ ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಆ ನಿಟ್ಟಿನಲ್ಲಿ ಸಿಂದಗಿಯ ಪ್ರಮುಖ ರಸ್ತೆಗಳನ್ನು ಅಭಿವೃದ್ದಿಪಡಿಸಿ ಸಿಂದಗಿ ನಗರವನ್ನು ಅತ್ಯಂತ ಸುಂದರ ನಗರವನ್ನಾಗಿ ಮಾಡುವ ಗುರಿ ನನ್ನದಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಶರಣು ಶ್ರೀಗಿರಿ ಅವರ ಮನೆಯಿಂದ ಡಾ.ಕಾಗಿ ಅವರ ಮನೆಯವರೆಗೆ ಜಿಲ್ಲಾ ಪಂಚಾಯತ್ ವಿಜಯಪುರ ಹಾಗೂ ಪಂಚಾಯತ್ ರಾಜ್ಯ ಇಲಾಖೆ ಉಪವಿಭಾಗ ಸಿಂದಗಿ ೨೦೨೩-೨೪ ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಪಟ್ಟಣದ ಶರಣು ಶ್ರೀಗಿರಿ ಅವರ ಮನೆಯಿಂದ ಡಾ. ಕಾಗಿ ಅವರ ಮನೆಯವರೆಗೆ ಅಂದಾಜು ೨೦.೦೦ ಲಕ್ಷಗಳ ಅನುದಾನದಲ್ಲಿ ಸಿಸಿ ರಸ್ತೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ನಗರ ಅಭಿವೃದ್ದಿಯಾಗಲು ಮೊದಲು ರಸ್ತೆಗಳು ಉತ್ತಮವಾಗಿರಬೇಕು. ಮುಂಬರುವ ದಿನಗಳಲ್ಲಿ ಸಿಂದಗಿಗೆ ಪಟ್ಟಣದ ಎಲ್ಲ ವಾರ್ಡುಗಳ ರಸ್ತೆಗಳನ್ನು ಹಾಗೂ ಮುಖ್ಯ ರಸ್ತೆಗಳನ್ನು ಅಭಿವೃದ್ದಿ ಪಡಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದರು.ಈ ವೇಳೆ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶರಣರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಮೈಗೂಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ವಿಜಯಪುರದ ಶರಣ ತತ್ವ ಚಿಂತಕ ಡಾ.ಜೆ.ಎಸ್.ಪಾಟೀಲ ಹೇಳಿದರು.ತಾಲೂಕಿನ ಹಿಕ್ಕಣಗುತ್ತಿ ಗ್ರಾಮದ ಲಿಂಗಾಯತ ಮಹಾಮಠದಲ್ಲಿ ಹುಣ್ಣಿಮೆಯ ಪ್ರಯುಕ್ತ ಹಮ್ಮಿಕೊಂಡ ೭ನೆಯ ಶಿವಾನುಭವ ಕಾರ್ಯಕ್ರಮ, ಶಿವಶರಣ ಹೂಗಾರ ಮಾದಯ್ಯ ಜಯಂತಿ, ಪ್ರವಚನ ಪಿತಾಮಹ ಜಗದ್ಗುರು ಲಿಂಗಾನಂದ ಮಹಾಸ್ವಾಮಿಗಳು ಜಯಂತಿ, ರಾಷ್ಟ್ರೀಯ ಬಸವದಳ ಸಂಸ್ಥಾಪನಾ ದಿನ, ಶರಣ ದಿ.ಡಾ.ಎಂ.ಎಂ.ಕಲಬುರಗಿ ಅವರ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಲಿಂಗಾಯತ ಮಹಾಮಠದಿಂದ ಗ್ರಾಮೀಣ ಭಾಗದಲ್ಲಿ ಶರಣರ ತತ್ವ ಆದರ್ಶಗಳನ್ನು ಪ್ರಚಾರ ಮಾಡಲಾಗುತ್ತಿರುವುದು ಹೆಮ್ಮೆಯ ಸಂಗತಿ ಭಾಗವಹಿಸಿದ ಜನರು ಶರಣರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೆ. ಇದರಿಂದ ಸಮಾಜದಲ್ಲಿ ಉತ್ತಮ ವಾತಾವರಣ ಮೂಡಿಸುವುದರಲ್ಲಿ ಸಂದೇಹವಿಲ್ಲ ಎಂದರು.ಈ ವೇಳೆ ’ಉದಯರಶ್ಮಿ’ ವರದಿಗಾರ ಮಹಾಂತೇಶ ನೂಲಾನವರ, ಪತ್ರಕರ್ತ ಮಲ್ಲಿಕಾರ್ಜುನ ಕೆಂಭಾವಿ, ಚಂದ್ರಶೇಖರ ಕೆಂಭಾವಿ, ಗ್ಯಾರಂಟಿ ಯೋಜನೆಯ ಸದಸ್ಯೆ ಸುನಂದಾ ಯಂಪುರೆ, ಶರಣಬಸಪ್ಪ ಗಂಗಶೆಟ್ಟಿ, ಕಾಶೀನಾಥ ಸುಳ್ಳೋಳ್ಳಿ ಸೇರಿದಂತೆ ಅನೇಕರಿಗೆ ಬಸವ ಶ್ರೀರಕ್ಷೆ ನೀಡಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಹಿಕ್ಕಣಗುತ್ತಿ ಗ್ರಾಮದ ಲಿಂಗಾಯತ ಮಹಾಮಠದಲ್ಲಿ ಹುಣ್ಣಿಮೆಯ ಪ್ರಯುಕ್ತ ಹಮ್ಮಿಕೊಂಡ ೭ನೆಯ ಶಿವಾನುಭವ ಕಾರ್ಯಕ್ರಮ, ಶಿವಶರಣ ಹೂಗಾರ ಮಾದಯ್ಯ ಜಯಂತಿ, ಪ್ರವಚನ ಪಿತಾಮಹ ಜಗದ್ಗುರು ಲಿಂಗಾನಂದ ಮಹಾಸ್ವಾಮಿಗಳು ಜಯಂತಿ, ರಾಷ್ಟ್ರೀಯ ಬಸವದಳ ಸಂಸ್ಥಾಪನಾ ದಿನ, ಶರಣ ದಿ.ಡಾ.ಎಂ.ಎಂ.ಕಲಬುರಗಿ ಅವರ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪತ್ರಕರ್ತ ಮಹಾಂತೇಶ ನೂಲಾನವರ ಅವರಿಗೆ ಬಸವ ಶ್ರೀರಕ್ಷೆ ನೀಡಿ ಗೌರವಿಸಲಾಯಿತು.
ಉದಯರಶ್ಮಿ ದಿನಪತ್ರಿಕೆ ಇಂಡಿ: ಎಲ್ಲ ಮಕ್ಕಳಲ್ಲೂ ವಿಶೇಷವಾದ ಪ್ರತಿಭೆ ಅಡಗಿದ್ದು, ಅದನ್ನು ಪ್ರೋತ್ಸಾಹಿಸಿ ಬೆಳೆಸುವ ಕೆಲಸವನ್ನು ಪಾಲಕರು ಹಾಗೂ ಶಿಕ್ಷಕರು ಮಾಡಬೇಕು ಎಂದು ಅಕ್ಷರ ದಾಸೋಹ ತಾಲೂಕಾಧಿಕಾರಿ ಸುಜಾತಾ ಪೂಜಾರಿ ಹೇಳಿದರು.ಅವರು ಬುಧವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ಹಿರೇರೂಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಪ್ರತಿಭಾ ಕಾರಂಜಿಯ ತಾಲೂಕ ನೋಡಲ್ ಅಧಿಕಾರಿ ಎ ಸಿ ಹುಣಸಗಿ ಮಾತನಾಡಿ, ಮಕ್ಕಳಿಗೆ ಉನ್ನತ ಶಿಕ್ಷಣದೊಂದಿಗೆ ನಾಡಿನ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಕಲಿಸಿಕೊಡುವ ಮೂಲಕ ಅವರನ್ನು ದೇಶದ ಸತ್ಪ್ರಜೆಗಳನ್ನಾಗಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು.ಸಿ ಆರ್ ಪಿ ಸಂತೋಷ ಚವ್ಹಾಣ ಪ್ರಾಸ್ತಾವಿಕವಾಗಿಮಾತನಾಡಿ, ಪ್ರತಿಭಾವಂತರನ್ನು ಗುರುತಿಸುವ ಕಾರ್ಯ ಶಿಕ್ಷಕರಿಂದಾಗಬೇಕು. ಬೆಳೆಯುವ ಕುಡಿಯನ್ನು ಮೊಳಕೆಯಲ್ಲಿಯೇ ಚಿವುಟದೆ ಅದನ್ನು ಪ್ರೋತ್ಸಾಹಿಸಿ ಬೆಳೆಸುವ ಮೂಲಕ ದೇಶದ ಆಸ್ತಿಯನ್ನಾಗಿಸುವ ಗುರುತರ ಜವಾಬ್ದಾರಿ ತಮ್ಮೆಲ್ಲರ ಮೇಲಿದೆ ಎಂದರು.ಶಿಕ್ಷಣ ಸಂಯೋಜಕ ಸಿ ಬಿ ಬಿರಾದಾರ, ಎಸ್ ಡಿ ಎಂ ಸಿ ಅಧ್ಯಕ್ಷ ಮಾಳಪ್ಪ ಪೂಜಾರಿ,…
ಉದಯರಶ್ಮಿ ದಿನಪತ್ರಿಕೆ ಇಂಡಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖಾಂತರ ಎರಡು ಕೋಟಿ ಹತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ೧೩ ಕೋಣೆಗಳ ಸುಸಜ್ಜಿತ ಶಾಲಾ ಕಟ್ಟಡ ನಿರ್ಮಾಣ ಮಾಡಿದ್ದು ನನ್ನ ಆತ್ಮಕ್ಕೆ ಸಂತೃಪ್ತಿ ತಂದಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ಬುಧವಾರ ತಾಲೂಕಿನ ಗುಂದವಾನ ಗ್ರಾಮದಲ್ಲಿ ಎನ್.ಎಚ್.ಎ ಅನುದಾನದದಡಿಯಲ್ಲಿ ನಿರ್ಮಿಸಿದ ನಮ್ಮೂರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ನೆರವೇರಿಸಿ ಅವರು ಮಾತನಾಡಿದರು.ಈ ಶಾಲಾ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ ಅದ್ದೂರಿಯಾಗಿ ಆಗಬೇಕಿತ್ತು. ಆದರೆ ಕೆಲವರು ಅದಕ್ಕೆ ಅಡ್ಡಗಾಲು ಹಾಕಿ ಕಾರ್ಯಕ್ರಮ ಮಾಡಲೇಬಾರದು ಎಂದು ಗುಂದವಾನ ಗ್ರಾಮದ ಹಲವರಿಗೆ, ಪಂಚಾಯತ್‌ನವರಿಗೆ ಹೇಳಿದ ಪರಿಣಾಮ ಇಲ್ಲಿ ಹೆಚ್ಚಿನ ಜನ ಸೇರಲಿಲ್ಲ ಎಂದೂ ಸಹ ನನಗೆ ಗೊತ್ತಿದೆ. ಅಭಿವೃದ್ಧಿಯಲ್ಲಿ ಎಂದೂ ರಾಜಕಾರಣ ಮಾಡಬಾರದು. ಅದನ್ನು ಮೊದಲು ವಿರೋಧಿಗಳು ಅರಿತುಕೊಳ್ಳಬೇಕು. ನಾನು ಈ ಕಾರ್ಯ ಮಾಡಿದ್ದು ನನಗೆ ಸಂತಸ ತಂದಿದೆ. ಜಿಲ್ಲೆಗೆ ಒಂದು ಲಕ್ಷ ಹತ್ತು ಸಾವಿರ ಕೋಟಿ ರೂಪಾಯಿ ಅನುದಾನ ತಂದರೂ ಸಹ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಜಗತ್ತಿಗೆ ಜೈನ ಧರ್ಮ ನೀಡಿದ ಕೊಡುಗೆ ಅಪಾರ, ಇಂತಹ ತತ್ವ ಸಿದ್ದಾಂತಗಳ ಪಾಲನೆಯಿಂದ ಮಾತ್ರ ಜಗತ್ತಿನಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದು ಪೂಜ್ಯ ಆಯೀಕಾ ೧೦೫ ಸುನೀತಿಮತಿ ಮಾತಾಜಿಯವರು ಮಾತನಾಡಿದರು.ಪಟ್ಟಣದ ಭಗವಾನ ಆದಿನಾಥ ಜೈನ ಮಂದಿರದಲ್ಲಿ ನಡೆದ ದಶಲಕ್ಷಣ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದರು.ಪ್ರಥಮ ತೀರ್ಥಂಕರರಾದ ಆದಿನಾಥರಿಂದ ಆರಂಭಿಸಿ ಇಂದಿನ ವರೆಗೂ ಮಾನವೀಯ ಮೌಲ್ಯಗಳ ಜೊತೆಗೆ ಅಹಿಂಸೆ, ತ್ಯಾಗದ ಕುರಿತು ಜಗತ್ತಿಗೆ ಮಾರ್ಗದರ್ಶನ ನೀಡಿದ್ದು ಜೈನ ಧರ್ಮ ಭಗವಾನ ಬಾಹುಬಲಿಯ ತ್ಯಾಗ ಜಗತ್ತಿಗೆ ಮಾರ್ಗದರ್ಶನವಾಗಿದೆ ಎಂದು ಹೇಳಿದರು.ಚಂದ್ರಕಾಂತ ಪಂಡಿತರವರು ಮಾತನಾಡಿ, ಜೈನ ಧರ್ಮದ ಪ್ರಮುಖ ಘಟ್ಟ ಮೋಕ್ಷ. ಅದು ಆತ್ಮ ಸಾಕ್ಷಾತ್ಕಾರದಿಂದ ದೊರಕಲು ಸಾದ್ಯ. ಬದುಕಿನ ಸರಳ ಸಂದೇಶಗಳನ್ನು ಸಾರುವದಲ್ಲದೆ ಇಲ್ಲಿನ ಪ್ರತಿ ಆಚರಣೆಯೂ ದುಖಃಮಯ ಜೀವನದಿಂದ ಹೊರಬರುವುದಾಗಿದೆ ಎಂದರು.ದಶ ಲಕ್ಷಣ ಪರ್ವ ನಿಮಿತ್ಯ ಹತ್ತು ದಿನ ನಿರಂತರ ಉಪವಾಸ ಕೈಕೊಂಡ ಶಾಂತಿನಾಥ ಧನಶೆಟ್ಟಿ, ಅಭಿನಂದನ ಕಿರಣಗಿ, ಭರತ ವರ್ಧಮಾನ, ರತ್ನಮಾಲಾ ವರ್ಧಮಾನ, ಸುನಿತಾ ಜೈನ ಇವರಿಗೆ ಸನ್ಮಾನಿಸಲಾಯಿತು.…
ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ವಿದ್ಯಾನಗರದಲ್ಲಿ ಶ್ರೀ ಸಾಯಿ ಗಜಾನನ ಮಿತ್ರ ಮಂಡಳಿಯವರು ಪ್ರತಿಷ್ಠಾಪಿಸಿದ ಗಣಪನ ಮುಂದೆ ಬಡಾವಣೆಯ ಚಿಣ್ಣರರಿಂದ ವಿವಿಧ ವೇಷಭೂಷಣ ಸ್ಪರ್ಧೆಯ ಕಾರ್ಯಕ್ರಮ ಹಮ್ಮಿಕೊಂಡಿದ್ದರು.ಬಣ್ಣ ಬಣ್ಣದ ದೀಪಗಳಿಂದ ಅಲಂಕೃತಗೊಂಡಿದ್ದ ವೇದಿಕೆಯಲ್ಲಿ ಅನೇಕ ಮಹನೀಯರ ಸಾಂಸ್ಕೃತಿಕ ವೇಷಭೂಷಣ ತೊಟ್ಟು, ಸಂಗೀತಕ್ಕೆ ತಕ್ಕಂತೆ ಪುಟಾಣಿಗಳು ಅದ್ಭುತವಾದ ಪ್ರದರ್ಶನವನ್ನು ನೀಡಿ, ನೋಡುಗರ ಕಣ್ಮನ ಸೆಳೆದರು.ಆಧುನಿಕ ಯುಗದ ಭರಾಟೆಯಲ್ಲಿ ಕಣ್ಮರೆಯಾಗುತ್ತಿರುವ ಸಾಂಸ್ಕೃತಿಕ, ಪರಂಪರೆಯ ಮಹನೀಯರ ಉಡುಗೆ-ತೊಡುಗೆ ತೊಟ್ಟು, ಭಾರತೀಯ ಸಂಸ್ಕೃತಿ ಕುರಿತು ವೇದಿಕೆ ಮೇಲೆ ಸುಂದರವಾದ ಪ್ರದರ್ಶನ ನೀಡಿದ್ದು, ನೆರೆದಿದ್ದ ನೂರಾರು ಜನರ ಗಮನ ಸೆಳೆಯಿತು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ.ರಾಘವೇಂದ್ರ ಕುಲಕರ್ಣಿ ಮತ್ತು ಶರೀರ ಶಾಸ್ತ್ರವಿಜ್ಞಾನದ ವಿಭಾಗದ ಪ್ರಾಧ್ಯಾಪಕ ಹಾಗೂ ಡಿಸ್ಟಿಂಗ್ವಿಷ್ ಚೇರ್ ಪ್ರೊಫೆಸರ್ ಡಾ.ಕುಸಾಲ ದಾಸ ಅವರು ಪ್ರಸಕ್ತ 2024ನೇ ವರ್ಷದ ವಿಶ್ವದ ಉನ್ನತ ಶೇ.2 ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.ಔಷಧ ವಿಜ್ಞಾನ, ಶರೀರಶಾಸ್ತ್ರ ಹಾಗೂ ಪಾಲಿಮ ಕ್ಷೇತ್ರದಲ್ಲಿನ ಸಂಶೋಧನೆಗಾಗಿ ಇಬ್ಬರೂ ಸಂಶೋಧಕರಿಗೆ ಈ ವರ್ಷದ ವಿಶ್ವದ ಉನ್ನತ ಶೇ. 2 ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಸಿಕ್ಕಿದೆ. ಅಮೇರಿಕಾದ ಸ್ಟ್ಯಾನಫೋರ್ಡ್ ವಿಶ್ವವಿದ್ಯಾಲಯ ಹಾಗೂ ನೆದರಲ್ಯಾಂಡ್‌ನ ಎಲ್ಸವಿಯರ್ ಪ್ರಕಾಶನ ಸಂಸ್ಥೆಯು ಪ್ರತಿ ವರ್ಷ ಸೈಟೇಷನ್ ಇಂಡೆಕ್ಸ್ ಆಧಾರದ ಮೇಲೆ ಒಂದು ಲಕ್ಷಕ್ಕೂ ಹೆಚ್ಚು ವಿಜ್ಞಾನಿಗಳನ್ನು ಗುರುತಿಸಿ ಶ್ರೇಷ್ಠ ಶೇ. 2 ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ನೀಡುತ್ತದೆ.ಡಾ. ರಾಘವೇಂದ್ರ ಕುಲಕರ್ಣಿ ಸತತ 4ನೇ ಬಾರಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಅವರು ಪಾಲಿಮರ್ ಆಧಾರಿತ ಔಷಧ ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದ ಭಾರತದ ಸಂಶೋಧಕರ ಪೈಕಿ 20ನೇ…
