Author: editor.udayarashmi@gmail.com

ರೈತರು-ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ | ಜಿಲ್ಲಾಧಿಕಾರಿ ಟಿ.ಭೂಬಾಲನ್ ಕಟ್ಟುನಿಟ್ಟಿನ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿರುವ ಎಲ್ಲ ಸಕ್ಕರೆ ಕಾರ್ಖಾನೆಗಳು ಪ್ರಸಕ್ತ ಸಾಲಿನ ಹಂಗಾಮಿಗೆ ಸರ್ಕಾರದ ಆದೇಶದಂತೆ ಕಬ್ಬು ನುರಿಸುವ ಕಾರ್ಯ ಆರಂಭಿಸಿದ ಸಂದರ್ಭದಲ್ಲಿ ಕಬ್ಬು ಪೂರೈಸಿದ ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕಬ್ಬು ಪೂರೈಸಿದ ರೈತರಿಗೆ ಸಕ್ಕರೆ ಕಾರ್ಖಾನೆಗಳು ನಿಗದಿತ ಅವಧಿಯಲ್ಲಿ ಹಣ ಸಂದಾಯ ಮಾಡಬೇಕು ಯಾವುದೇ ಕಾರಣಕ್ಕೂ ಸಕ್ಕರೆ ಕಾರ್ಖಾನೆಗಳು ಯಾವುದೇ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಗಳು ತೂಕದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಸಿಸಿಟಿವಿ ನಿಗಾವಣೆಯಲ್ಲಿ ತೂಕ ಮಾಡುವ ಕಾರ್ಯ ನಿರ್ವಹಣೆ ಮಾಡಬೇಕು. ಪ್ರತಿ ವರ್ಷ ಕಾರ್ಖಾನೆಗಳಿಗೆ ಭೇಟಿ ನೀಡಿ ವಾಯುಮಾಲಿನ್ಯ ಮತ್ತು ನೈರ್ಮಲ್ಯ ಕುರಿತು…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಂತರ ಕಾಲೇಜುಗಳ ಮಟ್ಟದ ಭಾರ ಎತ್ತುವ ಸ್ಪರ್ದೆಯಲ್ಲಿ ಶ್ರೀ ಸಂಗಮೇಶ್ವರ ಕಲಾ ಮತ್ತು ವಾಣೀಜ್ಯ ಮಾಹಾವಿದ್ಯಾಲಯದ ವಿಧ್ಯಾರ್ಥಿ ಅಶೋಕ ರಾಠೋಡ ದ್ವೀತಿಯ ಸ್ಥಾನ ಪಡೆದಿದ್ದಾನೆ.ಇವನ ಈ ಸಾಧನೆಗೆ ಪ್ರಾಚಾರ್ಯರಾದ ಡಾ.ಎಸ್.ಬಿ.ರಾಠೋಡ, ದೈಹೀಕ ಶಿಕ್ಷಣ ನೀರ್ದೆಶಕ ಎಸ್.ಎಸ್.ಅವಟಿ, ಆಡಳಿತಧಿಕಾರಿ ಡಾ.ಎಸ್.ಎಸ್.ಚೋರಗಿ ಮತ್ತು ಸಂಸ್ಥೇಯ ಆಡಳಿತ ಮಂಡಳಿ ವಿಧ್ಯಾರ್ಥಿ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಶಿಸ್ತು ಸಂಯಮ ರೂಢಿಸಿಕೊಂಡು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಗುರಿ ಸಾಧನೆಯತ್ತ ಗಮನ ಹರಿಸುವಂತೆ ಜಿಪಂ ಮಾಜಿ ಅಧ್ಯಕ್ಷ ಸಿದ್ದನಗೌಡ ಪೊಲೀಸ್ ಪಾಟೀಲ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಪಟ್ಟಣದ ಗಂಗೂಬಾಯಿ ಶಾಂತಗೌಡ ಪೊಲೀಸ್ ಪಾಟೀಲ ಮೆಮೋರಿಯಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ವಿವಿಧ ಸಮಿತಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ವಿನಯದಿಂದ ಕಲಿತು ಸಮಾಜಕ್ಕೆ ಕೊಡುಗೆ ನೀಡುವ ಕಾರ್ಯ ವಿದ್ಯಾರ್ಥಿಗಳಾದಾಗಲಿ ಎಂದು ಶುಭ ಹಾರೈಸಿದರು.ಕಾಲೇಜಿಗೆ ಬೇಕಾಗುವ ಎಲ್ಲಾ ಮೂಲಭೂತ ಸೌಕರ್ಯ ಒದಗಿಸಲು ಸಚಿವರು ಬದ್ಧರಾಗಿದ್ದು, ಕಾಲೇಜು ಮಂಡಳಿ ಇದನ್ನು ಸದುಪಯೋಗಪಡಿಸಿಕೊಂಡು ನ್ಯಾಕ್ (ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ) ಗ್ರೇಡ್ ಪಡೆದುಕೊಳ್ಳುವ ಕೆಲಸ ಮಾಡಲಿ. ಅಲ್ಲದೇ ಕ್ಯಾಂಟೀನ್ ವ್ಯವಸ್ಥೆ ಅವಶ್ಯಕತೆಯಿದ್ದಲ್ಲಿ ಕಾಲೇಜು ಪಕ್ಕದಲ್ಲಿರುವ ತಮ್ಮ ಸ್ವಂತ ಜಾಗದಲ್ಲಿ ತಾತ್ಕಾಲಿಕ ಶೆಡ್ ಹೊಡೆದು ಆರಂಭಿಸುವಂತೆ ತಿಳಿಸಿದವರು, ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ವಿಶ್ವವಿದ್ಯಾಲಯ ಸ್ಥಾಪನೆಯಾಗಿದ್ದು, ಅದರಂತೆ ಯಾದಗಿರಿ ಜಿಲ್ಲೆಯಲ್ಲಿ ಕೂಡ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪರಿಸರ, ಆರೋಗ್ಯ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆ, ಪ್ರವಾಸೋದ್ಯಮದ ಕುರಿತು ಜಾಗೃತಿಗಾಗಿ ಆಯೋಜಿಸಲಾಗಿರುವ ವೃಕ್ಷೋತ್ಥಾನ್ ಹೆರಿಟೇಜ್ ರನ್- 2024 ಓಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳೋಣ ಎಂದು ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ವಿಭಾಗದ ಉಪನಿರ್ದೇಶಕ ಸಿ. ಕೆ. ಹೊಸಮನಿ ಹೇಳಿದ್ದಾರೆ.ಶನಿವಾರ ನಗರದಲ್ಲಿ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಪನಿರ್ದೇಶಕರ ಕಾರ್ಯಾಲಯ ಮತ್ತು ಎಸ್. ಎಸ್. ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ವೃಕ್ಷೋತ್ಥಾನ್ ಹೆರಿಟೇಜ್ ರನ್ ಅಂಗವಾಗಿ ನಡೆದ ಪಿಯು ಕಾಲೇಜುಗಳ ಪ್ರಾಚಾರ್ಯರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ಈ ಬಾರಿ ಡಿಸೆಂಬರ್ 22 ರಂದು ಹೆರಿಟೇಜ್ ರನ್ ಓಟ ನಡೆಯಲಿದೆ. ಕಳೆದ ಸಲಕ್ಕಿಂತ ಈ ಬಾರಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸೋಣ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹಿಸೋಣ. ಈ ಓಟದಲ್ಲಿ ಪಾಲ್ಗೊಳ್ಳಲು ಹೆಸರು ನೋಂದಣಿ ಕುರಿತು ಪ್ರತಿನಿತ್ಯ ಮಾಹಿತಿ ಸಂಗ್ರಹಕ್ಕಾಗಿ ಸಮಿತಿ ರಚಿಸಲಾಗಿದ್ದು, ಈ ಸಮಿತಿ ಪ್ರತಿದಿನ ಫಾಲೋಅಪ್ ಮಾಡಲಿದೆ. ಪಿಯು ಕಾಲೇಜಿನ ಪ್ರಾಚಾರ್ಯರು,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 29ಕ್ಕೆ ಬೈ ನವೆಂಬರ್ 23 ರಂದು ಬೈ ಎಲೆಕ್ಷನ್ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವ ಎಂ. ಬಿ. ಪಾಟೀಲ ಅವರು ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ಬಾಬು ಏಳಕುಂಟೆ ಅವರಿಗೆ ಕಾಂಗ್ರೆಸ್ ಪಕ್ಷದ ಬಿ. ಫಾರಂ ನೀಡಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಮಾಜಿ ಶಾಸಕ ಪ್ರೊ. ರಾಜು ಆಲಗೂಗರ, ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ಮುಂತಾದವರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಬಲೇಶ್ವರ ತಾಲೂಕಿನಲ್ಲಿ ನಾನಾ ಗ್ರಾಮಗಳಲ್ಲಿ ನವೆಂಬರ್ 11 ರಿಂದ 29ರ ವರೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ.ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಸೂಚನೆಯಂತೆ ಸಾಮಾಜಿಕ ಭದ್ರತೆ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಗೊಳಿಸುವ ಸಲುವಾಗಿ ನಾನಾ ಪಿಂಚಣಿ ಅದಾಲತ ಆಯೋಜಿಸಲಾಗಿದೆ.ನವೆಂಬರ್ 11 ರಂದು ಬೆಳಿಗ್ಗೆ 11 ಗಂಟೆಗೆ ಅರ್ಜಣಗಿಯಲ್ಲಿ, ಮಧ್ಯಾಹ್ನ 1 ಗಂಟೆಗೆ ಬೋಳಚಿಕ್ಕಲಕಿ ಗ್ರಾಮದಲ್ಲಿ, ನವೆಂಬರ್ 12 ರಂದು ಬೆಳಿಗ್ಗೆ 11 ಗಂಟೆಗೆ ಗುಣದಾಳದಲ್ಲಿ, ಮಧ್ಯಾಹ್ನ 1 ಗಂಟೆಗೆ ಹೊಸೂರ ಗ್ರಾಮದಲ್ಲಿ, ನವೆಂಬರ್ 13 ರಂದು ಬೆಳಿಗ್ಗೆ 11 ಗಂಟೆಗೆ ದೇವರ ಗೆಣ್ಣೂರ, ಮಧ್ಯಾಹ್ನ 1 ಗಂಟೆಗೆ ಜೈನಾಪುರ, ನವೆಂಬರ್ 14 ರಂದು ಬೆಳಿಗ್ಗೆ 11 ಗಂಟೆಗೆ ಮಮದಾಪುರ, ಮಧ್ಯಾಹ್ನ 1 ಗಂಟೆಗೆ ಕಾಖಂಡಕಿ, ನವೆಂಬರ್ 15 ರಂದು ಬೆಳಿಗ್ಗೆ 11 ಗಂಟೆಗೆ ಹಲಗಣಿ, ಮಧ್ಯಾಹ್ನ 1 ಗಂಟೆಗೆ ಕಾರಜೋಳ, ನವೆಂಬರ್ 16 ರಂದು…

Read More

ಅಪ್ರತಿಮ ಮಹಿಳೆ ಲೇಖನ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರ – ಪುಣೆ ಉದಯರಶ್ಮಿ ದಿನಪತ್ರಿಕೆ ಆಕೆ ಕನ್ನಡದ ಹೆಣ್ಣು ಹುಲಿ ಕೆಳದಿಯ ರಾಣಿ ಚೆನ್ನಮ್ಮ. ಶತ್ರು ಪಾಳೆಯಕ್ಕೆ ಬೆಂಕಿ ಚೆಂಡಿನಂತಿದ್ದ ವೀರಾಧಿ ವೀರರನ್ನೇ ರಣ ರಂಗದಲ್ಲಿ ಮಂಡಿ ಊರುವಂತೆ ಮಾಡಿದ ಔರಂಗಜೇಬನಂಥ ಸುಲ್ತಾನನನ್ನೇ ಕಂಗಾಲಾಗುವಂತೆ ಮಾಡಿ ಪ್ರಾಣಭಿಕ್ಷೆ ನೀಡಿದ ವೀರ ವನಿತೆ.ಚೆನ್ನಮ್ಮ ಕ್ರಿಸ್ತಶಕ 1672 ರಿಂದ ಕ್ರಿಸ್ತಶಕ 1697 ರವರೆಗೆ ಕೆಳದಿ ಸಂಸ್ಥಾನವನ್ನು ಆಳಿದ ವೀರ ಮಹಿಳೆ ರಾಣಿ ಚೆನ್ನಮ್ಮ ಛತ್ರಪತಿ ಶಿವಾಜಿಯ ಎರಡನೆಯ ಮಗನಾದ ರಾಜಾರಾಮನಿಗೆ ನೀಡಿದ ಆಶ್ರಯ ಮತ್ತು ಅದರ ಪರಿಣಾಮವಾಗಿ ಯುದ್ಧಕ್ಕೆ ಬಂದ ಔರಂಗಜೇಬನ ಸೈನ್ಯವನ್ನು ಸೋಲಿಸಿದ್ದು ಅವಳ ಆಳ್ವಿಕೆಯ ಅತ್ಯಂತ ಮಹತ್ವದ ಸಂಗತಿಗಳು. ತನ್ನ ಸ್ಥಿರ ಸಂಕಲ್ಪ, ದೂರ ದೃಷ್ಟಿ, ಹಾಗೂ ಕಲಿತನಗಳಿಂದ ಇಕ್ಕೇರಿ ಸಂಸ್ಥಾನವನ್ನು ವಿಪತ್ತಿನಿಂದ ಪಾರು ಮಾಡಿದಳೆಂದು ಚೆನ್ನಮ್ಮ ಪ್ರಸಿದ್ಧಳಾಗಿದ್ದಾಳೆ. ಶತದಿಕ್ಕುಗಳಿಂದ ಶತ್ರುಗಳು ಮುಗಿಬಿದ್ದಾಗಲೂ ಅವರನ್ನು ಸೋಲಿಸಿ ಇಕ್ಕೇರಿ ಸಂಸ್ಥಾನವನ್ನು ಸಂರಕ್ಷಿಸಿದ ರಣಚತುರೆ ಆಕೆ.ಚೆನ್ನಮ್ಮನು ಕೋಟಿಪುರದ ಸಿದ್ದಪ್ಪ ಶೆಟ್ಟರ ಮಗಳು…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಭಗವಂತನನ್ನು ಮನುಷ್ಯನಂತೆ ನೋಡುವುದು ಅಜ್ಞಾನ. ಜಗತ್ತಿನ ಎಲ್ಲದಕ್ಕೂ ಭಗವಂತ ಒಡೆಯನಾಗಿದ್ದಾನೆ. ನಾವು ಅಜ್ಞಾನ ಮಾರ್ಗದಲ್ಲಿ ನಡೆದರೆ ಮೋಕ್ಷ ಪಡೆಯಲು ಅಸಾಧ್ಯ ಎಂದು ಶಿರಸಿಯ ಸೋಂದಾ ಸ್ವರ್ಣವಲ್ಲಿ ಮಠದ ಶಂಕರಾಚಾರ್ಯ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು.ಪಟ್ಟಣದ ಗ್ರಾಮದೇವಿ ದೇವಸ್ಥಾನದ ಹತ್ತಿರವಿರುವ ಜಗದ್ಗುರು ಮಧ್ವಾಚಾರ್ಯರ ಮೂಲ ಸಂಸ್ಥಾನ ಉತ್ತರಾಧಿಮಠದಲ್ಲಿ ಭಗವದ್ಗೀತಾ ಅಭಿಯಾನದಂಗವಾಗಿ ಗುರುವಾರ ಸಂಜೆ ಹಮ್ಮಿಕೊಂಡಿದ್ದ ಭಗವದ್ಗೀತೆ ಪಠಣ ಕಾರ್ಯಕ್ರಮ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಭಗವಂತನ ಮಹಿಮೆಯನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಬೇರೆ ಎಲ್ಲವನ್ನು ಮರೆತು ಭಗವಂತನ ಆರಾಧನೆ ಮಾಡಿದರೆ ಮೋಕ್ಷ ಪಡೆಯಲು ಸಾಧ್ಯ. ನಾವೆಲ್ಲರೂ ಮೋಕ್ಷದ ದಾರಿಯಲ್ಲಿ ಸಾಗಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಶ್ರೀಮಠದಿಂದ ಭಗವದ್ಗೀತಾ ಅಭಿಯಾನ ಕಳೆದ ೨೦೦೭ ರಿಂದ ನಾಡಿನಲ್ಲಿ ಹಮ್ಮಿಕೊಂಡಿದೆ. ಈ ವರ್ಷ ವಿಜಯಪುರ ಜಿಲ್ಲೆಯಲ್ಲಿ ಈ ಅಭಿಯಾನ ಆರಂಭವಾಗಿದೆ. ಈ ತಾಲೂಕಿನಲ್ಲಿಯೂ ಈ ಅಭಿಯಾನ ನಡೆಯುವಂತಾಗಬೇಕು. ಇದಕ್ಕೆ ಅಗತ್ಯವಿರುವ ಸಮಿತಿ ರಚನೆ ಮಾಡುವ ಮೂಲಕ ಪ್ರಶಿಕ್ಷಣ ಕಾರ್ಯಕ್ರಮ ನಡೆಯುವಂತಾಗಬೇಕು. ಶಾಲಾ ಮಕ್ಕಳಿಗೆ ಭಗವದ್ಗೀತಾ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಇವಣಗಿ ಗ್ರಾಮದಲ್ಲಿ ನ.೧೩ ರಂದು ನಿಗದಿಯಾಗಿದ್ದ ತಾಲೂಕು ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಲಿಕವಾಗಿ ದಿನಾಂಕವನ್ನು ಮುಂದೂಡಲಾಗಿದೆ. ರಾಜ್ಯದ ಮೂರು ಮತಕ್ಷೇತ್ರದಲ್ಲಿ ನ.೧೩ ರಂದು ಉಪಚುನಾವಣೆ ನಡೆಯುವದರಿಂದ ಸಮ್ಮೇಳನದಲ್ಲಿ ಸಚಿವರು, ಇಲಾಖೆಯ ಅಧಿಕಾರಿಗಳು ಭಾಗವಹಿಸಲು ಸಾಧ್ಯವಿರದೇ ಇರುವದರಿಂದ ಸಮ್ಮೇಳನದ ದಿನಾಂಕವನ್ನು ತಾತ್ಕಲಿಕವಾಗಿ ಮುಂದೂಡಲಾಗಿದೆ. ತಾಲೂಕು ಕಸಾಪ ಪದಾಧಿಕಾರಿಗಳೊಂದಿಗೆ, ಇವಣಗಿ ಗ್ರಾಮದ ಹಿರಿಯರೊಂದಿಗೆ ಮುಂದಿನ ದಿನಗಳಲ್ಲಿ ಚರ್ಚಿಸಿ ನವೆಂಬರ್ ಕೊನೆ ವಾರದಲ್ಲಿ ನಿಗದಿ ಪಡಿಸಲಾಗುವುದು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಿವಾನಂದ ಡೋಣೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More