Subscribe to Updates
Get the latest creative news from FooBar about art, design and business.
Author: editor.udayarashmi@gmail.com
ತನಿಷ್ಕಾ ಆಭರಣ ಮಳಿಗೆಯಿಂದ ಆದರ್ಶ ಶಿಕ್ಷಕರಿಗೆ ಸನ್ಮಾನ | ಡಿಡಿಪಿಐ ನಾಗೂರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಒಬ್ಬ ಶಿಕ್ಷಕ ದೇಶದ ರಾಷ್ಟ್ರಪತಿ ಆಗಬಹುದು ಎಂಬುದನ್ನು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ತೋರಿಸಿಕೊಟ್ಟಿದ್ದಾರೆ. ಸಮಾಜದಲ್ಲಿ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿಸುವ ಪಾತ್ರ ಶಿಕ್ಷಕರ ಮೇಲಿದೆ. ಶಿಕ್ಷಕರು ಮಕ್ಕಳ ಅಭಿವೃದ್ಧಿಗಾಗಿ ಹಾಗೂ ಏಳಿಗೆಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಡಿಡಿಪಿಐ ಎಂ.ಎಚ್.ನಾಗೂರ ಹೇಳಿದರು.ರವಿವಾರದಂದು ಟಾಟಾ ಸಮೂಹ ಸಂಸ್ಥೆಯ ಸಂತೋಷ ಸಮೂಹ ಸಂಸ್ಥೆ ಹಾಗೂ ತನಿಸ್ಕಾ ಆಭರಣ ಮಳಿಗೆಯ ವತಿಯಿಂದ ಹಮ್ಮಿಕೊಂಡಿದ್ದ “ಆದರ್ಶ ಶಿಕ್ಷಕರು”ಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಶಿಕ್ಷಣ ಕೇವಲ ವ್ಯಕ್ತಿಯನ್ನು ಪರಿವರ್ತನೆ ಮಾಡುವುದು ಮಾತ್ರವಲ್ಲದೇ, ರಾಷ್ಟ್ರ ನಿರ್ಮಾಣದಲ್ಲಿಯೂ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ. ಸಮಾಜದಲ್ಲಿ ಗುರುವಿನ ಬಗ್ಗೆ ಹೆಚ್ಚಿನ ಗೌರವವಿದೆ. ಗುರುವಿನ ಬೋಧನೆ, ಮೌಲ್ಯಗಳು, ಸಂಸ್ಕಾರ ಹಾಗೂ ಜೀವನ ಪದ್ಧತಿ ಅನೇಕ ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರಲಿದೆ. ವಿದ್ಯಾರ್ಥಿಗಳು ಮತ್ತು ಸಮಾಜ ಶಿಕ್ಷಕರಿಗೆ ಗುರುವಿನ ಸ್ಥಾನ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಧಾನ ಮಂತ್ರಿ ಆವಾಸ್ ಯೋಜನೆ ೨೦೨೧-೨೨ನೇ ಸಾಲಿನ ಅಡಿ ಪೂರ್ಣಗೊಂಡ ಮನೆಯ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಂಸದರಾದ ರಮೇಶ್ ಜಿಗಜಿಣಗಿ ಅವರು ಭಾಗವಹಿಸಿ ಫಲಾನುಭವಿಯಾದ ಗಂಗಾ ಚನ್ನಪ್ಪ ಬಗಲಿ ಯವರಿಗೆ “ಕೀ ” ನೀಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಎ.ಬಿ.ಅಲ್ಲಾಪುರ ಟಿಎನ್‌ಓಗಳಾದ ಪಿ. ಡಿ. ಗುಡದಿನ್ನಿ,ಕಲ್ಯಾಣಶೆಟ್ಟಿ, ಪಿಡಿಓ ರಾಜಶೇಖರ್ ಬಿರಾದಾರ್, ಹಿಟ್ನಳ್ಳಿ ಭಾಗವಹಿಸಿದ್ದರು.
ಪ್ರಜಾಪ್ರಭುತ್ವ ದಿನ | ಬೃಹತ್ ಮಾನವ ಸರಪಳಿ ರಚನೆ | ಡಿಸಿ ಟಿ.ಭೂಬಾಲನ್ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ರಾಯಚೂರು ಗಡಿಯಿಂದ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಬಾಗಲಕೋಟೆ ಜಿಲ್ಲೆಯ ಗಡಿ ಭಾಗದ ಆಲಮಟ್ಟಿಯವರೆಗಿನ ಸುಮಾರು ೬೨ ಕಿ.ಮೀ.ವರೆಗೆ ಮಾನವ ಸರಪಳಿ ಯಶಸ್ವಿಯಾಗಿ ನಿರ್ಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು.ರಾಜ್ಯ ಸರ್ಕಾರವು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆಯಲ್ಲಿ ಬೀದರನಿಂದ ಚಾಮರಾಜನಗರವರೆಗೂ ಸಮಾಜದ ಎಲ್ಲಾ ವರ್ಗದ ಜನರೂ ಸೇರಿದಂತೆ ಸುಮಾರು ೨೫ ಲಕ್ಷ ಮಂದಿ ಕೈ ಕೈ ಹಿಡಿದು ರಾಜ್ಯದುದ್ದಕ್ಕೂ ವಿಶ್ವದ ಬೃಹತ್ ಮಾನವ ಸರಪಳಿ ರಚನೆ ಹಿನ್ನಲೆಯಲ್ಲಿ ಇಂದು ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಮಾನವ ಸರಪಳಿ ಕಾರ್ಯಕ್ರಮಲ್ಲಿ ಆಲಮಟ್ಟಿಯಲ್ಲಿ ಮಾತನಾಡಿದ ಅವರು, ವಿವಿಧೆತೆಯಲ್ಲಿ ಏಕತೆ ತೋರುವ ಹೆಮ್ಮೆಯ ರಾಷ್ಟ್ರ. ಭಾರತವು ಅತ್ಯಂತ ಯಶಸ್ವಿನ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ ದೇಶವಾಗಿದೆ. ಸಂವಿಧಾನ ಪ್ರತಿಯೊಬ್ಬರಿಗೆ ಸಮಾನ ಅವಕಾಶ ನೀಡಿದ್ದು, ಸಂವಿಧಾನದ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಮಾನವ ಸರಪಳಿಯಲ್ಲಿ ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಭಾಗಿಯಾಗಿದ್ದರು.ಮಾನವ ಸರಪಳಿ ಕಾರ್ಯಕ್ರಮಕ್ಕಾಗಿ ನೂಡಲ್, ಸೆಕ್ಟರ್ ಹಾಗೂ ರೂಟ್ ಅಧಿಕಾರಿಗಳನ್ನು ನೇಮಿಸಲಾಗಿತ್ತು. ನೇಮಿತ ಅಧಿಕಾರಿಗಳು ತಮ್ಮ ಬಾಗಗಳಲ್ಲಿ ಮಾನವ ಸರಪಳಿ ನಿರ್ಮಿಸುವಲ್ಲಿ ಶ್ರಮಿಸಿದ್ದರು. ಅಲ್ಲಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಲಾಯಿತು. ಕರಾಟೆ ಶಿಕ್ಷಕ ಶಿವಕುಮಾರ ಶಾರದಳ್ಳಿ ತಮ್ಮ ವಿದ್ಯಾರ್ಥಿಗಳೊಂದಿಗೆ ಭಾಗಿಯಾಗಿದ್ದರು. ಪೊಲೀಸರು ಬಿಗಿ ಬಂದೋಬಸ್ತ ವಹಿಸಿದ್ದರು. ಮಾನವ ಸರಪಳಿ ನಿರ್ಮಿಸಲು ವಿವಿಧ ಶಾಲೆಗಳ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗಿತ್ತು. ಪಟ್ಟಣದಲ್ಲಿ ಕೆಲ ಶಾಲೆಗಳ ವಿದ್ಯಾರ್ಥಿಗಳು ೭:೩೦ ಕ್ಕೆ ಆಗಮಿಸಿದ್ದರು. ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಉಪಹಾರ ವ್ಯವಸ್ಥೆ ಇಲ್ಲದೇ ಗೋಳಾಡಿದ ಪ್ರಸಂಗಗಳು ಕಂಡು ಬಂದವು. ಅಲ್ಲಲ್ಲಿ ವಿದ್ಯಾರ್ಥಿಗಳು ತಲೆತಿರುಗಿ ಬಿದ್ದರೆ ಆಸ್ಪತ್ರಗೆ ಹೊತ್ತೊಯ್ಯಲು ವಾಹನಗಳಿಲ್ಲದೇ ಪರದಾಡಿದರು. ಶಾಲಾ ಶಿಕ್ಷಕರು ಬೈಕ್ ಮೂಲಕ ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದರು. ಇಲ್ಲಿನ ಅಧಿಕಾರಿಗಳು ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸದೇ ವಿದ್ಯಾರ್ಥಿಗಳಿಗೆ ತೊಂದರೆಯುಂಟು ಮಾಡಿದ್ದು ಮುಂದೆ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಹುಡ್ಕೋ ಗೇಟ್ ಬಳಿ ನಿರ್ಮಿಸಲಾದ ರೋಡ್ ಬ್ರೇಕರ್‌ಗಳು ಅವೈಜ್ಞಾನಿಕವಾಗಿವೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸರಿಪಡಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಬಸವರಾಜ ನಂದಿಕೇಶ್ವಮಠ ಮನವಿ ಮಾಕೊಂಡಿದ್ದಾರೆ.ಈ ಕುರಿತು ’ಉದಯರಶ್ಮಿ’ ಯೊಂದಿಗೆ ಮಾತನಾಡಿದ ಅವರು ಈ ಪ್ರದೇಶ ಅಪಘಾತ ವಲಯವಾಗಿದ್ದು ರೋಡ್ ಬ್ರೇಕರ್ ಅಳವಡಿಸಲು ಹಲವು ಬಾರಿ ಹೋರಾಟ ಮಾಡಿದ್ದೇವೆ. ಸಧ್ಯಕ್ಕೇನೋ ರೋಡ್‌ಬ್ರೇಕರ್ ಅಳವಡಿಸಲಾಗಿದೆ ಆದರೆ ಈ ಬ್ರೇಕರ್ ಗಳು ಸಂಪೂರ್ಣ ಅವೈಜ್ಞಾನಿಕವಾಗಿದ್ದು ಇವುಗಳ ಯಾವುದೇ ಪ್ರಯೋಜನವಾಗುತ್ತಿಲ್ಲ. ಈ ಬ್ರೇಕರ್‌ಗಳು ಪಾದಾಚಾರಿಗಳು ರಸ್ತೆ ದಾಟಲು ಅನುಕೂಲವಾಗಿಲ್ಲ. ಬದಲಾಗಿ ಇನ್ನಷ್ಟು ಸಮಸ್ಯೆ ತಂದೊಡ್ಡಿವೆ. ಕಾರಣ ಕೂಡಲೇ ಈ ಬ್ರೇಕರ್‌ಗಳನ್ನು ತೆರವುಗೊಳಿಸಿ ಇನ್ನಷ್ಟು ಮುಂಭಾಗದಲ್ಲಿ ಹಾಕಬೇಕು. ಇಲ್ಲವೇ ರಸ್ತೆಯ ಎರಡೂ ಬದಿಗಳಲ್ಲಿ ಹೊಸ ಬ್ರೇಕರ್‌ಗಳನ್ನು ಅಳವಡಿಸಿ ಪಾದಾಚಾರಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದರು.ಹೋರಾಟಗಾರರಾದ ನಾಗೇಂದ್ರ ಶಿವಶಿಂಪಿ ಮತ್ತು ರಫೀಕ ಬೀಳಗಿ ಮಾತನಾಡಿ ಈ ಬ್ರೇಕರ್‌ಗಳನ್ನು ಅಳವಡಿಸುವಾಗ ಅಧಿಕಾರಿಗಳು ಯಾವುದೇ ಮುಂದಾಲೋಚನೆ ಮಾಡದ ಕಾರಣ ಈ ಬ್ರೇಕರ್‌ಗಳು ಉಪಯೋಗಕ್ಕೆ ಬಾರದಂತಾಗಿವೆ. ಪಾದಾಚಾರಿಗಳು ರಸ್ತೆ ದಾಟಬೇಕಾದರೆ…
ಕಲ್ಯಾಣ ಕರ್ನಾಟಕ ( ಹೈದರಾಬಾದ್ ಕರ್ನಾಟಕ ) ವಿಮೋಚನಾ ದಿನ ಸೆಪ್ಟೆಂಬರ್ 17.. ಲೇಖಕರು- ವಿವೇಕಾನಂದ. ಎಚ್ .ಕೆ, ಬೆಂಗಳೂರು ಉದಯರಶ್ಮಿ ದಿನಪತ್ರಿಕೆ ನನ್ನ ದೃಷ್ಟಿಯಲ್ಲಿ ವೈಯಕ್ತಿಕವಾಗಿ ಕಲ್ಯಾಣ ಕರ್ನಾಟಕ ಇನ್ನೂ ಶಾಪಗ್ರಸ್ತವಾಗೇ ಇದೆ. ಸ್ವಾತಂತ್ರ್ಯ ಹೊರತುಪಡಿಸಿ ಜೀವನಮಟ್ಟ ಸುಧಾರಣೆಯ ವಿಮೋಚನೆ ತೃಪ್ತಿಕರವಾಗಿಲ್ಲ..ಇದನ್ನು ಅರ್ಥಮಾಡಿಕೊಳ್ಳಲು ಕರ್ನಾಟಕದ ಭೌಗೋಳಿಕ ಪ್ರದೇಶಗಳ ಚಿತ್ರಣದ ಮಾಹಿತಿ ಬೇಕಾಗುತ್ತದೆ..ಭಾರತದ ಶ್ರೀಮಂತ ರಾಜ್ಯಗಳಲ್ಲಿ ಕರ್ನಾಟಕ ಅತ್ಯಂತ ಪ್ರಮುಖವಾದದ್ದು. ಕರ್ನಾಟಕದ ರಾಜಧಾನಿ ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗಿದೆ. ಕರ್ನಾಟಕವನ್ನು ಸರಳವಾಗಿ ಇಲ್ಲಿನ ಭೌಗೋಳಿಕತೆಯ ಆಧಾರದ ಮೇಲೆ ಐದು ವಿಭಾಗಗಳಾಗಿ ವಿಂಗಡಿಸಬಹುದು….1) ಮಲೆನಾಡು ಕರ್ನಾಟಕ2) ಮೈಸೂರು ಕರ್ನಾಟಕ3) ಕರಾವಳಿ ಕರ್ನಾಟಕ4) ಕಿತ್ತೂರು (ಮುಂಬಯಿ) ಕರ್ನಾಟಕ5) ಕಲ್ಯಾಣ (ಹೈದರಾಬಾದ್) ಕರ್ನಾಟಕ.ಗಾಳಿ ನೀರು ಆಹಾರ ಶಿಕ್ಷಣ ಆರೋಗ್ಯ ಸಾರಿಗೆ ಸಂಪರ್ಕ ರಸ್ತೆ ಮನೆ ಪ್ರಾಕೃತಿಕ ವಾತಾವರಣ ತಲಾ ಆದಾಯ ಕೈಗಾರಿಕೆ ಹೀಗೆ ಕೆಲವು ಮೂಲಭೂತ ಸೌಕರ್ಯಗಳ ಆಧಾರದ ಮೇಲೆ ಭೌತಿಕವಾಗಿ ಇಡೀ ಕರ್ನಾಟಕವನ್ನು ಪಾದಯಾತ್ರೆ ಮೂಲಕ ಸಂಚರಿಸಿದ ಅನುಭವದ ಆಧಾರದ ಹೇಳುವುದಾದರೆ ಮೇಲೆ ಹೇಳಿರುವ…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮ ದೇಶದ ಪ್ರಜಾಪ್ರಭುತ್ವ ಬೃಹತ್ತಾಗಿದ್ದು ಅದರ ಆಶಯದಂತೆ ನಾವು ಬದುಕಬೇಕಾಗಿದೆ. ಸಂವಿಧಾನದ ಆಶಯಗಳಾದ ಸಮಾನತೆ, ಸ್ವಾತಂತ್ರ್ಯ ಹಾಗೂ ಭಾತೃತ್ವದ ಆದರ್ಶಗಳನ್ನು ಜನರಲ್ಲಿ ಗಟ್ಟಿಗೊಳಿಸುವಲ್ಲಿ ಈ ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ದೆ ಹೇಳಿದರು.ನಗರದ ಬಿ.ಎಲ್.ಡಿ.ಈ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಹಾವಿದ್ಯಾಲಯದ ಆವರಣದಲ್ಲಿ ಬೃಹತ್ ಮಾನವ ಸರಪಳಿ ಕಾರ್ಯಕ್ರಮವನ್ನು ಜರುಗಿತು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ದೆ ಸಂವಿಧಾನದ ಪ್ರಸ್ತಾವನೆ ಓದಿದರು. ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ನಿಂತು ನಂತರ ತಮ್ಮ ಎರಡು ಕೈಗಳನ್ನು ಮೇಲಕೆತ್ತಿ ಜೈ ಹಿಂದ, ಜೈ ಕರ್ನಾಟಕ ಎಂದು ಘೋಷಣೆ ಕೂಗಿ ಸರಪಳಿ ಕಳಚಲಾಯಿತು.ಈ ವೇಳೆಯಲ್ಲಿ ಶಿಕ್ಷಣ ಶಾಸ್ತ್ರ ವಿಭಾಗ ಉಪನ್ಯಾಸಕ ಪ್ರೊ.ಸಿ.ಎನ್.ಕುನ್ನೂರ ಮಾತನಾಡಿ, ನಮ್ಮ ಭಾರತ ದೇಶ ಬೃಹತ್ತಾದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವಂಥದ್ದು ಅದರ ಆಶಯದಂತೆ ಇಂದು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದಲಿತರು ಮತ್ತು ದಲಿತ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರನ್ನು ಸರ್ಕಾರ ತ್ವರಿತವಾಗಿ ಬಂಧಿಸಿದಕ್ಕೆ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಮೇಶ್ ಗುಬ್ಬೇವಾಡ ರಾಜ್ಯಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು.ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಬಿಬಿಎಂಪಿ ಗುತ್ತೇದಾರ ಚಲುವರಾಜ ಅವರಿಗೆ ಬಿಜೆಪಿ ಶಾಸಕ ಮುನಿರತ್ನ ಅವರು ಹಣವನ್ನು ನೀಡುವಂತೆ ಒತ್ತಾಯಿಸಿದ್ದಾರೆ. ಹಣವನ್ನು ನೀಡಲು ನನ್ನ ಹತ್ತಿರ ಇಲ್ಲ ಅಂದಾಗ ನಿಮ್ಮ ಹೆಣ್ಣು ಮಕ್ಕಳನ್ನು ನಿನ್ನ ಹೆಂಡತಿಯನ್ನು ತಂದು ಬಿಡು ಎಂದಿದ್ದು ನಾಗರಿಕ ಸಮಾಜ ತಲೆ ತಗ್ಗಿಸುವಂತ ವಿಚಾರ, ಆದ್ದರಿಂದ ಇಂತಹ ನೀಚ ಪ್ರವೃತ್ತಿ ಹಾಗೂ ಜಾತಿ ನಿಂದಕರಿಗೆ ಕಠಿಣ ಶಿಕ್ಷೆ ಆಗಬೇಕು ಹಾಗು ಇಂತವರಿಗೆ ಕಠಿಣ ಶಿಕ್ಷೆ ಆಗುತ್ತೆ ಅನ್ನುವದು ಕರ್ನಾಟಕದಿಂದಲೇ ಇಡಿ ದೇಶಕ್ಕೆ ಸಂದೇಶ ಹೋಗಬೇಕು ಎಂದು ಹೇಳಿದರುಸಂಸ್ಕಾರ ಸಂಸ್ಕೃತಿ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ತಮ್ಮದೇ ಪಕ್ಷದ ಶಾಸಕರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಇರುವ ಒಟ್ಟು ೧೦ ಸಕ್ಕರೆ ಕಾರ್ಖಾನೆಗಳಿಂದ ಮಾಲಿನ್ಯ ನಿಯಂತ್ರಣ ಕಾಯದೆಗಳನ್ನು ಗಾಳಿಗೆ ತೂರಿ ನೀರು ತ್ಯಾಜ್ಯವನ್ನು ಸಮೀಪದಲ್ಲಿಯ ಜಲಮೂಲಗಳಾದ ನದಿ, ಹಳ್ಳ, ಕೆರೆಗಳಿಗೆ ಯಾವುದೇ ಮುನ್ನೆಚರಿಕಾ ಕ್ರಮ ಕೈಗೊಳ್ಳದೇ ಹರಿಬಿಟ್ಟ ಕಾರಣದಿಂದಾಗಿ ನೀರು ವಿಷಯುಕ್ತವಾಗಿ ಅನೇಕ ಸಾವು ನೋವುಗಳಿಗೆ ಕಾರಣವಾಗುತ್ತಿದ್ದು, ಈ ಕುರಿತು ಕಠಿಣ ಕ್ರಮ ಕೈಗೊಳ್ಳಬೇಕು. ಅಂತಹ ಕಾರ್ಖಾನೆಯನ್ನು ಈ ವರ್ಷ ಪ್ರಾರಂಭಕ್ಕೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಮಾಲಿನ್ಯ ನಿಯಂತ್ರಣ ಅಧಿಕಾರಿ ಎಂ.ಎ.ಮಣಿಯಾರ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶುಕ್ರವಾರ ಮನವಿ ಸಲ್ಲಿಸಲಾಯಿತು.ಈ ವೇಳೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ಕಳೆದ ವರ್ಷ ಯರಗಲ್ ಬಾಲಾಜಿ ಸಕ್ಕರೆ ಕಾರ್ಖಾನೆಯಿಂದ ತ್ಯಾಜ್ಯವನ್ನು ನದಿಗೆ ಹರೆಸಿ ಕಾರ್ಖಾನೆಯವರೆ ಡಂಗುರ ಸಾರಿ ನದಿ ನೀರನ್ನು ಯಾರು ಬಳಸಬೇಡಿ, ಅದರಲ್ಲಿ ಕಾರ್ಖಾನೆಯ ತ್ಯಾಜ್ಯ(ವಿಷ) ಬಿಟ್ಟಿರುವುದಾಗಿ ಪತ್ರಿಕೆಗೆಗೂ ಹೇಳಿದ್ದಾರೆ, ಅಷ್ಟರಲ್ಲಿಯೇ ನದಿಯಲ್ಲಿಯ ಲಕ್ಷಾಂತರ ಮೀನುಗಳ ಮಾರಣ ಹೋಮ ಆಗಿರುವುದು ಇಡೀ ಮಾನವ ಕುಲವೇ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಹಳ್ಳಿಗರ ಆರೋಗ್ಯ ಜವಾಬ್ದಾರಿ ಗ್ರಾಮ ಪಂಚಾಯತಗೆ ಇದೆ ಎಂದು ಆರೋಗ್ಯ ತರಬೇತಿ ಕಾರ್ಯಕ್ರಮಉದ್ಘಾಟಿಸಿ ಗ್ರಾ.ಪಂ ಅಧ್ಯಕ್ಷೆ ಆಸ್ಮಾ ರಜಾಕ ಚಿಕ್ಕಗಸಿ ಹೇಳಿದರುತಾಲ್ಲೂಕಿನ ತಾಂಬಾ ಗ್ರಾ.ಪಂ ಕಾರ್ಯಾಲಯದಲ್ಲಿ ಆರೋಗ್ಯ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿ ಮಾತನಾಡಿದರು.ಗ್ರಾಮದ ಜನರ ಆರೋಗ್ಯ ಅತೀವ ಮುಖ್ಯ. ಅದಕ್ಕೆ ಸ್ಥಳೀಯ ಸಂಘ ಸಂಸ್ಥೆ ಹಾಗೂ ಧಾರ್ಮಿಕ ಮುಖಂಡರು ಸಲಹೆ ಸಹಕಾರ ಮುಖ್ಯ ಎಂದು ಹೇಳಿದರು.ಆರೋಗ್ಯ ಇಲಾಖೆ ಶಿಕ್ಷಣಾಧಿಕಾರಿ ವೈ. ಎಂ ಪೂಜಾರ ಮಾತನಾಡಿ ಅವರು, ಆರೋಗ್ಯ ಮತ್ತು ಅಭಿವೃದ್ಧಿ ಪಂಚಾಯತ್ ಬೆಂಬಲದೊಂದಿಗೆ ಕ್ರಿಯಾಯೋಜನೆ ಸಿದ್ದಪಡಿಸಲು ಅನುಷ್ಠಾನಗೊಳಿಸಲು ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಹಭಾಗಿತ್ವದಲ್ಲಿ ನಡೆಯುತ್ತಿದೆ. ಸಿದ್ದಪಡಿಸಿದ ಕ್ರಿಯಾ ಯೋಜನೆದಂತೆ ಆರೋಗ್ಯ ಮತ್ತು ನೀರು ನೈರ್ಮಲ್ಯ, ಕ್ಷಯ ಮುಕ್ತ ಗ್ರಾಮ, ಬಿಪಿ ಶುಗರ್ ಸ್ಕ್ರೀನಿಂಗ್ ಕ್ಯಾಂಪ್, ಅಪೌಷ್ಟಿಕತೆ ಮತ್ತು ರಕ್ತ ಹೀನತೆ ಮುಕ್ತ, ಬಾಲ್ಯ ವಿವಾಹ ಸೇರಿದಂತೆ ಅನೇಕ ವಿಚಾರಗಳು ಕುರಿತು ತರಬೇತಿ ನೀಡಿ ಮಾತನಾಡಿದರು.ಈ…
